Wednesday, August 12

ವಿದೇಶ

ವರ್ಷಪೂರ್ತಿ ‘ಸಂಘ ಶತಾಬ್ದಿ’ ವರ್ಷ; ಮಾರ್ಚ್ 21, 22, 23ರಂದು RSS ಅಖಿಲ ಭಾರತೀಯ ಪ್ರತಿನಿಧಿ ಸಭಾ ಭೈಠಕ್’ನಲ್ಲಿ ಕಾರ್ಯತಂತ್ರ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು:  ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿ-ನಿರ್ಧಾರಗಳನ್ನು ನಿರೂಪಿಸುವ ಮಹತ್ವದ ಸಭೆ ಅಖಿಲ ಭಾರತೀಯ ಪ್ರತಿನಿಧಿ ಸಭಾ  ಇದೇ 2025ರ ಮಾರ್ಚ್ 21, 22, 23 ರಂದು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರ ಆವರಣದಲ್ಲಿ ನಡೆಯಲಿದೆ.ಬೈಠಕ್ ನಲ್ಲಿ ಹಿಂದಿನ ವರ್ಷ 2024-25ರ ಕಾರ್ಯಚಟುವಟಿಕೆಗಳ ಕುರಿತು ವಿಮರ್ಶಾತ್ಮಕ ಚರ್ಚೆಯ ಜೊತೆಗೆ ವಿಶೇಷ ಕಾರ್ಯಗಳ ಪ್ರಸ್ತುತಿಯೂ ಆಗಲಿದೆ. ಮುಂದಿನ ವಿಜಯದಶಮಿ (ದಸರಾ) 2025ಕ್ಕೆ ಸಂಘಕಾರ್ಯಕ್ಕೆ ನೂರು ವರ್ಷ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ 2025ರ ವಿಜಯದಶಮಿಯಿಂದ 2026ರ ವಿಜಯದಶಮಿಯವರೆಗೆ ಸಂಘ ಶತಾಬ್ದಿಯ ವರ್ಷ ಎಂದು ಕರೆಯಲಾಗುತ್ತದೆ.ಸಭೆಯಲ್ಲಿ ಶತಾಬ್ದಿ ವರ್ಷದ ಕಾರ್ಯವಿಸ್ತಾರದ ಯೋಜನೆಯ ಜೊತೆ ಜೊತೆಗೆ ಮುಂಬರುವ ಶತಾಬ್ದಿ ವರ್ಷದ ಪ್ರಯುಕ್ತ ವಿಭಿನ್ನ ಕಾರ್ಯಕ್ರಮಗಳ ಆಯೋಜನೆ ಹಾಗೂ ಅಭಿಯಾನಗಳ ರೂಪುರೇಷೆಯ ತಯಾರಿ ನಡೆಯಲಿದೆ. ಬೈಠಕ್ ನಲ್ಲಿ ರಾಷ್ಟ್ರೀಯ ವಿಷಯಗಳಿಗೆ ಸಂಬಂಧಿಸಿದ ಎರಡು ಪ್ರಸ್ತಾವನೆಯ ಕುರಿತು ವಿಚಾರ ವಿನಿಮಯಗೊಳ್ಳಲಿದೆ. ಜೊತೆಯಲ್ಲಿ ಸಂಘದ ಶಾಖೆಯ ಮೂಲಕ ಅಪೇಕ್ಷಿತ ಸಾಮಾಜಿಕ ಪರಿವರ್ತನೆಯ ಕ...
ಕೇರಳಕ್ಕೂ KSRTC ಮಾದರಿ..! ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕಚೇರಿಗೆ ನೆರೆ ರಾಜ್ಯದ ನಿಯೋಗ ಭೇಟಿ

ಕೇರಳಕ್ಕೂ KSRTC ಮಾದರಿ..! ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕಚೇರಿಗೆ ನೆರೆ ರಾಜ್ಯದ ನಿಯೋಗ ಭೇಟಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ದೇಶದಲ್ಲಿ ಜನಪ್ರಿಯ ಸಾರಿಗೆಗೆ ಹೆಸರಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೀಗ ಕೇರಳಕ್ಕೂ ಮಾದರಿಯಾಗಿದೆ. ಹಲವಾರು ವಿಶೇಷತೆಗಳಿಂದ ಗಮನಸೆಳೆದಿರುವ KSRTC ಬಗ್ಗೆ ಅಧ್ಯಯನಕ್ಕಾಗಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳ ತಂಡ ಬೆಂಗಳೂರಿನಲ್ಲಿರುವ KSRTC ನಿಗಮದ ಕಚೇರಿ ಹಾಗೂ ಕಾರ್ಯಾಗಾರಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.ಈ ಸಂದರ್ಭದಲ್ಲಿ ನಿಗಮದಲ್ಲಿನ ಕಾರ್ಮಿಕ ಸ್ನೇಹಿ ಹಾಗೂ ಪ್ರಯಾಣಿಕ ಸ್ನೇಹಿ ಉಪಕ್ರಮಗಳು ಹಾಗೂ ಸಾರಿಗೆಯೇತರ ಆದಾಯದ ವಿಷಯಗಳ ಬಗ್ಗೆ KSRTC ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರು ಪಿ.ಎಸ್.ಪ್ರಮೋಜ್‌ ಸಂಕರ್ ಅವರಿಗೆ ಮಾಹಿತಿ ನೀಡಿದರು. ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-2ಕ್ಕೆ ಭೇಟಿ ನೀಡಿದ ಕೇರಳ ತಂಡವು ವಿವಿಧ ಮಾದರಿಯ ಬಸ್ ಬ್ರಾಂಡಿಂಗ್ ಮತ್ತು ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿತು.ಬಸ್ಸುಗಳ ಕಾರ್ಯ ನಿರ್ವಹಣೆ, ಪುನಶ್ಚೇತನ ಕಾರ್ಯ, ರೂ.1 ಕೋಟಿ On duty / Off duty accident insurance, KSRTC AROGYA ಯೋಜನೆ, ವಿದ್ಯಾ ಚೇತನ ಯೋಜನೆ, ಮಾಹಿತಿ ತಂತ್ರಜ್ಞಾನಗಳ‌ಉಪಕ್ರಮಗಳಾದ HRMS, ಆ...
ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರಾಗಿ IGP ಡಿ.ರೂಪ ವರ್ಗಾವಣೆ

ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕರಾಗಿ IGP ಡಿ.ರೂಪ ವರ್ಗಾವಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಅವರನ್ನು ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.ಡಿ.ರೂಪ ಅವರು ಈ ವರೆಗೂ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿದ್ದರು.
ಕೃಷ್ಣಾ ನದಿಗೆ ಹಾರಿ ತಾಯಿ, ಮೂವರು ಮಕ್ಕಳು ಆತ್ಮಹತ್ಯೆ

ಕೃಷ್ಣಾ ನದಿಗೆ ಹಾರಿ ತಾಯಿ, ಮೂವರು ಮಕ್ಕಳು ಆತ್ಮಹತ್ಯೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಳಗಾವಿ: ಮಹಿಳೆಯೊಬ್ಬಳು ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ಸಮೀಪದ ಚಿಂಚಲಿ ಬಳಿ ನಡೆದಿದೆ.32 ವರ್ಷದ ಶಾರದಾ ಎಂಬವರು ತನ್ನ ಮಕ್ಕಳ ಜೊತೆ ನದಿಗೆ ಹಾರಿದ್ದಾರೆ. ಈ ಘಟನೆಯನ್ನು ಕಂಡ ಸ್ಥಳೀಯರು ಹೆಣ್ಣುಮಗುವನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸಗೆ ಸ್ಪಂದಿಸದೆ ಆಕೆ ಸಾವಿಗೀಡಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ....
ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ FIR: ವಿಜಯೇಂದ್ರ ಆಕ್ರೋಶ

ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ FIR: ವಿಜಯೇಂದ್ರ ಆಕ್ರೋಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ ಪೊಲೀಸರು ಎಫ್.ಐ.ಆರ್. ದಾಖಲಿಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಜನಪ್ರತಿನಿಧಿಗಳನ್ನು ಬೆದರಿಸಲು ಕಾಂಗ್ರೆಸ್ ಸರ್ಕಾರ ಪೊಲೀಸರನ್ನು ಬಳಸಿಕೊಳ್ಳುತ್ತಿದೆ. ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ ದುರುದ್ದೇಶಪೂರಿತ ಎಫ್ಐಆರ್ ದಾಖಲಿಸಿರುವ ಕ್ರಮ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು ನಿರ್ಭಯವಾಗಿ ತಮ್ಮ ಕರ್ತವ್ಯ ನಿರ್ವಹಿಸದಂತೆ ಬೆದರಿಸುವ ಮಾರ್ಗವನ್ನು ಕಾಂಗ್ರೆಸ್ ಅನುಸರಿಸುತ್ತಿದೆ ಎಂದು ವಿಜಯೇಂದ್ರ ದೂರಿದ್ದಾರೆ.ಈ ಹಿಂದೆಯೂ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಮೇಲೂ ಪೊಲೀಸರು ದೂರು ದಾಖಲಿಸಿಕೊಂಡು ದೌರ್ಜನ್ಯ ಮೆರೆಯಲು ಹೊರಟಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನ್ನ ಅಸ್ತಿತ್ವಕ್ಕಾಗಿ ತಿಣುಕಾಡುತ್ತಿರುವ ಕಾಂಗ್ರೆಸ್ ಹತಾಶೆಯಿಂದ ಬಿಜೆಪಿ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರನ್ನು ಕಾನೂನು ಸುವ್ಯವಸ್ಥೆಯ ಹೆಸರಿನಲ್ಲಿ ಹತ್ತಿಕ್ಕಲು ಪೊಲೀಸ್ ಠಾಣೆಗಳ...
ಸಿಸಿಬಿ ಭರ್ಜರಿ ಬೇಟೆ: ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ

ಸಿಸಿಬಿ ಭರ್ಜರಿ ಬೇಟೆ: ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಡ್ರ್ಯಾಗ್ ಮಾಫಿಯಾವನ್ನು ಬೇಧಿಸಿದ್ದಾರೆ. ಮಾದಕದ್ರವ್ಯ ನಿಗ್ರಹದಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್​ಗಳನ್ನು ಸೆರೆಹಿಡಿದಿದ್ದಾರೆ. ಬಂಧಿತರನ್ನು ನೈಜೀರಿಯಾ ಮೂಲದ ಎಸ್ಸೋ ಜರ್ಮನ್, ಜಾನ್ ಚುಕುವಾ ಎಂದು ಗುರುತಿಸಲಾಗಿದೆ.ಈ ಹಿಂದೆಯೂ ಕೂಡ ಡ್ರಗ್ ಮಾರಾಟ ಆರೋಪದಲ್ಲಿ ಈ ಆರೋಪಿಗಳು ಜೈಲು ಸೇರಿದ್ದರು. ಬಿಡುಗಡೆಯಾದ ನಂತರವೂ ದಂಧೆಯನ್ನು ಮುಂದುವರಿಸಿರುವ ಬಗ್ಗೆ ಮಾಹಿತಿ ಕಲೆಹಾಕಿದ ಸಿಸಿಬಿ ಪೊಲೀಸರು ಈ ಆರೋಪಿಗಳ ಬಗ್ಗೆ ನಿಗಾ ವಹಿಸಿದ್ದರು. ಕೆ.ಆರ್.ಪುರಂ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸಂದರ್ಭದಲ್ಲೇ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನುಸೆರೆಹಿಡಿದಿದ್ದಾರೆ.ಆರೋಪಿಗಳಿಂದ ಸುಮಾರು 17 ಲಕ್ಷ ರೂಪಾಯಿ ಮೌಲ್ಯದ 108 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ....
‘ಎಲ್ಲದಕ್ಕೂ ಬಂದೇ ಅಸ್ತ್ರ ಆಗಬಾರದು’: ಮಾ.22ರ ‘ಕರ್ನಾಟಕ ಬಂದ್’ಗೆ ಕರವೇ ಬೆಂಬಲ ಇಲ್ಲ

‘ಎಲ್ಲದಕ್ಕೂ ಬಂದೇ ಅಸ್ತ್ರ ಆಗಬಾರದು’: ಮಾ.22ರ ‘ಕರ್ನಾಟಕ ಬಂದ್’ಗೆ ಕರವೇ ಬೆಂಬಲ ಇಲ್ಲ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ತುಮಕೂರು: ಮರಾಠಿಗರ ದೌರ್ಜನ್ಯ ಖಂಡಿಸಿ ಕನ್ನಡ ಸಂಘಟನೆಗಳ ಒಕ್ಕೂಟ ಮಾರ್ಚ್ 22ರಂದು ಕರೆ ನೀಡಿರುವ ಬಂದ್'ಗೆ ತಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾಯಾಯಣಗೌಡ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲದಕ್ಕೂ ಬಂದೇ ಅಸ್ತ್ರ ಆಗಬಾರದು ಎಂದು ಪ್ರತಿಪಾದಿಸಿದರು.ಕೆಪಿಎಸ್ಸಿ ಅಭ್ಯರ್ಥಿಗಳು ಹಾಗೂ ಇತರ ಪರೀಕ್ಷೆ ಬರೆಯುವವರಿಗೆ ಬಹಳ ತೊಂದರೆ ಆಗಿದೆ. ಹಾಗಾಗಿ ಅವರ ಜೊತೆ ನಾನು ಇರಬೇಕಾಗಿದೆ ಎಂದಿರುವ ನಾರಾಯಣಗೌಡ, ಆ ಬಂದ್ ಗೆ ನನ್ನ ಬೆಂಬಲ ಇಲ್ಲ. ಎಲ್ಲದಕ್ಕೂ ಬಂದೇ ಅಸ್ತ್ರ ಆಗಬಾರದು, ಕೊನೆಯ ಬ್ರಹ್ಮಾಸ್ತ್ರ ಬಂದ್ ಆಗಬೇಕು ಎಂದರು.ಎಸ್ಸೆಸೆಲ್ಸಿ ಪರೀಕ್ಷೆ ಮುಂದೂಡುವುದು ಸರಿಯಲ್ಲ. ಇದನ್ನು ಹಿರಿಯ ಹೋರಾಟಗಾರ ವಾಟಾಲ್ ನಾಜರಾಜು ಅವರು ಅರಿತುಕೊಳ್ಳಬೇಕು ಎಂದವರು ಹೇಳಿದರು....
ಶೂನ್ಯ ಸಾಧನೆ ತೋರಿದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಶೂನ್ಯ ಸಾಧನೆ ತೋರಿದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಶೂನ್ಯ ಸಾಧನೆ ತೋರಿದ್ದರೂ, ನಾವು ಚಾಂಪಿಯನ್‌ ಎಂದು ಕಾಂಗ್ರೆಸ್‌ ಸರ್ಕಾರ ಹೇಳಿಕೊಂಡಿದೆ. ರಾಜ್ಯಪಾಲರ ಅಧಿಕಾರಗಳನ್ನು ಕಿತ್ತುಕೊಂಡು ಈಗ ಅವರ ಮೂಲಕವೇ ಸಾಧನೆ ಮಾಡಿದ್ದೇವೆ ಎಂದು ಸುಳ್ಳು ಹೇಳಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಭಾಷಣದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್‌.ಅಶೋಕ, ಅಭಿವೃದ್ಧಿ ಶೂನ್ಯವಾದ ಕಾಂಗ್ರೆಸ್‌ ಸರ್ಕಾರ ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸಿದೆ. ಅಭಿವೃದ್ಧಿ ಹಾಗೂ ವಿಕಾಸ ಎಂಬ ಮಾತನ್ನು ಅವರ ಬಾಯಲ್ಲಿ ಹೇಳಿಸಿದ್ದಾರೆ. ಕಾಂಗ್ರೆಸ್‌ ನಾಯಕರ ಜೇಬು ತುಂಬಿದೆ, ಕಾಂಗ್ರೆಸ್‌ ಶಾಸಕರ ಮನೆ ತುಂಬಿದೆಯೇ ಹೊರತು ರಾಜ್ಯದ ಅಭಿವೃದ್ಧಿ ಆಗಿಲ್ಲ. ರಾಜ್ಯದ ಆರ್ಥಿಕ ಸ್ಥಿತಿ ಅಧೋಗತಿಗೆ ಹೋಗಿದೆ. ರಾಜ್ಯಪಾಲರನ್ನು ಹೀಯಾಳಿಸುವ ಮಾತಾಡಿ, ಅವರ ಅಧಿಕಾರಗಳನ್ನು ಕಿತ್ತುಕೊಂಡು, ಈಗ ಅವರ ಕೈಯಲ್ಲೇ ನಾವೇ ನಂ.1 ಎಂಬ ರೀತಿಯಲ್ಲಿ ಹೇಳಿಸಲಾಗಿದೆ ಎಂದು ದೂರಿದರು.ಆರೋಗ್ಯ ಕೈಗೆಟುಕುತ್ತಿದೆ ಎನ್ನಲಾಗಿದೆ. ಆದರೆ ಸರ್ಕಾ...
“ಕಲಾವಿದರು ಯಾರ ಸ್ವತ್ತೂ ಅಲ್ಲ, ಪಕ್ಷಗಳ ಕಾರ್ಯಕರ್ತರೂ ಅಲ್ಲ”

“ಕಲಾವಿದರು ಯಾರ ಸ್ವತ್ತೂ ಅಲ್ಲ, ಪಕ್ಷಗಳ ಕಾರ್ಯಕರ್ತರೂ ಅಲ್ಲ”

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಕಲಾವಿದರ ನೆಟ್ ಬೋಲ್ಟ್ ಟೈಟ್ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, "ಕಲಾವಿದರು ಯಾರ ಸ್ವತ್ತೂ ಅಲ್ಲ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೂ ಅಲ್ಲ" ಎಂದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ 'X'ನಲ್ಲಿ ಬರೆದುಕೊಂಡಿರುವ ಅಶೋಕ್, ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಅವರು ಡಿಕೆಶಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಸಮಾಜದಲ್ಲಿ ಎಲ್ಲರೂ ತಮಗೆ ಮತ್...
ಮೈಸೂರಿನ 150 ಎಕರೆ ಜಾಗದಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ: ಚಿಗುರಿದ ಕನಸು

ಮೈಸೂರಿನ 150 ಎಕರೆ ಜಾಗದಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ: ಚಿಗುರಿದ ಕನಸು

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ಗಳ‌ ಮೇಲೆ ಆಯೋಜಿಸಿದ್ದ ವರ್ಣರಂಜಿತ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ, ಮಾತನಾಡಿದ ಅವರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದರು.ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇ...