
ಭತ್ತ, ತೊಗರಿ ಖರೀದಿ ಕೇಂದ್ರ ತೆರೆಯದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ: ಬಿಜೆಪಿ ಎಚ್ಚರಿಕೆ
ಬೆಂಗಳೂರು: ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದರೂ ಅತ್ತ ಗಮನ ಹರಿಸದ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಕಷ್ಟಕ್ಕೆ ದೂಡಿದೆ. ಇನ್ನು 24 ಗಂಟೆಯೊಳಗೆ ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು, ಖರೀದಿ ಆರಂಭಿಸದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಎಚ್ಚರಿಕೆ ನೀಡಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿನ್ನರ್ ಸಭೆಗಳು, ಔತಣಕೂಟಗಳು, ರಾಜಕೀಯ ಮೇಲಾಟಗಳಲ್ಲೇ ನಿರತರಾಗಿದ್ದಾರೆ. ಈ ಕೆಲಸಗಳು ಮುಗಿದಿದ್ದರೆ ಸ್ವಲ್ಪ ರೈತರ ಸಮಸ್ಯೆಗಳತ್ತ ಗಮನ ಹರಿಸುವ ದೊಡ್ಡ ಮನಸ್ಸು ಮಾಡಬೇಕು. ಬಿಡುವು ಇಲ್ಲದಿದ್ದರೆ ಕನಿಷ್ಠ ಪಕ್ಷ ಕೃಷಿ ಸಚಿವ ಎನ್.ಚಲುವರ...









