
ಹಂಪಿ ಉತ್ಸವಕ್ಕೆ ಸಿಎಂ ಚಾಲನೆ; ಇನ್ನು ಮುಂದೆ ಪ್ರತಿ ವರ್ಷ ನವೆಂಬರ್ 3,4,5 ರಂದು ಅದ್ಧೂರಿ ಉತ್ಸವ
ಹಂಪಿ: ಇನ್ನುಮುಂದೆ ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಆಯೋಜಿಸಿದ್ದ ಐತಿಹಾಸಿಕ ಹಂಪಿ ಉತ್ಸವ - 2026 ಅನ್ನು ಉದ್ಘಾಟಿಸಿ, ಮಾತನಾಡಿದ ಅವರು, ರಾಜ್ಯ ಸರ್ಕಾರ ಹಂಪಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸುತ್ತಿದೆ. ಮಾಜಿ ಸಚಿವರಾದ ದಿವಂಗತ ಎಂ ಪಿ ಪ್ರಕಾಶ್ ಅವರು ಹಿಂದೆ ಕನ್ನಡ ಮತ್ತು ಸಂಸ್ಕೃತಿಯ ಸಚಿವರಾಗಿದ್ದ ಸಂದರ್ಭದಲ್ಲಿ, ಮೈಸೂರು ದಸರಾ ಉತ್ಸವದ ವಿಜೃಂಭಣೆಯನ್ನು ಕಂಡು, ಇದೇ ರೀತಿಯ ಉತ್ಸವವನ್ನು ಹಂಪಿಯಲ್ಲಿಯೂ ನೆರವೇರಿಸಬೇಕೆಂದು ಆಶಿಸಿದ್ದರು. ಎಂ ಪಿ ಪ್ರಕಾಶ್ ಅವರು ಕನ್ನಡ ನಾಡು, ನುಡಿ, ಸಾಹಿತ್ಯಗಳಲ್ಲಿ ಅಪಾರ ಆಸಕ್ತಿ ವಹಿಸಿದ್ದರು. ಈ ರೀತಿಯ ಅದ್ಧೂರಿ ಹಂಪಿ ಉತ್ಸವದ ಆಚರಣೆಗೆ ಮೂಲಕಾರಣ ಎಂ ಪಿ ಪ್ರಕಾಶ್ ಅವರು. ಅವರೊಬ್ಬ ಅಪರೂಪದ ವ್ಯಕ್ತಿ ಎಂದು ನೆನಪಿಸಿದರು.ಇತಿಹಾಸ ತಿಳಿಯದವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ನಾಡು ಸಂಪತ್ಭರಿತವಾಗಿತ್ತು. ನಮ್ಮ ಸರ್ಕಾರ ಕೂಡ ಸಾಹಿತ್ಯ, ಸಂಸ್ಕೃತಿ, ಕಲೆಗೆ ಹೆಚ್ಚ...









