Saturday, March 14

Focus

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನ ಬರ್ಬರ ಕೊಲೆ

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನ ಬರ್ಬರ ಕೊಲೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಮುಖಂಡನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.Read More.. K'TAKA CONG WON'T SUCCEED IN FINISHING OFF JD(S): HD KUMARASWAMYತಮ್ಮನಾಯಕನಹಳ್ಳಿ ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಎಂಬವರನ್ನು ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ವೆಂಕಟೇಶ್ತ ಅವರು ಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಮೆಡಿಕಲ್ ಸ್ಟೋರ್‌ನಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಂತಕರು ದಾಳಿ ಮಾಡಿದ್ದಾರೆ ಎನ್ನಲಾಗಿದೆ....
ಭಾರತದಲ್ಲಿ HMPV ಸೋಂಕು ಬಗ್ಗೆ ಸದ್ಯಕ್ಕೆ ಆತಂಕ ಇಲ್ಲ, ಆದರೆ ಮುನ್ನೆಚ್ಚರಿಕೆ ಅಗತ್ಯ

ಭಾರತದಲ್ಲಿ HMPV ಸೋಂಕು ಬಗ್ಗೆ ಸದ್ಯಕ್ಕೆ ಆತಂಕ ಇಲ್ಲ, ಆದರೆ ಮುನ್ನೆಚ್ಚರಿಕೆ ಅಗತ್ಯ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಚೀನಾದಲ್ಲಿ ತಲ್ಲಣ ಸೃಷ್ಟಿಸಿರುವ ಹೆಚ್ಎಂಪಿವಿ ಸೋಂಕು ಬಗ್ಗೆ ಭಾರತದಲ್ಲಿ ಆತಂಕವಿಲ್ಲ ಎಂದು ಸರ್ಕಾರ ಹೇಳಿದೆ. ಚೀನಾದಲ್ಲಿ ಹೆಚ್ಎಂಪಿವಿ ಸೋಂಕು ವ್ಯಾಪಕವಾಗಿದ್ದು, ಇದರ ಹಿನ್ನೆಲೆಯಲ್ಲಿ ಭಾರತದಲ್ಲೂ ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ವಹಿಸಲಾಗಿದೆ. ಆದರೆ, ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್ ಗೋಯಲ್ ತಿಳಿಸಿದ್ದಾರೆ.ಹೆಚ್ಎಂಪಿವಿ ವೈರಸ್ ಶೀತದಂತಹ ಲಕ್ಷಣಗಳನ್ನು ಹೊಂದಿದ್ದು, ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು ಎಂದಿರುವ ಅವರು, ಭಾರತದಲ್ಲಿ 2024ರ ಡಿಸೆಂಬರ್ ನಲ್ಲಿ ಉಸಿರಾಟ ಸಂಬಂಧಿ ಸಮಸ್ಯೆಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗಿಲ್ಲ ಎಂದಿದ್ದಾರೆ. ಹೀಗಿರುವಾಗ ಹೆಚ್ಎಂಪಿವಿ ಸೋಂಕು ಬಗ್ಗೆ ಆತಂಕ ಪಡಬೇಕಿಲ್ಲ. ಒಂದೊಮ್ಮೆ ಸಮಸ್ಯೆ ಉಲ್ಬಣಿಸಿದರೂ ನಮ್ಮ ಆಸ್ಪತ್ರೆಗಳಲ್ಲಿ ಅದಕ್ಕೆ ಬೇಕಾದಷ್ಟು ವ್ಯವಸ್ಥೆಗಳು ಲಭ್ಯವಿದೆ ಎಂದು ಅವರು ಹೇಳಿದ್ದಾರೆ.ಇದೇ ವೇಳೆ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ಡಾ.ಅತು...
ರಾಜ್ಯದಲ್ಲಿ ಬೆಲೆ ಏರಿಕೆ ಅವಾಂತರ; ಸರ್ಕಾರದ ವಿರುದ್ಧ ಪ್ರತಿಪಕ್ಷ ಆಕ್ರೋಶ

ರಾಜ್ಯದಲ್ಲಿ ಬೆಲೆ ಏರಿಕೆ ಅವಾಂತರ; ಸರ್ಕಾರದ ವಿರುದ್ಧ ಪ್ರತಿಪಕ್ಷ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂಡ ನಂತರ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗುತ್ತಲೇ ಇವೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಗ್ಯಾರಂಟಿ ಕಾರಣಗಳಿಂದಾಗಿ ಇಂದು ರಾಜ್ಯದ ಜನರು ದುಬಾರಿ ಬೆಲೆಯನ್ನು ತೆರಬೇಕಾಗಿದೆ. ಹಾಲಿನ ದರ ಏರಿಸಲಾಗಿದೆ, ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಸ್ಟ್ಯಾಂಪ್ ಡ್ಯೂಟಿ, ರಿಜಿಸ್ಟ್ರೇಶನ್ ಶುಲ್ಕ ಮಾತ್ರವಲ್ಲದೆ ವಿವಿಧ ತೆರಿಗೆಗಳನ್ನೂ ಹೆಚ್ಚಿಸಲಾಗಿದೆ ಎಂದು ಆರೋಪಿಸಿದ್ದಾರೆ.ಅಭಿವೃದ್ಧಿ ಒಂದು ಬಿಟ್ಟು ತಲೆ ಬೋಳಿಸುವ ಕೆಲಸ ಮಾಡುವ ಸರ್ಕಾರ ಇದಾಗಿದೆ. ರಾಜ್ಯ ಸರ್ಕಾರದ ಖಜಾನೆ ಪೂರ್ತಿ ಖಾಲಿಯಾಗಿದೆ. ಸರ್ಕಾರದ ದಿನ ದೂಡಲು ಜನತೆಗೆ ಬರೆ ಹಾಕುವ ಕೆಲಸ ಮಾಡುತ್ತಿದೆ ಎಂದು ಅವರು ದೂರಿದ್ದಾರೆ. Read more.. AFTER CM SIDDARAMAIAH'S DINNER MEET WITH 35 CONG MLAS, K'TAKA BJP MOCKS DY CM SHIVAKUMAR.. ಗ್ಯಾರಂಟಿ ಕಾರಣಗಳಿಂದಾಗಿ ಇಂದು ರಾಜ್ಯದ ಜನರು ದುಬಾರಿ ಬೆಲೆಯನ್ನು ತೆರಬೇಕಾಗಿದೆ. ಹಾಲಿನ ದರ ಏರಿಸಲಾಗಿದೆ, ವಿದ್ಯುತ್ ದರ ಏರಿಕೆ ಮಾಡಲಾಗಿದೆ. ಸ್ಟ್ಯಾಂಪ್...
ಆಂಧ್ರಪ್ರದೇಶದಲ್ಲೂ ‘ಶಕ್ತಿ’ ಜಾರಿಗೆ ಚಿಂತನೆ? ನಾಯ್ಡು ಸರ್ಕಾರದ ಸಚಿವರ ನಿಯೋಗದಿಂದ ಕರ್ನಾಟಕದಲ್ಲಿ ಕಸರತ್ತು

ಆಂಧ್ರಪ್ರದೇಶದಲ್ಲೂ ‘ಶಕ್ತಿ’ ಜಾರಿಗೆ ಚಿಂತನೆ? ನಾಯ್ಡು ಸರ್ಕಾರದ ಸಚಿವರ ನಿಯೋಗದಿಂದ ಕರ್ನಾಟಕದಲ್ಲಿ ಕಸರತ್ತು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆಂಧ್ರ ಪ್ರದೇಶದಲ್ಲೂ ಕರ್ನಾಟಕ ಮಾದರಿ 'ಶಕ್ತಿ' ಯೋಜನೆ ಜಾರಿ ಬಗ್ಗೆ ಚಂದ್ರಬಾಬು ನಾಯ್ಡು ಸರ್ಕಾರ ಚಿಂತನೆ ನಡೆಸಿದಂತಿದೆ. ಈ ಸಂಬಂಧ ಆಂಧ್ರಪ್ರದೇಶ ಸರ್ಕಾರದ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ಹಾಗೂ ಇತರ ಸಚಿವರ ತಂಡ ಬೆಂಗಳೂರಿನಲ್ಲಿ ಕಸರತ್ತು ನಡೆಸಿದೆ.ಆಂಧ್ರಪ್ರದೇಶ ಸರ್ಕಾರದ ಸಾರಿಗೆ, ಯುವಜನ & ಕ್ರೀಡಾ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ, ಗೃಹ ಸಚಿವ ಅನಿತಾ ವಂಗಲಪುಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಗುಮ್ಮಿಡಿ ಸಂಧ್ಯಾರಾಣಿ ಹಾಗೂ ಸಾರಿಗೆ, ಆರ್ಥಿಕ ಇಲಾಖೆ ಅಧಿಕಾರಿಗಳು, ಆಂಧ್ರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳ ತಂಡ ಬೆಂಗಳೂರಿಗೆ ಆಗಮಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕೇಂದ್ರ ಕಛೇರಿಗೆ ಭೇಟಿ ನೀಡಿದೆ. ನಿಗಮದಲ್ಲಿ 'ಶಕ್ತಿ' ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮಗಳ ಕುರಿತು ಇಲ್ಲಿನ ಸಾರಿಗೆ ಸಚಿವರು, ಸಾರಿಗೆ ಇಲಾಖೆ ಕಾರ್ಯದರ್ಶಿಗಳು, ಹಾಗೂ KSRTC ಉಪಾಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರ ಜೊತೆ 'ಶಕ್ತಿ ಯೋಜನೆ'ಯ ಫಲಪ್ರದ ಜಾಯಿ ಕುರಿತಂತೆ ಆಂಧ್ರ ಸರ್ಕಾರದ ನಿಯೋಗದ ಪ್ರಮುಖರು ...
ಜ್ಯೋತಿರಾವ್ ಫುಲೆ 197 ನೇ ಜನ್ಮದಿನದಂದು ಪ್ರತೀಕ್ ಗಾಂಧಿ ಅಭಿನಯದ ‘ಫುಲೆ’ ಸಿನಿಮಾ ಬಿಡುಗಡೆ

ಜ್ಯೋತಿರಾವ್ ಫುಲೆ 197 ನೇ ಜನ್ಮದಿನದಂದು ಪ್ರತೀಕ್ ಗಾಂಧಿ ಅಭಿನಯದ ‘ಫುಲೆ’ ಸಿನಿಮಾ ಬಿಡುಗಡೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಬಹುನಿರೀಕ್ಷಿತ ಪ್ರತೀಕ್ ಗಾಂಧಿ ಅಭಿನಯದ “ಫುಲೆ” ಖ್ಯಾತ ಸಮಾಜ ಸುಧಾರಕ ಮಹಾತ್ಮ ಜ್ಯೋತಿರಾವ್ ಫುಲೆ ಅವರ 197 ನೇ ಜನ್ಮ ವಾರ್ಷಿಕೋತ್ಸವದಂದು ಬಿಡುಗಡೆಯಾಗಲಿದೆ.ಭಾರತೀಯ ಇತಿಹಾಸದಲ್ಲಿ ಅಪ್ರತಿಮ ವ್ಯಕ್ತಿಯ ಜೀವನ ಮತ್ತು ಕೊಡುಗೆಗಳನ್ನು ಎತ್ತಿ ತೋರಿಸುವ ಈ ಚಲನಚಿತ್ರವು ಅವರ ಕ್ರಾಂತಿಕಾರಿ ಆಲೋಚನೆಗಳನ್ನು ಮುಂಚೂಣಿಗೆ ತರುವ ಭರವಸೆಯನ್ನು ನೀಡುತ್ತದೆ, ಸಾಮಾಜಿಕ ಅನ್ಯಾಯ ಮತ್ತು ಅಸಮಾನತೆಯ ವಿರುದ್ಧದ ಅವರ ಹೋರಾಟದ ಪ್ರಬಲ ಚಿತ್ರಣವನ್ನು ಪ್ರೇಕ್ಷಕರಿಗೆ ನೀಡುತ್ತದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.ಸಿನಿಮಾದ ಪೋಸ್ಟರ್ ಹಂಚಿಕೊಂಡಿರುವ ಚಿತ್ರ ತಂಡ 'ಭಾರತದ ಮೊದಲ ಮಹಿಳಾ ಶಿಕ್ಷಣತಜ್ಞೆ, ಡ್ಯಾನ್ಸಿಂಗ್ ಶಿವ ಫಿಲ್ಮ್ಸ್, ಕಿಂಗ್ಸ್‌ಮೆನ್ ಪ್ರೊಡಕ್ಷನ್ಸ್, ಸಾವಿತ್ರಿಬಾಯಿ ಫುಲೆ ಅವರ ಜನ್ಮ ವಾರ್ಷಿಕೋತ್ಸವದಂದು ಮತ್ತು ನಾವು ವಿಶ್ವದಾದ್ಯಂತ ಬಿಡುಗಡೆಯನ್ನು ಘೋಷಿಸಲು ಒಟ್ಟಾಗಿ ಬರುತ್ತಿದ್ದೇವೆ. ಏಪ್ರಿಲ್ 11, 2025 ರಂದು ಫುಲೆ ಚಲನಚಿತ್ರವು ಜ್ಯೋತಿರಾವ್ ಅವರ 197 ನೇ ಜನ್ಮದಿನವನ್ನು ಸೂಚಿಸುತ್ತದೆ ಎಂದು ಸಿನಿಮಾ ತಂಡ ಹೇಳಿದೆ.ರಾಷ್ಟ್ರಪ್ರಶಸ್ತಿ ವಿಜೇತ ಚಿತ್ರನಿರ್ಮಾಪಕ ಅನಂತ್ ...
BJPಯವರಿಂದ 5900 ಕೋ.ರೂ.ಸಾಲದ ಹೊರೆ, ಹಾಗಾಗಿ ಬಸ್ ಟಿಕೆಟ್ ದರ ಹೆಚ್ಚಳ; ರಾಮಲಿಂಗ ರೆಡ್ಡಿ ಎದಿರೇಟು

BJPಯವರಿಂದ 5900 ಕೋ.ರೂ.ಸಾಲದ ಹೊರೆ, ಹಾಗಾಗಿ ಬಸ್ ಟಿಕೆಟ್ ದರ ಹೆಚ್ಚಳ; ರಾಮಲಿಂಗ ರೆಡ್ಡಿ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಸ್ ದರ ಹೆಚ್ಚಳ ಖಂಡಿಸಿ, ಬಿಜೆಪಿಯವರು ಪ್ರತಿಭಟನೆ ಮಾಡಿ ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದಾರೆ.ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಜನರನ್ನು ಹಾಗೂ ಅಭಿವೃದ್ಧಿಯನ್ನು ಮರೆತಿದ್ದರು ಎಂದು ಬೊಟ್ಟು ಮಾಡಿರುವ ರಾಮಲಿಂಗಾ ರೆಡ್ಡಿ, ಕೇಂದ್ರ ಸರ್ಕಾರದಲ್ಲಿರುವ ಬಿಜೆಪಿ ಡಾಲರ್ ಬೆಲೆ ಕಡಿಮೆಯಾದರೂ ಪೆಟ್ರೋಲ್ ಡೀಸೆಲ್ ಬೆಲೆ ಕಳೆದ 9 ವರ್ಷಗಳಿಂದ ಕಡಿಮೆ ಮಾಡಿಲ್ಲ ಹಾಗೂ ಇದೇ ಬಿಜೆಪಿ ತಾನು ಆಡಳಿತದಲ್ಲಿದ್ದಾಗ 2020ರಲ್ಲಿ ಬಸ್ ದರ ಹೆಚ್ಚಳ ಮಾಡಿದ್ದರು ಎಂದು ಗಮನಸೆಳೆದಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ರಾಮಲಿಂಗಾ ರೆಡ್ಡಿ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಹೆಚ್ಚಳ ಮಾಡಿದಾಗ ಅವರಿಗೆ ಜನರ ತೊಂದರೆ ತಿಳಿಯಲಿಲ್ಲವೇ? ಎಂದು ಎದಿರೇಟು ನೀಡಿದ್ದಾರೆ. ಬಡಜನರ ಗ್ಯಾಸ್ ಸಬ್ಸಿಡಿಯನ್ನು ನಿಲ್ಲಿಸಿದರು ಆಗ ಬಿಜೆಪಿ ಅವರಿಗೆ ಜನರ ಕಷ್ಟ ತಿಳಿಯಲಿಲ್ಲವೆ? ಅಧಿಕಾರದಲ್ಲಿದ್ದಾಗ ಒಳ್ಳೆ ಆಡಳಿತ ನೀಡಿ ನಾಲಕ್ಕು ನಿಗಮಗಳನ್ನು ಅಭಿವೃದ್ಧಿ ಮಾಡಲು ಪ್ರಯತ್ನಿಸಿದ್ದರೆ ಈ ತೊಂದರೆ ನಮಗೆ ಬರುತ್ತ...
ನಿಮ್ಹಾನ್ಸ್: ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ

ನಿಮ್ಹಾನ್ಸ್: ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆಯಾಗಿ ಗುರುತಾಗಿರುವ ರಾಜಧಾನಿ ಬೆಂಗಳೂರಿನ ನಿಮ್ಹಾನ್ಸ್'ನ ಸುವರ್ಣ ಮಹೋತ್ಸವ ಸಮಾರಂಭ ಗಮನಸೆಳೆಯಿತು. ಬೆಂಗಳೂರಿನ ನಿಮ್ಹಾನ್ಸ್ ಆವರಣದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಆರೋಗ್ಯ ಸಚಿವರಾದ ಜಗತ್ ಪ್ರಕಾಶ್ ನಡ್ಡಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.#HealthForAllPresident of India @rashtrapatibhvn Addresses Golden Jubilee Celebrations of #NIMHANS, Bengaluru in the presence of Shri @JPNadda, Union Health Minister and Shri @siddaramaiah, Chief Minister of KarnatakaThe dedication displayed by faculty members, students and… pic.twitter.com/jGHh0XPHKf — Ministry of Health (@MoHFW_INDIA) January 3, 2025   ಸಮಾರಂಭದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ದೇಶದ ಅತ್ಯಂತ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ನಿಮ್ಹಾನ್ಸ್ ಆಸ್ಪತ್ರೆ...
ಬಸ್‌ ಟಿಕೆಟ್‌ ದರ ಏರಿಕೆ ಖಂಡಿಸಿ ಪ್ರತಿಭಟನೆ, ಬಸ್‌ ಪ್ರಯಾಣಿಕರ ಕೈಗೆ ಹೂ ನೀಡಿದ ಬಿಜೆಪಿ ನಾಯಕರು

ಬಸ್‌ ಟಿಕೆಟ್‌ ದರ ಏರಿಕೆ ಖಂಡಿಸಿ ಪ್ರತಿಭಟನೆ, ಬಸ್‌ ಪ್ರಯಾಣಿಕರ ಕೈಗೆ ಹೂ ನೀಡಿದ ಬಿಜೆಪಿ ನಾಯಕರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿರುವ ಬಸ್‌ ಟಿಕೆಟ್‌ ದರ ಏರಿಕೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ವಿಭಿನ್ನವಾಗಿ ಪ್ರತಿಭಟಿಸಿದರು. ಬಸ್‌ ಪ್ರಯಾಣಿಕರ ಕೈಗೆ ಹೂ ನೀಡಿ, ಸಿಎಂ ಸಿದ್ದರಾಮಯ್ಯನವರ ಪರವಾಗಿ ಕ್ಷಮೆ ಯಾಚಿಸಿದ ಸನ್ನಿವೇಶ ಗಮನಸೆಳೆಯಿತು.ಬಸ್‌ನಲ್ಲಿ ಕುಳಿತಿದ್ದ ಪ್ರಯಾಣಿಕರ ಬಳಿ ಹೋದ ಪ್ರತಿಪಕ್ಷ ನಾಯಕರಾದ ಆರ್‌.ಅಶೋಕ ಹಾಗೂ ಛಲವಾದಿ ನಾರಾಯಣಸ್ವಾಮಿ, 'ಕಾಂಗ್ರೆಸ್‌ ಸರ್ಕಾರ ಬೆಲೆ ಏರಿಕೆ ಮಾಡುವುದಿಲ್ಲವೆಂದು ನೀವು ಮತ ನೀಡಿದ್ದೀರಿ. ಆದರೆ ಮಾತಿಗೆ ತಪ್ಪಿದ ಸರ್ಕಾರ ಹೊಸ ವರ್ಷದಂದೇ ಟಿಕೆಟ್‌ ದರ ಏರಿಕೆ ಮಾಡಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯನವರ ಪರವಾಗಿ ನಾನು ಕ್ಷಮೆ ಕೇಳುತ್ತಿದ್ದೇನೆ' ಎಂದರು.ಬಸ್‌ ದರ ಏರಿಕೆಯ ಮೂಲಕ ಪ್ರಯಾಣಿಕರ ಕಿವಿಗೆ ಹೂವು ಇಡುತ್ತಿರುವ @INCKarnataka ಸರ್ಕಾರದ ವಿರುದ್ಧ ಬಿಜೆಪಿ ಸಮರ ಸಾರಿದೆ. ಗ್ಯಾರಂಟಿಯಿಂದಾಗಿರುವ ನಷ್ಟವನ್ನು ಬೆಲೆ ಏರಿಕೆಯ ಮೂಲಕ ಸರಿದೂಗಿಸುವ ತಂತ್ರ ಅವೈಜ್ಞಾನಿಕ. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ನೀಡಿ, ಇಬ್ಬರು ಪ್ರಯಾಣಿಕರ ದರವನ್ನು ಪುರುಷರಿಂದಲೇ ವಸೂಲು ಮಾಡುವ ನೀತಿಯೇ… ...
ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯ; ಸಿದ್ದರಾಮಯ್ಯ

ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯ; ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಾನಸಿಕ ಆರೋಗ್ಯದ ಆರೈಕೆ ಜೊತೆಗೆ ರೋಗದ ಕುರಿತಾಗಿ ಸಾಮಾನ್ಯವಾಗಿ ಅಂಟಿಕೊಳ್ಳುವ ಸಮಾಜದ ನಕರಾತ್ಮಕ ದೃಷ್ಟಿಕೋನವನ್ನು ಬಹುತೇಕ ನಿವಾರಿಸುವಲ್ಲಿ ನಿಮ್ಹಾನ್ಸ್ ಯಶಸ್ವಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ರಾಜಧಾನಿ ಬೆಂಗಳೂರಿನ ನಿಮ್ಹಾನ್ಸ್’ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪಾರ್ಶ್ವವಾಯು, ತೀವ್ರತರ ಮೆದುಳು ಕಾಯಿಲೆಗಳು ಮತ್ತು ನರರೋಗ ಚಿಕಿತ್ಸೆಯಲ್ಲಿ ಅತ್ಯುತ್ತಮ ಗುಣಮಟ್ಟವನ್ನು ಸಾಧಿಸುವ ಮೂಲಕ ಮಾನಸಿಕ ಸ್ವಾಸ್ಥ್ಯ ಕಾಪಾಡುವಲ್ಲಿ ನಿಮ್ಹಾನ್ಸ್ ಕೊಡುಗೆ ಶ್ಲಾಘನೀಯವಾಗಿದೆ ಎಂದರು.ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಶ್ರೇಷ್ಠತೆಯನ್ನು ಸಾಧಿಸಿರುವ ರಾಷ್ಟ್ರೀಯ ಮಹತ್ವದ ಈ ಸಂಸ್ಥೆ ಕರ್ನಾಟಕದಲ್ಲಿರುವುದು ನಮಗೆಲ್ಲರಿಗೂ ಅತ್ಯಂತ ಹೆಮ್ಮೆಯ ವಿಷಯ. ರಾಜ್ಯದಾದ್ಯಂತ ಮಾನಸಿಕ ಆರೋಗ್ಯ ಸೇವೆಯನ್ನು ಕಲ್ಪಿಸಲು ಸರ್ಕಾರ ನಿಮ್ಹಾನ್ಸ್ ನೊಂದಿಗೆ ಜೊತೆಗೂಡಿ ಕಾರ್ಯನಿರ್ವಹಿಸುತ್ತಿದೆ. ನಿಮ್ಹಾನ್ಸ್‌ನೊಂದಿಗಿನ ಜಂಟಿ ಸಹಭಾಗಿತ್ವದ ಮೂಲಕ ರಾಜ್ಯದ ಪ್ರತಿಯೊಬ್ಬರಿಗೂ ಮಾನಸಿಕ ಆರೋಗ್ಯ ಸೇವೆಯನ್ನು ಖಾತ್ರಿಪಡಿಸಲು ನಮಗೆ ಸಾಧ್ಯವಾಗಿದೆ ನೆಂದು ಸಿದ್ದರಾಮ...
ಕೋವಿಡ್ ಮಾದರಿಯಲ್ಲೇ ಮತ್ತೊಂದು ಮಾರಣಾಂತಿಕ ವೈರಸ್ ಉಲ್ಬಣ; ಹೊಸ ವೈರಾಣು ಹೆಸರು ‘HMPV’

ಕೋವಿಡ್ ಮಾದರಿಯಲ್ಲೇ ಮತ್ತೊಂದು ಮಾರಣಾಂತಿಕ ವೈರಸ್ ಉಲ್ಬಣ; ಹೊಸ ವೈರಾಣು ಹೆಸರು ‘HMPV’

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಜಗತ್ತನ್ನು ಬೆಚ್ಚಿಬೀಳಿಸಿದ್ದ ಕೋವಿಡ್ ಸೋಂಕಿನ ಮಾದರಿಯಲ್ಲೇ ಮತ್ತೊಂದು ವೈರಾಣು ಹಾವಳಿ ಚೀನಾದಲ್ಲಿ ತಲ್ಲಣ ಸೃಷ್ಟಿಸಿದೆ. ಈ ಮತ್ತೊಂದು ನಿಗೂಢ ವೈರಾಣು ಬಗ್ಗೆ ವಿಶ್ವದೆಲ್ಲೆಡೆ ಆತಂಕ ಎದುರಾಗಿದೆ.ಕೋವಿಡ್ -19 ಸೋಂಕು ಉಲ್ಬಣಗೊಂಡ ಐದು ವರ್ಷಗಳ ನಂತರ, ಚೀನಾದಲ್ಲಿ ಹೊಸ ಉಸಿರಾಟ ತೊಂದರೆಯನ್ನು ಕಾಡುವ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಎಂಬ ಸೋಂಕು ಕಾಣಿಸಿಕೊಂಡಿದೆ.ಈ HMPV ವೈರಸ್ ವೇಗವಾಗಿ ಹರಡುತ್ತಿದೆ ಎಂದು ಹಲವಾರು ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್'ಗಳು ಆತಂಕ ಹೆಚ್ಚಿಸಿವೆ. ಚೀನಾದ ಆಸ್ಪತ್ರೆಗಳು HMPV ಸೋಂಕಿಗೆ ಒಳಗಾದವರಿಂದ ತುಂಬಿಹೋಗಿವೆ ಎಂಬ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಎಂದು ಖ್ಯಾತ ಮಾಧ್ಯಮ 'ಏಷ್ಯಾ ಪೋಸ್ಟ್' (Asia Post) ವರದಿ ಮಾಡಿದೆ.HMPV ಪ್ರಕರಣಗಳ ಹೆಚ್ಚಳವು ಹಠಾತ್ ಸಾವುಗಳ ಆತಂಕಕಾರಿ ಸನ್ನಿವೇಶ ಸೃಷ್ಟಿಸಬಹುದೆಂದು ಹೇಳಲಾಗುತ್ತಿದ್ದು, 40 ರಿಂದ 80 ವರ್ಷ ವಯಸ್ಸಿನವರ ಮೇಲೆ ವಿಶೇಷವಾಗಿ ಪರಿಣಾಮ ಬೀಳಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಏನಿದು HMPV? 2001 ರಲ್ಲಿ ಪತ್ತೆಯಾದ...