ಅಪರಾಧ ಚಟುವಟಿಕೆ ಹೆಚ್ಚಿದೆ, ದುಷ್ಕರ್ಮಿಗಳಿಗೆ ಪೊಲೀಸರ ಭಯ ಇಲ್ಲವಾಗಿದೆ; ಪ್ರತಿಪಕ್ಷ ಟಾಂಗ್
ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಲೇವಡಿ ಮಾಡಿದ್ದಾರೆ.
ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ " ವಂದೇ ಮಾತರಂ ಸಂಭ್ರಮಾಚರಣೆ" ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ ಕಾಂಗ್ರೆಸ್ ಹೈಕಮಾಂಡ್ ಯಾರು ಮುಖ್ಯಮಂತ್ರಿ ಎಂದು ಸ್ಪಷ್ಟವಾಗಿ ತಿಳಿಸಲಿ ಎಂದು ಆಗ್ರಹಿಸಿದರು.
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕಾದಾಟ ನಡೆಯುತ್ತಿರುವುದರಿಂದ ಸರ್ಕಾರ ಸತ್ತುಹೋಗಿದೆ. ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಪದವಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ಅಂತಿಮ ಹಂತಕ್ಕೆ ಬಂದಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡಿಲ್ಲವೆಂದರೆ ಸರ್ಕಾರ ನಡೆಯುವುದಿಲ್ಲ. ಅಧಿಕಾರಿಗಳು ಕೆಲಸ ಮಾಡುವುದಿಲ್ಲ. ಆಡಳಿತಯಂತ್ರ ಕೋಮಾದಲ್ಲಿದೆ ಎಂದರು.
ಸಾರ್ವಜನಿಕರು, ರೈತ ಸಮುದಾಯ, ವಿದ್ಯಾರ್ಥಿಗಳು ಎದುರಿಸುತ್ತಿರುವ ಹತ್ತಾರು ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಕಾಳಜಿ ಕಾಂಗ್ರೆಸ್ ಹೈಕಮಾಂ...









