Wednesday, January 28

Focus

‘ಜನ ನಾಯಗನ್’ ಸೆನ್ಸಾರ್ ವಿವಾದ: ತಕ್ಷಣದ ಪ್ರಮಾಣೀಕರಣ ಆದೇಶ ರದ್ದು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಚೆನ್ನೈ: ನಟ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರದ ನಿರ್ಮಾಪಕರಿಗೆ ಹಿನ್ನಡೆಯಾಗಿದ್ದು, ಚಿತ್ರಕ್ಕೆ ತಕ್ಷಣವೇ ಸೆನ್ಸಾರ್ ಪ್ರಮಾಣಪತ್ರ ನೀಡುವಂತೆ ಏಕಸದಸ್ಯ ನ್ಯಾಯಮೂರ್ತಿ ನೀಡಿದ್ದ ಆದೇಶವನ್ನು ಮದ್ರಾಸ್ ಹೈಕೋರ್ಟ್‌ನ ವಿಭಾಗೀಯ ಪೀಠ ರದ್ದುಗೊಳಿಸಿದೆ. ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಸಲ್ಲಿಸಿದ್ದ ಮೇಲ್ಮನವಿಯನ್ನು ಪೀಠ ಮಂಗಳವಾರ ಅಂಗೀಕರಿಸಿದೆ. ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಹಾಗೂ ನ್ಯಾಯಮೂರ್ತಿ ಅರುಲ್ ಮುರುಗನ್ ಅವರನ್ನೊಳಗೊಂಡ ಪೀಠ, ಮಧ್ಯಂತರ ಹಂತದಲ್ಲೇ ಚಿತ್ರದ ವಿಷಯದ ಕುರಿತ ದೂರುಗಳ ಅರ್ಹತೆಯನ್ನು ಪರಿಶೀಲಿಸುವುದು ಕಾನೂನುಬದ್ಧವಲ್ಲ ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಏಕಸದಸ್ಯ ನ್ಯಾಯಮೂರ್ತಿ ಅನುಸರಿಸಿದ್ದ ವಿಧಾನ ದೋಷಪೂರಿತವಾಗಿದೆ ಎಂದು ಹೇಳಿ ಆದೇಶವನ್ನು ರದ್ದುಗೊಳಿಸಿ, ವಿಷಯವನ್ನು ಹೊಸದಾಗಿ ಪರಿಗಣಿಸಲು ಹಿಂತಿರುಗಿಸಲಾಗಿದೆ. ಅರ್ಜಿಯನ್ನು ತಿದ್ದುಪಡಿ ಮಾಡಲು ನಿರ್ಮಾಪಕರಿಗೆ ನ್ಯಾಯಾಲಯ ಸ್ವಾತಂತ್ರ್ಯ ನೀಡಿದ್ದು, ಇದರ ಪರಿಣಾಮವಾಗಿ ಚಿತ್ರದ ಥಿಯೇಟರ್ ಬಿಡುಗಡೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಕೇಂದ್ರ...
ಭಾರತದಲ್ಲಿ ಪ್ರಾದೇಶಿಕ ವಿಮಾನ ಪರಿಸರ ವ್ಯವಸ್ಥೆ ಅಭಿವೃದ್ಧಿ; ಎಂಬ್ರೇರ್–ಅದಾನಿ ಡಿಫೆನ್ಸ್ ಒಡಂಬಡಿಕೆ

ಭಾರತದಲ್ಲಿ ಪ್ರಾದೇಶಿಕ ವಿಮಾನ ಪರಿಸರ ವ್ಯವಸ್ಥೆ ಅಭಿವೃದ್ಧಿ; ಎಂಬ್ರೇರ್–ಅದಾನಿ ಡಿಫೆನ್ಸ್ ಒಡಂಬಡಿಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಜಾಗತಿಕ ಏರೋಸ್ಪೇಸ್ ಸಂಸ್ಥೆ ಎಂಬ್ರೇರ್ ಹಾಗೂ ಅದಾನಿ ಡಿಫೆನ್ಸ್ & ಏರೋಸ್ಪೇಸ್ ಭಾರತದಲ್ಲಿ ಸಮಗ್ರ ಪ್ರಾದೇಶಿಕ ಸಾರಿಗೆ ವಿಮಾನ (RTA) ಪರಿಸರ ವ್ಯವಸ್ಥೆ ಅಭಿವೃದ್ಧಿಪಡಿಸುವ ಉದ್ದೇಶದಿಂದ ತಿಳುವಳಿಕೆ ಪತ್ರಕ್ಕೆ (MoU) ಸಹಿ ಹಾಕಿವೆ. ವಿಮಾನ ತಯಾರಿಕೆ, ಪೂರೈಕೆ ಸರಪಳಿ, ಆಫ್ಟರ್‌ಮಾರ್ಕೆಟ್ ಸೇವೆಗಳು ಮತ್ತು ಪೈಲಟ್ ತರಬೇತಿ ಕ್ಷೇತ್ರಗಳಲ್ಲಿ ಸಹಕಾರ ಈ ಒಡಂಬಡಿಕೆಯ ಪ್ರಮುಖ ಅಂಶಗಳಾಗಿವೆ. ಆತ್ಮನಿರ್ಭರ ಭಾರತ್ ಉಪಕ್ರಮ ಹಾಗೂ ಉಡಾನ್ ಯೋಜನೆಗೆ ಅನುಗುಣವಾಗಿ, ಭಾರತದಲ್ಲೇ ಪ್ರಾದೇಶಿಕ ಸಾರಿಗೆ ವಿಮಾನಗಳ ಅಸೆಂಬ್ಲಿ ಲೈನ್ ಸ್ಥಾಪಿಸುವುದು ಮತ್ತು ಹಂತ ಹಂತವಾಗಿ ಸ್ಥಳೀಯೀಕರಣ ಹೆಚ್ಚಿಸುವ ಗುರಿಯನ್ನು ಪಾಲುದಾರರು ಹೊಂದಿದ್ದಾರೆ. ಇದರಿಂದ ದೇಶೀಯ ವಾಯು ಸಂಪರ್ಕ ವಿಸ್ತರಣೆಗೆ ಉತ್ತೇಜನ ಸಿಗಲಿದೆ ಎಂದು ಕಂಪನಿಗಳು ಹೇಳಿವೆ. ಈ ಸಹಯೋಗದ ಮೂಲಕ ಎಂಬ್ರೇರ್‌ನ ವಿಮಾನ ವಿನ್ಯಾಸ ಮತ್ತು ಉತ್ಪಾದನಾ ಪರಿಣತಿಯನ್ನು ಅದಾನಿಯ ವಾಯುಯಾನ ಮೌಲ್ಯ ಸರಪಳಿ ಸಾಮರ್ಥ್ಯಗಳೊಂದಿಗೆ ಸಂಯೋಜಿಸಲಾಗುತ್ತದೆ. ವಿಮಾನ ನಿಲ್ದಾಣ ಮೂಲಸೌಕರ್ಯ, MRO ಸೇವೆಗಳು ಹಾಗೂ ಪೈಲಟ್ ತರಬೇತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲ...
ಮಹಿಳಾ ಅಧಿಕಾರಿಗೆ ಬೆದರಿಕೆ ಆರೋಪ: ಕಾಂಗ್ರೆಸ್ ನಾಯಕ ರಾಜೀವ್ ಗೌಡ ಬಂಧನ

ಮಹಿಳಾ ಅಧಿಕಾರಿಗೆ ಬೆದರಿಕೆ ಆರೋಪ: ಕಾಂಗ್ರೆಸ್ ನಾಯಕ ರಾಜೀವ್ ಗೌಡ ಬಂಧನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: K.A.S ಅಧಿಕಾರಿಗೆ ನಿಂದಿಸಿ, ಬೆದರಿಕೆ ಹಾಕಿದ ಆರೋಪದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವರನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗಿದ ಬಳಿಕ ಕಳೆದ 14 ದಿನಗಳಿಂದ ರಾಜೀವ್ ಗೌಡ ಪರಾರಿಯಾಗಿದ್ದು, ಪೊಲೀಸರು ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಈ ನಡುವೆ ಅವರು ಕೇರಳ ಗಡಿಯ ಸಮೀಪದಲ್ಲಿ ಇರುವುದಾಗಿ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಅವರನ್ನು ಬಂಧಿಸಿದ್ದಾರೆ. ಮಂಗಳೂರಿನ ಉದ್ಯಮಿಯೊಬ್ಬರು ರಾಜೀವ್ ಗೌಡ ಅವರಿಗೆ ಆಶ್ರಯ ನೀಡಿದ್ದರು ಎನ್ನಲಾಗಿದೆ. ಉದ್ಯಮಿಯ ಕಾರಿನಲ್ಲೇ ಅವರು ಸಂಚರಿಸುತ್ತಿದ್ದರು ಎನ್ನಲಾಗಿದ್ದು, ಈ ಅಂಶವನ್ನೂ ಪೊಲೀಸರು ತನಿಖೆಯ ಭಾಗವಾಗಿಸಿಕೊಂಡಿದ್ದಾರೆ. ಸೋಮವಾರ (ಜನವರಿ 26) ಮಂಗಳೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ವೇಳೆ ರಾಜೀವ್ ಗೌಡ ಅವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ....
ಗಣರಾಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಸಿಗದ ಅವಕಾಶ; ಸಿಎಂ ಅಸಮಾಧಾನ

ಗಣರಾಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಸಿಗದ ಅವಕಾಶ; ಸಿಎಂ ಅಸಮಾಧಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮಲ್ಲಿ ಕೌಶಲ್ಯವಿರುವ ಮಾನವ ಸಂಪನ್ಮೂಲದ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ, ತರಬೇತಿ ಪಡೆವರಿಗೆ ನೂರರಷ್ಟು ಕೆಲಸ ದೊರೆಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ತಿಳಿಸಿದ್ದಾರೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕೆಂದು ಸಂವಿಧಾನದ 176 ಮತ್ತು 163 ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಹೇಳಿದೆ. ಸರ್ಕಾರ ಕೊಟ್ಟಿರುವ ಭಾಷಣವನ್ನು ಅವರು ಓದಲೇಬೇಕು. ನಾವು ಬರೆದುಕೊಟ್ಟಿರುವುದನ್ನು ಅವರು ಬದಲಾಯಿಸುವ ಸಾಧ್ಯತೆ ಇರುತ್ತದೆ ಎಂದರು. ಗಣರಾಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಪತ್ರ ವ್ಯವಹಾರವೆಲ್ಲಾ ಆಗಿದ್ದರೂ, ಕೇಂದ್ರ ಸರ್...
ಟಿವಿಕೆ ಚುನಾವಣಾ ಕಾರ್ಯತಂತ್ರ; ವಿಜಯ್‌ ಮತ್ತೊಮ್ಮೆ ಶಕ್ತಿ ಪ್ರದರ್ಶನ

ಟಿವಿಕೆ ಚುನಾವಣಾ ಕಾರ್ಯತಂತ್ರ; ವಿಜಯ್‌ ಮತ್ತೊಮ್ಮೆ ಶಕ್ತಿ ಪ್ರದರ್ಶನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಚೆನ್ನೈ: ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಟಿವಿಕೆ ಪಕ್ಷದ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಮಾಮಲ್ಲಪುರಂನಲ್ಲಿ ಭಾನುವಾರ ನಡೆದ ಸಭೆಗೆ ನಟ-ರಾಜಕಾರಣಿ ವಿಜಯ್ ಆಗಮಿಸಿದ ವೇಳೆ, ಪಕ್ಷದ ಸ್ವಯಂಸೇವಕರು ಶಿಳ್ಳೆ ಮತ್ತು ಹರ್ಷೋದ್ಗಾರಗಳ ಮೂಲಕ ಸ್ವಾಗತಿಸಿದರು. ಇದು ವಿಜಯ್ ಅವರ ಸಕ್ರಿಯ ರಾಜಕೀಯ ತೊಡಗಿಸಿಕೊಳ್ಳುವಿಕೆಯನ್ನು ಮತ್ತೊಮ್ಮೆ ಸ್ಪಷ್ಟಪಡಿಸಿತು. ರಾಜ್ಯದಲ್ಲಿ ಚುನಾವಣಾ ವಾತಾವರಣ ಬಿಸಿಯಾಗುತ್ತಿರುವ ಹೊತ್ತಿನಲ್ಲಿ, ಎಐಎಡಿಎಂಕೆ ತನ್ನ ಪ್ರಚಾರವನ್ನು ಆರಂಭಿಸಿದ್ದು, ಆಡಳಿತಾರೂಢ ಡಿಎಂಕೆ ತನ್ನ ಕಲ್ಯಾಣ ಯೋಜನೆಗಳ ಜನಪ್ರಿಯತೆಯ ಮೇಲೆ ವಿಶ್ವಾಸ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ, ಟಿವಿಕೆ ಪರ್ಯಾಯ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲು ಸಾಂಸ್ಥಿಕ ಚಟುವಟಿಕೆಗಳು ಮತ್ತು ಚುನಾವಣಾ ಸಿದ್ಧತೆಗಳನ್ನು ವೇಗಗೊಳಿಸಿದೆ. ಹಿಂದಿನ ಸಭೆಗಳಲ್ಲಿ ಮಾತನಾಡಿದ್ದ ವಿಜಯ್, ಟಿವಿಕೆ ಪಕ್ಷವು ಕಾರ್ಯಗತಗೊಳಿಸಬಹುದಾದ ಮತ್ತು ಪ್ರಾಯೋಗಿಕ ಯೋಜನೆಗಳ ಮೇಲೆ ಮಾತ್ರ ಗಮನ ಹರಿಸಲಿದೆ ಎಂದು ಹೇಳಿದ್ದರು. ಪಕ್ಷದ ವಿಶ್ವಾಸಾರ್ಹತೆ, ಆಡಳಿತ ಸಾಮರ್ಥ್ಯ ಮತ್ತು ಜನರಿಗೆ ಹೊಣೆಗಾರಿಕೆಗೆ ಆದ್ಯತೆ ನೀಡಲಾಗ...
‘ಆವಾಜ್ ಭಾರತ್ ಕಿ’: ವಾಯು ಮಾಲಿನ್ಯದ ಪರಿಣಾಮ ಹಂಚಿಕೊಳ್ಳಲು ನಾಗರಿಕರಿಗೆ ರಾಹುಲ್ ಗಾಂಧಿ ಆಹ್ವಾನ

‘ಆವಾಜ್ ಭಾರತ್ ಕಿ’: ವಾಯು ಮಾಲಿನ್ಯದ ಪರಿಣಾಮ ಹಂಚಿಕೊಳ್ಳಲು ನಾಗರಿಕರಿಗೆ ರಾಹುಲ್ ಗಾಂಧಿ ಆಹ್ವಾನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ದೇಶಾದ್ಯಂತ ವಾಯು ಮಾಲಿನ್ಯವು ತಮ್ಮ ಆರೋಗ್ಯ ಹಾಗೂ ಕುಟುಂಬದ ಯೋಗಕ್ಷೇಮದ ಮೇಲೆ ಬೀರುತ್ತಿರುವ ಪರಿಣಾಮಗಳ ಕುರಿತು ನಾಗರಿಕರು ತಮ್ಮ ವೈಯಕ್ತಿಕ ಅನುಭವಗಳನ್ನು ‘ಆವಾಜ್ ಭಾರತ್ ಕಿ’ ಪೋರ್ಟಲ್ ಮೂಲಕ ಹಂಚಿಕೊಳ್ಳಬೇಕೆಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ಮನವಿ ಮಾಡಿದ್ದಾರೆ. ‘ಆವಾಜ್ ಭಾರತ್ ಕಿ’ ರಾಹುಲ್ ಗಾಂಧಿ ಆರಂಭಿಸಿರುವ ಉಪಕ್ರಮವಾಗಿದ್ದು, ಸಾರ್ವಜನಿಕರು ತಮ್ಮ ಅಭಿಪ್ರಾಯಗಳು, ಸಲಹೆಗಳು ಮತ್ತು ಕಳವಳಗಳನ್ನು ನೇರವಾಗಿ ತಮ್ಮ ಕಚೇರಿಗೆ ತಲುಪಿಸುವ ವೇದಿಕೆಯಾಗಿದ್ದುದು ಅದರ ಅಧಿಕೃತ ವೆಬ್‌ಸೈಟ್‌ನಲ್ಲಿ ಉಲ್ಲೇಖಿಸಲಾಗಿದೆ. ಎಕ್ಸ್‌ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ ಗಾಂಧಿ, ವಾಯು ಮಾಲಿನ್ಯದಿಂದಾಗುವ ಮಾನವೀಯ ಹಾಗೂ ಆರ್ಥಿಕ ನಷ್ಟವನ್ನು ಎತ್ತಿ ತೋರಿಸಿದರು. “ನಾವು ನಮ್ಮ ಆರೋಗ್ಯ ಮತ್ತು ಆರ್ಥಿಕತೆಯೊಂದಿಗೆ ಭಾರಿ ಬೆಲೆ ಪಾವತಿಸುತ್ತಿದ್ದೇವೆ. ಪ್ರತಿದಿನ ಕೋಟ್ಯಂತರ ಸಾಮಾನ್ಯ ಭಾರತೀಯರು ಈ ಹೊರೆಯನ್ನು ಅನುಭವಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ. ಮಾಲಿನ್ಯದ ದುಷ್ಪರಿಣಾಮಗಳು ಸಮಾಜದ ದುರ್ಬಲ ವರ್ಗಗಳ ಮೇಲೆ ಹೆಚ್ಚು ಬೀರುತ್ತಿವೆ ಎಂದು ಅವರು ಆ...
ಪಿಎಸ್‌ಐ ನೇಮಕಾತಿ ಅಕ್ರಮದ ಪ್ರತಿಧ್ವನಿ;: EDಯಿಂದ 1.53 ಕೋ.ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಪಿಎಸ್‌ಐ ನೇಮಕಾತಿ ಅಕ್ರಮದ ಪ್ರತಿಧ್ವನಿ;: EDಯಿಂದ 1.53 ಕೋ.ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) 1.53 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬೆಂಗಳೂರು ವಲಯ ಕಚೇರಿ ಈ ಕ್ರಮ ಕೈಗೊಂಡಿದೆ ಎಂದು ಇಡಿ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳಲ್ಲಿ ಮಾಜಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ನೇಮಕಾತಿ) ಅಮೃತ್ ಪಾಲ್ ಹಾಗೂ ಮುಖ್ಯ ಕಾನ್‌ಸ್ಟೆಬಲ್ ಶ್ರೀಧರ್ ಹೆಚ್ ಅವರಿಗೆ ಸೇರಿದ ವಸತಿ ಆಸ್ತಿಗಳು ಸೇರಿವೆ. 2021–22ರ ಅವಧಿಯಲ್ಲಿ ನಡೆದ ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಪೊಲೀಸ್ ನೇಮಕಾತಿ ಕೋಶವು 545 ಪಿಎಸ್‌ಐ ಹುದ್ದೆಗಳ ಭರ್ತಿಗೆ ಪರೀಕ್ಷೆ ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ್ದರೂ, ಬಳಿಕ ಪರೀಕ್ಷಾ ಪ್ರಕ್ರಿಯೆಯಲ್ಲಿ ವಂಚನೆ ಮತ್ತು ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಸಂಬಂಧ ಬೆಂಗಳೂರಿನ ...
‘ನಾವು ಹೇಳಿದ್ದನ್ನೆಲ್ಲಾ ಮಾಡಿ ನುಡಿದಂತೆ ನಡೆದಿದ್ದೇವೆ’: ಸಿದ್ದರಾಮಯ್ಯ

‘ನಾವು ಹೇಳಿದ್ದನ್ನೆಲ್ಲಾ ಮಾಡಿ ನುಡಿದಂತೆ ನಡೆದಿದ್ದೇವೆ’: ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ರಾಜ್ಯ
ಹುಬ್ಬಳ್ಳಿ: ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಅರ್ಹ ಫಲಾನುಭವಿಗಳಿಗೆ ನೂತನ ಮನೆಯ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸಿಎಂ, 'ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಕಾಂಗ್ರೆಸ್ ಸರ್ಕಾರ 14,58,000 ಮನೆಗಳನ್ನು ಕಟ್ಟಿ ವಸತಿ ಕ್ರಾಂತಿ ಮಾಡಿದ್ದೆವು. ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ 2024 ರಲ್ಲಿ 36,789 ಮನೆಗಳನ್ನು ಮೊದಲನೇ ಹಂತದಲ್ಲಿ ವಿತರಿಸಿದ್ದ ನಮ್ಮ ಸರ್ಕಾರವು, ಈಗ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿದೆ' ಎಂದರು. ನಾವು ಹೇಳಿದ್ದನ್ನೆಲ್ಲಾ ಮಾಡಿ ನುಡಿದಂತೆ ನಡೆದಿದ್ದೇವೆ. ಅವರು ಹೇಳಿದ್ದನ್ನು ಮಾಡದೆ ನಮ್ಮ ಬಗ್ಗೆ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ವಿದೇಶದಿಂದ ಕಪ್ಪು ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕ್ತೀವಿ ಅಂದರು. ಹಾಕಿದ್ರಾ ? ಮಹದಾಯಿ, ಕೃಷ್ಣ ಮೇಲ್ದಂಡೆ, ಭದ್ರಾ ಮೇಲ್ದಂಡೆ ಎಲ್ಲದರಲ್ಲೂ ...
ಬಂದೂಕು ಸ್ವಚ್ಛಗೊಳಿಸುವಾಗ ಸಿಡಿದ ಎರಡು ಸುತ್ತು ಗುಂಡು: ಪೊಲೀಸರ ಎದುರು ನಟ ಕಮಲ್ ರಶೀದ್ ಹೇಳಿಕೆ

ಬಂದೂಕು ಸ್ವಚ್ಛಗೊಳಿಸುವಾಗ ಸಿಡಿದ ಎರಡು ಸುತ್ತು ಗುಂಡು: ಪೊಲೀಸರ ಎದುರು ನಟ ಕಮಲ್ ರಶೀದ್ ಹೇಳಿಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಮುಂಬೈನ ಓಶಿವಾರಾ ಪ್ರದೇಶದಲ್ಲಿ ವಸತಿ ಕಟ್ಟಡಕ್ಕೆ ಎರಡು ಗುಂಡುಗಳು ತಗುಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಮಲ್ ರಶೀದ್ ಖಾನ್ (ಕೆಆರ್‌ಕೆ) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮನೆದಲ್ಲಿ ತನ್ನ ಪರವಾನಗಿ ಪಡೆದ ಬಂದೂಕನ್ನು ಸ್ವಚ್ಛಗೊಳಿಸುವ ವೇಳೆ, ಆಯುಧ ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂದು ಪರೀಕ್ಷಿಸಲು ಎರಡು ಸುತ್ತು ಗುಂಡು ಹಾರಿಸಿದ್ದಾಗಿ ಅವರು ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಕೆಆರ್‌ಕೆ 2005ರಲ್ಲಿ ಉತ್ತರ ಪ್ರದೇಶದಿಂದ ಬಂದೂಕು ಪರವಾನಗಿ ಪಡೆದಿದ್ದರು. ಬಳಿಕ ಅದೇ ಬಂದೂಕನ್ನು ಮುಂಬೈಗೆ ತಂದು ತಮ್ಮ ನಿವಾಸದಲ್ಲಿ ಇಟ್ಟುಕೊಂಡಿದ್ದರು. ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಾದ ಸಂದರ್ಭದಲ್ಲಿ ಆಯುಧವನ್ನು ವರ್ಸೋವಾ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡಲಾಗಿತ್ತು. ನೀತಿ ಸಂಹಿತೆ ಹಿಂತೆಗೆದ ನಂತರ, ಅವರು ಬಂದೂಕನ್ನು ಮರಳಿ ಪಡೆದುಕೊಂಡಿದ್ದರು. ಬಂದೂಕನ್ನು ವಾಪಸು ಪಡೆದ ನಾಲ್ಕೈದು ದಿನಗಳ ನಂತರ, ಲೋಖಂಡ್ವಾಲಾ ಬ್ಯಾಕ್ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಸ್ವಚ್ಛಗೊಳ...
ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ; ಎಂ.ಕೆ. ಸ್ಟಾಲಿನ್

ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ; ಎಂ.ಕೆ. ಸ್ಟಾಲಿನ್

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಚುನಾಯಿತ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ರಾಜ್ಯಪಾಲರು ನಿರಾಕರಿಸುವುದು ಪ್ರಜಾಪ್ರಭುತ್ವದ ಮೂಲಭೂತ ತತ್ವಗಳಿಗೆ ಸವಾಲಾಗಿದೆ ಎಂದು ತೀವ್ರವಾಗಿ ಆಕ್ಷೇಪಿಸಿದರು. ಸರ್ಕಾರದ ನಿಲುವನ್ನು ದಾಖಲೆಯಲ್ಲಿ ಇಡುವುದು ತನ್ನ ಸಾಂವಿಧಾನಿಕ ಕರ್ತವ್ಯ ಎಂದು ಅವರು ಹೇಳಿದರು. ತಮಿಳುನಾಡು ಹಾಗೂ ಅದರ ಜನರು ರಾಷ್ಟ್ರ ಮತ್ತು ದೇಶಭಕ್ತಿಯ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ ಎಂದು ಸ್ಪಷ್ಟಪಡಿಸಿದ ಸ್ಟಾಲಿನ್, ರಾಜ್ಯದ ಬದ್ಧತೆಯನ್ನು ಪ್ರಶ್ನಿಸುವ ಪ್ರಯತ್ನಗಳನ್ನು ತಳ್ಳಿಹಾಕಿದರು. ಕಳೆದ ಮೂರು ವರ್ಷಗಳಿಂದ ರಾಜ್ಯಪಾಲರು ಪದೇಪದೇ ವಿಧಾನಸಭೆಯಿಂದ ಹೊರನಡೆಯುತ್ತಿರುವುದು ಸಾಂವಿಧಾನಿಕ ಸಂಪ್ರದಾಯಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿದರು. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ ಅವರು, ಇಂತಹ ವರ್ತನೆಯಿಂದ ರಾಜ್ಯಪಾಲರ ಕಚೇರಿಯ ಘನತೆಗೆ ಧಕ್ಕೆಯಾಗುತ್ತಿದೆ ಎಂದರು. ತಮಿಳುನಾಡಿನ ದೃಷ್ಟಿಕೋನದಲ್ಲಿ ದೋಷವಿಲ್ಲ, ಸಮಸ್ಯೆ ರ...