ಜಾತಿ ಜನಗಣತಿ: ಸಿಎಂ ಆತ್ಮಸಾಕ್ಷಿಗೆ ಪ್ರತಿಪಕ್ಷದ ಪ್ರಶ್ನೆಗಳ ಸವಾಲು
ಬೆಂಗಳೂರು: ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ನೆನಪಾಗುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕಾಗಲಿ ಅಥವಾ ವೈಯಕ್ತಿಕವಾಗಿ ನನಗಾಗಲಿ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ 'ಅಂತ್ಯೋದಯ'ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಪ್ರಾಮಾಣಿಕ ಪ್ರಯತ್ನಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದು ಆಶಾ ಟ್ವೀಟ್ ಮಾಡಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದಿರುವ ಅಶೋಕ್, ಮುಂಬರುವ ಸಚಿ...









