Wednesday, January 28

Focus

ಬಿಬಿಎಂಪಿ ಅಕ್ರಮ; ED ಕಾರ್ಯಾಚರಣೆ ಬಿರುಸು

ಬಿಬಿಎಂಪಿ ಅಕ್ರಮ; ED ಕಾರ್ಯಾಚರಣೆ ಬಿರುಸು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತರ ಕಚೇರಿ ಮೇಲೆ ಮಂಗಳವಾರ ದಾಳಿ ನಡೆಸಿ ಪರಿಶೀಲಿಸಿರುವ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಮಂಗಳವಾರ ಬೆಳಗ್ಗೆ ED ಅಧಿಕಾರಿಗಳ ತಂಡ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ಮುಖ್ಯ ಎಂಜಿನಿಯರ್ ಪ್ರಹ್ಲಾದ್ ಕಚೇರಿಯಲ್ಲಿ ಶೋಧ ನಡೆಸಿದೆ. ಏನಿದು ಆರೋಪ? ಬೋರ್‌ವೆಲ್ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಇಡಿ ಈ ಕಾರ್ಯಾಚರಣೆ ಕೈಗೊಂಡಿದೆ. ಬಿಬಿಎಂಪಿ ಕೊರೆಸಿದ್ದ ಬೋರ್‌ವೆಲ್‌ ಕೊರೆಸುವ ಯೋಜನೆಯ 960 ಕೋಟಿ ರೂಪಾಯಿ ಪೈಕಿ 400 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. 2016ರಲ್ಲಿ ನಡೆದಿದೆ ಎನ್ನಲಾದ ಈ ಹಗರಣ ಆರೋಪ ಬಗ್ಗೆ ತನಿಖೆ ನಡೆಸುತ್ತಿರುವ ED ಅಧಿಕಾರಿಗಳು ಬಿಬಿಎಂಪಿಗೆ ಸಂಬಂಧಿಸಿದ ಸುಮಾರು ಆರು ಕಚೇರಿಗಳನ್ನು ಶೋಧಿಸಿದ್ದಾರೆ....
ಟಿಬೆಟ್: ಪ್ರಬಲ ಭೂಕಂಪದಲ್ಲಿ ಮೃತರ ಸಂಖ್ಯೆ 126ಕ್ಕೆ ಏರಿಕೆ

ಟಿಬೆಟ್: ಪ್ರಬಲ ಭೂಕಂಪದಲ್ಲಿ ಮೃತರ ಸಂಖ್ಯೆ 126ಕ್ಕೆ ಏರಿಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಟಿಬೆಟ್: ಪ್ರಬಲ ಭೂಕಂಪ ಹಿಮಾಲಯ ತಪ್ಪಲಿನ ರಾಷ್ಟ್ರಗಲ್ಲಿ ನೂರಾರು ಮಂದಿಯ ಮಾರಣಹೋಮಕ್ಕೆ ಸಾಕ್ಷಿಯಾಗಿದೆ. #Exclusive thread on the rescue work of the 6.8 earthquake in Dingri County of China's Xizang:The quake happened today at 9:05 am (Beijing Time).A total of 95 people died and 130 injured as of 3 pm today.Over 3,400 rescuers have been sent to the quake-hit area.Rescuers… pic.twitter.com/VRNZXV9Ek0— Li Zexin (@XH_Lee23) January 7, 2025 ಮಂಗಳವಾರ ಬೆಳಗ್ಗೆ ಟಿಬೆಟ್ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.8 ರ ತೀವ್ರತೆ ದಾಖಲಾಗಿದೆ. ಈ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 126ಕ್ಕೆ ಏರಿಕೆಯಾಗಿದೆ. ಭೀಕರ ಭೂಕಂಪದ ಸರಣಿ ಘಟನೆಗಳಲ್ಲಿ 188 ಜನರು ಗಾಯಗೊಂಡಿದ್ದಾರೆ. A devastating 7.1-magnitude earthquake hit Tibet, killing 32 and collapsing over 1,000 homes. Felt in Nepal, the quake raises concerns about avalanches and gl...
ಧರ್ಮಸ್ಥಳ: ಕ್ಯೂ ವ್ಯವಸ್ಥೆ ಸಂಕೀರ್ಣ ಉದ್ಘಾಟನೆ

ಧರ್ಮಸ್ಥಳ: ಕ್ಯೂ ವ್ಯವಸ್ಥೆ ಸಂಕೀರ್ಣ ಉದ್ಘಾಟನೆ

Focus, ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೈವಿಧ್ಯ
ನಿಮ್ಮ ಸುದ್ದಿ ಈಗ ಈ ಜನಪ್ರಿಯ ಸುದ್ದಿ ಮಾಧ್ಯಮದಲ್ಲಿ.. ಮಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಈ ಸಂಬಂಧ ನಿರ್ಮಿಸಲಾಗಿರುವ ನೂತನ ಸಂಕೀರ್ಣವನ್ನು ಉಪರಾಷ್ಟ್ರಪತಿ ಜಗದೀಪ್ ಧನ್‌ಕ‌ರ್ ಅವರು ಮಂಗಳವಾರ ಉದ್ಘಾಟಿಸಿದರು. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗಿದ್ದು. ನೂತನ ಸಂಕೀರ್ಣವನ್ನು ಜನವರಿ 7ರಂದು ಉಪರಾಷ್ಟ್ರಪತಿ ಜಗದೀಪ್ ಧನ್‌ಕ‌ರ್ ಅವರು ಉದ್ಘಾಟಿಸಲಿದ್ದಾರೆ. 2.75 ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಮೂರು ಅಂತಸ್ತು ಹೊಂದಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಭಕ್ತರ ಅನುಕೂಲಕ್ಕೆ… pic.twitter.com/pjq23dodQe — ಸನಾತನ (@sanatan_kannada) January 6, 2025  2.75 ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಮೂರು ಅಂತಸ್ತು ಹೊಂದಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಭಕ್ತರ ಅನುಕೂಲಕ್ಕೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 16 ವಿಶಾಲ ಸಭಾಭವನಗಳಲ್ಲಿ ಭಕ್ತರು ವಿಶ್ರಾಂತಿ ಪಡೆಯಬಹುದಾಗಿದೆ. ಸರದಿಯಲ್ಲಿ ಜನರು ಸರದಿ...
ಭಾರತದಲ್ಲೂ HMPV ಆತಂಕ; ಕೇಂದ್ರದಿಂದ ಹೈ ಅಲರ್ಟ್

ಭಾರತದಲ್ಲೂ HMPV ಆತಂಕ; ಕೇಂದ್ರದಿಂದ ಹೈ ಅಲರ್ಟ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಚೀನಾದಲ್ಲಿ ತಲ್ಲಣ ಸೃಷ್ಟಿಸಿರುವ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (HMPV) ಭಾರತದಲ್ಲೂ ಆತಂಕ ಸೃಷ್ಟಿಸಿದೆ. ಕರ್ನಾಟಕದ ಇಬ್ಬರು ಮಕ್ಕಳಲ್ಲಿ ಸೋಂಕು ದೃಢಪಟ್ಟ ಬೆನ್ನಲ್ಲೇ ಗುಜರಾತ್ ರಾಜ್ಯದಲ್ಲೂ ಪ್ರಕರಣ ಪತ್ತೆಯಾಗಿದೆ. ಈಮೂಲಕ ದೇಶಾದಲ್ಲಿ ಸೋಂಕಿತರ ಸಂಖ್ಯೆ 5ಕ್ಕೇರಿದೆ. HMPV ಸೋಂಕಿನ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ, ಇದು ಹೊಸ ವೈರಸ್ ಅಲ್ಲ, 2001ರಲ್ಲಿಯೇ ವೈರಸ್ ಅನ್ನು ಗುರುತಿಸಲಾಗಿದೆ ಎಂದಿದ್ದಾರೆ. ಆದರೂ ಪರಿಸ್ಥಿತಿಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ, ನಾವು ಎಲ್ಲಾ ಅಂಶಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದುತಿಳಿಸಿದ್ದಾರೆ....
ತುಮಕೂರಿನ ಓಬಳಾಪುರ ಗೇಟ್ ಬಳಿ ಅಪಘಾತ, ಮೂವರು ದುರ್ಮರಣ

ತುಮಕೂರಿನ ಓಬಳಾಪುರ ಗೇಟ್ ಬಳಿ ಅಪಘಾತ, ಮೂವರು ದುರ್ಮರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ತುಮಕೂರು: ತುಮಕೂರು ಸಮೀಪದ ಓಬಳಾಪುರ ಗೇಟ್ ಬಳಿ ಮಂಗಳವಾರ ಬೆಳಗಿನ ಜಾವ ಟ್ರ್ಯಾಕ್ಟರ್ ಮತ್ತು ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ಫ್ದಾರೆ. ತುಮಕೂರಿನಿಂದ ಮಧುಗಿರಿ ಕಡೆಗೆ ಹೋಗುವಾಗ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಮೃತರು ಮಧುಗಿರಿ ತಾಲ್ಲೂಕಿನ ಪುರವರ ಹೋಬಳಿ ಗೊಂದಿಹಳ್ಳಿ ಗ್ರಾಮದವರಾಗಿದ್ದು ಒಂದೇ ಕುಟುಂಬಕ್ಕೆ ಸೇರಿದವರೆನ್ನಲಾಗಿದೆ. ಮೃತರನ್ನು ಶಾಖೀರ್ ಹುಸೇನ್ (48), ಮಮ್ತಾಜ್ (38) ಮಹ್ಮದ್ ಆಸೀಫ್ (12) ಇಂಡೈ ಗುರುತಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ಬಾಣಂತಿಯರ ಸರಣಿ ಸಾವಿನ ರೀತಿ ನಿರ್ಲಕ್ಷ್ಯ, ಎಡವಟ್ಟುಗಳು HMPV ಸೋಂಕು ನಿಯಂತ್ರಣದಲ್ಲಿ ಬೇಡ; ಸರ್ಕಾರಕ್ಕೆ BJP 10 ಸಲಹೆಗಳು

ಬಾಣಂತಿಯರ ಸರಣಿ ಸಾವಿನ ರೀತಿ ನಿರ್ಲಕ್ಷ್ಯ, ಎಡವಟ್ಟುಗಳು HMPV ಸೋಂಕು ನಿಯಂತ್ರಣದಲ್ಲಿ ಬೇಡ; ಸರ್ಕಾರಕ್ಕೆ BJP 10 ಸಲಹೆಗಳು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಇದನ್ನ ಅತ್ಯಂತ ಗಂಬೀರವಾಗಿ ಪರಿಗಣಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಲಹೆ ನೀಡಿದ್ದಾರೆ. ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿ ಮಹಿಳೆಯರು ಮತ್ತು ನವಜಾತ ಶಿಶುಗಳ ಸರಣಿ ಸಾವನ್ನ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರ್ಕಾರ, HMPV ವೈರಾಣು ಸೋಂಕು ಹರಡುವುದನ್ನು ನಿಯಂತ್ರಣ ಮಾಡಲು ಸಮರ್ಥವೇ ಎಂಬ ಅನುಮಾನ ಸಹಜವಾಗಿ ಸಾರ್ವಜನಿಕರಲ್ಲಿ ಮೂಡಿದೆ ಎಂದವರು ಗಮನಸೆಳೆದಿದ್ದಾರೆ. ಕೇವಲ ಕಾಟಾಚಾರಕ್ಕೆ ಸಭೆಗಳನ್ನು ಮಾಡಿ, ಮಾರ್ಗಸೂಚಿ ಬಿಡುಗಡೆ ಮಾಡಿದರೆ ಸಾಲದು. ಸರ್ಕಾರ ಈ ಕೂಡಲೇ ಸಮರ್ಥ ಸಚಿವರನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಸರ್ಕಾರಕ್ಕೆ ಮತ್ತು ಟಾಸ್ಕ್ ಫೋರ್ಸ್ ಗೆ ತಾಂತ್ರಿಕ ಮಾರ್ಗದರ್ಶನ ನೀಡಲು ಒಂದು ತಜ್ಞರ ವೈದ್ಯರ ಸಮಿತಿ ರಚನೆ ಮಾಡಬೇಕು. ಸಣ್ಣ ಮಕ್ಕಳು, ಹಿರಿಯ ನಾಗರಿಕರು, ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಈಗಾಗಲೇ ಶ್ವಾಸಕೋಶ ಸಮಸ್...
ತಿರುಪತಿ ಮಾದರಿಯಲ್ಲಿ ಧರ್ಮಸ್ಥಳದಲ್ಲೂ ಕ್ಯೂ ವ್ಯವಸ್ಥೆ; ಸುಸಜ್ಜಿತ ಸಂಕೀರ್ಣ ಹೇಗಿದೆ ಗೊತ್ತಾ?

ತಿರುಪತಿ ಮಾದರಿಯಲ್ಲಿ ಧರ್ಮಸ್ಥಳದಲ್ಲೂ ಕ್ಯೂ ವ್ಯವಸ್ಥೆ; ಸುಸಜ್ಜಿತ ಸಂಕೀರ್ಣ ಹೇಗಿದೆ ಗೊತ್ತಾ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನಿಮ್ಮ ಸುದ್ದಿ ಈಗ ಈ ಜನಪ್ರಿಯ ಸುದ್ದಿ ಮಾಧ್ಯಮದಲ್ಲಿ.. ಮಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಈ ಸಂಬಂಧ ನಿರ್ಮಿಸಲಾಗಿರುವ ನೂತನ ಸಂಕೀರ್ಣವನ್ನು ಜನವರಿ 7ರಂದು ಉಪರಾಷ್ಟ್ರಪತಿ ಜಗದೀಪ್ ಧನ್‌ಕ‌ರ್ ಅವರು ಉದ್ಘಾಟಿಸಲಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲೂ ತಿರುಪತಿ ಮಾದರಿಯಲ್ಲಿ ಕ್ಯೂ ವ್ಯವಸ್ಥೆ ಜಾರಿಗೆ ತರಲಾಗಿದ್ದು. ನೂತನ ಸಂಕೀರ್ಣವನ್ನು ಜನವರಿ 7ರಂದು ಉಪರಾಷ್ಟ್ರಪತಿ ಜಗದೀಪ್ ಧನ್‌ಕ‌ರ್ ಅವರು ಉದ್ಘಾಟಿಸಲಿದ್ದಾರೆ. 2.75 ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಮೂರು ಅಂತಸ್ತು ಹೊಂದಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಭಕ್ತರ ಅನುಕೂಲಕ್ಕೆ… pic.twitter.com/pjq23dodQe — ಸನಾತನ (@sanatan_kannada) January 6, 2025  2.75 ಲಕ್ಷ ಚದರ ಅಡಿ ವಿಸ್ತೀರ್ಣದ ಸಂಕೀರ್ಣ ಮೂರು ಅಂತಸ್ತು ಹೊಂದಿದ್ದು ಆಧುನಿಕ ತಂತ್ರಜ್ಞಾನ ಬಳಸಿ ಭಕ್ತರ ಅನುಕೂಲಕ್ಕೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 16 ವಿಶಾಲ ಸಭಾಭವನಗಳಲ್ಲಿ ಭಕ್ತರು ವಿಶ್ರಾಂತಿ ಪಡೆಯಬಹುದಾಗಿದೆ. ಸರದಿಯಲ್ಲಿ ...
ಬೆಂಗಳೂರಿನಲ್ಲಿ ಫೆಬ್ರವರಿ 10 ರಿಂದ 14 ವರೆಗೆ ‘ಏರೋ ಇಂಡಿಯಾ 2025 ವೈಮಾನಿಕ ಪ್ರದರ್ಶನ’; ದಿ ರನ್‌ವೇ ಟು ಎ ಬಿಲಿಯನ್ ಆಪರ್ಚುನಿಟೀಸ್

ಬೆಂಗಳೂರಿನಲ್ಲಿ ಫೆಬ್ರವರಿ 10 ರಿಂದ 14 ವರೆಗೆ ‘ಏರೋ ಇಂಡಿಯಾ 2025 ವೈಮಾನಿಕ ಪ್ರದರ್ಶನ’; ದಿ ರನ್‌ವೇ ಟು ಎ ಬಿಲಿಯನ್ ಆಪರ್ಚುನಿಟೀಸ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಏಷ್ಯಾದ ಅತಿದೊಡ್ಡ ಏರೋ ಶೋನ ಈ 15 ನೇ ಆವೃತ್ತಿಯು ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ಸ್ವದೇಶೀಕರಣ ಪ್ರಕ್ರಿಯೆ ವೇಗಗೊಗೊಳಿಸಲು ಹಲವು ಹೊಸ ಮಾರ್ಗಗಳ ಅನ್ವೇಷಣೆಗೆ ವೇದಿಕೆಯಾಗಲಿದೆ. ರಕ್ಷಣಾ ಸಚಿವರ ಸಮಾವೇಶ, ಸಿಇಒಗಳ ದುಂಡುಮೇಜಿನ ಸಭೆ, ಮಂಥನ್ ಸ್ಟಾರ್ಟ್-ಅಪ್ ಕಾರ್ಯಕ್ರಮ, ಮೈ ನವಿರೇಳಿಸುವ ವೈಮಾನಿಕ ಪ್ರದರ್ಶನ ಮತ್ತು ದೇಶೀಯ ಉತ್ಪಾದನಾ ಸಾಮರ್ಥ್ಯಗಳ ಪ್ರದರ್ಶನ ಆಯೋಜಿಸಲಾಗಿದೆ ಎಂದು ರಕ್ಷಣಾ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನದ 15ನೇ ಆವೃತ್ತಿಯ ಏರೋ ಇಂಡಿಯಾ 2025- 2025ರ ಫೆಬ್ರವರಿ 10 ರಿಂದ 14 ರವರೆಗೆ ಕರ್ನಾಟಕದ ಬೆಂಗಳೂರಿನ ಯಲಹಂಕದ ವಾಯುನಲೆಯ ಕೇಂದ್ರದಲ್ಲಿ ನಡೆಯಲಿದೆ. 'ರನ್‌ವೇ ಟು ಎ ಬಿಲಿಯನ್ ಆಪರ್ಚುನಿಟೀಸ್'- ಬಿಲಿಯನ್ ಅವಕಾಶಗಳಿಗೆ ರನ್ ವೇ ಎಂಬ ವಿಶಾಲ ಧೇಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮ ವಿದೇಶಿ ಮತ್ತು ಭಾರತೀಯ ಸಂಸ್ಥೆಗಳ ನಡುವಿನ ಪಾಲುದಾರಿಕೆಯನ್ನು ರೂಪಿಸಲು ಮತ್ತು ಜಾಗತಿಕ ಮೌಲ್ಯ ಸರಣಿಯಲ್ಲಿ ದೇಶೀಕರಣ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಲು ಹೊಸ ಮಾರ್ಗಗಳ ಅನ್ವೇಷಣೆಗೆ ವೇದಿಕೆಯನ್ನು ಒದಗಿಸಲಿದೆ....
‘ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ, ಊಟದಲ್ಲಿ ರಾಜಕೀಯ ಬೆರೆಸಬೇಡಿ’ ಎಂದ ಡಿಕೆಶಿ

‘ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ, ಊಟದಲ್ಲಿ ರಾಜಕೀಯ ಬೆರೆಸಬೇಡಿ’ ಎಂದ ಡಿಕೆಶಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ:“ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಶಿವಕುಮಾರ್, ತಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆ ಎಂಬ ಸುದ್ದಿ ಬಗ್ಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ ಜೊತೆ ಎಲ್ಲಿಯೂ ಹೋಗಿರಲಿಲ್ಲ. ಆದ ಕಾರಣಕ್ಕೆ ವಿದೇಶಿ ಪ್ರವಾಸಕ್ಕೆ ತೆರಳಿದ್ದೆ ಎಂದರು. ಡಿಸಿಎಂ ಅವರ ಅನುಪಸ್ಥಿತಿಯಲ್ಲಿ ಔತಣಕೂಟ ಸಭೆ ನಡೆದಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಸಿದ ಡಿಕೆಶಿ, ಅನೇಕ ಮಂತ್ರಿಗಳು ಸಹ ಕುಟುಂಬದವರ ಜೊತೆ ವಿದೇಶಿ ಪ್ರವಾಸ ಹೋಗಿದ್ದರು. ಬೆಂಗಳೂರಿನಲ್ಲಿ ಇದ್ದವರು ಒಂದು ಸಂಜೆ ಒಟ್ಟಿಗೆ ಸೇರಿದ್ದಾರೆ. ಇದರಲ್ಲಿ ತಪ್ಪೇನಿದೆ? ಎಂದರು. ಕ್ಯಾಬಿನೆಟ್ ಪುನರ್ ರಚನೆಯಾಗಬೇಕು ಎಂದು ಎಚ್.ಕೆ.ಪಾಟೀ...
ಹೋರಾಟ ಹತ್ತಿಕ್ಕುವ ಪ್ರಯತ್ನ ಫಲಿಸದು; ಸರ್ಕಾರದ ಬೆದರಿಕೆಗೆ ರಾಜ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಎದಿರೇಟು

ಹೋರಾಟ ಹತ್ತಿಕ್ಕುವ ಪ್ರಯತ್ನ ಫಲಿಸದು; ಸರ್ಕಾರದ ಬೆದರಿಕೆಗೆ ರಾಜ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆಶಾ ಕಾರ್ಯಕರ್ತರನ್ನು ಹೆದರಿಸುವ ಸರ್ಕಾರದ ಪ್ರಯತ್ನ ಸಫಲವಾಗದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹೇಳಿದೆ. ಆಶಾ ಕಾರ್ಯಕರ್ತೆಯರ ಹೋರಾಟವನ್ನು ಮೊಟಕುಗೊಳಿಸುವ ಸಂಬಂಧ ಆರೋಗ್ಯ ಇಲಾಖೆ ಆಯುಕ್ತರು ಹೊರಡಿಸಿರುವ ಆದೇಶ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ಆಶಾ ಕಾರ್ಯಕರ್ತೆಯರನ್ನು ಸರ್ಕಾರ ಶೋಷಣೆಗೆ ಗುರಿಪಡಿಸುತ್ತಿರುವ ಬಗ್ಗೆ ಮನವರಿಕೆ ಮಾಡಿದ್ದಾರೆ. ಆಶಾ ಕಾರ್ಯಕರ್ತರ ಹಲವಾರು ಸಮಸ್ಯೆಗಳ ಬಗ್ಗೆ ಹಾಗೂ ಆಶಾಗಳ ಸೇವೆಯ ಮಹತ್ವದ ಬಗ್ಗೆ ಸರ್ಕಾರಕ್ಕೆ ಮಾರಿಕೆ ಮಾಡಿದ್ದಾರೆ. ನಿಮ್ಮ ಸುದ್ದಿ ಈಗ ಈ ಜನಪ್ರಿಯ ಸುದ್ದಿ ಮಾಧ್ಯಮದಲ್ಲಿ.. ಆರೋಗ್ಯ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಇದು ಮುಷ್ಕರ ಕೈಬಿಡಲು ಹೋರಾಟ ನಿರತ ಆಶಾ ಕಾರ್ಯಕರ್ತೆಯರನ್ನು ಹೆದರಿಸುವ ಕ್ರಮವಲ್ಲದೆ ಇನ್ನೇನೂ ಅಲ್ಲ. ಸುಮಾರು 15 ವರ್ಷಗಳಿಂದ ಅತ್ಯಂತ ಕನಿಷ್ಠ ಸಂಭಾವನೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆಶಾಗಳು ಜನತೆಯ ಆರೋಗ...