Thursday, January 29

Focus

ಟೆಲಿಮೆಡಿಸಿನ್ ಸೇವೆಯಲ್ಲಿ AI — eSanjeevaniಗೆ CDSS ಸಂಯೋಜನೆ

ಟೆಲಿಮೆಡಿಸಿನ್ ಸೇವೆಯಲ್ಲಿ AI — eSanjeevaniಗೆ CDSS ಸಂಯೋಜನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ದೇಶದ ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ಪರಿವರ್ತನಾತ್ಮಕ ಬದಲಾವಣೆ ತರಲು ಕೇಂದ್ರ ಸರ್ಕಾರ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ವೇಗವಾಗಿ ಅಳವಡಿಸಿಕೊಂಡಿದೆ. ವಿಶೇಷವಾಗಿ ಕ್ಷಯರೋಗ ಹಾಗೂ ಮಧುಮೇಹದ ಹೆಚ್ಚುತ್ತಿರುವ ಹೊರೆಯನ್ನು ನಿಭಾಯಿಸುವಲ್ಲಿ AI ಆಧಾರಿತ ರೋಗನಿರ್ಣಯ ಸಾಧನಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವ ಪ್ರತಾಪ್‌ರಾವ್ ಜಾಧವ್ ಲೋಕಸಭೆಯಲ್ಲಿ ತಿಳಿಸಿದರು. ಸಚಿವಾಲಯವು AIIMS ದೆಹಲಿ, PGIMER ಚಂಡೀಗಢ ಮತ್ತು AIIMS ಋಷಿಕೇಶವನ್ನು ‘AI ಶ್ರೇಷ್ಠತೆಯ ಕೇಂದ್ರ’ವಾಗಿ ಗುರುತಿಸಿ, ಆರೋಗ್ಯ ಕ್ಷೇತ್ರದಲ್ಲಿ AI ಪರಿಹಾರಗಳ ಅಭಿವೃದ್ಧಿಗೆ ಒತ್ತು ನೀಡಿದೆ ಎಂದು ಜಾಧವ್ ಲಿಖಿತ ಉತ್ತರದಲ್ಲಿ ಹೇಳಿದರು. ಮಧುಮೇಹ ರೆಟಿನೋಪಥಿ ಪತ್ತೆಗೆ AI — ‘ಮಧುನೇತ್ರAI’ ಮಧುಮೇಹ ಸಂಬಂಧಿತ ಕಣ್ಣಿನ ಸಮಸ್ಯೆಗಳನ್ನು ತ್ವರಿತವಾಗಿ ಗುರುತಿಸಲು ‘ಮಧುನೇತ್ರAI’ ಎಂಬ AI ಆಧಾರಿತ ಪರಿಹಾರ ಅಭಿವೃದ್ಧಿಯಾಗಿದೆ. ತಜ್ಞರಲ್ಲದ ಆರೋಗ್ಯ ಕಾರ್ಯಕರ್ತರೂ ಫಂಡಸ್ ಚಿತ್ರಗಳನ್ನು ತೆಗೆದು AI ಮೂಲಕ ರೆಟಿನೋಪಥಿಯನ್ನು ಪತ್ತೆಹಚ್ಚಲು ಈ ಸಾಧನ ನೆರವಾ...
ಬೆಳಗಾವಿ ಅಧಿವೇಶನ; 9ರಂದು ಸಾವಿರಾರು ರೈತರಿಂದ ಸುವರ್ಣಸೌಧಕ್ಕೆ ಮುತ್ತಿಗೆ

ಬೆಳಗಾವಿ ಅಧಿವೇಶನ; 9ರಂದು ಸಾವಿರಾರು ರೈತರಿಂದ ಸುವರ್ಣಸೌಧಕ್ಕೆ ಮುತ್ತಿಗೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕು. ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಗಮನ ಸೆಳೆಯಬೇಕು; ವಿಶೇಷವಾಗಿ ಉತ್ತರ ಕರ್ನಾಟಕದ ಸಮಸ್ಯೆ, ರೈತರ ಸಂಕಷ್ಟದ ಕುರಿತು, ನೀರಾವರಿ ಸಮಸ್ಯೆ ಬಗ್ಗೆ ಚರ್ಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿಯ ಚಳಿಗಾಲದ ಅಧಿವೇಶನದ ಕುರಿತು ನಾನು, ವಿಪಕ್ಷ ನಾಯಕರು, ಬಿಜೆಪಿ- ಜೆಡಿಎಸ್ ಮುಖಂಡರು ಒಟ್ಟಿಗೆ ಕೂತು ಸವಿಸ್ತಾರವಾಗಿ ಚರ್ಚಿಸಿದ್ದೇವೆ ಎಂದರು. ಪ್ರತಿ ಬಾರಿ ಬೆಳಗಾವಿ ಅಧಿವೇಶನದಲ್ಲಿ ನಾಮಕಾವಾಸ್ತೆ ಒಂದು ದಿನ ಚರ್ಚೆ ನಡೆಯುತ್ತಿದೆ. ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿದ್ದು, ಅಲ್ಲಿನ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕೆಂಬ ಆಶಯ ಅವರದಾಗಿತ್ತು ಎಂದು ವಿವರಿಸಿದರು. ಆದು ಆಗುತ್ತಿಲ್ಲ ಎಂದು ಟೀಕಿಸಿದರು. ಅಧಿವೇಶನದ ಆರಂಭದ ದಿನಗಳಲ್ಲೇ ಈ ಸಮಸ್ಯೆಗಳನ್ನು ಚರ್ಚಿಸಲು ತೀ...
ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಡಾ. ಶರಣಪ್ರಕಾಶ್‌ ಒತ್ತಾಯ

ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಡಾ. ಶರಣಪ್ರಕಾಶ್‌ ಒತ್ತಾಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಬೆಂಗಳೂರು: ಹೆಚ್ಚುತ್ತಿರುವ ಮನೋವೈದ್ಯಕೀಯ ಮತ್ತು ಮಾನಸಿಕ ಅಸ್ವಸ್ಥತೆಗಳ ಸವಾಲು ಎದುರಿಸಲು ವಿಶೇಷ ನವೀಕೃತ ಮತ್ತು ನಾವೀನ್ಯತಾ ಪ್ರಯತ್ನಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ. ನರ ರೋಗಗಳು, ಸೋಂಕುಗಳು, ಮಾನಸಿಕ ಆರೋಗ್ಯ ಸಮಸ್ಯೆಗಳು, ತಾಯಿ ಮತ್ತು ಮಕ್ಕಳ ಮಾನಸಿಕ ಸಮಸ್ಯೆಗಳು, ಹದಿಹರೆಯದವರ ಆತ್ಮಹತ್ಯೆಗಳು, ಮಾದಕ ದ್ರವ್ಯ ಬಳಕೆಯ ಅಸ್ವಸ್ಥತೆಗಳು ಮತ್ತು ವೃದ್ಧಾಪ್ಯದ ಮಾನಸಿಕ ಆರೋಗ್ಯ ಸೇವೆಗಳನ್ನು ಒದಗಿಸಲು ವಿಶೇಷ ಸೌಲಭ್ಯ ಒದಗಿಸಬೇಕಾಗಿದೆ ಎಂದು ಸಚಿವರು ತಿಳಿಸಿದರು. ಶನಿವಾರ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) 28 ನೇ ಘಟಿಕೋತ್ಸವದಲ್ಲಿ ಭಾಷಣ ಮಾಡಿದ ಡಾ. ಪಾಟೀಲ್, ಮೈಸೂರು ಮತ್ತು ಕಲಬುರಗಿಯಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಪ್ರಸ್ತಾಪಿಸಿದೆ. "ಕರ್ನಾಟಕದಲ್ಲಿ ಮಾತ್ರವಲ್ಲ, ದೇಶಾದ್ಯಂತ ನಿಮ್ಹಾನ್ಸ್ ಮಾದರಿಯ ಸಂಸ್ಥೆಯನ್ನು ಸ್ಥಾಪಿಸಬೇಕು" ಎಂ...
ಥ್ರಿಲ್ಲರ್ ‘ಸಾಲಿ ಮೊಹಬ್ಬತ್’ ಚಿತ್ರದಲ್ಲಿ ರಾಧಿಕಾ ಆಪ್ಟೆ

ಥ್ರಿಲ್ಲರ್ ‘ಸಾಲಿ ಮೊಹಬ್ಬತ್’ ಚಿತ್ರದಲ್ಲಿ ರಾಧಿಕಾ ಆಪ್ಟೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ:  ನಟಿ ರಾಧಿಕಾ ಆಪ್ಟೆ ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಥ್ರಿಲ್ಲರ್ ಸಾಲಿ ಮೊಹಬ್ಬತ್ ಚಿತ್ರದಲ್ಲಿ ನಟಿಸಿದ್ದಾರೆ. ತಮ್ಮ ಪಾತ್ರದ ಕುರಿತು ಅವರು ಹೇಳುವುದೇನಂದರೆ: “ನಾನು ಸ್ಮಿತಾ ಎಂಬ ಗೃಹಿಣಿಯ ಪಾತ್ರದಲ್ಲಿ ನಟಿಸಿದ್ದೇನೆ. ತೋಟಗಾರಿಕೆ ಪ್ರೀತಿಸುವ, ತುಂಬಾ ಶಾಂತ ಜೀವನ ನಡೆಸುವ ಮಹಿಳೆ ಅವಳು. ಗಂಡ, ಮನೆ, ತೋಟ—ಇವೆಲ್ಲದರಲ್ಲೂ ತೃಪ್ತಿಯಾಗಿರುವ ಅವಳ ಜೀವನದಲ್ಲಿ ಒಂದು ಘಟನೆ ಸಂಭವಿಸಿದಾಗ ಕಥೆ ಸಂಪೂರ್ಣ ತಿರುವು ಪಡೆಯುತ್ತದೆ. ಅದರ ನಂತರ ಪ್ರೇಕ್ಷಕರು ಒಂದು ವಿಭಿನ್ನ, ರೋಮಾಂಚಕ ಪ್ರಯಾಣಕ್ಕೆ ಇಳಿಯುತ್ತಾರೆ.” ಈ ಚಿತ್ರವು ಮೂಲತಃ ಒಂದು ಸಿಂಪಲ್, ಅಂತರ್ಮುಖಿ, ಸಸ್ಯ ಪ್ರೇಮಿ ಗೃಹಿಣಿಯ ಬದುಕಿನ ಸುತ್ತ ಸಾಗಿ ಬರುತ್ತದೆ ಎಂದು ಅವರು ವಿವರಿಸಿದ್ದಾರೆ. ತಮ್ಮನ್ನು ಈ ಪಾತ್ರಕ್ಕೆ ಆಕರ್ಷಿಸಿದ ಕಾರಣದ ಬಗ್ಗೆ ರಾಧಿಕಾ ಮಾತನಾಡುತ್ತಾ, “ಈ ಚಿತ್ರ ಸಾಮಾನ್ಯ ಕ್ರೈಮ್–ಥ್ರಿಲ್ಲರ್ ಅಲ್ಲ. ಇತ್ತೀಚಿನ ಭಾರತೀಯ ಸಿನಿಮಾಗಳಲ್ಲಿ ಕಾಣುವ ವೇಗ, ಆಕ್ಷನ್, ಅತಿರೇಕ—ಇವುಗಳೊಂದೂ ಇಲ್ಲ. ಬದಲಾಗಿ ಇಲ್ಲಿ ಮೌನದ ಉದ್ವಿಗ್ನತೆ, ಸೂಕ್ಷ್ಮ ಭಾವನೆಗಳು, ವಾತಾವರಣದ ತೀವ್ರತೆ ಇವೆ. ಈ ಎಲ್ಲವೂ ತುಂಬಾ ಶಾ...
ಕಡೂರು ಬಳಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ

ಕಡೂರು ಬಳಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್‌ ತೆರವು ವಿವಾದ ಸಣ್ಣ ಗಲಾಟೆಯಾಗಿ ಆರಂಭಗೊಂಡಿದ್ದು, ಕೊನೆಗೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರ ಮೇಲೆ ನಡೆದ ಮಾರಣಾಂತಿಕ ದಾಳಿಗೆ ಕಾರಣವಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ, ಸಂಜಯ್ ಮತ್ತು ಮಿಥುನ್ ಎಂಬ ಯುವಕರು ಮಚ್ಚುಗಳಿಂದ ದಾಳಿ ನಡೆಸಿ ಗಣೇಶ್ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಐವರನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯಲ್ಲಿ ಆರೋಪಿ ಸಂಜಯ್ ತೀವ್ರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಣೇಶ್ ಗೌಡ ಅವರು ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದು, ಸ್ಥಳೀಯ ರಾಜಕೀಯದಲ್ಲಿ ಸಕ್ರಿಯ ಮುಖವಾಗಿದ್ದರು. ಘಟನೆಯ ವೇಳೆ ಅವರು ಕಾರಿನಲ್ಲಿ ತೆರಳುತ್ತಿದ್ದಾಗ, ಕಲ್ಮರಡಿ ಮಠದ ಸಮೀಪ ಬೈಕ್‌ನಲ್ಲಿ ಹಿಂಬಾಲಿಸಿ ಬಂದ ಆರೋಪಿಗಳು ಕಾರನ್ನು ಅಡ್ಡಗಟ್ಟಿ ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಮಚ್ಚು ಸೇರಿದಂತೆ ಕೆಲವು...
ಡಿವೈಡರ್‌ಗೆ ಡಿಕ್ಕಿ; ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಜೀವ ದಹನ

ಡಿವೈಡರ್‌ಗೆ ಡಿಕ್ಕಿ; ಲೋಕಾಯುಕ್ತ ಇನ್ಸ್‌ಪೆಕ್ಟರ್ ಸಜೀವ ದಹನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಧಾರವಾಡ: ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಅವರು ಕಾರು ಅಪಘಾತದಲ್ಲಿ ಸಜೀವ ದಹನಗೊಂಡು ಮೃತಪಟ್ಟು ದಾರುಣ ಘಟನೆ ಸಂಭವಿಸಿದೆ. ಶುಕ್ರವಾರ ರಾತ್ರಿ ಹಾವೇರಿಯಿಂದ ಮುರ್ಗೋಡಿನಲ್ಲಿರುವ ತಮ್ಮ ನಿವಾಸದತ್ತ ತೆರಳುತ್ತಿದ್ದ ವೇಳೆ, ಅಣ್ಣಿಗೇರಿ ಸಮೀಪ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಂಧನ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ. ಕಣ್ಣುಮುಚ್ಚುವಷ್ಟರಲ್ಲಿ ಕಾರು ಮಿಂಚಿನಂತೆ ಹೊತ್ತಿ ಉರಿದಿದ್ದು, ಒಳಗಿದ್ದ ಇನ್ಸ್‌ಪೆಕ್ಟರ್ ಬದುಕಿದ್ದಂತೆಯೇ ಸುಟ್ಟು ಕರಕಲಾಗಿ ಸಾವನ್ನಪ್ಪಿದ್ದಾರೆ ಎಂದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಮಾಹಿತಿ ನೀಡಿದ್ದಾರೆ. ಅಪಘಾತ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ....
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಅವರಿಗೆ ನೋಟಿಸ್ ಜಾರಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ/ ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಶುಕ್ರವಾರ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಿಂದ ಇನ್ಸ್‌ಪೆಕ್ಟರ್ ರಾಮಕೇಶ್ ಅವರ ಸಹಿಯೊಂದಿಗೆ ನೋಟಿಸ್ ಜಾರಿ ಮಾಡಲಾಗಿದೆ. ಡಿಸೆಂಬರ್ 19 ರಂದು ಅಥವಾ ಅದಕ್ಕೂ ಮೊದಲು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಶಿವಕುಮಾರ್ ಅವರಿಗೆ ಸೂಚಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಶಿವಕುಮಾರ್ ಅವರ ಬಳಿ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಹಾಗಾಗಿ ನೋಟಿಸ್ ನೀಡಲಾಗಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಶಿವಕುಮಾರ್ ಅವರಿಂದ ವಿವರವಾದ ಹಣಕಾಸು ಮತ್ತು ವಹಿವಾಟು ಸಂಬಂಧಿತ ಮಾಹಿತಿಯನ್ನು ಕೋರಿ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ. ಶಿವಕುಮಾರ್, ಅವರ ಸಂಬಂಧಿತ ಕಂಪನಿಗಳು, ಸಂಸ್ಥೆಗಳು ಇತ್ಯಾದಿಗಳಿಂದ ಯಂಗ್ ಇಂಡಿಯನ್ (YI) ಎಂಬ ಕಂಪನಿಗೆ ನೀಡಿದ ಮೊತ್ತದ ವಿವರಗಳು ಮತ್ತು ವಿಭಜನೆಯ ಬಗ್ಗೆ ಮಾಹಿತಿಯನ್ನು ಒ...
ಡಿಸೆಂಬರ್ 10ರಂದು ‘ಬೃಹತ್ ಬೆಳಗಾವಿ ಚಲೋ’; ಆಶಾ ಕಾರ್ಯಕರ್ತೆಯರಿಗೆ ಹೀಗೊಂದು ಕರೆ

ಡಿಸೆಂಬರ್ 10ರಂದು ‘ಬೃಹತ್ ಬೆಳಗಾವಿ ಚಲೋ’; ಆಶಾ ಕಾರ್ಯಕರ್ತೆಯರಿಗೆ ಹೀಗೊಂದು ಕರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೊಟ್ಟ ಭರವಸೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಡಿಸೆಂಬರ್ ೧೦ರಂದು "ಬೃಹತ್ ಬೆಳಗಾವಿ ಚಲೋ" ಹೋರಾಟ ಹಮ್ಮಿಕೊಂಡಿದೆ. ಅಂದು ಬೆಳಗಾವಿ ಸುವರ್ಣ ಸೌಧ ಬಳಿ ರಾಜ್ಯದ ವಿವಿಧೆಡೆಯ ಆಶಾ ಕಾರ್ಯಕರ್ತೆಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ. ಆಶಾ ಕಾರ್ಯಕರ್ತೆಯರು 2008-9ನೇ ಸಾಲಿನಿಂದ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೊದಲಿಗೆ ಕೆಲವೇ ಸಾವಿರ ಸಂಖ್ಯೆಯಲ್ಲಿ ಇದ್ದ ಈ ಕಾರ್ಯಕರ್ತೆಯರ ಸಂಖ್ಯೆ ಕೆಲವೇ ವರ್ಷಗಳಲ್ಲಿ, 42000ಕ್ಕೂ ಹೆಚ್ಚಿನ ಸಂಖ್ಯೆಗೆ ಏರಿತು. ಅಲ್ಲಿಂದ ಇಲ್ಲಿಯವರೆಗೂ ಕಳೆದ 18 ವರ್ಷಗಳಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಕುಟುಂಬಗಳ ತಾಯಿ-ಮಗು ಹಾಗೂ ಜನ ಸಾಮಾನ್ಯರಿಗೆ ಸರ್ಕಾರದ ಎಲ್ಲಾ ಆರೋಗ್ಯ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾ ಬಂದಿದ್ದಾರೆ. ಮಾರಣಾಂತಿಕ ಸಾಂಕ್ರಾಮಿಕ ಕೊರೋನಾ ಹರಡಿದ ಸಂದರ್ಭದಲ್ಲಿ ಅ...
ಭಾರತ ಪ್ರವಾಸಕ್ಕೆ ಬಂದಿರುವ ರಷ್ಯಾ ಅಧ್ಯಕ್ಷ ಪುಟಿನ್’ಗೆ ಭಗವದ್ಗೀತೆ ಗಿಫ್ಟ್

ಭಾರತ ಪ್ರವಾಸಕ್ಕೆ ಬಂದಿರುವ ರಷ್ಯಾ ಅಧ್ಯಕ್ಷ ಪುಟಿನ್’ಗೆ ಭಗವದ್ಗೀತೆ ಗಿಫ್ಟ್

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಭಾರತ ಪ್ರವಾಸಕ್ಕೆ ಬಂದಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ರಷ್ಯನ್ ಭಾಷೆಯ ಭಗವದ್ಗೀತೆಯ ಪ್ರತಿಯನ್ನು ನೀಡಿದ್ದಾರೆ. ಗೀತೆಯ ಉಪದೇಶಗಳು ವಿಶ್ವದಾದ್ಯಂತ ಕೋಟ್ಯಾಂತರ ಮಂದಿಗೆ ಪ್ರೇರಣೆ ನೀಡುತ್ತವೆ ಎಂದು ಪ್ರಧಾನಿ ಹೇಳಿದ್ದಾರೆ. ಮೋದಿ ಅವರು ‘ಎಕ್ಸ್’ ಪ್ಲಾಟ್‌ಫಾರ್ಮ್‌ನಲ್ಲಿ ಹಂಚಿದ ಚಿತ್ರದಲ್ಲಿ, ಗೀತೆಯ ರಷ್ಯನ್ ಆವೃತ್ತಿಯನ್ನು ಪುಟಿನ್ ಅವರಿಗೆ ನೀಡುತ್ತಿರುವುದು ಕಾಣಿಸುತ್ತದೆ. “ಪುಟಿನ್ ಅಧ್ಯಕ್ಷರಿಗೆ ಗೀತೆಯ ರಷ್ಯನ್ ಪ್ರತಿಯನ್ನು ನೀಡಿದೆ. ಗೀತೆಯ ಉಪದೇಶಗಳು ಲಕ್ಷಾಂತರ ಮಂದಿಗೆ ದಾರಿದೀಪವಾಗಿವೆ” ಎಂದು ಮೋದಿ ಬರೆದುಕೊಂಡಿದ್ದಾರೆ. ಗೀತೆಯ ಜಾಗತಿಕ ಸ್ವೀಕಾರಾರ್ಹತೆ, ಅದರ ತತ್ತ್ವಗಳು ದೇಶಾಂತರಗಳಲ್ಲಿ ಕಂಡುಬರುತ್ತಿರುವ ಪ್ರಭಾವಗಳ ಕುರಿತು ಪ್ರಧಾನಿ ಹಿಂದುಬದ್ದ ರೀತಿಯಲ್ಲಿ ಮಾತನಾಡಿರುವುದನ್ನು ಇದು ಮತ್ತೊಮ್ಮೆ ನೆನಪಿಸಿದೆ. ರಷ್ಯನ್ ಆವೃತ್ತಿಯೂ ಸೇರಿದಂತೆ ಗೀತೆಯ ಅನೇಕ ಭಾಷಾಂತರಗಳು ಜಗತ್ತಿನ ಹಲವು ವಿಧದ ವಲಯಗಳಲ್ಲಿ ಓದುಗರನ್ನು ಹೊಂದಿವೆ. Подарил Президенту Путину экземпляр Бхагавад-гиты на рус...
‘ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ’; ಸಿದ್ದರಾಮಯ್ಯ

‘ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ’; ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಇದೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಮಾಡಿರುವ ಆರೋಪ ಬಿಜೆಪಿ ಸರ್ಕಾರದ ಅವಧಿಯದ್ದು ಎಂದು ಸಿಎಂ ಸಿದ್ದರಾಮಯ್ಯ ಬೊಟ್ಟು ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಬಿಜೆಪಿ ನಾಯಕರ ಹೇಳಿಕೆಗಳಿಗೆ ಎದಿರೇಟು ನೀಡಿರುವ ಸಿದ್ದರಾಮಯ್ಯ, ಉಪಲೋಕಾಯುಕ್ತ ಬಿ.ವೀರಪ್ಪ ಅವರು 2019ರ ನವೆಂಬರ್‌ನಲ್ಲಿ ಕೊಟ್ಟ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಬಿ.ವೀರಪ್ಪನವರು ಈಗ ಮಾತನಾಡಿದ್ದಾರೆ. ಅವರು ವರದಿ ನೀಡುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸರ್ಕಾರವಿದ್ದ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳು ಒಂದೇ, ಎರಡೇ. ಕೊರೊನಾ ಕಾಲದಲ್ಲಿ ಜನ ಹಾದಿಬೀದಿಯಲ್ಲಿ ಸಾಯುವಾಗ...