
ರಾಜ್ಯ ಬಿಜೆಪಿಯಲ್ಲಿ ಕುತೂಹಲ; ವಿಜಯೇಂದ್ರ ನಡೆಯ ಅಚ್ಚರಿ
ಬೆಂಗಳೂರು: ದಿನಕ್ಕೊಂದು ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿರುವ ರಾಜ್ಯ ಬಿಜೆಪಿಯಲ್ಲಿ ಇದೀಗ ವಿಜಯೇಂದ್ರ ನಡೆ ಸಂಚಲನಕ್ಕೆ ಕಾರಣವಾಗಿದೆ. ಪಕ್ಷದೊಳಗಿನ ಆಂತರಿಕ ಕಚ್ಚಾಟದ ನಡುವೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬುಧವಾರ ಸಂಜೆ ಅಮಿತ್ ಶಾ ಅವರನ್ನು ಭೇಟಿ ಮಾಡಿ “ವಚನ’ ಪುಸ್ತಕ ನೀಡಿದ ವಿಜಯೇಂದ್ರ ರಾಜ್ಯ ರಾಜಕೀಯ ಬಗ್ಗೆ ಚರ್ಚಿಸಿದ್ದಾರೆ. ಅಮಿತ್ ಶಾ ಭೇಟಿ ಕುರಿತು ಸಾಮಾಜಿಕ ಜಾಲತಾಣ'X' ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಅಮಿತ್ ಶಾ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನ ನವದೆಹಲಿಯಲ್ಲಿ ಭೇಟಿಯಾಗಿ ಶುಭಾಶಯ ಕೋರಿ ಆಶೀರ್ವಾದ ಪಡೆಯಲಾಯಿತು ಎಂದು ತಿಳಿಸಿದ್ದಾರೆ.
ಉಕ್ಕಿನ ಮನುಷ್ಯ ಎಂದು ಬಣ್ಣಿಸಲ್ಪಡುವ ಸರ್ದಾರ್ ವಲ್ಲಭಾಯಿ ಪಟೇಲರ ನಂತರ ದೇಶಕಂಡ ದಿಟ್ಟ ಗೃಹ ಸಚಿವ ಶ್ರೀ @AmitShah ಜೀ ಅವರನ್ನು 2025ರ ನೂತನ ಕ್ಯಾಲೆಂಡರ್ ಹೊಸವರ್ಷದ ದಿನವಾದ ಇಂದು ನವದೆಹಲಿಯಲ್ಲಿ ...