Wednesday, August 12

ವಿದೇಶ

ಪೊಲೀಸ್ ಅಧಿಕಾರಿಯಿಂದಲೇ ಗೂಂಡಾಗಿರಿ? ಅಖಾಡಕ್ಕಿಳಿದ ವಿಜಯೇಂದ್ರ

ಪೊಲೀಸ್ ಅಧಿಕಾರಿಯಿಂದಲೇ ಗೂಂಡಾಗಿರಿ? ಅಖಾಡಕ್ಕಿಳಿದ ವಿಜಯೇಂದ್ರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಚಿತ್ರದುರ್ಗದಲ್ಲಿ PSI ಮೇಲೆ ಮಧುಗಿರಿ ಬಿಜೆಪಿ ಅಧ್ಯಕ್ಷ ಹಲ್ಲೆ ನಡೆಸಿದ್ದಾರೆನ್ನಲಾದ ಪ್ರಕರಣಕ್ಕೆ ಹಠಾತ್ ತಿರುವು ಸಿಕ್ಕಿದೆ. ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯವನ್ನು ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪೊಲೀಸ್ ಅಧಿಕಾರಿಯೇ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ… pic.twitter.com/zf5ZN3pk3J — Vijayendra Yediyurappa (@BYVijayendra) March 15, 2025ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣ...
‘ನಾನು ಮುಗ್ದೆ, ನನ್ನಿಂದ ಏನನ್ನೂ ವಶಪಡಿಸಿಲ್ಲ’: ತನಿಖಾಧಿಕಾರಿಗಳ ವಿರುದ್ಧ ರನ್ಯಾ ಗಂಭೀರ ಆರೋಪ

‘ನಾನು ಮುಗ್ದೆ, ನನ್ನಿಂದ ಏನನ್ನೂ ವಶಪಡಿಸಿಲ್ಲ’: ತನಿಖಾಧಿಕಾರಿಗಳ ವಿರುದ್ಧ ರನ್ಯಾ ಗಂಭೀರ ಆರೋಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ನಟಿ ರನ್ಯಾ ರಾವ್ ತಮ್ಮ ವಿರುದ್ದದ ಗೋಲ್ಡ್ ಸ್ಮಗ್ಲಿಂಗ್ ಕೇಸಿಗೆ ಹಠಾತ್ ತಿರುವು ನೀಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ರಾಣ್ಯಾರಾವ್ ಜೈಲಿನಿಂದಲೇ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ ಪತ್ರ ಬರೆದಿದಿದ್ದು ತಮ್ಮ ವಿರುದ್ದದ ಆರೋಪಗಳನ್ನು ಅಲ್ಲಗಳೆದಿದ್ದಾರೆ.ಬೆಂಗಳೂರು ಸೆಂಟ್ರಲ್ ಜೈಲಿನಿಂದ ಮಾರ್ಚ್ 6 ರಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ರನ್ಯಾರಾವ್, ಇತರ ಕೆಲ ಪ್ರಯಾಣಿಕರನ್ನು ರಕ್ಷಿಸಲು ನನ್ನನ್ನು ಸುಳ್ಳು ಕೇಸ್ ನಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ.'ಈ ಪ್ರಕರಣದಲ್ಲಿ ನಾನು ಮುಗ್ಧೆ, ನನ್ನಿಂದ ಏನನ್ನೂ ವಶಕ್ಕೆ ಪಡೆಯದಿದ್ದರೂ ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ರನ್ಯಾ ರಾವ್ ತಮ್ಮ ಪತ್ರದಲ್ಲಿ ಬರೆದಿದ್ದಾರೆ. ಹೇಳಿದ್ದಾರೆ. ಅಧಿಕಾರಿಗಳು ಹೇಳಿದಂತೆ ಯಾವುದೇ ಮಹಜರ್ ಮಾಡಿಲ್ಲ ಅಥವಾ ಯಾವುದೇ ಶೋಧ ಕಾರ್ಯ ನಡೆದಿಲ್ಲ. ನನ್ನಿಂದ ಏನನ್ನೂ ವಶಕ್ಕೆ ಪಡೆದಿಲ್ಲ ಎಂದು ಅವರು ನಾಲ್ಕು ಪುಟಗಳ ಪತ್ರದಲ್ಲಿ ಬರೆದುಕೊಂಡಿದ್ದಾರೆ.ಬಂಧನವಾದಾಗಿನಿಂದ ನ್ಯಾಯಾಲಯಕ್ಕ...
ಜಲಜೀವನ್ ಯೋಜನೆ ಜಾರಿಗೆ ಇಚ್ಛಾಶಕ್ತಿ ತೋರದ ಸರ್ಕಾರ: ಸಿ.ಟಿ.ರವಿ ಆಕ್ರೋಶ

ಜಲಜೀವನ್ ಯೋಜನೆ ಜಾರಿಗೆ ಇಚ್ಛಾಶಕ್ತಿ ತೋರದ ಸರ್ಕಾರ: ಸಿ.ಟಿ.ರವಿ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಜಲಜೀವನ್ ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆರೋಪಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಿ.ಟಿ.ರವಿ ಅವರು ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಕಿಡಿಕಾರಿದರು.ಜಲಜೀವನ್ ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲ. 26,592 ಗ್ರಾಮಗಳು ರಾಜ್ಯದಲ್ಲಿದ್ದು, ಕಾಮಗಾರಿ ಪೂರ್ಣಗೊಳಿಸಿ,‌ ನೀರು ಸರಬರಾಜು ಆಗುತ್ತಿರುವ ಗ್ರಾಮಗಳ ಸಂಖ್ಯೆ 4,675. ಇನ್ನೂ 21,000 ಕ್ಕೂ ಅಧಿಕ ಗ್ರಾಮಗಳಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ. ಆಗಿರುವ ಕಾಮಗಾರಿಯೂ ಸಮರ್ಪಕವಾಗಿ ನಡೆದಿಲ್ಲ.… pic.twitter.com/6wBsR7EhgW — BJP Karnataka (@BJP4Karnataka) March 14, 2025ಜಲಜೀವನ್ ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲಎಂದು ವಾಗ್ದಾಳಿ ನಡೆಸಿದ ಅವರು, 26,592 ಗ್ರಾಮಗಳು ರಾಜ್ಯದಲ್ಲಿದ್ದು, ಕಾಮಗಾರಿ ಪೂರ್ಣಗೊಳಿಸಿ,‌ ನೀರು ಸರಬರಾಜು ಆಗುತ್ತಿರುವ ಗ್ರಾಮಗಳ ಸಂಖ್ಯೆ 4,675. ಇನ್ನೂ 21,000 ಕ್ಕೂ ಅಧಿಕ ಗ್ರಾಮಗಳಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ ಎಂ...
ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ಜಾಮೀನು ಅರ್ಜಿ ವಜಾ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ಜಾಮೀನು ಅರ್ಜಿ ವಜಾ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್ ಜಾಮೀನು ಕೋರಿ ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತಂತೆ ಆರ್ಥಿಕ ಅಪರಾಧಗಳ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ನಾಟಿಗೆ ಜಾಮೀನು ಮಂಜೂರು ಮಾಡಲು ಕೋರ್ಟ್ ನಿರಾಕರಿಸಿದೆ.ಇನ್ನೊಂದೆಡೆ, ಮತ್ತೊಬ್ಬ ಆರೋಪಿ ತರುಣ್ ಕೂಡಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ....
ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಚಿತ್ರದುರ್ಗ: ವಿಧಾನ ಸಭೆಯ ಉಪಸಭಾಪತಿ ಹಾಗೂ ಹಾವೇರಿ ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ಅವರು ಅಪಘಾತದಲ್ಲಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಂಡು ತಮ್ಮ ಕ್ಷೇತ್ರಕ್ಕೆ ಕಾರಿನಲ್ಲಿ ತೆರಳಿದ್ದ ಅವರು ಮಾರ್ಗಮಧ್ಯೆ ಅಪಘಾತಕ್ಕೀಡಾಗಿದ್ದಾರೆ. ಶುಕ್ರವಾರ ಬೆಂಗಳೂರಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮೂತ್ರ ವಿಸರ್ಜನೆಗಾಗಿ ಕಾರಿನಿಂದ ಅವರು ಇಳಿದಿದ್ದರು. ಆ ವೇಳೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರುದ್ರಪ್ಪ ಲಮಾಣಿ ಅವರು ನೆಲಕ್ಕೆ ಬಿದ್ದಿದ್ದು, ಅವರ ಹಣೆ, ಹಲ್ಲು ಮತ್ತು ಮೊಣಕಾಲಿಗೆ ಬಲವಾದ ಏಟು ತಗುಲಿದೆ. ತಕ್ಷಣಕ್ಕೆ ಹಿರಿಯೂರಿನಲ್ಲಿ ಚಿಕಿತ್ಸೆ ನೀಡಿ ಅವರನ್ನು ದಾವಣಗೆರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.Deputy speaker of state legislative assembly #Rudrappa #Lamani suffered injuries when he was returning from a short break at Javanagondana...
‘ಈಜಿಪುರ ಮೇಲ್ಸೇತುವೆ’ ಕಾಮಗಾರಿಗೆ : ಸಚಿವ ರಾಮಲಿಂಗಾ ರೆಡ್ಡಿ ತಾಕೀತು ಬೆನ್ನಲ್ಲೇ ಬಿಬಿಎಂಪಿ ಮಹತ್ವದ ಆದೇಶ

‘ಈಜಿಪುರ ಮೇಲ್ಸೇತುವೆ’ ಕಾಮಗಾರಿಗೆ : ಸಚಿವ ರಾಮಲಿಂಗಾ ರೆಡ್ಡಿ ತಾಕೀತು ಬೆನ್ನಲ್ಲೇ ಬಿಬಿಎಂಪಿ ಮಹತ್ವದ ಆದೇಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೋರಮಂಗಲದ 'ಈಜಿಪುರ ಮೇಲ್ಸೇತುವೆ' ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.ತಾವು ಪ್ರತಿನಿಧುಸುತ್ತಿರುವ ಬೆಂಗಳೂರಿನ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವ ರಾಮಲಿಂಗಾ ರೆಡ್ಡಿ, ಕೋರಮಂಗಲದ ಈಜಿಪುರ ಮೇಲ್ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಅನುವು ಮಾಡಲು ಪ್ರತ್ಯೇಕ ಅಭಿಯಂತರರ ತಂಡ ರಚಿಸಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿ.ಬಿ.ಎಂ.ಪಿ ಮುಖ್ಯ ಆಯುಕ್ತರ ಆದೇಶ ಹೊರಬಿದ್ದಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೋರಮಂಗಲದ "ಈಜಿಪುರ ಮೇಲ್ವೇತುವ ಯೋಜನೆ' ಕಾಮಗಾರಿಯನ್ನು ಪ್ರಸ್ತುತ ಯೋಜನೆ-ಕೇಂದ್ರ ವಿಭಾಗದಿಂದ ನಿರ್ವಹಿಸಲಾಗುತ್ತಿರುತ್ತದೆ. ಈಜಿಪುರ ಮೇಲ್ಸೇತುವೆ ಕಾಮಗಾರಿ ಯೋಜನೆಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಶೀಘ್ರವಾಗಿ ಪೂರ್ಣಗೊಳಿಸಿ ಅನುಷ್ಠಾನಗೊಳಿಸಬೇಕೆಂದು ಸಚಿವರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಬಿ.ಬಿ.ಎಂ.ಪಿ ಯ ಮುಖ್ಯ ಆಯುಕ್ತರು, ಇನ್ನು ಮುಂದೆ ಕೇ...
‘ಆವೆ ಮಣ್ಣನ್ನು ಮೈನ್ಸ್‌ ಎಂದು ಪರಿಗಣಿಸಬೇಡಿ’: ಸರ್ಕಾರದ ನಿರ್ಧಾರಕ್ಕೆ ಗಂಟಿಹೊಳೆ ಆಕ್ರೋಶ..

‘ಆವೆ ಮಣ್ಣನ್ನು ಮೈನ್ಸ್‌ ಎಂದು ಪರಿಗಣಿಸಬೇಡಿ’: ಸರ್ಕಾರದ ನಿರ್ಧಾರಕ್ಕೆ ಗಂಟಿಹೊಳೆ ಆಕ್ರೋಶ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಆವೆ ಮಣ್ಣನ್ನು ಮೈನ್ಸ್‌ ಎಂದು ಸರ್ಕಾರ ಪರಿಗಣಿಸಿರುವುದಕ್ಕೆ ಕರಾವಳಿ ಜಿಲ್ಲೆಗಳ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.'UDAYA NEWS' ಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯ.. ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಬೈಂದೂರು ಶಾಸಕ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿದ್ದಾರೆ.ಹಂಚಿನ ಕಾರ್ಖಾನೆಗಳು ಸಾವಿರಾರು ಬಡವರಿಗೆ ಬದುಕು ಕಲ್ಪಿಸಿದೆ. ಆದರೆ ಹಂಚಿನ ಕಾರ್ಖಾನೆಗಳಿಗೆ ಅಗತ್ಯವಾಗಿರುವ ಆವೆ ಮಣ್ಣನ್ನು ಮೈನ್ಸ್‌ ಎಂದು ಸರ್ಕಾರ ಪರಿಗಣಿಸಿದೆ. ಇದರಿಂದ ಕಾರ್ಖಾನೆಗಳು ಮುಚ್ಚುವ ಪರಿಸ್ಥಿತಿ ಉದ್ಭವವಾಗಿದೆ. ಕಾರ್ಖಾನೆಗಳು ಬಾಗಿಲು ಹಾಕಿದರೆ ಸಾವಿರಾರು ಬಡವರಿಗೆ ಅನ್ಯಾಯವಾಗಲಿದೆ.#CongressFailsKarnataka pic.twitter.com/uBamTkA3eV — BJP Karnataka (@BJP4Karnataka) March 13, 2025ಆವೆ ಮಣ್ಣನ್ನು ಹಂಚಿನ ಕಾರ್ಖಾನೆಗಳಿಗೆ ಬಳಸಲಾಗುತ್ತಿದೆ ಎಂದು ಸರ್ಕಾರದ ಗಮನಸೆಳೆದ ಅವರು, ಹಂಚಿನ ಕಾರ್ಖಾನೆಗಳು ಸಾವಿರಾರು ಬಡವರಿಗೆ ಬದುಕು ಕಲ್ಪಿಸಿದೆ. ಆದರೆ ಹಂಚಿನ ಕಾರ್ಖಾನೆಗಳಿಗೆ ಅಗತ್ಯವಾಗಿರುವ ಆವೆ ಮಣ್ಣನ್ನು...
ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕಲಬುರಗಿ: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ.ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿ ನೀಡಿದ್ದಾರೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ಗುರುವಾರ ನಡೆದ ಸಂವಾದದ ವೇಳೆ ಸಚಿವರು ಈ ವಿಷಯ ತಿಳಿಸಿದ್ದಾರೆ.ಸಂವಾದದ ವೇಳೆ ಜಯದೇವದ ಹಿರಿಯ ವೈದ್ಯರು ಕೆಲವು ವಿಷಯ ಪ್ರಸ್ತಾಪಿಸಿದರು. ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ಪಡೆದ ನಂತರ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸಲು ಅತಿ ಹೆಚ್ಚು ವರ್ಷಗಳನ್ನು ವ್ಯಯಿಸಿರಲಾಗಿರುತ್ತದೆ. 60 ನೇ ವಯಸ್ಸಿನಲ್ಲಿ ನಿವೃತ್ತರಾಗುವ ಮೊದಲು ನಮಗೆ 20-25 ವರ್ಷಗಳ ಕಾಲ ಮಾತ್ರ ಸೇವೆ ಸಲ್ಲಿಸಲು ಅವಕಾಶ ಲಭ್ಯವಾಗಿರುತ್ತದೆ ಎಂದು ವೈದ್ಯರು ಗಮನ ಸೆಳೆದರು.ಆಗ ಸಚಿವರು ಮಾತನಾಡಿ,...
‘ಗ್ರೇಟರ್ ಬೆಂಗಳೂರು’: ರಾಜಧಾನಿ ನಗರ ವಿಭಜನೆ ಮೂಲಕ ಲೂಟಿಗೆ ಹುನ್ನಾರ?

‘ಗ್ರೇಟರ್ ಬೆಂಗಳೂರು’: ರಾಜಧಾನಿ ನಗರ ವಿಭಜನೆ ಮೂಲಕ ಲೂಟಿಗೆ ಹುನ್ನಾರ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಜಧಾನಿಯನ್ನು ಗ್ರೇಟರ್ ಬೆಂಗಳೂರು ಹೆಸರಲ್ಲಿ ವಿಭಜಿಸುವ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.'UDAYA NEWS' ಈಗ ಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯಬೆಂಗಳೂರನ್ನು ಕೆಂಪೇಗೌಡರು ಯೋಜನಾ ಬದ್ಧವಾಗಿ ರೂಪಿಸಿದ್ದರು. ಮೈಸೂರು ಮಹಾರಾಜರ ಕಾಲದಲ್ಲೂ ಬೆಂಗಳೂರು ಯೋಜನಾಬದ್ಧವಾಗಿತ್ತು. ಆದರೆ ನಮ್ಮ ಕಾಲದಲ್ಲಿ ಯೋಜನಾ ಬದ್ಧವಾಗಿದ್ದ ನಗರವನ್ನು ಯಾವ ಸ್ಥಿತಿಗೆ ತಲುಪಿಸಿದ್ದೇವೆ ಎಂಬುದರ ಬಗ್ಗೆ ನಾವು ಅವಲೋಕಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮಾರ್ಮಿಕವಾಗಿ ಹೇಳಿದ್ದಾರೆ.ಬೆಂಗಳೂರನ್ನು ಕೆಂಪೇಗೌಡರು ಯೋಜನಾ ಬದ್ಧವಾಗಿ ರೂಪಿಸಿದ್ದರು. ಮೈಸೂರು ಮಹಾರಾಜರ ಕಾಲದಲ್ಲೂ ಬೆಂಗಳೂರು ಯೋಜನಾಬದ್ಧವಾಗಿತ್ತು. ಆದರೆ ನಮ್ಮ ಕಾಲದಲ್ಲಿ ಯೋಜನಾ ಬದ್ಧವಾಗಿದ್ದ ನಗರವನ್ನು ಯಾವ ಸ್ಥಿತಿಗೆ ತಲುಪಿಸಿದ್ದೇವೆ ಎಂಬುದರ ಬಗ್ಗೆ ನಾವು ಅವಲೋಕಿಸಬೇಕಾಗಿದೆ. ಗ್ರೇಟರ್ ಬೆಂಗಳೂರು ಎಂದು ವಿಭಾಗಿಸುವ ಮೂಲಕ ಲೂಟಿ ಹೊಡೆಯುವವರಿಗೆ ಅವಕಾಶ… pic.twitter.com/TT7yT44Ys2— BJP Karnataka (@BJP4Karnataka) March 12, 2025ಗ್ರೇಟರ್ ಬೆಂಗಳೂರು ...
ಕೆ.ಎ.ಎಸ್. ಪರೀಕ್ಷೆ: ಭಾಷಾಂತರ ಅವಾಂತರ ಕೊನೆಗೊಳಿಸಲು KPSCಗೆ ಸಿಎಂ ತಾಕೀತು

ಕೆ.ಎ.ಎಸ್. ಪರೀಕ್ಷೆ: ಭಾಷಾಂತರ ಅವಾಂತರ ಕೊನೆಗೊಳಿಸಲು KPSCಗೆ ಸಿಎಂ ತಾಕೀತು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಲೋಪದೋಷಗಳಿಗೆ ಕಾರಣರಾದ ವಿಷಯ ತಜ್ಞರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಅವರ ಮೇಲೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದವರು ಸೂಚಿಸಿದ್ದಾರೆ.ಭಾಷಾಂತರಕಾರರ ಲೋಪವಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಬೇಕು. ಆಯೋಗವು ನಡೆಸುವ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಮೊದಲು ಕನ್ನಡದಲ್ಲಿ ತಯಾರಿಸಿ, ನಂತರ ಇಂಗ್ಲೀಷ್ ಬಗ್ಗೆ ಭಾಷಾಂತರ ಮಾಡಲು ಆಯೋಗಕ್ಕೆ ಸೂಚನೆಯನ್ನು ನೀಡಲಾಗುವುದು ಎಂದವರು ತಿಳಿಸಿದ್ದಾರೆ.ಏನೇ ಆದರೂ ಈಗ ಪ್ರಕರಣವು ಉಚ್ಛ ನ್ಯಾಯಾಲಯ ಹಾಗೂ ಕೆಎಟಿಗಳು ನೀಡುವ ಆದೇಶಗಳನ್ನು ಆಧರಿಸಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು...