Friday, January 30

Focus

ರೈತರನ್ನು ಮರೆತ ಸರ್ಕಾರ: ಮೆಕ್ಕಜೋಳ ಖರೀದಿ ಕೇಂದ್ರ ಆರಂಭಕ್ಕೆ ಹೈಕಮಾಂಡ್ ಅನುಮತಿ ಬೇಕೆ ಎಂದ ಬಿಜೆಪಿ 

ರೈತರನ್ನು ಮರೆತ ಸರ್ಕಾರ: ಮೆಕ್ಕಜೋಳ ಖರೀದಿ ಕೇಂದ್ರ ಆರಂಭಕ್ಕೆ ಹೈಕಮಾಂಡ್ ಅನುಮತಿ ಬೇಕೆ ಎಂದ ಬಿಜೆಪಿ 

Focus, ಪ್ರಮುಖ ಸುದ್ದಿ, ಬೆಂಗಳೂರು
ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಗಿದೆ. ಕರ್ನಾಟಕದ ಇತಿಹಾಸದಲ್ಲಿ ರೈತರ ನೋವಿಗೆ ಸ್ಪಂದಿಸದ ಈ ರೀತಿಯ ಸಂವೇದನಾರಹಿತ ಸರ್ಕಾರವನ್ನು ನಾನು ಈವರೆಗೆ ಕಂಡಿರಲಿಲ್ಲ. ಕೊಟ್ಟ ಮಾತಿನಂತೆ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿ, ಸೂಕ್ತ ಪರಿಹಾರ ನೀಡಬೇಕಿದ್ದ ಸರ್ಕಾರ ಇಂದು ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿದೆ. ರೈತರ ಬದುಕು ನಾಶವಾದರೂ ಪರವಾಗಿಲ್ಲ, ನಮ್ಮ ಕುರ್ಚಿ ಭದ್ರವಾಗಿರಲಿ ಎನ್ನುವಂತಿದೆ ಇಬ್ಬರೂ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಗುರ್ಲಾಪುರದಲ್ಲಿ ಪ್ರತಿಭಟನಾ ನಿರತ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘೋರ ದುರಂತ ಸಂಭವಿಸಿತು. ಆದರೆ, ಈ ಹೃದಯಹೀನ ಸರ್ಕಾರದ ಯಾವ ಮಂತ್ರಿಯೂ ರೈತನ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಸಕ್ಕರೆ ಸಚಿವರು, ಕೃಷಿ ಸಚಿವರು, ಜಿಲ್...
ಹೃದಯಾಘಾತ ಪತ್ತೆಮಾಡುವಲ್ಲಿ ತಪಾಸಣಾ ಸಾಧನಗಳು ವಿಫಲ; ಅಪಾಯದಲ್ಲಿ 45% ರೋಗಿಗಳು

ಹೃದಯಾಘಾತ ಪತ್ತೆಮಾಡುವಲ್ಲಿ ತಪಾಸಣಾ ಸಾಧನಗಳು ವಿಫಲ; ಅಪಾಯದಲ್ಲಿ 45% ರೋಗಿಗಳು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ಈಗ ಬಳಕೆಯಲ್ಲಿರುವ ಹೃದಯಾಘಾತ ತಪಾಸಣಾ ಸಾಧನಗಳು, ನಿಜವಾದ ಅಪಾಯದಲ್ಲಿರುವ ರೋಗಿಗಳಲ್ಲಿ ಶೇಕಡಾ 45 ರಷ್ಟು ಜನರನ್ನು ಗುರುತಿಸಲು ವಿಫಲವಾಗುತ್ತಿವೆ ಎಂದು ಅಮೆರಿಕದ ಮೌಂಟ್ ಸಿನಾಯ್ ಸಂಶೋಧಕರು ನಡೆಸಿದ ಹೊಸ ಅಧ್ಯಯನವು ಬಹಿರಂಗಪಡಿಸಿದೆ. JACC: ಅಡ್ವಾನ್ಸಸ್ ಪತ್ರಿಕೆಯಲ್ಲಿ ಪ್ರಕಟವಾದ ಈ ಸಂಶೋಧನೆ, ಹೃದಯರೋಗದ ಅಪಾಯವನ್ನು ಕೇವಲ ರೋಗಲಕ್ಷಣಗಳು ಮತ್ತು ಅಪಾಯದ ಅಂಕಗಳ ಆಧಾರದ ಮೇಲೆ ಅಂದಾಜಿಸುವ ಪ್ರಸ್ತುತ ವಿಧಾನದಲ್ಲಿ ದೊಡ್ಡ ದೋಷವಿದೆ ಎಂದು ತೋರಿಸಿದೆ. ಮೌನವಾಗಿ ಕಲೆತುಹೋಗುತ್ತಿರುವ ಪ್ಲೇಕ್‌ಗಳನ್ನು ಗಮನಿಸುವ ಅಗತ್ಯವನ್ನು ತಜ್ಞರು ಹೇಳುತ್ತಿದ್ದಾರೆ. “ಜನಸಂಖ್ಯೆ ಆಧಾರಿತ ಅಪಾಯ ಅಂದಾಜು ಸಾಧನಗಳು ಅನೇಕ ರೋಗಿಗಳ ನೈಜ ಅಪಾಯವನ್ನು ಹಿಡಿಯಲು ಸಾಧ್ಯವಾಗುತ್ತಿಲ್ಲ. ರೋಗಿಗಳು ಹೃದಯಾಘಾತಕ್ಕೆ ಒಳಗಾಗುವ ಎರಡು ದಿನಗಳ ಮೊದಲು ಅವರನ್ನು ಪರೀಕ್ಷಿಸಿದ್ದರೂ, ಪ್ರಸ್ತುತ ಮಾರ್ಗಸೂಚಿಗಳ ಪ್ರಕಾರ ಅರ್ಧಕ್ಕೂ ಕಡಿಮೆ ಜನರಿಗೆ ಮಾತ್ರ ತಡೆಗಟ್ಟುವ ಚಿಕಿತ್ಸೆ ಶಿಫಾರಸು ಆಗುತ್ತಿತ್ತು” ಎಂದು ಮೌಂಟ್ ಸಿನಾಯ್‌ನ ಇಕಾನ್ ಸ್ಕೂಲ್ ಆಫ್ ಮೆಡಿಸಿನ್‌ನ ಕ್ಲಿನಿಕಲ್ ಅಸೋಸಿಯೇಟ್ ಪ್ರೊಫೆಸರ್ ಮತ್ತು ಅ...
ಬೆಂಗಳೂರು ದರೋಡೆ ಪ್ರಕರಣ; ಪೊಲೀಸ್ ಭರ್ಜರಿ ಬೇಟೆ; ಒಟ್ಟು 9 ಸೆರೆ

ಬೆಂಗಳೂರು ದರೋಡೆ ಪ್ರಕರಣ; ಪೊಲೀಸ್ ಭರ್ಜರಿ ಬೇಟೆ; ಒಟ್ಟು 9 ಸೆರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಬೆಂಗಳೂರು ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಪ್ರಕರಣದಲ್ಲಿ ಒಟ್ಟು 9 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು ನಗರ ಪೊಲೀಸರು ₹7.11 ಕೋಟಿ ನಗದು ವ್ಯಾನ್ ದರೋಡೆ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈ ಇತ್ತೀಚಿನ ಬಂಧನಗಳಿಂದ ₹1.45 ಕೋಟಿ ಹಣ ಮರುಪಡೆಯಲಾಗಿದ್ದು, ಒಟ್ಟಾರೆಯಾಗಿ ಮರುಪಡೆದ ಹಣದ ಮೊತ್ತ ₹7.1 ಕೋಟಿಗೆ ತಲುಪಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ಹಂಚಿಕೊಂಡಿದೆ. ಆರೋಪಿಗಳನ್ನು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಾದ್ಯಂತ ಹಲವು ತಂಡಗಳ ಸಮನ್ವಯದಿಂದ ಪತ್ತೆ ಮಾಡಿ ಬಂಧಿಸಲಾಗಿದೆ. ಆರು ಮಂದಿಯನ್ನೂ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಪ್ರಿಯಾಂಕ್ ಖರ್ಗೆ ಪ್ರಶ್ನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಬೆಳವಣಿಗೆ ಬಿಜೆಪಿ ನಾಯಕ್ರು ಮಾಡುತ್ತಿರುವ ಟೀಕೆ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು ಬದಲಿಸಿ, ಎರಡನೇ ಅಧಿಕಾರಾವಧಿಯಲ್ಲಿ 2 ಮುಖ್ಯಮಂತ್ರಿಗಳನ್ನು ಬದಲಿಸಿದ ಹಾಗೂ ಆಪರೇಷನ್ ಕಮಲವೆಂಬ ಕರ್ನಾಟಕ ರಾಜಕಾರಣದ ಕರಾಳ ಅದ್ಯಾಯವನ್ನು ಆರಂಭಿಸಿದ ಬಿಜೆಪಿ ಪಕ್ಷದವರಿಗೆ ಕಾಂಗ್ರೆಸ್ ಹೆಸರೆತ್ತುವುದಕ್ಕೆ ನೈತಿಕತೆಯೂ ಇಲ್ಲ, ಅರ್ಹತೆಯೂ ಇಲ್ಲ ಎಂದಿದ್ದಾರೆ. “ಹೈಕಮಾಂಡ್ ಕಪ್ಪ“ದ ಬಗ್ಗೆ ಬಹಳ ಆಸಕ್ತಿಯಿಂದ ಮಾತನಾಡುವ ಬಿಜೆಪಿ, ಯಡಿಯೂರಪ್ಪನವರು ಹೈಕಮಾಂಡಿಗೆ ಎಷ್ಟು ಕಪ್ಪ ಕೊಟ್ಟು ನಾಲ್ಕು ಬಾರಿ ಪ್ರಮಾಣ ವಚನ ಸ್ವೀಕರಿಸಿದ್ದರು? ಜಗದೀಶ್ ಶೆಟ್ಟರ್, ಸದಾನಂದಗೌಡರು, ಬಸವರಾಜ್ ಬೊಮ್ಮಯಿಯವರು ಎಷ್ಟೆಷ್ಟು ಬಿಡ್ ಕೂಗಿ ಮುಖ್...
ಭೀಕರ ಅಪಘಾತ; ಹಿರಿಯ ಐಎಎಸ್ ಅಧಿಕಾರಿ ಸಹಿತ ಮೂವರು ದುರ್ಮರಣ

ಭೀಕರ ಅಪಘಾತ; ಹಿರಿಯ ಐಎಎಸ್ ಅಧಿಕಾರಿ ಸಹಿತ ಮೂವರು ದುರ್ಮರಣ

Focus, ಪ್ರಮುಖ ಸುದ್ದಿ, ರಾಜ್ಯ
ಕಲಬುರಗಿ: ವಿವಾಹ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದವರಿದ್ದ ಕಾರು ಅಪಘಾತಕ್ಕೀಡಾಗಿ ಕಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬಿಳಗಿ , ಅವರ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತಪಟ್ಟಿದ್ದಾರೆ. ಕರ್ನಾಟಕ ಕೇಡರ್​ನ IAS ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ, ಪ್ರಸ್ತುತ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು....
ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಸಚಿವ ಸಂಪುಟ ವಿಸ್ತರಣೆಯನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕಾಂಗ್ರೆಸ್ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಅವರು ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು ಎಂದರು. ಪಕ್ಷದ ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ನೋಡೋಣ. ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು.ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ. pic.twitter.com/FuAsWbd8xP— Siddaramaiah (@siddaramaiah) November 25, 2025 ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡ...
ಅಯೋಧ್ಯೆ ದೇವಾಲಯದಲ್ಲಿ ವಿಶೇಷ ‘ಧರ್ಮಧ್ವಜ’; ರಾಮ ಮಂದಿರ ನಿರ್ಮಾಣ ಪೂರ್ಣಗೊಂಡಿರುವ ಸಂಕೇತ

ಅಯೋಧ್ಯೆ ದೇವಾಲಯದಲ್ಲಿ ವಿಶೇಷ ‘ಧರ್ಮಧ್ವಜ’; ರಾಮ ಮಂದಿರ ನಿರ್ಮಾಣ ಪೂರ್ಣಗೊಂಡಿರುವ ಸಂಕೇತ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಅಯೋಧ್ಯೆ/ನವದೆಹಲಿ: ಐತಿಹಾಸಿಕ ಅಯೋಧ್ಯೆ ರಾಮ ಜನ್ಮಭೂಮಿ ದೇವಾಲಯದಲ್ಲಿ ಮಂಗಳವಾರ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ವಿಶೇಷವಾಗಿ ವಿನ್ಯಾಸಗೊಳಿಸಲಾದ ‘ಧರ್ಮಧ್ವಜ’ವನ್ನು ಹಾರಿಸಿದರು. ರಾಷ್ಟ್ರ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಈ ಸಂದರ್ಭದಲ್ಲಿ ಪ್ರಧಾನಿ ಜೊತೆಗಿದ್ದರು. “आज हम सबके लिए सार्थकता का दिन है। इसके लिए जितने लोगों ने प्राण न्योछावर किए, उनकी आत्मा तृप्त हुई होगी। आज मंदिर का ध्वजारोहण हो गया। मंदिर की शास्त्रीय प्रक्रिया पूर्ण हो गई। राम राज्य का ध्वज, जो कभी अयोध्या में फहराता था, जो पूरी दुनिया में अपने आलोक से समृद्धि प्रदान करता… pic.twitter.com/WqLQMJjM43 — RSS (@RSSorg) November 25, 2025 ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನಡೆದ ಈ ಕಾರ್ಯಕ್ರಮವನ್ನು ‘ಧ್ವಜಾರೋಹಣ ಉತ್ಸವ’ ಎಂದು ಗುರುತಿಸಲಾಗಿದೆ. ಸಮಾರಂಭದ ನಂತರ ಬಿಜೆಪಿ ನಾಯಕರು, ರಾಷ್ಟ್ರಕ್ಕೆ ಹೊಸ ನಂಬಿಕೆ ಮತ್ತು ಸಂಸ್ಕೃತಿಯ ಗೌರವವನ್ನು ಸಾರುವ ಕ್ಷಣ ಎಂದು ಅಭಿಪ್ರಾಯ ವ್ಯಕ್ತಪಡ...
ರಾಜ್ಯದ 10 ಕಡೆ ಲೋಕಾಯುಕ್ತ ದಾಳಿ; ಅಧಿಕಾರಿಗಳಿಗೆ ಶಾಕ್

ರಾಜ್ಯದ 10 ಕಡೆ ಲೋಕಾಯುಕ್ತ ದಾಳಿ; ಅಧಿಕಾರಿಗಳಿಗೆ ಶಾಕ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಕರ್ನಾಟಕ ಲೋಕಾಯುಕ್ತ ಮಂಗಳವಾರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಮಂಡ್ಯ, ಬೀದರ್, ಮೈಸೂರು, ಧಾರವಾಡ, ಹಾವೇರಿ, ಬೆಂಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿನ 10 ಸ್ಥಳಗಳಲ್ಲಿ ಅಧಿಕಾರಿ ತಂಡಗಳು ಶೋಧ ಕಾರ್ಯದಲ್ಲಿ ತೊಡಗಿವೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಂ. ಗಿರೀಶ್ (ಮಂಡ್ಯ) ಮುಖ್ಯ ಲೆಕ್ಕಾಧಿಕಾರಿ (ಪಟ್ಟಣ ಯೋಜನೆ) ಸಿ. ಪುಟ್ಟಸ್ವಾಮಿ (ಮಂಡ್ಯ) ಮುಖ್ಯ ಎಂಜಿನಿಯರ್ (ಮೇಲ್ ಕೃಷ್ಣ ಯೋಜನೆ) ಪ್ರೇಮ್ ಸಿಂಗ್ (ಬೀದರ್) ಕಂದಾಯ ನಿರೀಕ್ಷಕ ಸಿ. ರಾಮಸ್ವಾಮಿ (ಹೂಟಗಳ್ಳಿ ಪುರಸಭೆ, ಮೈಸೂರು) ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಸುಭಾಷ್ ಚಂದ್ರ (ಧಾರವಾಡ) ಹಿರಿಯ ಪಶುವೈದ್ಯಕೀಯ ಪರೀಕ್ಷಕ ಹುಯಿಲ್ಗೋಳ್ ಸತೀಶ್ ಯೋಜನ ನಿರ್ದೇಶಕರ ಕಚೇರಿ, ಹಾವೇರಿ ಶೇಕಪ್ಪ ಆರ್‌ಟಿಒ ಕಚೇರಿ ಅಧೀಕ್ಷಕ ಪಿ. ಕುಮಾರಸ್ವಾಮಿ (ಇಲೆಕ್ಟ್ರಾನಿಕ್ಸ್ ಸಿಟಿ, ಬೆಂಗಳೂರು) ಸಿಮ್ಸ್ ವೈದ್ಯಕೀಯ ಕಾಲೇಜು, ಶಿವಮೊಗ್ಗ ಸಿಎನ್ ಲಕ್ಷ್ಮಿಪತಿ ಈ 10 ಅಧಿಕಾ...
ಬೀಜ ಪರಂಪರೆ ಕುರಿತು ರಾಷ್ಟ್ರೀಯ ಸಂವಾದ; ಕೃಷಿ ಅಭಿವೃದ್ಧಿ ಬಗ್ಗೆ ಚಿಂತನ ಮಂಥನ

ಬೀಜ ಪರಂಪರೆ ಕುರಿತು ರಾಷ್ಟ್ರೀಯ ಸಂವಾದ; ಕೃಷಿ ಅಭಿವೃದ್ಧಿ ಬಗ್ಗೆ ಚಿಂತನ ಮಂಥನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ಕೃಷಿಗೆ ಮುಖ್ಯವಾಗಿ ಬೇಕಿರುವುದು ಉತ್ತಮ ಗುಣಮಟ್ಟದ ಬೀಜದ ತಳಿಗಳು ಹಾಗೂ ತಂತ್ರಜ್ಞಾನ. ಈ ಮೂಲಕ ಕೃಷಿ ಅಭಿವೃದ್ಧಿ ಸಾಧ್ಯ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೃಷಿ ಇಲಾಖೆ ಸಂಗಮ ಸಭಾಂಗಣದಲ್ಲಿ ಬೀಜ ಪರಂಪರೆ ಕುರಿತು ರಾಷ್ಟ್ರೀಯ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವರು, ದೇಶಿ ಬೀಜ ಸಂರಕ್ಷಣೆಯ ಕುರಿತು ಈ ಚಿಂತನ ಮಂತನ ಸಂವಾದವನ್ನು ಏರ್ಪಡಿಸಿರುವುದು ತುಂಬಾ ಸಮಯೋಜಿತವಾಗಿದೆ ಹಾಗೂ ಶ್ಲಾಘನೀಯವಾಗಿದೆ. ಬೀಜ ಪರಂಪರೆಯ ಕುರಿತು ನಡೆಯುವ ಈ ಸಂವಾದವೂ ರೈತರು, ಸಂಶೋಧಕರು, ಅನ್ವೇಷಕರು ಹಾಗೂ ವಿವಿಧ ಸಂಬಂಧಿತ ಸಂಸ್ಥೆಗಳನ್ನು ಒಂದೇ ಸೂರಿನಡಿ, ಬೀಜ ಪರಂಪರೆ ಮತ್ತು ಆಹಾರ ವ್ಯವಸ್ಥೆಯ ಭವಿಷ್ಯದ ಬಗ್ಗೆ ಒಟ್ಟಾಗಿ ಚಿಂತನೆ ನಡೆಸಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು. ಕೃಷಿಜೀವ ವೈವಿಧ್ಯತೆ, ರೈತರ ಜ್ಞಾನ, ಸಂಸ್ಕೃತಿ ಹಾಗೂ ಪರಂಪರೆಗಳ ಆಧಾರದ ಮೇಲೆ ಶತಮಾನಗಳ ಕಾಲದಿಂದ ಸ್ಥಳೀಯ ಆಹಾರ ಮತ್ತು ಪೌಷ್ಟಿಕ ಭದ್ರೆತೆ ರೂಪುಗೊಂಡಿದೆ. ದೇಶಿ ತಳಿಗಳು, ಪೌಷ್ಟಿಕತೆ ಮತ್ತು ಪರಿಸರ ಸುಸ್ಥಿರತೆಯನ್ನು ಕಾಪಾ...
ಕಬಡ್ಡಿ ವಿಶ್ವಕಪ್​​ಗೆದ್ದ ಭಾರತ ವನಿತೆಯರು; ಪ್ರಧಾನಿ ಅಭಿನಂದನೆ

ಕಬಡ್ಡಿ ವಿಶ್ವಕಪ್​​ಗೆದ್ದ ಭಾರತ ವನಿತೆಯರು; ಪ್ರಧಾನಿ ಅಭಿನಂದನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಢಾಕಾ: ಬಾಂಗ್ಲಾದೇಶದ ಢಾಕಾದಲ್ಲಿ ಸೋಮವಾರ ನಡೆದ 2025ರ ಮಹಿಳಾ ಕಬಡ್ಡಿ ವಿಶ್ವಕಪ್​​ ಟೂರ್ನಿಯಲ್ಲಿ ಭಾರತ ತಂಡ ಜಯಭೇರಿ ಭಾರಿಸಿದೆ. ಭಾರತದ ವನಿತೆಯರು ಚಾಂಪಿಯನ್​ ಆಗಿ ಹೊರಹೊಮ್ಮಿದ್ದಾರೆ. ಸೆಮಿಫೈನಲ್‌ನಲ್ಲಿ ಇರಾನ್ ತಂಡವನ್ನು 33–21 ಅಂತರದಿಂದ ಸೋಲಿಸುವ ಮೂಲಕ ಫೈನಲ್ ಪ್ರವೇಶಿಸಿದ್ದ ಭಾರತ ತಂಡ ರಣರೋಚಕ ಫೈನಲ್ ಹಣಾಹಣಿಯಲ್ಲಿ ಚೀನಾದ ತೈಪೆ ತಂಡವನ್ನು 35-28 ಅಂಕಗಳ ಅಂತರದಲ್ಲಿ ಸೋಲಿಸಿಡೇ. ಈ ಮೂಲಕ ಭರ್ಜರಿ ಗೆಲುವು ಸಾಧಿಸಿದ ಭಾರತದ ವನಿತೆಯರು ಸತತ ಎರಡನೇ ಬಾರಿಗೆ ವಿಶ್ವಕಪ್​​ ಮುಡಿಗೇರಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಅಭಿನಂದನೆ. ಮಹಿಳಾ ಕಬಡ್ಡಿ ವಿಶ್ವಕಪ್​​ ಟೂರ್ನಿಯಲ್ಲಿ ಗೆದ್ದು ಬೀಗಿರುವ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ‘2025ರ ಕಬಡ್ಡಿ ವಿಶ್ವಕಪ್​​​ ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಭಾರತೀಯ ಮಹಿಳಾ ಕಬಡ್ಡಿ ತಂಡ ಮಾಡಿದೆ. ಈ ಗೆಲುವು ಅಸಂಖ್ಯಾತ ಯುವಕರಿಗೆ ಸ್ಫೂರ್ತಿ’ ಎಂದು ಪ್ರಧಾನಿ ಬಣ್ಣಿಸಿದ್ದಾರೆ....