Monday, September 8

ವೈವಿಧ್ಯ

ಧರ್ಮಸ್ಥಳ: ಕ್ಯೂ ವ್ಯವಸ್ಥೆ ಸಂಕೀರ್ಣ ಉದ್ಘಾಟನೆ

ಧರ್ಮಸ್ಥಳ: ಕ್ಯೂ ವ್ಯವಸ್ಥೆ ಸಂಕೀರ್ಣ ಉದ್ಘಾಟನೆ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೈವಿಧ್ಯ
ನಿಮ್ಮ ಸುದ್ದಿ ಈಗ ಈ ಜನಪ್ರಿಯ ಸುದ್ದಿ ಮಾಧ್ಯಮದಲ್ಲಿ.. ಮಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಈ ಸಂಬಂಧ ನಿರ್ಮಿಸಲಾಗಿರುವ ನೂತನ ಸಂಕೀರ್ಣವನ್ನು ಉಪರಾಷ್ಟ್ರಪತಿ ಜಗದೀಪ್ ಧನ್‌ಕ‌ರ್ ಅವರು ಮಂಗಳವಾರ ಉದ್ಘಾಟಿಸಿದರು. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗಿದ್ದು. ನೂತನ ಸಂಕೀರ್ಣವನ್ನು ಜನವರಿ 7ರಂದು ಉಪರಾಷ್ಟ್ರಪತಿ ಜಗದೀಪ್ ಧನ್‌ಕ‌ರ್ ಅವರು ಉದ್ಘಾಟಿಸಲಿದ್ದಾರೆ. 2.75 ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಮೂರು ಅಂತಸ್ತು ಹೊಂದಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಭಕ್ತರ ಅನುಕೂಲಕ್ಕೆ… pic.twitter.com/pjq23dodQe — ಸನಾತನ (@sanatan_kannada) January 6, 2025  2.75 ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಮೂರು ಅಂತಸ್ತು ಹೊಂದಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಭಕ್ತರ ಅನುಕೂಲಕ್ಕೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 16 ವಿಶಾಲ ಸಭಾಭವನಗಳಲ್ಲಿ ಭಕ್ತರು ವಿಶ್ರಾಂತಿ ಪಡೆಯಬಹುದಾಗಿದೆ. ಸರದಿಯಲ್ಲಿ ಜನರು ಸರದಿ...
DL, RCಗೂ ಶೀಘ್ರದಲ್ಲೇ ಕ್ಯೂಆರ್ ಕೋಡ್; ಜನವರಿಯಿಂದ ಹೊಸ ಸ್ಮಾರ್ಟ್‌ಕಾರ್ಡ್ ಎಲ್ಲ RTOಗಳಲ್ಲೂ ಇ ಆಡಳಿತಕ್ಕೆ ಕ್ರಮ; ರಾಮಲಿಂಗಾ ರೆಡ್ಡಿ

DL, RCಗೂ ಶೀಘ್ರದಲ್ಲೇ ಕ್ಯೂಆರ್ ಕೋಡ್; ಜನವರಿಯಿಂದ ಹೊಸ ಸ್ಮಾರ್ಟ್‌ಕಾರ್ಡ್ ಎಲ್ಲ RTOಗಳಲ್ಲೂ ಇ ಆಡಳಿತಕ್ಕೆ ಕ್ರಮ; ರಾಮಲಿಂಗಾ ರೆಡ್ಡಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೈವಿಧ್ಯ
ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ಅಮೂಲಾಗ್ರ ಪರಿವರ್ತನೆ ಮಾಡಲಾಗುತ್ತಿದ್ದು, ವ್ಯವಸ್ಥೆ, ಸೌಲಭ್ಯಗಳಲ್ಲೂ ಸುಧಾರಣೆ ತರಲಾಗಿದೆ. ಅದರಂತೆ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಹಾಗೂ ವಾಹನ ನೋಂದಣಿ (ಆರ್‌ಸಿ) ಕಾರ್ಡ್‌ಗಳಿಗೆ ಹೈಟೆಕ್ ಸ್ಪರ್ಶ ಸಿಗಲಿದೆ. ಕ್ಯೂಆರ್ ಕೋಡ್ ಮತ್ತು ಚಿಪ್ ಆಧಾರಿತ DL, RC ಕಾರ್ಡ್‌ಗಳು ವಿತರಣೆಯಾಗಲಿದ್ದು, 2025ರ ಜನವರಿ ಅಥವಾ ಫೆಬ್ರವರಿಯಿಂದ ಹೊಸ ಸ್ಮಾರ್ಟ್ ಕಾರ್ಡ್ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಪ್ರಸ್ತುತ ಕೊಡುತ್ತಿರುವ ಆರ್‌ಸಿ ಹಾಗೂ ಡಿಎಲ್‌ಗಳು ಪಾಲಿ ವಿನೈಲ್ ಕ್ಲೋರೈಡ್ (ಪಿವಿಸಿ) ಕಾರ್ಡ್‌ಗಳಾಗಿವೆ. ಹೊಸ ಯೋಜನೆಯಲ್ಲಿ ಪಾಲಿ ಕಾರ್ಬನೇಟ್ ಕಾರ್ಡ್ (ಪಿಸಿಸಿ)ಗಳನ್ನು ವಿತರಣೆ ಮಾಡಲಾಗುತ್ತದೆ. ಇವು ಬ್ಯಾಂಕ್‌ಗಳು ವಿತರಿಸುವ ಕಾರ್ಡ್‌ಗಳ ಮಾದರಿಯಲ್ಲಿ ಅತ್ಯಂತ ಉತ್ತಮ ಗುಣಮಟ್ಟದ ಕಾರ್ಡ್‌ಗಳಾಗಿರುತ್ತವೆ ಎಂದವರು ಮಾಹಿತಿ ಒದಗಿಸಿದ್ದಾರೆ. ಈವರೆಗಿನ ಕಾರ್ಡ್‌ಗಳಲ್ಲಿ ಹಳೆಯದಾಗುತ್ತಿದ್ದಂತೆ ಕಾರ್ಡ್ ಮೇಲಿರುವ ಅಕ್ಷರಗಳು ಅಳಿಸಿ ಹೋಗುತ್ತಿತ್ತು. ಆದರೆ, ಪಿಸಿಸಿ ಕಾರ್ಡ್‌ಗಳಲ್ಲಿ ಲೇಸರ್ ಇನ್‌ಗ್ರೀ...
ಅಕ್ಟೋಬರ್​ 3 ರಂದು ಮೈಸೂರು ದಸರಾ ಉದ್ಘಾಟನೆ; ಈಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು

ಅಕ್ಟೋಬರ್​ 3 ರಂದು ಮೈಸೂರು ದಸರಾ ಉದ್ಘಾಟನೆ; ಈಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೈವಿಧ್ಯ
ಮೈಸೂರು: ಮೈಸೂರು ದಸರಾ ಮಹೋತ್ಸವ-2024 ಅಕ್ಟೋಬರ್​ 3 ರಂದು ಉದ್ಘಾಟನೆಯಾಗಲಿದೆ. ಅಕ್ಟೋಬರ್ 12 ರಂದು ಜಂಬೂಸವಾರಿ ನಡೆಯಲಿದ್ದು ನಾಡಹಬ್ಬದ ತಯಾರಿಗೆ ಮುನ್ನುಡಿ ಬರೆಯಲಾಗಿದೆ. ದಸರಾ ಜಂಬೂಸವಾರಿಯಲ್ಲಿ 13 ಗಂಡು ಮತ್ತು 05 ಹೆಣ್ಣು ಆನೆಗಳು ಭಾಗಿಯಾಗಲಿದ್ದು, ಗಜಪಡೆಯ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಾರಿಯೂ ಅಭಿಮನ್ಯುವೇ ಅಂಬಾರಿ ಹೊರಲಿದ್ದು, ಸೇರಿ 14 ಆನೆಗಳು ಭಾಗಿಯಾಗಲಿವೆ. ಈ ಗಜಪಡೆಗಳು ಎರಡು ಹಂತಗಳಲ್ಲಿ ಸಾಂಸ್ಕೃತಿಕ ನಾಗರಿಗೆ ಆಗಮಿಸಲಿದ್ದು, ಮೊದಲನೇ ತಂಡದಲ್ಲಿ ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಗೋಪಿ, ಭೀಮ, ಲಕ್ಷ್ಮೀ, ಕಂಜನ್, ರೋಹಿತ್, ಏಕಲವ್ಯ ಬರಲಿವೆ. ಎರಡನೇಯ ತಂಡದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷ್ಮೀ, ಹಿರಣ್ಯ, ಮೀಸಲು, ಹರ್ಷ, ಅಯ್ಯಪ್ಪ, ಪಾರ್ಥಸಾರಥಿ, ಮಾಲದೇವಿ ಆನೆಗಳ ಆಗಮನವಾಗಲಿದೆ. ಆಗಸ್ಟ್ 21ಕ್ಕೆ ಗಜಪಯಣ ನಿಗದಿ ಆಗಿದ್ದು, ದಸರಾ ಮಹೋತ್ಸವದ ಸುಮಾರು 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿವೆ....
‘ಯಕ್ಷಗಾನ ಉತ್ಸವ-2024’: ತಾಳಮದ್ದಳೆಯಲ್ಲಿ ಆಂಜನೇಯ ಪಾತ್ರಧಾರಿಯಾಗಿ ಗಮನಸೆಳೆದ IPS ಅಧಿಕಾರಿ ಧರಣೀದೇವಿ

‘ಯಕ್ಷಗಾನ ಉತ್ಸವ-2024’: ತಾಳಮದ್ದಳೆಯಲ್ಲಿ ಆಂಜನೇಯ ಪಾತ್ರಧಾರಿಯಾಗಿ ಗಮನಸೆಳೆದ IPS ಅಧಿಕಾರಿ ಧರಣೀದೇವಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೈವಿಧ್ಯ, ಸಿನಿಮಾ
ಬೆಂಗಳೂರು: ಯಕ್ಷಗಾನ ಕೇವಲ ಪುರುಷರಿಗಷ್ಟೇ ಸೀಮಿತವಾಗಿಲ್ಲ. ಈ ರಂಗದಲ್ಲಿ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಮಹಿಳೆಯರೂ ಹಂತಹಂತವಾಗಿ ಪಾಲ್ಗೊಂಡು ಪುರುಷರಂತೆಯೇ ಸಾಧನೆ ಮಾಡಿದ್ದಾರೆ ಹಾಗೂ ಮಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಡಾ. ಧರಣೀದೇವಿ ಮಾಲಗತ್ತಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆ ಶನಿವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಯಕ್ಷಗಾನ ಉತ್ಸವ-2024 ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಯಕ್ಷಗಾನದಲ್ಲಿ ಮಹಿಳೆಯರ ಸಹಭಾಗಿತ್ವವನ್ನು ಪ್ರೋತ್ಸಾಹಿಸಬೇಕಿದೆ ಎಂದು ಪ್ರತಿಪಾದಿಸಿದರು. ಸ್ವತಃ "ಶರಸೇತು ಬಂಧ" ಎಂಬ ಮಹಿಳಾ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಆಂಜನೇಯನ ಪಾತ್ರವಹಿಸಿ ಅರ್ಥಗಾರಿಕೆ ಮಾಡಿದ ಧರಣೀದೇವಿ ಅವರು, ಭಾಗವತಿಕೆಯಲ್ಲಿ, ಚೆಂಡೆ ವಾದನದಲ್ಲಿ, ಮುಮ್ಮೇಳ ಕಲಾವಿದರಾಗಿ ಬಹಳ ಹಿಂದಿನಿಂದಲೂ ಮಹಿಳೆಯರು ಅವರದೇ ಛಾಪು ಮೂಡಿಸಿದ್ದಾರೆ. ಬಣ್ಣದ ವೇಷದಲ್ಲೂ ತೊಡಗಿಸಿಕೊಂಡು, ಆಯಾ ಪಾತ್ರಕ್ಕೆ ಅನುಗುಣವಾದ ಧ್ವನಿಯನ್ನೂ ನೀಡಿ ಪಾತ್ರಕ್ಕೆ ನ್ಯಾಯ ಒದಗಿಸಿದ ನಿದರ್...