Saturday, March 21

Focus

ಸಾರಿಗೆ ನೌಕರರಿಗೆ 26 ತಿಂಗಳ ವೇತನ ಬಾಕಿ ಪಾವತಿ: ಏಪ್ರಿಲ್ 2025ರಿಂದ ವೇತನ ಪರಿಷ್ಕರಣೆಗೂ ಒಪ್ಪಿಗೆ

ಸಾರಿಗೆ ನೌಕರರಿಗೆ 26 ತಿಂಗಳ ವೇತನ ಬಾಕಿ ಪಾವತಿ: ಏಪ್ರಿಲ್ 2025ರಿಂದ ವೇತನ ಪರಿಷ್ಕರಣೆಗೂ ಒಪ್ಪಿಗೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಷ್ಕರದ ಎಚ್ಚರಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಸಾರಿಗೆ ನೌಕರರ ಪ್ರಮುಖ ಬೇಡಿಕೆಯಾಗಿದ್ದ ವೇತನ ಬಾಕಿ ಪಾವತಿಗೆ ಕ್ರಮ ಕೈಗೊಂಡಿದೆ.ಸಾರಿಗೆ ನೌಕರರಿಗೆ ಒಟ್ಟು 38 ತಿಂಗಳ ವೇತನ ಹಿಂಬಾಕಿ ಪಾವತಿಸ ಬೇಕಿರುವುದರಿಂದ, ಪ್ರಥಮ ಹಂತದಲ್ಲಿ 26 ತಿಂಗಳ ಅರಿಯರ್ಸ್‌ ಪಾವತಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 1-1-2021ರಿಂದ 28-03-2023ರವರೆಗೆ ಬಾಕಿ ಇರುವ 26 ತಿಂಗಳ ಮೊತ್ತವನ್ನು ನೌಕರರಿಗೆ ನೀಡಲಾಗುತ್ತದೆ.ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ KSRTC, BMTC, NWKRTC ಹಾಗೂ KKRTC ನೌಕರರು ವೇತನ ಬಾಕಿ ಪಾವತಿಗೆ ಒತ್ತಾಯಿಸುತ್ತಿದ್ದರು.ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಪ್ರಕಟಿಸಲಾಗಿದೆ. ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ, ಹಂತ ಹಂತವಾಗಿ ಬಾಕಿ ಪಾವತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.ಇದೇ ವೇಳೆ, 2025ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಸಾರಿಗೆ ನೌಕರರ ವೇತನ ಪರಿಷ್ಕರಣೆಗೂ ಸರ್ಕಾರ...
ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) 2026ನೇ ಸಾಲಿನ ಸಹಾಯಕ (Assistant) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದ್ದು, ಒಟ್ಟು 650 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ದೇಶಾದ್ಯಂತ 18 ಕಚೇರಿಗಳಲ್ಲಿ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಫೆಬ್ರವರಿ 16ರಿಂದ ಆರಂಭವಾಗಿದ್ದು, ಮಾರ್ಚ್ 8, 2026 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು RBI ಅಧಿಕೃತ ವೆಬ್‌ಸೈಟ್ (rbi.org.in) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಚಂಡೀಗಢ, ಚೆನ್ನೈ, ಅಹಮದಾಬಾದ್, ಬೆಂಗಳೂರು, ಭೋಪಾಲ್, ಗುವಾಹಟಿ, ಹೈದರಾಬಾದ್, ಜೈಪುರ, ಜಮ್ಮು, ಕಾನ್ಪುರ-ಲಕ್ನೋ, ಕೋಲ್ಕತ್ತಾ, ಮುಂಬೈ, ನಾಗ್ಪುರ, ನವದೆಹಲಿ, ಪಾಟ್ನಾ ಮತ್ತು ತಿರುವನಂತಪುರಂ ಸೇರಿದಂತೆ ವಿವಿಧ ನಗರಗಳಲ್ಲಿ ಹುದ್ದೆಗಳು ಲಭ್ಯವಿವೆ.ಪರೀಕ್ಷಾ ವೇಳಾಪಟ್ಟಿ (ತಾತ್ಕಾಲಿಕ): ಪೂರ್ವಭಾವಿ ಪರೀಕ್ಷೆ: ಏಪ್ರಿಲ್ 11, 2026 ಮುಖ್ಯ ಪರೀಕ್ಷೆ: ಜೂನ್ 7, 2026ಅರ್ಹತೆ: ಯಾವುದೇ ವಿಷಯದಲ್ಲಿ ಕನಿಷ್ಠ ಶೇ.50 ಅಂಕಗಳೊಂದಿಗೆ ಪದವಿ ಪೂರೈಸಿದವರು ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ವರ್ಡ್ ಪ್ರೊಸೆಸಿಂಗ್ ಕ...
ತಂದೆಯ ಸಹಿಯನ್ನೇ ನಕಲು ಮಾಡಿದ್ದ ಆರೋಪ ಬಗ್ಗೆ ಮೊದಲು ಉತ್ತರಿಸಿ; ಪ್ರಿಯಾಂಕ್ ಬಗ್ಗೆ ಟೀಕಿಸಿದ  ವಿಜಯೇಂದ್ರಗೆ ರಮೇಶ್ ಬಾಬು ಸವಾಲು

ತಂದೆಯ ಸಹಿಯನ್ನೇ ನಕಲು ಮಾಡಿದ್ದ ಆರೋಪ ಬಗ್ಗೆ ಮೊದಲು ಉತ್ತರಿಸಿ; ಪ್ರಿಯಾಂಕ್ ಬಗ್ಗೆ ಟೀಕಿಸಿದ ವಿಜಯೇಂದ್ರಗೆ ರಮೇಶ್ ಬಾಬು ಸವಾಲು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಬಿಜೆಪಿ ಬಾಲ ಭವನದ ನಾಯಕ ವಿಜಯೇಂದ್ರರವರು ತನ್ನ ಪಟಾಲಾಂ ಜೊತೆ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಖರ್ಗೆ ಮತ್ತು ಅವರ ಕುಟುಂಬದ ಮೇಲೆ ಅವಲತ್ತುಕೊಂಡಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವ್ಯಂಗ್ಯವಾಡಿದ್ದಾರೆ. ಬಿಜೆಪಿಗೆ ಮತ್ತು ಸಂಘ ಪರಿವಾರದವರಿಗೆ ತಮ್ಮ ಸಮರ್ಥನೆಗೆ ಇಂತಹ ಬಾಲಂಗೋಚಿ ನಾಯಕರ ಅವಶ್ಯಕತೆ ಬಂದಿರುವುದು ವ್ಯವಸ್ಥೆಯ ದೌರ್ಬಲ್ಯ ಎಂದು ಶಾಸಕರೂ ಆದ ರಮೇಶ್ ಬಾಬು ಹೇಳಿದ್ದಾರೆ.ಪ್ರಿಯಾಂಕ ಖರ್ಗೆರವರನ್ನು ಟೀಕಿಸಲು ವಿಜಯೇಂದ್ರ ಮಾಡಿರುವ ಆಲಾಪ ನಗೆ ಪಾಟಲಿನ ಪರಮಾವಧಿ ಆಗಿರುತ್ತದೆ. ತಮ್ಮ ರಾಜಕೀಯ ಅಧಿಕಾರ ಸ್ಥಾನವನ್ನು, ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ಪದೇ ಪದೇ ದೆಹಲಿಗೆ ದಂಡೆಯಾತ್ರೆ ಮಾಡುತ್ತಿರುವ ವಿಜಯೇಂದ್ರರವರಿಗೆ, ಆರ್.ಎಸ್.ಎಸ್ ಸಮರ್ಥಿಸುವ ಅನಿವಾರ್ಯತೆ ಸೃಷ್ಟಿ ಆಗಿರುವುದು ದೊಡ್ಡ ವಿಪರ್ಯಾಸ. ಮೊದಲು ಆರ್‌.ಎಸ್‌.ಎಸ್ ನವರು ಇವರ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಸಮರ್ಥಿಸಲಿ! ನಂತರ ಅವರು ಆರೆಸ್ಸೆಸ್ ಪರವಾದ ಹೇಳಿಕೆಯನ್ನು ನೀಡಲಿ ಎಂದ...
ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಅವರ 2023ರ ವಿಧಾನಸಭಾ ಚುನಾವಣೆಯ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ.ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ.ಅರ್ಜಿಯಲ್ಲಿ, ಸುಬ್ಬಾರೆಡ್ಡಿ ಅವರು ನಾಮಪತ್ರದಲ್ಲಿ ಆಸ್ತಿ ವಿವರಗಳನ್ನು ಸಂಪೂರ್ಣವಾಗಿ ಪ್ರಕಟಿಸದೆ ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆಯನ್ನು ರದ್ದುಪಡಿಸಬೇಕೆಂದು ಮನವಿ ಮಾಡಲಾಗಿತ್ತು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ, ಆಯ್ಕೆಯನ್ನು ಅಸಿಂಧುಗೊಳಿಸುವಂತೆ ತೀರ್ಮಾನಿಸಿದೆ.ಆದರೆ, ಅರ್ಜಿದಾರರಾದ ಸಿ. ಮುನಿರಾಜು ಅವರನ್ನು ನೇರವಾಗಿ ವಿಜಯಿ ಎಂದು ಘೋಷಿಸಲು ಹೈಕೋರ್ಟ್ ನಿರಾಕರಿಸಿದೆ.ಇದರ ನಡುವೆ, ಮೇಲ್ಮನವಿ ಸಲ್ಲಿಸಲು ಅವಕಾಶ ನೀಡುವಂತೆ ಸುಬ್ಬಾರೆಡ್ಡಿ ಪರ ಹಿರಿಯ ವಕೀಲರು ಮನವಿ ಮಾಡಿದ್ದು, ನ್ಯಾಯಾಲಯ ತನ್ನ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. ಹೀಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗ...
ಇಸ್ರೇಲ್ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣ; ಮೂವರಿಗೆ ಗಲ್ಲು, ಗಂಗಾವತಿ ಕೋರ್ಟ್ ಐತಿಹಾಸಿಕ ತೀರ್ಪು

ಇಸ್ರೇಲ್ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣ; ಮೂವರಿಗೆ ಗಲ್ಲು, ಗಂಗಾವತಿ ಕೋರ್ಟ್ ಐತಿಹಾಸಿಕ ತೀರ್ಪು

Focus, ಪ್ರಮುಖ ಸುದ್ದಿ, ರಾಜ್ಯ
ಕೊಪ್ಪಳ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಇಸ್ರೇಲ್ ಮಹಿಳೆ ಮೇಲಿನ ಅತ್ಯಾಚಾರ ಮತ್ತು ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣ ಸಂಬಂಧ ಗಂಗಾವತಿ ನ್ಯಾಯಾಲಯವು, ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ಪ್ರಕಟಿಸಿದೆ. ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳು.2025ರ ಮಾರ್ಚ್ ತಿಂಗಳಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪೂರ ಬಳಿ ಇಸ್ರೇಲ್ ಮೂಲದ ಮಹಿಳೆಯ ಅತ್ಯಾಚಾರ ನಡೆದಿತ್ತು. ಈ ವೇಳೆ ವಿದೇಶಿ ಯುವಕನ ಕೊಲೆ ಮಾಡಲಾಗಿತ್ತು. ಈ ಘಟನೆ ನಡೆದ ಕೇವಲ 9 ತಿಂಗಳಲ್ಲೇ ಕೋರ್ಟ್​ ಐತಿಹಾಸಿಕ ತೀರ್ಪು ಪ್ರಕಟಿಸಿದೆ.ಫೆಬ್ರವರಿ 6ರಂದು ಮೂವರು ಆರೋಪಿಗಳನ್ನು ದೋಷಿಗಳೆಂದು ನ್ಯಾಯಾಲಯ ಘೋಷಿಸಿತ್ತು. ಸೋಮವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಮೂವರು ಅಪರಾಧಿಗಳಿಗೆ ಗಲ್ಲು ಶಿಕ್ಷಿಯ ತೀರ್ಪು ಪ್ರಕಟಿಸಿದ್ದಾರೆ. ಈ ಮೂಲಕ ನ್ಯಾಯಾಂಗದ ದಕ್ಷತೆ ಈ ತೀರ್ಪು ಮೂಲಕ ಸಾಬೀತಾಗಿದೆ. ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ್ ಅವರ...
RSS ಬಗ್ಗೆ ಗೇಲಿ ಮಾಡಿದರೆ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆ? ಸಚಿವ ಪ್ರಿಯಾಂಕ್ ಬಗ್ಗೆ ಅಶೋಕ್ ವ್ಯಂಗ್ಯ

RSS ಬಗ್ಗೆ ಗೇಲಿ ಮಾಡಿದರೆ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆ? ಸಚಿವ ಪ್ರಿಯಾಂಕ್ ಬಗ್ಗೆ ಅಶೋಕ್ ವ್ಯಂಗ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆರ್ ಎಸ್ಎಸ್ ಸಂಘಟನೆ ಬಗ್ಗೆ ಮುನಿಸಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ.ಆರ್ ಎಸ್ಎಸ್ ಸಂಘಟನೆಯನ್ನು ವಾಚಾಮಗೋಚರವಾಗಿ ಬೈದರೆ, ನಿರಂತರವಾಗಿ ನಿಂದಿಸಿದರೆ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಪಕ್ಷದಲ್ಲಿ ಏನಾದರೂ ಸ್ಥಾನಮಾನ ಪಡೆಯಬಹುದು, ಇನ್ನೂ ಹೆಚ್ಚಿನ ಅಧಿಕಾರ ಸಿಗಬಹುದು ಎಂಬ ಭ್ರಮೆಯಲ್ಲಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಅದನ್ನೇ ನಿತ್ಯ ಚಾಳಿ ಮಾಡಿಕೊಂಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.4 ದಶಕಗಳಿಂದ ಕಲ್ಯಾಣ ಕರ್ನಾಟಕದ ಜನರ ಕೃಪಾಕಟಾಕ್ಷದಿಂದ ಅಧಿಕಾರ ಅನುಭವಿಸಿ, ಅಭಿವೃದ್ಧಿಗೆ ಮಾತ್ರ "ನಾಳೆ ಬಾ" ಎಂಬ ಶಾಶ್ವತವಾದ ಬೋರ್ಡು ಹಾಕಿಕೊಂಡು ಕಲ್ಯಾಣ ಕರ್ನಾಟಕದ ಜನತೆಗೆ ನಂಬಿಕೆ ದ್ರೋಹ ಮಾಡುತ್ತಿರುವ ದೆವ್ವಗಳನ್ನ ಓಡಿಸುವ ದಿನ ಬಹಳ ದೂರವಿಲ್ಲ ಎಂದಿದ್ದಾರೆ.ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಆರ್ ಎಸ್ಎಸ್ ಸಂಘಟನೆಯನ್ನು ವಾಚಾಮಗೋಚರವಾಗಿ ಬೈದರೆ, ನಿರಂತರವಾಗಿ ನಿ...

ಟಿ20 ವಿಶ್ವಕಪ್‌ಗಳಲ್ಲಿ ಪಾಕಿಸ್ತಾನ ವಿರುದ್ಧ ಭಾರತದ 8–1 ಹೆಡ್-ಟು-ಹೆಡ್ ಸಾಧನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ICC Men's T20 World Cup ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 61 ರನ್‌ಗಳ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ವಿವಿಧ ನಾಯಕರು ತಂಡವನ್ನು ಅಭಿನಂದಿಸಿದ್ದಾರೆ.ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, “ಸತತ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಗ್ರೂಪ್-ಎ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ತಂಡ ರಾಷ್ಟ್ರದ ಹೆಮ್ಮೆ” ಎಂದು ಎಕ್ಸ್‌ನಲ್ಲಿ ಬರೆದಿದ್ದಾರೆ. ಈ ಗೆಲುವಿನೊಂದಿಗೆ ಭಾರತ ಸೂಪರ್-8 ಹಂತಕ್ಕೆ ಪ್ರವೇಶಿಸಿದ ಮೊದಲ ತಂಡವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, “ಮಹಾ ಶಿವರಾತ್ರಿ ದಿನದಂದು ದೊರೆತ ಈ ವಿಜಯ ದೇಶಕ್ಕೆ ಹೆಮ್ಮೆಯ ವಿಷಯ” ಎಂದು ಅಭಿನಂದನೆ ಸಲ್ಲಿಸಿದರು.ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ತಂಡದ ಪ್ರದರ್ಶನವನ್ನು ಶ್ಲಾಘಿಸಿ, “ಸ್ವರೂಪಗಳು ಬದಲಾಗಬಹುದು, ಫಲಿತಾಂಶ ಸ್ಥಿರವಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಟಿ20 ವಿಶ್ವಕಪ್‌ಗಳಲ್ಲಿ ಪಾಕಿಸ್ತಾನ ವಿರುದ್ಧ ಭಾರತದ 8–1 ಹೆಡ್-ಟು-ಹೆಡ್ ಸಾಧನೆಯನ್ನು ಉಲ್ಲೇಖಿಸಿ ತಂಡದ ಸಮಗ್ರ ಆಟ...
ಬಸ್-ಕಾರು ಡಿಕ್ಕಿ;  ಭೀಕರ ಅಪಘಾತದಲ್ಲಿ ಐವರು ಮೃತ್ಯು

ಬಸ್-ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಮೃತ್ಯು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನೆಲಮಂಗಲ ಸಮೀಪ ಜಿಂದಾಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ, ಎದುರು ದಿಕ್ಕಿನಲ್ಲಿ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಿಸದೆ ಆತನು ಸಹ ಮೃತಪಟ್ಟಿದ್ದಾನೆ.ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ....
ವರ್ಗಾವಣೆ ಶಿಫಾರಸು ಪತ್ರ ವಿವಾದ: ಸಿಎಂ ಕಚೇರಿಯಲ್ಲಿ ‘ಲೆಡರ್ ಹೆಡ್’ ದಂಧೆ ನಡೆಯುತ್ತಿದೆ ಎಂದು ಬಿಜೆಪಿ ಆರೋಪ

ವರ್ಗಾವಣೆ ಶಿಫಾರಸು ಪತ್ರ ವಿವಾದ: ಸಿಎಂ ಕಚೇರಿಯಲ್ಲಿ ‘ಲೆಡರ್ ಹೆಡ್’ ದಂಧೆ ನಡೆಯುತ್ತಿದೆ ಎಂದು ಬಿಜೆಪಿ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಎಂ ಸಹಿ ಇರುವ ವರ್ಗಾವಣೆ ಶಿಫಾರಸು ವಿಚಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ಬಿಜೆಪಿ ನಾಯಕರು ವಾಕ್ಸಮರ ಮುಂದುವರಿಸಿದ್ದಾರೆ. Aa ಪತ್ರವನ್ನು ನಕಲಿ ಎಂದಿರುವ ಕಾಂಗ್ರೆಸ್, ಈ ಪತ್ರವನ್ನು ಮುಂದಿಟ್ಟು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಪೊಲೀಸರಿಗೆ ದೂರು ನೀಡಿದ್ದಾರೆ.ಇದಕ್ಕೆ ಎದಿರೇಟು ನೀಡಿರುವ ಬಿಜೆಪಿ ಶಾಸಕ ಸುನಿಲ್ ಕುಮಾರ್, ಸಿಎಂ ಸಹಿ ಇರುವ ಪತ್ರವೇ ನಕಲಿ ಎಂದಾದರೆ ಇನ್ನು ಸಿಎಂ ಕಚೇರಿ ಹೇಗೆ ಕಾರ್ಯ ನಿರ್ವಹಿಸುತ್ತಿದೆ ? ಎಂಬುದನ್ನು ಯೋಚಿಸಬೇಕಲ್ಲವೇ? ಎಂದಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರಿಗೆ ಈಗ ಖುರ್ಚಿಯ ಮೇಲಷ್ಟೇ ಗಮನ. ಕಚೇರಿಯ ಮೇಲೆ ಇಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದಿರುವ ಸುನಿಲ್ ಕುಮಾರ್, ಈ ಪತ್ರ ನಕಲಿ ಎಂದಾದರೆ ಪತ್ರದಲ್ಲಿರುವ ಸಹಿಯ ಅಸಲಿಯತ್ತೇನೆಂಬುದೂ ಇತ್ಯರ್ಥವಾಗಬೇಕು. ಹೀಗಾಗಿ ಈ ಸಹಿ ಅಸಲಿಯೋ, ನಕಲಿಯೋ ಎಂಬುದನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL) ಪರೀಕ್ಷೆಗೆ ಒಳಪಡಿಸಬೇಕು ಎಂದು ಸವಾಲು ಹಾಕಿದ್ದಾರೆ.ಇದು ಸಿಎಂ ಕಚೇರಿಯಲ್ಲಿ ನಡೆಯುವ ಬಹುದೊಡ್ಡ " ಲೆಡರ್ ಹೆಡ್ " ದಂಧೆಯ...
ಪಾದ್ರಿಗಳಿಂದ ಹಿಂಸೆ ಆರೋಪ; ಸೂಕ್ತ ಕಾನೂನು ಇಲ್ಲದಿರುವುದರಿಂದಲೇ ಕೃತ್ಯ? ಸರ್ಕಾರದ ಗಮನಸೆಳೆದ ಭಕ್ತ

ಪಾದ್ರಿಗಳಿಂದ ಹಿಂಸೆ ಆರೋಪ; ಸೂಕ್ತ ಕಾನೂನು ಇಲ್ಲದಿರುವುದರಿಂದಲೇ ಕೃತ್ಯ? ಸರ್ಕಾರದ ಗಮನಸೆಳೆದ ಭಕ್ತ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಕೆಲವು ಕ್ರಿಶ್ಚಿಯನ್ ಚರ್ಚ್'ಗಳಲ್ಲಿ ಸಾಮಾಜಿಕ ಬಹಿಷ್ಕಾರದ ಘಟನೆಗಳು ನಡೆಯುತ್ತಿದ್ದು, ಇದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಕೂಗು ಪ್ರತಿಧ್ವನಿಸಿದೆ. ಅಂತಹಾ ಪ್ರಕರಣಗಳನ್ನು ಪೊಲೀಸರು ಮುಚ್ಚಿಹಾಕುತ್ತಿದ್ದಾರೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಪೈಕಿ ಬೆಂಗಳೂರಿನ ಬಾಗಲೂರು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಕೆಯಾಗಿರುವ ಮನವಿಯೊಂದು ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಜೊತೆಗೆ, ಚರ್ಚುಗಳ ನಿರ್ವಹಣೆ ಸಂಬಂಧ ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹವೂ ಕೇಳಿಬಂದಿದೆ.ಬೆಂಗಳೂರಿನ ಚಿಕ್ಕಗುಬ್ಬಿಯ ಸಂತೋಷ್ ಕುಮಾರ್ ಎಂಬವರು ಹೆಣ್ಣೂರು ರಸ್ತೆ ಬಳಿಯ ಬೆಳ್ಳಹಳ್ಳಿಯಲ್ಲಿಯಲ್ಲಿರುವ ಕ್ರಿಶ್ಚಿಯನ್ ಫಲೋಶಿಪ್ ಚರ್ಚ್ (CFC) ನಲ್ಲಿನ ಕೃತ್ಯದ ತನಿಖೆಯಲ್ಲಾಗಿರುವ ಪೊಲೀಸರ ಲೋಪದ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಡಿಜಿಪಿ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. '2002ರಿಂದ ಚರ್ಚಿನ ಸದಸ್ಯರಾಗಿರುವ ತಾನು ಚರ್ಚಿನ ಧಾರ್ಮಿಕ ಕಾರ್ಯಕ್ರ...