Thursday, March 19

Focus

ಡಿಕೆಶಿ ಅಂದರೆ ‘D (ಡ್ರಾಮ) K (ಕಿಂಗ್) ಶಿವಕುಮಾರ್..! ಶಾಸಕ ಸಿ.ಟಿ.ರವಿ ವ್ಯಂಗ್ಯ

ಡಿಕೆಶಿ ಅಂದರೆ ‘D (ಡ್ರಾಮ) K (ಕಿಂಗ್) ಶಿವಕುಮಾರ್..! ಶಾಸಕ ಸಿ.ಟಿ.ರವಿ ವ್ಯಂಗ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಉಪಮುಖ್ಯಮಂತ್ರಿಯಾಗಿ ಎಲ್ಲರ ಪರವಾಗಿ ನ್ಯಾಯಾಧೀಶರಾಗಿರಬೇಕಿರುವ ಡಿ.ಕೆ.ಶಿವಕುಮಾರ್ ಅವರು ದುರದೃಷ್ಟವಾಶಾತ್ ಯಾರದ್ದೋ ವಕೀಲರಾಗಿಬಿಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಬಣ್ಣಿಸಿದ್ದಾರೆ. ಡಿಕೆಶಿ ಅಂದರೆ 'ಡಿ (ಡ್ರಾಮ) ಕೆ (ಕಿಂಗ್) ಶಿವಕುಮಾರ್' ಎಂದು ಸಿ.ಟಿ.ರವಿ ಲೇವಡಿ ವ್ಯಂಗ್ಯವಾಡಿದ್ದಾರೆ.'ನೀವು ಉಪಮುಖ್ಯಮಂತ್ರಿಗಳು ಎನ್ನುವುದನ್ನು ಮರೆತು ಬಿಟ್ಟಿದ್ದೀರಿ. ನೀವು ನ್ಯಾಯಾಧೀಶರ ಸ್ಥಾನದಲ್ಲಿ ಇದ್ದು, ಸತ್ಯಾಸತ್ಯತೆಯನ್ನು ವಿಚಾರ ಮಾಡಬೇಕಾದವರು ದುರದೃಷ್ಟವಾಶಾತ್ ಯಾರದ್ದೋ ವಕೀಲರಾಗಿಬಿಟ್ಟಿದ್ದೀರಿ. ಯಾರು ಮೋಹ ಮದ ಮಾತ್ಸರ್ಯಗಳಿಂದ ಹೊರಗಿದ್ದು ನೋಡುತ್ತಾರೋ ಅವರಿಗೆ ಸತ್ಯಾಸತ್ಯಾತೆ ಗೊತ್ತಾಗುತ್ತದೆ. ಮೋಹಪರವಶರಾದವರಿಗೆ, ಅಧಿಕಾರದ ಮದದಿಂದ ಕೂಡಿದವರಿಗೆ, ಮಾತ್ಸರ್ಯದ ರಾಜಕಾರಣ ಮಾಡುವವರಿಗೆ ಸತ್ಯ ಅರ್ಥ ಆಗಲಿಕ್ಕೆ ಸಾಧ್ಯವಿಲ್ಲ' ಎಂದು ಸಿ.ಟಿ.ರವಿ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ.ಸಭಾಪತಿಗಳ ರೂಲಿಂಗ್ ನೀಡಿದ ನಂತರ ನೀವುಗಳು, ನಿಮ್ಮ ಪಕ್ಷದ ಶಾಸಕರು ನಡೆದುಕೊಂಡ ರೀತಿ ನಿಮಗುಚಿತವೇ? ಗೂoಡಾಗಳನ್ನೂ, ಜೊತೆಗಾರರನ್ನು ಎತ್ತ...
ಸ್ವಾಮಿ ವಿವೇಕಾನಂದರು ಯುವಕರಿಗೆ ಶಾಶ್ವತ ಸ್ಫೂರ್ತಿ; ಪ್ರಧಾನಿ ಮೋದಿ

ಸ್ವಾಮಿ ವಿವೇಕಾನಂದರು ಯುವಕರಿಗೆ ಶಾಶ್ವತ ಸ್ಫೂರ್ತಿ; ಪ್ರಧಾನಿ ಮೋದಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿ, ಅವರು ಯುವಕರಿಗೆ ಶಾಶ್ವತ ಸ್ಫೂರ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.'X' ನಲ್ಲಿ ಪೋಸ್ಟ್‌ ಹಾಕಿರುವ ನರೇಂದ್ರ ಮೋದಿ, 'ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತಾ. ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿದ್ದ ಅವರು ಯುವ ಮನಸ್ಸುಗಳಲ್ಲಿ ಉತ್ಸಾಹ ಮತ್ತು ಉದ್ದೇಶವನ್ನು ಬೆಳಗಿಸುತ್ತಲೇ ಇದ್ದಾರೆ. ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಅವರ ದೃಷ್ಟಿಕೋನವನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ' ಎಂದಿದ್ದಾರೆ.Paying homage to Swami Vivekananda on his Jayanti. An eternal inspiration for youth, he continues to ignite passion and purpose in young minds. We are committed to fulfilling his vision of a strong and developed India. pic.twitter.com/ldTPWCW1aM — Narendra Modi (@narendramodi) January 12, 2025ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಎತ್ತಿ ತೋರಿಸುವ ವೀಡಿಯೊ ಕ್ಲಿಪ್ ಅನ್ನು ಸಹ ಪ್ರಧಾನಿ ಪೋಸ್ಟ್ ...
ಪ್ರಿಯಾಂಕ್ ಖರ್ಗೆ ಮಾತಿಗೆ ಬೆದರಿದರೆ ವಿಜಯೇಂದ್ರ? ಯತ್ನಾಳ್ ಹೇಳಿದ್ದೇನು?

ಪ್ರಿಯಾಂಕ್ ಖರ್ಗೆ ಮಾತಿಗೆ ಬೆದರಿದರೆ ವಿಜಯೇಂದ್ರ? ಯತ್ನಾಳ್ ಹೇಳಿದ್ದೇನು?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಅವರ ಬಂಡವಾಳ ಬಯಲು ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆದರಿಕೆ ಕಾರಣದಿಂದಾಗಿ ಬಿಜೆಪಿ ವಿಜಯೇಂದ್ರ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲು ಹಿಂದೇಟು ಹಾಕಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ಹೊಸ ಬಾಂಬ್ ಸಿಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡುತ್ತಾ ವಿಜಯೇಂದ್ರ ವಿರುದ್ಧ ಶನಿವಾರ ಟೀಕಾಸ್ತ್ರ ಪ್ರಯೋಗಿಸಿದ ಯತ್ನಾಳ್, ಕಲಬುರಗಿಯಲ್ಲಿ ನನ್ನ‌ ವಿರುದ್ಧ ಪ್ರತಿಭಟನೆಗೆ ಬರಬೇಡಿ, ಬಂದರೆ ನಿಮ್ಮ ತಂದೆಯ ಬಂಡವಾಳ ಬಯಲು ಮಾಡುತ್ತೇನೆಂದು ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ್ದರು. ಇದೇ ಕಾರಣಕ್ಕಾಗಿ ವಿಜಯೇಂದ್ರ ಕಲಬುರಗಿಯಲ್ಲಿ ನಡೆದ ಪ್ರತಿಭಟನೆಗೆ ಹೋಗಿರಲಿಲ್ಲ ಎಂದರು.ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ಹಿತೈಷಿಗಳೇ ಕಲಬುರಗಿಯಲ್ಲಿ ದೊಡ್ಡ ಮಟ್ಟದ ಹೋರಾಟ ಆಯೋಜಿಸಿದ್ದರು. ಆದರೂ ತಾನು ಹೋರಾಟಕ್ಕೆ ಏಕೆ ಹೋಗಲಿಲ್ಲ ಎಂದು ವಿಜಯೇಂದ್ರನೇ ಉತ್ತರಿಸಬೇಕು ಎಂದವರು ಹೇಳಿದರು....
ಅಂದು ‘ಪೇ ಸಿಎಂ ಸೇ ಸಿಎಂ’, ಇದೀಗ ‘ಹೇ ಸಿಎಂ ಸೇ ಸಿಎಂ’; ಸಿದ್ದು ಸರ್ಕಾರಕ್ಕೆ ಮುಜುಗರ ತಂದ CRF ದೂರು

ಅಂದು ‘ಪೇ ಸಿಎಂ ಸೇ ಸಿಎಂ’, ಇದೀಗ ‘ಹೇ ಸಿಎಂ ಸೇ ಸಿಎಂ’; ಸಿದ್ದು ಸರ್ಕಾರಕ್ಕೆ ಮುಜುಗರ ತಂದ CRF ದೂರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಕೆಐಎಡಿಬಿ ಕರ್ಮಕಾಂಡ; ಬಾಳಪ್ಪ ಹಂದಿಗುಂದ ವಿರುದ್ಧ ತನಿಖೆಗೆ ನಿರ್ದೇಶನ ಕೋರಿ ರಾಜ್ಯಪಾಲರಿಗೆ ದೂರು..  ಸಿದ್ದು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಸಿಟಿಜನ್ ರೈಟ್ಸ್ ಫೌಂಡೇಶನ್ ದೂರು.. ಹಂದಿಗುಂದ ಎತ್ತಂಗಡಿಗೆ ಆಗ್ರಹ.. ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ 'ಪೇ ಸಿಎಂ ಸೇ ಸಿಎಂ' ಘೋಷಣೆ ಮೂಲಕ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಮೆಗಾ ಅಭಿಯಾನ ಕೈಗೊಂಡು ಆಡಳಿತಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ 'ಹಂದಿಗುಂದ ಪ್ರಕರಣ' ಸವಾಲಾಗಿ ಪರಿಣಮಿಸಿದೆ. ಭ್ರಷ್ಟಾಚಾರ ವಿರುದ್ಧ ದೇಶವ್ಯಾಪಿ ಕಾನೂನು ಹೋರಾಟ ನಡೆಸುತ್ತಿರುವ 'ಸಿಟಿಜನ್ ರೈಟ್ಸ್ ಫೌಂಡೇಶನ್' ಕೆಎಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ದದ ಭ್ರಷ್ಟಾಚಾರ ಆರೋಪದಲ್ಲಿ ಸಿದ್ದರಾಮಯ್ಯ ಸರ್ಕಾರದ ಲೋಪವನ್ನೇ ಎತ್ತಿ ಹಿಡಿದಿದೆ. ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿ KIADB ಕರ್ಮಕಾಂಡದ ತನಿಖೆಗೆ ರೋಚಕತೆ ತುಂಬಿದೆ.ಕೆಐಎಡಿಬಿಯಲ್ಲಿ ಪ್ರಸ್ತುತ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿರುವ KAS ಅಧಿಕಾರಿ ಬಾಲಪ್ಪ ಹಂದಿಗುಂದ ವಿರುದ್ಧ ಬೆಂಗಳೂರಿನ ದೇವನಹಳ್ಳಿ ಸುತ್ತಮುತ್ತ ಅಕ್ರಮವಾಗಿ ಭೂಸ್ವಾಧೀನ...
ಸಿ.ಟಿ.ರವಿಗೆ ಬೆದರಿಕೆ ಪತ್ರ; ಬೆದರಿಸುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದ ಬಿಜೆಪಿ ಸಾರಥಿ

ಸಿ.ಟಿ.ರವಿಗೆ ಬೆದರಿಕೆ ಪತ್ರ; ಬೆದರಿಸುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದ ಬಿಜೆಪಿ ಸಾರಥಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪ್ರತಿಪಕ್ಷ ಶಾಸಕರಿಗೆ ಬೆದರಿಕೆಗಳು ಎದುರರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ಬಿಜೆಪಿ ಶಾಸಕರಿಗೆ ಆತಂಕವಾಗಿ ಕಾಡುತ್ತಿರುವವರು ಕಾಂಗ್ರೆಸ್ ಪಕ್ಷದ ಭಾಗವೇ ಆಗಿದ್ದಾರೆ ಎಂದು ವಿಶ್ಲೇಷಿಸಿದ್ದಾರೆ.ಸಿ.ಟಿ.ರವಿ ಅವರಿಗೆ ರವಾನೆಯಾಗಿರುವ ಬೆದರಿಕೆ ಪತ್ರದ ಪ್ರತಿಯನ್ನು ಸಾಮಾಜಿಕ ಜಾಲತಾಣ 'X;ನಲ್ಲಿ ಟ್ಯಾಗ್ ಮಾಡಿ ಪೋಸ್ಟ್ ಹಾಕಿರುವ ಬಿ.ವೈ.ವಿಜಯೇಂದ್ರ, ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನ ನಡೆಯಿತು. ಅದರ ನಂತರವೂ ಅವರ ವಿರುದ್ಧ ನಿರಂತರ ಬೆದರಿಕೆ ಒಡ್ಡಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ನಿನ್ನೆ ಅವರಿಗೆ ಬೆದರಿಕೆ ಪತ್ರ ರವಾನೆಯಾಗಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದೆ ಎಂದಿದ್ದಾರೆ.ಸಿ.ಟಿ.ರವಿ ಅವರನ್ನು ಗುರ...
ಹಾರರ್ ‘ರಾಕ್ಷಸ’ದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಅವತಾರ; ಏಕಕಾಲದಲ್ಲಿ ಕನ್ನಡ, ತೆಲುಗಿನಲ್ಲಿ ಅನಾವರಣ

ಹಾರರ್ ‘ರಾಕ್ಷಸ’ದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಅವತಾರ; ಏಕಕಾಲದಲ್ಲಿ ಕನ್ನಡ, ತೆಲುಗಿನಲ್ಲಿ ಅನಾವರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನಟ ಪ್ರಜ್ವಲ್ ದೇವರಾಜ್ ಅಭಿನಯದ 'ರಾಕ್ಷಸ' ಚಿತ್ರವು ಶಿವರಾತ್ರಿಯ ಸಂದರ್ಭದಲ್ಲಿ ಕನ್ನಡದ ಜೊತೆಗೆ ತೆಲುಗು ಆವೃತ್ತಿಯೂ ಬಿಡುಗಡೆಯಾಗಲಿದೆ.https://www.youtube.com/watch?v=L5A3GrRMypAಫೆಬ್ರುವರಿ 26 ರಂದು ಕನ್ನಡದ ಜೊತೆಗೆ ತೆಲುಗು ಆವೃತ್ತಿಯನ್ನೂ ಬಿಡುಗಡೆ ಮಾಡಲಾಗುತ್ತದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ವಿತರಕ ಎಂವಿಆರ್ ಕೃಷ್ಣ ಅವರು ಆಂಧ್ರ ಪ್ರದೇಶದಲ್ಲಿ ಈ ಸಿನಿಮಾ ವಿತರಣೆಗೆ ಮುಂದಾಗಿದ್ದಾರೆ.ಹಾರರ್ ಚಿತ್ರ 'ರಾಕ್ಷಸ'ದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ನವೀನ್ ಗೌಡ, ದೀಪು, ಮತ್ತು ಮಾನಸ ನಿರ್ಮಿಸಿರುವ ಈ ಚಿತ್ರದಲ್ಲಿ ಶ್ರೀಧರ್, ಅರುಣ್ ರಾಥೋಡ, ಗೌತಮ್, ಸೋಮಶೇಖರ್ ಸಹಿತ ಹಲವರ ಅಭಿನಯ ಗಮನಸೆಳೆದಿದೆ....
ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಬಿಜೆಪಿ ಎಚ್ಚರಿಕೆ

ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಬಿಜೆಪಿ ಎಚ್ಚರಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದರೂ ಅತ್ತ ಗಮನ ಹರಿಸದ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಇನ್ನು 24 ಗಂಟೆಯೊಳಗೆ ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು, ಖರೀದಿ ಆರಂಭಿಸದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಎಚ್ಚರಿಕೆ ನೀಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿನ್ನರ್ ಸಭೆಗಳು, ಔತಣಕೂಟಗಳು, ರಾಜಕೀಯ ಮೇಲಾಟಗಳಲ್ಲೇ ನಿರತರಾಗಿದ್ದಾರೆ. ಈ ಕೆಲಸಗಳು ಮುಗಿದಿದ್ದರೆ ಸ್ವಲ್ಪ ರೈತರ ಸಮಸ್ಯೆಗಳತ್ತ ಗಮನ ಹರಿಸುವ ದೊಡ್ಡ ಮನಸ್ಸು ಮಾಡಬೇಕು. ಬಿಡುವು ಇಲ್ಲದಿದ್ದರೆ ಕನಿಷ್ಠ ಪಕ್ಷ ಕೃಷಿ ಸಚಿವ ಎನ್.ಚಲುವರ...
ಆಘಾತಕಾರಿ ಮಿದುಳು ಹಾನಿಯಿಂದ ಮಹಿಳೆಯರಿಗಿಂತ ಮೂರು ಪಟ್ಟು ಪುರುಷರ ಸಾವು

ಆಘಾತಕಾರಿ ಮಿದುಳು ಹಾನಿಯಿಂದ ಮಹಿಳೆಯರಿಗಿಂತ ಮೂರು ಪಟ್ಟು ಪುರುಷರ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ವೈವಿಧ್ಯ
ನವದೆಹಲಿ: ಆಘಾತಕಾರಿ ಮಿದುಳಿನ ಗಾಯದಿಂದ (TBI) ಪುರುಷರು ಮಹಿಳೆಯರಿಗಿಂತ ಮೂರು ಪಟ್ಟು ಹೆಚ್ಚು ಸಾಯುತ್ತಾರೆ ಎಂಬ ಕಹಿ ಸತ್ಯವೊಂದು ಅಧ್ಯಯನವೊಂದರಲ್ಲಿ ಬೆಳಕಿಗೆ ಬಂದಿದೆ.2021 ರಲ್ಲಿ US ಮರಣ ದತ್ತಾಂಶವನ್ನು ಆಧರಿಸಿದ ಅಧ್ಯಯನವು ವಯಸ್ಸಾದ ವಯಸ್ಕರು, ಪುರುಷರು ಮತ್ತು ಕೆಲವು ಜನಾಂಗೀಯ ಮತ್ತು ಜನಾಂಗೀಯ ಗುಂಪುಗಳ ಮೇಲೆ ಆಘಾತಕಾರಿ ಮಿದುಳಿನ ಗಾಯಗಳ (TBI) ಅಸಮಾನ ಪರಿಣಾಮವನ್ನು ಬಹಿರಂಗಪಡಿಸಿದೆ. ಪೀರ್-ರಿವ್ಯೂಡ್ ಜರ್ನಲ್ ಬ್ರೈನ್ ಇಂಜುರಿಯಲ್ಲಿ ಪ್ರಕಟವಾದ ಸಂಶೋಧನೆಗಳು, ಆತ್ಮಹತ್ಯೆಗಳು ಟಿಬಿಐ-ಸಂಬಂಧಿತ ಸಾವುಗಳಿಗೆ ಸಾಮಾನ್ಯ ಕಾರಣವಾಗಿ ಉಳಿದಿವೆ ಎಂದು ಸೂಚಿಸುತ್ತವೆ. ಇದರ ನಂತರ ಉದ್ದೇಶಪೂರ್ವಕವಲ್ಲದ ಬೀಳುವಿಕೆಗಳು ಸಂಭವಿಸಿದವು ಮತ್ತು ನಿರ್ದಿಷ್ಟ ಗುಂಪುಗಳು ಈ ದುರಂತಗಳಿಂದ ಅಸಮಾನವಾಗಿ ಪರಿಣಾಮ ಬೀರುತ್ತವೆ ಎಂದು ಸಂಶೋಧಕರು ತಿಳಿಸಿದ್ದಾರೆ.ಪುರುಷರು ಟಿಬಿಐನಿಂದ ಸಾಯುವ ಸಾಧ್ಯತೆ ಹೆಚ್ಚು ಎಂದು ಕಂಡುಬಂದಿದೆ - ಮಹಿಳೆಯರ ದರಕ್ಕಿಂತ ಮೂರು ಪಟ್ಟು ಹೆಚ್ಚು (30.5 vs 9.4). ಪುರುಷರ ಜೊತೆಗೆ, ವಯಸ್ಸಾದ ವಯಸ್ಕರು ವಿಶೇಷವಾಗಿ ಅಪಾಯದಲ್ಲಿದ್ದಾರೆ, ಉದ್ದೇಶಪೂರ್ವಕವಲ್ಲದ ಬೀಳುವಿಕೆಗ...
ಕಾರು ಬಗ್ಗೆ ಹೆಚ್ಡಿಕೆ ತಕರಾರು? ಕಾಂಗ್ರೆಸ್ ನಾಯಕ ರಮೇಶ್ ಬಾಬು ಟೀಕೆ

ಕಾರು ಬಗ್ಗೆ ಹೆಚ್ಡಿಕೆ ತಕರಾರು? ಕಾಂಗ್ರೆಸ್ ನಾಯಕ ರಮೇಶ್ ಬಾಬು ಟೀಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರಾದ ಬೃಹತ್ ಕೈಗಾರಿಕಾ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿರವರು ಕರ್ನಾಟಕ ರಾಜ್ಯ ಸರ್ಕಾರ ತಮಗೆ ಶಿಷ್ಟಾಚಾರಕ್ಕೆ ಅನುಗುಣವಾಗಿ ನಿಗದಿತ ಸಮಯದಲ್ಲಿ ಹೊಸ ಕಾರನ್ನು ನೀಡಲಿಲ್ಲ ಎಂದು ಆರೋಪಿಸಿರುತ್ತಾರೆ. ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದು ಆರು ತಿಂಗಳು ಕಳೆದರೂ ಇಲ್ಲಿಯವರೆಗೆ ರಾಜ್ಯದ ಅಭಿವೃದ್ಧಿಗೆ ಇವರು ನೀಡಿರುವ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ವಿಷಯಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ.ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಅಪೇಕ್ಷೆಯಂತೆ ಹೊಸ ಟೊಯೋಟಾ ಇನ್ನೋವಾ ಹೈಕ್ರಾಸ್ ವಾಹನ ಹಂಚಿಕೆ ಆಗಿದೆ. ಮಂಡ್ಯ ಜಿಲ್ಲಾಧಿಕಾರಿಗಳು ಹೊಸ ಕಾರನ್ನು ಪಡೆಯಲು ಕೇಂದ್ರ ಸಚಿವರನ್ನು ಕೋರಿದ್ದು, ಧನುರ್ಮಾಸದ ಕಾರಣ ನೀಡಿ ಸಂಕ್ರಾಂತಿ ನಂತರ ಹೊಸ ಕಾರು ಪಡೆಯುವುದಾಗಿ ತಿಳಿಸಿರುತ್ತಾರೆ. ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 04-11-2024 ರಲ...
ವರ್ಕೌಟ್ ಎಡವಟ್ಟು; ನಟಿ ರಶ್ಮಿಕಾಗೆ ಗಾಯ; ‘ಸಿಖಂದರ್’ನಿಂದಲೂ ದೂರ

ವರ್ಕೌಟ್ ಎಡವಟ್ಟು; ನಟಿ ರಶ್ಮಿಕಾಗೆ ಗಾಯ; ‘ಸಿಖಂದರ್’ನಿಂದಲೂ ದೂರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ನಟಿ ರಶ್ಮಿಕಾ ಮಂದಣ್ಣ ಅವರು ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಗಾಯಗೊಂಡಿದ್ದಾರೆ ಎನ್ನಲಾಗಿದೆ.ಸಲ್ಮಾನ್‌ ಖಾನ್‌ ನಟನೆಯ ಸಿಖಂದರ್‌ ಸಿನಿಮಾದ ಶೂಟಿಂಗ್‌ಗೆ ತಯಾರಿ ನಡೆಸುವ ನಡುವೆ ಜಿಮ್‌ನಲ್ಲಿ ಭಾಗಿಯಾಗಿದ್ದರು. ಆ ಸಂದರ್ಭದಲ್ಲಿ ಎಡವಟ್ಟಾಗಿ ನಟಿಗೆ ಗಾಯಗಳಾಗಿವೆ ಎನ್ನಲಾಗಿದೆ. ಆದರೆ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ನಟಿ ರಶ್ಮಿಕಾ ಅವರಿಗೆ ಕೆಲ ದಿನಗಳವರೆಗೆ ವಿಶ್ರಾಂತಿ ಅಗತ್ಯವಿದ್ದು, 'ಸಿಖಂದರ್' ಚಿತ್ರದ ಶೂಟಿಂಗ್'ನಿಂದಲೂ ಅವರು ದೂರ ಉಳಿಯಬೇಕಿದೆ ಎಂದು ಆಪ್ತ ಮೂಲಗಳು ತಿಳಿಸಿವೆ....