Friday, August 14

ವಿದೇಶ

‘ಹನಿಟ್ರ್ಯಾಪ್ ಸರ್ಕಾರ’ ಎಂದ ಪ್ರತಿಪಕ್ಷ: 18 ಶಾಸಕರ ಅಮಾನತು

‘ಹನಿಟ್ರ್ಯಾಪ್ ಸರ್ಕಾರ’ ಎಂದ ಪ್ರತಿಪಕ್ಷ: 18 ಶಾಸಕರ ಅಮಾನತು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಿಧಾಸಭೆಯ ಕಲಾಪಗಳಲ್ಲಿ ಹನಿಟ್ರ್ಯಾಪ್ ಸಡ್ಡು ಪ್ರತಿಧ್ವನಿಸಿದ್ದು, ಗದ್ದಲ ಕೋಲಾಹಲ ಎಬ್ಬಿಸಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭಾಧ್ಯಕ್ಷರು ಅಮಾನತು ಮಾಡಿದ್ದಾರೆ. ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಆರೋಪ ಅಸಂಬಂಧ ಈ ಬಿಜೆಪಿ ಶಾಸಕರನ್ನು 6 ತಿಂಗಳವರೆಗೂ ಕಲಾಪದಿಂದ ಸ್ಪೀಕರ್ ಯುಟಿ ಖಾದರ್ ಅಮಾನತು ಮಾಡಿದ್ದಾರೆ.ಶುಕ್ರವಾರದ ವಿಧಾನಸಭಾ ಕಲಾಪದಲ್ಲಿ ತೀವ್ರ ಕೋಲಾಹಲ ಉಂಟಾಯಿತು. ಮಸೂದೆಗಳನ್ನು ಮತಕ್ಕೆ ಹಾಕುವ ಸಂದರ್ಭದಲ್ಲಿ ಪ್ರತಿಪಕ್ಷಗಳು 'ಹನಿಟ್ರ್ಯಾಪ್ ಸರ್ಕಾರ' ಎಂದು ಘೋಷಣೆ ಕೂಗಿ ಪ್ರತಿಭಟಿಸಿದವು. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರಾದ ಡಾ. ಅಶ್ವತ್ಥ್ ನಾರಾಯಣ, ಎಸ್ಆರ್ ವಿಶ್ವನಾಥ್, ಮುನಿರತ್ನ, ಧೀರಜ್ ಮುನಿರತ್ನ, ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಬಿಪಿ ಹರೀಶ್, ಡಾ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಯಶಪಾಲ್ ಸುವರ್ಣ, ಚಂದ್ರು ಲಮಾಣಿ, ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಬಿ. ಸುರೇಶ್ ಗೌಡ, ಶರಣು ಸಲಗರ, ಚನ್ನಬಸಪ್ಪ, ಬಸವರಾಜ ಮತ್ತಿಮೂಡ ಅವರನ್ನು ಮಾರ್ಷಲ್ ಗಳು ಕಲಾಪದಿಂದ ಹೊರಗೆ ಕಳುಹಿಸಲಾಯಿತು....
ಅಂದು ‘200 ಯೂನಿಟ್‌ ವಿದ್ಯುತ್ ಫ್ರೀ ಫ್ರೀ’ ಎಂದಿದ್ದ ಕಾಂಗ್ರೆಸ್, ಇದೀಗ ಜನತೆಗೆ ಶಾಕ್..!

ಅಂದು ‘200 ಯೂನಿಟ್‌ ವಿದ್ಯುತ್ ಫ್ರೀ ಫ್ರೀ’ ಎಂದಿದ್ದ ಕಾಂಗ್ರೆಸ್, ಇದೀಗ ಜನತೆಗೆ ಶಾಕ್..!

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಚುನಾವಣೆಗೂ ಮುನ್ನ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್ ಫ್ರೀ ಫ್ರೀ ಎಂದ ಕಾಂಗ್ರೆಸ್ ಪಕ್ಷ ಇದೀಗ ಮತ್ತೊಮ್ಮೆ ಪ್ರತಿ ಯೂನಿಟ್‌ಗೆ 36 ಪೈಸೆ ವಿದ್ಯುತ್‌ ದರ ಏರಿಕೆ ಮಾಡುತ್ತಿದೆ ಎಂದು ಬಿಜೆಪಿ ಗೇಲಿಮಾಡಿದೆ.ಇತ್ತೀಚೆಗಷ್ಟೇ ನಮ್ಮ ಮೆಟ್ರೋ ದರ ಏರಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರವೂ ಹೆಚ್ಚಿಸಲಾಗಿತ್ತು. ಕೆಲವು ದಿನಗಳ ಹಿಂದಷ್ಟೇ ಆಟೋ ದರ ಏರಿಕೆಗೂ ಸರ್ಕಾರ ಸಮ್ಮತಿ ನೀಡಿತ್ತು. ಬಳಿಕ ವಿದ್ಯುತ್ ಮೀಟರ್ ದರವನ್ನೇ 800% ಏರಿಕೆ ಮಾಡಿ ಜನತೆಗೆ ಶಾಕ್ ನೀಡಿತ್ತು. ಇದೀಗ ಮತ್ತೊಮ್ಮೆ ವಿದ್ಯುತ್ ದರ ಹೆಚ್ಚಳ ಆದೇಶ ಹೊರಡಿಸಲಾಗಿದ್ದು, ಜನ ಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ ಎಳೆದಂತಾಗಿದೆ. ಬೆಲೆ ಏರಿಕೆಯೇ ಕಾಂಗ್ರೆಸ್ಸಿನ 6ನೇ ಗ್ಯಾರಂಟಿ‌ಯಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿತ್ಯ ಲೂಟಿಗೆ ನಿಂತು ಜನಸಾಮಾನ್ಯರ ಬದುಕನ್ನು ದುರ್ಬಲಗೊಳಿಸುತ್ತಿದೆ. ಒಂದು ಕಡೆ ಉಚಿತ ಎನ್ನುತ್ತಲೇ ಜನಸಾಮಾನ್ಯರ ಕಿಸೆಗೆ ಕಾಂಗ್ರೆಸ್‌ ಸರ್ಕಾರ ಕನ್ನ ಹಾಕುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.ಚುನಾವಣೆಗೂ ಮುನ...
‘ಮನಿಟ್ರ್ಯಾಪ್’ನಲ್ಲಿ ಸಿದ್ದು ಸರ್ಕಾರ.. ‘ಹನಿಟ್ರ್ಯಾಪ್’ನಲ್ಲೂ ಸಿದ್ದು ಟೀಮ್..!

‘ಮನಿಟ್ರ್ಯಾಪ್’ನಲ್ಲಿ ಸಿದ್ದು ಸರ್ಕಾರ.. ‘ಹನಿಟ್ರ್ಯಾಪ್’ನಲ್ಲೂ ಸಿದ್ದು ಟೀಮ್..!

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇದೀಗ ಹನಿಟ್ರ್ಯಾಪ್ ವಿಚಾರ ಭಾರೀ ಸದ್ದುಮಾಡುತ್ತಿದೆ. ಈ ಬಗ್ಗೆ ತ್ಪ್ರತಿಪಕ್ಷಗಳು ತನಿಖೆಗೆ ಪಟ್ಟುಹಿಡಿದಿವೆ. ಇದೇ ವೇಳೆ, ಆಡಳಿತಾರೂಢ ಕಾಂಗ್ರೆಸ್ ನಾಯಕರ ನಡುವಿನ ಹನಿಟ್ರ್ಯಾಪ್ ಗುದ್ದಾಟ ಬಗ್ಗೆ ಪ್ರತಿಪಕ್ಷ ಬಿಜೆಪಿ ವ್ಯಂಗ್ಯವಾಡಿದೆ. ಅಭಿವೃದ್ಧಿಗೆ ದುಡ್ಡಿಲ್ಲದೆ ಈಗಾಗಲೇ ಮನಿಟ್ರ್ಯಾಪ್ ನಲ್ಲಿ ಸಿಲುಕಿರುವ ಕಾಂಗ್ರೆಸ್ ಸರ್ಕಾರದಲ್ಲಿ ಈಗ ಹನಿ ಟ್ರ್ಯಾಪ್ ಸದ್ದು ಜೋರಾಗಿದೆ. ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಸದನದಲ್ಲಿ ಆರೋಪಿಸಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ತನಿಖೆಗೆ ಆಗ್ರಹಿಸಿದ್ದಾರೆ. ರಾಜಣ್ಣರ ಆರೋಪಕ್ಕೆ ದನಿಗೂಡಿಸಿರುವ ಮತ್ತಿಬ್ಬರು ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಹೆಚ್.ಸಿ.ಮಹದೇವಪ್ಪ ಅವರು ಸಹ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಗೃಹ ಸಚಿವ ಡಾ.ಪರಮೇಶ್ವರ್ ಅವರು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಆದರೆ ಕನ್ನಡಿಗರಿಗೆ ಕಾಡುತ್ತಿರುವ ಯಕ್ಷ ಪ್ರಶ್ನೆ ಏನಪ್ಪಾ ಅಂದರೆ, ಹನಿಟ್ರ್ಯಾಪ್ ಜಾಲದ ಬಗ...
ಬಿಡದಿ ಬಳಿ ಪಾಕ್ ಪರ ಗೋಡೆಬರಹ; ಇಬ್ಬರ ಬಂಧನ

ಬಿಡದಿ ಬಳಿ ಪಾಕ್ ಪರ ಗೋಡೆಬರಹ; ಇಬ್ಬರ ಬಂಧನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ಪಟ್ಟಣದ ಬಳಿಯ ಟೊಯೋಟಾ ಕಾರ್ಖಾನೆಯ ಸ್ನಾನಗೃಹದ ಗೋಡೆಗಳ ಮೇಲಿನಪಾಕಿಸ್ತಾನ ಪರವಾದ ಬರಹಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಆರೋಪಿಗಳನ್ನು 24 ವರ್ಷದ ಹೈಮದ್ ಹುಸೇನ್ ಮತ್ತು 20 ವರ್ಷದ ಸಾದಿಕ್ ಎಂದು ಗುರುತಿಸಲಾಗಿದೆ, ಇಬ್ಬರೂ ಟೊಯೋಟಾ ಬೊಶೋಕು ಆಟೋಮೋಟಿವ್ ಇಂಡಿಯಾ ಕಂಪನಿ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರಾಗಿದ್ದು ಅವರು ಉತ್ತರ ಕರ್ನಾಟಕ ಮೂಲದವರೆನ್ನಲಾಗಿದೆ.ಹಸಿರು ಬಣ್ಣವನ್ನು ಬಳಸಿ ಕನ್ನಡದಲ್ಲಿ ಬರೆಯಲಾದ ಈ ಬರಹದಲ್ಲಿ 'ಪಾಕಿಸ್ತಾನಕ್ಕೆ ವಿಜಯ' ಮುಂತಾದ ಪಾಕಿಸ್ತಾನ ಪರ ಘೋಷಣೆಗಳು ಮತ್ತು ಕರ್ನಾಟಕದ ಜನರ ವಿರುದ್ಧ ಅವಹೇಳನಕಾರಿ ಹೇಳಿಕೆಗಳಿವೆ.ಕಾರ್ಖಾನೆಯು ಮೂರು ಪಾಳಿಗಳಲ್ಲಿ ಕೆಲಸ ಮಾಡುವ 2,000 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನೇಮಿಸಿಕೊಂಡಿದ್ದು, ಪ್ರತಿ ಪಾಳಿಯಲ್ಲಿ 600 ಕ್ಕೂ ಹೆಚ್ಚು ಉದ್ಯೋಗಿಗಳು ಇದ್ದಾರೆ. ಮಾರ್ಚ್ 16 ರಂದು ಮೊದಲ ಪಾಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.ಈ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಭಾರೀ ಸಂಖ್ಯೆಯಲ್ಲಿ ಕನ್ನಡ ಕಾರ್ಯಕರ್ತರು ಕಾರ್ಖಾನೆ ಮುಂದೆ ಜಮಾ...
ರಾಜ್ಯದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು AI ತರಬೇತಿ; NIELIT ಜೊತೆ GTTC ಒಪ್ಪಂದ

ರಾಜ್ಯದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು AI ತರಬೇತಿ; NIELIT ಜೊತೆ GTTC ಒಪ್ಪಂದ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೈವಿಧ್ಯ
ಬೆಂಗಳೂರು: ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (GTTC) ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸುಧಾರಿತ ತರಬೇತಿ ಕಾರ್ಯಕ್ರಮಗಳನ್ನು ಪರಿಚಯಿಸುವ ಮೂಲಕ ಕೌಶಲ್ಯ ಅಭಿವೃದ್ಧಿಯಲ್ಲಿ ಪ್ರಮುಖ ಹೆಜ್ಜೆ ಇಡುತ್ತಿದೆ.GTTC ಕ್ಯಾಂಪಸ್‌ನಲ್ಲಿ NIELIT ವಿಸ್ತರಣಾ ಕೇಂದ್ರವನ್ನು ಸ್ಥಾಪಿಸಲು ರಾಷ್ಟ್ರೀಯ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT) ನೊಂದಿಗೆ ತಿಳಿವಳಿಕಾ ಒಪ್ಪಂದಕ್ಕೆ (MoU) ಬುಧವಾರ ಸಹಿ ಹಾಕಲಾಯಿತು.ಈ ಸಹಯೋಗವು ವಿದ್ಯಾರ್ಥಿಗಳಿಗೆ - ವಿಶೇಷವಾಗಿ ನಗರ ಮತ್ತು ಗ್ರಾಮೀಣ ಪ್ರದೇಶದ ಅಂಚಿನಲ್ಲಿರುವ ಸಮುದಾಯಗಳವರಿಗೆ - ಕೃತಕ ಬುದ್ಧಿಮತ್ತೆ (AI), ಇಂಟರ್ನೆಟ್ ಆಫ್ ಥಿಂಗ್ಸ್ (IoT), ಡೇಟಾ ವಿಶ್ಲೇಷಣೆ ಮತ್ತು ಎಲೆಕ್ಟ್ರಾನಿಕ್ಸ್‌ನಲ್ಲಿ ಅತ್ಯಾಧುನಿಕ ತರಬೇತಿ ಒದಗಿಸಲು ನೆರವಾಗಲಿದೆ.ವಿಕಾಸ ಸೌಧದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸಮ್ಮುಖದಲ್ಲಿ GTTC ವ್ಯವಸ್ಥಾಪಕ ನಿರ್ದೇಶಕ ವೈ.ಕೆ. ದಿನೇಶ್ ಕುಮಾರ್ ಮತ್ತು NIELIT ನಿರ್ದೇಶಕ ಎಸ್. ಪ್ರತಾಪ್ ಕುಮ...
ಠಾಣೆಯೊಳಗೆ ಇಸ್ಪೀಟ್ ಆಟ; ವಿಚಾರಣೆ ನಡೆಸಿ ಅಗತ್ಯ ಕ್ರಮ ಜರುಗಿಸಲು ಎಸ್ಪಿಗೆ ಸಚಿವ ಖರ್ಗೆ ಸೂಚನೆ

ಠಾಣೆಯೊಳಗೆ ಇಸ್ಪೀಟ್ ಆಟ; ವಿಚಾರಣೆ ನಡೆಸಿ ಅಗತ್ಯ ಕ್ರಮ ಜರುಗಿಸಲು ಎಸ್ಪಿಗೆ ಸಚಿವ ಖರ್ಗೆ ಸೂಚನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪೊಲೀಸ್ ಠಾಣೆಯೊಳಗೆ ಇಸ್ಪೀಟ್ ಆಡಿದ ಆರೋಪದಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ವಾಡಿ ಠಾಣೆಯ ಐವರು ಪೊಲೀಸರನ್ನು ಇಲಾಖೆ ಅಮಾನತು ಮಾಡಿ ಆದೇಶ ಹೊರಡಿಸಿದೆ. ಇದೇ ವೇಳೆ, ವೈರಲ್ ಆಗಿರುವ ವೀಡಿಯೋ ಹಲವು ತಿಂಗಳ ಹಿಂದೆ ನಡೆದ ಘಟನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಇಸ್ಪೀಟ್ ಆಡುತ್ತಿರುವ ವಿಡಿಯೋ ಗಮನಕ್ಕೆ ಬಂದ ತಕ್ಷಣವೇ ಈ ಕುರಿತು ವಿಚಾರಣೆ ನಡೆಸಿ ಅಗತ್ಯ ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಈ ಬಗ್ಗೆ ವಿಚಾರಣೆ ನಡೆಸಿದಾಗ ಇದು ಹಲವು ತಿಂಗಳ ಹಿಂದೆ ನಡೆದ ಘಟನೆ ಎನ್ನುವುದು ತಿಳಿದು ಬಂದಿರುತ್ತದೆ. ಇಸ್ಪೀಟ್ ಆಟದಲ್ಲಿ ತೊಡಗಿದ್ದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಹಾಗೂ ಠಾಣೆಯ ಸಬ್ ಇನ್ಸ್ಪೆಕ್ಟರ್ ಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.ಯಾವುದೇ ಇಲಾಖೆಯ ಯಾವುದೇ ಸಿಬ್ಬಂದಿ, ಅಧಿಕಾರಿಗಳ ಶಿಸ್ತು ಉಲ್ಲಂಘನೆಯ ಬಗ್ಗೆ ನಮ್ಮ ಸರ್ಕಾರ ಶೂನ...
ನಕ್ಷತ್ರಗಳನ್ನು ತಲುಪಲು ಬಯಸುವ ಯುವ ಮನಸ್ಸುಗಳಿಗೆ ಸುನೀತಾ ವಿಲಿಯಮ್ಸ್ ಸ್ಫೂರ್ತಿಯಾಗಿದ್ದಾರೆ; ಸಿದ್ದರಾಮಯ್ಯ

ನಕ್ಷತ್ರಗಳನ್ನು ತಲುಪಲು ಬಯಸುವ ಯುವ ಮನಸ್ಸುಗಳಿಗೆ ಸುನೀತಾ ವಿಲಿಯಮ್ಸ್ ಸ್ಫೂರ್ತಿಯಾಗಿದ್ದಾರೆ; ಸಿದ್ದರಾಮಯ್ಯ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸುನೀತಾ ವಿಲಿಯಮ್ಸ್ ಕರ್ನಾಟಕ ಮತ್ತು ಭಾರತದಾದ್ಯಂತದ ಜನರಿಗೆ, ವಿಶೇಷವಾಗಿ ನಕ್ಷತ್ರಗಳನ್ನು ತಲುಪಲು ಬಯಸುವ ಯುವ ಮನಸ್ಸುಗಳಿಗೆ ಉತ್ತಮ ಸ್ಫೂರ್ತಿಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರಿಗೆ ಭೂಮಿಗೆ ಮರಳಿ ಸ್ವಾಗತ ಎಂದಿರುವ ಸಿದ್ದರಾಮಯ್ಯ, ಬಾಹ್ಯಾಕಾಶದಲ್ಲಿ ಅದ್ಭುತ ಪ್ರಯಾಣದ ನಂತರ ನೀವು ಸುರಕ್ಷಿತವಾಗಿ ಹಿಂದಿರುಗಿದ್ದೀರಿ ಎಂದು ಕೇಳಿ ಸಂತೋಷವಾಯಿತು ಎಂದಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ 'X'ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ.'ನಿಮ್ಮ ಸಾಧನೆಗಳು ಮಾನವ ಪರಿಶ್ರಮ ಮತ್ತು ವೈಜ್ಞಾನಿಕ ಶ್ರೇಷ್ಠತೆಗೆ ಸಾಕ್ಷಿಯಾಗಿದೆ' ಎಂದು ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಗ್ಗೆ ಬರೆದುಕೊಂಡಿರುವ ಸಿಎಂ, ಸುನೀತಾ ವಿಲಿಯಮ್ಸ್ ಕರ್ನಾಟಕ ಮತ್ತು ಭಾರತದಾದ್ಯಂತದ ಜನರಿಗೆ, ವಿಶೇಷವಾಗಿ ನಕ್ಷತ್ರಗಳನ್ನು ತಲುಪಲು ಬಯಸುವ ಯುವ ಮನಸ್ಸುಗಳಿಗೆ ಉತ್ತಮ ಸ್ಫೂರ್ತಿಯಾಗಿದ್ದಾರೆ ಎಂದು ವರ್ಣಿಸಿದ್ದಾರೆ. Welcome back to Earth, Sunita Williams (@Astro_Suni) and Butch Wilmore (@astro_w...
ಬಿಜೆಪಿ ಸರ್ಕಾರ ಬಾಕಿ ಉಳಿಸಿದ್ದ 600 ಕೋ.ರೂ. ಹಣವನ್ನು ನಾವು ತೀರಿಸಿದ್ದೇವೆ: ಸಿಎಂ

ಬಿಜೆಪಿ ಸರ್ಕಾರ ಬಾಕಿ ಉಳಿಸಿದ್ದ 600 ಕೋ.ರೂ. ಹಣವನ್ನು ನಾವು ತೀರಿಸಿದ್ದೇವೆ: ಸಿಎಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಿಜೆಪಿ ಸರ್ಕಾರ ಬಾಕಿ ಉಳಿಸಿದ್ದ 600 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ನಮ್ಮ ಸರ್ಕಾರ ತೀರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹಾಲಿನ ಉತ್ಪಾದನೆ ಜಾಸ್ತಿಯಾಗಿದೆ ನಿಜ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 7 ರೂ. ಕೊಡುವುದಾಗಿ ತಿಳಿಸಿದ್ದೆವು, ಅದರಂತೆ ಮುಂದಿನ ದಿನಗಳಲ್ಲಿ ಹೆಚ್ಚಳ ಮಾಡುತ್ತೇವೆ ಎಂದು ಭರವಸೆ ನೀಡಿದರು.ಹಾಲಿನ ಪ್ರೋತ್ಸಾಹ ಧನವನ್ನು 2ರೂ. ನಿಂದ 5 ರೂ. ಗೆ ಹೆಚ್ಚಳ ಮಾಡಿದ್ದೇ ಕಾಂಗ್ರೆಸ್ ಸರ್ಕಾರ. ಈ ಹಿಂದೆ ಅಧಿಕಾರದಲ್ಲಿದ್ದ ಸರ್ಕಾರ ಈ ಪ್ರೋತ್ಸಾಹ ಧನ ಹೆಚ್ಚು ಮಾಡಲಿಲ್ಲ ಎಂದ ಅವರು, ಹಿಂದಿನ ಬಿಜೆಪಿ ಸರ್ಕಾರ 2019-20 ರಲ್ಲಿ ರೂ. 364 ಕೋಟಿ, 2020-21 ರಲ್ಲಿ ರೂ. 106 ಕೋಟಿ, 2021-22 ರಲ್ಲಿ ರೂ. 130 ಕೋಟಿ ಸೇರಿದಂತೆ ಒಟ್ಟು ರೂ. 600 ಕೋಟಿ ಪ್ರೋತ್ಸಾಹ ಧನವನ್ನು ಬಾಕಿ ಬಿಟ್ಟು ಹೋಗಿತ್ತು. ನಮ್ಮ ಸರ್ಕಾರ ಬಂದಮೇಲೆ ಈ ಬಾಕಿಯನ್ನು ಪೂರ್ತಿ ತೀರಿಸಿದ್ದೇವೆ. ಸುಮಾರು 8.16 ಲಕ್ಷ ಹಾಲು ಉತ್ಪಾದಕರು ಇದರ ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು....
ಮಾ.21 ರಿಂದ 3 ದಿನ RSS ಪ್ರತಿನಿಧಿ ಸಭಾ ಭೈಠಕ್; ಭಗವತ್, ಅಮಿತ್ ಶಾ ಸೇರಿ ಹಲವರು ಭಾಗಿ

ಮಾ.21 ರಿಂದ 3 ದಿನ RSS ಪ್ರತಿನಿಧಿ ಸಭಾ ಭೈಠಕ್; ಭಗವತ್, ಅಮಿತ್ ಶಾ ಸೇರಿ ಹಲವರು ಭಾಗಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾ ಭೈಠಕ್ ಈ ತಿಂಗಳ 21 ರಿಂದ 23ರ ವರೆಗೆ ನಡೆಯಲಿದೆ. ಬೆಂಗಳೂರು ಹೊರವಲಯದ ಚನ್ನೇನಹಳ್ಳಿಯಲ್ಲಿ ಈ ಸಭೆ ನಡೆಯಲಿದ್ದು, ಸಂಘದ ಮುಂದಿನ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಯಲಿದೆ ಹಾಗೂ ಪ್ರಮುಖ ನಿರ್ಧಾರಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು RSS ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್ ತಿಳಿಸಿದ್ದಾರೆ.ABPS ನಡೆಯುವ ಚನ್ನೇನಹಳ್ಳಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ಒದಗಿಸಿದ ಅವರು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅತ್ಯುನ್ನತ ನೀತಿ ನಿರ್ಧಾರಗಳನ್ನು ನಿರೂಪಿಸುವ ಸಭೆ ಇದಾಗಿದೆ. ಸಭೆಯಲ್ಲಿ ಸಂಘಟನೆಯ ಚಟುವಟಿಕೆಗಳ ಕುರಿತು ವಿಮರ್ಶಾತ್ಮಕ ಚರ್ಚೆ ನಡೆಯಲಿದ್ದು, ಮುಂದಿನ ಸಂಘಟನಾ ಕಾರ್ಯತಂತ್ರಗಳ‌ ಬಗ್ಗೆ ಚರ್ಚೆಯಾಗಲಿದೆ ಎಂದರು. ಸರಸಂಘಚಾಲಕ್ ಡಾ.ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಹಿರಿಯ ಪದಾಧಿಕಾರಿಗಳು, ಸಂಘದ ವಿವಿಧ ಕ್ಷೇತ್ರಗಳ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ಭಾಗವಹಿಸಲಿದ್ದಾರೆ ಎಂದ...
ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಕೇಂದ್ರ ನಕಾರ; ಡಿಕೆಶಿಗೆ ಹಿನ್ನಡೆ

ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಕೇಂದ್ರ ನಕಾರ; ಡಿಕೆಶಿಗೆ ಹಿನ್ನಡೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಡಿ.ಕೆ.ಶಿವಕುಮಾರ್ ಕನಸು ನುಚ್ಚು ನೂರಾಗಿದೆ. ಈ ಸಂಬಂಧದ ಕರ್ನಾಟಕ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ರಾಮನಗರ ಜಿಲ್ಲೆಗೆ ಮರುನಾಮಕರಣ ಕುರಿತು ಪ್ರಸ್ತಾಪ ಮುಂದಿಟ್ಟಿದ್ದರು. ಡಿ.ಕೆ.ಶಿವಕುಮಾರ್ ಅವರ ಆಗ್ರಹ ಹಿನ್ನೆಲೆಯಲ್ಲಿ ಮರುನಾಮಕರಣ ಮಾಡಲು ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವವನ್ನೂ ಸಲ್ಲಿಸಿತ್ತು. ಆದರೆ, ಕೇಂದ್ರ ಸರ್ಕಾರ ಈ ಪ್ರಸ್ತಾಪವನ್ನು ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ....