Thursday, January 29

Focus

ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

ನೆಲಮಂಗಲ-ತುಮಕೂರು 12 ಪಥಗಳ ಹೆದ್ದಾರಿ ಕಾಮಗಾರಿ 2027ರ ಮಾರ್ಚ್ ತಿಂಗಳೊಳಗೆ ಪೂರ್ಣ; ಸುಧಾಕರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನೆಲಮಂಗಲದಿಂದ ತುಮಕೂರುವರೆಗೆ ಸುಮಾರು 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು 2027ರ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸುವ ವಿಶ್ವಾಸವನ್ನು ಸಂಸದ ಡಾ.ಸುಧಾಕರ್ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಭಾರತ್ ಮಾಲಾ ಯೋಜನೆಯಡಿ ನೆಲಮಂಗಲದಿಂದ ತುಮಕೂರುವರೆಗೆ ಸುಮಾರು ₹2,000 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ 44 ಕಿಮೀ ಉದ್ದದ 12 ಪಥಗಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಶನಿವಾರ ಅವರು ಪರಿಶೀಲಿಸಿದರು. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಅವರು, ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿದ್ದ ತೊಡಕುಗಳಿಂದ ಕಾಮಗಾರಿ ವಿಳಂಬವಾಗಿದ್ದು, 2027ರ ಮಾರ್ಚ್ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು. ನಿರ್ಮಾಣ ಹಂತದಲ್ಲಿರುವ ಈ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳಿದ್ದು, ಈ ನಿಟ್ಟಿನಲ್ಲಿ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ, ಬ್ಲಾಕ್ ಸ್ಪಾಟ್ ಪ್ರದೇಶಗಳಲ್ಲಿ ಬೆಳಕಿನ ವ್ಯವಸ್ಥೆ, ಎಚ್ಚರಿಕೆ ಫಲಕಗಳು, ಪೇಂಟಿಂಗ್ ಹಾಗೂ ಸುರಕ್ಷ...
LDF ಸೋತರೆ ಮೀಸೆ ಬೋಳಿಸಿಕೊಳ್ಳುವುದಾಗಿ ಪ್ರತಿಜ್ಞೆ; ಮಾತು ಉಳಿಸಿಕೊಂಡ ನಾಯಕ

LDF ಸೋತರೆ ಮೀಸೆ ಬೋಳಿಸಿಕೊಳ್ಳುವುದಾಗಿ ಪ್ರತಿಜ್ಞೆ; ಮಾತು ಉಳಿಸಿಕೊಂಡ ನಾಯಕ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಪತ್ತನಂತಿಟ್ಟ: ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಅಖಾಡ ಅನೇಕಾನೇಕ ವಿಶೇಷತೆಗಳಿಗೆ ಸಾಕ್ಷಿಯಾಯಿತು. ಈ ಚುನಾವಣೆಯಲ್ಲಿ ಬಿಜೆಪಿ ಯಶೋಗಾಥೆ ಬರೆದಂತೆ ಬೀಗುತ್ತಿದೆ. ಮತ್ತೊಂದೆಡೆ ಎಡರಂಗಕ್ಕೆ ತಕ್ಕ ಪಾಠ ಕಲಿಸಿರುವುದಾಗಿ ಯುಡಿಎಫ್ ನಾಯಕರು ಹೇಳುತ್ತಿದ್ದಾರೆ. ಇದೇ ವೇಳೆ, ಸೋಲು ಗೆಲುವಿನ ಪಣದಲ್ಲಿ ಸೋತ ಎಲ್‌ಡಿಎಫ್ ನಾಯಕ ಮೀಸೆ ಬೋಳಿಸಿದರೆನ್ನಲಾದ ಸನ್ನಿವೇಶವೂ ಗಮನಸೆಳೆದಿದೆ. ಈ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. LDF party worker Babu Varghese, who had vowed to shave his moustache if the LDF failed to win the Pathanamthitta Municipality, has now gone through with it after the party’s defeat. #Pathanamthitta #LDF #KeralaLocalBodyElection2025 #KeralaLocalBodyElection pic.twitter.com/gxQ9dKFQSt— Harish M (@chnmharish) December 13, 2025 ಪತ್ತನಂತಿಟ್ಟ ಪುರಸಭೆಯಲ್ಲಿ ಎಲ್‌ಡಿಎಫ್ ಗೆಲ್ಲಲು ವಿಫಲವಾದರೆ ಮೀಸೆ ಬೋಳಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದ ಎಲ್‌ಡಿಎಫ್ ಪಕ್ಷದ ಕಾರ್ಯ...
ಜನವರಿ 6 ರಂದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್..!?

ಜನವರಿ 6 ರಂದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್..!?

Focus, ಬೆಂಗಳೂರು, ರಾಜ್ಯ
ರಾಮನಗರ: ಜನವರಿ 6 ರಂದು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಎಚ್ ಎ ಇಕ್ಬಾಲ್ ಹುಸೇನ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್, ಡಿಕೆಶಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ. ಅವರು ಜನವರಿ 6 ರಂದು ಮುಖ್ಯಮಂತ್ರಿಯಾಗಲಿದ್ದಾರೆ ಎಂದರು. ಡಿಕೆಶಿಗೆ ಅವಕಾಶ ಸಿಗಬೇಕೆಂಬ ಆಗ್ರಹಕ್ಕೆ ಹೈಕಮಾಂಡ್ ಸ್ಪಂದಿಸುತ್ತಿದೆ. ಬಹುಶ: ಜನವರಿ 6ರಂದು ಸಿಎಂ ಸ್ಥಾನ ಸಿಗುವ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದರು. ನಾಯಕತ್ವ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಬೆಂಬಲಿಗ ಶಾಸಕ ಇಕ್ಬಾಲ್ ಹುಸೇನ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ....
ಕೇರಳ ದಲ್ಲಿ ಬಿಜೆಪಿ ಪಾಲಿಗೆ ಹೊಸ ಮನ್ವಂತರ: ಕೇರಳದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ ಶ್ರೀಲೇಖಾ ಜಯಭೇರಿ

ಕೇರಳ ದಲ್ಲಿ ಬಿಜೆಪಿ ಪಾಲಿಗೆ ಹೊಸ ಮನ್ವಂತರ: ಕೇರಳದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ ಶ್ರೀಲೇಖಾ ಜಯಭೇರಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ತಿರುವನಂತಪುರಂ: ತಿರುವನಂತಪುರಂ ಕಾರ್ಪೊರೇಷನ್‌ನ ಶಾಸ್ತಮಂಗಲಂ ವಾರ್ಡ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇರಳದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ (ಡಿಜಿಪಿ) ಶ್ರೀಲೇಖಾ ಗೆಲುವು ಸಾಧಿಸಿದ್ದಾರೆ. ಈ ಮೂಲಕ ನಗರಸಭೆ ಅಧಿಕಾರ ವಶಪಡಿಸಿಕೊಳ್ಳುವ ಪೈಪೋಟಿಯಲ್ಲಿ ಬಿಜೆಪಿ ತನ್ನ ಸ್ಥಿತಿಯನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ತಿರುವನಂತಪುರಂ ಕಾರ್ಪೊರೇಷನ್ ನಿಯಂತ್ರಣಕ್ಕಾಗಿ ಮೂರು ಪ್ರಮುಖ ರಾಜಕೀಯ ಮೈತ್ರಿಗಳ ನಡುವೆ ಕಠಿಣ ಸ್ಪರ್ಧೆ ನಡೆಯುತ್ತಿರುವ ಸಂದರ್ಭದಲ್ಲೇ ಶ್ರೀಲೇಖಾ ಅವರ ಜಯ ಲಭಿಸಿದೆ. ರಾಜಧಾನಿಯಲ್ಲಿ ಸಿಪಿಐ(ಎಂ) ನೇತೃತ್ವದ ಎಡರಂಗವನ್ನು ಅಧಿಕಾರದಿಂದ ದೂರ ಸರಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಕ್ಕೆ ಈ ಗೆಲುವು ಸಾಂಕೇತಿಕ ಹಾಗೂ ರಾಜಕೀಯ ಉತ್ತೇಜನವಾಗಿದೆ ಎಂದು ಪಕ್ಷ ವಿಶ್ಲೇಷಿಸಿದೆ. ಪ್ರಸ್ತುತ ಲಭ್ಯ ಮಾಹಿತಿಯಂತೆ, 101 ಸದಸ್ಯರ ತಿರುವನಂತಪುರಂ ಕಾರ್ಪೊರೇಷನ್‌ನಲ್ಲಿ ಬಿಜೆಪಿ 34 ಸ್ಥಾನಗಳೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಎಡಪಕ್ಷಗಳು 20 ಸ್ಥಾನಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ 16 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ವರ್ಷ...
ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ವಿಧೇಯಕ ಮಂಡಿಸಲು ಬಿಎಎಫ್‌ ಆಗ್ರಹ

ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ವಿಧೇಯಕ ಮಂಡಿಸಲು ಬಿಎಎಫ್‌ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌ ಮಲ್ಯ ಆಗ್ರಹಿಸಿದ್ದಾರೆ. ವಿಧಾನಸೌಧದ ಬ್ವಾಂಕ್ವೇಟ್‌ ಹಾಲ್‌ನಲ್ಲಿ ಗುರುವಾರ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌, ಅಪಾರ್ಟ್‌ಮೆಂಟ್‌ ಮಾಲೀಕರ ಜೊತೆ ವಿಶೇಷ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಅಪಾರ್ಟ್‌ಮೆಂಟ್‌ ಫೇಡರೇಷನ್‌ (BAF) ಅಧ್ಯಕ್ಷ ಸತೀಶ್‌ ಮಲ್ಯ, ಬೆಳಗಾವಿ ಅಧಿವೇಶನದಲ್ಲೇ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿ ಸಂಬಂಧ ವಿಧೇಯಕ ಮಂಡಿಸಬೇಕೆಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್‌ ಅವರು ಸಲಹೆಗಳನ್ನು ಪಡೆದರು. ಅಪಾರ್ಟ್ಮೆಂಟ್ ನಿವಾಸಿಗಳ ಆಗ್ರಹಗಳನ್ನು ಶೀಘ್ರವೇ ವಿಧೇಯಕದಲ್ಲಿ ಅಳವಡಿಸಿ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಬೇಕು ಎನ್ನುವುದು ಸತೀಶ್‌ ಮಲ್ಯ ಗಮನಸೆಳೆದರು. ಸಂವಾದ ಕಾರ್ಯಕ್ರಮ ನಂತರ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕ್ರಮ. 1972 ರಲ್ಲಿ ಜಾರಿಗೆ ಬಂದಿರುವಂತಹ ಕರ್ನ...
ಆಂಧ್ರಪ್ರದೇಶದ ಘಾಟ್ ರಸ್ತೆಯಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್; 9 ಮಂದಿ ಸಾವು

ಆಂಧ್ರಪ್ರದೇಶದ ಘಾಟ್ ರಸ್ತೆಯಲ್ಲಿ ಕಂದಕಕ್ಕೆ ಉರುಳಿಬಿದ್ದ ಬಸ್; 9 ಮಂದಿ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ವಿಶಾಖಪಟ್ಟಣಂ: ಆಂಧ್ರಪ್ರದೇಶದ ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಉರುಳಿಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ. 22 ಮಂದಿಗೆ ಗಾಯಗೊಂಡಿದ್ದಾರೆ. ಚಿಂತೂರು-ಮರೇಡುಮಿಲ್ಲಿ ಘಾಟ್ ರಸ್ತೆಯಲ್ಲಿ ಶುಕ್ರವಾರ ನಸುಕಿನ ಜಾವ ಖಾಸಗಿ ಟ್ರಾವೆಲ್ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ವಿವಿಧ ದೇವಸ್ಥಾನಗಳಿಗೆ ಯಾತ್ರೆ ಹೊರಟಿದ್ದವರ ವಾಹನ ಅಪಘಾತಕ್ಕೀಡಾಗಿದೆ. 35 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಇದಾಗಿತ್ತು. ಭದ್ರಾಚಲಂ ದೇವಸ್ಥಾನದ ದರ್ಶನ ಪಡೆದು ಅನ್ನಾವರಂ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ....
ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಈ ಹುದ್ದೆಗಳಿಗೆ ನೇಮಕಾತಿ ಮಾಡಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಾತನಾಡುತ್ತ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಮತ್ತು ನೇಮಕಾತಿ ಬಗ್ಗೆ ಅವರು ಮಾಹಿತಿ ಹಂಚಿಕೊಂಡರು. ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ....
ಧಾರವಾಡ: ಉದ್ಯೋಗಾಕಾಂಕ್ಷಿಗಳನ್ನು ಬಂಧಿಸಿದ ಕ್ರಮಕ್ಕೆ ಎಸ್‌ಯುಸಿಐ(ಸಿ) ಖಂಡನೆ

ಧಾರವಾಡ: ಉದ್ಯೋಗಾಕಾಂಕ್ಷಿಗಳನ್ನು ಬಂಧಿಸಿದ ಕ್ರಮಕ್ಕೆ ಎಸ್‌ಯುಸಿಐ(ಸಿ) ಖಂಡನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಧಾರವಾಡದಲ್ಲಿ ಉದ್ಯೋಗ ಹಕ್ಕೊತ್ತಾಯಗಳಿಗಾಗಿ ನಡೆದಿದ್ದ ಶಾಂತಿಯುತ ಧರಣಿಯನ್ನು ಪೊಲೀಸ್ ಬಂಧನದ ಮೂಲಕ ಹತ್ತಿಕ್ಕಿದ ರಾಜ್ಯ ಸರ್ಕಾರದ ಕ್ರಮವನ್ನು ಎಸ್‌ಯುಸಿಐ (ಕಮ್ಯುನಿಸ್ಟ್) ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ. ಪಕ್ಷದ ರಾಜ್ಯ ಸಮಿತಿಯಿಂದ ಬಿಡುಗಡೆಗೊಂಡ ಪತ್ರಿಕಾ ಹೇಳಿಕೆಯಲ್ಲಿ, ಇಲಾಖೆಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು, ವಯೋಮಿತಿಯನ್ನು ಐದು ವರ್ಷ ಹೆಚ್ಚಿಸುವುದು, ನೇಮಕಾತಿ ಪರೀಕ್ಷೆಗಳ ಶುಲ್ಕವನ್ನು ಕಡಿತಗೊಳಿಸುವುದು, ಭ್ರಷ್ಟಾಚಾರ ತಡೆಗಟ್ಟುವುದು, ನೇಮಕಾತಿ ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ ಒದಗಿಸುವಂತೆ ಉದ್ಯೋಗಾಕಾಂಕ್ಷಿಗಳು ಮುನ್ನಡೆಸಿದ್ದ ಹೋರಾಟಕ್ಕೆ ಸರ್ಕಾರ ನೀಡಿದ ಪ್ರತಿಕ್ರಿಯೆ “ಅಮಾನವೀಯ” ಎಂದು ಆರೋಪಿಸಲಾಗಿದೆ. ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನದಂದು (ಡಿಸೆಂಬರ್ 10) ಯುವಕರ ಧ್ವನಿಯನ್ನು ನಿಗ್ರಹಿಸಲು ಸರ್ಕಾರ ಮುಂದಾಗಿರುವುದು ವಿರೋಧಾಭಾಸದ ಉದಾಹರಣೆಯಾಗಿದೆ ಎಂದು ಹೇಳಿಕೆಯು ಟೀಕಿಸಿದೆ. ಉದ್ಯೋಗ ಹಕ್ಕಿಗಾಗಿ ಯುವಕರು ಹಲವಾರು ಬಾರಿ ಮನವಿ ಮತ್ತು ಪ್ರತಿಭಟನೆಗಳ ಮೂಲಕ ಸರ್ಕಾರದ ಗಮನಸೆಳೆಯಲು ಪ್ರಯತ್...
ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ

ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ; ಶ್ವೇತಪತ್ರಕ್ಕೆ ಪ್ರತಿಪಕ್ಷ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ ಎಂದು ತಿಳಿಸಲು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಾತನಾಡಿದ ಅವರು, ಪ್ರವಾಹದ ಸಂದರ್ಭದಲ್ಲಿ ಜನರು ಗಂಜಿ ಕೇಂದ್ರದಲ್ಲಿರುತ್ತಾರೆ. ಆಗ ಸರ್ಕಾರ ಕೂಡಲೇ ಪರಿಹಾರ ನೀಡಬೇಕು. ಕಾಂಗ್ರೆಸ್‌ ಸರ್ಕಾರದಲ್ಲಿ, 2013-2014 ರ ಜುಲೈನಲ್ಲಿ 9 ತಿಂಗಳಾದ ನಂತರ, 2014-15 ರಲ್ಲಿ 8 ತಿಂಗಳ ನಂತರ, 2015-16 ರಲ್ಲಿ 7 ತಿಂಗಳ ನಂತರ ಪರಿಹಾರ ನೀಡಲಾಗಿದೆ. ನಮ್ಮ ಬಿಜೆಪಿ ಸರ್ಕಾರದಲ್ಲಿ 2019-20 ರ ಆಗಸ್ಟ್‌ ಪ್ರವಾಹದ ನಂತರ ಎರಡೇ ತಿಂಗಳಲ್ಲಿ ಪ್ರವಾಹ ನೀಡಲಾಗಿದೆ. 2022 ರ ಪ್ರವಾಹದಲ್ಲಿ ಎರಡು ತಿಂಗಳಲ್ಲಿ, 2021-22 ರ ಪ್ರವಾಹದಲ್ಲಿ ಎರಡು ತಿಂಗಳಲ್ಲಿ, 2023 ರ ಪ್ರವಾಹದಲ್ಲಿ ಒಂದೇ ತಿಂಗಳಲ್ಲಿ ಪ್ರವಾಹ ನೀಡಲಾಗಿತ್ತು. ಇಷ್ಟು ವಿಳಂಬ ಮಾಡಿ ಪರಿಹಾರ ನೀಡಬಾರದು ಎಂದರು. ...
ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಪ್ರಕ್ರಿಯೆ ನಿಗದಿ ಪಡಿಸಿದ ಹೈಕೋರ್ಟ್

ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಪ್ರಕ್ರಿಯೆ ನಿಗದಿ ಪಡಿಸಿದ ಹೈಕೋರ್ಟ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೌಖಿಕವಾಗಿ ವಿಚಾರಣೆ ಸೇರಿದಂತೆ ಇನ್ನಿತರೆ ಕಾರಣಗಳಿಗೆ ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಆದರೇ ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಮಾಹಿತಿ ನೀಡಿ, ಕರೆಸುವುದನ್ನು ಕಡ್ಡಾಯಗೊಳಿಸಿ ಮಹತ್ವದ ಆದೇಶ ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ಧ ನ್ಯಾಯಪೀಠವು, ರೌಡಿಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸುವುದಕ್ಕೆ ಹೈಕೋರ್ಟ್ ಪ್ರಕ್ರಿಯೆ ನಿಗದಿ ಪಡಿಸಿ ಮಹತ್ವದ ಆದೇಶ ಮಾಡಿದೆ. ಎಸ್ ಎಂ ಎಸ್, ವಾಟ್ಸ್ ಆಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಪೊಲೀಸ್ ಠಾಣೆಗಳಿಗೆ ರೌಡಿಶೀಟರ್ ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು ಎಸ್ ಎಂ ಎಸ್, ವಾಟ್ಸ್ ಆಪ್ ಸಂದೇಶ ನೀಡಬೇಕು ಎಂಬುದಾಗಿ ಹೈಕೋರ್ಟ್ ಸೂಚಿಸಿದೆ. ಒಂದು ವೇಳೆ ಎಸ್ಎಂಎಸ್, ವಾಟ್ಸ್ ಆಪ್ ನಲ್ಲಿ ಸೂಚಿಸಿದರೂ ಪೊಲೀಸ್ ಠಾಣೆಗೆ ರೌಡಿ ಶೀಟರ್ ಗಳು ಬಾರದೇ ಇದ್ದರೇ ಮನೆಗೆ ಪೊಲೀಸರು ತೆರಳಬಹುದು. ಸರ್ಕಾರ ಕಾನೂನು ರೂಪಿಸುವವರೆಗೂ ಈ ಪ್ರಕ್ರಿಯೆ ಪಾಲಿಸುವಂತೆ ಸೂಚಿಸಿದೆ. ಅಪರಾಧ ಚಟುವಟಿಕೆಯಲ್ಲಿ ಭಾಗಿ...