
ಸಿಎಂ ಸಿದ್ದರಾಮಯ್ಯ ಮನೆ ಬಾಗಿಲಿಗೆ ತಲುಪಿತೇ..? ಪೋಸ್ಟ್ ಹಾಕಿದ ಮಾಳವೀಯಗೆ ನೆಟ್ಟಿಗರ ಕ್ಲಾಸ್
ಬೆಂಗಳೂರು: ನಟಿ ರನ್ಯಾ ರಾವ್ ಅಕ್ರಮ ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣ ರಾಜ್ಯ ರಾಜಕಾರಣದಲ್ಲೂ ತಲ್ಲಣ ಸೃಷ್ಟಿಸಿದೆ. ದುಬೈನಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹೊತ್ತು ತಂದ ಆರೋಪದಲ್ಲಿ ನಟಿ ರನ್ಯಾ ರಾವ್ ಬಂಧನವಾಗಿದೆ. ಈ ಸ್ಮಗ್ಲಿಂಗ್ ಕೇಸ್ ಕುರಿತಂತೆ DRI, CBI ತನಿಖೆ ನಡೆಸುತ್ತಿದ್ದು, ಪೊಲೀಸ್ ಅಧಿಕಾರಿಗಳ ಶಾಮೀಲು ಬಗ್ಗೆಯೂ ಮಹತ್ವದ ಸಂಗತಿಗಳು ಬೆಳಕಿಗೆ ಬಂದಿವೆ.ಇನ್ನೊಂದೆಡೆ ರಮ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್'ನಲ್ಲಿ ರಾಜ್ಯದ ಸಚಿವರಿಬ್ಬರ ಕೈವಾಡ ಇರುವ ಬಗ್ಗೆ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡುತ್ತಿದ್ದು ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ನಾಯಕರ ನಡುವೆ ವಾಕ್ಸಮರ ನಡೆದಿದೆ.
ಕೆಜಿಎಫ್..?
ಈ ಮಧ್ಯೆ, ಕರ್ನಾಟಕದಲ್ಲಿ ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಬಾಗಿಲಿಗೆ ತಲುಪಿದೆ ಎಂದು ಬಿಜೆಪಿ ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಪೋಸ್ಟ್ ಚರ್ಚೆಗೆ ಗ್ರಾಸವಾಗಿದೆ.'ಕಾಂಗ್ರೆಸ್ ಗೋಲ್ಡ್ ಫೀಲ್ಡ್' (#CongressGoldField) ಎಂಬ ಹ್ಯಾಷ್ ಟ್ಯಾಗ್ ಮೂಲಕ ಸಾಮಾಜಿಕ...









