Friday, January 30

Focus

ಹಗಲು ದರೋಡೆ ಪ್ರಕರಣ ಬೇಧಿಸಲು ಪ್ರಯತ್ನ; ಹೆಜ್ಜೆಗುರುತು ಬೆನ್ನತ್ತಿದ ಬೆಂಗಳೂರು ಪೊಲೀಸ್

ಹಗಲು ದರೋಡೆ ಪ್ರಕರಣ ಬೇಧಿಸಲು ಪ್ರಯತ್ನ; ಹೆಜ್ಜೆಗುರುತು ಬೆನ್ನತ್ತಿದ ಬೆಂಗಳೂರು ಪೊಲೀಸ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಅತಿ ದೊಡ್ಡ ದರೋಡೆ ರಾಜ್ಯ ಪೊಲೀಸ್ ವ್ಯವಸ್ಥೆಗೆ ಸವಾಲಾಗಿದೆ. ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸಿದ ದುಷ್ಕರ್ಮಿಗಳ ಗುಂಪೊಂದು ಜಯನಗರದಲ್ಲಿ 7 ಕೋಟಿ ರೂಪಾಯಿ ದೋಚಿ ಪರಾರಿಯಾದ ಘಟನೆ ಬುಧವಾರ ನಡೆದಿದೆ. ಜೆ.ಪಿ.ನಗರದ ಬ್ಯಾಂಕ್‌ ಶಾಖೆಯಿಂದ ಎಟಿಎಂಗಳಿಗೆ ನಗದು ಸಾಗಿಸುತ್ತಿದ್ದ ವ್ಯಾನನ್ನು ಜಯನಗರ ಅಶೋಕ ಪಿಲ್ಲರ್ ಬಳಿ ತಡೆದು ದಾಖಲೆ ಪರಿಶೀಲನೆ ನೆಪದಲ್ಲಿ ಜಾಲಾಡಿದ್ದಾರೆ ಎನ್ನಲಾಗಿದೆ. ಭಾರತ ಸರ್ಕಾರದ ಸ್ಟಿಕ್ಕರ್ ಅಂಟಿಸಿದ್ದ ಕಾರಿನಲ್ಲಿ ಬಂದಿದ್ದ ಆರೋಪಿಗಳು ಸಿಬ್ಬಂದಿಯನ್ನು ಬೆದರಿಸಿ, ನಗದು ತುಂಬಿದ ಚೀಲಗಳೊಂದಿಗೆ ತಮ್ಮ ವಾಹನದಲ್ಲಿ ಕೂರಿಸಿಕೊಂಡು ಹೋಗಿದ್ದಾರೆ. ನಂತರ ಡೈರಿ ಸರ್ಕಲ್ ಬಳಿ ಸಿಬ್ಬಂದಿಯನ್ನು ಇಳಿಸಿ, ಸುಮಾರು 7 ಕೋಟಿ ರೂ.ಗಳಷ್ಟು ಹಣದೊಂದಿಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಕ್ಷಣ ಕ್ರಮ ಕೈಗೊಳ್ಳುವಂತೆ ಡಿಜಿ-ಐಜಿಪಿ ಸಲೀಂ ಅವರಿಗೆ ಸೂಚಿಸಿದ್ದಾರೆ. ಘಟನೆಯ ನಂತರಸರಣಿ ಸಭೆಗಳನ್ನು ನಡೆಸಿ, ಪತ್ತೆ ಕಾರ್ಯಾಚರಣೆಗೆ ವೇಗ ನೀಡಿದ ಬೆಂಗಳೂರು ...
ಬೆದರಿಕೆ ಬ್ಲ್ಯಾಕ್‌ಮೇಲ್ ಆರೋಪ: ಐವರ ವಿರುದ್ಧ ಯಶ್‌ ಅವರ ತಾಯಿ ದೂರು

ಬೆದರಿಕೆ ಬ್ಲ್ಯಾಕ್‌ಮೇಲ್ ಆರೋಪ: ಐವರ ವಿರುದ್ಧ ಯಶ್‌ ಅವರ ತಾಯಿ ದೂರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಟ ಯಶ್ ಅವರ ತಾಯಿ ಮತ್ತು ಚಲನಚಿತ್ರ ನಿರ್ಮಾಪಕಿ ಪುಷ್ಪಾ ನೀಡಿದ ದೂರಿನ ಆಧಾರದ ಮೇಲೆ, ಮಹಿಳೆ ಸೇರಿ ಐವರು ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಪಿಆರ್‌ಒ ಹರೀಶ್ ಅರಸ್, ಮನು, ನಿತಿನ್, ಮಹೇಶ್ ಗುರು ಮತ್ತು ಸ್ವರ್ಣಲತಾ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಪುಷ್ಪಾ ನಿರ್ಮಿಸಿರುವ ‘ಕೊತ್ತಲವಾಡಿ’ ಚಿತ್ರದ ಪ್ರಚಾರಕ್ಕಾಗಿ ಆರೋಪಿಗಳು ಒಟ್ಟು 64 ಲಕ್ಷ ರೂ. ಪಡೆದಿದ್ದರೂ, ನಿರೀಕ್ಷಿತ ರೀತಿಯಲ್ಲಿ ಕೆಲಸ ಮಾಡದೆ, ಬದಲಿಗೆ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್‌ಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಪುಷ್ಪಾ, “ಚಿತ್ರದ ಪ್ರಚಾರಕ್ಕಾಗಿ ಆರಂಭದಲ್ಲಿ 23 ಲಕ್ಷ ರೂ.ಗೆ ಒಪ್ಪಿಕೊಂಡಿದ್ದ ಹರೀಶ್ ಅರಸ್, ನಂತರ ಚಿತ್ರ ಚಿತ್ರೀಕರಣದ ಸಂದರ್ಭದಲ್ಲಿ ಹಲವು ಹಂತಗಳಲ್ಲಿ ಹಣ ಪಡೆದಿದ್ದರು. ಚಿತ್ರ ಬಿಡುಗಡೆ ಹಂತಕ್ಕೆ ಬಂದಾಗ, ಲೆಕ್ಕಪತ್ರಗಳನ್ನು ಕೇಳಿದ ನಿರ್ದೇಶಕರಿಗೆ ‘ಪ್ರಚಾರ ನಿಲ್ಲಿಸುತ್ತೇವೆ’ ಎಂದು ಬೆದರಿಕೆ ಹಾಕಿದ್ದರು” ಎಂದು ಆರೋಪಿಸಿದ್ದಾರೆ. “ಚಿತ್ರದ ಕೆಲಸ ಪೂರ್ಣವಾದ ನಂತರ ಲೆಕ್ಕಪತ್ರ...
‘ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ’; ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

‘ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ’; ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: “ಇಂದಿರಾ ಗಾಂಧಿ ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ. ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಬುಧವಾರ ನಡೆದ ಇಂದಿರಾ ಗಾಂಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಮಾತನಾಡಿದರು. “ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಜನ್ಮದಿನ ಆಚರಿಸುತ್ತಿದ್ದೇವೆ. ಇಂದು ಬೆಳಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಇಂದಿರಾ ಗಾಂಧಿ ಅವರ ಸಮಾಧಿಗೆ ಹೋಗಿ ಗೌರವ ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿ ಅವರು ನನನ್ನು ಕರೆದು ಅವರ ಸಮಾಧಿ ಸುತ್ತಮುತ್ತಲ ಜಾಗ ಅಭಿವೃದ್ಧಿ ಪಡಿಸಲು ಸೂಚಿಸಿದ್ದರು. ಜೊತೆಗೆ ಪೆರಂಬೂರಿನಲ್ಲಿರುವ ರಾಜೀವ್ ಗಾಂಧಿ ಅವರ ಸಮಾಧಿಗೆ ಗ್ರಾನೈಟ್ ಹಾಕುವ ಭಾಗ್ಯ ನನಗೆ ಸಿಕ್ಕಿದೆ. ನಾನು ಹಾಗೂ ನನ್ನ ಸಹೋದರ ನಮ್ಮದೇ ಕ್ವಾರೆಯಿಂದ ಗ್ರಾನೈಟ್ ಕಲ್ಲನ್ನು ತೆಗೆದುಕೊಂಡು ಹೋಗಿ ಅಲ್ಲಿ ಹಾಕಿ ನಮ್ಮ ಕೈಲಾದ ಸೇವೆ ಮಾಡುವ ಭಾಗ್ಯ ಸಿಕ್ಕಿತು” ಎಂದು ಸ್ಮರಿಸಿದರು. “ನಮ್ಮ ನಾಯಕರು ಮತಕಳ...
‘ಅಜ್ಜಿ, ನೀವು ನನ್ನ ಆದರ್ಶ’: ಇಂದಿರಾ ಜನ್ಮ ವಾರ್ಷಿಕೋತ್ಸವದಂದು ಪ್ರಿಯಾಂಕಾ ಗೌರವ

‘ಅಜ್ಜಿ, ನೀವು ನನ್ನ ಆದರ್ಶ’: ಇಂದಿರಾ ಜನ್ಮ ವಾರ್ಷಿಕೋತ್ಸವದಂದು ಪ್ರಿಯಾಂಕಾ ಗೌರವ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ದಿವಂಗತ ಪ್ರಧಾನಿ ಹಾಗೂ ತಮ್ಮ ಅಜ್ಜಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು ಕಾಂಗ್ರೆಸ್ ಸಂಸದೆಯಾದ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಹೃತ್ಪೂರ್ವಕ ಗೌರವ ಸಲ್ಲಿಸಿ, ಅವರನ್ನು ತಮ್ಮ “ಆದರ್ಶ”ವೆಂದು ಹೇಳಿದ್ದಾರೆ. X (ಹಿಂದಿನ ಟ್ವಿಟ್ಟರ್) ನಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ ಪ್ರಿಯಾಂಕಾ, “ದೇಶಭಕ್ತಿಯಿಂದ, ಕರುಣೆ, ಶಕ್ತಿ, ಧೈರ್ಯ, ತ್ಯಾಗ ಮತ್ತು ಸಮರ್ಪಣೆಯಿಂದ ತಯಾರಾದ ಉಕ್ಕಿನಂತಹ ವ್ಯಕ್ತಿತ್ವ — ಇದು ಜಗತ್ತಿಗೆ ಭಾರತದ ಶಕ್ತಿಯನ್ನು ಪರಿಚಯಿಸಿತು. ದೇಶವನ್ನು ಪರಮಾಣು ಸಾಮರ್ಥ್ಯ ಹೊಂದಿದ ರಾಷ್ಟ್ರವನ್ನಾಗಿ ರೂಪಿಸಿದರು. ಮೂಲಸೌಕರ್ಯ ನಿರ್ಮಾಣದ ಮೂಲಕ ಭಾರತದ ನೆಲೆಯಲ್ಲಿ ಬಲ ತುಂಬಿದರು,” ಎಂದು ಸ್ಮರಿಸಿದ್ದಾರೆ. “ಅಜ್ಜಿ, ನೀವು ನನ್ನ ಆದರ್ಶ. ನೀವು ನೀಡಿದ ಮೌಲ್ಯಗಳು ಸದಾ ನನ್ನೊಂದಿಗಿವೆ” ಎಂದು ಅವರು ಬರೆಯುವ ಮೂಲಕ ವೈಯಕ್ತಿಕ ಅನುಬಂಧ ವ್ಯಕ್ತಪಡಿಸಿದ್ದಾರೆ. ಪ್ರತಿಯೊಂದು ಗಂಭೀರ ಸಂದರ್ಭದಲ್ಲಿ ದೇಶದ ಹಿತಾಸಕ್ತಿಗೇ ಮೊದಲ ಆದ್ಯತೆ ನೀಡುವ ನಿರ್ಭೀತ ಮನೋಭಾವವನ್ನು ತಾವು ಇಂದಿರಾ ಗಾಂಧಿಯಿಂದಲೇ ಕಲಿತಿರುವುದಾಗಿ ಪ್ರಿಯಾಂಕಾ ಹೇಳಿದರು. “ಅವರ ಧೈರ್ಯ, ದೇಶಭ...
ಬಿಹಾರ: ಜೆಡಿಯು ಶಾಸಕಾಂಗ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆ

ಬಿಹಾರ: ಜೆಡಿಯು ಶಾಸಕಾಂಗ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ, ಜೆಡಿಯು ಶಾಸಕಾಂಗ ಪಕ್ಷ ಹೊಸ ನಾಯಕತ್ವವನ್ನು ಆಯ್ಕೆ ಮಾಡಿದೆ. ಬುಧವಾರ ಪಾಟ್ನಾದಲ್ಲಿ ನಡೆದ ಜೆಡಿಯು ಶಾಸಕಾಂಗ ಸಭೆಯಲ್ಲಿ, ಪಕ್ಷದ ರಾಷ್ಟ್ರಾಧ್ಯಕ್ಷ ನಿತೀಶ್ ಕುಮಾರ್ ಅವರನ್ನು ಏಕಮತದಿಂದ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಗುರುವಾರ ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಿತೀಶ್ ಕುಮಾರ್ ಅವರು 10ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಪ್ರಮಾಣ ವಚನಕ್ಕೂ ಮುನ್ನ ಶಾಸಕಾಂಗ ನಾಯಕನಾಗಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಎನ್‌ಡಿಎ ಸಭೆಗೂ ಮುಂಚೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ನಂತರ ನಿತೀಶ್ ಕುಮಾರ್ ಅವರನ್ನು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕರಾಗಿಯೂ ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಸಚಿವ ಶ್ರಾವಣ್ ಕುಮಾರ್ ಮಾಹಿತಿ ನೀಡಿದರು....
ಪ್ರಸಕ್ತ ವರ್ಷ KSRTCಗೆ ಹೊಸದಾಗಿ 2000 ಬಸ್ಸುಗಳನ್ನು ಸೇರ್ಪಡೆ; ರಾಮಲಿಂಗಾ ರೆಡ್ಡಿ

ಪ್ರಸಕ್ತ ವರ್ಷ KSRTCಗೆ ಹೊಸದಾಗಿ 2000 ಬಸ್ಸುಗಳನ್ನು ಸೇರ್ಪಡೆ; ರಾಮಲಿಂಗಾ ರೆಡ್ಡಿ

Focus, ಪ್ರಮುಖ ಸುದ್ದಿ, ರಾಜ್ಯ
ಚಿಕ್ಕಮಗಳೂರಿನಲ್ಲಿ ನೂತನವಾಗಿ ನಿರ್ಮಿಸಲಿರುವ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಶಂಕು ಸ್ಥಾಪನೆ ನೆರವೇರಿಸಿದರು. ಇದೇ ವೇಳೆ, ಚಿಕ್ಕಮಗಳೂರು ಬಸ್ ನಿಲ್ದಾಣದ ಶಂಕುಸ್ಥಾಪನಾ ಸಿಬ್ಬಂದಿಗಳ ನೂತನ ವಸತಿ ಗೃಹವನ್ನು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಜೆ.ಜಾರ್ಜ್ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ, ಬಸ್ ನಿಲ್ದಾಣ ಆಗಬೇಕೆನ್ನುವುದು ಬಹಳ ಹಿಂದಿನಿಂದಲೂ ಬೇಡಿಕೆಯಿತ್ತು. 2025ರಲ್ಲಿ ರೂ.19.87 ಕೋಟಿ ವೆಚ್ಚದಲ್ಲಿ ಒಂದು ಎಕರೆ 20 ಗುಂಟೆ ನಿವೇಶನದಲ್ಲಿ ಆಧುನಿಕ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು. ಚಿಕ್ಕಮಗಳೂರು ಸಾರಿಗೆ ವಿಭಾಗಕ್ಕೆ ಸೇರಿರುವ ಪ್ರಮುಖ ಸ್ಥಳಗಳಿಗೆ ಸಮಗ್ರ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಅರಸೀಕೆರೆಯಲ್ಲಿ 01 ಎಕರೆ 7.5 ಗುಂಟೆ ವಿಸ್ತೀರ್ಣದಲ್ಲಿ 1958 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಬಸ್ ನಿಲ್ದಾಣದ ನಿರ್ಮಾಣಕ್ಕೆ 26-07-2025 ರಂದು ಮುಖ್ಯ ಮಂತ್ರಿಗಳಿಂದ ಶಂ...
ಮೇಕೆದಾಟು : ಶೀಘ್ರದಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಹೊಸ ಯೋಜನಾ ವರದಿ ಸಲ್ಲಿಕೆಗೆ ನಿರ್ಧಾರ

ಮೇಕೆದಾಟು : ಶೀಘ್ರದಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಹೊಸ ಯೋಜನಾ ವರದಿ ಸಲ್ಲಿಕೆಗೆ ನಿರ್ಧಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ಆದೇಶದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಶೀಘ್ರದಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯೂಎಂಎ) ಹೊಸ ವಿವರವಾದ ಯೋಜನಾ ವರದಿ (ಡಿಪಿಆರ್) ಸಲ್ಲಿಸಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮಂಗಳವಾರ ತಿಳಿಸಿದ್ದಾರೆ. ಪಾಟಿಯಲ್ಲಿ ನಡೆದ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ ಆದೇಶದ ನಂತರ ಯೋಜನೆಯನ್ನು ಮುಂದುವರಿಸುವ ವಿಧಾನವನ್ನು ಇಂದು ಚರ್ಚಿಸಿದ್ದೇವೆ. ಮುಳುಗಡೆಯಾಗುವ ಅರಣ್ಯ ಪ್ರದೇಶದ ಸಮಗ್ರ ವಿವರಗಳನ್ನು ಒಳಗೊಂಡ ಹೊಸ ಡಿಪಿಆರ್ ಅನಿವಾರ್ಯವಾಗಿದೆ. ಹಾರೋಬೆಲೆಯಲ್ಲಿ ಯೋಜನಾ ಕಚೇರಿಯನ್ನು ಈಗಾಗಲೇ ಆರಂಭಿಸಿದ್ದೇವೆ. ರಾಮನಗರದಲ್ಲಿ ಮುಖ್ಯ ಎಂಜಿನಿಯರ್ ಮತ್ತು ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗಳನ್ನು ತೆರೆಯಲಾಗುತ್ತಿದ್ದು, ಅಗತ್ಯ ಸಿಬ್ಬಂದಿಯನ್ನೂ ನಿಯೋಜಿಸುತ್ತೇವೆ” ಎಂದರು. ಹಿಂದಿನ ಡಿಪಿಆರ್ ಅನ್ನು ಸಿಡಬ್ಲ್ಯೂಎಂಎ ತಿರಸ್ಕರಿಸಿದ್ದ ಹಿನ್ನೆಲೆಯಲ್ಲಿ ಹೊಸ ವರದಿ ಕಡ್ಡಾಯವಾಗಿದೆ...
‘ಜೈಲಲ್ಲಿ ಚಳಿ ಹೆಚ್ಚಾಗಿದೆ; ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ, ಕಂಬಳಿ ಬೇಕು’ ಎಂದ ನಟ

‘ಜೈಲಲ್ಲಿ ಚಳಿ ಹೆಚ್ಚಾಗಿದೆ; ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ, ಕಂಬಳಿ ಬೇಕು’ ಎಂದ ನಟ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಅಭಿಮಾನಿ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಬುಧವಾರ ಹೆಚ್ಚುವರಿ ಕಂಬಳಿಗಾಗಿ ಬೆಂಗಳೂರಿನ ವಿಚಾರಣಾ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ ಸುದ್ದಿಯ ಕೇಂದ್ರದರು. ಚಳಿಯಿಂದಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲವೆಂದು ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ತಿಳಿಸಿದರು. CCH-57 ನ್ಯಾಯಾಲಯದಲ್ಲಿ ಹಾಜರಾದ ದರ್ಶನ್, “ಚಳಿಯಿಂದ ನಿದ್ರೆ ಆಗುತ್ತಿಲ್ಲ. ಜೈಲು ಅಧಿಕಾರಿಗಳು ಕಂಬಳಿ ಕೊಡುವುದಿಲ್ಲ, ಮನೆಯವರು ಕಳಿಸಿದ ಕಂಬಳಿಯನ್ನೂ ಅನುಮತಿಸಿಲ್ಲ” ಎಂದು ದೂರಿದರು. ನ್ಯಾಯಾಧೀಶರು ಈ ಹೇಳಿಕೆಯ ಮೇಲೆ ಅಸಮಾಧಾನ ವ್ಯಕ್ತಪಡಿಸಿ, ನ್ಯಾಯಾಲಯದ ಪದೇಪದೇ ಸೂಚನೆಗಳ ಹೊರತಾಗಿಯೂ ಜೈಲು ಅಧಿಕಾರಿಗಳು ಕಂಬಳಿಯನ್ನು ನಿರಾಕರಿಸುತ್ತಿರುವುದೇಕೆ ಎಂದು ಪ್ರಶ್ನಿಸಿದರು. ಶೀತ ವಾತಾವರಣದಲ್ಲಿರುವ ಕೈದಿಗೆ ಕಂಬಳಿ ನೀಡದಿರುವುದು ಹೇಗೆ ನ್ಯಾಯಸಮ್ಮತ ಎಂದು ಗರಂ ಆದ ನ್ಯಾಯಾಧೀಶರು, ತಕ್ಷಣವೇ ಕಂಬಳಿಯನ್ನು ಒದಗಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು. ಪ್ರಕರಣದ ಮತ್ತೊಬ್ಬ ಆರೋಪಿ ನಾಗರಾಜ್ ಕೂಡ “ಜೈಲಿನಲ್ಲಿ ಚಳಿ ಜಾಸ್ತಿ, ಆದರೆ ಕಂಬಳಿ ಕೊಡುತ್ತಿ...
‘ಒಂದೇ ಜಾತಿ, ಒಂದೇ ಧರ್ಮ, ಒಂದೇ ಭಾಷೆ; ಬಾಲಿವುಡ್ ನಟಿ ಐಶ್ವರ್ಯ ರೈ

‘ಒಂದೇ ಜಾತಿ, ಒಂದೇ ಧರ್ಮ, ಒಂದೇ ಭಾಷೆ; ಬಾಲಿವುಡ್ ನಟಿ ಐಶ್ವರ್ಯ ರೈ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಪುಟ್ಟಪರ್ತಿ: ಶ್ರೀ ಸತ್ಯಸಾಯಿ ಬಾಬಾ ಅವರ ದೈವಿಕ ಬೋಧನೆಗಳು ಇಂದಿಗೂ ಲಕ್ಷಾಂತರ ಜನರ ಮನಸಿಗೆ ಸ್ಪಂದಿಸುತ್ತಿದ್ದು, ಅವರ ಸಂದೇಶ ಮಾನವೀಯತೆಗೆ ದಿಕ್ಕು ತೋರಿಸುತ್ತಿದೆಯೆಂದು ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಹೇಳಿದ್ದಾರೆ. ಬುಧವಾರ ನಡೆದ ಸತ್ಯಸಾಯಿ ಬಾಬಾ ಶತಮಾನೋತ್ಸವ ಆಚರಣೆಯಲ್ಲಿ ಭಾಷಣಿಸಿದ ಅವರು, ಬಾಬಾ ನೀಡಿದ ‘ಎಲ್ಲರನ್ನು ಪ್ರೀತಿಸಿ, ಎಲ್ಲರ ಸೇವೆ ಮಾಡಿ’ ಎಂಬ ಸಂದೇಶವೇ ಮಾನವಜಾತಿಯ ನಿಜವಾದ ಮಾರ್ಗದರ್ಶನ ಎಂದರು. “ಸತ್ಯಸಾಯಿ ಬಾಬಾ ಅವರ ಆಶೀರ್ವಾದದ ಆಗಮನದಿಂದ 100 ವರ್ಷಗಳಾಗುತ್ತಿರುವ ಈ ಸಂದರ್ಭ, ನಾವೆಲ್ಲರೂ ಅವರ ದೈವಿಕ ಸಂದೇಶವಾದ ಪ್ರೀತಿ, ಸೇವೆ, ಮಾನವೀಯತೆ ಮತ್ತು ಏಕತೆಯ ಕಡೆಗೆ ನಮ್ಮನ್ನು ತಾವು ಸಮರ್ಪಿಸಿಕೊಳ್ಳಬೇಕು. ಒಂದೇ ಜಾತಿ — ಮಾನವ ಜಾತಿ; ಒಂದೇ ಧರ್ಮ — ಪ್ರೀತಿಯ ಧರ್ಮ; ಒಂದೇ ಭಾಷೆ — ಹೃದಯದ ಭಾಷೆ,” ಎಂದು ಐಶ್ವರ್ಯಾ ಹೇಳಿದರು. ಮುಂಬೈನ ಸತ್ಯಸಾಯಿ ಬಾಲವಿಕಾಸ್ ಕಾರ್ಯಕ್ರಮದ ವಿದ್ಯಾರ್ಥಿನಿಯಾಗಿದ್ದ ಐಶ್ವರ್ಯಾ, “ಬಾಬಾ ಅವರ ತತ್ವಗಳು, ಉಪಸ್ಥಿತಿ, ಮಾರ್ಗದರ್ಶನ ಮತ್ತು ಪಾಠಗಳು ಶತಮಾನ ಕಳೆದರೂ ಪ್ರಪಂಚದಾದ್ಯಂತ ಜನರ ಹೃದಯಗಳಲ್ಲಿ ಜೀವಂತವಾಗಿವೆ. ಬಾಲವಿಕಾ...
ಬೈಕ್ ಕಳ್ಳರ ಬೆನ್ನತ್ತಿದ ಖಾಕಿ; ಇಬ್ಬರ ಬಂಧನ, ಹತ್ತಾರು ಬೈಕುಗಳ ವಶ

ಬೈಕ್ ಕಳ್ಳರ ಬೆನ್ನತ್ತಿದ ಖಾಕಿ; ಇಬ್ಬರ ಬಂಧನ, ಹತ್ತಾರು ಬೈಕುಗಳ ವಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ಕಳ್ಳರ ಹಾವಳಿಗೆ ವೈಟ್'ಫೀಲ್ಡ್ ಉಪವಿಭಾಗ ಪೊಲೀಸರು ಅಂಕುಶ ಹಾಕಿದ್ದಾರೆ. ಭರ್ಜರಿ ಕಾರ್ಯಾಚರಣೆ ನಡೆಸಿದ ಎಸಿಪಿ ರೀನಾ ಸುವರ್ಣ ನೇತೃತ್ವದ ಪೊಲೀಸರು ಕಳ್ಳರನ್ನು ಜೈಲಿಗಟ್ಟಿದ್ದಾರೆ. ಸುಮಾರು 20 ಬೈಕುಗಳನ್ನು ವಶಪಡಿಸಿಕೊಂಡಿದ್ದಾರೆ. ಮಹದೇವಪುರ ಸಮೀಪದ ಗೋಪಾಲನ್ ಇಂಟರ್ ನ್ಯಾಷನ್ ಸ್ಕೂಲ್ ಬಳಿ ನಿಲ್ಲಿಸಲಾಗಿದ್ದ ಯಮಹ ಆರ್'ಎಕ್ಸ್ ಬೈಕ್ ಕಳೆದುಹೋಗಿರುವ ಬಗ್ಗೆ ನಾಗರಾಜು ಎಂಬವರು ಮಹದೇವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪದೇ ಪದೇ ಇಂತಹ ಪ್ರಕರಣಗಳು ಮರುಕಳಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಎಸಿಪಿ ರೀನಾ ಸುವರ್ಣ ಅವರು ಮಹದೇವಪುರ ಠಾಣೆಯ ಇನ್ಸ್‌ಪೆಕ್ಟರ್ ‌ ಜಿ.ಪ್ರವೀಣ್ ಬಾಬು, PSIಗಳಾದ ಮಹೇಶ್, ಪರಶುರಾಮ್ ಮತ್ತು ಸುನೀಲ್ ಕಡ್ಡಿ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿ ಕಾರ್ಯಾಚರಣೆಗೆ ಮುನ್ನುಡಿ ಬರೆದರು. ಕಳ್ಳರಿಗಾಗಿ ಖೇಡಾ ತೋಡಿದ ಈ ಪೊಲೀಸರು ರಾಮಮೂರ್ತಿನಗರ ನಿವಾಸಿಗಳಾದ ಮನು ಬಿನ್ ದ್ಯಾವೇಗೌಡ ಮತ್ತು ಸಚ್ಚಿನ್ ಬಿನ್ ಬಾಲರಾಜು ಎಂಬಿಬ್ಬರನ್ನು ಬಂಧಿಸಿ ಬೆಂಗಳೂರಿನ ಹಲವೆಡೆ ನಡೆದಿರುವ ಪ್ರಕರಣಗಳನ್ನು ಬೇಧಿಸಿದ್...