
#UGCET-26: ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ನಂತರವೂ ಮಾರ್ಚ್ 30ರವರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಕಾಲಾವಕಾಶ
UGCET-26: ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ-2026) ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ನಂತರವೂ ಮಾರ್ಚ್ 30ರವರೆಗೆ ಅರ್ಜಿಯಲ್ಲಿನ ದೋಷಗಳ ತಿದ್ದುಪಡಿಗೆ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.ಅರ್ಜಿ ಸಲ್ಲಿಸಲು ಸದ್ಯ ಫೆ.27 ಕೊನೆ ದಿನ. ಶುಲ್ಕ ಪಾವತಿಗೆ ಮಾರ್ಚ್ 3 ಕೊನೆ ದಿನ. ಈ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಿದವರು ಅಗತ್ಯ ಇದ್ದರೆ ತಿದ್ದುಪಡಿ ಮಾಡಿಕೊಳ್ಳಬಹುದು. ಆದರೆ, ಅರ್ಜಿ ಸಲ್ಲಿಕೆಯ ದಿನಾಂಕದಲ್ಲಿ ಯಾವುದೇ ವಿಸ್ತರಣೆ ಇರುವುದಿಲ್ಲ ಎಂದವರ ಹೇಳಿಕೆಯನ್ನು KEA ತನ್ನ X ಖಾತೆಯಲ್ಲಿ ಹಂಚಿಕೊಂಡಿದೆ.ಎಸ್ ಸಿ ಒಳಮೀಸಲಾತಿ RD ಕಡ್ಡಾಯ:ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಆರ್ ಡಿ ಸಂಖ್ಯೆ ಇರುವ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ಮುದ್ರಿತವಾಗಿರುವ ಪ್ರಮಾಣ ಪತ್ರವನ್ನು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದು ಅರ್ಜಿಯ ಪೋರ್ಟಲ್ ನಲ್ಲಿ ಎಡಿಟಿಂಗ್ ಮಾಡುವ ಮೂಲಕ ಆರ್ ಡಿ ಸಂಖ್ಯೆಯನ್ನು ದಾಖಲಿಸಬೇಕು. ಇದಕ್ಕಾಗಿ ಎಡಿಟಿಂಗ್ ಅರ್ಜಿ ಪೋರ್ಟಲ್ ಅನ್ನು ಮಾರ್ಚ್ 30ರವ...









