Thursday, January 29

Focus

ಭ್ರಷ್ಟಾಚಾರ ಪ್ರಕರಣ: ಇಮ್ರಾನ್ ಖಾನ್, ಬುಶ್ರಾ ಬೀಬಿಗೆ 17 ವರ್ಷ ಜೈಲು

ಭ್ರಷ್ಟಾಚಾರ ಪ್ರಕರಣ: ಇಮ್ರಾನ್ ಖಾನ್, ಬುಶ್ರಾ ಬೀಬಿಗೆ 17 ವರ್ಷ ಜೈಲು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಇಸ್ಲಾಮಾಬಾದ್: ತೋಷಖಾನಾ–2 ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ಪಾಕಿಸ್ತಾನ ನ್ಯಾಯಾಲಯ ಶನಿವಾರ ತಲಾ 17 ವರ್ಷಗಳ ಜೈಲು ಶಿಕ್ಷೆಯ ತೀರ್ಪು ಪ್ರಕಟಿಸಿದೆ. ಮೇ 2021ರಲ್ಲಿ ಸೌದಿ ಅರೇಬಿಯಾದ ಕಿರೀಟ ರಾಜಕುಮಾರರಿಂದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಉಡುಗೊರೆಯಾಗಿ ದೊರೆತ ದುಬಾರಿ ಆಭರಣ ಸೆಟ್ ಅನ್ನು ಅತಿ ಕಡಿಮೆ ಬೆಲೆಗೆ ಖರೀದಿಸಿದ ಆರೋಪ ಈ ಪ್ರಕರಣಕ್ಕೆ ಕಾರಣವಾಗಿದೆ. ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿ ನಡೆಯುತ್ತಿರುವ ವಿಚಾರಣೆಯ ವೇಳೆ ಫೆಡರಲ್ ತನಿಖಾ ಸಂಸ್ಥೆ (ಎಫ್‌ಐಎ)ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಾರುಖ್ ಅರ್ಜುಮಂದ್ ತೀರ್ಪು ಪ್ರಕಟಿಸಿದರು. ತೀರ್ಪಿನಂತೆ, ಪಾಕಿಸ್ತಾನ ದಂಡ ಸಂಹಿತೆಯ ವಿವಿಧ ವಿಧಿಗಳ ಅಡಿಯಲ್ಲಿ ಇಮ್ರಾನ್ ಖಾನ್ ಅವರಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಇದೇ ಶಿಕ್ಷೆಯನ್ನು ಬುಶ್ರಾ ಬೀಬಿಗೂ ವಿಧಿಸಲಾಗಿದೆ. ಇಬ್ಬರಿಗೂ ತಲಾ 16...
ಅಕ್ರಮ ವಲಸಿಗರರನ್ನೇ ಮತಬ್ಯಾಂಕ್ ಆಗಿ ವ್ಯವಸ್ಥಿತವಾಗಿ ಪೋಷಿಸುತ್ತಿರುವ ಕಾಂಗ್ರೆಸ್ ಸರ್ಕಾರ; ಬಿಜೆಪಿ ಆರೋಪ

ಅಕ್ರಮ ವಲಸಿಗರರನ್ನೇ ಮತಬ್ಯಾಂಕ್ ಆಗಿ ವ್ಯವಸ್ಥಿತವಾಗಿ ಪೋಷಿಸುತ್ತಿರುವ ಕಾಂಗ್ರೆಸ್ ಸರ್ಕಾರ; ಬಿಜೆಪಿ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮ ವಲಸಿಗರ ಹಾವಳಿ ಎಲ್ಲ ಮಿತಿಗಳನ್ನು ಮೀರಿದೆ ಎಂದು ಆರೋಪಿಸಿರುವ ಬಿಜೆಪಿ, ಕೇಂದ್ರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಶನಿವಾರ ಮಾತನಾಡಿದ ಪ್ರತಿಪಕ್ಷದ ನಾಯಕ ಆರ್. ಅಶೋಕ, ರಾಜ್ಯದಲ್ಲಿ ಸುಮಾರು 15–20 ಲಕ್ಷ ಅಕ್ರಮ ವಲಸಿಗರು ವಾಸಿಸುತ್ತಿದ್ದಾರೆ ಎಂಬ ಅಂದಾಜುಗಳಿದ್ದು, ಅವರನ್ನು ಗಡೀಪಾರು ಮಾಡುವ ಬದಲು ಕಾಂಗ್ರೆಸ್ ಸರ್ಕಾರವು “ಮತಬ್ಯಾಂಕ್ ಆಗಿ ವ್ಯವಸ್ಥಿತವಾಗಿ ಪೋಷಿಸುತ್ತಿದೆ” ಎಂದು ಆರೋಪಿಸಿದರು. ಅಕ್ರಮ ವಲಸಿಗರು ರಾಷ್ಟ್ರೀಯ ಭದ್ರತೆಗೆ ಗಂಭೀರ ಬೆದರಿಕೆ ಉಂಟುಮಾಡುತ್ತಿದ್ದಾರೆ; ಅವರ ವಿರುದ್ಧ ಕ್ರಮ ಕೈಗೊಳ್ಳುವಾಗಲೆಲ್ಲ ಕಾಂಗ್ರೆಸ್ ಮೃದು ಧೋರಣೆ ತಾಳುತ್ತಿದೆ ಎಂದರು. ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗರನ್ನು ಹೊರಗಿಡಲು ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ವ್ಯಾಯಾಮವನ್ನು ಉಲ್ಲೇಖಿಸಿದ ಅಶೋಕ, ಈ ಕ್ರಮವನ್ನು ವಿರೋಧಿಸಿ ಕಾಂಗ್ರೆಸ್ ‘ಮತ ಕಳ್ಳತನ’ ಎಂಬ ನೆಪದಲ್ಲಿ ಬೀದಿಗಿಳಿದಿದೆ ಎಂದು ಟೀಕಿಸಿದರು. ...
ಮಾರಕ ದಾಳಿಗೆ ಪ್ರತೀಕಾರ: ಸಿರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

ಮಾರಕ ದಾಳಿಗೆ ಪ್ರತೀಕಾರ: ಸಿರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ವಾಷಿಂಗ್ಟನ್: ಕಳೆದ ವಾರ ಅಮೆರಿಕದ ಸೈನಿಕರ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ, ಅಮೆರಿಕ ಮಧ್ಯ ಸಿರಿಯಾದಾದ್ಯಂತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರ ಸಂಘಟನೆಯ ಡಜನ್ಗಟ್ಟಲೆ ಗುರಿಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಮೆರಿಕ ಅಧಿಕಾರಿಗಳು ತಿಳಿಸಿದ್ದಾರೆ. ‘ಆಪರೇಷನ್ ಹಾಕೈ ಸ್ಟ್ರೈಕ್’ ಎಂಬ ಹೆಸರಿನ ಈ ಕಾರ್ಯಾಚರಣೆಯಡಿ ಐಸಿಸ್ ಉಗ್ರರು, ಅವರ ಮೂಲಸೌಕರ್ಯ ಮತ್ತು ಶಸ್ತ್ರಾಸ್ತ್ರ ಸಂಗ್ರಹ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆದಿವೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ದೃಢಪಡಿಸಿದ್ದಾರೆ. ಅಗತ್ಯವಿದ್ದರೆ ಮುಂದುವರಿದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದೂ ಅವರು ಎಚ್ಚರಿಸಿದ್ದಾರೆ. ಇದು ಯುದ್ಧದ ಆರಂಭವಲ್ಲ, ಬದಲಾಗಿ ಪ್ರತೀಕಾರದ ಸ್ಪಷ್ಟ ಘೋಷಣೆ ಎಂದು ಹೆಗ್ಸೆತ್ ಹೇಳಿದ್ದಾರೆ. “ಅಮೆರಿಕನ್ನರನ್ನು ಗುರಿಯಾಗಿಸಿಕೊಂಡರೆ, ಅವರು ಜಗತ್ತಿನ ಎಲ್ಲಿಯಾದರೂ ಇರಲಿ, ಅವರನ್ನು ಬೇಟೆಯಾಡಿ ನಾಶಪಡಿಸಲಾಗುತ್ತದೆ” ಎಂಬ ಸಂದೇಶವನ್ನು ಈ ದಾಳಿ ನೀಡುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, “ಡಿಸೆ...
ಮತ್ತೆ ಸಿಎಂ ಬದಲಾವಣೆ ಚರ್ಚೆ; ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ ಎಂದ ಡಿಕೆಶಿ

ಮತ್ತೆ ಸಿಎಂ ಬದಲಾವಣೆ ಚರ್ಚೆ; ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ ಎಂದ ಡಿಕೆಶಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, “ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು. ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ” ಎಂದರು. ದೆಹಲಿ ಪೊಲೀಸರ ವಿಚಾರಣೆಗೆ ಹಾಜರಾಗುವ ಬಗ್ಗೆ ಕೇಳಿದಾಗ, “ನಾನು ಮಂಗಳವಾರ ದೆಹಲಿಗೆ ಹೋ...
ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ಚಿಂತನೆ

ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ಚಿಂತನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ರಾಜ್ಯ ಸರ್ಕಾರ ಬಿಪಿಎಲ್‌ ಕಾರ್ಡ್ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ ಎಂದು ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ರಾಜೇಶ್ ನಾಯಕ್ ಹಾಗೂ ಬಾಲಕೃಷ್ಣ.ಸಿ.ಎನ್ ಅವರ ಪ್ರಶ್ನೆಗೆ ಉತ್ತರಿಸಿದ ಕೆ.ಎಚ್‌.ಮುನಿಯಪ್ಪ, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್‍ದಾರರ ಆದಾಯ ಮಿತಿಯನ್ನು ₹1.20 ಲಕ್ಷಕ್ಕೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ ₹500 ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ ₹1.80 ಲಕ್ಷಕ್ಕೂ ಅಧಿಕವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು. ಕೇಂದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿಪಿಎಲ್‌ ಹಾಗೂ 1.25 ಲಕ್ಷ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ರಾಜ್ಯದ ಜನಸಂಖ್ಯೆಗೆ ಹೊಲಿಸಿದರೆ ಶೇ.73 ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡು ಪಡೆದಿವೆ. ರಾಜ್ಯವು ಜಿಎಸ್‌ಟಿ ಪಾವತಿ, ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಮುಂ...
ಪರಪ್ಪನ ಅಗ್ರಹಾರದಲ್ಲಿ ಜಾಮರ್; ಜೈಲಿನೊಳಗಿದೆ ನೆಟ್ವರ್ಕ್, ಸುತ್ತಮುತ್ತಲ ನಾಗರಿಕರ ಪರದಾಟ

ಪರಪ್ಪನ ಅಗ್ರಹಾರದಲ್ಲಿ ಜಾಮರ್; ಜೈಲಿನೊಳಗಿದೆ ನೆಟ್ವರ್ಕ್, ಸುತ್ತಮುತ್ತಲ ನಾಗರಿಕರ ಪರದಾಟ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಳಗಾವಿ: ಪರಪ್ಪನ ಅಗ್ರಹಾರ ಜೈಲು ಬಳಿ ಜಾಮರ್ ಅಳವಡಿಸಿರುವುದರಿಂದ ಸುತ್ತಮುತ್ತ ವಾಸವಿರುವ ಹತ್ತು ಸಾವಿರಕ್ಕೂಹೆಚ್ಚು ಮಂದಿಗೆ ಮೊಬೈಲ್ ನೆಟ್‌ವರ್ಕ್ ಸಿಗುತ್ತಿಲ್ಲಎಂದು ಶಾಸಕ ಎಂ. ಕೃಷ್ಣಪ್ಪ ಅವರು ಸರ್ಕಾರದ ಗಾಮ್,ಅನಸೆಳೆದಿದ್ದಾರೆ. ವಿಧಾನಸಭೆಯಲ್ಲಿ ಈ ಕುರಿತಂತೆ ಪ್ರಸ್ತಾಪಿಸಿರುವ ಶಾಸಕರು, ಪರಪ್ಪನ ಅಗ್ರಹಾರದ ಸುತ್ತಮುತ್ತ ಹತ್ತು ಸಾವಿರಕ್ಕೂ ಅಧಿಕ ಜನರು ವಾಸ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಬಹಳ ಹತ್ತಿರವಿದೆ. ಜಾಮರ್‌ನಿಂದಾಗಿ ಯಾರಿಗೂ ಮೊಬೈಲ್ ನೆಟ್‌ವರ್ಕ್ ಸಿಗುತ್ತಿಲ್ಲ. ಅದರೆ ಜೈಲಿನೊಳಗೆ ಖೈದಿಗಳು, ಅಧಿಕಾರಿಗಳು ಮೊಬೈಲ್ ಬಳಸುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೈಲಿನ ಒಳಗಿರುವವರಿಗೆ ಸಿಗುವ ಸಿಗ್ನಲ್ ಹೊರಗಿನವರಿಗೆ ಸಿಗುತ್ತಿಲ್ಲ.‌ ಜೈಲಿನ ಜಾಮರ್‌ಗಳಿಂದಾಗಿ ನಾಗರಿಕರ ದೈನಂದಿನ ಬದುಕು ಅಸ್ತವ್ಯಸ್ತಗೊಂಡಿದೆ. ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ. ಪರಪ್ಪನ ಅಗ್ರಹಾರದ ಸುತ್ತಮುತ್ತ ಹತ್ತು ಸಾವಿರಕ್ಕೂ ಅಧಿಕ ಜನರು ವಾಸ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಬಹಳ ಹತ್ತಿರವಿದೆ. ಜಾಮರ್‌ನಿಂದಾಗಿ ಯ...
ಮುಡಾ ತನಿಖೆ; ಲೋಕಾಯುಕ್ತ ಬಗ್ಗೆ ಕೋರ್ಟ್ ಅಸಮಾಧಾನ

ಮುಡಾ ತನಿಖೆ; ಲೋಕಾಯುಕ್ತ ಬಗ್ಗೆ ಕೋರ್ಟ್ ಅಸಮಾಧಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ ಎಂದು ಕರ್ನಾಟಕ ಲೋಕಾಯುಕ್ತರು ಗುರುವಾರ ಶಾಸಕರು–ಸಂಸದರ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದರು. ಆದರೆ ತನಿಖೆ ಪೂರ್ಣಗೊಳಿಸುವಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. ಲೋಕಾಯುಕ್ತರ ಪರ ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಲಯಕ್ಕೆ ಸ್ಥಿತಿಗತಿ ವರದಿ ಸಲ್ಲಿಸಿ, ಕೆಲ ಮಂಜೂರಾತಿ ಆದೇಶಗಳನ್ನು ಇನ್ನೂ ಪಡೆಯಬೇಕಿದ್ದು, ತನಿಖೆ ಮುಕ್ತಾಯದ ಹಂತದಲ್ಲಿದೆ ಎಂದು ತಿಳಿಸಿದರು. ಡಿಸೆಂಬರ್ 18ರೊಳಗೆ ಅಂತಿಮ ವರದಿ ಸಲ್ಲಿಸುವಂತೆ ನ್ಯಾಯಾಲಯ ಈ ಹಿಂದೆ ನಿರ್ದೇಶನ ನೀಡಿದ್ದನ್ನು ಸ್ಮರಿಸಿತು. ವಿಳಂಬವನ್ನು ಗಮನಿಸಿದ ನ್ಯಾಯಾಲಯ, ಮುಡಾ ಪ್ರಕರಣದ ವಿವಿಧ ಅಂಶಗಳನ್ನು ಪರಿಗಣಿಸಿ ತನಿಖೆ ಪೂರ್ಣಗೊಳಿಸುವಂತೆ ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು ಎಂದು ದಾಖಲಿಸಿದೆ. ತನಿಖೆ ಪೂರ್ಣಗೊಳ್ಳದೆ, ಹೆಚ್ಚಿನ ತನಿಖೆಗೆ ಅನುಮತಿ ಕೋರಿ ತನಿಖಾಧಿಕಾರಿ ಮನವಿ ಸಲ್ಲಿಸಿದ್ದರಿಂದ, ಆರೋ...
ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

ಡಿ.20ರಂದು ಅಲೈಯನ್ಸ್ ವಿವಿ ಪದವಿ ಪ್ರದಾನ ಸಮಾರಂಭ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನ್ಯಾಕ್‌ (NAAC) ವತಿಯಿಂದ A+ ಮಾನ್ಯತೆ ಪಡೆದಿರುವ ಅಲೈಯನ್ಸ್ ವಿಶ್ವವಿದ್ಯಾಲಯದ 14ನೇ ಪದವಿ ಪ್ರದಾನ ಸಮಾರಂಭ ಡಿಸೆಂಬರ್ 20, 2025ರ ಶನಿವಾರ ಬೆಂಗಳೂರಿನ ಕೇಂದ್ರ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಗುತ್ತದೆ. ವ್ಯವಹಾರ ನಿರ್ವಹಣೆ, ಕಾನೂನು, ಎಂಜಿನಿಯರಿಂಗ್ ಹಾಗೂ ಲಿಬರಲ್ ಆರ್ಟ್ಸ್ ಸೇರಿದಂತೆ ವಿವಿಧ ಶಾಖೆಗಳ ಒಟ್ಟು 1,962 ಪದವಿ ಮತ್ತು ಡಿಪ್ಲೊಮಾಗಳನ್ನು ಪ್ರದಾನ ಮಾಡಲಾಗುತ್ತದೆ. ಇದರಲ್ಲಿ 960 ಪದವಿ ವಿದ್ಯಾರ್ಥಿಗಳು, 887 ಸ್ನಾತಕೋತ್ತರ ವಿದ್ಯಾರ್ಥಿಗಳು, 10 ಪಿಎಚ್.ಡಿ ಸಂಶೋಧನಾ ವಿದ್ಯಾರ್ಥಿಗಳು, ಪ್ರದರ್ಶನ ಕಲೆಗಳ 20 ಡಿಪ್ಲೊಮಾ ವಿದ್ಯಾರ್ಥಿಗಳು ಹಾಗೂ ನಿರ್ವಹಣಾ ವಿಭಾಗದ 85 ಎಕ್ಸಿಕ್ಯೂಟಿವ್ ಸ್ನಾತಕೋತ್ತರ ಡಿಪ್ಲೊಮಾ ವಿದ್ಯಾರ್ಥಿಗಳು ಸೇರಿದ್ದಾರೆ. ಇದು ವಿಶ್ವವಿದ್ಯಾಲಯದ ಬಹುಶಾಖೀಯ ಶೈಕ್ಷಣಿಕ ಪರಿಸರವನ್ನು ಪ್ರತಿಬಿಂಬಿಸುತ್ತದೆ. ಪದವಿ ಪ್ರದಾನ ಮೆರವಣಿಗೆಯೊಂದಿಗೆ ಸಮಾರಂಭ ಆರಂಭವಾಗಲಿದ್ದು, ಚಾನ್ಸಲರ್ ಅವರ ಅಧಿಕೃತ ಘೋಷಣೆಯ ನಂತರ ವಾರ್ಷಿಕ ವರದಿ ಮಂಡನೆ, ಪದವಿ ಮತ್ತ...

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣ; ಮಧು ಬಂಗಾರಪ್ಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. 1,78,935 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿದ್ದು, 45,590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ 5,024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32,010 ಹುದ್ದೆಗಳು ಭರ್ತಿಯಾಗಿದ್ದು 12,134 ಹುದ್ದೆಗಳು ಖಾಲಿ ಇರುತ್ತವೆ. ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ 2025-2026ನೇ ಶೈಕ್ಷಣಿಕ ಸಾಲಿಗೆ ಪ್ರಾಥಮಿಕ ಶಾಲೆಗಳಲ್ಲಿ 40,000 ಮತ್ತು ಪ್ರೌಢಶಾಲೆಗಳಲ್ಲಿ 11,000 ಒಟ್ಟಾರೆಯಾಗಿ 51,000 ಅತ...
‘ಡಕೋಯಿಟ್’ ಚಿತ್ರ 2026ರ ಮಾರ್ಚ್ 19ರಂದು ತೆರೆ

‘ಡಕೋಯಿಟ್’ ಚಿತ್ರ 2026ರ ಮಾರ್ಚ್ 19ರಂದು ತೆರೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಅದಿವಿ ಶೇಷ್ ಹಾಗೂ ಅನುರಾಗ್ ಕಶ್ಯಪ್ ಅವರೊಂದಿಗೆ ನಟಿಸಿರುವ ಮುಂಬರುವ ಚಿತ್ರ ‘ಡಕೋಯಿಟ್’ ತನ್ನ ವೃತ್ತಿಜೀವನದಲ್ಲಿ ಎರಡು ಭಾಷೆಗಳಲ್ಲಿ ಚಿತ್ರೀಕರಣ ಮಾಡಿದ ಮೊದಲ ಚಿತ್ರ ಎಂದು ಬಾಲಿವುಡ್ ನಟಿ ಮೃಣಾಲ್ ಠಾಕೂರ್ ಹೇಳಿದ್ದಾರೆ. ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮೃಣಾಲ್, ಮರಾಠಿಯಲ್ಲಿ ಪ್ರೇಕ್ಷಕರೊಂದಿಗೆ ಸಂವಾದ ನಡೆಸಿದರು. ಸಹನಟರಾದ ಅದಿವಿ ಶೇಷ್, ಅನುರಾಗ್ ಕಶ್ಯಪ್ ಹಾಗೂ ನಿರ್ದೇಶಕ ಶನಿಲ್ ಡಿಯೋ ಅವರೊಂದಿಗೆ ಕೆಲಸ ಮಾಡಿದ ಅನುಭವವನ್ನು ಅವರು ಹಂಚಿಕೊಂಡರು. ಈ ಚಿತ್ರವು ತಮ್ಮ ‘ಲವ್ ಸೋನಿಯಾ’ ಚಿತ್ರದ ಅನುಭವವನ್ನು ನೆನಪಿಸುವ ಛಾಯೆಯನ್ನು ನೀಡಿದೆ ಎಂದರು. “ಡಕೋಯಿಟ್ ಸಂಪೂರ್ಣವಾಗಿ ವಿಭಿನ್ನವಾದ ಚಿತ್ರ. ಇದು ನಾನು ಹಿಂದಿ ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ಚಿತ್ರೀಕರಿಸಿದ ಮೊದಲ ಸಿನಿಮಾ. ಅದಿವಿ ಶೇಷ್ ಅವರೊಂದಿಗೆ ಕೆಲಸ ಮಾಡುವುದು ಅದ್ಭುತ ಅನುಭವ. ಹರಿಯನ್ನು ಈ ಹೊಸ ಅವತಾರದಲ್ಲಿ ನೋಡುವುದು ನಿಜಕ್ಕೂ ಮನಸ್ಸಿಗೆ ತಾಕುತ್ತದೆ. ಅನುರಾಗ್ ಸರ್ ಅವರೊಂದಿಗೆ ಕೆಲಸ ಮಾಡುವುದು ಬಹಳ ಸಂತೋಷ ನೀಡಿತು. ನನ್ನ ದೃಶ್ಯಗಳು ಕಡಿಮೆ ಇದ್ದರೂ, ನಾನು ಮಾಡಿದ ಪ್ರತಿಯೊಂದೂ...