Tuesday, January 27

Focus

ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ಕಾಂಗ್ರೆಸ್ ತೀರ್ಮಾನ

ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ಕಾಂಗ್ರೆಸ್ ತೀರ್ಮಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ, ಈ ತಿಂಗಳ 21ರಂದು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ. ಇದರ ಜತೆಗೆ ಕೆಪಿಸಿಸಿ ಅಧ್ಯಕ್ಷರು, ಸಿಎಂ ಸೇರಿ ಚರ್ಚೆ ಮಾಡಿ ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ತೀರ್ಮಾನಿಸಿದ್ದಾರೆ. ಮುಂದಿನ ತಿಂಗಳು ಫೆಬ್ರವರಿ ತಿಂಗಳಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿ ಒಟ್ಟಿಗೆ ಈ ಎಲ್ಲಾ ಕಚೇರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು. ಈಗಾಗಲೇ 74 ಕಚೇರಿಗಳ ನಿರ್ಮಾಣದ ಜಾಗ ಗುರುತಿಸಲಾಗಿದ್ದು, ಉಳಿದ ಕಚೇರಿಗಳ ನಿರ್ಮಾಣದ ಬಗ್ಗೆ ಪಕ್ಷ ಶೀಘ್ರ ತೀರ್ಮಾನ ಮಾಡಲಿದೆ ಎಂದವರು ವಿವರಿಸಿದರು. ಇನ್ನು ಈ ವರ್ಷ ಪಕ್ಷದ ಸಂಘಟನೆಗೆ ಆದ್ಯತೆ ನೀಡಲಾಗಿದ್ದು, ಪಂಚಾಯ್ತಿ ಹಾಗೂ ವಾರ್ಡ್ ಮಟ್ಟದ ಸಮಿತಿಗಳನ್ನು ರಚಿಸಲು ಗಮನ ಹರಿಸಲಾಗುವುದ...
ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ. ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು ಎಂದರು. ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ಮಾಡಬೇಕಿತ್ತು. ಇಲ್ಲಿ ಪಶು ಆಸ್ಪತ್ರೆಯ ಜಾಗವಿದ್ದು, ಅದನ್ನು ವಕ್ಫ್‌ಗೆ ನೀಡಲು ಪ್ರಯತ್ನ ನಡೆ...
ಶ್ರೀನಗರ: 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗ ಪ್ರಧಾನಿ ಲೋಕಾರ್ಪಣೆ

ಶ್ರೀನಗರ: 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗ ಪ್ರಧಾನಿ ಲೋಕಾರ್ಪಣೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ್‌ನಲ್ಲಿ 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗʼವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಮತ್ತು ಜಿತೇಂದ್ರ ಸಿಂಗ್, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಇಂದು ಉದ್ಘಾಟಿಸಿದರು. #WATCH | Jammu & Kashmir: Prime Minister Narendra Modi inaugurates the Z-Morh tunnel in Sonamarg today. CM Omar Abdullah and LG Manoj Sinha, Union Minister Nitin Gadkari are also present. (Source: DD/ANI)#KashmirOnTheRise pic.twitter.com/GF7rwZaVn1 — ANI (@ANI) January 13, 2025 ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯಲ್ಲಿ ಈ ಸುರಂಗ ಮಾರ್ಗವು ಹಿಮಕುಸಿತ, ಭೂಕುಸಿತದಂತಹ ಎಲ್ಲ ರೀತಿಯ ಹವಾಮಾನ ವೈಪರೀತ್ಯದ ಸಂದರ್ಭದಲ್ಲಿಯೂ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ....
ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ ಎಂದ ಡಿಕೆಶಿ

ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ ಎಂದ ಡಿಕೆಶಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಿಚಾರವಾಗಿ ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕ್ರ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ವಿಚಾರವನ್ನು ನಾವು ಕೂಲಂಕುಶವಾಗಿ ಪರಿಶೀಲಿಸುತ್ತಿದ್ದು, ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಿಚಾರವಾಗಿ ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದರು ತಿಳಿಸಿದರು. ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಉಸ್ತುವಾರಿಗಳು ನೋಡಿಕೊಳ್ಳುತ್ತಾರೆ ಎಂದು ಡಿಕೆಶಿ ತಿಳಿಸಿದರು. ಸಚಿವರ ಕಾರ್ಯಗಳ ಬಗ್ಗೆ ವರದಿ ಸಲ್ಲಿಕೆ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ಸಚಿವರ ಕಾರ್ಯಗಳ ವಿಚಾರವಾಗಿ ಮುಖ್ಯಮಂತ್ರಿಗಳು ಹೈಕಮಾಂಡ್ ಗೆ ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಎಐಸಿಸಿ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು....
ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಸಿದ್ಧತೆ ; ಪಕ್ಷ ಸಂಘಟನೆ ಬಗ್ಗೆ ಡಿಕೆಶಿ ಚರ್ಚೆ

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಸಿದ್ಧತೆ ; ಪಕ್ಷ ಸಂಘಟನೆ ಬಗ್ಗೆ ಡಿಕೆಶಿ ಚರ್ಚೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಂಘಟನೆಗಾಗಿ ನಮ್ಮ ಪಕ್ಷ ಹಾಗೂ ಸರ್ಕಾರ ಇಡೀ ದಿನ ಮುಡಿಪಾಗಿಟ್ಟು ಸಭೆ ನಡೆಸಲಾಗಿದೆ. ಈ ವರ್ಷ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದು ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಭಾರತ ಜೋಡೋ ಭವನದಲ್ಲಿ ಪಕ್ಷದ ಶಾಸಕರು, ಸಚಿವರು, ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳ ಸಭೆ ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಶಿವಕುಮಾರ್, “ಬೆಳಗ್ಗೆ 12 ಗಂಟೆಗೆ ಶಾಸಕರು, ಮಂತ್ರಿಗಳು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಪ್ರಮುಖ ಘಟಕಗಳ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಭೆ ಮಾಡಿದ್ದೇವೆ. ಗಾಂಧಿ ಭಾರತದ ಕಾರ್ಯಕ್ರಮ ಅಂಗವಾಗಿ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ನಿರ್ಣಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ಮಾಡಲಾಗ...
‘ವಿಕಸಿತ ಭಾರತದಲ್ಲಿ ಮಹಿಳೆಯರ ಪಾತ್ರ’: ಚಿಂತನಶೀಲ ಯುವಜನರಲ್ಲಿ ಆಶಾವಾದ ಹೆಚ್ಚಿಸಿದ ವಿಚಾರ ಸಂಕಿರಣ

‘ವಿಕಸಿತ ಭಾರತದಲ್ಲಿ ಮಹಿಳೆಯರ ಪಾತ್ರ’: ಚಿಂತನಶೀಲ ಯುವಜನರಲ್ಲಿ ಆಶಾವಾದ ಹೆಚ್ಚಿಸಿದ ವಿಚಾರ ಸಂಕಿರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸದಾ ಒಂದಿಲ್ಲೊಂದು ಪ್ರಯೋಗಶೀಲ ಅಧ್ಯಯನದಿಂದ ಸುದ್ದಿಯ ಕೇಂದ್ರಬಿಂದುವಾಗುತ್ತಿರುವ ಬೆಂಗಳೂರಿನ 'ಅಲಯನ್ಸ್ ವಿಶ್ವವಿದ್ಯಾಲಯ'ದಲ್ಲಿ ನಡೆದ  'ವಿಕಸಿತ ಭಾರತದಲ್ಲಿ ಮಹಿಳೆಯರ ಪಾತ್ರ”ವಿಚಾರ ಸಂಕಿರಣ ಅರ್ಥಪೂರ್ಣ ಕಾರ್ಯಕ್ರಮವಾಗಿ ಗಮನಸೆಳೆಯಿತು.  ಅಲಯನ್ಸ್ ಮಹಿಳಾ ಸಬಲೀಕರಣ ಕೇಂದ್ರದ ವತಿಯಿಂದ  ಶನಿವಾರ ನಡೆದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಾಲತಿ ಕೃಷ್ಣಮೂರ್ತಿ ಹೊಳ್ಳ, ನಟಿ ಮೇಘನಾ ಗಾಂವ್ಕರ್  ಉದ್ಘಾಟಿಸಿದರು. ಚಿಂತನಶೀಲ ಯುವಜನ ಸಮೂಹವನ್ನುದ್ದೇಶಿಸಿ ಮಾತನಾಡಿದ ಮಾಲತಿ ಕೃಷ್ಣಮೂರ್ತಿ ಹೊಳ್ಳ, ಮುಂದಿನ ಗುರಿಯೊಂದಿಗೆ ಇಂದಿನ ಕನಸುಗಳನ್ನು ನನಸು ಮಾಡಬೇಕಾದ ಜವಬ್ದಾರಿ ಮಹಿಳೆಯರ ಮೇಲಿದೆ. ಈ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಮಹಿಳೆಯರು ಕೊಡುಗೆ ನೀಡಬೇಕು. ನೂನ್ಯತೆಗಳನ್ನು ಎದುರಿಸಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ. ತಮಗೆ ದೇಹದಲ್ಲಿ ವಿಕಲತೆಯಿರಬಹುದು ಆದರೆ ಆತ್ಮವಿಶ್ವಾಸ, ಗುರಿ ಸಾಧಿಸುವ ಛಲ, ಕನಸುಗಳಲ್ಲಿ ಯಾವುಏ ನ್ಯೂನತೆಯಿಲ್ಲ. ಇದರಿಂದಾಗಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು. ವಿಲೇಚೇರ್ ನನಗೆ ಸಿಂಹಾಸನದಂತಾಗಿದೆ...
ಲಾಸ್ ಏಂಜಲೀಸ್‌: ಭೀಕರ ಕಾಡ್ಗಿಚ್ಚಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆ

ಲಾಸ್ ಏಂಜಲೀಸ್‌: ಭೀಕರ ಕಾಡ್ಗಿಚ್ಚಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಲಾಸ್ ಏಂಜಲೀಸ್: ಲಾಸ್ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ. ಲಾಸ್ ಏಂಜಲೀಸ್ ಕೌಂಟಿಯಾದ್ಯಂತ ಕಾಡ್ಗಿಚ್ಚು ತೀವ್ರಸ್ವರೂಪ ಪಡೆದಿದ್ದು, ಅಮೆರಿಕದ ಅತ್ಯಂತ ಜನನಿಬಿಡ ಕೌಂಟಿಯ ಇತಿಹಾಸದಲ್ಲಿ ಅತ್ಯಂತ ಕರಾಳ ದುರಂತ ಇದಾಗಿದೆ. ಬೆಂಕಿಯು ಗುರುವಾರ ರಾತ್ರಿಯ ವೇಳೆಗೆ ಆರು ಪ್ರತಿಶತದಷ್ಟು ನಿಯಂತ್ರಣಕ್ಕೆ ಬಂದಿತ್ತು. ಸುಮಾರು 19,978 ಎಕರೆ (80.85 ಚದರ ಕಿಮೀ) ಅರಣ್ಯ ಭಸ್ಮವಾಗಿತ್ತು. ಆದರೆ ಅನಂತರ ಮತ್ತೆ ಉಲ್ಬಣಗೊಂಡು ಭಯಾನಕತೆಗೆ ಸಾಕ್ಷಿಯಾಯಿತು. ಇದುವರೆಗೆ 10,000 ಕ್ಕೂ ಹೆಚ್ಚು ಕಟ್ಟಡಗಳು ನಾಶವಾಗಿವೆಎಂದು ಅಂದಾಜಿಸಲಾಗಿದೆ. ಈ ಭೀಕರ ಕಾಡ್ಗಿಚ್ಚಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ....
ಪ್ರಯಾಗ್‌ರಾಜ್‌ ‘ಮಹಾಕುಂಭ 2025’: ಸಂಗಮ ತ್ರಿವೇಣಿಯಲ್ಲಿ ಭಕ್ತಸಾಗರ

ಪ್ರಯಾಗ್‌ರಾಜ್‌ ‘ಮಹಾಕುಂಭ 2025’: ಸಂಗಮ ತ್ರಿವೇಣಿಯಲ್ಲಿ ಭಕ್ತಸಾಗರ

Focus, Update Videos, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ಸೋಮವಾರ ಮಹಾಕುಂಭ 2025 ಗಮನಸೆಳೆದಿದೆ. ಪೌಷ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಭಕ್ತಕೋಟಿಯನ್ನು ಭವ್ಯ ಆಧ್ಯಾತ್ಮಿಕ ಕೈಂಕರ್ಯಕ್ಕೆ ಅದ್ದೂರಿ ಸ್ವಾಗತ ಸಿಕ್ಕಿದೆ. ಭಕ್ತರು, ಸಂತರು ಮತ್ತು ಕಲ್ಪವಾಸಿಗಳನ್ನು ಭವ್ಯ ಆಧ್ಯಾತ್ಮಿಕ ಸಭೆಗೆ ಸ್ವಾಗತಿಸುತ್ತಿರುವ ಸನ್ನಿವೇಶ ಗಮನಸೆಳೆದಿದೆ. ಮಹಾಕುಂಭವು ನಂಬಿಕೆ ಮತ್ತು ಆಧುನಿಕತೆಯ ಸಂಗಮ ಎಂದು ಸಾಧು ಸಂತರು ಸಂತಸ ವ್ಯಕ್ತಪಡಿಸಿದ್ದಾರೆ ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭೆ ಇದಾಗಿದ್ದು, ಈ ‘ಮಹಾಕುಂಭ’ ಪವಿತ್ರ ನಗರವಾದ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಅನುಭವಿಸಲು, ಧ್ಯಾನ ಮಾಡಲು ಮತ್ತು ನಂಬಿಕೆ ಮತ್ತು ಆಧುನಿಕತೆಯ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಬಂದಿರುವ ಸಂತರು, ಕಲ್ಪವಾಸಿಗಳು ಮತ್ತು ಭಕ್ತರ ಕೈಂಕರ್ಯ ಗಮನಸೆಳೆದಿದೆ. ಇದು 'ಸನಾತನ ಹೆಮ್ಮೆ-ಮಹಾ ಕುಂಭ ಉತ್ಸವ" ಎಂಬ ವಿಶ್ಲೇಷಣೆ ವ್ಯಕ್ತವಾಗಿದೆ. ಸಂಗಮ ತ್ರಿವೇಣಿಯಲ್ಲಿ ಪವಿತ್ರ ಸ್ನಾನ: ಮೊದಲ ಸ್ನಾನೋತ್ಸವವಾದ ಪೌಷ ಪೂರ್ಣಿಮೆಗೆ ಮುಂಚಿತವಾಗಿ ಭಾನುವಾರ ಸಂಗಮ ತ್ರಿವೇಣಿಯಲ್ಲಿ 50 ಲಕ್ಷಕ್ಕೂ ಹೆಚ್...
ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

Focus, Update Videos, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ಸೋಮವಾರ ಮಹಾಕುಂಭ 2025 ಪ್ರಾರಂಭವಾಗುತ್ತಿದ್ದಂತೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೌಷ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಭಕ್ತಕೋಟಿಯನ್ನು ಭವ್ಯ ಆಧ್ಯಾತ್ಮಿಕ ಸಭೆಗೆ ಸ್ವಾಗತಿಸಿದ್ದಾರೆ. ಭಕ್ತರು, ಸಂತರು ಮತ್ತು ಕಲ್ಪವಾಸಿಗಳನ್ನು ಭವ್ಯ ಆಧ್ಯಾತ್ಮಿಕ ಸಭೆಗೆ ಸ್ವಾಗತಿಸಿರುವ ಸಿಎಂ ಯೋಗಿ, ಮಹಾಕುಂಭ ಪ್ರತಿನಿಧಿಸುವ ನಂಬಿಕೆ ಮತ್ತು ಆಧುನಿಕತೆಯ ಸಂಗಮ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ 'X'ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, 'ಪೌಷ ಪೂರ್ಣಿಮೆಯ ಶುಭಾಶಯಗಳು. ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭೆ ‘ಮಹಾಕುಂಭ’ ಪವಿತ್ರ ನಗರವಾದ ಪ್ರಯಾಗ್‌ರಾಜ್‌ನಲ್ಲಿ ಪ್ರಾರಂಭವಾಗುತ್ತಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಅನುಭವಿಸಲು, ಧ್ಯಾನ ಮಾಡಲು ಮತ್ತು ನಂಬಿಕೆ ಮತ್ತು ಆಧುನಿಕತೆಯ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಬಂದಿರುವ ಎಲ್ಲಾ ಪೂಜ್ಯ ಸಂತರು, ಕಲ್ಪವಾಸಿಗಳು ಮತ್ತು ಭಕ್ತರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲಾಗುತ್ತದೆ. ಗಂಗಾ ಮಾತೆ ನಿಮ್ಮ ಎಲ್ಲಾ ಆಸೆಗಳನ್ನು ಈಡೇರಿಸಲಿ' ಎಂದಿದ್ದಾರೆ. 'ಸನ...
ಈ ಬಾರಿ ಚುನಾವಣಾ ಮೂಲಕ ಜೆಡಿಎಸ್‌ ರಾಜ್ಯಾಧ್ಯಕ್ಷರ ಆಯ್ಕೆ: ಹೆಚ್ಡಿಕೆ

ಈ ಬಾರಿ ಚುನಾವಣಾ ಮೂಲಕ ಜೆಡಿಎಸ್‌ ರಾಜ್ಯಾಧ್ಯಕ್ಷರ ಆಯ್ಕೆ: ಹೆಚ್ಡಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜಾತ್ಯತೀತ ಜನತಾ ದಳ (ಜೆಡಿಎಸ್‌) ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಎಪ್ರಿಲ್‌ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸಲಾಗುತ್ತದೆ ಎಂದು ಪಕ್ಷದ ರಾಜ್ಯಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕೇಂದ್ರ ಸಚಿವರೂ ಆದ ಕುಮಾರಸ್ವಾಮಿ, ಪಕ್ಷದ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ಚುನಾಯಿತ ಪ್ರತಿನಿಧಿಗಳು, ಮುಖಂಡರ ಸಭೆ ನಡೆಸಿದರು. ಈ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಎಪ್ರಿಲ್‌ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಕೈಗೊಳ್ಳಲಾಯಿತು. ಸಭೆಯ ನಂತರ ಈ ಕುರಿತಂತೆ ಎಚ್‌.ಡಿ. ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮೂಲಕ ಆಯ್ಕೆ ಮಾಡುವ ತೀರ್ಮಾನ ಆಗಿದೆ. ಆದರೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಅವರು ತಿಳಿಸಿದರು. ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆದಿದೆ. ಆದರೆ ಕುಮಾರಸ್ವಾಮಿ ಪುತ್ರನನ್ನೇ ಯಾಕೆ ಉನ್ನತ ಹುದ್ದೆಗೆ ಆಯ್ಕೆ ಮಾಡಬೇ...