ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಎಚ್ಚರಿಕೆ; ಆಯುಕ್ತಾಲಯದ ಸುತ್ತೋಲೆ ಹೀಗಿದೆ
ಬೆಂಗಳೂರು: ಸುದೀರ್ಘ ಕಾಲದ ಬೇಡಿಕೆಗಳನ್ನು ಮುಂದಿಟ್ಟು ಹೋರಾಟಕ್ಕಿಳಿದಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು 07.01.2025 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ಅನಿರ್ದಿಷ್ಟ ಹೋರಾಟಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯನ್ನು ರವಾನಿಸಿ, ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ.
ಆಶಾ ಕಾರ್ಯಕರ್ತೆಯರ ಸೇವೆ ಅನಿವಾರ್ಯ..
ಸುತ್ತೋಲೆಯಲ್ಲಿ ಏನಿದೆ?
ಸ್ವಯಂ ಸೇವಾ ಮನೋಭಾವ ಹೊಂದಿರುವ ಹಾಗೂ ನಿರ್ದಿಷ್ಟ ಮಾನದಂಡ ಪೂರೈಸುವ ಮಹಿಳೆಯರನ್ನು ಗ್ರಾಮ ಸಭೆಯಲ್ಲಿ ಸ್ಥಳೀಯರ ಅಭಿಪ್ರಾಯ ಪಡೆದು ಆಯ್ಕೆ ಮಾಡಲಾಗಿರುತ್ತದೆ. ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕುಟುಂಬದ ಜವಾಬ್ದಾರಿಯೊಂದಿಗೆ ಇಲಾಖೆಯ ಆರೋಗ್ಯ ಸಿಬ್ಬಂದಿಗಳ ಸಮನ್ವಯದೊಂದಿಗೆ ಸ್ಥಳೀಯ ಸಮುದಾಯಕ್ಕೆ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಯನ್ನು ನಿಗದಿತ ಸಮಯದಲ್ಲಿ ಪಡೆಯಲು ನ...









