Wednesday, August 12

ವಿದೇಶ

ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ: ಸಚಿವ ಬೈರತಿ ಸುರೇಶ್‌

ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ: ಸಚಿವ ಬೈರತಿ ಸುರೇಶ್‌

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್.‌ ಸುರೇಶ (ಬೈರತಿ)ಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ಸಭೆ ನಡೆಯಿತು.ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡಿ ಮೇಲ್ದರ್ಜೆಗೇರಿಸುವ ಸಂಬಂಧ ಪ್ರಸ್ತಾಪಿತ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆ(ಗಡಿ) ಯನ್ನು ಗುರುತಿಸಿ 2018 ರ ವಾರ್ಡ್‌ ಪುನರ್‌ ವಿಂಗಡನೆ (Delimitation) ಅನ್ನು ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಂತೆ ಇರುವ ನಗರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯಿತಿಗಳನ್ನು ವಿಲೀನ ಪಡಿಸಿಕೊಂಡು ಯೋಜನಾ ಬದ್ದ ಬೆಳವಣಿಗೆಗೆ ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ಅನುಮೋದನೆಯನ್ನು ಪಡೆದು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಬೈರತಿ ಸುರೇಶ್ ಸೂಚಿಸಿದರು.ಮೈಸೂರು ಮಹಾನಗರ ಪಾಲಿಕೆ...
ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ: ರಾಮಲಿಂಗಾ ರೆಡ್ಡಿ

ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ: ರಾಮಲಿಂಗಾ ರೆಡ್ಡಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಾರಿಗೆ ಇಲಾಖೆ ( RTO) ಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.ಮೋಟಾರು ವಾಹನ ನಿರೀಕ್ಷಕರೊಬ್ಬರು ಸರ್ಕಾರಿ ವಾಹನದಲ್ಲಿ ಕುಳಿತು ಹಣ ಪಡೆದಿದ್ದಾರೆ ಎಂದು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ, ಆರೋಪ ಕುರಿತಂತೆ ಸೂಕ್ತ ತನಿಖೆ ನಡೆಸುವಂತೆ ಸಚಿವರು ಆದೇಶಿಸಿದ್ದಾರೆ.ಆ ಸಂಬಂಧ ತನಿಖೆ ಕೈಗೆತ್ತಿಕೊಂಡಿರುವ ಮಂಡ್ಯದ ಪ್ರಾದೇಶಿಕ ಸಾರಿಗೆ ಅಧಿಕಾರಿಯವರು, ಆರೋಪಕ್ಕೆ ಗುರಿಯಾಗಿರುವ ಮೋಟಾರು ವಾಹನ ನಿರೀಕ್ಷಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ನೌಕರರು ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬರುವುದರಿಂದ ಸಾರಿಗೆ ಆಯುಕ್ತರು ಮತ್ತು ಸಕ್ಷಮ ಪ್ರಾಧಿಕಾರಿಯು ಮೋಟಾರು ವಾಹನ ನಿರೀಕ್ಷಕರಾದ ವಾಣಿಶ್ರೀ ಎಂ.ಎನ್ ಅವರ ವಿರುದ್ಧದ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಸೇವೆಯಿಂದ ಅಮಾನತ್ತುಗೊಳಿಸಿದ್ದಾರೆ. ಮಂಡ್ಯ ಪ್ರಾದೇಶಿಕ ಸಾರಿಗೆ ಕಛೇರಿಯಿಂದ ಧಾರವಾಡ (ಪಶ್ಚಿಮ) ಕ್ಕೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಮಕ್ಕಳಲ್ಲಿ ಕ್ಯಾನ್ಸರ್‌ ಆತಂಕಕಾರಿ: ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಬಿಎಂಎಟಿ ಘಟಕ ಸ್ಥಾಪನೆ

ಮಕ್ಕಳಲ್ಲಿ ಕ್ಯಾನ್ಸರ್‌ ಆತಂಕಕಾರಿ: ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಬಿಎಂಎಟಿ ಘಟಕ ಸ್ಥಾಪನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೈವಿಧ್ಯ
ಬೆಂಗಳೂರು: ಮಕ್ಕಳಲ್ಲಿ ವರ್ಷದಿಂದ ವರ್ಷಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿರುವ ಬೋನ್ ಮ್ಯಾರೊ ಆಸ್ಪಿರೇಟ್ ಅಂಡ್ ಟ್ರಿಪೈನ್ ಬಯಾಪ್ಸಿ (ಬಿಎಂಎಟಿ) ಸಂಸ್ಥೆಗಳನ್ನು ಮೈಸೂರು ಮತ್ತು ಹುಬ್ಬಳ್ಳಿಯಲ್ಲಿ ಪ್ರಾರಂಭಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ವಿಧಾನ ಪರಿಷತ್ತಿನಲ್ಲಿ ಸೋಮವಾರ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ರಾಜ್ಯದ ಎಲ್ಲಾ ಹೋಬಳಿಗಳಲ್ಲೂ ಈ ಕೇಂದ್ರಗಳನ್ನು ಸ್ಥಾಪಿಸಬೇಕೆಂಬ ಉದ್ದೇಶವಿದೆ. ಪ್ರಾರಂಭಿಕ ಹಂತದಲ್ಲಿ ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದರು.ಈಗಾಗಲೇ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ತಪಾಸಣಾ ಘಟಕ ಕಾರ್ಯ ನಿರ್ವಹಿಸುತ್ತಿದೆ. ಇದೇ ರೀತಿ ಕಲಬುರಗಿಯಲ್ಲೂ ಕೇಂದ್ರವನ್ನು ಪ್ರಾರಂಭ ಮಾಡಿದ್ದೇವೆ. ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯಲ್ಲೂ ಇದನ್ನು ತೆರೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.ಮಕ್ಕಳಲ್ಲಿ ಇತ್ತ...
ನಟಿ ರನ್ಯಾ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರು ಯಾರು? ಮಾಹಿತಿ ಬಹಿರಂಗಪಡಿಸಲು ಬಿಜೆಪಿ ಪಟ್ಟು

ನಟಿ ರನ್ಯಾ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರು ಯಾರು? ಮಾಹಿತಿ ಬಹಿರಂಗಪಡಿಸಲು ಬಿಜೆಪಿ ಪಟ್ಟು

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಹವಾಲಾ ನಂಟು ಬೆಸೆದುಕೊಂಡಿರುವ ಶಂಖೆ ವ್ಯಕ್ತವಾಗಿದ್ದು, ಆರೋಪಿ ರನ್ಯಾ ರಾವ್ ಬಂಧನದ ಸಂದರ್ಭದಲ್ಲಿ ಸಚಿವರೊಬ್ಬರನ್ನು ಸಂಪರ್ಕಿಸಲು ಯತ್ನಿಸಿರುವುದು @INCKarnataka ಸರ್ಕಾರದ ಪ್ರಭಾವಿಗಳ ಕೈವಾಡ ಇರುವ ಬಗ್ಗೆ ಸ್ಪಷ್ಟ ಅನುಮಾನಗಳು ಮೂಡುತ್ತಿವೆ. ರನ್ಯಾ ರಾವ್ ಅವರು ಉನ್ನತ ಪೊಲೀಸ್… pic.twitter.com/4XHhTNT15b— Office of BY Vijayendra (@OfficeofBYV) March 10, 2025ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿನ್ನ ಕಳ್ಳಸಾಗಣೆ ಹಿನ್ನೆಲೆಯಲ್ಲಿ ಬಂಧಿತರಾದ ರನ್ಯಾರಾವ್ ಹಿಂದೆ ಅನೇಕ ಘಟಾನುಘಟಿಗಳಿದ್ದಾರೆ ಎಂಬ ಅಂಶ ಹೊರಕ್ಕೆ ಬರುತ್ತಿದೆ. ಇದೇನೂ ಸಣ್ಣ ಘಟನೆಯಲ್ಲ; ರನ್ಯಾರಾವ್ ಕಳೆದ ಕೆಲವು ತಿಂಗಳುಗಳಲ್ಲಿ 30ಕ್ಕೂ ಹೆಚ್ಚು ಬಾರಿ ವಿದೇಶಕ್ಕೆ- ದು...
ಬಿಬಿಎಂಪಿ ವಿಭಜನೆ ಬೇಡ, ಆಡಳಿತ ವಿಕೇಂದ್ರೀಕರಣ ಮಾಡಿ: ಬಿಜೆಪಿ ನಾಯಕರ ಆಗ್ರಹ

ಬಿಬಿಎಂಪಿ ವಿಭಜನೆ ಬೇಡ, ಆಡಳಿತ ವಿಕೇಂದ್ರೀಕರಣ ಮಾಡಿ: ಬಿಜೆಪಿ ನಾಯಕರ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಬೆಂಗಳೂರು ವಿಂಹಜನೆಯ ಸರ್ಕಾರದ ಪ್ರಸ್ತಾಪಕ್ಕೆ ಪ್ರತಿಪಕ್ಷ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಬಿಎಂಪಿ ವಿಭಜನೆ ಬೇಡ, ಆಡಳಿತ ವಿಕೇಂದ್ರೀಕರಣ ಮಾಡಿ ಎಂದು ಬಿಜೆಪಿ ನಾಯಕರು ಸಲಹೆ ಮುಂದಿಟ್ಟಿದ್ದಾರೆ.ಬೆಂಗಳೂರನ್ನು ವಿಭಜನೆ ಮಾಡಲು ಹೊರಟಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ರಾಜಕೀಯ ವಿಕೇಂದ್ರೀಕರಣದ ಬದಲು ಆಡಳಿತ ವಿಕೇಂದ್ರೀಕರಣ ಮಾಡಿ ಎಂದು ಶಾಸಕರು ಮನವಿ ಮಾಡಿದ್ದಾರೆ. ಈ ಕುರಿತಂತೆ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಾದ ಅಶ್ವಥನಾರಾಯಣ, ಭೈರತಿ ಬಸವರಾಜ್, ಗೋಪಾಲಯ್ಯ, ಎಸ್.ಆರ್.ವಿಶ್ವನಾಥ್ ಅವರ ಹೇಳಿಕೆ ಗಮನಸೆಳೆಯಿತು. ಬೆಂಗಳೂರನ್ನು ವಿಭಜನೆ ಮಾಡಲು ಹೊರಟಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ರಾಜಕೀಯ ವಿಕೇಂದ್ರೀಕರಣದ ಬದಲು ಆಡಳಿತ ವಿಕೇಂದ್ರೀಕರಣ ಮಾಡಿ.ಕೆಂಪೇಗೌಡರು ಕಟ್ಟಿದ ನಗರವನ್ನು ವಿಭಜಿಸುವುದು ಸರಿಯಲ್ಲ. ಅಧಿಕಾರದ ವಿಕೇಂದ್ರೀಕರಣಕ್ಕೆ ಸರ್ಕಾರ ಆದ್ಯತೆ ನೀಡಲಿ.ಈಗಾಗಲೇ ನೂರಾರು ಪ್ರದೇಶದಲ್ಲಿ ನೀರಿನ ಅಭಾವ ಕಾಡುತ್ತಿದೆ. ಬೆಂಗಳೂರನ್ನು ವಿಭಜಿಸಿ… pic.twitter.com/yD45LeCDvn— BJP Karnataka (@BJP4Karnataka) March 10, 202...
ಗೋಲ್ಡ್ ಸ್ಮಗ್ಲಿಂಗ್: ನಟಿ ರನ್ಯಾಗೆ 14 ದಿನ ನ್ಯಾಯಾಂಗ ಬಂಧನ

ಗೋಲ್ಡ್ ಸ್ಮಗ್ಲಿಂಗ್: ನಟಿ ರನ್ಯಾಗೆ 14 ದಿನ ನ್ಯಾಯಾಂಗ ಬಂಧನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಆರೋಪದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ ರಾವ್ ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕಂದಾಯ ಗುಪ್ತಚಾರ ನಿರ್ದೇಶನಾಲಯ (DRI) ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ನಟಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶಿಸಿದರು.ಮತ್ತೊಂದೆಡೆ, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್​​ ಅವರೊಂದಿಗೆ ಉದ್ಯಮಿ ಪುತ್ರ ತರುಣ್ ಹೆಸರು ಕೇಳಿಬಂದಿತ್ತು. ಹೀಗಾಗಿ ವಿಚಾರಣೆ ಮಾಡಿದ ಅಧಿಕಾರಿಗಳು ನಂತರ ಫೈಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜು ಬಂಧಿಸಿದ್ದಾರೆ. ಇನ್ನು ನಟಿ ರನ್ಯಾ ರಾವ್ ಮತ್ತು ತರುಣ್ ರಾಜು ಇಬ್ಬರು ವರ್ಷಗಳಿಂದ ಸ್ನೇಹಿತರಾಗಿದ್ದರು. ರನ್ಯಾ ರಾವ್​ರಿಂದ ತರುಣ್ ರಾಜು ಚಿನ್ನ ತರಿಸಿಕೊಳ್ಳುತ್ತಿದ್ದರು ಎಂದು ಹೇಳಲಾಗುತ್ತಿದೆ....
ಪುಣ್ಯಕ್ಷೇತ್ರಗಳ ನದಿಗಳಲ್ಲಿ ಸೋಪ್- ಶಾಂಪೂ ಬಳಕೆಗೆ ಸರ್ಕಾರ ಕಡಿವಾಣ

ಪುಣ್ಯಕ್ಷೇತ್ರಗಳ ನದಿಗಳಲ್ಲಿ ಸೋಪ್- ಶಾಂಪೂ ಬಳಕೆಗೆ ಸರ್ಕಾರ ಕಡಿವಾಣ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪುಣ್ಯಕ್ಷೇತ್ರಗಳ ನದಿಗಳಲ್ಲಿ ಸೋಪ್- ಶಾಂಪೂ ಬಳಕೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.ಪರಿಸರ ಸ್ನೇಹಿ ಕ್ರಮವಾಗಿ, ಪುಣ್ಯಕ್ಷೇತ್ರಗಳ ನದಿಗಳು ಮತ್ತು ಕಲ್ಯಾಣಿ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ಸೋಪ್ ಮತ್ತು ಶಾಂಪೂ ಮಾರಾಟವನ್ನು ನಿಷೇಧಿಸಲು ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದೇನೆ.ನದಿಯಲ್ಲಿ ಸ್ನಾನ ಮಾಡುವ ಭಕ್ತರು ತ್ಯಜಿಸುವ ಶಾಂಪೂ ಪ್ಯಾಕೆಟ್‌ಗಳು ಮತ್ತು ಸಣ್ಣ ಸೋಪ್‌ಗಳು ನೀರನ್ನು ಮಾಲಿನ್ಯಗೊಳಿಸುತ್ತಿದ್ದು, ಇದು ಜನರ ಮತ್ತು ಜಲಚರ ಪ್ರಾಣಿಗಳ ಆರೋಗ್ಯಕ್ಕೆ ತೀವ್ರ ಹಾನಿಯನ್ನು ಉಂಟುಮಾಡುತ್ತಿದೆ ಎಂದವರು ಪ್ರತಿಪಾದಿಸಿದ್ದಾರೆ.ಅಲ್ಲದೆ, ಯಾತ್ರಾಸ್ಥಳಗಳಲ್ಲಿ ಬಟ್ಟೆ ತ್ಯಜಿಸುವ ಪ್ರವೃತ್ತಿ ಗಮನಕ್ಕೆ ಬಂದಿರುವುದರಿಂದ, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದವರು ತಿಳಿಸಿದ್ದಾರೆ....
ರಾಜ್ಯಕ್ಕೆ ಬರುವ ಪ್ರವಾಸಿಗರ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಭರವಸೆ

ರಾಜ್ಯಕ್ಕೆ ಬರುವ ಪ್ರವಾಸಿಗರ ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಭರವಸೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ಬಳಿ ಇಸ್ರೇಲಿ ಮಹಿಳೆ ಮೇಲೆ ನಡೆದಿರುವ ಅತ್ಯಾಚಾರ ಘಟನೆಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ ಎಂದವರು ಹೇಳಿದ್ದಾರೆ.ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ ಎಂದಿರುವ ಸಿಎಂ, ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದವರು ಭರವಸೆ ನೀಡಿದ್ದಾರೆ.ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿಗಳು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಡಿಗೆ ಮತ್ತೆ 3 ರಾಷ್ಟ ಮಟ್ಟದ ಪ್ರಶಸ್ತಿಗಳು.

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ( ASRTU) 2023-24ನೇ ಸಾಲಿನ 3 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು (National Transport Excellence Award) ಲಭಿಸಿವೆ.ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಈ ಒಕ್ಕೂಟವು 1965 ರ ಆಗಸ್ಟ್ 13ರಂದು ಅಸ್ತಿತ್ವಕ್ಕೆ ಬಂದಿದ್ದು, ಭಾರತ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ. ಈ ಸಂಸ್ಥೆಯು 59 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ.KSRTCಗೆ ಅಶ್ವಮೇಧ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ ಮೂರು ಪ್ರಶಸ್ತಿಗಳು ಲಭಿಸಿವೆ.ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ( ASRTU)ದ ವತಿಯಿಂದ ನವದೆಹಲಿಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ನಿವೃತ್ತ IPS ಅಧಿಕಾರ...
‘ನಮ್ಮತನ ಮಾರ್ಚ್ 8ಕ್ಕೆ ಮಾತ್ರ ಸೀಮಿತವಾಗಿರಬಾರದು’: ಭಾರತಿ ವಿಷ್ಣು ವರ್ಧನ್

‘ನಮ್ಮತನ ಮಾರ್ಚ್ 8ಕ್ಕೆ ಮಾತ್ರ ಸೀಮಿತವಾಗಿರಬಾರದು’: ಭಾರತಿ ವಿಷ್ಣು ವರ್ಧನ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಆನೇಕಲ್: ಮಹಿಳೆಯರು ವಿಶ್ವದಾದ್ಯಂತ ಅನೇಕ ರಂಗಗಳಲ್ಲಿ ಯಶಸ್ವಿಯಾಗಿ ತಮ್ಮ ಛಾಪು ಮೂಡಿಸಿದ್ದು ನಮ್ಮತನವನ್ನು ಮಾರ್ಚ್ 8ಕ್ಕೆ ಮಾತ್ರ ಸೀಮಿತಗೊಳಿಸ ಬಾರದು. ಸಾಗರ ತಳ, ವಿಶಾಲ ಭೂಮಿ, ಆಗಸ ದಾಟಿ ಮುನ್ನಡೆಯಬೇಕೆಂದು ಪಂಚಭಾಷಾ ತಾರೆ ಪದ್ಮಶ್ರೀ ಡಾ. ಭಾರತಿ ವಿಷ್ಣು ವರ್ಧನ್ ಕರೆ ನೀಡಿದರು.ಆನೇಕಲ್ ಸಮೀಪ ಅಲಯಂನ್ಸ್ ವಿಶ್ವವಿದ್ಯಾಲಯ ಏರ್ಪಡಿಸಿದ್ದ, ವಿಶ್ವ ಮಹಿಳಾ ಮಹಿಳಾ ದಿನಾಚರಣೆಯ ಅಂಗವಾಗಿ ಸಮಾಜದ ವಿವಿಧ ಸ್ಥರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಾಧಕಿ ಮಹಿಳೆಯರಿಗೆ ಮಹಿಳಾ ಸ್ಪಂದನ ಅವಾರ್ಡ್ ವಿತರಿಸಿ ಮಾತನಾಡಿದ ಅವರು, ತಾಯಿಯಾಗಿ, ಸಹೋದರಿಯಾಗಿ, ಮಗಳಾಗಿ ವಿವಿಧ ಹಂತಗಳಲ್ಲಿ ಹೆಣ್ಣು ಪರಿಪೂರ್ಣತೆಯಿಂದ ತನ್ನ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾಳೆ. ತ್ಯಾಗಮಯಿಯಾದ ಆಕೆ ತನ್ನ ಕುಟುಂಬ ದೇಶ ಕ್ಕಾಗಿ ಕೊಡುಗೆಯನ್ನೂ ನೀಡಿ ಇತರರ ಗೆಲುವನ್ನು ತನ್ನದೆಂದು ಪರಿಭಾವಿಸಿ ತೃಪ್ತಿ ಪಡುತ್ತಾಳೆ. ಮಹಿಳೆಯರು ಇದ್ದೆಡೆ ಗೌರವ ಶಕ್ತಿ ಇದ್ದು ಪ್ರಭಾವಿತಳಾಗಿ ಕಾಣುತ್ತಾಳೆ ಎಂದರು. ಶಿಕ್ಷಣ, ಅರೋಗ್ಯ, ಉದ್ಯೋಗ, ಕೃಷಿ, ಉದ್ಯಮ ಸೇರುದಂತೆ ಹಲವು ವಿಭಾಗದ 30ಕ್ಕೂ ಹೆಚ್ಚು ಸಾಧಕರನ್ನು ಸನ್ಮಾನಿಸ...