Tuesday, January 27

Focus

ಆಘಾತಕಾರಿ ಮಿದುಳು ಹಾನಿಯಿಂದ ಮಹಿಳೆಯರಿಗಿಂತ ಮೂರು ಪಟ್ಟು ಪುರುಷರ ಸಾವು

ಆಘಾತಕಾರಿ ಮಿದುಳು ಹಾನಿಯಿಂದ ಮಹಿಳೆಯರಿಗಿಂತ ಮೂರು ಪಟ್ಟು ಪುರುಷರ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ವೈವಿಧ್ಯ
ನವದೆಹಲಿ: ಆಘಾತಕಾರಿ ಮಿದುಳಿನ ಗಾಯದಿಂದ (TBI) ಪುರುಷರು ಮಹಿಳೆಯರಿಗಿಂತ ಮೂರು ಪಟ್ಟು ಹೆಚ್ಚು ಸಾಯುತ್ತಾರೆ ಎಂಬ ಕಹಿ ಸತ್ಯವೊಂದು ಅಧ್ಯಯನವೊಂದರಲ್ಲಿ ಬೆಳಕಿಗೆ ಬಂದಿದೆ. 2021 ರಲ್ಲಿ US ಮರಣ ದತ್ತಾಂಶವನ್ನು ಆಧರಿಸಿದ ಅಧ್ಯಯನವು ವಯಸ್ಸಾದ ವಯಸ್ಕರು, ಪುರುಷರು ಮತ್ತು ಕೆಲವು ಜನಾಂಗೀಯ ಮತ್ತು ಜನಾಂಗೀಯ ಗುಂಪುಗಳ ಮೇಲೆ ಆಘಾತಕಾರಿ ಮಿದುಳಿನ ಗಾಯಗಳ (TBI) ಅಸಮಾನ ಪರಿಣಾಮವನ್ನು ಬಹಿರಂಗಪಡಿಸಿದೆ. ಪೀರ್-ರಿವ್ಯೂಡ್ ಜರ್ನಲ್ ಬ್ರೈನ್ ಇಂಜುರಿಯಲ್ಲಿ ಪ್ರಕಟವಾದ ಸಂಶೋಧನೆಗಳು, ಆತ್ಮಹತ್ಯೆಗಳು ಟಿಬಿಐ-ಸಂಬಂಧಿತ ಸಾವುಗಳಿಗೆ ಸಾಮಾನ್ಯ ಕಾರಣವಾಗಿ ಉಳಿದಿವೆ ಎಂದು ಸೂಚಿಸುತ್ತವೆ. ಇದರ ನಂತರ ಉದ್ದೇಶಪೂರ್ವಕವಲ್ಲದ ಬೀಳುವಿಕೆಗಳು ಸಂಭವಿಸಿದವು ಮತ್ತು ನಿರ್ದಿಷ್ಟ ಗುಂಪುಗಳು ಈ ದುರಂತಗಳಿಂದ ಅಸಮಾನವಾಗಿ ಪರಿಣಾಮ ಬೀರುತ್ತವೆ ಎಂದು ಸಂಶೋಧಕರು ತಿಳಿಸಿದ್ದಾರೆ. ಪುರುಷರು ಟಿಬಿಐನಿಂದ ಸಾಯುವ ಸಾಧ್ಯತೆ ಹೆಚ್ಚು ಎಂದು ಕಂಡುಬಂದಿದೆ - ಮಹಿಳೆಯರ ದರಕ್ಕಿಂತ ಮೂರು ಪಟ್ಟು ಹೆಚ್ಚು (30.5 vs 9.4). ಪುರುಷರ ಜೊತೆಗೆ, ವಯಸ್ಸಾದ ವಯಸ್ಕರು ವಿಶೇಷವಾಗಿ ಅಪಾಯದಲ್ಲಿದ್ದಾರೆ, ಉದ್ದೇಶಪೂರ್ವಕವಲ್ಲದ ಬೀಳುವಿಕೆಗ...
ಕಾರು ಬಗ್ಗೆ ಹೆಚ್ಡಿಕೆ ತಕರಾರು? ಕಾಂಗ್ರೆಸ್ ನಾಯಕ ರಮೇಶ್ ಬಾಬು ಟೀಕೆ

ಕಾರು ಬಗ್ಗೆ ಹೆಚ್ಡಿಕೆ ತಕರಾರು? ಕಾಂಗ್ರೆಸ್ ನಾಯಕ ರಮೇಶ್ ಬಾಬು ಟೀಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರಾದ ಬೃಹತ್ ಕೈಗಾರಿಕಾ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿರವರು ಕರ್ನಾಟಕ ರಾಜ್ಯ ಸರ್ಕಾರ ತಮಗೆ ಶಿಷ್ಟಾಚಾರಕ್ಕೆ ಅನುಗುಣವಾಗಿ ನಿಗದಿತ ಸಮಯದಲ್ಲಿ ಹೊಸ ಕಾರನ್ನು ನೀಡಲಿಲ್ಲ ಎಂದು ಆರೋಪಿಸಿರುತ್ತಾರೆ. ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದು ಆರು ತಿಂಗಳು ಕಳೆದರೂ ಇಲ್ಲಿಯವರೆಗೆ ರಾಜ್ಯದ ಅಭಿವೃದ್ಧಿಗೆ ಇವರು ನೀಡಿರುವ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ವಿಷಯಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಅಪೇಕ್ಷೆಯಂತೆ ಹೊಸ ಟೊಯೋಟಾ ಇನ್ನೋವಾ ಹೈಕ್ರಾಸ್ ವಾಹನ ಹಂಚಿಕೆ ಆಗಿದೆ. ಮಂಡ್ಯ ಜಿಲ್ಲಾಧಿಕಾರಿಗಳು ಹೊಸ ಕಾರನ್ನು ಪಡೆಯಲು ಕೇಂದ್ರ ಸಚಿವರನ್ನು ಕೋರಿದ್ದು, ಧನುರ್ಮಾಸದ ಕಾರಣ ನೀಡಿ ಸಂಕ್ರಾಂತಿ ನಂತರ ಹೊಸ ಕಾರು ಪಡೆಯುವುದಾಗಿ ತಿಳಿಸಿರುತ್ತಾರೆ. ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 04-11-2024 ರಲ...
ವರ್ಕೌಟ್ ಎಡವಟ್ಟು; ನಟಿ ರಶ್ಮಿಕಾಗೆ ಗಾಯ; ‘ಸಿಖಂದರ್’ನಿಂದಲೂ ದೂರ

ವರ್ಕೌಟ್ ಎಡವಟ್ಟು; ನಟಿ ರಶ್ಮಿಕಾಗೆ ಗಾಯ; ‘ಸಿಖಂದರ್’ನಿಂದಲೂ ದೂರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ನಟಿ ರಶ್ಮಿಕಾ ಮಂದಣ್ಣ ಅವರು ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸಲ್ಮಾನ್‌ ಖಾನ್‌ ನಟನೆಯ ಸಿಖಂದರ್‌ ಸಿನಿಮಾದ ಶೂಟಿಂಗ್‌ಗೆ ತಯಾರಿ ನಡೆಸುವ ನಡುವೆ ಜಿಮ್‌ನಲ್ಲಿ ಭಾಗಿಯಾಗಿದ್ದರು. ಆ ಸಂದರ್ಭದಲ್ಲಿ ಎಡವಟ್ಟಾಗಿ ನಟಿಗೆ ಗಾಯಗಳಾಗಿವೆ ಎನ್ನಲಾಗಿದೆ. ಆದರೆ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ನಟಿ ರಶ್ಮಿಕಾ ಅವರಿಗೆ ಕೆಲ ದಿನಗಳವರೆಗೆ ವಿಶ್ರಾಂತಿ ಅಗತ್ಯವಿದ್ದು, 'ಸಿಖಂದರ್' ಚಿತ್ರದ ಶೂಟಿಂಗ್'ನಿಂದಲೂ ಅವರು ದೂರ ಉಳಿಯಬೇಕಿದೆ ಎಂದು ಆಪ್ತ ಮೂಲಗಳು ತಿಳಿಸಿವೆ....
‘ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್.. ಏಪ್ರಿಲ್‌ನಿಂದ ವೇತನ ಹೆಚ್ಚಳ.. ಸಿಎಂ ಭರವಸೆ ನಂತರ ಧರಣಿ ಅಂತ್ಯ

‘ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್.. ಏಪ್ರಿಲ್‌ನಿಂದ ವೇತನ ಹೆಚ್ಚಳ.. ಸಿಎಂ ಭರವಸೆ ನಂತರ ಧರಣಿ ಅಂತ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ಅನಿರ್ಧಿಷ್ಟಾವಧಿ ಧರಣಿ ಅಂತ್ಯಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರ ಭರವಸೆ ಹಿನ್ನೆಲೆಯಲ್ಲಿ ಹೋರಾಟವನ್ನು ಅಂತ್ಯಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (AIUTUC) ಅಧ್ಯಕ್ಷ ಕೆ. ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಮಧ್ಯಪ್ರವೇಶದಲ್ಲಿ 10,000 ‌ಮಾಸಿಕ ಗೌರವ ಧನ ನಿಗದಿ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆ ಭರವಸೆಯು ಆಶಾಗಳ ಅನಿರ್ದಿಷ್ಟಾವಧಿ ಹೋರಾಟಕ್ಕೆ ದೊರೆತ ಅಭೂತಪೂರ್ವ ಯಶಸ್ಸು ಎಂದವರು ಹೇಳಿದ್ದಾರೆ. ಮಾಸಿಕ ರೂ.10,000 ನಿಶ್ಚಿತ ಗೌರವಧನದ ಜೊತೆಗೆ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಪ್ರೋತ್ಸಾಹಧನ ದೊರೆಯುವ ಖಾತ್ರಿ, ನಿವೃತ್ತಿ ಪರಿಹಾರ ನೀಡುವ ಕುರಿತು ಮುಂದಿನ ದಿನಗಳಲ್ಲಿ ಪರಿಶೀಲನೆ, ಗಂಭೀರ ಕಾಯಿಲೆಗಳಿಗೆ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ದಾಖಲಾದ ಸಂದರ್ಭದಲ್ಲಿ ಮೂರು ತಿಂಗಳ ವೇತನ ಸಹಿತ ರಜೆ ಕುರಿತು ಪರಿಶೀಲನೆ ಸಹಿ...
ತಮಿಳುನಾಡಿನಲ್ಲಿ ಓಂಶಕ್ತಿ ಭಕ್ತರಿದ್ದ ಬಸ್ ಹಾಗೂ ಕ್ಯಾಂಟರ್ ಡಿಕ್ಕಿ; ಕೋಲಾರ ಮೂಲದ ನಾಲ್ವರ ಸಾವು

ತಮಿಳುನಾಡಿನಲ್ಲಿ ಓಂಶಕ್ತಿ ಭಕ್ತರಿದ್ದ ಬಸ್ ಹಾಗೂ ಕ್ಯಾಂಟರ್ ಡಿಕ್ಕಿ; ಕೋಲಾರ ಮೂಲದ ನಾಲ್ವರ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಚೆನ್ನೈ: ತಮಿಳುನಾಡಿನ ರಾಣಿಪೇಟೆ ಬಳಿ KSRTC ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು ಕೋಲಾರ ಮೂಲದವರು ಎನ್ನಲಾಗಿದೆ. ಬುಧವಾರ ರಾತ್ರಿ ಈ ಅಪಘಾತ ಸಂಭವಿಸಿದೆ. ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ ಸುಮಾರು 50 ಮಂದಿ ಕೆಎಸ್​ಆರ್​​ಟಿಸಿ ಬಸ್​ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ತೆರಳಿ ವಾಪಸಾಗುತ್ತಿದ್ದರು. ಮಾರ್ಗ ಮಧ್ಯೆ ತರಕಾರಿ ಸಾಗಿಸುತ್ತಿದ್ದ ಕ್ಯಾಂಟರ್ ಹಾಗೂ KSRTC ಬಸ್ ನಡುವೆ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಹಲವಾರು ಗಾಯಗೊಂಡಿದ್ದು ಅವರನ್ನು ವೇಲೂರು ಹಾಗೂ ರತ್ನಗಿರಿಯಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ಫ್ ಎಂದು ಮೂಲಗಳು ತಿಳಿಸಿವೆ....
ಕಾಂಗ್ರೆಸ್‌ನಲ್ಲಿ ಬಿರುಸಿನ ವಿದ್ಯಮಾನ; ಸೋಮವಾರ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ

ಕಾಂಗ್ರೆಸ್‌ನಲ್ಲಿ ಬಿರುಸಿನ ವಿದ್ಯಮಾನ; ಸೋಮವಾರ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪ್ರದೇಶ ಕಾಂಗ್ರೆಸ್ ಪಕ್ಷದಲ್ಲಿನ ಡಿನ್ನರ್ ಪಾರ್ಟಿ ಸಂಚಲನದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸೋಮವಾರ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ (ಸಿಎಲ್‌ಪಿ) ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದು ಪಕ್ಷದ ಎಲ್ಲಾ ಶಾಸಕರು, ಸಂಸದರಿಗೆ ಸೂಚನೆ ರವಾನಿಸಿದ್ದಾರೆ. ಜನವರಿ13ರಂದು ಸಂಜೆ 6ಕ್ಕೆ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಶಾಸಕಾಂಗ ಪಕ್ಷದ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ್‌ ಈ ಸೂಚನೆ ರವಾನಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ವಿಧಾನ ಪರಿಷತ್ತಿನ ಸಭಾನಾಯಕ ಎನ್‌.ಎಸ್‌. ಬೋಸರಾಜು ಜಾಗೂ ಪಕ್ಷದ ಎಲ್ಲ ಕಾರ್ಯಾಧ್ಯಕ್ಷರು ಈ ಸಿಎಲ್‌ಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪಕ್ಷದ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಲೋಕಸಭೆ- ರಾಜ್ಯಸಭೆಯ ಸದಸ್ಯರು ಹಾಗೂ ಬಾಹ್ಯ ಬೆಂಬಲಿತರು ಈ ಸಭೆಯಲ್ಲಿ ಭಾಗವಹಿಸುವಂತೆ ಅವರು ಆಹ್ವಾನ ನೀಡಿದ್ದಾರೆ.....
ಜ. 21ರಂದು ಬೆಳಗಾವಿ ಸುವರ್ಣಸೌಧದ ಗಾಂಧಿ ಪ್ರತಿಮೆ ಅನಾವರಣ; ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ

ಜ. 21ರಂದು ಬೆಳಗಾವಿ ಸುವರ್ಣಸೌಧದ ಗಾಂಧಿ ಪ್ರತಿಮೆ ಅನಾವರಣ; ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜ .21 ರಂದು ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವರಾದ ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ನೆಲಮಂಗಲ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಸ್.ರವಿ ಉಪಸ್ಥಿತಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಡಿ.ಕೆ. ಶಿವಕುಮಾರ್, ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ ಆರಂಭಿಸಿದ್ದು, ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸಂಬರ್ 26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಅಂದು ಸಂಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನರಾದ ಹಿನ್ನೆಲೆಯಲ್ಲಿ ಮರುದಿನದ ಕಾರ್ಯಕ್ರಮಗಳನ್ನು ...
ತಿರುಪತಿ: ಕಾಲ್ತುಳಿತದಲ್ಲಿ 6 ಮಂದಿ ಸಾವು; ಹಲವರಿಗೆ ಗಾಯ

ತಿರುಪತಿ: ಕಾಲ್ತುಳಿತದಲ್ಲಿ 6 ಮಂದಿ ಸಾವು; ಹಲವರಿಗೆ ಗಾಯ

Focus, ದೇಶ-ವಿದೇಶ
ತಿರುಪತಿ: ದಕ್ಷಿಣ ಭಾರತದ ಪುರಾಣ ಪ್ರಸಿದ್ಧ ದೇಗುಲ ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 6 ಮಂದಿ ಸಾವನಪ್ಪಿದ್ದಾರೆ. ಜನವರಿ 10 ರಂದು ವೈಕುಂಠ ಏಕಾದಶಿ ಹಿನ್ನಲೆಯಲ್ಲಿ ತಿರುಪತಿ ಕ್ಷೇತ್ರದಲ್ಲಿ ವಿಶೇಷ ಮಹೋತ್ಸವ ಏರ್ಪಾಡಾಗಿದೆ. ಭಕ್ತಾದಿಗಳು ತಿರುಪತಿಯ ವೈಕುಂಠ ದ್ವಾರ ದರ್ಶನದಕ್ಕಾಗಿ ಟಿಕೆಟ್‌ ತೆಗೆದುಕೊಳ್ಳುವ ವೇಳೆ ಕಾಲ್ತುಳಿತ ಸಂಭವಿಸಿದೆ. ಬುಧವಾರ ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್‌ ತೆಗೆದುಕೊಳ್ಳುವ ಸಂಬಂಧ ಭಾರೀ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಆ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ 6 ಮಂದಿ ಸಾವನಪ್ಪಿದ್ದು, ಹಲವಾರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ಅಧ್ಯಕ್ಷ ಬಿಆರ್ ನಾಯ್ಡು, ಗೇಟ್‌ಗಳನ್ನು ತೆರೆದ ತಕ್ಷಣ ಎಲ್ಲರೂ ಮುನ್ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿತು ಎಂದು ಎಂದು ತಿಳಿಸಿದ್ದಾರೆ....
ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳುವ ನಕ್ಸಲರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲನೆ; ಸಿಎಂ

ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳುವ ನಕ್ಸಲರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲನೆ; ಸಿಎಂ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಿಂಸಾಮಾರ್ಗವನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಕೊಳ್ಳಲು ನಿರ್ಧರಿಸಿರುವ ನಕ್ಸಲ್ ಚಳುವಳಿಗಾರರನ್ನು ಸ್ವಾಗತಿಸುತ್ತೇನೆ. ಇವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡಲಿದೆ. ಇವರ ವಿರುದ್ದದ ಪ್ರಕರಣಗಳ ಶೀಘ್ರ ಇತ್ಯರ್ಥ್ಕಕ್ಕೆ ಅಗತ್ಯವಾದ ಕ್ರಮಗಳನ್ನೂ ನಮ್ಮ ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅನ್ಯಾಯ-ಶೋಷಣೆ ವಿರುದ್ದದ ಪ್ರಜಾಸತ್ತಾತ್ಮಕವಾಗಿ ನಡೆಸುವ ಹೋರಾಟವನ್ನು ನಾನು ಸದಾ ಗೌರವಿಸುತ್ತಾ ಬಂದವನು. ನಮ್ಮ ಸಂವಿಧಾನದಲ್ಲಿಯೂ ಇದಕ್ಕೆ ಅವಕಾಶ ಇದೆ. ಕಾಡಿನಲ್ಲಿದ್ದುಕೊಂಡು ಶಸ್ತ್ರಾಸ್ತ್ರಗಳ ಮೂಲಕ ಹೋರಾಟ ನಡೆಸುತ್ತಿದ್ದ ನಕ್ಸಲರು ಮನವೊಲಿಸಿ ಅವರನ್ನು ನಾಡಿಗೆ ಕರೆದು ತರುವ ಪ್ರಯತ್ನವನ್ನು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿಯೇ ನಮ್ಮ ಸರ್ಕಾರ ಪ್ರಾರಂಭಿಸಿತ್ತು. ಕಳೆದ ಅವಧಿಯಲ್ಲಿ ಹನ್ನೆರಡು ಮಂದಿ ನಕ್ಸಲರು ಶರಣಾಗಿ ಬಂದು ಮುಖ್ಯವಾಹಿನಿ ಸೇರಿಕೊಂಡಿದ್ದರು. ಇದೀಗ ಆರು ಮಂದಿ ನಕ್ಸಲರು ಬಂದಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಶರಣಾಗ...
ದೇವಸ್ಥಾನಗಳಲ್ಲಿ ವಿಐಪಿ ‘ದರ್ಶನ’ದ ಕಲ್ಪನೆ ತ್ಯಜಿಸಬೇಕು; ಉಪರಾಷ್ಟ್ರಪತಿ

ದೇವಸ್ಥಾನಗಳಲ್ಲಿ ವಿಐಪಿ ‘ದರ್ಶನ’ದ ಕಲ್ಪನೆ ತ್ಯಜಿಸಬೇಕು; ಉಪರಾಷ್ಟ್ರಪತಿ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಮಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗಿದೆ. ಈ ಸಂಬಂಧ ನಿರ್ಮಿಸಲಾಗಿರುವ ನೂತನ ಸಂಕೀರ್ಣವನ್ನು ಉಪರಾಷ್ಟ್ರಪತಿ ಜಗದೀಪ್ ಧನ್‌ಕ‌ರ್ ಅವರು ಮಂಗಳವಾರ ಉದ್ಘಾಟಿಸಿದರು. ಸರತಿ ಸಾಲಿನ ವ್ಯವಸ್ಥೆ ಸಂಕೀರ್ಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಉಪರಾಷ್ಟ್ರಪತಿ ಜಗದೀಪ್ ಧನಕರ್, ನಮ್ಮ ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ಮೂಲಸೌಕರ್ಯ ಬೆಳವಣಿಗೆಯಾಗಿರುವುದು ಸಮಾಧಾನಕರ ಬೆಳವಣಿಗೆ ಎಂದ್ರು. ಧಾರ್ಮಿಕ ಕೇಂದ್ರಗಳು ನಮ್ಮ ನಾಗರಿಕ ಮೌಲ್ಯಗಳ ಕೇಂದ್ರಗಳಾಗಿವೆ. ಯಾವುದೇ ವ್ಯಕ್ತಿ ಇಲ್ಲದ ಕಾರಣ ಸಮಾನತೆಯ ಸಂಕೇತವಾದ ಧಾರ್ಮಿಕ ಸಂಸ್ಥೆಗಳು ಸರ್ವಶಕ್ತ ದೇವರ ಮುಂದೆ ಶ್ರೇಷ್ಠವಾಗಿವೆ ಎಂದರು. VIDEO | Vice President Jagdeep Dhankhar speaking at the inauguration ceremony of a queue system complex at Shri Kshethra Dharmasthala says, "A soothing change in recent years in our country has been infrastructural growth that is germane to ou...