Focus
ದೆಹಲಿ ಚುನಾವಣೆ; ಶೂನ್ಯಕ್ಕೆ ಶರಣಾದ ಕಾಂಗ್ರೆಸ್.. ಕೇಜ್ರಿವಾಲ್ ಕನಸೂ ಭಗ್ನ..!
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಅಚ್ಚರಿಯ ಫಲಿತಾಂಶಕ್ಕೆ ಸಾಕ್ಷಿಯಾಗಿದೆ. ನಾಲ್ಕನೇ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಧಿಕಾರಕ್ಕೇರುವ ಆಮ್ ಆದ್ಮಿ ಪಕ್ಷದ ಕನಸು ಭಗ್ನವಾಗಿದೆ. ಬಿಜೆಪಿ ಬಹುಮತ ಸಾಧಿಸಿದ್ದು ಸುಮಾರು 2 ದಶಕಗಳ ನಂತರ ದೆಹಲಿ ಗೆದ್ದುಗೆ ಏರಲು ಬಿಜೆಪಿ ತಯಾರಿ ನಡೆಸಿದೆ,
70 ಸ್ಥಾನಬಲದ ದೆಹಲಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣಾ ಮತಗಳ ಎಣಿಕೆ ಶನಿವಾರ ನಡೆದಿದೆ. ನತಗಳ ಎಣಿಕೆಯುದ್ದಕ್ಕೂ ಮುನ್ನಡೆ ಕಾಯ್ದುಕೊಂಡ ಭಾರತೀಯ ಜನತಾ ಪಕ್ಷ (BJP) 47 ಸ್ಥಾನಗಳನ್ನು ಗೆದ್ದು ಬೀಗಿದೆ.
ಆಡಳಿತಾರೂಢ ಆಮ್ ಆದ್ಮಿ ಪಕ್ಷ (AAP) ಹೀನಾಯ ಸೋಲುಂಡಿದ್ದು, ರಾಜಧಾನಿಯಲ್ಲೇ ಕಾಂಗ್ರೆಸ್ ಪಕ್ಷ ಶೂನ್ಯ ಸಾಧನೆ ಮಾಡಿರುವುದು ದೇಶದ ಇತಿಹಾಸದಲ್ಲೇ ಅಚ್ಚರಿಯ ಫಲಿತಾಂಶವಾಗಿದೆ.
ದೆಹಲಿ ಫಲಿತಾಂಶ ಹೀಗಿದೆ:
ಒಟ್ಟು ಸ್ಥಾನಗಳು : 70,
ಬಹುಮತಕ್ಕೆ ಅಗತ್ಯ ಸ್ಥಾನಗಳು: 36,
ಬಿಜೆಪಿ : 47,,
ಆಮ್ ಆದ್ಮಿ : 23,
ಕಾಂಗ್ರೆಸ್ : 00...
ದೆಹಲಿ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ, 27 ವರ್ಷಗಳ ನಂತರ ರಾಜಧಾನಿಯಲ್ಲಿ ಕಮಲಕ್ಕೆ ಅಧಿಕಾರ
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿದೆ. ಸುಮಾರು 2 ದಶಕಗಳ ನಂತರ ದೆಹಲಿ ಗೆದ್ದುಗೆ ಏರಿರುವ ಬಿಜೆಪಿ, ಹೊಸ ರಾಜಕೀಯ ದಿಗ್ವಿಜಯಕ್ಕೆ ಸಾಕ್ಷಿಯಾಗಿದೆ.
70 ಸ್ಥಾನಬಲದ ದೆಹಲಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣಾ ಮತಗಳ ಎಣಿಕೆ ಶನಿವಾರ ನಡೆದಿದೆ. ನತಗಳ ಎಣಿಕೆಯುದ್ದಕ್ಕೂ ಮುನ್ನಡೆ ಕಾಯ್ದುಕೊಂಡ ಭಾರತೀಯ ಜನತಾ ಪಕ್ಷ (BJP) 47 ಸ್ಥಾನಗಳನ್ನು ಗೆದ್ದು ಬೀಗಿದೆ.
ಆಡಳಿತಾರೂಢ ಆಮ್ ಆದ್ಮಿ ಪಕ್ಷ (AAP) ಹೀನಾಯ ಸೋಲುಂಡಿದ್ದು, ರಾಜಧಾನಿಯಲ್ಲೇ ಕಾಂಗ್ರೆಸ್ ಪಕ್ಷ ಶೂನ್ಯ ಸಾಧನೆ ಮಾಡಿರುವುದು ದೇಶದ ಇತಿಹಾಸದಲ್ಲೇ ಅಚ್ಚರಿಯ ಫಲಿತಾಂಶವಾಗಿದೆ.
ದೆಹಲಿ ಫಲಿತಾಂಶ ಹೀಗಿದೆ:
ಒಟ್ಟು ಸ್ಥಾನಗಳು : 70,
ಬಹುಮತಕ್ಕೆ ಅಗತ್ಯ ಸ್ಥಾನಗಳು: 36,
ಬಿಜೆಪಿ : 48,
ಆಮ್ ಆದ್ಮಿ : 22,
ಕಾಂಗ್ರೆಸ್ : 00...
ಕರ್ನಾಟಕವನ್ನು ಸಾಲಗಾರರ ರಾಜ್ಯ ಮಾಡಲು ಹೊರಟಿತೇ ಕಾಂಗ್ರೆಸ್ ಸರ್ಕಾರ?
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಸಿದ್ದರಾಮಯ್ಯನವರಿಗೂ ಸ್ವಲ್ಪ ರಿಲೀಫ್ ಸಿಕ್ಕಿದೆ. ಅಲ್ಲದೇ ಲೂಟಿಯಾಗಿರುವ ರಾಜ್ಯದ ಜನತೆಯ ದುಡ್ಡು ಮತ್ತೆ ಖಜಾನೆಗೆ ವಾಪಸ್ ಬರುತ್ತದೆ ಎಂಬ ವಿಶ್ವಾಸ ಇದೆ. ಹೈಕೋರ್ಟ್ ಆದೇಶವನ್ನು ನಾವು ಒಪ್ಪಲೇಬೇಕಾಗುತ್ತದೆ. ಸಿದ್ದರಾಮಯ್ಯ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಆಡಳಿತದ 20 ತಿಂಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಇದನ್ನು ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ. ರಾಜ್ಯ ಸುಭದ್ರವಾಗಿರಬೇಕಾದರೆ ಕಾನೂನು ಸುವ್ಯವಸ್ಥೆ ಸರಿಯಾಗಿರಬೇಕು. ಆದರೆ ರಾಜ್ಯದಲ್ಲಿ ಬ್ಯಾಂಕ್ ದರೋಡೆಗಳು, ಗೋವುಗಳ ಕೆಚ್ಚಲು ಕೊಯ್ಯುವುದು, ಹೊಟ್ಟೆ ಸೀಳುವುದು, ಅತ್ಯಾಚಾರ ಪ್ರಕರಣ ಹೆಚ್ಚಾಗುತ್ತಿವೆ. ಕಾನೂನು ಸುವವ್ಯಸ್ಥೆ ಹದಗೆಟ್ಟು ಹೋಗಿದೆ. ಬೆಳಗಾವಿಯಲ್...
ಮುಡಾ ಹಗರಣ; ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಸ್ನೇಹಮಯಿ ಮೊರೆ
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ -ಮುಡಾ ಹಗರಣ ಕುರಿತಂತೆ ತನಿಖೆಯನ್ನು ಸಿಬಿಐಗೆ ನೀಡಲು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ.
ಇಂಗ್ಲಿಷ್ ಭಾಷೆಯಲ್ಲೂ "ಉದಯ ನ್ಯೂಸ್" ಲಭ್ಯ
Karnataka HC quashes plea seeking CBI probe against CM Siddaramaiah in MUDA case
ಮುಡಾ ನಿವೇಶನ ಅಕ್ರಮ ಕುರಿತಂತೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ವಿಶ್ವಾಸ ಇಲ್ಲಾವಾಗಿದ್ದು, ಸಿಬಿಐ ತನಿಖೆಗೆ ಆದೇಶ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.
ತೀರ್ಪು ಕುರಿತಂತೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ತಾವು ಕಾನೂನು ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ. ಲೋಕಾಯುಕ್ತ ತನಿಖೆ ಬಗ್ಗೆ ನಮಗೆ ನಂಬಿಕೆ ಇಲ್ಲ ಎಂದು ಪುನರುಚ್ಚರಿಸಿರುವ ಅವರು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ....
ಮುಡಾ ಹಗರಣ ಬಗ್ಗೆ ಸಿಬಿಐ ತನಿಖೆಗ ಹೈಕೋರ್ಟ್ ನಕಾರ; ಸಿದ್ದರಾಮಯ್ಯಗೆ ಬಿಗ್ ರಿಲೀಫ್
ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ -ಮುಡಾ ಹಗರಣ ಕುರಿತಂತೆ ತನಿಖೆಯನ್ನು ಸಿಬಿಐಗೆ ನೀಡಲು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಹೈಕೋರ್ಟ್ನ ಧಾರವಾಡ ಪೀಠ ಪ್ರಕಟಿಸಿರುವ ತೀರ್ಪು ಗಮನಸೆಳೆದಿದೆ.
ಮುಡಾ ನಿವೇಶನ ಅಕ್ರಮ ಕುರಿತಂತೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ವಿಶ್ವಾಸ ಇಲ್ಲಾವಾಗಿದ್ದು, ಸಿಬಿಐ ತನಿಖೆಗೆ ಆದೇಶ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.
ಇಂಗ್ಲಿಷ್ ಭಾಷೆಯಲ್ಲೂ "ಉದಯ ನ್ಯೂಸ್" ಲಭ್ಯ
Karnataka HC quashes plea seeking CBI probe against CM Siddaramaiah in MUDA case
3 ಲಕ್ಷ 26 ಸಾವಿರ ಮೊತ್ತದ ಜಮೀನು ಸ್ವಾಧೀನಕ್ಕೆ ಬದಲಾಗಿ ದುಬಾರಿ ನಿವೇಶನ ಹಂಚಿಕೆ ಮಾಡಲಾಗಿದೆ. ಅಸ್ತಿತ್ವದಲ್ಲೇ ಇಲ್ಲದ ಜಮೀನು ಭೂಪರಿವರ್ತನೆ ಮಾಡಲಾಗಿದೆ ಎಂದು ಆರೋಪಿಸಿದ್ದ ಸ್ನೇಹಮಯಿ ಕೃಷ್ಣ ಅವರು, ಈ ಕುರಿತ ಕ್ಯಾಬಿನೆಟ್ ಟಿಪ್ಪಣಿ, ಮುಖ್ಯ ಕಾರ್ಯದರ್ಶಿ ಟಿಪ್ಪಣಿಯೂ ಸಿಎಂ ಪತ್ನಿಗೆ ಅನುಕೂಲವಾಗುವಂತೆ ಮಾಡಲಾಗಿದೆ ಎಂದು ಹೈಕೋರ್ಟ್ ಗಮನಸೆ...
ಪೋಕ್ಸೋ ಕೇಸ್; ಯಡಿಯೂರಪ್ಪಗೆ ತುಸು ರಿಲೀಫ್, ಆದರೆ ಪ್ರಕರಣ ರದ್ದು ಇಲ್ಲ
ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಧಾರವಾಡ ಹೈಕೋರ್ಟ್ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದರೆ, ಪ್ರಕರಣ ರದ್ದು ಮಾಡಲು ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿದೆ.
'ಉದಯ ನ್ಯೂಸ್' ಈಗ ಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯ..
K'taka HC refuses to entertain Yediyurappa's plea to quash POCSO case; gives temporary relief
ಸದಾಶಿವನಗರ ಪೊಲೀಸ್ ಠಾಣೆಯಲ್ಲಿ 2024ರ ಮಾರ್ಚ್ 3ರಂದು ಬಿಎಸ್ವೈ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಗ್ಗೆ ಪೋಕ್ಸೋ ಆರೋಪ ಬಾಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಗಂಭೀರತೆ ಅರಿತ ಸರ್ಕಾರ ಈ ತನಿಖೆಯನ್ನು ಸಿಐಡಿಗೆ ವರ್ಗಾಸಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರ ಹೇಳಿಕೆಗಳನ್ನು ದಾಖಲಿಸಿತ್ತು.
ಈ ನಡುವೆ, ಪ್ರಕರಣ ರದ್ದು ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತೀರ್...
ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..
ಏನಿದು ಸಚಿವರೇ? ಸೆನೆಟ್ ಚುನಾವಣಾ ಅಕ್ರಮದ ಕೋಲಾಹಲ; ರಾಜ್ಯಪಾಲರು ಫಲಿತಾಂಶ ತಡೆಹಿಡಿದ ಬೆನ್ನಲ್ಲೇ ಸಿಬಿಐ ತನಿಖೆಗೆ ಕೋರಿ ದೂರು..
ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (RGUHS) ಸೆನೆಟ್ ಚುನಾವಣೆ ಅಕ್ರಮ ಕುರಿತಂತೆ ಕೇಂದ್ರ ತನಿಖಾ ದಳ (CBI) ತನಿಖೆಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಆಗ್ರಹಿಸಿದೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಅಕ್ರಮಗಳ ಬೆನ್ನತ್ತಿರುವ ಸಿಟಿಜನ್ ಸಿಟಿಜನ್ ರೈಟ್ಸ್ ಫೌಂಡೇಷನ್, ಮೆಡಿಕಲ್ ಕಾಲೇಜುಗಳಲ್ಲಿನ ಅಕ್ರಮ ಪ್ರವೇಶ, ನರ್ಸಿಂಗ್ ಕಾಲೇಜುಗಳ ವಿಚಾರದಲ್ಲಿನ ಭ್ರಷ್ಟಾಚಾರಗಳ ವಿರುದ್ದ ಸರಣಿ ದಾವೆಗಳ ಮೂಲಕ ಕಾನೂನು ಸಮರವನ್ನು ಬಿರುಸುಗೊಳಿಸಿದೆ. ಇದೀಗ RGUHS ಸೆನೆಟ್ ಸದಸ್ಯರ ಚುನಾವಣೆ ಅಕ್ರಮ ವಿರುದ್ದ ಕಾನೂನು ಹೋರಾಟಕ್ಕಿಳಿದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಅಧ್ಯಕ್ಷ ಕೆ.ಎ.ಪಾಲ್ ಅವರು ಸಲ್ಲಿಸಿರುವ ದೂರು ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದೆ.
ಸೆನೆಟ್ ಚುನಾವಣಾ ಅಕ್ರಮ ಆರೋಪವು ಕೋಲಾಹಲ ಸೃಷ್ಟಿಸಿದ್ದು, ರಾಜ್ಯಪಾಲರು ಫಲಿತಾಂಶವನ್ನು ತ...
ಹಂಪಿ ಕನ್ನಡ ವಿವಿ: ಭಾರತಿ ಟಿ. ಅವರಿಗೆ ಪಿಎಚ್.ಡಿ ಪ್ರಧಾನ
ಹಂಪಿ: ಕನ್ನಡ ವಿಶ್ವವಿದ್ಯಾಲಯ ಹಂಪಿ, ಭಾಷಾ ನಿಕಾಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಭಾರತಿ ಟಿ. ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ.
ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಆರ್. ವೆಂಕಟೇಶ ಇಂದ್ವಾಡಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ "ಆಧುನಿಕ ಕನ್ನಡ ನಾಟಕ ಸಾಹಿತ್ಯದ ಮೇಲೆ ಜನಪದ ಸಾಹಿತ್ಯದ ಪ್ರೇರಣೆ ಮತ್ತು ಪ್ರಭಾವ (1950ರ ನಂತರ ಆಯ್ದ ನಾಟಕಗಳನ್ನು ಅನುಲಕ್ಷಿಸಿ)" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯ ಹಂಪಿ ಪ್ರಕಟಣೆಯಲ್ಲಿ ತಿಳಿಸಿದೆ....
ಮೈಕ್ರೋ ಫೈನಾನ್ಸ್ ಹಾವಳಿಗೆ ಮತ್ತಷ್ಟು ಬಲಿ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ
ಮಂಡ್ಯ: ಮೈಕ್ರೋ ಫೈನಾನ್ಸ್‌ಗಳ ಕಿರುಕುಳದಿಂದಾಗಿ ಬಡಜನರು ಸಾಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣು ತೆರೆದಿಲ್ಲ. ಮೈಕ್ರೋ ಫೈನಾನ್ಸ್‌ನಿಂದ ಸತ್ತವರಿಗೆ ನ್ಯಾಯ ನೀಡಲು ನ್ಯಾಯಾಂಗ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.
ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ, ಮೈಕ್ರೋ ಫೈನಾನ್ಸ್‌ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್.ಅಶೋಕ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ ಆರು ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಓಡಿಹೋಗಿರಬಹುದು. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ, ಸಾವುಗಳು ನಿಲ್ಲಲಿಲ್ಲ ಎಂದು ದೂರಿದರು.
ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್ ಮೈಕ್ರೋ ಫೈನಾನ್ಸ್‌ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿ...

