Tuesday, August 18

ವಿದೇಶ

ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು? ಅಂಕಿತ ಹಾಕದ ರಾಜ್ಯಪಾಲರ ಬಗ್ಗೆ ಬೇಸರ; ರಾಜಭವನ ಚಲೋಗೆ ಅರ್ಚಕ ಸಮೂಹ ನಿರ್ಧಾರ

ಆಧ್ಯಾತ್ಮ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಅರ್ಚಕರ ಕಲ್ಯಾಣಕ್ಕೆ ಬಿಜೆಪಿ ಅಡ್ಡಗಾಲು ಹಾಕುತ್ತಿದೆ ಎಂದು ಬೇಸರ ವ್ಯಕ್ತಪಡಿಸಿರುವ ಅರ್ಚಕರ ಸಮೂಹ, ಧಾರ್ಮಿಕ 'ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ'ಕ್ಕೆ ಅಂಕಿತ ಹಾಕದ ರಾಜ್ಯಪಾಲರ ಬಗ್ಗೆಯೂ ಬೇಸರ ವ್ಯಕ್ತಪಡಿಸಿದೆ. ಈ ಸಂಬಂಧ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ರಾಜಭವನ ಚಲೋಗೆ ನಿರ್ಧರಿಸಿದೆ.ಧರ್ಮದ ವಿಷಯದಲ್ಲಿ ರಾಜಕೀಯ ಮಾಡಬಾರದು. ಆದರೆ ಬಿ.ಜೆ.ಪಿ ನಾಯಕರು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಾ ಬಂದಿದ್ದರೂ ಸಹ, ರಾಜ್ಯದಲ್ಲಿ ಧಾರ್ಮಿಕ ದತ್ತಿ ಇಲಾಖೆಯಡಿಯಲ್ಲಿ ಬರುವ ದೇವಸ್ಥಾನಗಳ ಹಾಗೂ ಅರ್ಚಕರ ಕಲ್ಯಾಣ ಅಭಿವೃದ್ಧಿ ಮಾಡದೇ, ಕಾಂಗ್ರೆಸ್ ಸರ್ಕಾರ ಮಾಡಲು ಯೋಜಿಸಿರುವ ಕಾಯಿದೆಯನ್ನು ಸಹಿಸದೆ ರಾಜ್ಯಪಾಲರಿಗೆ ಒತ್ತಡ ಹೇರಿ ಸಹಿ‌ ಹಾಕಿಸದೆ ಬಿಜೆಪಿಯು ಅರ್ಚಕ ಸಮೂಹಕ್ಕೆ ದ್ರೋಹ ಬಗೆಯುತ್ತಿದೆ ಎಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಪ್ರಮುಖರು ಆರೋಪಿಸಿದ್ದಾರೆ.ಈ ಕುರಿತಂತೆ ಮಾಧ್ಯಮ‌ ಪ್ರಕಟಣೆ ಹೊರಡಿಸಿರುವ ಅರ್ಚಕರ ಸಮೂಹ, ಕಾಂಗ್ರೆಸ್ ಸರ್ಕಾರವು ಅರ್ಚಕರ ಕಲ್ಯಾಣಕ್ಕ...
ವಕ್ಫ್ ತಿದ್ದುಪಡಿ ಮಸೂದೆ: ತಮ್ಮ ಹೋರಾಟ ಬೆಂಬಲಿಸಿದವರಿಗೆ ಧನ್ಯವಾದ ಸಮರ್ಪಿಸಿದ ಯತ್ನಾಳ್

ವಕ್ಫ್ ತಿದ್ದುಪಡಿ ಮಸೂದೆ: ತಮ್ಮ ಹೋರಾಟ ಬೆಂಬಲಿಸಿದವರಿಗೆ ಧನ್ಯವಾದ ಸಮರ್ಪಿಸಿದ ಯತ್ನಾಳ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಕ್ಫ್ ತಿದ್ದುಪಡಿ ಮಸೂದೆಯು ಸಂಸತ್ತಿನಲ್ಲಿ ಅಂಗೀಕರವಾಗಿರುವ ಬಗ್ಗೆ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಅವರ ಪ್ರತಿಕ್ರಿಯೆ ಗಮನಸೆಳೆದಿದ್ದಾರೆ. ಅತ್ತ, ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದರೆ, ಇತ್ತ, ವಕ್ಫ್ ವಿರುದ್ದದ ಹೋರಾಟ ಬೆಂಬಲಿಸಿದವರಿಗೆ ಯತ್ನಾಳ್ ಧನ್ಯವಾದ ಸಮರ್ಪಿಸಿದ್ದಾರೆ.ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆಯು ವಕ್ಫ್ ಬೋರ್ಡ್ ನ ನಿರಂಕುಶ ನಡೆಗಳಿಗೆ ಕಡಿವಾಣ ಹಾಕಲಿದೆ. ವಕ್ಫ್ ಕಾಯ್ದೆಯ ತಿದ್ದುಪಡಿಗೆ ಗೆ ಜಂಟಿ ಸಂಸತ್ ಸಮಿತಿ ರಚಿಸಿ ತಿದ್ದುಪಡಿಗೆ ಸೂಚಿಸಿದ ಕೇಂದ್ರ ಸರ್ಕಾರಕ್ಕೂ, ಜೆ.ಪಿ.ಸಿ ಅಧ್ಯಕ್ಷರಿಗೂ, ಸದಸ್ಯರಿಗೂ ಸೇರಿದಂತೆ ತಿದ್ದುಪಡಿಗೆ ಕಾರಣೀಭೂತರಾದ ಎಲ್ಲರಿಗೂ ನನ್ನ ಅನಂತ ಧನ್ಯವಾದಗಳು ಎಂದು ಶಾಸಕ ಬಸನಗೌಡ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.ತಿದ್ದುಪಡಿಯಿಂದ ರೈತರಿಗೆ, ಮಠಗಳಿಗೆ, ದೇವಸ್ಥಾನಗಳಿಗೆ, ಸರ್ಕಾರಿ ಭೂಮಿ ಹಾಗೂ ಜನ ಸಾಮಾನ್ಯರ ಭೂಮಿಯನ್ನು ವಕ್ಫ್ ಎಂದು ಘೋಷಿಸಲು ಸಾಧ್ಯವಿಲ್ಲ ಹಾಗೂ ಜಿಲ್ಲಾಡಳಿತ ಮತ್ತು ನ್ಯಾಯಾಲಯಗಳಷ್ಟೇ ಇದನ್ನು ತೀರ್ಮಾನಿಸಬಹುದು. ನಮ್ಮ ಸಾಮ...
ಧಾರ್ಮಿಕ ಆಚರಣೆಗಳಿಗೆ ವಕ್ಫ್ ತಿದ್ದುಪಡಿ ಮಸೂದೆ ಅಡ್ಡಿಯಾಗದು: ದೇವೇಗೌಡ

ಧಾರ್ಮಿಕ ಆಚರಣೆಗಳಿಗೆ ವಕ್ಫ್ ತಿದ್ದುಪಡಿ ಮಸೂದೆ ಅಡ್ಡಿಯಾಗದು: ದೇವೇಗೌಡ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಬಗ್ಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಸ್ವಾಗತಿಸಿದ್ದಾರೆ. ಈ ಮಸೂದೆಯಿಂದ ಮುಸ್ಲಿಂ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.ರಾಜ್ಯಸಭೆಯಲ್ಲಿ ನೂತನ ವಕ್ಫ್ ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ದೇವೇಗೌಡರು, ಈ ಕಾಯ್ದೆ ಮುಸ್ಲಿಂ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗುವುದಿಲ್ಲ ಎಂದರು.ವಕ್ಫ್ ಆಸ್ತಿಗಳ ಆಡಳಿತವನ್ನು ನಿಯಂತ್ರಿಸುವ ಗುರಿಯನ್ನು ಈ ಕಾಯ್ದೆ ಹೊಂದಿದೆ. ದೇಶದ ಸುಮಾರು 9.4 ಲಕ್ಷ ಎಕರೆಗಳಷ್ಟು ವಿಸ್ತಾರವಾಗಿರುವ 8.7 ಲಕ್ಷ ಆಸ್ತಿಗಳನ್ನು ನಿಯಂತ್ರಿಸುತ್ತದೆ. 1.2 ಲಕ್ಷ ಕೋಟಿ ರೂ. ಮೌಲ್ಯದ ಈ ಆಸ್ತಿಗಳನ್ನು ಸ್ವತ್ತು ಮರುಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಮಸೂದೆಯಿಂದಾಗಿ ವಕ್ಫ್ ಆಸ್ತಿಗಳು ಶ್ರೀಮಂತರಿಂದ ಬಡ ಮುಸ್ಲಿಮರನ್ನು ರಕ್ಷಿಸುತ್ತದೆ ಎಂದು ದೇವೇಗೌಡರು ಪ್ರತಿಪಾದಿಸಿದ್ದಾರೆ....
ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನಕ್ಕೆ ಸೂಕ್ತ ಕ್ರಮ ಕೈಗೊಳ್ಳಿ: ಕೇಂದ್ರಕ್ಕೆ ಸಿದ್ದರಾಮಯ್ಯ ಮನವಿ

ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನಕ್ಕೆ ಸೂಕ್ತ ಕ್ರಮ ಕೈಗೊಳ್ಳಿ: ಕೇಂದ್ರಕ್ಕೆ ಸಿದ್ದರಾಮಯ್ಯ ಮನವಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.ಈ ಸಂಬಂಧ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್‌ ಅವರಿಗೆ ಸಿಎಂ ಬೇಡಿಕೆ ಪತ್ರ ಸಲ್ಲಿಸಿದ್ದಾರೆ. ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ. ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ ಎಂದವರು ಮನವಿ ಪಾತ್ರದಲ್ಲಿ ತಿಳಿಸಿದ್ದಾರೆ....
ದರ್ಶನ್ ಅಭಿಮಾನಿಯನ್ನು ಕ್ರೀಡಾಂಗಣದಿಂದ ಹೊರದಬ್ಬಿದರೇ ಪೊಲೀಸ್? ವೀಡಿಯೋ ವೈರಲ್

ದರ್ಶನ್ ಅಭಿಮಾನಿಯನ್ನು ಕ್ರೀಡಾಂಗಣದಿಂದ ಹೊರದಬ್ಬಿದರೇ ಪೊಲೀಸ್? ವೀಡಿಯೋ ವೈರಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ಬೆಂಗಳೂರು: ಬೆಂಗಳೂರು ಪೊಲೀಸರು ದರ್ಶನ ಅಭಿಮಾನಿಗೆ ಶಾಕ್ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 2ರಂದು ನಡೆದ ಐಪಿಎಲ್ ಪಂದ್ಯಾವಳಿ ಸಂದರ್ಭದಲ್ಲಿ ದರ್ಶನ ಅಭಿಮಾನಿಯೊಬ್ಬನನ್ನು ಕ್ರೀಡಾಂಗಣದಿಂದ ಬಲವಂತವಾಗಿ ಹೊರಗೆ ಕಳುಹಿದ್ದಾರೆ. ಅದಕ್ಕೆ ಕಾರಣ ನಟ ದರ್ಶನ್ ಫೋಟೋ.ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ನಡುವೆ IPL ಪಂದ್ಯ ವೀಕ್ಷಿಸಲು ಆಗಮಿಸಿದ್ದ ಯುವಕನೊಬ್ಬ ನಟ ದರ್ಶನ್ ಭಾವಚಿತ್ರ ಹಿಡಿದುಕೊಂಡು ಬಂದಿದ್ದ. ಅದನ್ನು ಕಂಡ ಭದ್ರತಾ ಸಿಬ್ಬಂದಿ ಫೋಟೋದ ಜೊತೆ ಕ್ರೀಡಾಂಗಣ ಪ್ರವೇಶಿಸಲು ಅವಕಾಶ ಕೊಟ್ಟಿಲ್ಲ. ಅದಾಗಲೇ ಆ ಯುಕನನ್ನು ಕ್ರೀಡಾಂಗಣದಿಂದ ಹೊರ ದಬ್ಬಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನಿನ್ನೆಯ ಪಂದ್ಯದ ಡಾಗರ್ ಕ್ರಿಮಿನಲ್ ಬೂಸ ದಾಸಪ್ಪ ಫೋಟೋವನ್ನು ಪೊಲೀಸರು ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ತಡೆದರು.!🐷🥺😭#CriminalDarshan#RCBvsGT pic.twitter.com/COcGlLel97— 🐐♑ (@Rohi45Appu) April 3, 2025 ಈ ನಡುವೆ, ದರ್ಶನ್ ಅಭಿಮಾನಿಯ ನಡೆಗೆ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್...
ಕೌಶಲ್ಯ ಅಭಿವೃದ್ಧಿಗಾಗಿ ಮೆಲ್ಬೋರ್ನ್ ಮೂಲದ ಆರ್‌ಎಂಐಟಿ ವಿಶ್ವವಿದ್ಯಾಲಯ ಜೊತೆ ಸಹಯೋಗಕ್ಕೆ ಸರ್ಕಾರದ ಚಿಂತನೆ

ಕೌಶಲ್ಯ ಅಭಿವೃದ್ಧಿಗಾಗಿ ಮೆಲ್ಬೋರ್ನ್ ಮೂಲದ ಆರ್‌ಎಂಐಟಿ ವಿಶ್ವವಿದ್ಯಾಲಯ ಜೊತೆ ಸಹಯೋಗಕ್ಕೆ ಸರ್ಕಾರದ ಚಿಂತನೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ಇಲಾಖೆ ಮತ್ತು ಮೆಲ್ಬೋರ್ನ್ ಮೂಲದ ಆರ್‌ಎಂಐಟಿ ವಿಶ್ವವಿದ್ಯಾಲಯವು ರಾಜ್ಯದ ಕೌಶಲ್ಯಾಭಿವೃದ್ಧಿ ವಲಯದಲ್ಲಿ ವಿದ್ಯಾರ್ಥಿಗಳಿಗೆ ಮರು-ಕೌಶಲ್ಯ ಮತ್ತು ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲು ಮುಂದಾಗಿವೆ.ಈ ನಿಟ್ಟಿನಲ್ಲಿ ಕೆಲವು ಉಪಕ್ರಮಗಳನ್ನು ಜಾರಿಗೆ ತರುವ ಕುರಿತು ಸಮಾಲೋಚನೆ ನಡೆಸಲಾಗಿದೆ.  ಕುಲಪತಿ ಮಿಶ್ ಈಸ್ಟ್‌ಮನ್ ನೇತೃತ್ವದ ಆರ್‌ಎಂಐಟಿ ವಿಶ್ವವಿದ್ಯಾಲಯದ ನಿಯೋಗವು ವೃತ್ತಿಪರ ಶಿಕ್ಷಣ ಕಾಲೇಜಿನ ನಿರ್ದೇಶಕ ಪ್ರಶೀಲ್ ಸಿಂಗ್; ವಿಕ್ಟೋರಿಯಾ ಸರ್ಕಾರದ (ಆಸ್ಟ್ರೇಲಿಯಾ) ವ್ಯವಸ್ಥಾಪಕ ಜಸ್ಟಿನ್ ಸ್ಮಿತ್ ಮತ್ತು ಪ್ರಾದೇಶಿಕ ನಿರ್ದೇಶಕಿ (ಶಿಕ್ಷಣ) ಆನಿ ಸಂತಾನ ಅವರೊಂದಿಗೆ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಚರ್ಚಿಸಿದರು. ಕೌಶಲ್ಯ ಅಭಿವೃದ್ಧಿಯಲ್ಲಿ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ಸರ್ಕಾರದ ನಡುವಿನ ಸಹಯೋಗವನ್ನು ಬಲಪಡಿಸುವ ಬಗ್ಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಲಾಗಿದೆ ಎಂದವರು ತಿಳಿಸಿದರು.ಕೌಶಲ್ಯ ಶಿಕ್ಷಣದಲ್ಲಿ ಕರ್...
ಹೆಣದ ಮೇಲೂ ಹಣ..? ಪಾಪ ತೊಳೆದುಕೊಳ್ಳುವುದು ಹೇಗೆಂದು ಮತದಾರರಿಗೆ ಚಿಂತೆ..!

ಹೆಣದ ಮೇಲೂ ಹಣ..? ಪಾಪ ತೊಳೆದುಕೊಳ್ಳುವುದು ಹೇಗೆಂದು ಮತದಾರರಿಗೆ ಚಿಂತೆ..!

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ್ಳುವುದು ಹೇಗೆಂದು ಚಿಂತೆ ಮಾಡುತ್ತಿದ್ದಾರೆ. ಸರ್ಕಾರದ ಬೆಲೆ ಏರಿಕೆಯ ನೀತಿ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದ್ದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಿಗೆ ಮೂಲಕ ಕಳ್ಳತನ ಮಾಡಿದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಕಮಿಶನ್ ಮೂಲಕ ಕಳ್ಳತನ ಮಾಡುತ್ತಿದ್ದಾರೆ. ಸತ್ತಾಗ ಹೆಣದ ಮೇಲೆ ಹಣ ಹಾಕುವ ಪದ್ಧತಿ ಇದೆ. ಕಾಂಗ್ರೆಸ್ ಸರ್ಕಾರ ಮರಣ ಪ್ರಮಾಣ ಪತ್ರಕ್ಕೂ ಶುಲ್ಕ ಏರಿಸಿ ಹಣ ಸಂಗ್ರಹ ಮಾಡುತ್ತಿದೆ. ಮದ್ಯದ ದರವನ್ನೂ ಏರಿಸಿ ಮದ್ಯಪ್ರಿಯರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಶೌಚಾಲಯ ನಿರ್ವಹಣೆ ಮಾಡಲು ಕೂಡ ಸರ್ಕಾರದ ಬಳಿ ದುಡ್ಡಿಲ್ಲ. ಬೆಂಗಳೂರಿನ ಜನರಿಗೆ ಮುಂದೆ ನೀರಿನ ಶುಲ್ಕ ಏರಿಕೆಯ ಶಾಕ್ ಕೂಡ ಕಾದಿದೆ ಎಂದರು.ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ಸರ್ಕಾರ, ಪತ್ನಿಗೆ ಸಹಾಯಧನ ನೀಡಿ, ಪತಿಯಿಂದ ಹಣ ವಸೂಲಿ ಮಾಡಲಾಗುತ್ತಿದೆ. ಕಾಂಗ್ರೆಸ್ ಗೆ ಮತ ನೀಡಿದ ಜನರು ಪಾಪ ತೊಳೆದುಕೊಳ...
ರೈತರಿಗೆ ಗುಡ್ ನ್ಯೂಸ್..! 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ

ರೈತರಿಗೆ ಗುಡ್ ನ್ಯೂಸ್..! 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ : ಕೃಷಿ ಇಲಾಖೆ ಮಹತ್ವದ ಆದೇಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.ಈ ಹಿಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳನ್ನು ಹೊರತುಪಡಿಸಿ ಇತರೆ ವರ್ಗದವರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಸಹಾಯಧನ ಪಡೆಯಲು ಇದ್ದ ಅವಕಾಶವನ್ನು ಇತರೆ ವರ್ಗಗಳಿಗೂ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.ಕೃಷಿ ಸಚಿವ ಎನ್.ಚಲುವರಾಯಸ್ವಾಮಿರವರ ವಿಶೇಷ ಪ್ರಯತ್ನದ ಫಲವಾಗಿ ಈ ಆದೇಶ ಹೊರಬಿದ್ದಿದ್ದು, ಲಕ್ಷಾಂತರ ರೈತ ಕುಟುಂಬಗಳಿಗೆ ಅನುಕೂಲವಾಗಲಿದೆ. ಕೃಷಿ ಸಚಿವರು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ರೈತರು ಇತರೆ ವರ್ಗಗಳಿಗೆ ಇರುವ ನಿರ್ಬಂಧ ಸಡಿಲಿಸುವಂತೆ ಮನವಿ ಮಾಡುತ್ತಿದ್ದುದನ್ನು ಗಂಭೀರವಾಗಿ ಪರಿಗಣಿಸಿ ನಿಯಮ ಸಡಿ...
ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ: 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ: 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಿರು ಬಿಸಿಲ ಬೇಗೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಹೀಗೊಂದು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗುರುವಾರದಿಂದ ಮಳೆಯಾಗುವ ಸಾಧ್ಯತೆ ಇದೆ.ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೇ ವೇಳೆ, ಏಪ್ರಿಲ್ 3 ರಿಂದ ಏಪ್ರಿಲ್ 5ರವರೆಗೆ ಉಷ್ಣಾಂಶ ಇಳಿಮುಖವಾಗುವ ಸಾಧ್ಯತೆ ಎಂದು ವಿಶ್ಲೇಷಿಸಲಾಗಿದೆ. ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಜ್ಞರು ತಿಳಿಸಿದ್ದಾರೆ....
ರಾಜೇಂದ್ರ ಹತ್ಯೆ ಸಂಚು: ಇಬ್ಬರು ಆರೋಪಿಗಳು ಶರಣು

ರಾಜೇಂದ್ರ ಹತ್ಯೆ ಸಂಚು: ಇಬ್ಬರು ಆರೋಪಿಗಳು ಶರಣು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಪುತ್ರ ವಿಧಾನ ಪರಿಷತ್​ ಸದಸ್ಯ ರಾಜೇಂದ್ರ ಹತ್ಯೆಗೆ ಸಂಚು ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಬುಧವಾರ ಪೊಲೀಸರ ಮುಂದೆ ಶರಣಾಗಿದ್ದಾರೆ.ತುಮಕೂರು ಜಿಲ್ಲೆ ಕ್ಯಾತ್ಸಂದ್ರ ಠಾಣೆ ಪೊಲೀಸರ ಮುಂದೆ ಆರೋಪಿಗಳಾದ ಸೋಮ ಮತ್ತು ಅಮಿತ್ ಶರಣಾಗಿದ್ದಾರೆ.  ಶಾಸಕ ರಾಜೇಂದ್ರ ಹತ್ಯೆಗೆ 70 ಲಕ್ಷ ರೂಪಾಯಿ ಸುಪಾರಿ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧದ ಆಡಿಯೋ ವೈರಲ್ ಆಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸುಪಾರಿ ಕೊಟ್ಟವರು ಯಾರು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ....