Wednesday, January 28

Focus

ಶುಚಿ’ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಹಸಿರು ನಿಶಾನೆ

ಶುಚಿ’ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಹಸಿರು ನಿಶಾನೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಜ್ಯದ ಹದಿಹರೆಯದ ಹೆಣ್ಣುಮಕ್ಕಳ ಋತುಚಕ್ರದ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ 71.83 ಕೋಟಿ ರೂ ಅನುದಾನ ಬಿಡುಗಡೆ ಮಾಡುವ ಮೂಲಕ 'ಶುಚಿ' ಯೋಜನೆಗೆ ಮರುಚಾಲನೆ ನೀಡಲಾಗಿದೆ ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ನಾಡಿನ ಸುಮಾರು 19 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಆರೋಗ್ಯ ರಕ್ಷಣೆಯೇ ನಮ್ಮ ಪ್ರಮುಖ ಗುರಿಯಾಗಿದೆ ಎಂದವರು ತಿಳಿಸಿದ್ದಾರೆ. ಯೋಜನೆಯ ಹೈಲೈಟ್ಸ್: ಶುಚಿ' ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಹಸಿರು ನಿಶಾನೆ ತೋರಿಸಲಾಗಿದ್ದು, 2,35,74,084 ಸ್ಯಾನಿಟರಿ ಪ್ಯಾಡ್ ಯುನಿಟ್‌ಗಳ ವಿತರಣೆ ಮಾಡಲಾಗುತ್ತಿದೆ. ಮುಟ್ಟಿನ ನೈರ್ಮಲ್ಯದಲ್ಲಿ ಹೊಸ ಕ್ರಾಂತಿ ತರಲು 10,38,912 ಸುಸ್ಥಿರ 'ಮುಟ್ಟಿನ ಕಪ್' (Menstrual Cups) ವಿತರಿಸಲಾಗುತ್ತಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆ, ಕಾಲೇಜು ಮತ್ತು ಹಾಸ್ಟೆಲ್‌ಗಳ ಎಲ್ಲಾ ನೋಂದಾಯಿತ ವಿದ್ಯಾರ್ಥಿನಿಯರಿಗೆ ಇದರ ಸೌಲಭ್ಯ ತಲುಪುತ್ತದೆ. 6 ರಿಂದ 8ನೇ ತರಗತಿ ಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ಹಾಗೂ 9ನೇ ತರಗತಿಯಿಂದ ಪಿಯುಸಿ ವಿದ್ಯಾರ್ಥಿನಿಯರಿಗೆ ಪ್ಯಾಡ್‌ಗಳ ಜೊತೆಗೆ ಪರಿಸರ ಸ್ನೇಹಿ ಮುಟ್ಟಿನ...
ಅಯ್ಯಪ್ಪ ಭಕ್ತರ ವಾಹನ ಅಪಘಾತ; ನಾಲ್ವರು ಸಾವು

ಅಯ್ಯಪ್ಪ ಭಕ್ತರ ವಾಹನ ಅಪಘಾತ; ನಾಲ್ವರು ಸಾವು

Focus, ಪ್ರಮುಖ ಸುದ್ದಿ, ರಾಜ್ಯ
ತುಮಕೂರು: ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಅಯ್ಯಪ್ಪ ಭಕ್ತರು ಸಾವನ್ನಪ್ಪಿರುವ ಘಟನೆ ತುಮಕೂರು ಬಳಿ ಸಂಭವಿಸಿದೆ. ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಭೀಕರ ಅಪಘಾತ ಸಂಭವಿಸಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದರೆ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಎಂದು ಗುರುತಿಸಲಾಗಿದೆ. ಶಬರಿಮಲೆ ಅಯ್ಯಪ್ಪ ದರ್ಶನ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಭಕ್ತರಿದ್ದ ಕ್ರೂಸರ್ ವಾಹನ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿರಬಹುದು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ಕಾಸರಗೋಡು ಆಡಳಿತಾತ್ಮಕವಾಗಿ ಕೇರಳಕ್ಕೆ ಸೇರಿದ್ದರೂ ಭಾವನಾತ್ಮಕವಾಗಿ ಕರ್ನಾಟಕದ್ದು

ಕಾಸರಗೋಡು ಆಡಳಿತಾತ್ಮಕವಾಗಿ ಕೇರಳಕ್ಕೆ ಸೇರಿದ್ದರೂ ಭಾವನಾತ್ಮಕವಾಗಿ ಕರ್ನಾಟಕದ್ದು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲೆಯಾಳಿ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ವೈವಿಧ್...
ಕೇರಳ ಲಾಭಿಗೆ ಮಣಿಯಿತೇ ಸಿದ್ದು ಸರ್ಕಾರ? ಕೋಗಿಲು ಮಾದರಿಯಲ್ಲೇ ಕವಿಕಾ..

ಕೇರಳ ಲಾಭಿಗೆ ಮಣಿಯಿತೇ ಸಿದ್ದು ಸರ್ಕಾರ? ಕೋಗಿಲು ಮಾದರಿಯಲ್ಲೇ ಕವಿಕಾ..

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕನ್ನಡಿಗರ ಹೆಮ್ಮೆಯ ಕರ್ನಾಟಕ ವಿದ್ಯುತ್ ಕಾರ್ಖಾನೆಯನ್ನು (ಕವಿಕಾ) ಕಡೆಗಣಿಸಿ, 174.73 ಕೋಟಿ ರೂ. ಮೊತ್ತದ ವಿದ್ಯುತ್ ಪರಿವರ್ತಕಗಳನ್ನು ಖರೀದಿಸಲು ರಾಜ್ಯ ಸರ್ಕಾರ, ಕೇರಳ ಮೂಲಕದ ಕಂಪನಿಗೆ ರತ್ನಗಂಬಳಿ ಹಾಸಿದೆ ಎಂದು ಪ್ರತಿಪಕ್ಷ ಜೆಡಿಎಸ್ ಆರೋಪಿಸಿದೆ. ಕಳೆದ 8 ದಶಕಗಳಿಂದಲೂ ಗುಣಮಟ್ಟದ ಟ್ರಾನ್ಸ್‌ಫಾರ್ಮಾರ್‌ಗಳ ತಯಾರಿಕೆಯಲ್ಲಿ ದೇಶದಲ್ಲೇ ಪ್ರಖ್ಯಾತಿ ಪಡೆದಿರುವ ರಾಜ್ಯದ ಕವಿಕಾವನ್ನು ಬದಿಗೊತ್ತಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, ಕೇರಳ ಎಲೆಕ್ನಿಕಲ್ ಅಂಡ್ ಅಲೈಡ್ ಇಂಜನಿಯರಿಂಗ್ ಲಿಮಿಟೆಡ್‌ನಿಂದಲೇ 11,721 ವಿದ್ಯುತ್ ಪರಿವರ್ತಕಗಳನ್ನು ಖರೀದಿಸಲು ಮುಂದಾಗಿದ್ದಾರೆ. ಇದಕ್ಕಾಗಿ 4 ಜಿ ವಿನಾಯಿತಿಯನ್ನೂ ನೀಡಿದ್ದಾರೆ ಎಂದು ಜೆಡಿಎಸ್ ಆರೋಪಿಸಿದೆ. ಬೆಂಗಳೂರಿನ ಯಲಹಂಕದ ಕೋಗಿಲು ಬಳಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದ ಕೇರಳದ ವಲಸಿಗರಿಗೆ ವಸತಿ ಕಲ್ಪಿಸುವಂತೆ, ಕೇರಳದ ಸಿಎಂ ಪಿಣರಾಯಿ ವಿಜಯನ್ ಮತ್ತು ಅಲ್ಲಿನ ಕಾಂಗ್ರೆಸ್‌ ಸಂಸದ ಕೆ.ಸಿ.ವೇಣುಗೋಪಾಲ್ ಅವರು ಮಧ್ಯ ಪ್ರವೇಶಿಸಿ, ಸಿದ್ದರಾಮಯ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಈಗ ಮತ್ತೊಮ್ಮೆ ಕೇರಳ ಲಾಬಿ...
“ಮದರ್. ಪ್ರೊಟೆಕ್ಟರ್. ಪೈರೇಟ್. ಮೀಟ್ ಬ್ಲಡಿ ಮೇರಿ”; ‘ದಿ ಬ್ಲಫ್’ ಮೂಲಕ ಪ್ರಿಯಾಂಕಾ ಹೊಸ ರೀತಿಯ ಪಾತ್ರ

“ಮದರ್. ಪ್ರೊಟೆಕ್ಟರ್. ಪೈರೇಟ್. ಮೀಟ್ ಬ್ಲಡಿ ಮೇರಿ”; ‘ದಿ ಬ್ಲಫ್’ ಮೂಲಕ ಪ್ರಿಯಾಂಕಾ ಹೊಸ ರೀತಿಯ ಪಾತ್ರ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಜಾಗತಿಕ ಖ್ಯಾತಿಯ ನಟಿ ಪ್ರಿಯಾಂಕಾ ಚೋಪ್ರಾ ತಮ್ಮ ಮುಂಬರುವ ಸ್ವಾಶ್‌ಬಕ್ಲರ್ ಆಕ್ಷನ್ ಥ್ರಿಲ್ಲರ್ ಚಿತ್ರ ‘ದಿ ಬ್ಲಫ್’ ಮೂಲಕ ಹೊಸ ರೀತಿಯ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ‘ಬ್ಲಡಿ ಮೇರಿ’ ಎಂದೇ ಖ್ಯಾತಳಾದ ಉಗ್ರ ಕಡಲ್ಗಳ್ಳೆ ಎರ್ಸೆಲ್ ಬೊಡ್ಡನ್ ಪಾತ್ರವನ್ನು ನಿರ್ವಹಿಸಿದ್ದಾರೆ. ಫೆಬ್ರವರಿ 25ರಿಂದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಚಿತ್ರ ಪ್ರದರ್ಶನಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ತಮ್ಮ ಪಾತ್ರದ ಕೆಲವು ಝಲಕ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಸ್ಟಿಲ್‌ಗಳನ್ನು ಹಂಚಿಕೊಂಡ ಅವರು, “ಮದರ್. ಪ್ರೊಟೆಕ್ಟರ್. ಪೈರೇಟ್. ಮೀಟ್ ಬ್ಲಡಿ ಮೇರಿ” ಎಂದು ಬರೆದು ಚಿತ್ರದ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದ್ದಾರೆ. ಹಂಚಿಕೊಂಡ ಚಿತ್ರಗಳಲ್ಲಿ ರಕ್ತಸಿಕ್ತ ಹಾಗೂ ಉಗ್ರ ಅವತಾರದಲ್ಲಿ ಯುದ್ಧಕ್ಕೆ ಸಿದ್ಧಳಾಗಿ ಕಾಣಿಸಿಕೊಂಡಿರುವ ಪ್ರಿಯಾಂಕಾ, ಭಯಾನಕ ಕಡಲ್ಗಳ್ಳೆಯಾಗಿ ಮಿಂಚಿದ್ದಾರೆ. ಆದರೆ ಇದೇ ಪಾತ್ರದಲ್ಲಿ ತಾಯಿತನದ ಮೃದು ಭಾವವೂ ಅಡಗಿದ್ದು, ಪಾತ್ರಕ್ಕೆ ವಿಭಿನ್ನ ಆಯಾಮವನ್ನು ನ...
ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

ಕತ್ರಿನಾ–ವಿಕಿ ದಂಪತಿಯ ಮಗುವಿಗೆ ‘ವಿಹಾನ್’ ಹೆಸರು

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ನಟ ವಿಕಿ ಕೌಶಲ್ ತಮ್ಮ ಪುತ್ರನಿಗೆ ವಿಹಾನ್ ಕೌಶಲ್ ಎಂದು ನಾಮಕರಣ ಮಾಡಿದ್ದಾರೆ. ಗಂಡು ಮಗುವಿಗೆ ಜನ್ಮ ನೀಡಿದ ಎರಡು ತಿಂಗಳ ಬಳಿಕ ದಂಪತಿ ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡಿದ್ದಾರೆ. ಹೆಸರು ಬಹಿರಂಗಗೊಂಡ ತಕ್ಷಣವೇ ಚಿತ್ರರಂಗದ ಹಲವಾರು ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ನಟಿ ಪರಿಣಿತಿ ಚೋಪ್ರಾ “ಲಿಟಲ್ ಬಡ್ಡಿ!” ಎಂದು ಕಾಮೆಂಟ್ ಮಾಡಿದ್ದಾರೆ. ನಿರ್ದೇಶಕ ಕರಣ್ ಜೋಹರ್ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಪೋಸ್ಟ್‌ನ್ನು ಮರುಹಂಚಿಕೊಂಡು, ವಿಹಾನ್‌ಗೆ ಪ್ರೀತಿ ಮತ್ತು ಆಶೀರ್ವಾದಗಳನ್ನು ಕಳುಹಿಸಿದ್ದಾರೆ. ದಿಯಾ ಮಿರ್ಜಾ, ಭೂಮಿ ಪೆಡ್ನೇಕರ್, ಇಸಾಬೆಲ್ಲೆ ಕೈಫ್ ಸೇರಿದಂತೆ ಅನೇಕರು ಹೃದಯದ ಎಮೋಜಿಗಳ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ವಿಕಿ ಕೌಶಲ್ ಅವರ ಸಹೋದರ ಸನ್ನಿ ಕೌಶಲ್, ವಿಹಾನ್ ಹೆಸರಿನ ಅರ್ಥವನ್ನು ವಿವರಿಸಿ, “ವಿಹಾನ್ – ಬೆಳಕಿನ ಮೊದಲ ಕಿರಣ” ಎಂದು ಬರೆದಿದ್ದಾರೆ. 2019ರ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರದಲ್ಲಿ ವಿಕಿ ಅಭಿನಯಿಸಿದ್ದ ಪಾತ್ರದ ಹೆಸರು ಕೂಡ ವಿಹಾನ್ ಆಗಿದ್ದದ್ದು ...
ರಾಜ್ಯದಲ್ಲಿ ಕಾಂಗ್ರೆಸ್ ವಕೀಲರ ಸಮಾವೇಶ; ಜ-24 ರಂದು ಎಐಸಿಸಿ ನಾಯಕರು ಮಂಗಳೂರಿಗೆ

ರಾಜ್ಯದಲ್ಲಿ ಕಾಂಗ್ರೆಸ್ ವಕೀಲರ ಸಮಾವೇಶ; ಜ-24 ರಂದು ಎಐಸಿಸಿ ನಾಯಕರು ಮಂಗಳೂರಿಗೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ನವದೆಹಲಿ: ಸಂವಿಧಾನವನ್ನು ಆಧಾರವಾಗಿಟ್ಟುಕೊಂಡು ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಇದೀಗ, ತನ್ನ ಪಕ್ಷವನ್ನು ಬಲಗೊಳಿಸಲು ವಿಶೇಷ ವೇದಿಕೆಯನ್ನು ಸಿದ್ಧಗೊಳಿಸುತ್ತಿದೆ. ಈ ಸಂಬಂಧ ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಬೃಹತ್ ರಾಲಿಯೊಂದನ್ನು ನಡೆಸಲು ನಿರ್ಧರಿಸಿದೆ. ಈ ಸಂಬಂಧ ಪ್ರದೇಶ ಕಾಂಗ್ರೆಸ್ ನಾಯಕರನ್ನು ಒಳಗೊಂಡ ಕಾನೂನು ತಜ್ಞರೊಂದಿಗೆ ಹೈಕಮಾಂಡ್ ನಾಯಕರು ಬುಧವಾರ (ಜ.07) ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆಸಿದರು. KPCC ಕಾನೂನು ಘಟಕದ ಅಧ್ಯಕ್ಷ ಸಿ.ಎಂ.ಧನಂಜಯ, ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್, ಕರ್ನಾಟಕ ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಬಾಬು, ಮುನಿಯಪ್ಪ ಮೊದಲಾದ ಕಾನೂನು ತಜ್ಞರನ್ನು ಹೈಕಮಾಂಡ್ ದೆಹಲಿಗೆ ಬುಲಾವ್ ನೀಡಿತ್ತು. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನಿರ್ದೇಶನದಂತೆ ಸಂಸದ ಅಭಿಷೇಕ್ ಮನು ಸಿಂಘ್ವಿ ಹಾಗೂ ಸಲ್ಮಾನ್ ಖುರ್ಷಿದ್ ಅವರು ಕರ್ನಾಟಕದ ಈ ನಾಯಕರ ಜೊತೆ ಇಡೀ ದಿನ ಸರಣಿ ಸಭೆಗಳನ್ನು ನಡೆಸಿದರು. ದೇಶದ ಎಲ್ಲೆಡೆ ಕಾನೂನು ಘಟಕಗಳನ್...
KGF ಪೊಲೀಸ್ ನಿರ್ಲಕ್ಷ್ಯ ಬಗ್ಗೆ ಅಸಮಾಧಾನ; CSI ಬಿಷಪ್ ಪ್ರಕರಣ ಬಗ್ಗೆ ಸಿಐಡಿ ತನಿಖೆ ಸಾಧ್ಯತೆ

KGF ಪೊಲೀಸ್ ನಿರ್ಲಕ್ಷ್ಯ ಬಗ್ಗೆ ಅಸಮಾಧಾನ; CSI ಬಿಷಪ್ ಪ್ರಕರಣ ಬಗ್ಗೆ ಸಿಐಡಿ ತನಿಖೆ ಸಾಧ್ಯತೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದಕ್ಷಿಣ ಭಾರತದ ಪ್ರಭಾವಿ ಕ್ರೈಸ್ತ ಸಮುದಾಯವಾಗಿರುವ CSI-KCD ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. CSI ಬಿಷಪ್ ವಿರುದ್ದದ KGF ಬಿಷಪ್ ಕಾಟನ್ ಸ್ಕೂಲ್ ಗೋಲ್ಮಾಲ್ ಪ್ರಕರಣ ಬಗ್ಗೆ ಪೊಲೀಸರು ಸಮರ್ಪಕ ತನಿಖೆ ನಡೆಸುತ್ತಿಲ್ಲ ಎಂದು ಸಮುದಾಯದ ಪ್ರಮುಖರು ಅಸಮಾಧಾನಗೊಂಡಿದ್ದಾರೆ. ಈ ಬಗ್ಗೆ ಮುಖ್ಯಕಾರ್ಯದರ್ಶಿಗೆ ದೂರೊಂದು ಸಲ್ಲಿಕೆಯಾಗಿದೆ. ಪೊಲೀಸರ ನಿರ್ಲಕ್ಷ್ಯದಿಂದಾಗಿ ಆರೋಪಿಗಳಿಗೆ ಅನುಕೂಲವಾಗುತ್ತಿದೆ ಎಂದಿರುವ ಒಂದು ಗುಂಪು ಇದೀಗ ಸಿಐಡಿ ತನಿಖೆಗೆ ಒತ್ತಾಯಿಸಿದೆ. CSI ಸದಸ್ಯ ಜೋಸೆಫ್ ಶಾಂತರಾಜ್ ಎಂಬವರು ಈ ಸಂಬಂಧ ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆಗೆ ಬುಧವಾರ  ದೂರು ಸಲ್ಲಿಸಿ, ದ್ದು, ತನಿಖೆಯನ್ನು ಸಿಐಡಿಗೆ ವಹಿಸಬೇಕೆಂದು ಕೋರಿದ್ದಾರೆ. KGFನಲ್ಲಿ ಬಿಷಪ್ ಕಾಟನ್ ಶಾಲೆ ನಿರ್ಮಾಣಕ್ಕಾಗಿ ನಗರಾಭಿವೃದ್ಧಿ ಪ್ರಾಧಿಕಾರ (KUDA) ದಲ್ಲಿ ಕಾನೂನು ಬಾಹಿರವಾಗಿ ಖಾತಾ ಮತ್ತು ಇತರ ಅನುಮತಿ ಪಡೆಯಲು ಸರ್ಕಾರಿ ಕಂದಾಯ ಭೂಮಿ ನಕಲಿ ದಾಖಲೆಗಳನ್ನು ಸಲ್ಲಿಸಲಾಗಿದೆ ಎಂದು ಆರೋಪಿಸಿ ಸಂತ ಜಾನ್ಸ್ ಚರ್ಚ್'ನ ಸಬ್ಸೆಪ್ಷನ್ ಸದಸ್ಯ ಜೋಸೆಫ್ ಶಾಂತರಾಜ್ ಎಂಬವರು 2023ರಲ್ಲೇ ದೂರ...
ಸರ್ಕಾರಿ ಶಾಲೆಗಳಲ್ಲಿ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ: ಸರ್ಕಾರದ ಮಹತ್ವದ ಆದೇಶ

ಸರ್ಕಾರಿ ಶಾಲೆಗಳಲ್ಲಿ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ: ಸರ್ಕಾರದ ಮಹತ್ವದ ಆದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ನೇರ ನೇಮಕಾತಿ ಮತ್ತು ಮುಂಬಡ್ತಿ ಸಂಬಂಧಿಸಿದ ಬ್ಯಾಕ್‌ಲಾಗ್ ಹುದ್ದೆಗಳನ್ನು ಗುರುತಿಸಿ ಭರ್ತಿ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಸಂಬಂಧ 1978ರಿಂದ 2003ರವರೆಗೆ ರಾಜ್ಯದ ನಾಲ್ಕು ವಿಭಾಗೀಯ ಕಚೇರಿಗಳ ಸಹ ನಿರ್ದೇಶಕರಿಗೆ ಹಾಗೂ 2003ರಿಂದ ಬಳಿಕ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರಿಗೆ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ನೇರ ನೇಮಕಾತಿ ಹಾಗೂ ಮುಂಬಡ್ತಿ ವಿವರಗಳನ್ನು ಆಯೋಗಕ್ಕೆ ಸಲ್ಲಿಸುವಂತೆ ಸರ್ಕಾರ ಈ ಹಿಂದೆ ಸೂಚನೆ ನೀಡಿತ್ತು. ಆದರೆ ಶಿರಸಿ, ಉಡುಪಿ, ರಾಮನಗರ ಮತ್ತು ಬೀದರ್ ಶೈಕ್ಷಣಿಕ ಜಿಲ್ಲೆಗಳು ಮಾತ್ರ ಇದುವರೆಗೆ ಮಾಹಿತಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ. ಉಳಿದ ಶೈಕ್ಷಣಿಕ ಜಿಲ್ಲೆಗಳು ಹಾಗೂ ನಾಲ್ಕು ವಿಭಾಗೀಯ ಕಚೇರಿಗಳಿಂದ ಇನ್ನೂ ಯಾವುದೇ ಮಾಹಿತಿ ಸಲ್ಲಿಕೆಯಾಗಿಲ್ಲ. ಈ ಕುರಿತಾಗಿ ಸುಮಾರು 10 ತಿಂಗಳು ಕಳೆದರೂ ಸ್ಪಂದನೆ ದೊರೆತಿಲ್ಲ ಎಂದು ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ. ಸರ್ಕಾರಕ್ಕೆ ವರದಿ ಸಲ್ಲಿಸುವುದು ಅಗತ್ಯವಾಗಿರುವ ಹಿನ್ನೆಲೆಯಲ...
ಪಂಚಾಯಿತಿ ನೌಕರರಿಗೆ ಭವಿಷ್ಯ ನಿಧಿ ಸೌಲಭ್ಯ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಪಂಚಾಯಿತಿ ನೌಕರರಿಗೆ ಭವಿಷ್ಯ ನಿಧಿ ಸೌಲಭ್ಯ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಸೌಲಭ್ಯವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವ ಕುರಿತು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಸಂಖ್ಯೆ ಗ್ರಾಅಪ 30 ಗ್ರಾಪಂಸಿ 2008, ದಿನಾಂಕ 31-10-2008ರ ಪ್ರಕಾರ, ರಾಜ್ಯದಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು 01-11-2008ರಿಂದ ಅನ್ವಯವಾಗುವಂತೆ ಜಾರಿಗೆ ತರಲಾಗಿದೆ. ಆದರೆ ಈ ಆದೇಶದ ಅನುಷ್ಠಾನವು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಮಾನವಾಗಿ ನಡೆದಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಉಡುಪಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾತ್ರ ಈ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೊಳಿಸಲಾಗಿದ್ದು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾಗಶಃ ಅನುಷ್ಠಾನಗೊಂಡಿರುವುದು ಕಂಡುಬಂದಿದೆ. ಇನ್ನು ರಾಜ್ಯದ ಉಳಿದ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಲ್ಲಿ ಈ ಸೌಲಭ್ಯವನ್ನು ಇನ್ನೂ ಜಾರಿಗೊಳಿಸಲಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲ...