Sunday, August 9

ವಿದೇಶ

ಜೂನ್ 1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

ಜೂನ್ 1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ 46,000 ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಡಿಡಿಪಿಐ, ಡಿಡಿಪಿಯು, ಬಿಇಒ ಸೇರಿದಂತೆ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದರು.ಮುಂಬರುವ ಜೂನ್ 1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನಡೆಯಲಿದ್ದು, ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳನ್ನು ಶಾಲೆಗೆ ಸ್ವಾಗತಿಸಲಿದ್ದಾರೆ, ಎಂದು ಸಚಿವರು ಹೇಳಿದರು. ಇದೇ ಸಂದರ್ಭದಲ್ಲಿ, ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಏಕಕಾಲದಲ್ಲಿ ನಡೆಯುವ 'ಮಹಾ ಪೋಷಕ-ಶಿಕ್ಷಕರ ಸಭೆ' (Mega PTM) ಯನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ನೇರ ಸಂವಾದ ನಡೆಸಲಿದ್ದಾರೆ ಎಂದು ಸಚಿವರು ಪ್ರಕಟಿಸಿದರು.ಇದೇ ಶಾಲಾ ಪ್ರಾರಂಭೋತ್ಸವದ ಶುಭ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ 'ಕರ್ನಾಟಕ ಪಬ...
ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಅನಾಥರು, ವೃದ್ಧರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಶೋಷಿತ, ಅಸಹಾಯಕ ಜನವರ್ಗಗಳಿಗೆ ರಾಜ್ಯ ಸರ್ಕಾರ ನೀಡುವ ಸಹಾಯಧನ ಹಾಗೂ ಪಿಂಚಣಿ ಸ್ಥಗಿತಗೊಂಡಿದೆ. ಈ ರೀತಿ ಖಜಾನೆ ಖಾಲಿಯಾಗಿದ್ದರೂ ಸಾಧನಾ ಸಮಾವೇಶ ಮಾಡಲು ಕಾಂಗ್ರೆಸ್‌ ನಾಯಕರಿಗೆ ಯಾವ ಯೋಗ್ಯತೆ ಇದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್‌ ಸರ್ಕಾರ ತಾನು ಮಾಡಿದ ಪಾಪಗಳಿಗಾಗಿ ಸಮಾವೇಶ ನಡೆಸಿ ಸಂಭ್ರಮಾಚರಣೆ ಮಾಡುತ್ತಿದೆ. ಭಿಕ್ಷುಕರಿಗೆ, ಸಹಾಯಧನ ಪಡೆಯುವವರಿಗೆ ಆರ್ಥಿಕ ಸಹಾಯ ಸ್ಥಗಿತಗೊಂಡಿದ್ದು, ಕಳೆದ ಮೂರು ವರ್ಷದಿಂದ ಸರ್ಕಾರ ಇವರನ್ನು ಶೋಷಣೆ ಮಾಡುತ್ತಿದೆ. ಗೃಹಲಕ್ಷ್ಮಿಯ 5,000 ಕೋಟಿ ರೂ., ಅನ್ನಭಾಗ್ಯದ 700 ಕೋಟಿ ರೂ. ಇನ್ನೂ ಫಲಾನುಭವಿಗಳಿಗೆ ಸಿಕ್ಕಿಲ್ಲ. ಅನಾಥ ಮಕ್ಕಳ 73 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಪರಿಶಿಷ್ಟ ಜಾತಿಗಳ 45,000 ಕೋಟಿ ರೂ. ಲೂಟಿಯಾಗಿದೆ. ಸಮೀಕ್ಷೆಯ ಹೆಸರಲ್ಲಿ ಇನ್ನೂ ರೈತರಿಗೆ ಪರಿಹಾರ ಕೊಟ್ಟಿಲ್ಲ. ಕಂದಾಯ ಇಲಾಖೆಯಡಿಯ 12 ಬಗೆಯ ಪಿಂಚಣಿಗಳನ್ನ...
ಹಿಜಾಬ್ ಅನುಮತಿ ಕುರಿತು ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಹಿಜಾಬ್ ಅನುಮತಿ ಕುರಿತು ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಶಾಲೆಗಳಲ್ಲಿ ವಸ್ತ್ರಸಂಹಿತೆ ಇರಬೇಕೇ ಬೇಡವೇ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದ್ದಾರೆ.ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಶಾಸಕ ಯಶ್‍ಪಾಲ್ ಸುವರ್ಣ ಮತ್ತು ರಾಜ್ಯ ವಕ್ತಾರ ಡಾ. ನರೇಂದ್ರ ರಂಗಪ್ಪ ಸುದ್ದಿಗೋಷ್ಠಿ ನಡೆಸಿದ ಸಿ.ಟಿ.ರವಿ, ಹಿಜಾಬ್‍ಗೆ ಅನುಮತಿ ನೀಡಿ, ಜನಿವಾರ- ರುದ್ರಾಕ್ಷಿಯನ್ನೂ ಎಳೆದು ತಂದು, ಕೇಸರಿ ಶಾಲಿಗೆ ನಿಷೇಧ ಹೇರಿ ಒಂದು ಸುತ್ತೋಲೆಯನ್ನು ಸರಕಾರ ಹೊರಡಿಸಿದೆ ಎಂದರು. ಬಿಜೆಪಿ, ಹಿಜಾಬ್ ವಿರೋಧಿಯಲ್ಲ; ನಾವು ಹಿಜಾಬ್ ವಿರೋಧಿಸಿಲ್ಲ ಎಂದು ಇದೇವೇಳೆ ಸ್ಪಷ್ಟಪಡಿಸಿದರು.ಯಾವಾಗಿನಿಂದ ಯೂನಿಫಾರಂ (ವಸ್ತ್ರಸಂಹಿತೆ) ಆರಂಭವಾಗಿದೆ? ಯಾವ ಉದ್ದೇಶಕ್ಕೆ ಅದು ಪ್ರಾರಂಭವಾಗಿದೆ? ಎಂದು ಕೇಳಿದ ಅವರು, ಅಕ್ಷರ ಮತ್ತು ಜ್ಞಾನ ಹೆಚ್ಚಿಸಬೇಕಾದ ಶಿಕ್ಷಣ ಸಚಿವರಿಗೆ ಅದರ ಉದ್ದೇಶದ ಬಗ್ಗೆಯೂ ಸ್ಪಷ್ಟತೆ ಇಲ್ಲ. ಅದರ ಇತಿಹಾಸದ ಅರಿವೂ ಇಲ್ಲ. ಕೇವಲ ಮತೀಯ ಓಲೈಕೆಯ ರಾಜನೀತಿಯ ಭಾಗವಾಗಿ ಶಾಲೆಗಳಲ್ಲಿ ಮತೀಯ ಭಾವನೆಗಳಿಗೆ ಜಾತ್ಯತೀತತೆಯ ಹೆಸರಿನಲ್ಲಿ ಅನುಮತಿ ಕೊಟ್ಟಿದ್ದಾರೆ ಎಂದರು. ಶಾಲೆಗಳಲ್ಲಿ ಎಲ್ಲ ಮಕ್ಕಳೂ ಸಮಾನರು. ಅವರು ಬೇರೆ ಬೇರೆ ಮ...
ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರವು ಬೆಂಗಳೂರಿನ ಜನತೆಗೆ ಮಹತ್ವದ ಘೋಷಣೆ ಮಾಡಿದ್ದು, ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕವನ್ನು ಶೇ.5ರಿಂದ ಶೇ.2ಕ್ಕೆ ಇಳಿಸಿ 100 ದಿನಗಳ “ಸುವರ್ಣ ಅವಕಾಶ” ನೀಡಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ಸರಿಯಾದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ನಾಗರಿಕರಿಗೆ ಈ ರಿಯಾಯಿತಿ ಅನ್ವಯವಾಗಲಿದೆ ಎಂದು ಹೇಳಿದರು.“ಬಿ ಖಾತಾವನ್ನು ಎ ಖಾತಾಗೆ ಪರಿವರ್ತಿಸಲು ಸಾಮಾನ್ಯವಾಗಿ ಗೈಡ್‌ಲೈನ್ ಮೌಲ್ಯದ ಶೇ.5 ಶುಲ್ಕ ವಿಧಿಸಲಾಗುತ್ತದೆ. ಆದರೆ ಮುಂದಿನ 100 ದಿನಗಳ ಕಾಲ ಕೇವಲ ಶೇ.2 ಶುಲ್ಕ ಮಾತ್ರ ವಿಧಿಸಲಾಗುತ್ತದೆ. ಇದರಿಂದ ಜನರಿಗೆ ಶೇ.60 ರಷ್ಟು ರಿಯಾಯಿತಿ ಸಿಗಲಿದೆ,” ಎಂದು ತಿಳಿಸಿದರು.ಒಂದು ಕೋಟಿ ರೂಪಾಯಿ ಮೌಲ್ಯದ ಆಸ್ತಿಗೆ ಸಾಮಾನ್ಯವಾಗಿ 5 ಲಕ್ಷ ರೂ. ಶುಲ್ಕ ಬರುತ್ತದೆ. ಹೊಸ ಯೋಜನೆಯಡಿ ಅದು 2 ಲಕ್ಷ ರೂ.ಗೆ ಇಳಿಕೆಯಾಗಲಿದೆ ಎಂದು ಅವರು ಉದಾಹರಣೆ ನೀಡಿದರು.ನಗರದ ಸುಮಾರು 23 ಲಕ್ಷ ಆಸ್ತಿ ಮಾಲೀಕರಿಗೆ ಮನೆ ಬಾಗಿಲಲ್ಲೇ ಹಕ್ಕುಪತ್ರ ಸೌಲಭ್ಯ ಕಲ್ಪಿಸುವ ಉದ್ದೇಶದಿಂ...
ಜಿಬಿಎ ಚುನಾವಣೆ ವಿಚಾರದಲ್ಲಿ ಸಿಎಂ-ಡಿಕೆಶಿ ನಡುವೆ ಭಿನ್ನಾಭಿಪ್ರಾಯ?

ಜಿಬಿಎ ಚುನಾವಣೆ ವಿಚಾರದಲ್ಲಿ ಸಿಎಂ-ಡಿಕೆಶಿ ನಡುವೆ ಭಿನ್ನಾಭಿಪ್ರಾಯ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಒಳಸಂಘರ್ಷ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಗೈರಾಗಿದ್ದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಅಧಿಕಾರಿಗಳ ಸಭೆ ನಡೆಸಿ ಜಿಬಿಎ ಚುನಾವಣೆ ನಡೆಸಲು ಸೂಚಿಸಿದ್ದಾರೆ ಎಂದು ಹೇಳಿದರು. ಬಳಿಕ ಡಿಕೆ ಶಿವಕುಮಾರ್ ಪ್ರತ್ಯೇಕ ಸಭೆ ನಡೆಸಿ ಯಾವುದೇ ಕಾರಣಕ್ಕೂ ಚುನಾವಣೆ ನಡೆಯದಂತೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದರು.ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತೆರಳಿ ಚುನಾವಣೆಯನ್ನು ಮುಂದೂಡಲು ಯತ್ನಿಸುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಜನಗಣತಿ ಸೇರಿದಂತೆ ವಿವಿಧ ಕಾರಣಗಳನ್ನು ಮುಂದಿಟ್ಟು ಸೆಪ್ಟೆಂಬರ್ ವರೆಗೆ ಚುನಾವಣೆ ವಿಳಂಬಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.“ತಮ್ಮ ರಾಜಕೀಯ ಸ್ಥಾನವನ್ನು ಬಲಪಡಿಸಿಕೊಳ್ಳಲು ಮುಖ್ಯಮಂತ್ರಿ ಚುನಾವಣೆ ಬಯಸುತ್ತಿದ್ದಾರೆ. ಆದರೆ ಚುನಾವಣೆ ನಡೆದರೆ ಮುಖ್ಯಮಂತ್ರಿ ಹುದ್ದೆಯ ಆಸ...
ಎಸ್‌ಸಿ-ಎಸ್‌ಟಿ ಮೀಸಲಾತಿ ವಿಚಾರ: ಜಾಗೃತಿ ಅಭಿಯಾನಕ್ಕೆ ಬಿಜೆಪಿ ತೀರ್ಮಾನ

ಎಸ್‌ಸಿ-ಎಸ್‌ಟಿ ಮೀಸಲಾತಿ ವಿಚಾರ: ಜಾಗೃತಿ ಅಭಿಯಾನಕ್ಕೆ ಬಿಜೆಪಿ ತೀರ್ಮಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಸ್‌ಸಿ ಹಾಗೂ ಎಸ್‌ಟಿ ಸಮುದಾಯಗಳಿಗೆ ಹೆಚ್ಚಿಸಲಾಗಿದ್ದ ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿಲ್ಲ ಎಂದು ಆರೋಪಿಸಿರುವ ಬಿಜೆಪಿ, ರಾಜ್ಯಾದ್ಯಂತ ಜಾಗೃತಿ ಅಭಿಯಾನ ಆರಂಭಿಸಲು ತೀರ್ಮಾನಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಬಿಜೆಪಿ ಎಸ್‌ಸಿ/ಎಸ್‌ಟಿ ಮುಖಂಡರ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.ತಮ್ಮ ಸರ್ಕಾರದ ಅವಧಿಯಲ್ಲಿ ಎಸ್‌ಸಿ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸಲಾಗಿತ್ತು ಎಂದು ಬೊಮ್ಮಾಯಿ ಹೇಳಿದರು. ಈ ಹೆಚ್ಚುವರಿ ಮೀಸಲಾತಿಯಿಂದ ಸಾವಿರಾರು ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟುಗಳು ಲಭ್ಯವಾಗಿದ್ದವು ಎಂದು ತಿಳಿಸಿದರು.ಸುಪ್ರೀಂ ಕೋರ್ಟ್ ಆದೇಶ ಹಾಗೂ ಆಯೋಗಗಳ ವರದಿಗಳನ್ನು ಸರಿಯಾಗಿ ಜಾರಿಗೊಳಿಸದೆ ಕಾಂಗ್ರೆಸ್ ಸರ್ಕಾರ ಗೊಂದಲ ಸೃಷ್ಟಿಸುತ್ತಿದೆ ಎಂದು ಅವರು ಆರೋಪಿಸಿದರು....
KSRTC ನೌಕರರಿಗೆ ಗುಡ್ ನ್ಯೂಸ್; ನಾಲ್ಕೂ ನಿಗಮಗಳ ಸಿಬ್ಬಂದಿ ವೇತನ 12.5% ಪರಿಷ್ಕರಣೆ: ಸರ್ಕಾರ ಆದೇಶ

KSRTC ನೌಕರರಿಗೆ ಗುಡ್ ನ್ಯೂಸ್; ನಾಲ್ಕೂ ನಿಗಮಗಳ ಸಿಬ್ಬಂದಿ ವೇತನ 12.5% ಪರಿಷ್ಕರಣೆ: ಸರ್ಕಾರ ಆದೇಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೇರಿದಂತೆ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಹಾಗೂ ಅಧಿಕಾರಿಗಳಿಗೆ 12.5 ಶೇಕಡಾ ವೇತನ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪರಿಷ್ಕರಣೆ 2025ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.ವೇತನ ಪರಿಷ್ಕರಣೆಯಿಂದ ನಾಲ್ಕು ಸಾರಿಗೆ ನಿಗಮಗಳಿಗೆ ಪ್ರತಿ ತಿಂಗಳು ಸುಮಾರು ₹72.80 ಕೋಟಿ ಹಾಗೂ ವರ್ಷಕ್ಕೆ ₹873.64 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ ಎಂದು ಸಾರಿಗೆ ಇಲಾಖೆ ಮೂಲಗಳು ತಿಳಿಸಿವೆ.ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಸುಮಾರು 1.05 ಲಕ್ಷ ಸಿಬ್ಬಂದಿಗೆ ಈ ವೇತನ ಪರಿಷ್ಕರಣೆಯ ಲಾಭ ದೊರೆಯಲಿದೆ.ಈಗಾಗಲೇ 2023ರ ಮಾರ್ಚ್ ವೇತನ ಪರಿಷ್ಕರಣೆಗೆ ಸಂಬಂಧಿಸಿದ 26 ತಿಂಗಳ ಹಿಂಬಾಕಿ ಮೊತ್ತ ₹1271.92 ಕೋಟಿಗಳ ಪೈಕಿ ಮೊದಲ ಕಂತಿನ ₹450 ಕೋಟಿಯನ್ನು ಸರ್ಕಾರ ಬಿಡುಗಡೆ ಮಾಡಿದ್ದು, ನೌಕರರ ಖಾತೆಗಳಿಗೆ ಜಮಾ ಮಾಡಲಾಗಿದೆ.ಇದಲ್ಲದೆ, 2025ರ ಏಪ್ರಿಲ್ 1ರಿಂದ 2026ರ ಜೂನ್ 30ರವರೆಗೆ ಅನ್ವಯವಾಗುವ ವೇತನ ಪರಿಷ್ಕರಣೆಯ ಹಿಂಬಾಕಿ ಮೊತ್ತವನ್ನು ಮುಂದಿನ ದಿನಗಳಲ್ಲಿ ಪಾವತಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದ...
ಜಾಗತಿಕ ಬಿಕ್ಕಟ್ಟಿನ ನಡುವೆ ಪ್ರಧಾನಿ ಮೋದಿ ಮನವಿಗೆ ಬೊಮ್ಮಾಯಿ ಸಮರ್ಥನೆ

ಜಾಗತಿಕ ಬಿಕ್ಕಟ್ಟಿನ ನಡುವೆ ಪ್ರಧಾನಿ ಮೋದಿ ಮನವಿಗೆ ಬೊಮ್ಮಾಯಿ ಸಮರ್ಥನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಜಾಗತಿಕ ಬಿಕ್ಕಟ್ಟಿನ ನಡುವೆ ಪ್ರಧಾನಿ ನರೇಂದ್ರ ಮೋದಿ ಮಾಡಿದ ಸಂಪನ್ಮೂಲ ಸಂರಕ್ಷಣೆಯ ಮನವಿಯನ್ನು ಸಮರ್ಥಿಸಿಕೊಂಡಿದ್ದು, ಇದು ಮುನ್ನೆಚ್ಚರಿಕಾ ಕ್ರಮ ಎಂದು ಹೇಳಿದ್ದಾರೆ.ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಸಂಘರ್ಷಗಳಿಂದ ಜಾಗತಿಕ ಮಟ್ಟದಲ್ಲಿ ತೈಲ ಮತ್ತು ಇಂಧನ ಪೂರೈಕೆಗೆ ತೊಂದರೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಜನರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ ಎಂದು ಹೇಳಿದರು.“ರಷ್ಯಾ-ಉಕ್ರೇನ್ ಯುದ್ಧದ ಸಮಯದಲ್ಲಿ ರಸಗೊಬ್ಬರ ಹಾಗೂ ಕಚ್ಚಾ ವಸ್ತುಗಳ ಕೊರತೆ ಎದುರಾಯಿತು. ಈಗ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಪೂರೈಕೆಯ ಸವಾಲು ಎದುರಾಗಿದೆ. ಆದರೂ ಪ್ರಧಾನಿ ಮೋದಿಯವರ ರಾಜತಾಂತ್ರಿಕ ನಿಲುವಿನಿಂದ ಭಾರತದಲ್ಲಿ ದೊಡ್ಡ ಮಟ್ಟದ ಇಂಧನ ಕೊರತೆ ಉಂಟಾಗಿಲ್ಲ” ಎಂದು ಬೊಮ್ಮಾಯಿ ಹೇಳಿದರು.ಚಿನ್ನದ ಖರೀದಿ, ಅನಗತ್ಯ ಇಂಧನ ಬಳಕೆ ಮತ್ತು ವಿದೇಶಿ ಪ್ರವಾಸಗಳನ್ನು ಕಡಿಮೆ ಮಾಡುವಂತೆ ಪ್ರಧಾನಿ ಮನವಿ ಮಾಡಿರುವುದು ದೇಶದ ಆರ್ಥಿಕ ಹಿತದೃಷ್ಟಿಯಿಂದ ಎಂದು ಅವರು ಹೇಳಿದರು.“ಜನರು ಒಂದ...
ಕರ್ನಾಟಕ ಅಂಡರ್-15 ಫುಟ್ಬಾಲ್ ತಂಡಕ್ಕೆ ಸುಳ್ಯದ  ಸಿ.ಎಸ್.ಸ್ಕಂದ ಆಯ್ಕೆ

ಕರ್ನಾಟಕ ಅಂಡರ್-15 ಫುಟ್ಬಾಲ್ ತಂಡಕ್ಕೆ ಸುಳ್ಯದ ಸಿ.ಎಸ್.ಸ್ಕಂದ ಆಯ್ಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಗಳೂರು: ಸುಳ್ಯ ಮೂಲದ ಸ್ಕಂದ ಸಿ.ಎಸ್ ಕರ್ನಾಟಕ 7A ಸೈಡ್ ಅಂಡರ್-15 ಫುಟ್ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಮೇ 14ರಿಂದ ಗೋವಾದಲ್ಲಿ ನಡೆಯಲಿರುವ ಸಬ್-ಜ್ಯೂನಿಯರ್ ನ್ಯಾಷನಲ್ ಟೂರ್ನಮೆಂಟ್‌ನಲ್ಲಿ ಅವರು ಕರ್ನಾಟಕ ಪರವಾಗಿ ಆಡಲಿದ್ದಾರೆ.ಸ್ಕಂದ ಸದ್ಯ ಬೆಂಗಳೂರಿನಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದಾರೆ. ಇಂಜಿನಿಯರ್ ಆಗಿರುವ ಎಣ್ಮೂರಿನ ತೇಜಸ್ವಿನಿ ಕೆ.ಎನ್ ಮತ್ತು ದಂಬೆ ರವಿಶಂಕರ ಶಾಸ್ತ್ರಿ ದಂಪತಿಗಳ ಪುತ್ರ. ನಿವೃತ್ತ ಅಧ್ಯಾಪಕರಾದ ಕೀರಿಕ್ಕಾಡು ನಾರಾಯಣ ಭಟ್ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎ.ಆರ್ ಅವರ ಮೊಮ್ಮಗ.ಸ್ಕಂದನ ಆಯ್ಕೆಯಿಂದ ಕುಟುಂಬ ಹಾಗೂ ಸ್ಥಳೀಯ ಕ್ರೀಡಾಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ....