Thursday, January 29

Focus

ಜಗಳೂರು: ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಸಲು ಆಗ್ರಹ

ಜಗಳೂರು: ರೈತರ ಜಮೀನಿಗೆ ಹಗಲು ವೇಳೆ ವಿದ್ಯುತ್ ಪೂರೈಸಲು ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದಾವಣಗೆರೆ: ರಾತ್ರಿ ವೇಳೆ ಜಮೀನಿಗೆ ತೆರಳಿ ನೀರಾಯಿಸಲು ಕಾಡುಪ್ರಾಣಿಗಳ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಹಗಲು ವೇಳೆಯಲ್ಲೇ ವಿದ್ಯುತ್ ಪೂರೈಸಬೇಕೆಂದು ರೈತರು ವಿದ್ಯುತ್ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ ಬೆಸ್ಕಾಂ ವಿಭಾಗ ಕಚೇರಿಯಲ್ಲಿ ತಮಲೇಹಳ್ಳಿ, ಗೌಡಗೊಂಡನಹಳ್ಳಿ, ಕೆಳಗೋಟೆ, ಚಿಕ್ಕಮ್ಮನಹಟ್ಟಿ, ಹಿರೇಬನ್ನಿಹಟ್ಟಿ ಸೇರಿದಂತೆ ಅನೇಕ ಗ್ರಾಮಗಳ ರೈತರು ಸೇರಿ ಎಇಇ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿದರು. ಯುವ ಮುಖಂಡ ತಮಲೇಹಳ್ಳಿ ಶ್ರೀನಿವಾಸ್ ಮಾತನಾಡಿ, “ಕೊಂಡಕುರಿ ಅಂಚಿನಲ್ಲಿರುವ ಹಲವು ಗ್ರಾಮಗಳ ರೈತರು ರಾತ್ರಿ ವೇಳೆ ಜಮೀನಿಗೆ ತೆರಳುವುದೇ ಭಯ. ಕಾಡುಪ್ರಾಣಿಗಳ ಉಪಟಳ ಹೆಚ್ಚಿರುವುದರಿಂದ ರಾತ್ರಿ ಬದಲಿಗೆ ಹಗಲಿನಲ್ಲಿ 5 ಗಂಟೆಗಳ ಕಾಲ ವಿದ್ಯುತ್ ಪೂರೈಸಬೇಕು” ಎಂದು ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಎಇಇ ಮಲ್ಲಿಕಾರ್ಜುನ್, “ಸೊಕ್ಕೆ–ಪಲ್ಲಾಗಟ್ಟೆ ಮಾರ್ಗದ ವಿದ್ಯುತ್ ಸಂಪರ್ಕವನ್ನು ಬೇರ್ಪಡಿಸಿ, ತುರವನೂರು ಮಾರ್ಗದಿಂದ ಲಿಂಕ್ ಲೈನ್ ಮೂಲಕ ಬೆಳಗಿನ ವೇಳೆಯಲ್ಲಿ ವಿದ್ಯುತ್ ಪೂರೈಸಲು ಕ್ರಮಜರುಗಿಸಲಾಗುತ್ತಿದೆ. ಬುಧವಾರದೊಳಗಾಗಿ ಪರಿಷ್ಕೃತ ವ್ಯವಸ್ಥೆ ಜಾರ...
ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಹೆಚ್ಡಿಕೆ ಟೀಕೆ

ಖರೀದಿ ಕೇಂದ್ರವೂ ಇಲ್ಲ, ಬೆಲೆ ಹಾನಿಗೆ ಪರಿಹಾರವೂ ಇಲ್ಲ; ಹೆಚ್ಡಿಕೆ ಟೀಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಖರೀದಿ ಕೇಂದ್ರಗಳನ್ನು ತೆರೆಯದೇ ವಂಚಿಸಿರುವ ಕಾಂಗ್ರೆಸ್‌ ಸರ್ಕಾರ, ಬೆಳೆ ಹಾನಿ ಪರಿಹಾರದಲ್ಲೂ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ಧೋರಣೆ ಕುರಿತಂತೆ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯ ಸರ್ಕಾರದ ನಡೆಯಿಂದಾಗಿ ಕರ್ನಾಟಕದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಟೀಕಿಸಿದ್ದಾರೆ. A teacher from Agra was fined for not wearing helmet inside a car Post that incident, he now wears a helmet Magical Amritkaalpic.twitter.com/wXkHqZ0wTt — 𝕲𝖆𝖓𝖊𝖘𝖍 * (@ggganeshh) December 9, 2025...
ನೇಮಕಾತಿ ಪರೀಕ್ಷೆ; ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಪರೀಕ್ಷಾ ಶುಲ್ಕ

ನೇಮಕಾತಿ ಪರೀಕ್ಷೆ; ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಪರೀಕ್ಷಾ ಶುಲ್ಕ

Focus, ಪ್ರಮುಖ ಸುದ್ದಿ, ಬೆಂಗಳೂರು
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉತ್ತರ ನೀಡುತ್ತಾ, 2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 ನೇಮಕಾತಿ ಅಧಿಸೂಚನೆಗಳನ್ನು ಪೂರ್ಣಗೊಳಿಸಿರುವುದಿಲ್ಲ. 2024ರಲ್ಲಿ ಕೆಲವೇ ಅಧಿಸೂಚನೆಗಳನ್ನು ಹೊರಡಿಸಿ ಶುಲ್ಕ ಸಂಗ್ರಹಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ ಎಂದರು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಿಗೆ ತಗಲಬಹುದಾದ ವೆಚ್ಚಗಳು, ಗೌಪ್ಯತಾ ವೆಚ್ಚಗಳು, ಮುದ್ರಣ, ಗೌಪ್ಯತಾ ಬಂಡಲುಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವುದು, ಪರೀಕ್ಷೆ ಮು...
ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

ಶಿವಕುಮಾರ್ ಸಿಎಂ ಆದರೆ ನಾನು ಮಂತ್ರಿಯಾಗಲ್ಲ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಒಂದು ವೇಳೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ, ಅವರ ಸಂಪುಟದಲ್ಲಿ ನಾನು ಮಂತ್ರಿಯಾಗುವುದಿಲ್ಲ. ನನಗೆ ಸಚಿವ ಸ್ಥಾನ ಬೇಡ. ಇನ್ನೊಬ್ಬರಿಗೆ ಅವಕಾಶ ಕೊಡಲಿ,” ಎಂದು ಸ್ಪಷ್ಟಪಡಿಸಿದರು. ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ರಾಜಣ್ಣ, ನಾಯಕತ್ವ ಬದಲಾವಣೆ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿದರು. “ಡಿಕೆ ಶಿವಕುಮಾರ್ ಸಿಎಂ ಆಗ್ತಾರೆಂದು ನಾನು ಹೇಳಿಲ್ಲ,” ಎಂದೂ ಸ್ಪಷ್ಟನೆ ನೀಡಿದರು. ಇದಲ್ಲದೆ, “ಹಿಂದೆ ಪರಮೇಶ್ವರ್ ಕೂಡ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದರು,” ಎಂದು ನೀಡಿದ ಹೇಳಿಕೆ ಕೂಡ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. "I won't be oart of the cabinet if DK Shivakumar becomes CM."- Congress MLA KN Rajanna pic.twitter.com/eeXRPWGiHu— News Ar...
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ಯಾವುದೇ ಕಾರಣಕ್ಕೂ ಸರ್ಕಾರಿ ಒಡೆತನದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಖಾಸಗಿಕರಣ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ವಿಧಾನಪರಿಷತ್‌ನಲ್ಲಿ ಸ್ಪಷ್ಟಪಡಿಸಿದರು. ಕಾಂಗ್ರೆಸ್ ಪಕ್ಷದ ನಾಗರಾಜ್ ಯಾದವ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಸರ್ಕಾರ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮೇಲ್ದರ್ಜೆಗೇರಿಸಲಾಗುವುದು. ಯಾವುದೇ ಕಾರಣಕ್ಕೂ ಇವುಗಳನ್ನು ಖಾಸಗಿಯವರಿಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದರು. ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಿರ್ಲಕ್ಷ್ಯದಿಂದ ರೋಗಿಯ ಹೊಟ್ಟೆಯ ಗಡ್ಡೆಯ ಬದಲು ಕರಳು ತೆಗೆದು ಹಾಕಲಾಗಿದೆ ಎಂಬ ವದಂತಿ ಹರಡಿದೆ. ಇದು ಸರ್ಕಾರದ ಗಮನಕ್ಕೆ ಬಂದಿದೆ. ಈತ ಮದ್ಯವ್ಯಸನಿಯಾಗಿದ್ದು, ಕರುಳಿನಲ್ಲಿ ರಂಧ್ರವಿರುವ ಬಗ್ಗೆ ತಾಲೂಕಿನ ಆಸ್ಪತ್ರೆಯಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ. ರ...
ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

ಅನ್ನಭಾಗ್ಯದ ಅಕ್ಕಿ ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು; ಸಿ.ಟಿ.ರವಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಳಗಾವಿ: ಅನ್ನಭಾಗ್ಯದ ಅಕ್ಕಿಯು ವಿದೇಶಗಳಿಗೆ ರವಾನೆಯಾಗಿರುವ ಬಗ್ಗೆ ತನಿಖೆಯಾಗಬೇಕು ಎಂದು ಶಾಸಕ ಸಿ.ಟಿ.ರವಿ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಅನ್ನಭಾಗ್ಯದ ಅಕ್ಕಿಯ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಹಾಗೂ ಅಕ್ರಮಗಳ ಬಗ್ಗೆ ಆಕ್ರೋಶ ಹೊರಹಾಕಿದರು. ಅನ್ನಭಾಗ್ಯದ ಅಕ್ಕಿಯು ಹೊರ ರಾಜ್ಯಗಳಿಗೆ, ಹೊರ ದೇಶಗಳಿಗೆ ಅಕ್ರಮವಾಗಿ ಸಾಗಣೆಯಾಗುತ್ತಿದ್ದು, ಇದರಲ್ಲಿ ಅಧಿಕಾರಿಗಳ ಕೈವಾಡವಿರುವುದನ್ನು ಸರ್ಕಾರದ ಖಚಿತಪಡಿಸಿದೆ. ಈ ಅಕ್ರಮ ನಿರಂತರವಾಗಿ ನಡೆದಿದೆ ಎಂದಾದರೆ, ಇದರ ಜಾಲ ರಾಜ್ಯದಾದ್ಯಂತ ವ್ಯಾಪಿಸಿದೆ ಎಂದರ್ಥ ಎಂದು ಪ್ರಶ್ನಿಸಿದರು. ಇದೆಲ್ಲವೂ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದಿಯೇ? ಅಥವಾ ಸರ್ಕಾರವೂ ಇದರಲ್ಲಿ ಭಾಗಿಯಾಗಿದೆಯೇ? ಇದಕ್ಕೆಲ್ಲ ಕಡಿವಾಣ ಯಾವಾಗ? ಇದಕ್ಕಾಗಿ ತಕ್ಷಣವೇ ಎಸ್ಐಟಿ ರಚನೆಯಾಗಿ, ತನಿಖೆಯಾಗಬೇಕು ಎಂದರು. ಅನ್ನಭಾಗ್ಯದ ಅಕ್ಕಿಯು ಹೊರ ರಾಜ್ಯಗಳಿಗೆ, ಹೊರ ದೇಶಗಳಿಗೆ ಅಕ್ರಮವಾಗಿ ಸಾಗಣೆಯಾಗುತ್ತಿದ್ದು, ಇದರಲ್ಲಿ ಅಧಿಕಾರಿಗಳ ಕೈವಾಡವಿರುವುದನ್ನು ಸರ್...
ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬೆಳಗಾವಿ ಜಿಲ್ಲೆ ವಿಭಜನೆಗೆ ಒತ್ತಾಯ ; ಮುಖಂಡರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಬೆಳಗಾವಿ: ರಾಜ್ಯದ ರಾಜಕೀಯವಾಗಿ ಅತಿದೊಡ್ಡ ಜಿಲ್ಲೆ ಎನ್ನಲಾದ ಬೆಳಗಾವಿ ವಿಭಜನೆ ಪ್ರಶ್ನೆ ಮತ್ತೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಚಿಕ್ಕೋಡಿ ಮತ್ತು ಗೋಕಾಕ್ ಎಂಬ ಎರಡು ಹೊಸ ಜಿಲ್ಲೆಗಳ ರಚನೆಗೆ ಒತ್ತಾಯಿಸಿ ನಿಯೋಗವೊಂದು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ. 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಬೆಂಗಳೂರು ಹೊರತಾಗಿಯೇ ರಾಜ್ಯದ ಅತಿದೊಡ್ಡ ರಾಜಕೀಯ ಜಿಲ್ಲೆಯಾಗಿದ್ದು, ಜಿಲ್ಲೆ ವಿಭಜನೆ ಅವಶ್ಯಕತೆಯ ಕುರಿತ ಬೇಡಿಕೆ ಹಲವು ವರ್ಷಗಳಿಂದಲೇ ಕೇಳಿಬರುತ್ತಿದೆ. ಬೆಳಗಾವಿ ಚಳಿಗಾಲ ಅಧಿವೇಶನದ ಮೊದಲ ದಿನ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಪ್ರಸ್ತುತ ಜಿಲ್ಲೆಯನ್ನು ಸಣ್ಣ ಬೆಳಗಾವಿ ಜಿಲ್ಲೆಯಾಗಿ ಉಳಿಸಬೇಕು ಹಾಗೂ ಚಿಕ್ಕೋಡಿ, ಗೋಕಾಕ್ ಜಿಲ್ಲೆಗಳನ್ನು ಪ್ರತ್ಯೇಕವಾಗಿ ರಚಿಸಬೇಕು ಎಂದು ಮನವಿ ಸಲ್ಲಿಸಿತು....
ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಮೆಕ್ಕೆ ಜೋಳ ಖರೀದಿ ಹೆಚ್ಚಳಕ್ಕೆ ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರವೂ ಮೆಕ್ಕೆ ಜೋಳ ಬೆಳೆ ಬೆಳೆಯುವ ರೈತರಿಗೆ ಗುಡ್ ನ್ಯೂಸ್ ನೀಡಿದೆ...ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ದಿನಾಂಕ 02.12.2025 ರಂದು ತಿದ್ದುಪಡಿ ಆದೇಶ ಹೊರಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಹಾಗೂ ಕೃಷಿ ಸಚಿವ ಎನ್ .ಚಲುವರಾಯಸ್ವಾಮಿಯವರ ವಿಶೇಷ ಕಾಳಜಿ ಹಾಗೂ ಪ್ರಯತ್ನದಿಂದ ಸಂಕಷ್ಟದಲ್ಲಿದ್ದ ಮೆಕ್ಕೆ ಜೋಳ ಬೆಳೆಯುವ ರೈತರ ಪರವಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರತಿ ಎಕರೆಗೆ 12 ಕ್ವಿಂಟಾಲ್ ಲೆಕ್ಕದಲ್ಲಿ ಗರಿಷ್ಠ 20 ಕ್ವಿಂಟಾಲ್ ಮೆಕ್ಕೆಜೋಳವನ್ನು ಮಾತ್ರ ಬೆಂಬಲ ಬೆಲೆ ರೂ. 2400 ಪ್ರತಿ ಕ್ವಿಂಟಾಲ್ ದರದಲ್ಲಿ ಖರೀದಿಸಲು ಈ ಹಿಂದೆ ಆದೇಶ ಹೊರಡಿಸಲಾಗಿತ್ತು. ಇದೀಗ ಈ ಮಿತಿಯನ್ನು 50 ಕ್ವಿಂಟಾಲ್‌ಗೆ ಏರಿಕೆ ಮಾಡುವ ಮೂಲಕ ಸಣ್ಣ ಮತ್ತು ಮಧ್ಯಮ ರೈತರಿಗೆ ದೊಡ್ಡ ಪ್ರಮಾಣದಲ್ಲಿ ತಮ್ಮ ಉತ್ಪನ್ನವನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವ ಅವಕಾಶ ಕಲ್ಪಿಸಲಾಗಿದೆ. FRUITS ತಂತ್ರಾಂಶದಲ್ಲಿ ನೋಂದಾಯಿತವಾಗಿರುವ ರೈತರ ಜಮೀನು ವಿಸ್ತೀರ್ಣದ ಆಧಾರದ ಮ...
ಡ್ರಗ್ಸ್‌ ಮುಕ್ತ ಕರ್ನಾಟಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ..

ಡ್ರಗ್ಸ್‌ ಮುಕ್ತ ಕರ್ನಾಟಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು ಗೃಹ ಸಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಬೆಂಗಳೂರು ಸಿಟಿ ಪೊಲೀಸ್‌ ಹಾಗೂ ಫೆಡರೇಷನ್‌ ಆಫ್‌ ಹಿಸ್ಟೋರಿಕ್‌ ವೆಹಿಕಲ್ಸ್‌ ಆಫ್‌ ಇಂಡಿಯಾ (ಎಫ್ಎಚ್ ವಿಐ) ಸಹಯೋಗದಲ್ಲಿ ಪೌಲ್‌ ಜಾನ್‌ ರೆಸಾರ್ಟ್‌ ಮತ್ತು ಹೊಟೇಲ್‌ ಸಂಸ್ಥೆ ಭಾನುವಾರ ಆಯೋಜಿಸಿದ್ದ ಡ್ರಗ್ಸ್‌ ಮುಕ್ತ ಕರ್ನಾಟಕಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ ಜಾಗೃತಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. "ಕರ್ನಾಟಕ ಮಾತ್ರವಲ್ಲ, ವಿಶ್ವದೆಲ್ಲೆಡೆ ಸಮಾಜ ಮಾದಕ ವ್ಯಸನದ ಜತೆ ಹೋಗುತ್ತಿದೆ. ಮಾದಕ ವಸ್ತುಗಳನ್ನು ಯಾರು ಬೆಂಬಲಿಸುತ್ತಾರೋ ಅವರು ಮನುಷ್ಯರಲ್ಲ, ಜನರ ಜೀವನದ ಜತೆ ಆಟವಾಡುತ್ತಾರೆ. ಅವರ ಭವಿಷ್ಯ, ಆರೋಗ್ಯವನ್ನು ನಾಶ ಮಾಡುತ್ತಾರೆ. ಇದನ್ನು ಮನಗಂಡು ನಮ್ಮ ಸರ್ಕಾರ ಕರ್ನಾಟಕವನ್ನು ಮಾದಕ ವ್ಯಸನ ಮಕ್ತ ರಾಜ್ಯವಾಗಿ ರೂಪಿಸುವ ಬಗ್ಗೆ ಸರ್ಕಾರ ಘೋಷಿಸಿತ್ತು," ಎಂದರು. "ಘೋಷಣೆಯಾದ ಕೂಡಲೇ ಕರ್ನಾಟಕ ಮಾದಕ ವ್ಯಸ...
ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಪರೂಪದ ಕಾಯಿಲೆಗಳಿಗೆ ಯಶಸ್ವಿ ಚಿಕಿತ್ಸೆ ನೀಡುವಲ್ಲಿ ಸಾಕಷ್ಟು ಖ್ಯಾತಿ ಪಡೆದಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಈಗ ಮತ್ತೊಂದು ಸಾಧನೆ ಮಾಡಿದೆ. ವಿಲ್ಮ್ಸ್ ಟ್ಯೂಮರ್ ಎಂಬ ಮೂತ್ರಪಿಂಡದ ಕ್ಯಾನ್ಸರ್‌ಗೆ ತುತ್ತಾಗಿ, ಒಂದೇ ಒಂದು ಮೂತ್ರಪಿಂಡದಿಂದ ಜೀವನ ಸಾಗಿಸುತ್ತಿದ್ದ 9 ವರ್ಷದ ಬಾಲಕನಿಗೆ ಅಸ್ಥಿ ಮಜ್ಜೆ ಕಸಿ/ ಮೂಳೆ ಮಜ್ಜೆಯ ಕಸಿ (ಬಿಎಂಟಿ)ಯನ್ನು ಯಶಸ್ವಿಯಾಗಿ ನಿರ್ವಹಿಸಿ ಮಹತ್ವದ ಮೈಲಿಗಲ್ಲು ಸಾಧಿಸಲಾಗಿದೆ. ಬಾಲಕನಿಗೆ ಡಿಸೆಂಬರ್ 2022 ರಲ್ಲಿ ವಿಲ್ಮ್ಸ್ ಟ್ಯೂಮರ್ ಇರುವುದು ಪತ್ತೆಯಾಯಿತು. ಕೀಮೋಥೆರಪಿ ಚಿಕಿತ್ಸೆ ನೀಡಿ ಎಡ ಮೂತ್ರಪಿಂಡಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ತದನಂತರ ರೇಡಿಯೇಷನ್ ಚಿಕಿತ್ಸೆ ನೀಡಲಾಯಿತು. ದುರದೃಷ್ಟವಶಾತ್, ಏಪ್ರಿಲ್ 2025 ರಲ್ಲಿ ಮರುಕಳಿಸಿತು. ಆಗ ಅವನು ಬದುಕುಳಿಯುವ ಅತ್ಯುತ್ತಮ ಅವಕಾಶವೆಂದರೆ ಹೆಚ್ಚಿನ ಪ್ರಮಾಣದ ಕೀಮೋಥೆರಪಿ ಮತ್ತು ನಂತರ ಸ್ಟೆಮ್ ಸೆಲ್ ಟ್ರಾನ್ಸ್‌ಪ್ಲಾಂಟೇಶನ್ ಎಂದು ಕಿದ್ವಾಯಿ ವೈದ್ಯರು ತೀರ್ಮಾನಿಸಿದರು. ಕಿದ್ವಾಯಿ ಆಸ್ಪತ್ರೆಯ ವೈದ್ಯರಾದ ಡಾ. ವಸುಂಧರಾ ಕೈಲಾಸನಾಥ್, ಬಿಎಂಟಿ – ಸಹ ಪ್ರಾಧ್ಯಾಪಕರು ಮತ...