Tuesday, September 9

Focus

ಬಾಣಂತಿಯರ ಸರಣಿ ಸಾವು ಪ್ರಕರಣ; ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ಆಗ್ರಹ

ಬಾಣಂತಿಯರ ಸರಣಿ ಸಾವು ಪ್ರಕರಣ; ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ ನಾಯಕರು ಮಹಿಳೆಯರಿಗೆ 2 ಸಾವಿರ ರೂ. ನೀಡುವ ಬದಲು, ಬಾಣಂತಿಯರ ಬದುಕಿಗೆ ಗ್ಯಾರಂಟಿ ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ‌ ಕಾಂಗ್ರೆಸ್ ನಾಯಕರು ಮಹಿಳಾ ಸಬಲೀಕರಣದ ಬಗ್ಗೆ ಮಾತಾಡುತ್ತಾರೆ. 2 ಸಾವಿರ ರೂ. ನೀಡುವ ಬದಲು ಮಹಿಳೆಯರ ಜೀವ ಉಳಿಸಿದರೆ ಸಾಕಿತ್ತು. ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಮೊದಲು ನೀಡಬೇಕು. ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು ಎಂದು ಅಶೋಕ್ ಅವರು ಸುದ್ದಿಗೋಷ್ಠಿ ನಡೆಸಿ ಆಗ್ರಹಿಸಿದರು. ರಾಜ್ಯದಲ್ಲಿ ಬಾಣಂತಿಯರ ಮರಣ ಮೃದಂಗ ಇನ್ನೂ ನಿಂತಿಲ್ಲ. ಒಟ್ಟು 736 ತಾಯಂದಿರು ಮೃತಪಟ್ಟಿದ್ದಾರೆ. ಇದು ಸರ್ಕಾರದ ಪ್ರಾಯೋಜಿತ ಕೊಲೆಯಾಗಿದ್ದು, ಸರ್ಕಾರವೇ ನೇರ ಹೊಣೆಯಾಗಿದೆ. ಹುಬ್ಬಳ್ಳಿಯಲ್ಲಿ ಬಾಣಂತಿ ಸತ್ತಿದ್ದಕ್ಕೆ ಅವರ ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಿಪಟೂರಿನಲ್ಲೂ ಒಬ್ಬ ಬಾಣಂತಿ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಪೂರೈಸಿದ ಐವಿ ದ್ರಾವಣದಿಂದಾಗಿ ಬಾಣಂತಿಯರು ಮೃತರಾಗುತ್ತಿದ್ದಾರೆ. ಕಾಂಗ್ರೆಸ್‌ನ ಸಮಾವೇಶ ನಡೆದಾಗಲೇ ಬಾಣಂತಿಯರು ಮೃತಪಟ್ಟಿದ್ದರೂ ಅಲ್ಲಿಗೆ...
ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಮಂಜುನಾಥ ಭಂಡಾರಿ ಎದಿರೇಟು

ಬಿಜೆಪಿಗೆ ಅಪಾಯಕಾರಿ ಆಗಿದ್ದಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್: ಮಂಜುನಾಥ ಭಂಡಾರಿ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೂಲಕ ಅವರಿಗೆ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮಣಿಸುವ ಸಲುವಾಗಿ ಬಿಜೆಪಿ ಪಕ್ಷವು ಅವರ ಮೇಲೆ ಸಲ್ಲದ ಆರೋಪ ಹೊರಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆರೋಪಿಸಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿಗರಿಗೆ ಭಾರಿ ಥ್ರೆಟ್‌ ಆಗಿ ಪರಿಣಮಿಸಿದ್ದಾರೆ. ಏಕೆಂದರೆ ಬಿಜೆಪಿಗರ ಎಲ್ಲ ಭ್ರಷ್ಟಾಚಾರ, ಅನಾಚಾರಗಳನ್ನು ಅವರು ಬಯಲಿಗೆಳೆದಿದ್ದಾರೆ. ಮಾತ್ರವಲ್ಲ ಭ್ರಷ್ಟಾಚಾರ ಪ್ರಕರಣಗಳನ್ನು ತಾರ್ಕಿಕ ಅಂತ್ಯ ಕಾಣಿಸಲು ಪ್ರಿಯಾಂಕ್ ಖರ್ಗೆ ಅವರು ಹೋರಾಟ ಮಾಡಿದ್ದಾರೆ. ಪಿಎಸ್ಐ ಹಗರಣ, 40% ಕಮೀಷನ್‌, ಬಿಟ್ ಕಾಯಿನ್ ಹಗರಣ, ಕೋವಿಡ್ ಹಗರಣ ಹೀಗೆ ಎಲ್ಲವನ್ನೂ ಬಯಲಿಗೆಳೆದು, ಅವುಗಳನ್ನು ತನಿಖೆಯಾಗುವಂತೆ ಮಾಡಿದರು. ಮಾತ್ರವಲ್ಲ ಶಿಕ್ಷೆಯಾಗುವುದಕ್ಕೆ ಕಾರಣರಾಗಿದ್ದಾರೆ. ಅವರು ಕೇವಲ ಗಾಳಿಯಲ್ಲಿ ಗುಂಡು ಹಾರಿಸಿಲ್ಲ. ಪ್ರತಿ ಭ್ರಷ್ಟಾಚಾರವನ್ನೂ ಅಂಕಿ ಅಂಶ, ದಾಖಲೆ ಸಹಿತ ಬೀದಿಗೆ ತಂದರು. ಮತ್ತು ಪ್ರಬಲವಾಗಿ ಹೋರಾಟ ಮಾಡಿದವರು. ಹಾಗಾಗಿ ಅನಗತ್ಯವಾಗಿ ಈಗ ಸಚಿನ್‌ ಆತ್ಮಹತ್ಯೆ...
KSRTC ಟಿಕೆಟ್ ದರ ಏರಿಕೆ; ಸರ್ಕಾರದ ವಿರುದ್ಧ ದಂಗೆ ಏಳುವುದೂ ಅನಿವಾರ್ಯ ಎಂದ ಪ್ರತಿಪಕ್ಷ

KSRTC ಟಿಕೆಟ್ ದರ ಏರಿಕೆ; ಸರ್ಕಾರದ ವಿರುದ್ಧ ದಂಗೆ ಏಳುವುದೂ ಅನಿವಾರ್ಯ ಎಂದ ಪ್ರತಿಪಕ್ಷ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಪ್ರಯಾಣ ದರ ಏರಿಕೆಯ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್, ಬೆಲೆ ಏರಿಕೆ ಮಾಡುವ ಮೂಲಕ ಸಿದ್ದರಾಮಯ್ಯ ಸರ್ಕಾರವು ಕನ್ನಡಿಗರ ರಕ್ತ ಹೀರುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸಂಪುಟದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಅಶೋಕ್, ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳ ಅಂತ ಒಂದಲ್ಲ ಒಂದು ರೀತಿ ಜನ ಸಾಮಾನ್ಯರ ಸುಲಿಗೆ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಈಗ ಬಸ್ ದರ 15% ಏರಿಕೆ ಮಾಡಿದೆ ಎಂದು ಟೀಕಿಸಿದ್ದಾರೆ. ದಿನಬೆಳಗಾದರೆ ಒಂದಲ್ಲ ಒಂದು ಬೆಲೆ ಏರಿಕೆ ಮಾಡಿ ಕನ್ನಡಿಗರ ರಕ್ತ ಹೀರುತ್ತಿದ್ದೀರಲ್ಲ ನಿಮ್ಮ ಸರ್ಕಾರದ ಬಕಾಸುರ ಹೊಟ್ಟೆ ತುಂಬಿಸಲು ಕನ್ನಡಿಗರು ಇನ್ನೆಷ್ಟು ತೆರಿಗೆ, ಶುಲ್ಕ ತೆತ್ತಬೇಕು? ಎಂದು ಅಶೋಕ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ. ಅಸಮರ್ಥ ಸಿಎಂ ಸಿದ್ದರಾಮಯ್ಯ ಅವರ ದುರಾಡಳಿತದಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಅನಿವಾರ್ಯ, ಆಸ್ತಿ ತೆರಿಗೆ ಏರಿಕೆ ಅನಿವಾರ್...
ಸ್ಮಾರ್ಟ್‌ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸರ್ಕಾರದ ಸೂಚನೆ

ಸ್ಮಾರ್ಟ್‌ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸರ್ಕಾರದ ಸೂಚನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್‌ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ. ಎಸ್.‌ ಸುರೇಶ (ಬೈರತಿ) ಸೂಚಿಸಿದ್ದಾರೆ. ಸ್ಮಾರ್ಟ್‌ ಸಿಟಿ ಅಭಿಯಾನದಡಿ ರಾಜ್ಯ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಬೈರತಿ ಸುರೇಶ ರವರು ಇಂದು ವಿಧಾನಸೌಧದ ಕಚೇರಿಯಲ್ಲಿ ನಡೆಸಿದರು. ಸ್ಮಾರ್ಟ್‌ ಸಿಟಿ ಅಭಿಯಾನ ಶೂರುವಾದಗಿನಿಂದ ಇಲ್ಲಿಯವರೆಗೂ ರಾಜ್ಯದ 7 ಸ್ಮಾರ್ಟ್‌ ಸಿಟಿಗಳಲ್ಲಿ ರೂ. 6415.51 ಕೋಟಿಗಳ ವೆಚ್ಚದ ಕಾಮಗಾರಿಗಳು ನಡೆದಿದ್ದು, ಪೂರ್ಣಗೊಂಡಿರುವ ಹಲವು ಕಾಮಗಾರಿಗಳು ಅಷ್ಟೊಂದು ತೃಪ್ತಿದಾಯಕವಾಗಿಲ್ಲವೆಂದು ತಿಳಿದು ಬಂದ ಕಾರಣ ಸಚಿವ ಬೈರತಿ ಸುರೇಶ ರವರು ಬೆಂಗಳೂರು ಹೊರತುಪಡಿಸಿ (ರೂ. 877.82 ಕೋಟಿ ರೂಪಾಯಿಗಳ ಕಾಮಗಾರಿ ಬೆಂಗಳೂರು ಸ್ಮಾರ್ಟ್‌ ಸಿಟಿಯಲ್ಲಿ ಪೂರ್ಣಗೊಂಡಿದ್ದು) ಇತರೆ 6 ಸ್ಮಾರ್ಟ್‌ ಸಿಟಿಗಳ ಯೋಜನ...
ಮನು ಭಾಕರ್ ಸಹಿತ ನಾಲ್ವರು ಕ್ರೀಟಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ

ಮನು ಭಾಕರ್ ಸಹಿತ ನಾಲ್ವರು ಕ್ರೀಟಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದಿದ್ದ ಮಹಿಳಾ ಶೂಟರ್ ಮನು ಭಾಕರ್ ಸಹಿತ ನಾಲ್ವರು ಅಪ್ರತಿಮ ಕ್ರೀಟಾಪಟುಗಳಿಗೆ ಕೇಂದ್ರ ಸರ್ಕಾರ ಖೇಲ್ ರತ್ನ ಪ್ರಶಸ್ತಿ ಪ್ರಕಟಿಸಿದೆ. ವಿಶ್ವ ಚೆಸ್ ಚಾಂಪಿಯನ್​ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದ 18 ವರ್ಷದ ಡಿ.ಗುಕೇಶ್ ಹಾಗೂ ಭಾರತದ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಅವರಿಗೂ ಕೇಂದ್ರ ಸರ್ಕಾರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಿಸಿದೆ. ರಾಷ್ಟ್ರಪತಿ ಭವನದಲ್ಲಿ ಈ ತಿಂಗಳ 17 ರಂದು ಈ ನಾಲ್ವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ....
ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ; ಸುಮಾರು 50 ವಾಹನಗಳು ಭಸ್ಮ

ಬೈಕ್ ಶೋರೂಂನಲ್ಲಿ ಅಗ್ನಿ ಅವಘಡ; ಸುಮಾರು 50 ವಾಹನಗಳು ಭಸ್ಮ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಹೊರವಲಯದ ಮಹದೇವಪುರ ಬಳಿಯ ಬೈಕ್ ಶೋರೂಂನಲ್ಲಿ ಬೆಂಕಿ ಅವಘಡದಲ್ಲಿ ಸಂಭವಿಸಿ ಕನಿಷ್ಠ 50 ವಾಹನಗಳು ಸುಟ್ಟು ಭಸ್ಮವಾಗಿವೆ. ಬುಧವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ ಎನ್ಬಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್‌ಗಳು ಸುಟ್ಟುಹೋಗಿವೆ ಎಂದು ಅಂದಾಜಿಸಲಾಗಿದೆ....
ಮೂಡಿಗೆರೆಯ 69 ವರ್ಷದ ಮುರುಗೇಶ್ ಬೆಂಗಳೂರಿನಲ್ಲಿ ನಾಪತ್ತೆ; ಪ್ರಕರಣ ದಾಖಲು

ಮೂಡಿಗೆರೆಯ 69 ವರ್ಷದ ಮುರುಗೇಶ್ ಬೆಂಗಳೂರಿನಲ್ಲಿ ನಾಪತ್ತೆ; ಪ್ರಕರಣ ದಾಖಲು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನ ರಾಮಮೂರ್ತಿನಗರದ ದಾಸಪ್ಪ ಲೇಔಟ್'ನ ಬಸಿಲಿಕಾ ಲಿಲಯದಲ್ಲಿ ವಾಸವಿದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಸಮೀಪದ ಬಳ್ಳುರು ಗ್ರಾಮದ ನಿವಾಸಿ 69 ವರ್ಷದ ಮುರುಗೇಶ್ ಅವರು ನಾಪತ್ತೆಯಾಗಿದ್ದಾರೆ. ಸುಮಾರು ತಿಂಗಳ ಹಿಂದೆ ತಮ್ಮ ಪುತ್ರ ಪುನೀತ ಕುಮಾರ್ ಮನೆಯಲ್ಲಿ ವಾಸವಿದ್ದರು. ರಾಮಮೂರ್ತಿನಗರದ 3 ನೇ ಮುಖ್ಯ ರಸ್ತೆ, 2ನೇ ಕ್ರಾಸ್'ನಲ್ಲಿರುವ ದಾಸಪ್ಪ ಲೇಔಟ್'ನ ಬಸಿಲಿಕಾ ಲಿಲಯದಲ್ಲಿ ಪುನೀತ ಕುಮಾರ್ ವಾಸವಿದ್ದು ಅವರ ಜೊತೆ ಉಳಿದುಕೊಂಡಿದ್ದರು. 31.12.2024 ರಂದು ಬೆಳಿಗೆ 09-40 ಗಂಟೆ ಸುಮಾರಿಗೆ ಬೀಡಿ ಖರೀದಿಸಲೆಂದು ಮನೆ ಸಮೀಪದ ಅಂಗಡಿಯತ್ತ ತೆರಳಿರುವ ಮುರುಗೇಶ್ ಅವರು ಮತ್ತೆ ಮನೆಗೆ ವಾಪಸ್ಸು ಬಂದಿಲ್ಲ ಎಂದು ಅವರ ಪುತ್ರ ಪುನೀತ ಕುಮಾರ್ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ನಾಪತ್ತೆಯ್ತಾಗಿರುವ ಮುರುಗೇಶ್ ಅವರಿಗಾಗಿ ಹುಡುಕಾಟ ನಡೆಸಿದ್ದಾರೆ. ಇದೇ ವೇಳೆ, ನಾಪತ್ತೆಯಾಗಿರುವ ಮುರುಗೇಶ್ ಅವರು ಕನ್ನಡ ಮತ್ತು ತಮಿಳು ಭಾಷೆ ಬಲ್ಲವರಾಗಿದ್ದು, ಅವರ ಬಗ್ಗೆ ಸುಳಿವು ಸಿಕ್ಕಿದಲ್ಲಿ 9480266440 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡ...
ನ್ಯೂ ಓರ್ಲಿಯನ್ಸ್‌ ದಾಳಿ ನಂತರ ಅಮೇರಿಕಾದಲ್ಲಿ ಕಟ್ಟೆಚ್ಚರ

ನ್ಯೂ ಓರ್ಲಿಯನ್ಸ್‌ ದಾಳಿ ನಂತರ ಅಮೇರಿಕಾದಲ್ಲಿ ಕಟ್ಟೆಚ್ಚರ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನ್ಯೂ ಓರ್ಲಿಯನ್ಸ್‌: ಅಮೆರಿಕದ ನ್ಯೂ ಓರ್ಲಿಯನ್ಸ್‌'ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಶಂಕಿತ ಉಗ್ರರು ನಡೆಸಿದ್ದಾರೆನ್ನಲಾದ ಕೃತ್ಯದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ನ್ಯೂ ಓರ್ಲಿಯನ್ಸ್‌'ನ ಬೌರ್ಬನ್ ಸ್ಟ್ರೀಟ್‌ನಲ್ಲಿ ಜನಸಂದಣಿಯ ಮೇಲೆ ಟ್ರಕ್ ನುಗ್ಗಿದ್ದು ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಗುಂಡಿನ ದಾಳಿ ನಡೆದಿದೆ.. ಹೊಸ ವರ್ಷ ಸಂಭ್ರಮ ವೇಳೆ ಶಂಕಿತ ಈ ಕೃತ್ಯ ನಡೆಸಿದ್ದು, ಫ್ಘಟನೆ ನಂತರ ಅಮೆರಿಕಾದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ....
ರಾಜ್ಯ ಬಿಜೆಪಿಯಲ್ಲಿ ಕುತೂಹಲ; ವಿಜಯೇಂದ್ರ ನಡೆಯ ಅಚ್ಚರಿ

ರಾಜ್ಯ ಬಿಜೆಪಿಯಲ್ಲಿ ಕುತೂಹಲ; ವಿಜಯೇಂದ್ರ ನಡೆಯ ಅಚ್ಚರಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದಿನಕ್ಕೊಂದು ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ರಾಜ್ಯ ಬಿಜೆಪಿಯಲ್ಲಿ ಇದೀಗ ವಿಜಯೇಂದ್ರ ನಡೆ ಸಂಚಲನಕ್ಕೆ ಕಾರಣವಾಗಿದೆ. ಪಕ್ಷದೊಳಗಿನ ಆಂತರಿಕ ಕಚ್ಚಾಟದ ನಡುವೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬುಧವಾರ ಸಂಜೆ ಅಮಿತ್ ಶಾ ಅವರನ್ನು ಭೇಟಿ ಮಾಡಿ “ವಚನ’ ಪುಸ್ತಕ ನೀಡಿದ ವಿಜಯೇಂದ್ರ ರಾಜ್ಯ ರಾಜಕೀಯ ಬಗ್ಗೆ ಚರ್ಚಿಸಿದ್ದಾರೆ. ಅಮಿತ್ ಶಾ ಭೇಟಿ ಕುರಿತು ಸಾಮಾಜಿಕ ಜಾಲತಾಣ'X' ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನ ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು ಎಂದು ತಿಳಿಸಿದ್ದಾರೆ. ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಶ್ರೀ @AmitShah ಜೀ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ...
ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ವಿದ್ಯಾರ್ಥಿ ವೇತನ; ಸಿಎಂಗೆ ಕಾಂಗ್ರೆಸ್ ಅಭಿನಂದನೆ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ವಿದ್ಯಾರ್ಥಿ ವೇತನ; ಸಿಎಂಗೆ ಕಾಂಗ್ರೆಸ್ ಅಭಿನಂದನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಅಭಿನಂದನೆ ಸಲ್ಲಿಸಿದೆ. ಸರ್ಕಾರದ ವಿದ್ಯಾಸಿರಿ ಯೋಜನೆಯ ಅಡಿಯಲ್ಲಿ ಪ್ರತೀ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ವಿದ್ಯಾರ್ಥಿ ವೇತನವನ್ನು ಪಾವತಿ ಮಾಡಲಾಗುತ್ತದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲಿ ತಾಂತ್ರಿಕ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿರುವ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಸುಮಾರು ಐದು ಕೋಟಿ ರೂಪಾಯಿ ವಿದ್ಯಾರ್ಥಿ ವೇತನವನ್ನು ರಾಜ್ಯ ಸರ್ಕಾರವು ಪಾವತಿ ಮಾಡಿರುತ್ತದೆ. ತಾಂತ್ರಿಕ ಕಾರಣದ ಆಧಾರದ ಮೇಲೆ ಆರ್ಥಿಕ ಇಲಾಖೆಯು ವಿದ್ಯಾರ್ಥಿ ವೇತನ ಪಾವತಿ ಮಾಡಿರಲಿಲ್ಲ. 09-09-2024 ರ ತಮ್ಮ ಪತ್ರದ ಆಧಾರದ ಮೇಲೆ ಮಾನ್ಯ ಮುಖ್ಯಮಂತ್ರಿಗಳು ಆರ್ಥಿಕ ಇಲಾಖೆಗೆ ನಿರ್ದೇಶನ ನೀಡಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೆ ಕ್ರಮ ಕೈಗೊಂಡಿರುತ್ತಾರೆ. ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿದ ರಾಜ್ಯ ಸರ್ಕಾರಕ್ಕೆ, ವಿಶ...