ಮೈಸೂರು: ಮೈಸೂರು ದಸರಾ ಮಹೋತ್ಸವ-2024 ಅಕ್ಟೋಬರ್ 3 ರಂದು ಉದ್ಘಾಟನೆಯಾಗಲಿದೆ. ಅಕ್ಟೋಬರ್ 12 ರಂದು ಜಂಬೂಸವಾರಿ ನಡೆಯಲಿದ್ದು ನಾಡಹಬ್ಬದ ತಯಾರಿಗೆ ಮುನ್ನುಡಿ ಬರೆಯಲಾಗಿದೆ.
ದಸರಾ ಜಂಬೂಸವಾರಿಯಲ್ಲಿ 13 ಗಂಡು ಮತ್ತು 05 ಹೆಣ್ಣು ಆನೆಗಳು ಭಾಗಿಯಾಗಲಿದ್ದು, ಗಜಪಡೆಯ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಾರಿಯೂ ಅಭಿಮನ್ಯುವೇ ಅಂಬಾರಿ ಹೊರಲಿದ್ದು, ಸೇರಿ 14 ಆನೆಗಳು ಭಾಗಿಯಾಗಲಿವೆ. ಈ ಗಜಪಡೆಗಳು ಎರಡು ಹಂತಗಳಲ್ಲಿ ಸಾಂಸ್ಕೃತಿಕ ನಾಗರಿಗೆ ಆಗಮಿಸಲಿದ್ದು, ಮೊದಲನೇ ತಂಡದಲ್ಲಿ ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಗೋಪಿ, ಭೀಮ, ಲಕ್ಷ್ಮೀ, ಕಂಜನ್, ರೋಹಿತ್, ಏಕಲವ್ಯ ಬರಲಿವೆ. ಎರಡನೇಯ ತಂಡದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷ್ಮೀ, ಹಿರಣ್ಯ, ಮೀಸಲು, ಹರ್ಷ, ಅಯ್ಯಪ್ಪ, ಪಾರ್ಥಸಾರಥಿ, ಮಾಲದೇವಿ ಆನೆಗಳ ಆಗಮನವಾಗಲಿದೆ. ಆಗಸ್ಟ್ 21ಕ್ಕೆ ಗಜಪಯಣ ನಿಗದಿ ಆಗಿದ್ದು, ದಸರಾ ಮಹೋತ್ಸವದ ಸುಮಾರು 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿವೆ....
ಬೆಂಗಳೂರು: ಯಕ್ಷಗಾನ ಕೇವಲ ಪುರುಷರಿಗಷ್ಟೇ ಸೀಮಿತವಾಗಿಲ್ಲ. ಈ ರಂಗದಲ್ಲಿ ಹಿಮ್ಮೇಳ ಮತ್ತು ಮುಮ್ಮೇಳದಲ್ಲಿ ಮಹಿಳೆಯರೂ ಹಂತಹಂತವಾಗಿ ಪಾಲ್ಗೊಂಡು ಪುರುಷರಂತೆಯೇ ಸಾಧನೆ ಮಾಡಿದ್ದಾರೆ ಹಾಗೂ ಮಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಡಾ. ಧರಣೀದೇವಿ ಮಾಲಗತ್ತಿ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಮಹಿಳಾ ಯಕ್ಷಗಾನ ಸಂಸ್ಥೆ ಶನಿವಾರ ಬೆಂಗಳೂರಿನ ನಯನ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಯಕ್ಷಗಾನ ಉತ್ಸವ-2024 ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಯಕ್ಷಗಾನದಲ್ಲಿ ಮಹಿಳೆಯರ ಸಹಭಾಗಿತ್ವವನ್ನು ಪ್ರೋತ್ಸಾಹಿಸಬೇಕಿದೆ ಎಂದು ಪ್ರತಿಪಾದಿಸಿದರು.
ಸ್ವತಃ "ಶರಸೇತು ಬಂಧ" ಎಂಬ ಮಹಿಳಾ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಆಂಜನೇಯನ ಪಾತ್ರವಹಿಸಿ ಅರ್ಥಗಾರಿಕೆ ಮಾಡಿದ ಧರಣೀದೇವಿ ಅವರು, ಭಾಗವತಿಕೆಯಲ್ಲಿ, ಚೆಂಡೆ ವಾದನದಲ್ಲಿ, ಮುಮ್ಮೇಳ ಕಲಾವಿದರಾಗಿ ಬಹಳ ಹಿಂದಿನಿಂದಲೂ ಮಹಿಳೆಯರು ಅವರದೇ ಛಾಪು ಮೂಡಿಸಿದ್ದಾರೆ. ಬಣ್ಣದ ವೇಷದಲ್ಲೂ ತೊಡಗಿಸಿಕೊಂಡು, ಆಯಾ ಪಾತ್ರಕ್ಕೆ ಅನುಗುಣವಾದ ಧ್ವನಿಯನ್ನೂ ನೀಡಿ ಪಾತ್ರಕ್ಕೆ ನ್ಯಾಯ ಒದಗಿಸಿದ ನಿದರ್...