Friday, August 14

ವಿದೇಶ

ಡಾ.ಅಂಬೇಡ್ಕರ್‌ರ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿಎನ್‌ಎ: ಸಿ.ಟಿ.ರವಿ

ಡಾ.ಅಂಬೇಡ್ಕರ್‌ರ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿಎನ್‌ಎ: ಸಿ.ಟಿ.ರವಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಾಬಾಸಾಹೇಬ್ ಡಾ.ಅಂಬೇಡ್ಕರ್ ಮತ್ತು ದೇಶದ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿ.ಎನ್.ಎ ಎಂದು ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಟೀಕಿಸಿದ್ದಾರೆ.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ  ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ಸಿನ ಡಿ.ಎನ್.ಎಯು ಸಂವಿಧಾನ ವಿರೋಧಿ ಮಾನಸಿಕತೆ ಹೊಂದಿದೆ. 370ನೇ ವಿಧಿಯನ್ನು ಡಾ. ಅಂಬೇಡ್ಕರರು ವಿರೋಧಿಸಿದ್ದರು. ನೆಹರೂ ಇದೇ ವಿಧಿಯನ್ನು ಜಾರಿಗೊಳಿಸಿದರು. ಸಂವಿಧಾನದಲ್ಲಿ ಡಾ. ಅಂಬೇಡ್ಕರರು ಸೇರಿಸಿದ್ದ ಸಮಾನ ನಾಗರಿಕ ಸಂಹಿತೆಯನ್ನು ಇವತ್ತಿನವರೆಗೂ ಅವರು ಅದನ್ನು ಅನುಷ್ಠಾನಕ್ಕೆ ತಂದಿಲ್ಲ; ಬಿಜೆಪಿ ಅದನ್ನು ಅನುಷ್ಠಾನಕ್ಕೆ ತರುವುದಾಗಿ ಮುಂದಾದರೆ ವಿರೋಧಿಸುತ್ತಾರೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ಸಿನ ಡಿಎನ್‍ಎ ಮುಂದುವರೆದ ಭಾಗವಾಗಿ ಡಿ.ಕೆ.ಶಿವಕುಮಾರರು ಟಿ.ವಿ. ಸಂದರ್ಶನದಲ್ಲಿ ಸಂವಿಧಾನ ಬದಲಿಸುವ ಮಾತನಾಡಿದ್ದಾರೆ ಎಂದು ತಿಳಿಸಿದರು.ಕಾಂಗ್ರೆಸ್ಸನ್ನು ಕಿತ್ತೊಗೆದು ನಾವು ಸಂವಿಧಾನ ಉಳಿಸಿಕೊಳ್ಳುತ್ತೇವೆ ಎಂದು ಅವರು ಸವಾಲು ಹಾಕಿದರು. ಮತೀಯ ಆಧಾರಿತ ಶೇ 4 ಮೀಸಲ...
ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯಿಂದ ದೃಷ್ಟಿ ದೋಷ..!

ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯಿಂದ ದೃಷ್ಟಿ ದೋಷ..!

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೈವಿಧ್ಯ
ನವದೆಹಲಿ: ಡಿಜಿಟಲ್ ಸಾಧನಗಳ ಅತಿಯಾದ ಬಳಕೆ ಮತ್ತು ಅದರ ಪರಿಣಾಮವಾಗಿ ಹೆಚ್ಚಿದ ಸ್ಕ್ರೀನ್ ಸಮಯವು ಗಮನಾರ್ಹ ಸಂಖ್ಯೆಯ ಜನರನ್ನು, ವಿಶೇಷವಾಗಿ ಯುವಕರನ್ನು ಸಮೀಪದೃಷ್ಟಿ ದೋಷ ಅಥವಾ ಸಮೀಪದೃಷ್ಟಿಯತ್ತ ಕೊಂಡೊಯ್ಯುತ್ತಿದೆ. ಈ ಕುರಿತಂತೆ ಸಂಶೋಧಕರು ತಮ್ಮ ಅಧ್ಯಯನ ವರದಿಯನ್ನು ಅನಾವರಣ ಮಾಡಿದ್ದಾರೆ.ಕೋವಿಡ್ -19 ಸಾಂಕ್ರಾಮಿಕ ರೋಗದ ನಂತರ, ಸಾಂಪ್ರದಾಯಿಕ ಶಾಲೆಗಳು ಟ್ಯಾಬ್ಲೆಟ್‌ಗಳು ಮತ್ತು ಲ್ಯಾಪ್‌ಟಾಪ್‌ಗಳ ಮೂಲಕ ಆನ್‌ಲೈನ್ ಕಲಿಕೆಗೆ ಬದಲಾದಾಗ, ಮತ್ತು ಹೊರಾಂಗಣ ಚಟುವಟಿಕೆಗಳನ್ನು ಬಹುತೇಕ ತೆಗೆದುಹಾಕಿದಾಗ, ಪ್ರಪಂಚದಾದ್ಯಂತ ಸ್ಫೋಟಕ ಸಮೀಪದೃಷ್ಟಿ ಬಿಕ್ಕಟ್ಟಿನತ್ತ ಸಾಗುತ್ತಿರುವ ಬಗ್ಗೆ ಆರೋಗ್ಯ ತಜ್ಞರು ಬಹಳ ಹಿಂದಿನಿಂದಲೂ ಕಳವಳ ವ್ಯಕ್ತಪಡಿಸಿದ್ದಾರೆ. ಇದೀಗ ಅಧ್ಯನಗಳು ಅಂತಹಾ ಆತಂಕವನ್ನು ದೃಢಪಡಿಸಿವೆ.ಇಂಗ್ಲಿಷ್ ಆವೃತ್ತಿಯಲ್ಲೂ ಓದಿ.."Increased screen time to drive near-sightedness in children, adults"'ಡಿಜಿಟಲ್ ಕಣ್ಣಿನ ಒತ್ತಡವು ವಿಶೇಷವಾಗಿ ಕೋವಿಡ್ ನಂತರದ ಮಕ್ಕಳಲ್ಲಿ ಗಮನಾರ್ಹ ಕಾಳಜಿಯಾಗುತ್ತಿದೆ. ಮಕ್ಕಳು ದೀರ್ಘಕಾಲದವರೆಗೆ ಪರದೆಗಳ ಮೇಲೆ ಕೇಂದ್ರೀಕರಿಸಿ...
ಜಮೀನು ಒತ್ತುವರಿ ವಿವಾದ; ಹೈಕೋರ್ಟ್ ಮೆಟ್ಟಿಲೇರಿದ ಹೆಚ್ಡಿಕೆ, ಬಲವಂತದ ಕ್ರಮಕ್ಕೆ ತಡೆ

ಜಮೀನು ಒತ್ತುವರಿ ವಿವಾದ; ಹೈಕೋರ್ಟ್ ಮೆಟ್ಟಿಲೇರಿದ ಹೆಚ್ಡಿಕೆ, ಬಲವಂತದ ಕ್ರಮಕ್ಕೆ ತಡೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಹೊರವಲಯದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುಟುಂಬ ಒತ್ತುವರಿ ಮಾಡಿದೆ ಎನ್ನಲಾದ ಜಮೀನು ವಿಚಾರದಲ್ಲಿ ಕಾನೂನು ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ.ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ರಾಮನಗರ ತಹಶೀಲ್ದಾರ್‌ ಅವರು, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನೋಟೀಸ್ ನೀಡಿದ್ದಾರೆ ಎನ್ನಲಾಗಿದ್ದು, ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಹೈಕೋರ್ಟ್, ಈ ವಿಚಾರದಲ್ಲಿ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಮುಂದಿನ ಆದೇಶದವರೆಗೆ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ರಾಮನಗರ ತಾಲ್ಲೂಕು ತಹಶೀಲ್ದಾರ್‌ ಅವರಿಗೆ ನ್ಯಾಯಪೀಠ ಆದೇಶಿಸಿದ್ದು, ಇದರಿಂದಾಗಿ ಕುಮಾರಸ್ವಾಮಿ ಸ್ವಲ್ಪ ನಿರಾಳರಾಗಿದ್ದಾರೆ....
6 ವರ್ಷಗಳ ಸತತ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ : ಈ ನಟಿ ಇನ್ನು “ಡಾ.ಮೇಘನಾ ಗಾಂವ್ಕರ್‌’

6 ವರ್ಷಗಳ ಸತತ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ : ಈ ನಟಿ ಇನ್ನು “ಡಾ.ಮೇಘನಾ ಗಾಂವ್ಕರ್‌’

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಕನ್ನಡ ಚಿತ್ರ ನಟಿ ಮೇಘನಾ ಗಾಂವ್ಕರ್‌ ಅವರು PhD ಪದವಿ ಪಡೆದಿದ್ದು ಈ ಬಗ್ಗೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ 6 ವರ್ಷಗಳ ಸತತ ಪರಿಶ್ರಮ ಫಲ ನೀಡಿದೆ ಎಂದು ಅವರು ಹೇಳಿಕೊಂಡಿದ್ದಾರೆ.So proud & happy to be sharing this news with you all. 🙏🏻🩷✨ pic.twitter.com/t2deEDXWid — Meghana Gaonkar (@MeghanaGaonkar) March 24, 2025ಸಿನಿಮಾ ಮತ್ತು ಸಾಹಿತ್ಯ ವಿಚಾರದಲ್ಲಿ ಮೇಘನಾ ಗಾಂವ್ಕರ್‌ ಡಾಕ್ಟರೇಟ್‌ ಪದವಿ ಪಡೆಡಿದ್ದು, 2024ರ ಅಕ್ಟೋಬರ್‌ನಲ್ಲಿ ನಾನು ನನ್ನ ಪಿಎಚ್‌ಡಿ ವರದಿಯನ್ನು ಯಶಸ್ವಿಯಾಗಿ ಸಲ್ಲಿಸಿದ್ದೆ. ಕಳೆದ ವಾರ ನನ್ನ ವೈವಾ ಕೂಡ ಆಯ್ತು. ಇವತ್ತು ನಾನು ನನ್ನ ಡಾಕ್ಟರೇಟ್‌ ಪದವಿಯನ್ನು ಹೆಮ್ಮೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.ಇದು ತನ್ನ ಶೈಕ್ಷಣಿಕ ಸಾಧನೆ ಎಂದು ಹೇಳಿಕೊಂಡಿದ್ದಾರೆ. ಪಿಎಚ್‌ಡಿ ಪ್ರಮಾಣ ಪತ್ರದೊಂದಿಗಿನ ತಮ್ಮ ಫೋಟೋವನ್ನು ಮೇಘನಾ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. View this post on Instagram  A post sha...
ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾರ ಚೊಚ್ಚಲ ಸಿನಿಮಾ ‘ಫೈರ್‌ ಫ್ಲೈ’ ಹಾಡಿಗೆ ಸಿನಿರಸಿಕರು ಫಿದಾ

ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾರ ಚೊಚ್ಚಲ ಸಿನಿಮಾ ‘ಫೈರ್‌ ಫ್ಲೈ’ ಹಾಡಿಗೆ ಸಿನಿರಸಿಕರು ಫಿದಾ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾ ಅವರ ಚೊಚ್ಚಲ ನಿರ್ಮಾಣದ 'ಫೈರ್‌ ಫ್ಲೈ' ಸಿನಿಲೋಕದಲ್ಲಿ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀ ಮುತ್ತು ಸಿನಿ ಸರ್ವೀಸಸ್ ಬ್ಯಾನರ್ ಅಡಿಯಲ್ಲಿ ನಿವೇದಿತಾ ಶಿವರಾಜ್‌ಕುಮಾರ್ ಅವರು 'ಫೈರ್‌ ಫ್ಲೈ' ಚಿತ್ರವನ್ನು ನಿರ್ಮಿಸಿದ್ದಾರೆ. ಏಪ್ರಿಲ್ 24 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆ ಕಾಣಲಿದೆ.https://www.youtube.com/watch?v=Di5khQ1Tpgcಈ ಚಿತ್ರದ ಮೊದಲ ಹಾಡನ್ನು ಆನಂದ್ ಆಡಿಯೋ ಮ್ಯೂಸಿಕ್ ಲೇಬಲ್ ಮೂಲಕ ಬಿಡುಗಡೆ ಮಾಡಲಾಗಿದೆ. 'ಇನ್ ದಿ ನೈಟ್' ಎಂಬ ಶೀರ್ಷಿಕೆಯಲ್ಲಿ ಈ ಹಾಡು ಸಿನಿರಸಿಕರ ಮೆಚ್ಚುಗೆ ಗಳಿಸಿದೆ. ಪಿಲ್ ಕಪಿಲನ್ ಹಾಡಿರುವ ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದು, ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.ವಂಶಿ ನಿರ್ದೇಶನದ 'ಫೈರ್‌ಫ್ಲೈ' ಚಿತ್ರದಲ್ಲಿ ನಾಯಕರಾಗಿ ವಂಶಿ ಅವರೇ ನಟಿಸಿದ್ದು, ಸುಧಾರಾಣಿ, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಅಚ್ಯುತ್ ಕುಮಾರ್ ಮೊದಾಲದವರು ಪತ್ರಗಳನ್ನು ಹಂಚಿಕೊಂಡಿದ್ದಾರೆ....
ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ಮುಂಬೈ: ಬಹುನಿರೀಕ್ಷಿತ 'ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್' ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಇದರಲ್ಲಿ ನಟ ಐಜಾಜ್ ಖಾನ್ ರಹಸ್ಯ ಏಜೆಂಟ್ ಪೂಜಾ ಗೋರ್ ಅವರೊಂದಿಗೆ ಸೇರಿಕೊಂಡು ಅಪಾಯಕಾರಿ ಶತ್ರುಗಳ ವಿರುದ್ಧ ಹೋರಾಡುತ್ತಿರುವ ದೃಶ್ಯ ರೋಮಾಂಚನ ಅನುಭವ ನೀಡುತ್ತಿದೆ.https://www.youtube.com/watch?v=0I7PwBoIcuUಸಾಮಾಜಿಕ ಮಾಧ್ಯಮದಲ್ಲಿ ಕುತೂಹಲಕಾರಿ ಟ್ರೇಲರ್ ಅನ್ನು ನಿರ್ಮಾಪಕರು ಬಿಡುಗಡೆ ಮಾಡಿದ್ದಾರೆ. 'ಬೆದರಿಕೆ ಹೆಚ್ಚಿದೆ, ಮಿಷನ್ ಹೆಚ್ಚು ಮಾರಕವಾಗಿದೆ. ಮತ್ತು ಅನಾಮಿಕರೂ ಸಿದ್ಧರಾಗಿದ್ದಾರ' ಎಂಬ ಒಗಟು ಒಗಟಾದ ಶೀರ್ಷಿಕೆಯಿಂದ ಈ ಟ್ರೇಲರ್ ಗಮನಸೆಳೆದಿದೆ. ಐಜಾಜ್ ಖಾನ್ ಮತ್ತು ಪೂಜಾ ಗೋರ್ ಅವರನ್ನು ಅದ್ಭುತ್ಯಂ 2 ನಲ್ಲಿ ವೀಕ್ಷಿಸಿ - ಏಪ್ರಿಲ್ 4 ರಿಂದ ಸೋನಿ ಯಲ್ಲಿ ಸ್ಟ್ರೀಮಿಂಗ್ ಆಗಲಿದೆ.ಥ್ರಿಲ್ಲರ್ ಚಿತ್ರದಲ್ಲಿ ರವಿವರ್ಮಾ ಪಾತ್ರವನ್ನು ಮತ್ತೆ ನಿರ್ವಹಿಸುತ್ತಿರುವ ಐಜಾಜ್ ತಮ್ಮ ಉತ್ಸಾಹವನ್ನು ಹಂಚಿಕೊಂಡಿದ್ದಾರೆ. 'ಆದೃಶ್ಯಂ 2 ದೊಡ್ಡದಾಗಿದೆ, ದಿಟ್ಟ ಮತ್ತು ಹೆಚ್ಚು ತೀವ್ರವಾಗಿದೆ. ಈ ಸೀಸನ್‌ನಲ್ಲಿ ರವಿ ಒಬ್ಬಂಟಿಯಾಗಿ ಹೋರಾಡುತ್ತಿಲ್ಲ. ಪೂಜಾ ಗೋರ್ ನಿರ್...
ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್‌ ಅಂಬೇಡ್ಕರರೇ ವಿರೋಧಿಸಿದ್ದರು: ಆರ್‌.ಅಶೋಕ*

ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್‌ ಅಂಬೇಡ್ಕರರೇ ವಿರೋಧಿಸಿದ್ದರು: ಆರ್‌.ಅಶೋಕ*

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ಮಾಡಿರುವುದಕ್ಕೆ ಶಾಸಕರನ್ನೇ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್‌ ಪುಸ್ತಕದಲ್ಲಿ ಬಹಳ ಸುಳ್ಳುಗಳಿವೆ. ಸಿಎಂ ಕಚೇರಿಯಲ್ಲಿ ಕೆಲಸ ಮಾಡುವವರು ಗ್ಯಾರಂಟಿಯನ್ನು ಹೊಗಳಿದ್ದನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಅಧಿವೇಶನದಲ್ಲಿ ಚರ್ಚೆ ಮಾಡಿದ ಎಲ್ಲ ವಿಷಯಗಳನ್ನ ಜನರ ಮುಂದೆ ಇಡಲಿದ್ದೇವೆ. ಜನರ ನ್ಯಾಯಾಲಯದಲ್ಲಿ ಸರ್ಕಾರದ ಬಗ್ಗೆ ಜನರೇ ತೀರ್ಮಾನ ಮಾಡಲಿದ್ದಾರೆ ಎಂದರು.ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್‌ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವೀಲ್‌ ಚೇರ್‌ನಲ್ಲಿದ್ದರೆ, ಸರ್ಕಾರ ಇನ್ನೂ ತೆವಳುತ್ತಿದೆ. 18 ಶಾಸಕರನ್ನು ಸ್ಪೀಕರ್‌ ಯು.ಟಿ.ಖಾದರ್‌ ಅಮಾನತು ಮಾಡಿದ್ದಾರೆ. ಮಾನಗೇಡಿ ಕಾಂಗ್ರೆಸ್‌ನವರು ವಿಧಾನಪರಿಷತ್‌ನಲ್ಲಿ ಸಭಾಪತಿ ಸ್ಥಾನ...
ಹನಿಟ್ರ್ಯಾಪ್ ವಿಷಯದಲ್ಲಿ ಬಿಜೆಪಿ ರಾಜಕೀಯ : ಸಚಿವ ಶರಣಪ್ರಕಾಶ್

ಹನಿಟ್ರ್ಯಾಪ್ ವಿಷಯದಲ್ಲಿ ಬಿಜೆಪಿ ರಾಜಕೀಯ : ಸಚಿವ ಶರಣಪ್ರಕಾಶ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಯಾದಗಿರಿ:: ಹನಿಟ್ರ್ಯಾಪ್ ಪ್ರಕರಣವನ್ನು ವಿಚಾರಣೆ ಮಾಡ್ತೀವಿ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಬಿಜೆಪಿಯವ್ರು ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.ರಾಜ್ಯದಲ್ಲಿ ಜನಪ್ರತಿನಿಧಿಗಳ ಮೇಲೆ ಹನಿಟ್ರ್ಯಾಪ್ ವಿಚಾರವಾಗಿ ಯಾದಗಿರಿ‌ ಜಿಲ್ಲೆಯ ಮಹಲ್ ರೋಜಾದಲ್ಲಿ ವೈದ್ಯಕೀ‌ಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಹೇಳಿಕೆ‌ ನೀಡಿದರು. ಹನಿಟ್ರ್ಯಾಪ್ ಆಗಿದೆ, ಹೇಗೆ, ಏನು ಎನ್ನುವುದು ಎಲ್ಲಾ ವಿಚಾರ ತನಿಖೆ ಆದ್ಮೇಲೆ ಗೊತ್ತಾಗುತ್ತದೆ. ಯಾರ್ಯಾರು ಸಚಿವರು, ಶಾಸಕರು ಅವರವರ ವಿಡಿಯೋ ರಿಲೀಸ್ ಆಗಬಾರದು ಎಂದು ಹೈಕೋರ್ಟ್ ಸ್ಟೇ ತಂದಿದ್ದಾರೆ ಅವರಿಗೆ ಕೇಳಬೇಕು ಎಂದರು.ಬಿಜೆಪಿಯವರಿಗೆ ಸಿಬಿಐ ತನಿಖೆ ಮುಕ್ತ ಅವಕಾಶವಿತ್ತು, ಆದರೆ ಅವರ ಅವಧಿಯಲ್ಲಿ ಯಾವುದೇ ತನಿಖೆ ಆಗಿಲ್ಲ, ಯಾವುದನ್ನೂ ಸಿಬಿಐ ತನಿಖೆಗೆ ಕೊಟ್ಟಿಲ್ಲ ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ಬಂದಾಗ ಮಾತ್ರ ಸಿಬಿಐ ಎಂದು ಅಬ್ಬರಿಸ...
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿ ಇಂಗಿತ?

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿ ಇಂಗಿತ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಸುವ ಇಂಗಿತ ವ್ಯಕ್ತಪಡಿಸಿದ್ದಾರೆಬೆಳಿಗ್ಗೆಯಷ್ಟೇ ಹುದ್ದೆ ತೊರೆಯುವ ಬಗ್ಗೆ ಹೊರಟ್ಟಿ ಮಾತನಾಡಿದ್ದರು. ಆ ಸುದ್ದಿಗೋಷ್ಠಿಯ ಬೆನ್ನಲ್ಲೇ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಸುದ್ದಿ ಹರಿದಾಡಿದೆ‌. ಉಪ ಸಭಾಪತಿಗೆ ಪತ್ರ? ಈ ನಡುವೆ ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್​ ಅವರಿಗೆ ಬಸವರಾಜ ಹೊರಟ್ಟಿಯವರು ಪತ್ರ ಬರೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಭಾಪತಿ ಹೊರಟ್ಟಿ, ತಾವು ರಾಜೀನಾಮೆ ಪತ್ರ ಸಿದ್ದಪಡಿಸಿದ್ದೇನೆಯೇ ಹೊರತು ಅಧಿಕೃತವಾಗಿ ನೀಡಿಲ್ಲ ಎಂದಿದ್ದಾರೆ. ತಮ್ಮ ಕಚೇರಿ ಸಿಬ್ಬಂದಿಯಿಂದ ಸಹಿ ಇಲ್ಲದ ಪತ್ರ ಸೋರಿಕೆಯಾಗಿದೆ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ....
ದೋಸ್ತಿಗಳು ದೂರ ದೂರ? ಮುಸ್ಲಿಮರ ಟೆಂಡರ್ ಮೀಸಲಾತಿ ಹೋರಾಟದಲ್ಲಿ ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳಲು ಜೆಡಿಎಸ್ ಇಂಗಿತ

ದೋಸ್ತಿಗಳು ದೂರ ದೂರ? ಮುಸ್ಲಿಮರ ಟೆಂಡರ್ ಮೀಸಲಾತಿ ಹೋರಾಟದಲ್ಲಿ ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳಲು ಜೆಡಿಎಸ್ ಇಂಗಿತ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ವಿಚಾರದಲ್ಲಿ ಮಿತ್ರ ಪಕ್ಷ ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳಲು ಜೆಡಿಎಸ್ ನಿರ್ಧರಿಸಿದೆ. ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ವಿರುದ್ಧದ ಬಿಜೆಪಿ ಹೋರಾಟದಲ್ಲಿ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ನಾಯಕರು ತಿಳಿಸಿದ್ದಾರೆ.ಈ ಸಂಬಂಧ ಬೆಂಗಳೂರಿನಲ್ಲಿ ಶನಿವಾರ ನಡೆದ ಜೆಡಿಎಸ್ ನಾಯಕರ ಸಭೆಯಲ್ಲಿ ಗಹನವಾದ ಚರ್ಚೆ ನಡೆದಿದೆ. ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ವಿರೋಧಿಸಿ ಬಿಜೆಪಿ ನಡೆಸುವ ಹೋರಾಟದಲ್ಲಿ ಭಾಗವಹಿಸಬಾರದೆಂಬ ಅಭಿಪ್ರಾಯ ಜೆಡಿಎಸ್ ನಾಯಕರಿಂದ ವ್ಯಕ್ತವಾಗಿದೆ ಎನ್ನಲಾಗಿದೆ.ಬಿಜೆಪಿ ಜೊತೆಗೆ ರಾಜಕೀಯ ಮೈತ್ರಿ ಮಾಡಿಕೊಂಡರೂ ಸಿದ್ಧಾಂತ ಮತ್ತು ತತ್ವಗಳಲ್ಲಿ ತಮ್ಮ ಪಕ್ಷ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸಂದೇಶ ಸಾರಿರುವ ಜೆಡಿಎಸ್ ನಾಯಕರು, ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ವಿಚಾರವು ಸೈದ್ದಂತಿಕ ಹೋರಾಟವಾಗಿದ್ದು ಅದರಿಂದ ದೂರ ಉಳಿಯುವ ಬಗ್ಗೆ ಅನೇಕರು ಅಭಿಪ್ರಾಯ ಮಂಡಿಸಿದ್ದಾರೆ ಎನ್ನಲಾಗಿದೆ. ಬೆಲೆ ಏರಿಕೆ, ದುರಾಡಳಿತ, ಭ್ರಷ್ಟಾಚಾರ ಇತ್ಯಾದಿಗಳ ವಿರುದ್ಧದ ಹೋರಾಟದಲ್ಲಿ ಬಿಜೆಪಿ...