Saturday, June 13

Focus

ಪಾಕಿಸ್ತಾನದ ಪೇಶಾವರದ ಮಸೀದಿ ಬಳಿ ಸ್ಫೋಟ: ಐವರ ಸಾವು

ಪಾಕಿಸ್ತಾನದ ಪೇಶಾವರದ ಮಸೀದಿ ಬಳಿ ಸ್ಫೋಟ: ಐವರ ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಪಾಕಿಸ್ತಾನದ ಪೇಶಾವರ ಸಮೀಪ ಮಸೀದಿ ಬಳಿ ಬಾಂಬ್ ಸ್ಫೋಟ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ.ಪೇಶಾವರ ಸಮೀಪದ ಖೈಬರ್ ಪಖ್ತುಂಖ್ವಾದಲ್ಲಿರುವ ಮಸೀದಿ ಬಳಿ ಸಂಭವಿಸಿದ ಈ ಸ್ಫೋಟದಲ್ಲಿ 20 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದ ಬೆನ್ನಲ್ಲೇ ಉಗ್ರರು ದಾಳಿನಡೆಸುವ ಎಚ್ಚರಿಕೆ ನೀಡಿದ್ದರು. ಅದರಂತೆಯೇ ಸ್ಫೋಟ ಸಂಭವಿಸಿದ್ದು ಪಾಕಿಸ್ತಾನಕ್ಕೆ ಈ ಘಟನೆ ಸವಾಲಾಗಿ ಪರಿಣಮಿಸಿದೆ....
ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ತನಿಖೆಯ ಅಖಾಡಕ್ಕೆ ಧುಮುಕಿದ ಸಿಬಿಐ

ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ತನಿಖೆಯ ಅಖಾಡಕ್ಕೆ ಧುಮುಕಿದ ಸಿಬಿಐ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನಕ್ಕೊಳಗಾಗಿದ್ದು, ಇದೀಗ ಸಿಬಿಸಿ ಕೂಡಾ ಪ್ರತನಿಖೆಯ ಅಖಾಡಕ್ಕೆ ಧುಮುಕಿದೆ.ನಟಿ ರನ್ಯಾ ರಾವ್ ವಿರುದ್ಧ ಡಿಆರ್​ಐ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎನ್ನಲಾಗಿದೆ. ಸಿಬಿಐ ಮುಂಬೈ ಹಾಗೂ ಬೆಂಗಳೂರಿನಲ್ಲಿ ಪರಿಶೀಲನೆಯಲ್ಲಿ ತೊಡಗಿರುವ ಸಿಬಿಐ ಇದೀಗ ತಾನು ಕೂಡಾ ತನಿಖೆಗೆ ಮುಂದಾಗಿದೆ.ವಿದೇಶದಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಬಂಧಿಸಲಾಗಿತ್ತು. ಆಕೆಯಿಂದ ಸುಮಾರು 14.20 ಕೆಜಿ ಚಿನ್ನ ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಡಿಆರ್​ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗಂಭೀರ ಆರೋಪದಲ್ಲಿ ಬಂಧಿತರಾಗಿರುವ ನಟಿ ರನ್ಯಾ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. #WATCH | Bengaluru | Kannada actor Ranya Rao, arrested by DRI for allegedly smuggling gold from Dubai, brought to a special court hearing cases of economic offences pic.twitter.com/7w3E38qYwV— ANI (@ANI)...
ಕನ್ನಡಿಗರ ಮೇಲಿನ ದಾಳಿ ಖಂಡಿಸಿ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಕರೆ

ಕನ್ನಡಿಗರ ಮೇಲಿನ ದಾಳಿ ಖಂಡಿಸಿ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಕರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕನ್ನಡಿಗರ ಮೇಲೆ ಮರಾಠಿಗರು ನಡೆಸಿರುವ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘನೆಗಳು ಸರಣಿ ಪ್ರತಿಭಟನೆ ಹಾಗೂ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕೆಎಸ್ಆರ್‌ಟಿಸಿ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳ ಮೇಲಿನ ಮರಾಠಿಗರ ದಾಳಿ ಖಂಡಿಸಿ ಶುಕ್ರವಾರ ಸರಣಿ ಪ್ರತಿಭಟನೆಗಳನ್ನು ನಡೆಸಲಾಗುವುದು ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಆಚರಿಸಲಾಗುವುದು ಎಂದು ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.ಈ ಸಂಬಂಧ ಬೆಂಗಳೂರಿನಲ್ಲಿ ಶುಕ್ರವಾರ ಕನ್ನಡ ಪರ ಸಂಘಟನೆಗಳ ಸಭೆ ನಡೆಯಿತು. ಈ ಸಭೆಯಲ್ಲಿ ಸರಣಿ ಹೋರಾಟ ಹಾಗೂ ಕರ್ನಾಟಕ ಬಂದ್ ಆಚರಿಸಲು ನಿರ್ಧರಿಸಲಾಯಿತು. ಈ ಬಗ್ಗೆ ಸುದ್ದಿಗಾರರಿಗೆ ವಿವರ ಒದಗಿಸಿದ ವಾಟಾಳ್ ನಾಗರಾಜ್, ಶುಕ್ರವಾರ ಸರಣಿ ಪ್ರತಿಭಟನೆಗಳನ್ನು ನಡೆಸಲಾಗುವುದು, ಮಾರ್ಚ್ 3 ರಂದು ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು ಹಾಗೂ ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಆಚರಿಸಲಾಗುವುದು ಎಂದು ತಿಳಿಸಿದರು.ಈ ನಡುವೆ, ಮಾರ್ಚ್ 7 ರಂದು ಬೆಳಗಾವಿ ಚಲೋಗೆ ಕರೆ ನೀಡಲಾಗಿದ್ದು, ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ...
ಸರ್ಕಾರದ ಅನುದಾನ ಇಲ್ಲದಿದ್ದರೂ ಬೈಂದೂರು ಶಾಸಕ ಗಂಟಿಹೊಳೆ ಕಾಮಗಾರಿ ಕಮಾಲ್

ಸರ್ಕಾರದ ಅನುದಾನ ಇಲ್ಲದಿದ್ದರೂ ಬೈಂದೂರು ಶಾಸಕ ಗಂಟಿಹೊಳೆ ಕಾಮಗಾರಿ ಕಮಾಲ್

Focus, ಪ್ರಮುಖ ಸುದ್ದಿ, ರಾಜ್ಯ
ಉಡುಪಿ: ಸರ್ಕಾರದ ಅನುದಾನ ಇಲ್ಲದೇ ಇದ್ದರೂ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ  ಕಾಮಗಾರಿ ಕಮಾಲ್ ಪ್ರದರ್ಶಿಸಿದ್ದಾರೆ.ಇಡೀ ರಾಜ್ಯದಲ್ಲಿ ಎರಡೂ ಪಕ್ಷದಲ್ಲಿ ರಾಜಕೀಯ ತಲ್ಲಣವಾಗುತ್ತಿದ್ದರೂ ಈ ಬೈಂದೂರು ಶಾಸಕ ಗಂಟಿಹೊಳೆ ಮಾತ್ರ ತನ್ನ ಕ್ಷೇತ್ರಕ್ಕೆ ಬೇರೆ ಬೇರೆ ಖಾಸಗಿ ಸಂಸ್ಥೆಗಳ ಮುಕಾಂತರ ಒಂದಲ್ಲಾ ಒಂದು ಕೆಲಸ ಮಾಡುತ್ತಾ ಸುದ್ದಿಯಲಿರುತ್ತಾರೆ. ಶಾಸಕರು 'ಸಮೃದ್ಧ ಬೈಂದೂರು' ಪರಿಕಲ್ಪನೆಯಲ್ಲಿ ಖಾಸಗಿ ಸಂಸ್ಥೆಗಳಿಂದ ಮತ್ತು ದೇಶ ವಿದೇಶಗಳಲ್ಲಿರುವ ಉದ್ಯಮಿ & ದಾನಿಗಳನ್ನು ಭೇಟಿಯಾಗಿ ತನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಅನುದಾನ ಸಂಗ್ರಹಿಸಿದ್ದಾರೆ.ಶಾಸಕ ಗಂಟಿಹೊಳೆಯವರು 300 ಟ್ರೀಸ್ ಎನ್ನುವ ಯೋಜನೆಯಡಿಯಲ್ಲಿ 300 ಸರ್ಕಾರಿ ಶಾಲೆ ಅಭಿವೃದ್ಧಿ ಪಡೆಸುವ ಗುರಿ ಇಟ್ಟುಕೊಂಡು ಹಳ್ಳಿ ಪ್ರದೇಶದ ಶಾಲೆಗಳನ್ನು ದಾನಿಗಳ ಮುಖಾಂತರ ಅಭಿವೃದ್ಧಿಗೆ ಕಾರಣರಾಗಿದ್ದಾರೆ.ಬೈಂದೂರು ಜನರು ಎಂದೂ ಕಾಣದ ಡಯಲಿಸಿಸ್ ಸೆಂಟರ್, ಸುಸರ್ಜಿತ ಆಸ್ಪತ್ರೆ, ICU, ಎಮರ್ಜೆನ್ಸಿ ಚಿಕಿತ್ಸೆ, ಬೆನ್ನು ಹುರಿ ಸಮಸ್ಯೆ ನಿಗ್ರಹ ಕೇಂದ್ರ ಹೀಗೆ ಹಲವಾರು ಯೋಜನೆಗಳನ್ನು ಜಾರಿಗೆ ತರುವಲ್ಲಿ ಸಫಲರಾಗಿದ್ದಾರೆ.ಇದೀಗ ಬೈ...
ಪುಣೆ ಬಸ್ಸಿನಲ್ಲೇ ಅತ್ಯಾಚಾರ; ಆರೋಪಿ ಬಂಧನ

ಪುಣೆ ಬಸ್ಸಿನಲ್ಲೇ ಅತ್ಯಾಚಾರ; ಆರೋಪಿ ಬಂಧನ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಪುಣೆ: ಮಹಿಳೆ ಮೇಲೆ ಬಸ್ಸಿನಲ್ಲೇ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ಧಾರೆ.ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂಬಾತ ಆರೋಪಿಯಾಗಿದ್ದು ಆತನನ್ನು ಶಿರೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಠಾಣೆ ಸಮೀಪವೇ ಸಾರಿಗೆ ಸಂಸ್ಥೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಲಾಗಿತ್ತು.ಈ ಪ್ರಕರಣ ಬೇಧಿಸಲು ಪೊಲೀಸರು ಮಹಾರಾಷ್ಟ್ರದಾದ್ಯಂತ ಒಟ್ಟು 13 ತಂಡಗಳನ್ನು ನಿಯೋಜಿಸಿದ್ದರು. ಜೊತೆಗೆ ಆರೋಪಿ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನೂ ಕೂಡ ಪುಣೆ ಪೊಲೀಸರು ಘೋಷಿಸಿದ್ದರು. ಈ ನಡುವೆ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಆರೋಪಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ....
ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲಿದೆಯೇ? ಯುಪಿ, ಬಿಹಾರಎಂಪಿ ರಾಜ್ಯಗಳಲ್ಲಿ ಹೆಚ್ಚಾಗಲಿವೆಯೇ?

ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲಿದೆಯೇ? ಯುಪಿ, ಬಿಹಾರಎಂಪಿ ರಾಜ್ಯಗಳಲ್ಲಿ ಹೆಚ್ಚಾಗಲಿವೆಯೇ?

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ, ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದಿದ್ದಾರೆ.ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆಯನ್ನು ನೋಡಿದರೆ ಅವರಿಗೆ ಒಂದೋ ಮಾಹಿತಿಯ ಕೊರತೆ ಇದೆ, ಇಲ್ಲವಾದರೆ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಅನ್ಯಾಯ ಮಾಡುವ ದುರುದ್ದೇಶ ಇದೆ ಎಂದು ಅರ್ಥಮಾಡಿಕೊಳ್ಳಬಹುದು ಎಂದು ಸಿದ್ದರಾಮಯ್ಯ ವಿಶ್ಲೇಷಣೆ ಮಾಡಿದ್ದಾರೆ.ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಮಾಡಬಾರದೆಂಬ ಸದುದ್ದೇಶ ಕೇಂದ್ರ ಸರ್ಕಾರ ಹೊಂದಿರುವುದಾಗಿದ್ದರೆ ಕ್ಷೇತ್ರ ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಇಲ್ಲವೇ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎಂಬ ಮುಖ್ಯ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕಾಗುತ್ತದೆ. ಎಂದಿರುವ ಸಿದ್ದರಾಮಯ್ಯ, ಇತ್ತೀಚಿನ ಜನಸಂಖ್ಯೆಯ ಅನುಪ...
ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಹರಿಸಿತೇ ರಾಜ್ಯದ ಕಾಂಗ್ರೆಸ್‌ ಸರ್ಕಾರ?

ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಹರಿಸಿತೇ ರಾಜ್ಯದ ಕಾಂಗ್ರೆಸ್‌ ಸರ್ಕಾರ?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸುಮಾರು ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಕಾಂಗ್ರೆಸ್‌ ಸರ್ಕಾರ ಹರಿಸಿದೆ. ಅಲ್ಲಿನ ಕಾಂಗ್ರೆಸ್‌ ಸರ್ಕಾರವನ್ನು ತೃಪ್ತಿಪಡಿಸಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಕನ್ನಡಿಗರ ಹಿತವನ್ನು ಕಡೆಗಣಿಸಿದ್ದಾರೆ. ಸಚಿವ ಪ್ರಿಯಾಂಕ್‌ ಖರ್ಗೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ಮಾಡುತ್ತಿದ್ದಾರೆ. ಈಗ ಅದೇ ಸರ್ಕಾರದ ಸಚಿವರು ನೀರು ಹರಿಸಿರುವುದು ಜನರಿಗೆ ಮಾಡಿರುವ ದ್ರೋಹ. ಮೀರ್‌ ಸಾಧಿಕ್‌ನಂತೆ ಸರ್ಕಾರ ವರ್ತಿಸಿರುವುದನ್ನು ರೈತರು ಕ್ಷಮಿಸುವುದಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವಾಗ ನೀರು ಹರಿಸಿರುವುದರಿಂದ ಜನರಿಗೆ ತೊಂದರೆಯಾಗಲಿದೆ. ಒಬ್ಬೊಬ್ಬ ಸಚಿವರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿದರು.ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಿಬ್ಬಂದಿಗೆ ಸರ...
ಏ.30ರಂದು ಆಂಗ್ಲರ‌ ನಾಡಿನಲ್ಲಿ ಬಸವೇಶ್ವರ ಉತ್ಸವ.. ಬ್ರಿಟೀಷ್ ಕನ್ನಡಿಗರಿಂದ ಭರ್ಜರಿ ತಯಾರಿ..

ಏ.30ರಂದು ಆಂಗ್ಲರ‌ ನಾಡಿನಲ್ಲಿ ಬಸವೇಶ್ವರ ಉತ್ಸವ.. ಬ್ರಿಟೀಷ್ ಕನ್ನಡಿಗರಿಂದ ಭರ್ಜರಿ ತಯಾರಿ..

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಲಂಡನ್: ಆಂಗ್ಲರ ನಾಡು ಲಂಡನ್ ಇದೀಗ ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಸಡಗರದಲ್ಲಿದೆ. ಏಪ್ರಿಲ್ 30ರಂದು ಲಂಡನ್‌ನಲ್ಲಿರುವ ಬಸವೇಶ್ವರ ಪ್ರತಿಮೆಯ ಸ್ಥಳದಲ್ಲೇ ಬಸವೇಶ್ವರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ಬ್ರಿಟೀಷ್ ಕನ್ನಡಿಗರ ನಡುವಿನ ಭಾರತ ವೈಭವಕ್ಕೆ ಸಾಕ್ಷಿಯಾಗಲಿದೆ ಎಂದು ಲಂಡನ್ ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಹೇಳಿದ್ದಾರೆ.'30ನೇ ಏಪ್ರಿಲ್ 2025 ರಂದು ಮಧ್ಯಾಹ್ನ 12:00 ಗಂಟೆಗೆ, ನಾವು ಲಂಡನ್‌ನಲ್ಲಿ ಭಗವಾನ್ ಬಸವೇಶ್ವರರ 891 ನೇ ಜನ್ಮದಿನವನ್ನು ಆಚರಿಸುತ್ತೇವೆ. ಈ ಸಮಾರಂಭದಲ್ಲಿ ಯುನೈಟೆಡ್ ಕಿಂಗ್‌ಡಮ್‌ನಲ್ಲಿರುವ ಭಾರತೀಯ ಹೈಕಮಿಷನರ್ ಭಾಗಿಯಾಗಲಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.‌UK ಯಲ್ಲಿ ಕನ್ನಡ ಸಂಸ್ಕೃತಿ ಮತ್ತು ಪರಂಪರೆಯನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ಶ್ರಮಿಸುತ್ತಿರುವ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಬ್ರಿಟಿಷ್ ಕನ್ನಡ ಸಮೂಹದ ಪ್ರಮುಖರ ಸಮಾಗಮವಾಗಲಿದೆ. ಇದು ಅನನ್ಯ ಹಾಗೂ ಅಪೂರ್ವ ಸನ್ನಿವೇಶಕ್ಕೆ ಸಾಕ್ಷಿಯಾಗಲಿದೆ ಎಂದವರು ಹೇಳಿದ್ದಾರೆ.ಬಸವೇಶ್ವರ ಸ್ಮಾರಕಕ್ಕೆ ಭೇಟಿ ನೀಡಲು ಮತ್ತು ಬಸವೇಶ್ವರ ದೇವರಿಗೆ ನಮನ ಸಲ್ಲಿಸಲು ಅವಕಾ...
ಶ್ರೀಶೈಲಂ ಸುರಂಗ ಕಾಮಗಾರಿ ವೇಳೆ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಹರಸಾಹಸ

ಶ್ರೀಶೈಲಂ ಸುರಂಗ ಕಾಮಗಾರಿ ವೇಳೆ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಹರಸಾಹಸ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಹೈದರಾಬಾದ್: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಶ್ರೀಶೈಲಂ ಎಡದಂಡೆ ಕಾಲುವೆ (SLBC) ಸುರಂಗ ಕಾಮಗಾರಿ ವೇಳೆ ಅಪಾಯದಲ್ಲಿ ಸಿಲುಕಿರುವ ಎಂಟು ಜನರ ರಕ್ಷಣಾ ಕಾರ್ಯಾಚರಣೆ ಆರನೇ ದಿನವೂ ಮುಂದುವರಿದಿದೆ.ಗುರುವಾರ ಬೆಳಿಗ್ಗೆ ಸೇನೆ, ನೌಕಾಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ಇಲಿ ರಂಧ್ರದ ಗಣಿಗಾರರು ಸುರಂಗದಿಂದ ಹೂಳು ಮತ್ತು ಅವಶೇಷಗಳನ್ನು ತೆರವು ಮಾಡುವ ಕಾರ್ಯಾಚರಣೆ ಕೈಗೊಂಡಿದ್ದಾರೆ.ಸುರಂಗ ಕೊರೆಯುವ ಯಂತ್ರದ (TBM) ಹಾನಿಗೊಳಗಾದ ಭಾಗಗಳನ್ನು ಬೇರ್ಪಡಿಸಲು ರಕ್ಷಣಾ ಕಾರ್ಯಕರ್ತರು ಗ್ಯಾಸ್ ಕಟ್ಟರ್‌ಗಳನ್ನು ಬಳಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ತೆಲಂಗಾಣದ ನೀರಾವರಿ ಸಚಿವ N. ಉತ್ತಮ್ ಕುಮಾರ್ ರೆಡ್ಡಿ, ಸುರಂಗದೊಳಗೆ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವ ಕೆಲಸ 'ಬಹಳ ಬೇಗ' ಸಫಲವಾಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ. ತೀವ್ರಗೊಂಡ ರಕ್ಷಣಾ ಪ್ರಯತ್ನಗಳು, ಗಣ್ಯ ಪಡೆಗಳ ನಿಯೋಜನೆ ಮತ್ತು ಹೈಟೆಕ್ ವಿಧಾನದಿಂದ ಕಾರ್ಮಿಕರನ್ನು ತಲುಪುವಲ್ಲಿ ಶೀಘ್ರದಲ್ಲ...
45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

45 ದಿನಗಳಲ್ಲಿ 66 ಕೋಟಿಗೂ ಹೆಚ್ಚು ಆಸ್ತಿಕರಿಂದ ಪುಣ್ಯಸ್ನಾನ: ‘ವಸುಧೈವ ಕುಟುಂಬಕಂ’ ಘೋಷಣೆಗೆ ಸಾಕ್ಷಿಯಾದ ಮಹಾಕುಂಭಮೇಳ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ಲಕ್ನೋ: ಇಡೀ ಜಗತ್ತಿನ ಗಮನಸೆಳೆದಿದ್ದ ಪ್ರಯಾಗರಾಜ್ ಮಹಾ ಕುಂಭ 2025 ಪರಿಪೂರ್ಣವಾಗಿದೆ. ಈ ಕೈಂಕರ್ಯದ ಯಶಸ್ವಿಗೆ ಕಾರಣರಾದವರನ್ನು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸ್ಮರಿಸಿದ್ದಾರೆ. ಮಹಾಕುಂಭ ಯಶಸ್ವಿ ಪೂರ್ಣಗೊಳಿಸುವಿಕೆಗೆ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವೇ ಕಾರಣ ಎಂದಿರುವ ಅವರು ಈ ಭವ್ಯ ಧಾರ್ಮಿಕ ಸಭೆಯನ್ನು "ಏಕತೆ, ಸಮಾನತೆ ಮತ್ತು ಸಾಮರಸ್ಯದ ಮಹಾಯಜ್ಞ" ಎಂದು ಕರೆದಿದ್ದಾರೆ.ಪ್ರಧಾನಿ ಮೋದಿಯವರ ಮಾರ್ಗದರ್ಶನಕ್ಕೆ ಕೃತಜ್ಞತೆ ಸಲ್ಲಿಸಿರುವ ಸಿಎಂ ಯೋಗಿ, ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಿಮ್ಮ ಯಶಸ್ವಿ ಮಾರ್ಗದರ್ಶನದ ಪರಿಣಾಮವಾಗಿ 'ಏಕತೆ, ಸಮಾನತೆ, ಸಾಮರಸ್ಯದ ಮಹಾಯಜ್ಞ' - ಮಹಾ ಕುಂಭ 2025, ಪ್ರಯಾಗರಾಜ್ ಮುಕ್ತಾಯಗೊಂಡಿದೆ, ಭವ್ಯತೆ ಮತ್ತು ದೈವತ್ವದ ಜೊತೆಗೆ ಭದ್ರತೆ, ಸ್ವಚ್ಛತೆ ಮತ್ತು ನಿರ್ವಹಣೆಯಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಿದೆ" ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.ಕಳೆದ 45 ಪವಿತ್ರ ದಿನಗಳಲ್ಲಿ, ಪೂಜ್ಯ ಸಂತರು ಮತ್ತು ಋಷಿಗಳು ಸೇರಿದಂತೆ 66 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ತ್ರಿವೇಣಿಯಲ್ಲಿ ನಂಬಿಕೆಯ ಸ್ನಾನ ಮಾಡುವ ಮೂಲಕ ಆಶೀರ್...