Friday, August 14

ವಿದೇಶ

ಮುಸ್ಲಿಮರಿಗೆ ಶೇ.4 ಟೆಂಡರ್ ಮೀಸಲಾತಿಗೆ ಬಿಜೆಪಿ ವಿರೋಧ: ರಾಜ್ಯಪಾಲರಿಗೆ ಯತ್ನಾಳ್ ಪತ್ರ

ಮುಸ್ಲಿಮರಿಗೆ ಶೇ.4 ಟೆಂಡರ್ ಮೀಸಲಾತಿಗೆ ಬಿಜೆಪಿ ವಿರೋಧ: ರಾಜ್ಯಪಾಲರಿಗೆ ಯತ್ನಾಳ್ ಪತ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸರ್ಕಾರಿ ಗುತ್ತಿಗೆ ಕಾಮಗಾರಿ ಟೆಂಡರಿನಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ಮಸೂದೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧದ ಕಾನೂನು ಜಾರಿಗೆ ಅವಕಾಶ ನೀಡದಂತೆ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ.ಪ್ರತಿಪಕ್ಷಗಳ ವಿರೋಧದ ನಡುವೆಯೂ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ(ತಿದ್ದುಪಡಿ) ವಿಧೇಯಕವನ್ನು ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸಿದ್ದರು. ಈ ವಿಧೇಯಕ ಮಂಡನೆಯಾದ ಬೆನ್ನಲ್ಲೇ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದು, ವಿವಾದಾದ್ಮಕ ಮಸೂದೆಗೆ ಒಪ್ಪಿಗೆ ನೀಡದಂತೆ ಒತ್ತಾಯಿಸಿದ್ದಾರೆ. ಈ ಪಾತ್ರವನ್ನು ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. I have written to the Hon'ble Governor Shri @TCGEHLOT Ji requesting him not to provide consent to the contentious amendments to the KTPP (Amendment) Bill 2025 which provides 4% reservation t...
ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಮತ್ತಿಬ್ಬರು ಬಲಿ

ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಮತ್ತಿಬ್ಬರು ಬಲಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಿದ್ಯುತ್ ಇಲಾಖೆಯ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಮತ್ತಿಬ್ಬರು ಬಲಿಯಾಗಿದ್ದಾರೆ. ವಿದ್ಯುತ್ ಕಂಬ ತಲೆ ಮೇಲೆ ಬಿದ್ದು 4 ತಿಂಗಳ ಗರ್ಭಿಣಿ ಸೇರಿ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಸದ್ದುಗುಂಟೆ ಪಾಳ್ಯದಲ್ಲಿ ಸೋಮವಾರ ನಡೆದಿದೆ.ರಸ್ತೆ ಕಾಮಗಾರಿ ನಡೆಯುವ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿ ಹೊಡೆದಿತ್ತು. ಆ ಕಂಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮತಿ (35) ಮತ್ತು ಸೋನಿ ( 36) ಎಂಬ ಮಹಿಳೆಯರ ಮೇಲೆ ಬಿದ್ದಿದೆ ಎನ್ನಲಾಗಿದೆ. ಈ ಇಬ್ಬರೂ ಮೃತಪಟ್ಟಿದ್ದು, ಬೈಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
‘ಮತೀಯವಾಗಿ ಮೀಸಲಾತಿಯನ್ನು ಅಂಬೇಡ್ಕರ್ ಅವರೇ ವಿರೋಧಿಸಿದ್ದರು, ಸುಪ್ರೀಂ ಕೋರ್ಟ್ ಕೂಡಾ ಆಕ್ಷೇಪಿಸಿತ್ತು’

‘ಮತೀಯವಾಗಿ ಮೀಸಲಾತಿಯನ್ನು ಅಂಬೇಡ್ಕರ್ ಅವರೇ ವಿರೋಧಿಸಿದ್ದರು, ಸುಪ್ರೀಂ ಕೋರ್ಟ್ ಕೂಡಾ ಆಕ್ಷೇಪಿಸಿತ್ತು’

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದಕ್ಕೆ ಬಿಜೆಪಿಯ ವಿರೋಧವಿದೆ ಎಂದು ವಿಧಾನಪರಿಷತ್ತಿನಲ್ಲಿ ಶಾಸಕ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ. ಧರ್ಮದ ಆಧಾರದಲ್ಲಿ‌ ಮೀಸಲಾತಿ ನೀಡುವುದನ್ನು ಸಾಂವಿಧಾನಿಕವಾಗಿ ತಿರಸ್ಕರಿಸಲಾಗಿದೆ, ದೇಶದ ಸರ್ವೋಚ್ಛ ನ್ಯಾಯಾಲಯ ಕೂಡಾ ಮೀಸಲಾತಿ ನೀಡುವುದನ್ನು ವಿರೋಧಿಸಿದೆ.ಮತೀಯವಾಗಿ ಮೀಸಲಾತಿ ನೀಡುವುದಕ್ಕೆ ನನ್ನ ಸ್ಪಷ್ಟ ವಿರೋಧವಿದೆ ಎಂದು ಸ್ವತಃ ಅಂಬೇಡ್ಕರ್ ಅವರೇ ಪ್ರತಿಪಾದಿಸಿದ್ದರು.‌ ಆದರೆ ಕಾಂಗ್ರೆಸ್ ಸರ್ಕಾರ ಇಂದು ಮುಸ್ಲಿಮರಿಗೆ ಮೀಸಲಾತಿ ನೀಡುವ… pic.twitter.com/kbIxdbPS3C— BJP Karnataka (@BJP4Karnataka) March 17, 2025ಧರ್ಮದ ಆಧಾರದಲ್ಲಿ‌ ಮೀಸಲಾತಿ ನೀಡುವುದನ್ನು ಸಾಂವಿಧಾನಿಕವಾಗಿ ತಿರಸ್ಕರಿಸಲಾಗಿದೆ, ದೇಶದ ಸರ್ವೋಚ್ಛ ನ್ಯಾಯಾಲಯ ಕೂಡಾ ಮೀಸಲಾತಿ ನೀಡುವುದನ್ನು ವಿರೋಧಿಸಿದೆ ಎಂದು ಅವರು ರಾಜ್ಯ ಸರ್ಕಾರದ ಗಮನಸೆಳೆದಿದ್ದಾರೆ.ಮತೀಯವಾಗಿ ಮೀಸಲಾತಿ ನೀಡುವುದಕ್ಕೆ ನನ್ನ ಸ್ಪಷ್ಟ ವಿರೋಧವಿದೆ ಎಂದು ಸ್ವತಃ ಅಂಬೇಡ್ಕರ್ ಅವರೇ ಪ್ರತಿಪಾದಿಸಿದ್ದರು.‌ ಆದರೆ ಕಾಂಗ್ರೆಸ್ ಸರ್ಕಾರ ಇಂದು ಮುಸ್ಲಿಮರಿಗೆ ಮೀಸಲಾತಿ ನೀಡುವ...
ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ

ವೈಯಕ್ತಿಕ ಭಿನ್ನಾಭಿಪ್ರಾಯ ಬದಿಗಿಟ್ಟು, ಕಾಂಗ್ರೆಸ್ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ಪಕ್ಷ ಸಂಘಟಿಸಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.ಅರಮನೆ ಮೈದಾನದಲ್ಲಿ ಸೋಮವಾರ ನಡೆದ 'ಯುವ ಸಂಕಲ್ಪ' ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ ಮಾತನಾಡಿದ ಶಿವಕುಮಾರ್, ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶತಮಾನೋತ್ಸವ ಆಚರಿಸಿದೆವು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನನ ಅದಿಕಾರಕ್ಕೆ ಬಂದಂತೆ ಎಂದರು.ರಾಜಕೀಯದಲ್ಲಿ ಚುನಾವಣೆ ಗೆಲುವು ಸೋಲು ಸಹಜ. ಚುನಾವಣೆಯಲ್ಲಿ ಸ್ಪರ್ಧಿಸಿದವರೆಲ್ಲಾ ಗೆಲ್ಲಲು ಆಗುವುದಿಲ್ಲ. ಚುನಾವಣೆಯಲ್ಲಿ ಗೆದ್ದವರೆಲ್ಲಾ ನಾಯಕರಲ್ಲ. ಯಾರು ಪ್ರಾಮಾಣಿಕವಾಗಿ ಪಕ್ಷವನ್ನು ಶಿಸ...
ಆಶಾ ಕಾರ್ಯಕರ್ತೆಯರ ನಿರ್ಲಕ್ಷ್ಯ.. ನುಡಿದಂತೆ ನಡೆಯದ ಸಿಎಂ: ಗೌರವ ಧನ ಹೆಚ್ಚಿಸಿ, ಇತರ ರಾಜ್ಯಗಳಂತೆ ಎಲ್ಲ ಸೌಲಭ್ಯ ಕೊಡಿ ಎಂದು ಆಗ್ರಹ

ಆಶಾ ಕಾರ್ಯಕರ್ತೆಯರ ನಿರ್ಲಕ್ಷ್ಯ.. ನುಡಿದಂತೆ ನಡೆಯದ ಸಿಎಂ: ಗೌರವ ಧನ ಹೆಚ್ಚಿಸಿ, ಇತರ ರಾಜ್ಯಗಳಂತೆ ಎಲ್ಲ ಸೌಲಭ್ಯ ಕೊಡಿ ಎಂದು ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಅರೋಗ್ಯ ಕ್ಷೇತ್ರದಲ್ಲಿ ಅವಿರತ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತೆ ಹೋರಾಟಕ್ಕೆ ತಯಾರಿ ನಡೆಸಿದ್ದಾರೆ. ಬೇಡಿಕೆ ಈಡೇರಿಸುವ ಸಂಬಂಧ ಮುಖ್ಯಮಂತ್ರಿಯವರು ನುಡಿದಂತೆ ನಡೆಯಬೇಕೆಂದು ಆಗ್ರಹಿಸಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಆಯವ್ಯಯದಲ್ಲಿ ರಾಜ್ಯದ ಸುಮಾರು 2.5 ಲಕ್ಷ ಅಂಗನವಾಡಿ-ಬಿಸಿಯೂಟ ಕಾರ್ಯಕರ್ತೆಯರಿಗೆ 1000 ರೂಪಾಯಿ ಹೆಚ್ಚಿಸಿದಂತೆ 42, ಸಾವಿರ ಆಶಾ ಕಾರ್ಯಕರ್ತೆಯರಿಗೂ 1000 ರೂಪಾಯಿ ಹೆಚ್ಚಿಸಿ, ಇದೇ ಬಜೆಟ್‌ನಲ್ಲಿ ಸೇರಿಸಿ ಆದೇಶಿಸಬೇಕು ಎಂದು ಒತ್ತಾಯಿಸಿದೆ.ಈ ಸಂಬಂಧ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಅವರು ಸರ್ಕಾರದ ಮುಂದಿಟ್ಟಿರುವ ಬೇಡಿಕೆ ಗಮನಸೆಳೆದಿದೆ. ಮುಖ್ಯ ಮಂತ್ರಿ ಘೋಷಿಸಿರುವಂತೆ ಎಪ್ರಿಲ್ 2025ರಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ಮಾಸಿಕ 10,000 ರೂಪಾಯಿ ಗೌರವಧನ ಮತ್ತು ಈ ರಾಜ್ಯ ಬಜೆಟ್‌ನಲ್ಲಿ ಘೋಷಣೆಯಾದ 1,000 ರೂ.ಪಾಯಿ ಹೆಚ್ಚಳ ಸೇರಿಸಿ ಅಧಿಕೃತ ಆದೇಶ ಮಾಡಬೇಕೆಂದು ಒತ್ತಾಯಿಸಿ ಹಾಗೂ 'ನುಡಿದಂತೆ ನ...
ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

ಯುವನಿಧಿ ಯೋಜನೆ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ: ಡಾ. ಶರಣ್ ಪ್ರಕಾಶ್ ಪಾಟೀಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮುನ್ನ ಘೋಷಣೆ ಮಾಡಿದಂತೆ ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ಪದವೀಧರರಿಗೆ ಯುವನಿಧಿ ಗ್ಯಾರಂಟಿ ಯೋಜನೆಯಡಿ ನೀಡಲಾಗುತ್ತಿರುವ ಆರ್ಥಿಕ ಸಹಾಯವನ್ನು ನೀಡಲು ಸರ್ಕಾರ ಬದ್ಧವಾಗಿದ್ದು, ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವ ಪ್ರಶ್ನೆ ಉದ್ಭವಿಸುವುದಿಲ್ಲ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.ಸೋಮವಾರದ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿಯ ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾವು ಕೊಟ್ಟ ವಾಗ್ದಾನದಂತೆ ನಡೆದುಕೊಳ್ಳುತ್ತೇವೆ. ಚುನಾವಣೆಗೂ ಮುನ್ನ ಜನತೆಗೆ ಯಾವ ಭರವಸೆಯನ್ನು ಕೊಟ್ಟಿದ್ದೇವೋ ಅವೆಲ್ಲವನ್ನೂ ಈಡೇರಿಸಲು ನಾವು ಬದ್ಧರಾಗಿದ್ದೇವೆ. ಯುವನಿಧಿ ಯೋಜನೆಯನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ವದಂತಿಗಳಿಗೆ ತೆರೆ ಎಳೆದರು.ಕೆಲವು ತಾಂತ್ರಿಕ ಕಾರಣಗಳಿಂದ ಯುವನಿಧಿ ಯೋಜನೆಯಡಿ ನೀಡಲಾಗುತ್ತಿರುವ ಆರ್ಥಿಕ ನೆರವು ವಿಳಂಬವಾಗಿರಬಹುದು. ಹಾಗೆಂದು ಇದನ್ನು ಸ್ಥಗಿತ ಮಾಡುತ್ತೇವೆ ಎಂದು ಯಾರೂ ಭಾವಿಸಬೇಕಾಗಿಲ್ಲ. ಅನುದಾನದ...
ಸಿದ್ದರಾಮಯ್ಯ ಸರ್ಕಾರಕ್ಕೆ ಸದ್ಯವೇ ಎರಡು ವರ್ಷ; ಸಂಭ್ರಮಾಚರಣೆಗೆ ತಯಾರಿ

ಸಿದ್ದರಾಮಯ್ಯ ಸರ್ಕಾರಕ್ಕೆ ಸದ್ಯವೇ ಎರಡು ವರ್ಷ; ಸಂಭ್ರಮಾಚರಣೆಗೆ ತಯಾರಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಗದಗ: ಸಿದ್ದರಾಮಯ್ಯ ಸರ್ಕಾರಕ್ಕೆ ಎರಡು ವರ್ಷ ಪೂರ್ಣಗೊಳ್ಳುತ್ತಿದ್ದು ಸಂಭ್ರಮಾಚರಣೆಗೆ ತಯಾರಿ ನಡೆದಿದೆ.ಗದಗದಲ್ಲಿ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪಕ್ಷದ‌ ಅಧ್ಯಕ್ಷರಾಗಿ 5 ವರ್ಷ ಪೂರ್ಣಗೊಂಡ ಹಿನ್ನೆಲೆ ಉತ್ತರ ಕರ್ನಾಟಕ ಭಾಗದಲ್ಲಿ ಸಂಭ್ರಮಾಚರಣೆ ಬಗ್ಗೆ ಬೆಂಬಲಿಗರ ಒತ್ತಾಸೆಯ ಪತ್ರಕರ್ತರ ಬಗ್ಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದರು."ಈ ಬಗ್ಗೆ ಹಲವರು ವಿವಿಧ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಮೊದಲು ಮಂತ್ರಿಗಳಿಗೆ ಪ್ರತಿ ವಿಧಾನಸಭಾ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಎಂದು ಸೂಚನೆ ಕೊಟ್ಟಿದ್ದು,‌ ಇದು ಮೊದಲು ನಡೆಯಲಿ. ಆ ನಂತರ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷಗಳಾಗಿದ್ದು ಈ ಸಂಭ್ರಮಾಚರಣೆಯನ್ನು ಮಾಡಲೇಬೇಕಾಗಿದೆ. ಇದನ್ನೂ ಮಾಡುತ್ತೇವೆ" ಎಂದು ಡಿಕೆಶಿ ತಿಳಿಸಿದರು....
ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ: ನಾಯಕರ ಸ್ಮರಣೆ

ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿ: ನಾಯಕರ ಸ್ಮರಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಗದಗ: ಸಹಕಾರಿ ಧುರೀಣ, ಮಾಜಿ ಸಚಿವ ದಿವಂಗತ ಕೆ.ಹೆಚ್. ಪಾಟೀಲ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಗದಗದಲ್ಲಿ ಭಾನುವಾರ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಈಶ್ವರ್ ಖಂಡ್ರೆ, ಹೆಚ್.ಕೆ.ಪಾಟೀಲ್ ಸಹಿತ ಅನೇಕ ನಾಯಕರು, ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಸಹಕಾರಿ ಭೀಷ್ಮ ಎಂದೇ ಜನಜನಿತರಾಗಿರುವ ಕೆ.ಹೆಚ್. ಪಾಟೀಲ್ ಅವರನ್ನು ನಾಯಕರು ಮಹಾಮಾನವತಾವಾದಿ ಎಂದು ಬಣ್ಣಿಸಿದರು.ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಕೆ.ಹೆಚ್ ಪಾಟೀಲ್ ಅವರು ಮಹಾ ಮಾನವತಾವಾದಿಯಾಗಿದ್ದರು. ಜಾತಿ, ಧರ್ಮದ ತಾರತಮ್ಯವಿಲ್ಲದೆ ಸಹಕಾರಿ ಕ್ಷೇತ್ರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಮುನ್ನಡೆಸಿದವರು ಎಂದು ಸ್ಮರಿಸಿದರು. ಧೀಮಂತ ನಾಯಕ ಕೆ.ಹೆಚ್. ಪಾಟೀಲ್ ಅವರನ್ನು ಸ್ಮರಿಸಲು ನಾವು ಸೇರಿದ್ದೇವೆ. ಪಾಟೀಲರ ಬದುಕು, ಚಿಂತನೆ, ಆದರ್ಶ ಬೇರೆಯವರ ಬದುಕಿಗೆ ದಾರಿ ದೀಪವಾಗಲಿ. ನಾವು ಇತ್ತೀಚೆಗೆ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ನಡೆಸಿದ ಬೆಳಗಾವಿ ಅಧಿವೇಶನಕ್ಕೆ ಶತಮಾನೋತ್ಸವ ಆಚರಣೆ ...
‘ಅಲ್ಪಸಂಖ್ಯಾತರಿಗೆ ಅವಕಾಶ ಮಾಡಿಕೊಟ್ಟು ಸಮಬಾಳು ಸಮಪಾಲು ಎಂದು ಹೇಳಿ’: ವಿಜಯೇಂದ್ರಗೆ ಡಿಕೆಶಿ ಸವಾಲು:

‘ಅಲ್ಪಸಂಖ್ಯಾತರಿಗೆ ಅವಕಾಶ ಮಾಡಿಕೊಟ್ಟು ಸಮಬಾಳು ಸಮಪಾಲು ಎಂದು ಹೇಳಿ’: ವಿಜಯೇಂದ್ರಗೆ ಡಿಕೆಶಿ ಸವಾಲು:

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಗದಗ: "ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರದರೊಬ್ಬರನ್ನು ಎಂಎಲ್‌ಸಿ, ರಾಜ್ಯಸಭಾ ಸದ್ಯಸರನ್ನಾಗಿ, ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.ಗದಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಭಾನುವಾರ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಎಕ್ಸ್ (ಟ್ವೀಟ್) ಬಗ್ಗೆ ಪ್ರತಿಕ್ರಿಯಿಸಿದರು. "ಅವರ ಪಕ್ಷದಲ್ಲಿ ಇಬ್ಬರು ಕ್ರಿಶ್ಚಿಯನ್ಸ್, ಮೂರು ಜನ ಮುಸ್ಲಿಮರಿಗೆ ಅವಕಾಶ ಮಾಡಿಕೊಡಲಿ. ಹೀಗೆ ಮಾಡಿದಾಗ ಮಾತ್ರ ವಿಜಯೇಂದ್ರ ಅವರಿಗೆ ಸಮಬಾಳು ಸಮಪಾಲು ಎಂದು ಮಾತನಾಡಲು ಒಂದು ಅವಕಾಶ ಸಿಗುತ್ತದೆ" ಎಂದರು.ವಿಜಯೇಂದ್ರ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ವಿಜಯೇಂದ್ರ ಸರಿಯಾಗಿ ಓದಲಿ. ಯಾರು, ಯಾರು ಸೇರಿದರೆ ಶಾಂತಿಯ ತೋಟ ಆಗುತ್ತದೆ ಎನ್ನುವುದನ್ನು ತಿಳಿದುಕೊಳ್ಳಲಿ. ಇನ್ನು ಪಾಪ ಈಗ ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರ ಲೆವೆಲ್ ನಲ್ಲಿ ಇರಲಿ" ಎಂದರು."ಮುಸ್ಲಿಂ, ಸಿಕ್, ಜೈನ, ಪಾರ್ಸಿ, ಬೌದ್ದರು ಇವರೆಲ್ಲಾ ನಮ್ಮ‌ ದೇಶದ ಹಾಗೂ ಕರ್ನಾಟಕದ ಪ್ರಜೆಗಳು. ನಾವ...
ಅತ್ತೆ, ಮಾವನ ಮೇಲೆ ಹಲ್ಲೆ ನಡೆಸಿದ ವೈದ್ಯಗೆ ಷೋಕಾಸ್‌ ನೋಟಿಸ್‌

ಅತ್ತೆ, ಮಾವನ ಮೇಲೆ ಹಲ್ಲೆ ನಡೆಸಿದ ವೈದ್ಯಗೆ ಷೋಕಾಸ್‌ ನೋಟಿಸ್‌

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಯೋವೃದ್ಧ ಅತ್ತೆ ಮಾವನ ಮೇಲೆ ಅಮಾನಮೀಯವಾಗಿ ಹಲ್ಲೆ ಮಾಡಿ, ಮಕ್ಕಳ ಜೊತೆಗೂಡಿ ಕಿರುಕುಳ ಕೊಟ್ಟಿದ್ದ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆಗೆ ವಿರುದ್ಧ ವೈದ್ಯಕೀಯ ಶಿಕ್ಷಣ ಇಲಾಖೆ ಷೋಕಾಸ್‌ ನೋಟಿಸ್‌ ಜಾರಿ ಮಾಡಿದ್ದು ಕೂಡಲೇ ಇದಕ್ಕೆ ಉತ್ತರ ನೀಡಬೇಕೆಂದು ಸೂಚನೆ ನೀಡಲಾಗಿದೆ.ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಮೋಶಿನ್‌ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆ ಡಾ. ಪ್ರಿಯದರ್ಶಿನಿ ಅವರಿಗೆ ಲಿಖಿತ ಸಮಾಜಾಯಿಷಿ ನೀಡಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶಿನಿ ಎನ್‌. ಇತ್ತೀಚೆಗೆ ತಮ್ಮ ಮಕ್ಕಳ ಜೊತೆಗೂಡಿ ವಯೋವೃದ್ಧ ಅತ್ತೆ, ಮಾವಂದಿರನ್ನು ಥಳಿಸಿದ ವೀಡಿಯೋ ಭಾರಿ ವೈರಲ್‌ ಆಗಿತ್ತು. ಕಳೆದ ಹತ್ತು ವರ್ಷದಿಂದಲೂ ಡಾ. ಪ್ರಿಯದರ್ಶಿನಿ ಕಿರುಕುಳ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಪ್ರಿಯದರ್ಶಿನಿ ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್...