Friday, August 14

ವಿದೇಶ

BJPಯಿಂದ ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ

BJPಯಿಂದ ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಬಿಜೆಪಿಯ ಫೈರ್ ಬ್ರಾಂಡ್ ನಾಯಕ ಎಂದೇ ಗುರುತಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಹೈಕಮಾಂಡ್ ಉಚ್ಛಾಟನೆ ಮಾಡಿದೆ.ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್​ ವಿರುದ್ಧ ಹೈಕಮಾಂಡ್ ಕೈಗೊಂಡಿರುವ ಈ ಕ್ರಮ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.ಬಸನಗೌಡ ಪಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟಿಸಲಾಗಿದೆ ಎಂದು ಪಕ್ಷದ ಶಿಸ್ತು ಸಮಿತಿ ಹೇಳಿದೆ....
ಹನಿಟ್ರ್ಯಾಪ್‌ ಗುಮ್ಮ; ರಾಜಣ್ಣ ದೂರು ಕಾನೂನು ಘಟಕಕ್ಕೆ ವರ್ಗಾವಣೆ

ಹನಿಟ್ರ್ಯಾಪ್‌ ಗುಮ್ಮ; ರಾಜಣ್ಣ ದೂರು ಕಾನೂನು ಘಟಕಕ್ಕೆ ವರ್ಗಾವಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಗೋಕರ್ಣ: ಸಚಿವ ರಾಜಣ್ಣ ಸಲ್ಲಿಸಿರುವ 'ಹನಿಟ್ರ್ಯಾಪ್' ದೂರನ್ನ ಪರಿಶೀಲನೆಗಾಗಿ ಕಾನೂನು ತಂಡಕ್ಕೆ ಕಳುಹಿಸಲಾಗಿದೆ ಎಂದು ಗೃಹ ಸಚಿವ ಡಾ| ಜಿ.ಪರಮೇಶ್ವರ್ ತಿಳಿಸಿದ್ದಾರೆ.ಕರಾವಳಿ ಪ್ರವಾಸದ ನಡುವೆ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜಣ್ಣ ಅವರ ಮನವಿ ಬಗ್ಗೆ ಪ್ರತಿಕ್ರಿಯಿಸಿದರು. ತಮ್ಮನ್ನು ಹನಿಟ್ರ್ಯಾಪ್‌ಗೆ ಮಾಡಲು ನಡೆದಿರುವ ಪ್ರಯತ್ನ ಬಗ್ಗೆ ತನಿಖೆಗೆ ಕೋರಿ ಸಚಿವ ರಾಜಣ್ಣ ಸಲ್ಲಿಸಿರುವ ಮನವಿಯನ್ನು ಕಾನೂನು ಚೌಕಟ್ಟಿನೊಳಗೆ ವಿವೇಚನೆಯಿಂದ ಪರಿಶೀಲಿಸಲಾಗುತ್ತದೆ. ಅನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು....
ಗ್ರೇಟರ್ ಬೆಂಗಳೂರು: ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲರು ನಕಾರ

ಗ್ರೇಟರ್ ಬೆಂಗಳೂರು: ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲರು ನಕಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ವಿಚಾರದಲ್ಲೂ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಈ ಸಂಬಂಧದ ಮಸೂದೆಗೆ ಅಂಕಿತ ಹಾಕಲು ರಾಜ್ಯಪಾಲರು ನಿರಾಕರಿಸಿದ್ದಾರೆ.ವಿಧಾನಮಂಡಲದ ಉಭಯ ಸದನಗಳ ಅಂಗೀಕಾರದ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗಿತ್ತು. ಆದರೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಈ ಮಸೂದೆಯನ್ನು ಕೆಲವು ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.ಈ ಬೆಳವಣಿಗೆಯನ್ನು ಖಚಿತಪಡಿಸಿರುವ ಕಾನೂನು ಸಚಿವ ಹೆಚ್‌.ಕೆ.ಪಾಟೀಲ್, ರಾಜ್ಯಪಾಲರು ಕೋರಿರುವಂತೆ ಸ್ಪಷ್ಟನೆಗಳೊಂದಿಗೆ ಪುನಃ ಒಪ್ಪಿಗೆ ಕೋರಿ ರಾಜ್ಯಪಾಲರಿಗೆ ಕಳುಹಿಸಲಾಗುವುದು' ಎಂದು ತಿಳಿಸಿದ್ದಾರೆ....
₹900ರ ಸ್ಮಾರ್ಟ್ ಮೀಟರ್‌ಗಳಿಗೆ ₹8510 ಫಿಕ್ಸ್; ಮತ್ತೊಂದು ಭಾರೀ ಭ್ರಷ್ಟಾಚಾರ ಬಯಲು

₹900ರ ಸ್ಮಾರ್ಟ್ ಮೀಟರ್‌ಗಳಿಗೆ ₹8510 ಫಿಕ್ಸ್; ಮತ್ತೊಂದು ಭಾರೀ ಭ್ರಷ್ಟಾಚಾರ ಬಯಲು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸ್ಮಾರ್ಟ್ ಮೀಟರ್‌ ಹೆಸರಲ್ಲಿ ರಾಜ್ಯದ ಜನರನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಬೇರೆ ರಾಜ್ಯಗಳಲ್ಲಿ ಕೇವಲ ₹900ಕ್ಕೆ ಸಿಗುವ ಸ್ಮಾರ್ಟ್ ಮೀಟರ್‌ಗಳಿಗೆ ರಾಜ್ಯದಲ್ಲಿ ₹8510 ಫಿಕ್ಸ್ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್‌ ಟೆಂಡರ್‌ನಲ್ಲಿ ಸುಮಾರು ರೂ. 15,568 ಕೋಟಿ ಬೃಹತ್ ಮೊತ್ತದ ಅವ್ಯವಹಾರ ನಡೆದಿದೆ. ಸೆಂಟ್ರಲ್ ಎಲೆಕ್ಟ್ರಿಸಿಟಿ ಅಥಾರಿಟಿ ನಿಯಮಾವಳಿ ಪ್ರಕಾರವೂ ಸ್ಮಾರ್ಟ್ ಮೀಟರ್ ಕಡ್ಡಾಯವಲ್ಲ. ಕೆಇಆರ್‌ಸಿ ನಿಯಮಾವಳಿಗಳಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯ ಎಂದು ಎಲ್ಲೂ ಹೇಳಿಲ್ಲ. ಆದರೂ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನತೆಯ ಮೇಲೆ ಸ್ಮಾರ್ಟ್ ಮೀಟರ್ ಹೊರೆ ಏರಿಸಿದೆ ಎಂದು ಪ್ರತಿಪಕ್ಷ ಬಿಜೆಪಿ ದೂರಿದೆ.ಕೆಟಿಪಿಪಿ ಕಾಯ್ದೆ ಪ್ರಕಾರ ಬಿಡ್ ಪಡೆಯುವ ಕಂಪನಿ ವ್ಯವಹಾರ ರೂ.1,920 ಕೋಟಿ ಇರಬೇಕು. ಆದರೆ, ಟೆಂಡರ್‌ನಲ್ಲಿ ಕೇವಲ ರೂ.107 ಕೋಟಿ ನಮೂದಿಸಲಾಗಿದೆ. ಕಪ್ಪುಪಟ್ಟಿಯಲ್ಲಿರುವ ಬಿಸಿಐಟಿಎಸ್ ಕಂಪನಿಯನ್ನು ಈ ಟೆಂಡ‌ರ್ ನಲ್ಲಿ ನಿಯಮಬಾಹಿರವಾಗಿ ಪರಿಗಣಿಸಿದ್ದಾರೆ. ಈ...
ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ

ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು ಎಂದವರು ತಿಳಿಸಿದ್ದಾರೆ. ಬೆಂಗಳೂರು ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ.ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು.ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ… pic.twitter.com/EMoxcPj2se— Karnataka Congress (@INCKarnataka) March 26, 2025ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರವಾಗಿದೆ ಎಂದವರು ಸರ್ಕಾರದ ನಡೆಯನ್ನು ಸಮರ್...
ಬಡವರ ಅನ್ನಕ್ಕೆ ಕನ್ನ: ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ

ಬಡವರ ಅನ್ನಕ್ಕೆ ಕನ್ನ: ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಹುಬ್ಬಳ್ಳಿ: ಬಡವರ ಅನ್ನಕ್ಕೆ ಕನ್ನ ಹಾಕುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಹುಬ್ಬಳ್ಳಿಯಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಅಡ್ಡೆಗೆ ಆಹಾರ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ಭಾರೀ ಅಕ್ರಮವನ್ನು ಪತ್ತೆ ಮಾಡಿದ್ದಾರೆ.ಹಳೇ ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಅಧಿಕಾರಿಗಳು ಸುಮಾರು 500 ಕ್ವಿಂಟಾಲ್​ ಅಕ್ಕಿ ಜಪ್ತಿ ಮಾಡಿದ್ದಾರೆ. ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಖರೀದಿಸಿ, ಟಾಟಾ ಏಸ್ ವಾಹನದಲ್ಲಿ ಲೋಡ್​ ಮಾಡುತ್ತಿದ್ದ ವೇಳೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಅದಾಗಲೇ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ....
ಹಬ್ಬಗಳ ಸಂದರ್ಭ KSRTCಯಿಂದ 2000 ಹೆಚ್ಚುವರಿ ಬಸ್ಸುಗಳು..

ಹಬ್ಬಗಳ ಸಂದರ್ಭ KSRTCಯಿಂದ 2000 ಹೆಚ್ಚುವರಿ ಬಸ್ಸುಗಳು..

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಯುಗಾದಿ, ರಂಜಾನ್ ಸಹಿತ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಊರಿಗೆ ತೆರಳಲು ಬಸ್ಸುಗಳಲ್ಲಿ ಸೀಟು ಸಿಗದೇ ಜನ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) 2000 ಹೆಚ್ಚುವರಿ ಬಸ್ಸುಗಳನ್ನು ರಸ್ತೆಗಿಸಿದೆ.31.03.2025ರಂದು ರಂಜಾನ್ ಹಬ್ಬವಿರುವುದರಿಂದ KSRTC ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 28.03.2025 to 30.03.2025ವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗೆ 2000 ಹೆಚ್ಚುವರಿ ವಾಹನಗಳ ವಿಶೇಷ ವ್ಯವಸ್ಥೆ ಮಾಡಿದೆ. ಈ ಬಗ್ಗೆ ನಿಗಮದ ಪ್ರಕಟಣೆ ತಿಳಿಸಿದೆ.ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 31.03.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾ...
ಹೆಚ್ಚಳವಾದ ಹಾಲಿನ ದರ ರೈತರಿಗೆ ಪಾವತಿಯಾಗಬೇಕು: ಸಿಎಂ

ಹೆಚ್ಚಳವಾದ ಹಾಲಿನ ದರ ರೈತರಿಗೆ ಪಾವತಿಯಾಗಬೇಕು: ಸಿಎಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿ, ಒಕ್ಕೂಟದ ಬೇಡಿಕೆಗಳನ್ನು ಆಲಿಸಿ, ಹಾಲಿನ ಬೆಲೆಯೇರಿಕೆಯ ಸಂಬಂಧ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹಿಸಲಾಗಿದೆ. ದರ ಏರಿಕೆ ಮಾಡಬೇಕು ಎಂಬ ಒತ್ತಾಯವಿದೆ ಆದರೆ ದರ ಹೆಚ್ಚಳ ಮಾಡಿದರೆ ಮೊತ್ತವು ಸಂಪೂರ್ಣವಾಗಿ ರೈತರಿಗೆ ಮಾತ್ರವೇ ವರ್ಗಾವಣೆಯಾಗಬೇಕು ಎಂಬುದು ಸರ್ಕಾರದ ದೃಢ ನಿಲುವು ಎಂದವರು ತಿಳಿಸಿದ್ದಾರೆ.ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ ಎಂದವರು ಹೇಳಿದ್ದಾರೆ.ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ...
990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಡಾ. ಸುಭಾಷ್ ಪಾಲ್ಕರ್ ನೈಸರ್ಗಿಕ ಕೃಷಿ ಮಾದರಿಯ ಸಾಧಕ ಬಾಧಕಗಳ ಕುರಿತು ಸಹಜ ಕೃಷಿ ಜಾಗೃತಿ, ಸಂಘಟನೆಯಲ್ಲಿ ತೊಡಗಿರುವ ರೈತ ಪ್ರಮುಖರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಅವರು ಮಾತನಾಡಿದರು. ನೈಸರ್ಗಿಕ ಕೃಷಿ ದೃಡೀಕರಣದ ವ್ಯವಸ್ಥೆ ಕೂಡ ಜಾರಿ ಮಾಡಲಾಗುವುದು ರೈತರ ಉತ್ಪನ್ನಗಳ ಮೌಲ್ಯವರ್ಧನೆಗೆ ಅಗತ್ಯವಿರುವ ಎಲ್ಲಾ ಪೂರಕ ನೆರವುಗಳನ್ನು ಒದಗಿಸಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಚಲುವರಾಯಸ್ವಾಮಿ ಹೇಳಿದರು.ರೈತರ ಅಭ್ಯುದಯ ಹಾಗೂ ಪ್ರಕೃತಿಗೆ ವರವಾಗುವ ನೈಸರ್ಗಿಕ ಕೃಷಿಯನ್ನು ಪ್ರೇರೇಪಿಸಲು ಕೃಷಿ ಇಲಾಖೆಯಿಂದ ಪೂರಕ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು.ಕೃಷಿಕರ ಏಳಿಗೆಗೆ ಅನುಕೂಲವಾಗುವ ಎಲ್ಲಾ ಪ್ರಯತ್ನಗಳಿಗೆ ನಮ್...
ರಾಜೀನಾಮೆ ನಿರ್ಧಾರದಿಂದ ಹಿಂದಕ್ಕೆ ಸರಿದ ಸಭಾಪತಿ ಹೊರಟ್ಟಿ

ರಾಜೀನಾಮೆ ನಿರ್ಧಾರದಿಂದ ಹಿಂದಕ್ಕೆ ಸರಿದ ಸಭಾಪತಿ ಹೊರಟ್ಟಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಹುಬ್ಬಳ್ಳಿ: ರಾಜೀನಾಮೆ ನಿರ್ಧಾರದಿಂದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಿಂದಕ್ಕೆ ಸರಿದಿದ್ದಾರೆ.ಪ್ರಸ್ತುತ ದಿನಗಳಲ್ಲಿ ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ಕೆಲವು ದಿನಗಳ ಹಿಂದೆ ಅಸಮಾಧಾನ ಹೊರಹಾಕಿದ್ದ​ ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆಯ ಇಂಗಿತ ವ್ಯಕ್ತಪಡಿಸಿದ್ದರು. ಇದೀಗ ಆ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಹೊರಟ್ಟಿ ತಿಳಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ತಿಳಿಸಿದರು.ತಮ್ಮ ರಾಜೀನಾಮೆ ಸುದ್ದಿ ಹರಿದಾಡಿದ ಬಳಿಕ ರಾಜ್ಯಪಾಲರು, ಸಚಿವರು ಹಾಗೂ ಸಾಹಿತಿಗಳು ಮಾತನಾಡಿದ್ದಾರೆ. ಮಾರ್ಚ್ 27ರಂದು ಕುಳಿತು ಮಾತನಾಡೋಣ ಎಂದಿದ್ದರು ಹಾಗಾಗಿ ರಾಜೀನಾಮೆ ನಿರ್ಧಾರವನ್ನು ಕೈ ಬಿಟ್ಟಿದ್ದೇನೆ ಎಂದು ಹೊರಟ್ಟಿ ತಿಳಿಸಿದರು....