
ಲೆಬನಾನ್‌ನಲ್ಲಿ 700 ಕ್ಕೂ ಹೆಚ್ಚು ಹೆಜ್ಬೊಲ್ಲಾ ತಾಣಗಳ ಮೇಲೆ ಇಸ್ರೇಲ್ ದಾಳಿ
ಜೆರುಸಲೆಮ್: ನಡೆಯುತ್ತಿರುವ ಸಂಘರ್ಷದಲ್ಲಿ ಸುಮಾರು 1,900 ಇರಾನಿನ ಸೈನಿಕರು ಹಾಗೂ ಕಮಾಂಡರ್‌ಗಳು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ (Israel Defense Forces) ತಿಳಿಸಿದೆ. ಈ ಮಾಹಿತಿ ಮಿಲಿಟರಿ ವಕ್ತಾರ ಎಫೀ ಡೆಫ್ರಿನ್ ಅವರು ಸೋಮವಾರ ನೀಡಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ಮುಂಜಾನೆ ಇರಾನ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದು, ದೇಶದಲ್ಲಿ ಇರಾನಿನ ದಾಳಿಯಿಂದ ಮೃತಪಟ್ಟ ನಾಗರಿಕರ ಸಂಖ್ಯೆ 12ಕ್ಕೆ ಏರಿದೆ ಎಂದು ಹೇಳಿದರು. ಇದೇ ವೇಳೆ ಹೆಜ್ಬೊಲ್ಲಾ (Hezbollah) ಉಗ್ರಗಾಮಿಗಳೊಂದಿಗೆ ಲೆಬನಾನ್ನಲ್ಲಿ ನಡೆದ ಹೋರಾಟದಲ್ಲಿ ಇಬ್ಬರು ಇಸ್ರೇಲಿ ಸೈನಿಕರೂ ಸಾವನ್ನಪ್ಪಿದ್ದಾರೆ.ಇಸ್ರೇಲ್ ಆರೋಗ್ಯ ಸಚಿವಾಲಯ (Israel Health Ministry)ದ ಪ್ರಕಾರ, ಇರಾನ್ ಮೇಲೆ ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ನಡೆಸಿದ ದಾಳಿಗಳು ಆರಂಭವಾದ ಬಳಿಕ ಇಸ್ರೇಲ್‌ನಲ್ಲಿ ಒಟ್ಟು 2,238 ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ 91 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.ಇಸ್ರೇಲ್ ವಾಯುಪಡೆ ಸೋಮವ...









