Thursday, January 29

Focus

ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿರೋದು ಒಬ್ಬ ಕಳ್ಳ; ತಾನು ನಟನ ಮನೆಗೆ ನುಗ್ಗಿದ್ದು ಎಂದು ತಿಳಿದಿರಲಿಲ್ಲ

ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿರೋದು ಒಬ್ಬ ಕಳ್ಳ; ತಾನು ನಟನ ಮನೆಗೆ ನುಗ್ಗಿದ್ದು ಎಂದು ತಿಳಿದಿರಲಿಲ್ಲ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿದ ಘಟನೆಯನ್ನು ಬೇಧಿಸಿರುವ ಮುಂಬೈ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಡಿಸಿಪಿ ದೀಕ್ಷಿತ್‌ಕುಮಾರ್ ಅಶೋಕ್ ಗೆದಮ್ ಆರೋಪಿಯನ್ನು ಥಾಣೆಯ ಘೋಡ್‌ಬಂದರ್ ರಸ್ತೆಯಲ್ಲಿರುವ ಹಿರಾನಂದಾನಿ ಎಸ್ಟೇಟ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಆರೋಪಿ ಮೊಹಮ್ಮದ್ ಶರೀಫುಲ್ ಇಸ್ಲಾಂ ಶೆಹಜಾದ್ ಬಾಂಗ್ಲಾದೇಶದ ಪ್ರಜೆಯಾಗಿದ್ದಾನೆ. ಕಳ್ಳತನ ಸಂಬಂಧ ಆತ ಮನೆಯೊಳಗೆ ನುಗ್ಗಿದ್ದು, ಆತನಿಗೆ ತಾನು ನತಮ ಮನೆಯೊಳಗೆ ಪ್ರವೇಶಿಸಿದ್ದೇನೆ ಎಂಬುದು ಗೊತ್ತಿರಲಿಲ್ಲ ಎಂಬುದು ಪ್ರಾಥಮಿಕ ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಆರೋಪಿ ಬಾಂಗ್ಲಾದೇಶದವನಾಗಿದ್ದು, ಭಾರತ ಪ್ರವೇಶಿಸಿದ ನಂತರ ತನ್ನ ಹೆಸರನ್ನು ಬಿಜೋಯ್ ದಾಸ್ ಎಂದು ಬದಲಾಯಿಸಿಕೊಂಡಿದ್ದ ಸಂಗತಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದವರು ವಿವರಿಸಿದ್ದಾರೆ....
VIDEO : ಧರ್ಮಶಾಲಾದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಅವಘಡ

VIDEO : ಧರ್ಮಶಾಲಾದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಅವಘಡ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
Tragedy in Dharamshala: 19-year-old Mahima from Gujarat loses life in paragliding mishap #DNAUpdates | #Dharmshala | #paraglidinginhimachal | #himachalpradesh | #Dharmshala | #latestvideo | #viral | #viralvideo pic.twitter.com/UIzY5Mjq4P— DNA (@dna) January 19, 2025
ದೆಹಲಿಯಲ್ಲಿ ಉತ್ತಮ ಆಡಳಿತ ನೀಡುವುದು ಗುರಿ; ಕಾಂಗ್ರೆಸ್

ದೆಹಲಿಯಲ್ಲಿ ಉತ್ತಮ ಆಡಳಿತ ನೀಡುವುದು ಗುರಿ; ಕಾಂಗ್ರೆಸ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
,ಹುಬ್ಬಳ್ಳಿ: ದೆಹಲಿಯಲ್ಲಿ ಉತ್ತಮ ಆಡಳಿತ ನೀಡುವುದು ಕಾಂಗ್ರೆಸ್ ಗುರಿಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಪ್ರದೇಶ ಕಾಂಗ್ರೆಸ್ ನಾಯಕರ ಜೊತೆ ಸಭೆನಡೆಸಿದ ಬಳಿಕ ಸುದ್ದಿಗಾರರೊಙದಿಗೆ ಮಾತನಾಡಿದ ಅಚರು, ಇಂಡಿಯಾ ಮೈತ್ರಿಕೂಟದಿಂದ ಕಾಂಗ್ರೆಸ್ ಅನ್ನು ಹೊರಗಿಡುವ ಯತ್ನದ ಬಗ್ಗೆ ಪ್ರತಿಕ್ರಿಯಿಸಿದರು, “ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಹೋರಾಟ ಮಾಡುತ್ತಿವೆ. ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಶೀಲಾ ದೀಕ್ಷಿತ್ ಅವರ ನೇತೃತ್ವದಲ್ಲಿ 15 ವರ್ಷಗಳ ಕಾಲ ಅತ್ಯುತ್ತಮ ಆಡಳಿತ ನೀಡಿತ್ತು. ದೆಹಲಿಯಲ್ಲಿ ಸಾಧನೆ ಮಾಡಿದ್ದರೆ ಅದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ. ನಂತರ ದೆಹಲಿ ವಾಯು ಮಾಲೀನ್ಯ, ಕೊಳೆಗೇರಿ ಸೇರಿದಂತೆ ಅನೇಕ ಸಮಸ್ಯೆಗಳಿಂದ ತತ್ತರಿಸಿದೆ. ದೇಶದ ಎಲ್ಲಾ ಭಾಗಗಳಿಂದ ದೆಹಲಿಗೆ ಹೋಗುವ ಜನ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಅನಿವಾರ್ಯತೆ ಎದುರಾಗಿದೆ. ದೆಹಲಿಯಲ್ಲಿ ಉಸಿರಾಡುವುದು ಕಷ್ಟವಾಗಿದೆ. ಇದಕ್ಕೆ ಮೋದಿ ಅವರ ಸರ್ಕಾರ ಹಾಗೂ ಆಪ್ ಸರ್ಕಾರ ಪಾಲುದಾರರಾಗಿದ್ದು, ದೆಹಲಿಯ ಸಮಸ್ಯೆಗೆ ಕಾ...
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ: ಡಿಕೆಶಿ ಆಕ್ರೋಶ

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ: ಡಿಕೆಶಿ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷರೈ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಡಾ ಪ್ರಕರಣದಲ್ಲಿ ಇಡಿ ತನಿಖೆ ಕುರಿತು ಪ್ರತಿಕ್ರಿಯೆ ನೀಡಿದರು. "ಒಂದು ಪ್ರಕರಣ ಎಂದರೆ ಅದರ ತನಿಖೆ ಸುದೀರ್ಘ ಪ್ರಕ್ರಿಯೆಯಾಗಿದೆ. ಇಲ್ಲಿ ಅಕ್ರಮ ನಡೆದಿದೆಯೇ ಇಲ್ಲವೇ ಎಂದು ನ್ಯಾಯಾಲಯ ವಿಚಾರಣೆ ಮಾಡಬೇಕೆ ಹೊರತು, ನೀವು ನಾನು ವಿಚಾರಣೆ ಮಾಡುವಂತಹದಲ್ಲ. ನಾನು ಇಡಿ ತನಿಖೆ ನೋಡಿದ್ದೇನೆ. ಈ ಪ್ರಕರಣದ ಬಗ್ಗೆ ನಾನು ಹೆಚ್ಚಿಗೆ ಏನು ಹೇಳುವುದಿಲ್ಲ. ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ. ಮುಖ್ಯಮಂತ್ರಿಗಳಾಗಲಿ, ಅವರ ಧರ್ಮಪತ್ನಿ ಅವರಾಗಲಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ. ಈ ವಿಚಾರ ಬಿಟ್ಟು ರಾಜ್ಯದ ವಿಚಾರದ ಬಗ್ಗೆ ಗಮನಹರಿಸಿ" ಎಂದು ಶಿವಕುಮಾರ್ ತಿಳಿಸಿದರು....
ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ; ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ

ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ; ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: "ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧ ಗಾಂಧಿ ಪ್ರತಿಮೆ ಬಳಿ ಕಾರ್ಯಕ್ರಮ ನಡೆಯುವ ಸ್ಥಳ ಪರಿಶೀಲನೆ ನಡೆಸಿದ ಶಿವಕುಮಾರ್ ಅವರು ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. "ಇದು ಸರ್ಕಾರಿ ಕಾರ್ಯಕ್ರಮವಾಗಿದ್ದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಘನ ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷರು, ರಾಜ್ಯ ಸಭೆ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ" ಎಂದು ತಿಳಿಸಿದರು. "ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಹಾಗೂ ಪರಿಷತ್ತಿನ ಸಭಾಪತಿಗಳು ಭಾಗವಹಿಸಲಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮದ ನಂತರ ನೆನಪಿಗಾಗಿ ಎಲ್ಲಾ ಶಾಸಕರ ಗುಂಪು ಫೋಟೋ ತೆಗೆಯಲಾಗುವುದು. ನಂತರ ಅತಿಥಿ...
ಸಿಎಂ ಸ್ಥಾನಕ್ಕೆ ಅರ್ಹತೆ ಇದ್ದರೂ ಆಸೆ ಇಲ್ಲ: ರಾಮಲಿಂಗಾರೆಡ್ಡಿ

ಸಿಎಂ ಸ್ಥಾನಕ್ಕೆ ಅರ್ಹತೆ ಇದ್ದರೂ ಆಸೆ ಇಲ್ಲ: ರಾಮಲಿಂಗಾರೆಡ್ಡಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕಾಂಗ್ರೆಸ್ ಪಕ್ಷದಲ್ಲಿ ನನ್ನ ಅನುಭವ, ಸೇವೆ ಹಾಗೂ ಹಿರಿತನದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಎಲ್ಲಾ ರೀತಿಯ ಅರ್ಹತೆ ನನಗಿದೆ. ಆದರೆ ಆ ಸ್ಥಾನದ ಆಕಾಂಕ್ಷಿ ನಾನಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಪ್ರಬಲವಾಗಿದೆ. ಯಾವುದೇ ಸಮಸ್ಯೆಗಳನ್ನೂ ಸಮರ್ಥವಾಗಿ ನಿಭಾಯಿಸಲಿದೆ. ಪ್ರತಿಯೊಬ್ಬ ರಾಜಕಾರಣಿಗೂ ರಾಜಕೀಯದಲ್ಲಿ ಮೇಲ್ಮಟ್ಟದ ಹುದ್ದೆಗಳನ್ನು ಅಲಂಕರಿಸಬೇಕೆಂಬ ಆಕಾಂಕ್ಷೆ ಇರುತ್ತದೆ ಅದು ಸಹಜ. ಆದರೆ ಅದಕ್ಕೆ ಸಮಯ ಕೂಡಿಬರಬೇಕಿದೆ. ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನವೂ ಖಾಲಿ ಇಲ್ಲ, ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಖಾಲಿ ಇಲ್ಲ. ಹಾಗಾಗಿ ಆ ಸ್ಥಾನಗಳ ಬಗ್ಗೆ ಅಪೇಕ್ಷೆ ವ್ಯಕ್ತಪಡಿಸುವುದು ಸರಿಯಲ್ಲ. ನಮ್ಮ ಹೈಕಮಾಂಡ್ ಈ ವಿಷಯಗಳಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂದರು. ನಾನಂತೂ ಯಾವುದೇ ಹುದ್ದೆಯ ಆಕಾಂಕ್ಷಿ ಅಲ್ಲ. ಪಕ್ಷದ ವಿಚಾರದಲ್ಲಿ ಏನೇ ಇದ್ದರೂ ನಾಲ್ಕು ಗೋಡೆಗಳ ಮಧ್ಯೆ ಹೇಳಬೇಕು. ಏನಾದರೂ ಇದ್ದರೆ ಸುರ್ಜೆವಾಲಾ ಅವರಿಗೆ ಹೇಳಲಿ ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಬಿಜೆಪಿ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ...
ಯಾವ ಸಚಿವರಿಗೂ ನೋಟೀಸ್ ನೀಡಿಲ್ಲ; ಸುರ್ಜೇವಾಲ ಸ್ಪಷ್ಟನೆ

ಯಾವ ಸಚಿವರಿಗೂ ನೋಟೀಸ್ ನೀಡಿಲ್ಲ; ಸುರ್ಜೇವಾಲ ಸ್ಪಷ್ಟನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಳಗಾವಿ: ನಾಯಕತ್ವ ವಿಚಾರದಲ್ಲಿ ಮಾತನಾಡದಂತೆ ಸಚಿವ ಸತೀಶ ಜಾರಕಿಹೊಳಿ ಅವರಿಗೆ ನೋಟಿಸ್ ಕೊಟ್ಟಿಲ್ಲ ಎಂದು ಪ್ರದೇಶ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವ ಸತೀಶ ಜಾರಕಿಹೊಳಿ ಅವರಿಗೆ ನೋಟಿಸ್ ಕೊಟ್ಟಿದ್ದು ನನಗೆ ಗೊತ್ತಿಲ್ಲ ಎಂದರು. ಯಾವ ಸಚಿವರಿಗೂ ನೋಟೀಸ್ ನೀಡಿಲ್ಲ. ಸಚಿವರು ಅಥವಾ ವ್ಯಕ್ತಿಗೆ ಯಾವುದೇ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ ಎಂದು ಸುರ್ಜೇವಾಲ ಸ್ಪಷ್ಟಪಡಿಸಿದರು. ಬಿಜೆಪಿಯವರು ವದಂತಿ ಹರಡಿಸುತ್ತಿದ್ದಾರೆ. ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದವರು ಹೇಳಿದರು....
ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ: ನಾಗನಾಣ್ಯ ಲೂಟಿ

ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ: ನಾಗನಾಣ್ಯ ಲೂಟಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಬೀದರ್ ಎಟಿಎಂ ದರೋಡೆ ಪ್ರಕರಣ ಬೆನ್ನಲ್ಲೇ ಮಂಗಳೂರಿನಲ್ಲೂ ಅಂತಹುದೇ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ದುಷ್ಕರ್ಮಿಗಳು ಬರೊಬ್ಬರಿ 12 ಕೋಟಿ ರೂ ಮೌಲ್ಯದ ನಗದ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮಂಗಳೂರು ಹೊರವಲಯದ ಉಳ್ಳಾಲದ ಕೆ.ಸಿ.ರೋಡಿನಲ್ಲಿ ಶುಕ್ರವಾರ ಮಧ್ಯಾಹ್ನ ಬ್ಯಾಂಕಿಗೆ ನುಗ್ಗಿದ ಆರು ಜನರಿದ್ದ ದರೋಡೆಕೋರರ ತಂಡ ಸುಮಾರು 12 ಕೋಟಿ ರೂ ಮೌಲ್ಯದ ನಗ-ನಗದು ದೋಚಿ ಪರಾರಿಯಾಗಿದ್ದಾರೆ. ಕೋಟೆಕಾರು ಬ್ಯಾಂಕ್ ಕೆ.ಸಿರೋಡು ಶಾಖೆಗೆ ನುಗ್ಗಿ, ಪಿಸ್ತೂಲು ಮತ್ತು ಮಾರಕಾಸ್ತ್ರ ತೋರಿಸಿ ನಾಗ-ನಾಣ್ಯ ಲೂಟಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ಭೇಟಿ ಕೈಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸರು ಭದ್ರತೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಈ ದರೋಡೆ ನಡೆದಿದೆ ಎನ್ನಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರುಪರಿಶೀಲನೆ ನಡೆಸಿದ್ದಾರೆ....
ನಟ ಸೈಫ್ ಅಲಿ ಖಾನ್‌ ಕೊಲೆ ಯತ್ನ ಪ್ರಕರಣ; ಶಂಕಿತನ ಸೆರೆ

ನಟ ಸೈಫ್ ಅಲಿ ಖಾನ್‌ ಕೊಲೆ ಯತ್ನ ಪ್ರಕರಣ; ಶಂಕಿತನ ಸೆರೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ ಕೊಲೆ ಯತ್ನ ಪ್ರಕರಣದ ಆರೋಪಿಯನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ಮಧ್ಯರಾತ್ರಿ ಬಾಲಿವುಡ್ ನಟ ಸೈಫ್ ಅಲಿ ಖಾನ್‌ ಮನೆಗೆ ನುಗ್ಗಿದ್ದ ಅಪರಿಚಿತ ವ್ಯಕ್ತಿ ದಾಂಧಲೆ ನಡೆಸಿದ್ದ. ಕಳ್ಳತನಕ್ಕೆ ಯತ್ನಿಸಿದ್ದ ಆತ ಸೈಫ್ ಅಲಿ ಖಾನ್‌ ಅವರನ್ನು ಚೂರಿಯಿಂದ ಇರಿದಿದ್ದ. ಆರೋಪಿಯ ಪತ್ತೆಗೆ ಬಲೇ ಬೀಸಿದ್ದ ಬಾಂದ್ರಾ ಠಾಣೆಯ ಪೊಲೀಸರು, ಘಟನೆ ನಡೆದ ಸುಮಾರು 30 ಗಂಟೆಗಳಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. #BREAKING Police arrest attacker who assaulted #SaifAliKhan inside his home! Accused reportedly demanded ₹1 crore from Saif to spare his son Jeh from harm. Attacker clearly appears confident & unfazed by consequences. Investigations ongoing https://t.co/ykAyRsL1c2 pic.twitter.com/wqk4ywWvrq — Nabila Jamal (@nabilajamal_) January 17, 2025 ಈ ನಡುವೆ ಬಂಧಿತ ಆರೋಪಿಯೇ ದಾಳಿಕೋರನೆಂಬ ಮಾಹಿತಿ ಹಂಚಿಕೊಳ್ಳಲು ಪೊಲೀಸ...
ಬೆಂಗಳೂರಲ್ಲಿ ಅಮೆರಿಕ ರಾಯಭಾರ ಕಚೇರಿ; ಲಾಸ್ ಏಂಜಲೀಸ್‌ನಲ್ಲಿ ಭಾರತೀಯ ಧೂತಾವಾಸ ಕಚೇರಿ

ಬೆಂಗಳೂರಲ್ಲಿ ಅಮೆರಿಕ ರಾಯಭಾರ ಕಚೇರಿ; ಲಾಸ್ ಏಂಜಲೀಸ್‌ನಲ್ಲಿ ಭಾರತೀಯ ಧೂತಾವಾಸ ಕಚೇರಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಲಾಸ್ ಏಂಜಲೀಸ್‌ನಲ್ಲಿ ಶೀಘ್ರದಲ್ಲೇ ಭಾರತೀಯ ರಾಜತಾಂತ್ರಿಕ ಕಚೇರಿ ಆರಂಭವಾಗಲಿದೆ. ದೇಶಾಂಗ ಸಚಿವ ಎಸ್ ಜೈಶಂಕರ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಅಮೆರಿಕ ರಾಯಭಾರ ಕಚೇರಿಯನ್ನು ಉದ್ಘಾಟಿಸಿದ ಜೈಶಂಕರ್‌, ಅಮೆರಿಕದ ಈ ರಾಯಭಾರ ಕಚೇರಿ ಆರಂಭಗೊಂಡಿರುವುದರಿಂದ ಉಭಯ ದೇಶಗಳ ನಡುವಿನ ಸಂಬಂಧ ವೃದ್ಧಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಆರಂಭಿಸುವ ಬೇಡಿಕೆಯನ್ನು ಅವರು ಈಡೇರಿಸಿದ್ದು, ನಾವು ಕೂಡಾ ಶೀಘ್ರದಲ್ಲೇ ಲಾಸ್ ಏಂಜಲೀಸ್‌ನಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಯನ್ನು ಆರಂಭಿಸುತ್ತೇವೆ ಎಂದು ಜೈಶಂಕರ್ ಇದೇ ವೇಳೆ ತಿಳಿಸಿದರು. ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಅಮೆರಿಕ ಕಾನ್ಸುಲೇಟ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ. ಈ ಸಮಾರಂಭವನ್ನು ಆಯೋಜಿಸಿರುವ @USAmbIndia ಎರಿಕ್ ಗಾರ್ಸೆಟ್ಟಿ ಮತ್ತು ಅವರ ತಂಡಕ್ಕೆ ಅಭಿನಂದನೆಗಳು. ಭಾರತ-ಅಮೇರಿಕಾ ಸಹಕಾರವು, ಈ ಎರಡು ದೇಶಗಳ ಜನರ ದೃಢವಾದ ಸಂಬಂಧಗಳಿಂದ ಮುನ್ನಡಿಸಲ್ಪಟ್ಟಿದೆ. ಇದು ತಂತ್ರಜ್ಞಾನ,… pic.twitter.com/voz...