Thursday, January 29

Focus

ಹಿಂದುತ್ವವನ್ನು ಉಳಿಸಲು ‘ಕ್ರಾಂತಿ ವೀರ ಬ್ರಿಗೇಡ್’; ಬಿಜೆಪಿಗೆ ಪರ್ಯವಾಗಿ ಸಂಘ ಕಟ್ಟಿದ ಈಶ್ವರಪ್ಪ

ಹಿಂದುತ್ವವನ್ನು ಉಳಿಸಲು ‘ಕ್ರಾಂತಿ ವೀರ ಬ್ರಿಗೇಡ್’; ಬಿಜೆಪಿಗೆ ಪರ್ಯವಾಗಿ ಸಂಘ ಕಟ್ಟಿದ ಈಶ್ವರಪ್ಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ‘ಕ್ರಾಂತಿ ವೀರ ಬ್ರಿಗೇಡ್’ ಸಂಘಟನೆ ಕಟ್ಟುವ ಘೋಷಣೆ ಮಾಡಿದ್ದಾರೆ. ‘ಕ್ರಾಂತಿವೀರ ಬ್ರಿಗೇಡ್’ ಎಲ್ಲಾ ಜಾತಿಗಳ ಮಠಾಧೀಶರನ್ನು ಒಳಗೊಂಡಿದ್ದು, ಹಿಂದೂಗಳ ಏಕೀಕರಣಕ್ಕಾಗಿ ಕೆಲಸ ಮಾಡಲಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ. ಫೆಬ್ರವರಿ 4 ರಂದು ಬಸವನ ಬಾಗೇವಾಡಿಯಲ್ಲಿ ‘ಕ್ರಾಂತಿ ವೀರ ಬ್ರಿಗೇಡ್’ ಉದ್ಘಾಟನೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಹಿಂದುತ್ವವನ್ನು ಉಳಿಸಲು ಕೆಲಸ ಮಾಡುವ ಮಠಾಧೀಶರ ವೇದಿಕೆ ರಚನೆ ‘ಕ್ರಾಂತಿ ವೀರ ಬ್ರಿಗೇಡ್’ನ ಉದ್ದೇಶವಾಗಿದೆ ಎಂದಿರುವ ಈಶ್ವರಪ್ಪ, ಉತ್ತರ ಕರ್ನಾಟಕದ ಮಠಾಧೀಶರ ಸಲಹೆಯಂತೆ ಈ ಸಂಘಟನೆಯನ್ನು ಹುಟ್ಟುಹಾಕಲಾಗುತ್ತಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ....
ಭ್ರಷ್ಟರ ಬೆನ್ನಾತ್ತಿದ ಲೋಕಾಯುಕ್ತ; ರಾಜ್ಯದ ಹಲವೆಡೆ ದಾಳಿ

ಭ್ರಷ್ಟರ ಬೆನ್ನಾತ್ತಿದ ಲೋಕಾಯುಕ್ತ; ರಾಜ್ಯದ ಹಲವೆಡೆ ದಾಳಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಭ್ರಷ್ಟರ ಬೆನ್ನಾತ್ತಿರುವ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ಬೆಂಗಳೂರು, ಬೆಳಗಾವಿ, ರಾಯಚೂರು, ಬಾಗಲಕೋಟೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ಕೈಗೊಂಡಿದ್ದಾರೆ. ರಾಯಚೂರಿನಲ್ಲಿ ಜವಾರ್ ಕಾಲೋನಿಯಲ್ಲಿರುವ ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗರಾವ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಬೆಳಗಾವಿಯ ಪ್ರಭಾರಿ ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ್ ಅವರ ಬೆಳಗಾವಿ ನಗರದ ಆನಗೋಳದಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ರಾಯಬಾಗ ತಾಲೂಕಿನ ಹಾರೂಗೇರಿ ವೆಟರ್ನರಿ ಇನ್ಸ್ ಪೆಕ್ಟರ್ ಸಂಜಯ್ ಮನೆ ಮೇಲೆ ಮೇಲೂ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ....
ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ತನ್ನ ಪಾತ್ರವಿಲ್ಲ; ವಿಜಯೇಂದ್ರ ಸ್ಪಷ್ಟನೆ

ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ತನ್ನ ಪಾತ್ರವಿಲ್ಲ; ವಿಜಯೇಂದ್ರ ಸ್ಪಷ್ಟನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಸಂಸದ ಡಾ.ಸುಧಾಕರ್ ಮಾಡಿರುವ ಆರೋಪಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಲ್ಲಗಳೆದಿದ್ದಾರೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆಯಲ್ಲಿ ತನ್ನ ಪಾತ್ರವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸುಧಾಕರ್ ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, 23 ಜಿಲ್ಲೆಗಳ ಜಿಲ್ಲಾಧ್ಯಕ್ಷರ ಆಯ್ಕೆ ವಿರೋಧ ವಿಚಾರವಾಗಿ ಕೆಲವರ ಅಸಮಾಧಾನ ಬಗ್ಗೆ ಪ್ರತಿಕ್ರಿಯಿಸಲ್ಲ. ಆದರೆ ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ನನ್ನ ಯಾವುದೇ ಪಾತ್ರ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರಿಗೆ ಹೈಕಮಾಂಡ್ ಚುನಾವಣೆಯ ಜವಾಬ್ದಾರಿ ಕೊಟ್ಟಿದ್ದು, 13 ವೀಕ್ಷಕರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ. ರಾಜ್ಯದ ಅಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಚುನಾವಣೆ ಸಂಬಂಧ ಅಭಿಪ್ರಾಯ ಕೊಟ್ಟಿಲ್ಲ, ಕೊಡುವುದಕ್ಕೆ ಅವಕಾಶವೂ ಇಲ್ಲ ಎಂದು ವಿಜಯೇಂದ್ರ ವಿವರಿಸಿದರು....
ರಾಜಧಾನಿ ಇನ್ನಷ್ಟು ವಿಸ್ತಾರ; ಇದೀಗ ‘ಗ್ರೇಟರ್ ಬೆಂಗಳೂರು’ ಭಾಗ್ಯ

ರಾಜಧಾನಿ ಇನ್ನಷ್ಟು ವಿಸ್ತಾರ; ಇದೀಗ ‘ಗ್ರೇಟರ್ ಬೆಂಗಳೂರು’ ಭಾಗ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಜನದಟ್ಟಣೆಯನ್ನು ಕಡಿಮೆ ಮಾಡಲು ಗ್ರೇಟರ್ ಬೆಂಗಳೂರು ಸೂತ್ರಕ್ಕೆ ಸರ್ಕಾರ ಮನ್ನಣೆ ನೀಡಿದೆ. ಬೆಂಗಳೂರು ಸುತ್ತಮುತ್ತಲ ಮಾಗಡಿ, ಬಿಡದಿ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ ಪ್ರದೇಶಗಳನ್ನು ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಸ್ಯಾಟಲೈಟ್ ಟೌನ್‌ಶಿಪ್‌ಗಳನ್ನಾಗಿ ಅಭಿವೃದ್ಧಿಪಡಿಸುವ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಉಪನಗರ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರದ ಜನದಟ್ಟಣೆಯನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬೈರಮಂಗಲ, ಬಿಡದಿ ಹೋಬಳಿಯ ಬನ್ನಿಗೆರೆ, ಹೊಸೂರು, ಕೆಜಿ ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಲುಸಂದ್ರ, ಕೆಂಪಯ್ಯನಪಾಳ್ಯ, ಕಂಚುಗಾರನಹಳ್ಳಿ ಕವಲು, ಮಂಡಲಹಳ್ಳಿ ಮತ್ತು ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಈ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಯೋಜನೆ ವ್...
ಅಂತರರಾಷ್ಟ್ರೀಯ ಚಿತ್ರ “ದಿ ಐ” ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶ್ರುತಿ ಹಾಸನ್

ಅಂತರರಾಷ್ಟ್ರೀಯ ಚಿತ್ರ “ದಿ ಐ” ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಶ್ರುತಿ ಹಾಸನ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ಮುಂಬೈ: ಶ್ರುತಿ ಹಾಸನ್ ಹಾಲಿವುಡ್‌ನಲ್ಲಿ ತನ್ನ ಛಾಪು ಮೂಡಿಸಲು ಸಜ್ಜಾಗಿದ್ದಾರೆ. ಈ ನಟಿ ಶೀಘ್ರದಲ್ಲೇ ಅಂತರರಾಷ್ಟ್ರೀಯ ಚಿತ್ರ "ದಿ ಐ" ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜನವರಿ 28, 2025 ಅವರ ಹುಟ್ಟುಹಬ್ಬದಂದು ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿರುವ ಚಿತ್ರದ ನಿರ್ದೇಶಕಿ ಡ್ಯಾಫ್ನೆ ಸ್ಕ್ಮನ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ “Happy birthday to the stunning, brave and fierce Shruti Haasan, who will always be “our Diana.” The creators of The Eye in London, Greece, America and India love you and celebrate you on this special day and always! @shrutzhaasan.” ಎಂದು ಬರೆದುಕೊಂಡಿದ್ದಾರೆ. ಶ್ರುತಿ ಹಾಸನ್ ಅವರು ಈ ಚಿತ್ರದಲ್ಲಿ ಡಯಾನಾ ಪಾತ್ರವನ್ನು ನಿರ್ವಹಿಸಲಿದ್ದಾರೆ. ಫಸ್ಟ್-ಲುಕ್ ಪೋಸ್ಟರ್‌ನಲ್ಲಿ ಅವರು ನೀಲಿ ಹೈ-ನೆಕ್ ಸ್ವೆಟರ್‌ನಲ್ಲಿ ಪೋಸ್ ನೀಡಿದ್ದಾರೆ. "ದಿ ಐ" ಈಗಾಗಲೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಅಲೆಗಳನ್ನು ಸೃಷ್ಟಿಸಿದೆ, ಗ್ರೀಕ್ ಅಂತರರಾ...
ಹೃದಯದ ಅಪಾಯ ತಡೆಯಲು ಪೊಟ್ಯಾಸಿಯಮ್ ಉಪ್ಪು ಸೋಡಿಯಂಗೆ ಉತ್ತಮ ಪರ್ಯಾಯ

ಹೃದಯದ ಅಪಾಯ ತಡೆಯಲು ಪೊಟ್ಯಾಸಿಯಮ್ ಉಪ್ಪು ಸೋಡಿಯಂಗೆ ಉತ್ತಮ ಪರ್ಯಾಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ಪೊಟ್ಯಾಸಿಯಮ್ ಉಪ್ಪು ಸೋಡಿಯಂಗೆ ಉತ್ತಮ ಪರ್ಯಾಯವನ್ನು ಒದಗಿಸಬಹುದು ಮತ್ತು ಅದನ್ನು ಉತ್ತೇಜಿಸಬೇಕು ಎಂದು ಬುಧವಾರ ತಜ್ಞರು ಪ್ರತಿಪಾದಿಸಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಸಂಬಂಧಿತ ಹೃದಯ ಅಪಾಯಗಳನ್ನು ಎದುರಿಸಲು ಪೊಟ್ಯಾಸಿಯಮ್-ಪುಷ್ಟೀಕರಿಸಿದ ಉಪ್ಪಿನ ಕುರಿತು ವಿಶ್ವ ಆರೋಗ್ಯ ಸಂಸ್ಥೆ (WHO) ಮಾಡಿದ ಹೊಸ ಶಿಫಾರಸನ್ನು ತಜ್ಞರು ಸ್ವಾಗತಿಸಿದ್ದಾರೆ. WHO, ತನ್ನ ಇತ್ತೀಚಿನ ಮಾರ್ಗಸೂಚಿಯಲ್ಲಿ, ಸೋಡಿಯಂನಲ್ಲಿ ಸಮೃದ್ಧವಾಗಿರುವ ಸಾಮಾನ್ಯ ಟೇಬಲ್ ಉಪ್ಪಿನ ಬದಲಿಗೆ K-ಉಪ್ಪು ಅಥವಾ ಪೊಟ್ಯಾಸಿಯಮ್ ಕ್ಲೋರೈಡ್ ಅನ್ನು ಬಳಸಲು ಸೂಚಿಸುತ್ತದೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡುವ ಮೂಲಕ ಹೃದಯರಕ್ತನಾಳದ ಕಾಯಿಲೆಗಳು (CVDs) ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಂತಹ ಸಂವಹನ ಮಾಡಲಾಗದ ಕಾಯಿಲೆಗಳನ್ನು (NCDs) ಕಡಿಮೆ ಮಾಡಬಹುದು ಎಂದಿದೆ. ಇದು ಗ್ಯಾಸ್ಟ್ರಿಕ್ ಕ್ಯಾನ್ಸರ್‌ನಂತಹ ಹೆಚ್ಚಿನ ಸೋಡಿಯಂ ಸೇವನೆಗೆ ಸಂಬಂಧಿಸಿದ ಇತರ ಪರಿಸ್ಥಿತಿಗಳ ಅಪಾಯಗಳನ್ನು ಸಹ ಕಡಿಮೆ ಮಾಡುತ್ತದೆ. WHO ಪ್ರಕಾರ, ಪ್ರತಿ ವರ್ಷ 80 ಲಕ್ಷ ಜನರು ಕಳಪೆ ಆಹಾರದಿಂದ ಸಾಯುತ್ತಾರೆ. ಇವುಗಳಲ್ಲಿ, 19 ಲಕ್ಷ ಸಾ...
“ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ – ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ”

“ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ – ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ”

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಕನ್ನಡ ಶಾಲೆಗಳ ಅವ್ಯವಸ್ಥೆ ಹಾಗೂ ಸದ್ಯದ ಪರಿಸ್ಥಿತಿ ಬಗ್ಗೆ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಕಾರ್ಯವೈಖಾರಿ ಬಗ್ಗೆ ಕಾಟು ಟೀಕೆ ಮಾಡಿದೆ. 'ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ - ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ' ಎಂದು ಬಿಜೆಪಿ ಟೀಕಿಸಿದೆ. ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಾಲೆಗೆ ದಾಖಲಾಗುವ ಮಕ್ಕಳ ಪ್ರಮಾಣ ಗಣನೀಯ ಕುಸಿತದ ಹಾದಿಯಲ್ಲಿ ಸಾಗುತ್ತಿದೆ. ಆತಂಕ ಹೊರಹಾಕಿದೆ. ಶಾಲೆಗೆ ದಾಖಲಾಗುವ ಮಕ್ಕಳ ಪ್ರಮಾಣ ಈ ಸಾಲಿನಲ್ಲಿ ಶೇ.71ಕ್ಕೆ ಕುಸಿದಿದ್ದು, ಭವಿಷ್ಯದಲ್ಲಿ ಇನ್ನಷ್ಟು ಕುಸಿಯುವ ಆತಂಕ ಎದುರಾಗಿದೆ. ಸಿಎಂ ಸಿದ್ದರಾಮಯ್ಯ, ಕನ್ನಡ ಬಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕನ್ನಡ ಶಾಲೆಗಳ ಗುಣಮಟ್ಟವನ್ನು ಹಾಳು ಮಾಡಿ, ದಾಖಲಾತಿ ಪ್ರಮಾಣವನ್ನು ಕುಸಿಯುವ ಹಾಗೆ ಮಾಡಿಮಾಡಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. “ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ - ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ” ರಾಜ್ಯದ ಸರ...
ಪ್ರಯಾಗರಾಜ್​ ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ

ಪ್ರಯಾಗರಾಜ್​ ಮಹಾಕುಂಭಮೇಳ ಕಾಲ್ತುಳಿತ ಪ್ರಕರಣ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ
ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್​ ಮಹಾಕುಂಭಮೇಳದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಉತ್ತರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಕಾಲ್ತುಳಿತಪ್ರಕರಣಕ್ಕೆ ಸಂಬಂಧಿಸಿದಂತೆ 30 ಭಕ್ತರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಹೇಳಿದೆ. ಈ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಈ ದುರಂತ ಬಗ್ಗೆ ತನಿಖೆಗಾಗಿ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಜನವರಿ 30ರಂದು ಮಹಾ ಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಆದಿತ್ಯನಾಥ್ ತಿಳಿಸಿದ್ದಾರೆ....
ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿಕನ್ನಡ ಧ್ವಜಾರೋಹಣ ಕಡ್ಡಾಯ

ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿಕನ್ನಡ ಧ್ವಜಾರೋಹಣ ಕಡ್ಡಾಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಮುಂದಿನ ದಿನಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅಥವಾ ಪಾಲಿಕೆ ವತಿಯಿಂದ ಎಲ್ಲಾ ಸಂಸ್ಥೆಗಳಿಗೂ ಕನ್ನಡ ಬಾವುಟ ಪೂರೈಸುವ ಕೆಲಸ ಮಾಡುತ್ತೇವೆ ಎಂದವರು ಹೇಳಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡರಾಜ್ಯೋತ್ಸವದ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗುವುದು ಎಂದವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಮುಂದಿನ ದಿನಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು. ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅಥವಾ ಪಾಲಿಕೆ ವತಿಯಿಂದ ಎಲ್ಲಾ ಸಂಸ್ಥೆಗಳಿಗೂ ಕನ್ನಡ ಬಾವುಟ ಪೂರೈಸುವ ಕೆಲಸ ಮಾಡುತ್ತೇವೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ… pic.twitter.com/ug7Vbaqbe5 — Karnataka Congress (@INCKarnataka) January...
ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ನೇಮಕ: ಹೊಸ ಸಾರಥಿಗಳ ಪಟ್ಟಿ ಇಲ್ಲಿದೆ

ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ನೇಮಕ: ಹೊಸ ಸಾರಥಿಗಳ ಪಟ್ಟಿ ಇಲ್ಲಿದೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಹೊಸ ಸಾರಥಿಗಳ ಪ್ರಕ್ರಿಯೆ ಬಿರುಸುಗೊಂಡಿದೆ. ವಿವಿಧ ಸಂಘಟನಾ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರ ನೇಮಕವಾಗಿದೆ. 23 ಜಿಲ್ಲೆಗಳಿಗೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಕೆಲ ಜಿಲ್ಲೆಗಳಿಗೆ ಹಳೇಬರನ್ನೇ ಮುಂದುವರಿಸಲಾಗಿದೆ. ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಹುಬ್ಬಳ್ಳಿ- ಧಾರವಾಡ, ಧಾರವಾಡ ಗ್ರಾಮಾಂತರ, ಬೆಳಗಾವಿ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ಬೀದರ್, ಕಲಬುರಗಿ, ಬಳ್ಳಾರಿ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರನ್ನು ಮರು ನೇಮಕ ಮಾಡಲಾಗಿದೆ. ನೂತನ ಜಿಲ್ಲಾಧ್ಯಕ್ಷರ ಪಟ್ಟಿ: ಮೈಸೂರು ನಗರ: ಎಲ್.ನಾಗೇಂದ್ರ, ಚಾಮರಾಜನಗರ: ಸಿ.ಎಸ್.ನಿರಂಜನ್‌ಕುಮಾರ್, ದಕ್ಷಿಣ ಕನ್ನಡ: ಸತೀಶ್ ಕುಂಪಲಿ, ಚಿಕ್ಕಮಗಳೂರು: ದೇವರಾಜ ಶೆಟ್ಟಿ, ಶಿವಮೊಗ್ಗ: ಎನ್.ಕೆ.ಜಗದೀಶ್, ಉತ್ತರ ಕನ್ನಡ: ನಾರಾಯಣ ಶ್ರೀನಿವಾಸ ಹೆಗಡೆ, ಹುಬ್ಬಳ್ಳಿ-ಧಾರವಾಡ: ತಿಪ್ಪಣ್ಣ ಮಜ್ಜಗಿ, ಧಾರವಾಡ ಗ್ರಾಮಾಂತರ: ನಿಂಗಪ್ಪ ಡಿ...