Tuesday, January 27

Focus

ಕುಂಬಳೆ: ಗಂಟಲಲ್ಲಿ ಪಿಸ್ತಾದ ಸಿಪ್ಪೆ ಸಿಲುಕಿ ಮಗು ಸಾವು

ಕುಂಬಳೆ: ಗಂಟಲಲ್ಲಿ ಪಿಸ್ತಾದ ಸಿಪ್ಪೆ ಸಿಲುಕಿ ಮಗು ಸಾವು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕಾಸರಗೋಡು: ಮಗುವೊಂದು ತನ್ನ ಗಂಟಲಲ್ಲಿ ಪಿಸ್ತಾದ ಸಿಪ್ಪೆ ಸಿಲುಕಿದ್ದರಿಂದ ಸಾವನ್ನಪಿರುವ ಘಟನೆ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿ ನಡೆದಿದೆ. ಕುಂಬಳೆ ಭಾಸ್ಕರ ನಗರ ನಿವಾಸಿ ಅನ್ವರ್ ಎಂಬವರ ಪುತ್ರ ಅನಸ್ ಮೃತಪಟ್ಟ ಬಾಲಕ. ಈ ಎರಡು ವರ್ಷದ ಬಾಲಕ ಶನಿವಾರ ಪಿಸ್ತಾವನ್ನು ತಿನ್ನುತ್ತಿದ್ದಾಗ ಅದರ ಸಿಪ್ಪೆ ಗಂಟಲಲ್ಲಿ ಸಿಲುಕಿಡೇ ಎನ್ನಲಾಗಿದೆ. ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದು ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದರು. ವೈದ್ಯರ ತಪಾಸಣೆ ವೇಳೆ ಮಗುವಿನ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿರುವುದು ಕಂಡುಬರಲಿಲ್ಲ. ಹಾಗಾಗಿ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, ಭಾನುವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕೊಡಲಿಲ್ಲ. ಮಗುವಿನ ತಂದೆ ಅನ್ವರ್ ವಿದೇಶದಲ್ಲಿದ್ದು, ಇತ್ತೀಚೆಗಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದು, ರಜೆ ಮುಗಿಸಿ ಕೆಲ ದಿನಗಳ ಹಿಂದೆಷ್ಟೇ ವಿದೇಶಕ್ಕೆ ಮರಳಿದ್ದರು....
ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ದುರುಳರು; ಕಿಡಿಗೇಡಿಗಳ ಬಂಧನಕ್ಕೆ ಸಿಎಂ ಸೂಚನೆ

ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ದುರುಳರು; ಕಿಡಿಗೇಡಿಗಳ ಬಂಧನಕ್ಕೆ ಸಿಎಂ ಸೂಚನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಕಿಡುಗೇಡಿಗಳು ಮೂರು ಹಸುಗಳ ಕೆಚ್ಚಲು ಕತ್ತರಿಸಿರುವ ಕೃತ್ಯದಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಕೃತ್ಯವನ್ನು ಖಂಡಿಸಿರುವ ಪ್ರತಿಪಕ್ಷ ನಾಯಕರು ಹಾಗೂ ಹಿಂದೂ ಸಂಘಟನೆಗಳ ಮುಖಂಡರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಘಟನೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಜರುಗಿಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಆದೇಶಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರಿಗೆ ಸೂಚಿಸಿದ್ದೇನೆ. ಯಾರೇ ಕೃತ್ಯ ಎಸಗಿದ್ದರು ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಹಿಂದೂ ಸಂಘಟನೆಗಳು ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು....
ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಕ್ರಮ ವಹಿಸದಿದ್ದರೆ ಕರಾಳ ಸಂಕ್ರಾಂತಿ ‌ಆಚರಣೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ

ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಕ್ರಮ ವಹಿಸದಿದ್ದರೆ ಕರಾಳ ಸಂಕ್ರಾಂತಿ ‌ಆಚರಣೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸದಿದ್ದರೆ, ರಾಜ್ಯದಾದ್ಯಂತ ಕರಾಳ ಸಂಕ್ರಾಂತಿ ಆಚರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ. ಚಾಮರಾಜಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶ ಗೋವನ್ನು ಪವಿತ್ರ ಎಂದು ಪರಿಗಣಿಸಿದೆ. ಸಂಕ್ರಾಂತಿ ಹಬ್ಬದಲ್ಲೂ ಗೋವನ್ನು ಪೂಜಿಸಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಹೊಸ ವರ್ಷಕ್ಕೆ ಬೆಲೆ ಏರಿಕೆಯ ಕೊಡುಗೆ ನೀಡಿದೆ.‌ ಅದೇ ರೀತಿ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಸುವಿನ ಕೆಚ್ಚಲು ಕೊಯ್ದುಹಾಕುವ ಕೊಡುಗೆಯನ್ನು ನೀಡಿದೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಾನು ಈವರೆಗೆ ನೋಡಿಲ್ಲ ಎಂದರು. ನೂರಾರು ವರ್ಷಗಳಿಂದ ಚಾಮರಾಜಪೇಟೆಯಲ್ಲಿ ಪಶು ಆಸ್ಪತ್ರೆ ಇದೆ. ಈ ಭೂಮಿಯನ್ನು ವಕ್ಫ್ ಮಂಡಳಿಗೆ ಸೇರಿಸಲು ಪ್ರಯತ್ನ ನಡೆದಿತ್ತು. ಆಗ ಸರ್ಕಾರದ ವಿರುದ್ಧ ಪ್ರತಿಭಟಿಸುವುದರ ಜೊತೆಗೆ, ಕೋರ್ಟ್ ಮೊರೆ ಹೋಗಲಾಯಿತು. ಪ್ರತಿಭಟನೆಯ ಸಮಯದಲ್ಲಿ ಇವೇ ಹಸುಗಳನ್ನು ತೋರಿಸಲಾಗಿತ್ತು. ಅದಕ್ಕಾಗಿಯೇ ಮಚ್ಚು, ಡ್ರ್ಯಾಗರ್ ಬಳಸಿ ಹಸುಗಳ ಕೆಚ್ಚಲು ಕೊಯ್ದು, ಕಾಲು ಕತ್ತರಿಸಲಾಗಿದೆ ಎಂದು ಆಕ್ರೋಶ ವ...
ಡಿಕೆಶಿ ಅಂದರೆ ‘D (ಡ್ರಾಮ) K (ಕಿಂಗ್) ಶಿವಕುಮಾರ್..! ಶಾಸಕ ಸಿ.ಟಿ.ರವಿ ವ್ಯಂಗ್ಯ

ಡಿಕೆಶಿ ಅಂದರೆ ‘D (ಡ್ರಾಮ) K (ಕಿಂಗ್) ಶಿವಕುಮಾರ್..! ಶಾಸಕ ಸಿ.ಟಿ.ರವಿ ವ್ಯಂಗ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಉಪಮುಖ್ಯಮಂತ್ರಿಯಾಗಿ ಎಲ್ಲರ ಪರವಾಗಿ ನ್ಯಾಯಾಧೀಶರಾಗಿರಬೇಕಿರುವ ಡಿ.ಕೆ.ಶಿವಕುಮಾರ್ ಅವರು ದುರದೃಷ್ಟವಾಶಾತ್ ಯಾರದ್ದೋ ವಕೀಲರಾಗಿಬಿಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಬಣ್ಣಿಸಿದ್ದಾರೆ. ಡಿಕೆಶಿ ಅಂದರೆ 'ಡಿ (ಡ್ರಾಮ) ಕೆ (ಕಿಂಗ್) ಶಿವಕುಮಾರ್' ಎಂದು ಸಿ.ಟಿ.ರವಿ ಲೇವಡಿ ವ್ಯಂಗ್ಯವಾಡಿದ್ದಾರೆ. 'ನೀವು ಉಪಮುಖ್ಯಮಂತ್ರಿಗಳು ಎನ್ನುವುದನ್ನು ಮರೆತು ಬಿಟ್ಟಿದ್ದೀರಿ. ನೀವು ನ್ಯಾಯಾಧೀಶರ ಸ್ಥಾನದಲ್ಲಿ ಇದ್ದು, ಸತ್ಯಾಸತ್ಯತೆಯನ್ನು ವಿಚಾರ ಮಾಡಬೇಕಾದವರು ದುರದೃಷ್ಟವಾಶಾತ್ ಯಾರದ್ದೋ ವಕೀಲರಾಗಿಬಿಟ್ಟಿದ್ದೀರಿ. ಯಾರು ಮೋಹ ಮದ ಮಾತ್ಸರ್ಯಗಳಿಂದ ಹೊರಗಿದ್ದು ನೋಡುತ್ತಾರೋ ಅವರಿಗೆ ಸತ್ಯಾಸತ್ಯಾತೆ ಗೊತ್ತಾಗುತ್ತದೆ. ಮೋಹಪರವಶರಾದವರಿಗೆ, ಅಧಿಕಾರದ ಮದದಿಂದ ಕೂಡಿದವರಿಗೆ, ಮಾತ್ಸರ್ಯದ ರಾಜಕಾರಣ ಮಾಡುವವರಿಗೆ ಸತ್ಯ ಅರ್ಥ ಆಗಲಿಕ್ಕೆ ಸಾಧ್ಯವಿಲ್ಲ' ಎಂದು ಸಿ.ಟಿ.ರವಿ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಸಭಾಪತಿಗಳ ರೂಲಿಂಗ್ ನೀಡಿದ ನಂತರ ನೀವುಗಳು, ನಿಮ್ಮ ಪಕ್ಷದ ಶಾಸಕರು ನಡೆದುಕೊಂಡ ರೀತಿ ನಿಮಗುಚಿತವೇ? ಗೂoಡಾಗಳನ್ನೂ, ಜೊತೆಗಾರರನ್ನು ಎತ್ತ...
ಸ್ವಾಮಿ ವಿವೇಕಾನಂದರು ಯುವಕರಿಗೆ ಶಾಶ್ವತ ಸ್ಫೂರ್ತಿ; ಪ್ರಧಾನಿ ಮೋದಿ

ಸ್ವಾಮಿ ವಿವೇಕಾನಂದರು ಯುವಕರಿಗೆ ಶಾಶ್ವತ ಸ್ಫೂರ್ತಿ; ಪ್ರಧಾನಿ ಮೋದಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿ, ಅವರು ಯುವಕರಿಗೆ ಶಾಶ್ವತ ಸ್ಫೂರ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 'X' ನಲ್ಲಿ ಪೋಸ್ಟ್‌ ಹಾಕಿರುವ ನರೇಂದ್ರ ಮೋದಿ, 'ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತಾ. ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿದ್ದ ಅವರು ಯುವ ಮನಸ್ಸುಗಳಲ್ಲಿ ಉತ್ಸಾಹ ಮತ್ತು ಉದ್ದೇಶವನ್ನು ಬೆಳಗಿಸುತ್ತಲೇ ಇದ್ದಾರೆ. ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಅವರ ದೃಷ್ಟಿಕೋನವನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ' ಎಂದಿದ್ದಾರೆ. Paying homage to Swami Vivekananda on his Jayanti. An eternal inspiration for youth, he continues to ignite passion and purpose in young minds. We are committed to fulfilling his vision of a strong and developed India. pic.twitter.com/ldTPWCW1aM — Narendra Modi (@narendramodi) January 12, 2025 ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಎತ್ತಿ ತೋರಿಸುವ ವೀಡಿಯೊ ಕ್ಲಿಪ್ ಅನ್ನು ಸಹ ಪ್ರಧಾನಿ ಪೋಸ್ಟ್ ...
ಪ್ರಿಯಾಂಕ್ ಖರ್ಗೆ ಮಾತಿಗೆ ಬೆದರಿದರೆ ವಿಜಯೇಂದ್ರ? ಯತ್ನಾಳ್ ಹೇಳಿದ್ದೇನು?

ಪ್ರಿಯಾಂಕ್ ಖರ್ಗೆ ಮಾತಿಗೆ ಬೆದರಿದರೆ ವಿಜಯೇಂದ್ರ? ಯತ್ನಾಳ್ ಹೇಳಿದ್ದೇನು?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಅವರ ಬಂಡವಾಳ ಬಯಲು ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆದರಿಕೆ ಕಾರಣದಿಂದಾಗಿ ಬಿಜೆಪಿ ವಿಜಯೇಂದ್ರ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲು ಹಿಂದೇಟು ಹಾಕಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ವಿಜಯೇಂದ್ರ ವಿರುದ್ಧ ಶನಿವಾರ ಟೀಕಾಸ್ತ್ರ ಪ್ರಯೋಗಿಸಿದ ಯತ್ನಾಳ್, ಕಲಬುರಗಿಯಲ್ಲಿ ನನ್ನ‌ ವಿರುದ್ಧ ಪ್ರತಿಭಟನೆಗೆ ಬರಬೇಡಿ, ಬಂದರೆ ನಿಮ್ಮ ತಂದೆಯ ಬಂಡವಾಳ ಬಯಲು ಮಾಡುತ್ತೇನೆಂದು ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ್ದರು. ಇದೇ ಕಾರಣಕ್ಕಾಗಿ ವಿಜಯೇಂದ್ರ ಕಲಬುರಗಿಯಲ್ಲಿ ನಡೆದ ಪ್ರತಿಭಟನೆಗೆ ಹೋಗಿರಲಿಲ್ಲ ಎಂದರು. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ಹಿತೈಷಿಗಳೇ ಕಲಬುರಗಿಯಲ್ಲಿ ದೊಡ್ಡ ಮಟ್ಟದ ಹೋರಾಟ ಆಯೋಜಿಸಿದ್ದರು. ಆದರೂ ತಾನು ಹೋರಾಟಕ್ಕೆ ಏಕೆ ಹೋಗಲಿಲ್ಲ ಎಂದು ವಿಜಯೇಂದ್ರನೇ ಉತ್ತರಿಸಬೇಕು ಎಂದವರು ಹೇಳಿದರು....
ಅಂದು ‘ಪೇ ಸಿಎಂ ಸೇ ಸಿಎಂ’, ಇದೀಗ ‘ಹೇ ಸಿಎಂ ಸೇ ಸಿಎಂ’; ಸಿದ್ದು ಸರ್ಕಾರಕ್ಕೆ ಮುಜುಗರ ತಂದ CRF ದೂರು

ಅಂದು ‘ಪೇ ಸಿಎಂ ಸೇ ಸಿಎಂ’, ಇದೀಗ ‘ಹೇ ಸಿಎಂ ಸೇ ಸಿಎಂ’; ಸಿದ್ದು ಸರ್ಕಾರಕ್ಕೆ ಮುಜುಗರ ತಂದ CRF ದೂರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕೆಐಎಡಿಬಿ ಕರ್ಮಕಾಂಡ; ಬಾಳಪ್ಪ ಹಂದಿಗುಂದ ವಿರುದ್ಧ ತನಿಖೆಗೆ ನಿರ್ದೇಶನ ಕೋರಿ ರಾಜ್ಯಪಾಲರಿಗೆ ದೂರು..  ಸಿದ್ದು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಸಿಟಿಜನ್ ರೈಟ್ಸ್ ಫೌಂಡೇಶನ್ ದೂರು.. ಹಂದಿಗುಂದ ಎತ್ತಂಗಡಿಗೆ ಆಗ್ರಹ.. ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ 'ಪೇ ಸಿಎಂ ಸೇ ಸಿಎಂ' ಘೋಷಣೆ ಮೂಲಕ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಮೆಗಾ ಅಭಿಯಾನ ಕೈಗೊಂಡು ಆಡಳಿತಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ 'ಹಂದಿಗುಂದ ಪ್ರಕರಣ' ಸವಾಲಾಗಿ ಪರಿಣಮಿಸಿದೆ. ಭ್ರಷ್ಟಾಚಾರ ವಿರುದ್ಧ ದೇಶವ್ಯಾಪಿ ಕಾನೂನು ಹೋರಾಟ ನಡೆಸುತ್ತಿರುವ 'ಸಿಟಿಜನ್ ರೈಟ್ಸ್ ಫೌಂಡೇಶನ್' ಕೆಎಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ದದ ಭ್ರಷ್ಟಾಚಾರ ಆರೋಪದಲ್ಲಿ ಸಿದ್ದರಾಮಯ್ಯ ಸರ್ಕಾರದ ಲೋಪವನ್ನೇ ಎತ್ತಿ ಹಿಡಿದಿದೆ. ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿ KIADB ಕರ್ಮಕಾಂಡದ ತನಿಖೆಗೆ ರೋಚಕತೆ ತುಂಬಿದೆ. ಕೆಐಎಡಿಬಿಯಲ್ಲಿ ಪ್ರಸ್ತುತ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿರುವ KAS ಅಧಿಕಾರಿ ಬಾಲಪ್ಪ ಹಂದಿಗುಂದ ವಿರುದ್ಧ ಬೆಂಗಳೂರಿನ ದೇವನಹಳ್ಳಿ ಸುತ್ತಮುತ್ತ ಅಕ್ರಮವಾಗಿ ಭೂಸ್ವಾಧೀನ...
ಸಿ.ಟಿ.ರವಿಗೆ ಬೆದರಿಕೆ ಪತ್ರ; ಬೆದರಿಸುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದ ಬಿಜೆಪಿ ಸಾರಥಿ

ಸಿ.ಟಿ.ರವಿಗೆ ಬೆದರಿಕೆ ಪತ್ರ; ಬೆದರಿಸುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದ ಬಿಜೆಪಿ ಸಾರಥಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪ್ರತಿಪಕ್ಷ ಶಾಸಕರಿಗೆ ಬೆದರಿಕೆಗಳು ಎದುರರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ಬಿಜೆಪಿ ಶಾಸಕರಿಗೆ ಆತಂಕವಾಗಿ ಕಾಡುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ. ಸಿ.ಟಿ.ರವಿ ಅವರಿಗೆ ರವಾನೆಯಾಗಿರುವ ಬೆದರಿಕೆ ಪತ್ರದ ಪ್ರತಿಯನ್ನು ಸಾಮಾಜಿಕ ಜಾಲತಾಣ 'X;ನಲ್ಲಿ ಟ್ಯಾಗ್ ಮಾಡಿ ಪೋಸ್ಟ್ ಹಾಕಿರುವ ಬಿ.ವೈ.ವಿಜಯೇಂದ್ರ, ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ ಎಂದಿದ್ದಾರೆ. ಸಿ.ಟಿ.ರವಿ ಅವರನ್ನು ಗುರ...
ಹಾರರ್ ‘ರಾಕ್ಷಸ’ದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಅವತಾರ; ಏಕಕಾಲದಲ್ಲಿ ಕನ್ನಡ, ತೆಲುಗಿನಲ್ಲಿ ಅನಾವರಣ

ಹಾರರ್ ‘ರಾಕ್ಷಸ’ದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಅವತಾರ; ಏಕಕಾಲದಲ್ಲಿ ಕನ್ನಡ, ತೆಲುಗಿನಲ್ಲಿ ಅನಾವರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನಟ ಪ್ರಜ್ವಲ್ ದೇವರಾಜ್ ಅಭಿನಯದ 'ರಾಕ್ಷಸ' ಚಿತ್ರವು ಶಿವರಾತ್ರಿಯ ಸಂದರ್ಭದಲ್ಲಿ ಕನ್ನಡದ ಜೊತೆಗೆ ತೆಲುಗು ಆವೃತ್ತಿಯೂ ಬಿಡುಗಡೆಯಾಗಲಿದೆ. https://www.youtube.com/watch?v=L5A3GrRMypA ಫೆಬ್ರುವರಿ 26 ರಂದು ಕನ್ನಡದ ಜೊತೆಗೆ ತೆಲುಗು ಆವೃತ್ತಿಯನ್ನೂ ಬಿಡುಗಡೆ ಮಾಡಲಾಗುತ್ತದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ವಿತರಕ ಎಂವಿಆರ್ ಕೃಷ್ಣ ಅವರು ಆಂಧ್ರ ಪ್ರದೇಶದಲ್ಲಿ ಈ ಸಿನಿಮಾ ವಿತರಣೆಗೆ ಮುಂದಾಗಿದ್ದಾರೆ. ಹಾರರ್ ಚಿತ್ರ 'ರಾಕ್ಷಸ'ದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ನವೀನ್ ಗೌಡ, ದೀಪು, ಮತ್ತು ಮಾನಸ ನಿರ್ಮಿಸಿರುವ ಈ ಚಿತ್ರದಲ್ಲಿ ಶ್ರೀಧರ್, ಅರುಣ್ ರಾಥೋಡ, ಗೌತಮ್, ಸೋಮಶೇಖರ್ ಸಹಿತ ಹಲವರ ಅಭಿನಯ ಗಮನಸೆಳೆದಿದೆ....
ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಬಿಜೆಪಿ ಎಚ್ಚರಿಕೆ

ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಬಿಜೆಪಿ ಎಚ್ಚರಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದರೂ ಅತ್ತ ಗಮನ ಹರಿಸದ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಇನ್ನು 24 ಗಂಟೆಯೊಳಗೆ ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು, ಖರೀದಿ ಆರಂಭಿಸದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿನ್ನರ್ ಸಭೆಗಳು, ಔತಣಕೂಟಗಳು, ರಾಜಕೀಯ ಮೇಲಾಟಗಳಲ್ಲೇ ನಿರತರಾಗಿದ್ದಾರೆ. ಈ ಕೆಲಸಗಳು ಮುಗಿದಿದ್ದರೆ ಸ್ವಲ್ಪ ರೈತರ ಸಮಸ್ಯೆಗಳತ್ತ ಗಮನ ಹರಿಸುವ ದೊಡ್ಡ ಮನಸ್ಸು ಮಾಡಬೇಕು. ಬಿಡುವು ಇಲ್ಲದಿದ್ದರೆ ಕನಿಷ್ಠ ಪಕ್ಷ ಕೃಷಿ ಸಚಿವ ಎನ್.ಚಲುವರ...