ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು.
ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಆದ ಡಿಸಿಎಂ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು....
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕರ್ನಾಟಕದ ಲಕ್ಕುಂಡಿ ದೇಗುಲದ ಸ್ಥಬ್ದಚಿತ್ರ ಗಮನಸೆಳೆಯಿತು. ಕರ್ತವ್ಯಪಥದಲ್ಲಿ ವಿವಿಧ ರಾಜ್ಯಗಳ ಸ್ಥಬ್ದ ಚಿತ್ರಗಳ ನಡುವೆ ಕರ್ನಾಟಕದ ಈ ಟ್ಯಾಬ್ಲೋ ಎಲ್ಲರ ಕುತೂಹಲದ ಕೇಂದ್ರಬಿಂದುವಾಯಿತು.
#RepublicDay🇮🇳: Karnataka’s tableau showcased during the 76th #RepublicDay Parade on Kartavya Path, in Delhi
The tableau celebrates the historic town of Lakkundi, located in the Gadag district, often referred to as the "Cradle of Stone Craft."
(Source: DD News) pic.twitter.com/dNoVtRuS16
— ANI (@ANI) January 26, 2025...
ನವದೆಹಲಿ: ಈ ಬಾರಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.
ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್ ಹಂಜಾ ಹುಸೇನ್ ಅವರಿಗೆ ರಾಷ್ಟ್ರಪತಿ ಪದಕ ಪ್ರಕಟಿಸಲಾಗಿದೆ.
ಪ್ರಶಸ್ತಿ ಪುರಸ್ಕೃತರು:
ಬೆಂಗಳೂರಿನ DCRI DIGP ರೇಣುಕಾ ಕೆ ಸುಕುಮಾರ,
ಎಐಜಿಪಿ ಸಂಜೀವ ಎಂ. ಪಾಟೀಲ್,
IRI ಕಮಾಂಡೆಂಟ್ ಬಿ.ಎಂ.ಪ್ರಸಾದ್,
ಕೆಎಸ್ ಆರ್ ಪಿ ಡೆಪ್ಯೂಟಿ ಕಮಾಂಡೆಂಟ್ ವೀರೇಂದ್ರ ನಾಯಕ್,
ಬೆಂಗಳೂರು ಸಿಸಿಬಿಯ ಗೋಪಾಲ ಡಿ ಜೋಗಿನ,
ಡಿವೈಎಸ್ ಪಿ ಗೋಪಾಲಕೃಷ್ಣ ಬಿ ಗೌಡರ್,
ಚಿತ್ರದುರ್ಗದ ಲೋಕಾಯುಕ್ತ ಇನ್ಸ್ ಪೆಕ್ಟರ್ ಹೆಚ್. ಗುರು ಬಸವರಾಜ ,
ಬೆಂಗಳೂರಿನ ಇನ್ಸ್ ಪೆಕ್ಟರ್ ಹೆಚ್. ಜಯರಾಜ್,
ಹಾಸನದ ಇನ್ಸ್ ಪೆಕ್ಟರ್ ಪ್ರದೀಪ್,
ಬೆಂಗಳೂರು ಸಿಸಿಪಿ ಇನ್ಸ್ ಪೆಕ್ಟರ್ ಮೊಹಮ್ಮದ್ ಮುಕರಮ್,
ಇನ್ಸ್ ಪೆಕ್ಟರ್ ಎಂ.ಎ. ವಸಂತ್ ಕುಮಾರ್,
ಸಿಐಡಿ ಎಎಸ್ ಐ ಮಂಜುನಾಥ್,
ವಿಲ್ಸನ್ ಗಾರ್ಡನ್ ಎಎಸ್ ಐ ಅಲ್ತಾಪ್ ಹುಸೇನ್,
ಕೆ.ಎಸ್. ಆರ್.ಪಿ ಬಲೇಂದ್ರನ್,
ಕಲಬುರಗಿ ಡಿಐಜ...
ಬೆಂಗಳೂರು: ಕನ್ನಡ 'ಬಿಗ್ ಬಾಸ್' ಸ್ಪರ್ಧಿಯಾಗಿದ್ದ ಜಗದೀಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೊಡಿಗೇಹಳ್ಳಿ ಬಳಿ ಶುಕ್ರವಾರ ನಡೆದ ಗಲಾಟೆ ಪ್ರಕರಣದಲ್ಲಿ ಪೊಲೀಸರು ಜಗದೀಶ್, ಜಗದೀಶ್, ಅವರ ಮಗ ಆರ್ಯನ್ ಹಾಗೂ ಇಬ್ಬರು ಗನ್ ಮ್ಯಾನ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ಗಲಾಟೆ ಸಂದರ್ಭದಲ್ಲಿ ಗನ್ಮ್ಯಾನ್ ಕಾನೂನು ಬಾಹಿರವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ತೇಜಸ್ ಎಂಬುವರು ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಜಗದೀಶ್ ಸಹಿತ ಹಲವರನ್ನು ಬಂಧಿಸಿದ್ದಾರೆ....
ಬೆಂಗಳೂರು: ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರರೊಬೊಟಿಕ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ.
ಮೊದಲ ಬಾರಿಗೆ ರೋಬೊಟಿಕ್ ಯಂತ್ರ ಅಳವಡಿಕೆ ಮಾಡಿಕೊಂಡ ಏಕೈಕಆಸ್ಪತ್ರೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಾಗಿದೆ. ಅತ್ಯಾಧುನಿಕರೋಬೊಟಿಕ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಇದುವರೆಗೆ ಒಂದುಸಾವಿರ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ವಿಶೇಷಮೈಲುಗಲ್ಲು ಸಾಧಿಸಿದೆ. ಸರಕಾರಿ ಸಂಸ್ಥೆಗಳ ಪೈಕಿ ಕಿದ್ವಾಯಿ ಸ್ಮಾರಕ ಗಂಥಿಆಸ್ಪತ್ರೆಯಲ್ಲಿ ಮಾತ್ರ ರೋಬೋಟಿಕ್ ಸರ್ಜರಿ ಸೌಕರ್ಯ ಇರುವುದು ಮತ್ತೊಂದು ಹೆಗ್ಗಳಿಕೆ.
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಹಲವು ಸಾಧನೆಗಳನ್ನು ಮಾಡುವಲ್ಲಿದಾಫುಗಾಲಿಡುತ್ತಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕಯೋಜನೆಯಡಿ ಹೆಚ್ಚು ಚಿಕಿತ್ಸೆ ನೀಡಿದ ಆಸ್ಪತ್ರೆಯಾಗಿ ಹೊರಹೊಮ್ಮಿದೆ. ಒಳರೋಗಿಗಳಿಗೆ ಹೆಚ್ಚು ಚಿಕಿತ್ಸೆ ನೀಡಿದ ಏಕೈಕ ಸೂಪರ್ ಸ್ಪೆಷಾಲಿಟಿಆಸ್ಪತ್ರೆ ಎಂಬ...
ಬೆಂಗಳೂರು: ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕನ್ನಡ ಸೇನಾನಿ ಸಾ.ರಾ.ಗೋವಿಂದು ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪಕ್ಕದ ರಾಜ್ಯಗಳಲ್ಲಿ ಪರಭಾಷಾ ಚಿತ್ರಗಳಿಗೆ ಟಿಕೆಟ್ ದರ ಎಷ್ಟಿದೆ ಎಂದು ಪರಿಶೀಲಿಸಿ, ರಾಜ್ಯದಲ್ಲಿ ಅದಕ್ಕೆ ತಕ್ಕಂತೆ ನಿಯಂತ್ರಣ ತರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಪ್ರಯತ್ನ ಮಾಡುತ್ತೇನೆ. ಕನ್ನಡದ ಕೆಲಸಕ್ಕೆ ನಮ್ಮ ಸರ್ಕಾರ ಸದಾ ಮುಂದೆ ಇರುತ್ತದೆ. ದಿನಾಂಕ 27 ರಂದು ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪುತ್ಥಳಿ ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಗೋವಿಂದು ಅವರು ರಾಜ್ ಕುಮಾರ್ ಸಂಘದ ಅಧ್ಯಕ್ಷರಾಗಿ ಮಾಡಿದ ಕೆಲಸಗಳು ಸ್ಮರಣೀಯ. ರಾಜ್ ಅವರ ವಿನಯ, ಸಭ್ಯತೆ, ಸರಳತೆ ಇಡೀ ಮನುಷ್ಯ ಕುಲಕ್ಕೆ ಮಾದರಿ. ಡಾ.ರಾಜ್ ಕುಮಾರ್ ಅವರಿಗೆ ರಾಜ್ ಅವರೇ ಸಾಟ...
‘ಬಿಗ್ ಬಾಸ್ ಕನ್ನಡ' ಸ್ಪರ್ಧಿಯಾಗಿದ್ಫ್ದ ಜಗದೀಶ್ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಜಗದೀಶ್ ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಯುವಕರ ಗುಂಪು ದಾಳಿ ನಡೆಸಿತ್ತು. ಆ ವೀಡಿಯೋ ಇದೀಗ ವೈರಲ್ ಆಗಿದೆ.
View this post on Instagram
A post shared by GANGA JADHAV (@ganga_jadhav__)
ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಜಗದೀಶ್ ಅವರಿಗೆ ಸೇರಿದ ಕಾಂಪ್ಲೆಕ್ಸ್ ಬಳಿ ಅಣ್ಣಮ್ಮ ದೇವಿ ವಿಗ್ರಹ ಸ್ಥಾಪನೆ ವಿಚಾರದಲ್ಲಿ ಕೆಲವು ದಿನಗಳ ಹಿಂದೆ ಗಲಾಟೆ ನಡೆದಿತ್ತು. ನಟ ದರ್ಶನ ವಿವಿರುದ್ದದ ಟೀಕೆಯ ವಿಚಾರದಲ್ಲೂ ಜಗದೀಶ್ ಅವರು ನಟನ ಅಭಿಮಾನಿಗಳಿಂದ ಮುನಿಸಿಕೊಂಡಿದ್ದರು.
ಈ ನಡುವೆ, ಜನವರಿ 24ರ ರಾತ್ರಿ ಜಗದೀಶ್ ಕಾರಿನ ಮೇಲೆ ಯುವಕರ ಗುಂಪು ದಾಳಿ ಮಾಡಿದೆ. ದೊಣ್ಣೆಯಿಂದ ಹಲ್ಲೆ ಮಾಡಿದ ಘಟನೆ ಹಾಗೂ ಕಾರನ್ನು ಹಾನಿಗೊಳಿಸಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಉದ್ರಿಕ್ತರನ್ನು ಚದುರಿಸಿದ್ದಾರೆ.
Bigboss fame Lawyer Jagadish was attacked by few miscreants. #Bbk11 pic.twitter.com/Z2pvgq6BGV
— 👑C...
ಬೆಂಗಳೂರು: ಬೆಂಗಳೂರು ಅರಮನೆ ಮೈದಾನದ ಜಾಗ ಸರ್ಕಾರದ ಬಳಕೆಗೆ ಸುಗ್ರಿವಾಜ್ಞೆ ಹೊರಡಿಸಲು ಸರ್ಕಾರ ತೀರ್ಮಾನಿಸಿದೆ. ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತಂತೆ ಸಿದ್ದರಾಮಯ್ಯ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ, 1996ಕ್ಕೆ ಸಂಬಂಧಪಟ್ಟ ಸಿವಿಲ್ ಅಪೀಲುಗಳು ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿಯಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಕ್ಕುಗಳನ್ನು (ಟಿ.ಡಿ.ಆರ್) ವಿತರಿಸಿದ್ದಲ್ಲಿ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಅದಕ್ಕಾಗಿ ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು ಎಂದವರು ತಿಳಿಸಿದ್ದಾರೆ....
ಮಣಿಪಾಲ: ಅಯೋಧ್ಯೆ ಶ್ರೀರಾಮ ದೇಗುಲದ ಬಾಲರಾಮನ ಪ್ರತಿಷ್ಠೋತ್ಸವದ ವಾರ್ಷಿಕೋತ್ಸವವನ್ನು ದೇಶದೆಲ್ಲೆಡೆ ಶ್ರದ್ದಾ ಭಕ್ತಿಯಿಂದ ನೆರವೇರಿಸಲಾಗಿದೆ. ಇದೇ ವೇಳೆ ಉಡುಪಿ ಜಿಲ್ಲೆ ಮಣಿಪಾಲದಲ್ಲಿ ನಡೆದ ಕಾರ್ಯಕ್ರಮ ಗಮನಸೆಳೆದಿದೆ.
ಮಣಿಪಾಲದ ದಶರಥನಗರದ ಶಿವಾಣಿ ಆರ್ಕಿಡ್ ಬಳಿ ದೀಪೋತ್ಸವ ವೈಭವ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಆಸ್ತಿಕರು ಭಾಗಿಯಾದರು.
ಇದೇ ವೇಳೆ, ತೇಜಸ್ವಿನಿ ಅನಿಲ್ ರಾಜ್ ರವರ ಶ್ರೀ ರಾಮ ಭಕ್ತಿ ಗಾಯನ ಕಾರ್ಯಕ್ರಮ ಭಕ್ತಸಮೂಹ ಆಸ್ತಿಕರ ಗಮನಕೇಂದ್ರೀಕರಿಸಿತು. ರಾಮ ಲಕ್ಷ್ಮಣ ಸೀತಾ ಹಾಗು ಹನುಮಾನ್ ಪ್ರತಿಮೆ ಪ್ರದರ್ಶನಾವೂ ಕುತೂಹಲದ ಕೇಂದ್ರಬಿಂದುವಾಯಿತು. ರಾಮಾಯಣದ ಬಗ್ಗೆ ರಸ ಪ್ರಶ್ನೆ, ಕುಣಿತ ಭಜನೆ, ಕ್ರೇಜಿ ಕಿಡ್ಸ , ಪರ್ಕಳ ಇವರ ನೃತ್ಯ ಕಾರ್ಯಕ್ರಮಗಳು ಈ ಭಕ್ತಿ ಸಮಾರಂಭಕ್ಕೆ ಆಕರ್ಷಣೆಯನ್ನೂ ತುಂಬಿತು.
ಉದ್ಯಮಿಗಳಾದ ರಾಧಾಕೃಷ್ಣ, ಸಂದೇಶ್ ಕುಮಾರ್ ಹಾಗೂ ಸ್ಥಳೀಯ ಪ್ರಮುಖರರಾದ ಸಚ್ಚೀಂದ್ರ ಅಂಬಾಗಿಲು, ಕುಮಾರಿ ವೈಷ್ಣವಿ ನಾಯಕ್ ಸಹಿತ ಹಲವರ ಸಹಭಾಗಿತ್ವದಲ್ಲಿ ಸಮಾರಂಭ ಅರ್ಥಪೂರ್ಣವಾಗಿ ನೆರವೇರಿತು....
ಬೆಂಗಳೂರು: ಹಗರಣಗಳ ಆಗರವಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಈ ಬಾರಿಯಾದರೂ ಭ್ರಷ್ಟಾಚಾರ-ಮುಕ್ತ, ಸೂಕ್ತ ವ್ಯಕ್ತಿಯನ್ನು ಕುಲಪತಿಗಳನ್ನಾಗಿ ನೇಮಕ ಮಾಡುವಂತೆ 'ಸಿಟಿಜನ್ ರೈಟ್ಸ್ ಫೌಂಡೇಶನ್' ಸಿಎಂ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಲಹೆ ನೀಡಿದೆ. ಈ ಸಂಬಂಧ 'ಸಿಟಿಜನ್ ರೈಟ್ಸ್ ಫೌಂಡೇಷನ್' ಅಧ್ಯಕ್ಷ ಕೆ.ಎ.ಪಾಲ್ ಅವರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ ಪಾಟೀಲ್ ಹಾಗೂ ರಾಜ್ಯ ಸರ್ಕಾರದ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಬೆಳವಣಿಗೆ ಕುತೂಹಲ ಕೆರಳಿಸಿದೆ.
ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಒಂದಿಲ್ಲೊಂದು ಹಗರಣಗಳಿಂದಾಗಿ ದೇಶದಲ್ಲೇ ವಿವಾದದ ಕೇಂದ್ರ ಬಿಂದುವಾಗುತ್ತಿದೆ. ಹತ್ತಾರು ಅಕ್ರಮ ಆರೋಪಗಳು ಸುದ್ದಿಯಾಗುತ್ತಲೇ ಇವೆ. ವೈದ್ಯಕೀಯ ಕಾಲೇಜುಗಳ ಅಕ್ರಮ, ನರ್ಸಿಂಗ್ ಕಾಲೇಜ್ ಭ್ರಷ್ಟಾಚಾರ ಪ್ರಕರಣಗಳಿಂದಾಗಿ RGUHS ಪ್ರತಿಷ್ಠೆಗೆ ಧಕ್ಕೆ ಬಂದಿದೆ. ಹಾಗಾಗಿ ಭ್ರಷ್ಟಾತೀತ, ಸಮರ್ಥ ವ್ಯಕ್ತಿಯನ್ನು ಕುಲಪತಿಯನ್ನಾಗಿ ನೇಮಕ ಮಾಡಬೇಕೆಂದು ಕೆ...