Saturday, December 6

Focus

ಬಿಡದಿ ಬಳಿ ಬಾಯ್ಲರ್ ಸ್ಫೋಟ; ಐವರು ಕಾರ್ಮಿಕರಿಗೆ ಗಾಯ

ಬಿಡದಿ ಬಳಿ ಬಾಯ್ಲರ್ ಸ್ಫೋಟ; ಐವರು ಕಾರ್ಮಿಕರಿಗೆ ಗಾಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರು ಹೊರವಲಯದ ಬಿಡದಿ ಬಳಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಐವರು ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಬಿಡದಿಯ ಭೈರಮಂಗಲ ಕ್ರಾಸ್​ಬಳಿಯ ವಿಧ್ಯುತ್​​ ಉತ್ಪಾದನಾ ಘಟಕದಲ್ಲಿ ಬಾಯ್ಲರ್​ಸ್ಪೋಟಗೊಂಡು ಅವಘಡ ಸಂಭವಿಸಿದೆ. ಘಟನೆಯಲ್ಲಿ ಉತ್ತರ ಭಾರತದ ಐವರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಅಮಲೇಶ್, ಸಂತೂನ್, ಉಮೇಶ್, ತರುಣ್, ಲಖನ್ ಎಂದು ಗುರುತಿಸಲಾಗಿದೆ. ಅವಘಡದ ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
HMPV ಬಗ್ಗೆ ಆತಂಕವಿಲ್ಲ; ಇದು ಚಳಿಗಾಲದ ಸಾಮಾನ್ಯ ಕಾಯಿಲೆ ಎಂದ ಚೀನಾ

HMPV ಬಗ್ಗೆ ಆತಂಕವಿಲ್ಲ; ಇದು ಚಳಿಗಾಲದ ಸಾಮಾನ್ಯ ಕಾಯಿಲೆ ಎಂದ ಚೀನಾ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಬೀಜಿಂಗ್: ಪ್ರಸ್ತುತ ಚೀನಾದಲ್ಲಿ ಹರಡುತ್ತಿರುವ ಕೋವಿಡ್ ತರಹದ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್‌ಎಂಪಿವಿ) ಕೇವಲ 'ಚಳಿಗಾಲದ ಸಮಸ್ಯೆ' ಎಂದು ಚೀನಾ ಸರ್ಕಾರ ಹೇಳಿದೆ. ಎಚ್‌ಎಂಪಿವಿ ಸೋಂಕು ಸಣ್ಣ ಪ್ರಮಾಣದಲ್ಲಿ ಹರಡುತ್ತಿದೆ ಎಂದು ದೇಶದ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ. HMPV ಯ ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಚೀನಾದ ಆಸ್ಪತ್ರೆಗಳು ಜನರೊಂದಿಗೆ ತುಂಬಿರುವುದನ್ನು ತೋರಿಸುವ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಮಾವೋ ನಿಂಗ್ ಚಳಿಗಾಲದಲ್ಲಿ ಇದು ಸಾಮಾನ್ಯ ಘಟನೆಯಾಗಿದ್ದು, ದೇಶವು ಪ್ರವಾಸಿಗರಿಗೆ ಸುರಕ್ಷಿತವಾಗಿದೆ ಎಂದು ಭರವಸೆ ನೀಡಿದರು. ಇಂಗ್ಲಿಷ್ ಭಾಷೆಯಲ್ಲೂ 'ಉದಯ ನ್ಯೂಸ್' ಲಭ್ಯ..  HMPV A ‘WINTER OCCURRENCE,’ 'LESS SEVERE, SPREADING ON A SMALLER SCALE’: CHINA 'ಚಳಿಗಾಲದ ಅವಧಿಯಲ್ಲಿ ಉಸಿರಾಟದ ಸೋಂಕುಗಳು ಉತ್ತುಂಗಕ್ಕೇರುತ್ತವೆ. ಇತ್ತೀಚೆಗೆ, ಚೀನಾದ ರಾಷ್ಟ್ರೀಯ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಆಡಳಿತವು ಚಳಿಗಾಲದ ಸಮಯದಲ...
ಸಿದ್ದರಾಮಯ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಶಾಕ್; ಅನಿರ್ದಿಷ್ಟಾವಧಿ ಹೋರಾಟ ಘೋಷಣೆ

ಸಿದ್ದರಾಮಯ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಶಾಕ್; ಅನಿರ್ದಿಷ್ಟಾವಧಿ ಹೋರಾಟ ಘೋಷಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಇದೀಗ ಸಿದ್ದರಾಮಯ್ಯ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 'ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ' ರಾಜ್ಯ ಮಟ್ಟದಲ್ಲಿ ಅನಿರ್ದಿಷ್ಟಾವಧಿ ಹೋರಾಟ ಘೋಷಿಸಿದೆ. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ. 15,000 ಗೌರವಧನ ನೀಡಬೇಕು ಎಂಬ ಬಹುದಿನಗಳ ಬೇಡಿಕೆಯೂ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದ್ದಾರೆ. ಆಶಾ ಕಾರ್ಯಕರ್ತೆಯರು ಹಗಲಿರುಳು ಗ್ರಾಮಾಂತರದ ಮತ್ತು ನಗರದ ಬಡಜನರಿಗೆ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಆರೋಗ್ಯ ಇಲಾಖೆಯಲ್ಲಿ ಶ್ರಮಿಸುತ್ತಿರುವುದು ನಿಮಗೆ ತಿಳಿದಿದೆ. ರಾಜ್ಯದಲ್ಲಿ ಸುಮಾರು 42,000 ಆಶಾ ಕಾರ್ಯಕರ್ತೆಯರು ಮಹತ್ತರವಾದ ಕೆಲಸಗಳನ್ನು ನಿರ್ವಹಿಸುತ್ತಿದ್ದಾರೆ. ಹಾಗೆಯೇ ಕೋವಿಡ್-19 ಸಂದರ್ಭದಲ್ಲಿ ಈ ಫ್ರಂಟ್ ಲೈನ್ ವಾರಿಯರ್ಸ್ ಆಗಿ ತಮ್ಮ ಜೀವದ ಹಂಗು ತೊರೆದು ಸೇವೆ ಸಲ್ಲಿಸಿರುವುದನ್ನು ವಿಶ್ವ ಆರೋಗ್...
ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಲಾಗಿತ್ತು: ರಾಮಲಿಂಗಾ ರೆಡ್ಟಿ ಅವರಿಂದ ಪಟ್ಟಿ ಬಿಡುಗಡೆ

ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ 7 ಬಾರಿ ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಲಾಗಿತ್ತು: ರಾಮಲಿಂಗಾ ರೆಡ್ಟಿ ಅವರಿಂದ ಪಟ್ಟಿ ಬಿಡುಗಡೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ‌ ನಿಗಮಗಳ ಬಸ್ ಟಿಕೆಟ್ ದರ ಹೆಚ್ಚಳದ ಸರ್ಕಾರದ ನಿರ್ಧಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ತಮ್ಮದೇ ರೀತಿಯಲ್ಲಿ ಎದಿರೇಟು ನೀಡಿದ್ದಾರೆ. ಶೀಘ್ರವೇ ಕನ್ನಡದಲ್ಲೂ ಬರಲಿದೆ ದೇಶದ ಪ್ರತಿಷ್ಠಿತ ಮಾಧ್ಯಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅದರಲ್ಲೂ ಆರ್.ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಸಾರಿಗೆ ಬಸ್‌ಗಳಲ್ಲಿನ ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ರಾಮಲಿಂಗ ರೆಡ್ಡಿ ಅಂಕಿಅಂಶಗಳನ್ನು ಬಹಿರಂಗಪಡಿಸಿದ್ದಾರೆ. ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಆಗಿನ ಬಿಜೆಪಿ ಸರ್ಕಾರವು 7 ಬಾರಿ ಟಿಕೆಟ್ ದರ ಪರಿಷ್ಕರಿತ್ತು. ಬರೋಬ್ಬರಿ ಶೇ. 47.8 ರಷ್ಟು ಬಸ್ ಟಿಕೆಟ್ ದರ ಹೆಚ್ಚಿಸಿತ್ತು ಎಂದು ರೇಟ್ ಕಾರ್ಡ್ ಬಿಡುಗಡೆ ಮಾಡಿದ್ದಾರೆ. ನಮ್ಮನ್ನು ಟೀಕಿಸುವ ಬಿಜೆಪಿಗೆ ಯಾವ ನೈತಿಕತೆಯೂ ಇಲ್ಲ, ನಾಚಿಕೆಯೂ ಇಲ್ಲ! ಎಂದು ಸಚಿವ ರಾಮಲಿಂಗ ರೆಡ್ಡಿ ಟೀಕಿಸಿದ್ದಾರೆ....
ಪ್ರಧಾನಿ ಮೋದಿ ಕಳುಹಿಸಿದ ಚಾದರ್ ಅಜ್ಮೀರ್ ದರ್ಗಾಕ್ಕೆ ಸಮರ್ಪಣೆ

ಪ್ರಧಾನಿ ಮೋದಿ ಕಳುಹಿಸಿದ ಚಾದರ್ ಅಜ್ಮೀರ್ ದರ್ಗಾಕ್ಕೆ ಸಮರ್ಪಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ : ಪ್ರಸಿದ್ಧ ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳುಹಿಸಿರುವ ಚಾದರ್ ಅನ್ನು ಭಕ್ತಿ ಪೂರ್ವಕವಾಗಿ ಸಮರ್ಪಿಸಲಾಗಿದೆ. On the very auspicious occasion of the 813th Urs of Khwaja Moinuddin Chishti, I had the privilege of visiting the revered Dargah Ajmer Sharif. On behalf of Hon'ble PM Shri @narendramodi ji, I offered the sacred chadar, a timeless gesture of faith, unity & peace that inspires… pic.twitter.com/pWOOQw93yh — Kiren Rijiju (@KirenRijiju) January 4, 2025 ಸೂಫಿ ಸಂತ ಖಾಜಾ ಮೊಹಿನುದ್ದೀನ್ ಚಿಶ್ತಿ ಅವರ ಉರುಸ್ ಅಂಗವಾಗಿ ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳುಹಿಸಿದ 'ಚಾದರ್' ಅನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಶನಿವಾರ ಅಜ್ಮೀರ್ ದರ್ಗಾಕ್ಕೆ ಸಮರ್ಪಿಸಿದರು. ಇಂಗ್ಲಿಷ್'ನಲ್ಲೂ ಉದಯ ನ್ಯೂಸ್ ಲಭ್ಯ.. Read More.. WE AIM TO FOSTER HARMONY, SAYS RIJIJU AFTER PRESENTING PM MODI'S 'CHADAR' AT AJ...
ಸಿಎಂ ಬದಲಾವಣೆಗಾಗಿ ಒಕ್ಕಲಿಗ ಶಾಸಕರ ಸಭೆ ನಡೆದಿದೆ ಎಂಬುದು ಸುಳ್ಳು; ಸಿದ್ದರಾಮಯ್ಯ ಪ್ರತಿಕ್ರಿಯೆ

ಸಿಎಂ ಬದಲಾವಣೆಗಾಗಿ ಒಕ್ಕಲಿಗ ಶಾಸಕರ ಸಭೆ ನಡೆದಿದೆ ಎಂಬುದು ಸುಳ್ಳು; ಸಿದ್ದರಾಮಯ್ಯ ಪ್ರತಿಕ್ರಿಯೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಎಂ ಬದಲಾವಣೆ ಸಾಧ್ಯತೆಗಳ ಕುರಿತಂತೆ ರಾಜ್ಯ ರಾಕೀಯದಲ್ಲಿ ಬಲವಾದ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕರ ಡಿನ್ನರ್ ಮೀಟಿಂಗ್ ನಡೆದಿದ್ದು, ಈ ಬೆಳವಣಿಗೆ ತೀವ್ರ ಕುತೂಹಲ ಕೆರಳುವಂತೆ ಮಾಡಿದೆ. ಆದರೆ, ನಾಯಕತ್ವ ಬದಲಾವಣೆ ಕುರಿತು ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬೆಳವಣಿಗೆ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು. ಊಟಕ್ಕೆ ಎಲ್ಲರೂ ಒಂದು ಕಡೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ತಪ್ಪಾಗಿ ಭಾವಿಸಿದ್ದಾರೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು. ಊಟಕ್ಕೆ ಎಲ್ಲರೂ ಒಂದು ಕಡೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ತಪ್ಪಾಗಿ ಭಾವಿಸಿದ್ದಾರೆ. pic.twitter.com/pnZLbZDNTT — Siddaramaiah (@siddaramaiah) January 3, 2025...
ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಕಾರು ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸಾವು

ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಕಾರು ಅಪಘಾತ; ಇಬ್ಬರು ವಿದ್ಯಾರ್ಥಿಗಳು ಸಾವು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಗದಗ: ಗದಗ್ ಸಮೀಪ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ಈ ವಿದ್ಯಾರ್ಥಿಗಳು ಕಾರಿನಲ್ಲಿ ತೆರಳುತ್ತಿದ್ದರೆನ್ನಲಾಗಿದೆ. ಕಾರು ಅಪಘಾತದಲ್ಲಿ ಮತ್ತಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಗದಗ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನ ಬರ್ಬರ ಕೊಲೆ

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನ ಬರ್ಬರ ಕೊಲೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. Read More.. K'TAKA CONG WON'T SUCCEED IN FINISHING OFF JD(S): HD KUMARASWAMY ತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಎಂಬವರನ್ನು ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ವೆಂಕಟೇಶ್ತ ಅವರು ಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಮೆಡಿಕಲ್ ಸ್ಟೋರ್‌ನಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಂತಕರು ದಾಳಿ ಮಾಡಿದ್ದಾರೆ ಎನ್ನಲಾಗಿದೆ....
ಭಾರತದಲ್ಲಿ HMPV ಸೋಂಕು ಬಗ್ಗೆ ಸದ್ಯಕ್ಕೆ ಆತಂಕ ಇಲ್ಲ, ಆದರೆ ಮುನ್ನೆಚ್ಚರಿಕೆ ಅಗತ್ಯ

ಭಾರತದಲ್ಲಿ HMPV ಸೋಂಕು ಬಗ್ಗೆ ಸದ್ಯಕ್ಕೆ ಆತಂಕ ಇಲ್ಲ, ಆದರೆ ಮುನ್ನೆಚ್ಚರಿಕೆ ಅಗತ್ಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಚೀನಾದಲ್ಲಿ ತಲ್ಲಣ ಸೃಷ್ಟಿಸಿರುವ ಹೆಚ್ಎಂಪಿವಿ ಸೋಂಕು ಬಗ್ಗೆ ಭಾರತದಲ್ಲಿ ಆತಂಕವಿಲ್ಲ ಎಂದು ಸರ್ಕಾರ ಹೇಳಿದೆ. ಚೀನಾದಲ್ಲಿ ಹೆಚ್ಎಂಪಿವಿ ಸೋಂಕು ವ್ಯಾಪಕವಾಗಿದ್ದು, ಇದರ ಹಿನ್ನೆಲೆಯಲ್ಲಿ ಭಾರತದಲ್ಲೂ ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ವಹಿಸಲಾಗಿದೆ. ಆದರೆ, ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್ ಗೋಯಲ್ ತಿಳಿಸಿದ್ದಾರೆ. ಹೆಚ್ಎಂಪಿವಿ ವೈರಸ್ ಶೀತದಂತಹ ಲಕ್ಷಣಗಳನ್ನು ಹೊಂದಿದ್ದು, ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು ಎಂದಿರುವ ಅವರು, ಭಾರತದಲ್ಲಿ 2024ರ ಡಿಸೆಂಬರ್ ನಲ್ಲಿ ಉಸಿರಾಟ ಸಂಬಂಧಿ ಸಮಸ್ಯೆಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗಿಲ್ಲ ಎಂದಿದ್ದಾರೆ. ಹೀಗಿರುವಾಗ ಹೆಚ್ಎಂಪಿವಿ ಸೋಂಕು ಬಗ್ಗೆ ಆತಂಕ ಪಡಬೇಕಿಲ್ಲ. ಒಂದೊಮ್ಮೆ ಸಮಸ್ಯೆ ಉಲ್ಬಣಿಸಿದರೂ ನಮ್ಮ ಆಸ್ಪತ್ರೆಗಳಲ್ಲಿ ಅದಕ್ಕೆ ಬೇಕಾದಷ್ಟು ವ್ಯವಸ್ಥೆಗಳು ಲಭ್ಯವಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ಡಾ.ಅತು...
ರಾಜ್ಯದಲ್ಲಿ ಬೆಲೆ ಏರಿಕೆ ಅವಾಂತರ; ಸರ್ಕಾರದ ವಿರುದ್ಧ ಪ್ರತಿಪಕ್ಷ ಆಕ್ರೋಶ

ರಾಜ್ಯದಲ್ಲಿ ಬೆಲೆ ಏರಿಕೆ ಅವಾಂತರ; ಸರ್ಕಾರದ ವಿರುದ್ಧ ಪ್ರತಿಪಕ್ಷ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂಡ ನಂತರ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗುತ್ತಲೇ ಇವೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಗ್ಯಾರಂಟಿ ಕಾರಣಗಳಿಂದಾಗಿ ಇಂದು ರಾಜ್ಯದ ಜನರು ದುಬಾರಿ ಬೆಲೆಯನ್ನು ತೆರಬೇಕಾಗಿದೆ. ಹಾಲಿನ ದರ ಏರಿಸಲಾಗಿದೆ, ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಸ್ಟ್ಯಾಂಪ್ ಡ್ಯೂಟಿ, ರಿಜಿಸ್ಟ್ರೇಶನ್ ಶುಲ್ಕ ಮಾತ್ರವಲ್ಲದೆ ವಿವಿಧ ತೆರಿಗೆಗಳನ್ನೂ ಹೆಚ್ಚಿಸಲಾಗಿದೆ ಎಂದು ಆರೋಪಿಸಿದ್ದಾರೆ. ಅಭಿವೃದ್ಧಿ ಒಂದು ಬಿಟ್ಟು ತಲೆ ಬೋಳಿಸುವ ಕೆಲಸ ಮಾಡುವ ಸರ್ಕಾರ ಇದಾಗಿದೆ. ರಾಜ್ಯ ಸರ್ಕಾರದ ಖಜಾನೆ ಪೂರ್ತಿ ಖಾಲಿಯಾಗಿದೆ. ಸರ್ಕಾರದ ದಿನ ದೂಡಲು ಜನತೆಗೆ ಬರೆ ಹಾಕುವ ಕೆಲಸ ಮಾಡುತ್ತಿದೆ ಎಂದು ಅವರು ದೂರಿದ್ದಾರೆ. Read more.. AFTER CM SIDDARAMAIAH'S DINNER MEET WITH 35 CONG MLAS, K'TAKA BJP MOCKS DY CM SHIVAKUMAR..  ಗ್ಯಾರಂಟಿ ಕಾರಣಗಳಿಂದಾಗಿ ಇಂದು ರಾಜ್ಯದ ಜನರು ದುಬಾರಿ ಬೆಲೆಯನ್ನು ತೆರಬೇಕಾಗಿದೆ. ಹಾಲಿನ ದರ ಏರಿಸಲಾಗಿದೆ, ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಸ್ಟ್ಯಾಂಪ್...