Wednesday, August 12

ವಿದೇಶ

ಇಲಾಖೆಗಳ ವಿದ್ಯುತ್ ಬಿಲ್ ಪಾವತಿಗೂ ಸರ್ಕಾರದ ಬಳಿ ಹಣ ಇಲ್ಲ? ಬಿಜೆಪಿ ವ್ಯಂಗ್ಯ

ಇಲಾಖೆಗಳ ವಿದ್ಯುತ್ ಬಿಲ್ ಪಾವತಿಗೂ ಸರ್ಕಾರದ ಬಳಿ ಹಣ ಇಲ್ಲ? ಬಿಜೆಪಿ ವ್ಯಂಗ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಿದ್ಯುತ್ ಕ್ಷೇತ್ರದಲ್ಲಿ ರಾಜ್ಯದ ಹೀನಾಯ ಸ್ಥಿತಿ ಬಗ್ಗೆ ಪ್ರತಿಪಕ್ಷ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡುತ್ತ ಪರಿಸ್ಥಿತಿಯತ್ತ ಬೊಟ್ಟು ಮಾಡಿದ ವಿಜಯೇಂದ್ರ, ರಾಜ್ಯದ ವಿವಿಧ ಇಲಾಖೆಗಳ ಕಚೇರಿಗಳಿಂದ ₹6 ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಪಾವತಿ ಬಾಕಿ ಇದ್ದು, ಅದರ ವಸೂಲಿಗೆ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ ಎಂದು ಸ್ವತಃ ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ ಎಂದು ಗಮನಸೆಳೆದರು.ರಾಜ್ಯದ ಯಾವ ಇಲಾಖೆಗಳಲ್ಲೂ ವಿದ್ಯುತ್ ಬಿಲ್ ಪಾವತಿಸುವಷ್ಟೂ ಹಣ ಇಲ್ಲದೆ ಇರುವ ದಾರುಣ ಪರಿಸ್ಥಿತಿಗೆ ತಲುಪಿರುವುದಕ್ಕೆ ಯಾರು ಹೊಣೆಗಾರರು ಎನ್ನುವುದನ್ನು ಮುಖ್ಯಮಂತ್ರಿಗಳೇ ತಿಳಿಸಬೇಕಿದೆ ಎಂದು ವಿಜಯೇಂದ್ರ ಹೇಳಿದರು.ರಾಜ್ಯದ ವಿವಿಧ ಇಲಾಖೆಗಳ ಕಚೇರಿಗಳಿಂದ ₹6 ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಪಾವತಿ ಬಾಕಿ ಇದ್ದು, ಅದರ ವಸೂಲಿಗೆ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ ಎಂದು ಸ್ವತಃ ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ಅರ್ಥಾತ್ ರಾಜ್ಯದ ಯಾವ ಇಲಾಖ...
ಅನ್ನಭಾಗ್ಯ: ಇನ್ನುಮುಂದೆ ಹಣಕ್ಕೆ ಬದಲು ಅಕ್ಕಿ

ಅನ್ನಭಾಗ್ಯ: ಇನ್ನುಮುಂದೆ ಹಣಕ್ಕೆ ಬದಲು ಅಕ್ಕಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯಸರ್ಕಾರ ಇನ್ನುಮುಂದೆ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ.ಈ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಆಹಾರ ಸಚಿವ ಕೆ.ಹೆಚ್​ ಮುನಿಯಪ್ಪಇಷ್ಟು ದಿನಗಳ ಕಾಲ ಹೆಚ್ಚುವರಿ 5 ಕೆಜಿ ಅಕ್ಕಿಗೆ ಪರ್ಯಾಯವಾಗಿ 170 ರೂಪಾಯಿ ಹಣ ನೀಡಲಾಗುತ್ತಿತ್ತು. ಇನ್ನು ಮುಂದೆ 10 ಕೆಜಿ ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.ಈ ತಿಂಗಳಿಂದಲೇ ಅಕ್ಕಿಯನ್ನು ನೀಡಲಾಗುತ್ತದೆ ಎಂದವರು ತಿಳಿಸಿದರು. ಕೇಂದ್ರ ಸರ್ಕಾರವು 5 ಕೆಜಿ ಅಕ್ಕಿನೀಡಲು ಒಪ್ಪಿದೆ ಎಂದ ಅವರು, ತಿಂಗಳಿಗೆ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅವಶ್ಯಕತೆ ಇದೆ. ವರ್ಷಕ್ಕೆ 27.48 ಲಕ್ಷ ಮೆಟ್ರಿಕ್ ಅಕ್ಕಿ ಅವಶ್ಯಕತೆ ಇದೆ. ರಾಜ್ಯದ ಪರಿಸ್ಥಿತಿ ಬಗ್ಗೆ ಕೇಂದ್ರಕ್ಕೆ ವಿವರಿಸಲಾಗಿದ್ದು, ನಮ್ಮ ಮನವಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸ್ಪಂದಿಸಿದ್ದಾರೆ ಎಂದು ಸಚಿವ ಮುನಿಯಪ್ಪ ಹೇಳಿದರು....
ಕಾರವಾರ ನೌಕಾ ನೆಲೆಯ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ; ಮೂವರ ಬಂಧನ

ಕಾರವಾರ ನೌಕಾ ನೆಲೆಯ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ; ಮೂವರ ಬಂಧನ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ನವದೆಹಲಿ: ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಆರೋಪದಲ್ಲಿ ರಾಷ್ಟ್ರೀಯ ತನಿಕಾ ತಂಡ NIA ಮೂವರನ್ನು ಬಂಧಿಸಿದೆ.ಭಾರತದ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿ ಪಾಕಿಸ್ತಾನ ಮೂಲದ ಗುಪ್ತಚರ ಅಧಿಕಾರಿಗಳಿಗೆ ನೀಡಿದ ಆರೋಪದಲ್ಲಿ ವೇತನ್ ಲಕ್ಷ್ಮಣ್ ತಂಡೇಲ್, ಅಕ್ಷಯ್ ರವಿ ನಾಯಕ್ ಹಾಗೂ ಅಭಿಲಾಷ್ ಎಂಬವರನ್ನು ಬಂಧಿಸಲಾಗಿದೆ ಎಂದು NIA ಮೂಲಗಳು ತಿಳಿಸಿವೆ.ಕಾರವಾರ ನೌಕಾ ನೆಲೆ ಮತ್ತು ಕೊಚ್ಚಿ ನೌಕಾ ನೆಲೆಯಲ್ಲಿರುವ ಭಾರತೀಯ ರಕ್ಷಣಾ ಸಂಸ್ಥೆಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಈ ಆರೋಪಿಗಳು ಸೋರಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾರವಾರ ಹಾಗೂ ಕೊಚ್ಚಿಯಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು NIA ಅಧಿಕಾರಿಗಳು ತಿಳಿಸಿದ್ದಾರೆ....
ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ‘ಬಿ ಖಾತಾ’: ಸಿಎಂ

ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ‘ಬಿ ಖಾತಾ’: ಸಿಎಂ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: 'ಬಿ ಖಾತಾ' ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ಬಿ ಖಾತಾ ನೀಡುತ್ತಿದೆ. ಮುಂದೆ ಎಲ್ಲಿಯೂ ಅನಧಿಕೃತ ಬಡಾವಣೆಗಳು ತಲೆಯೆತ್ತಬಾರದು, ಎತ್ತಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ನಿಶ್ಚಿತ ಎಂದವರು ತಿಳಿಸಿದ್ದಾರೆ. " ಬಿ ಖಾತಾ" ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ. ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ಬಿ ಖಾತಾ ನೀಡುತ್ತಿದೆ. ಮುಂದೆ ಎಲ್ಲಿಯೂ ಅನಧಿಕೃತ ಬಡಾವಣೆಗಳು ತಲೆಯೆತ್ತಬಾರದು, ಎತ್ತಿದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ನಿಶ್ಚಿತ. pic.twitter.com/HlsyqED95L— Siddaramaiah (@siddaramaiah) February 18, 2025...
ಬಂದವರಿಗೂ ಹರಸಿದವರಿಗೂ ಕೃತಜ್ಞತೆ ಸಲ್ಲಿಸಿದ ಡಾಲಿ

ಬಂದವರಿಗೂ ಹರಸಿದವರಿಗೂ ಕೃತಜ್ಞತೆ ಸಲ್ಲಿಸಿದ ಡಾಲಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಬೆಂಗಳೂರು: ಹಸಮಾನೇ ಏರಿ ಹೊಸ ಬದುಕು ಆರಂಭಿಸಿರುವ ನಟ ಡಾಲಿ ಧನಂಜಯ ಮತ್ತು ಪತ್ನಿ ಅವರು ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ. ನವ ವಿವಾಹಿತರನ್ನು ಕಂಡು ಅಭಿಮಾನಿ ಬಂದುಗಳು ಸಂತಸಗೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿರುವ ನಟ ಡಾಲಿ ಧನಂಜಯ ಮದುವೆಗೆ ಬಂದು ಹರಸಿದ, ಬರಲಾಗದೆ ಇದ್ದರು ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃದಯಪೂರ್ವಕ ನಮನಗಳು ಎಂದಿದ್ದಾರೆ.ಯಾವುದೇ ತೊಂದರೆ ಆಗದೆ ಸಮಾರಂಭ ಚೆನ್ನಾಗಿ ಆಗುವಲ್ಲಿ ಕುಟುಂಬದ ಜೊತೆ ಸ್ನೇಹಿತರು, ನೆಂಟರು, ಇಷ್ಟರು, ಮಾಧ್ಯಮ, ಪೊಲೀಸ್ ಇಲಾಖೆ, ಕಾರ್ಮಿಕರು, ಅಭಿಮಾನಿಗಳಾದಿಯಾಗಿ ಸಾಕಷ್ಟು ಜನರ ಶ್ರಮವಿದೆ. ಎಲ್ಲರಿಗೂ ತುಂಬು ಅಭಿಮಾನದ ಕೃತಜ್ಞತೆಗಳು ಎಂದಿದ್ದಾರೆ.ತುಂಬ ಜನ ಸೇರಿದ್ದರಿಂದ, ಕೆಲವರಿಗೆ ನಮ್ಮನ್ನು ತಲುಪಲು ತೊಂದರೆಯುಂಟಾಗಿದ್ದಲ್ಲಿ, ತಲುಪಲು ಸಾಧ್ಯವಾಗಿರದಿದ್ದಲ್ಲಿ ದಯವಿಟ್ಟು ಕ್ಷಮೆಯಿರಲಿ, ಖಂಡಿತವಾಗಿಯೂ ಇನ್ನಷ್ಟು ಒಳ್ಳೆ ವಿಷಯಗಳೊಂದಿಗೆ ಮತ್ತೆ ಸಿಗುತ್ತೇವೆ. ಆಶೀರ್ವಾದವಿರಲಿ ಎಂದವರು ವಿನಂತಿಸಿಕೊಂಡಿದ್ದಾರೆ.ಇಷ್ಟೆಲ್ಲದರ ಮಧ್ಯೆ ಬಂದು ಹರಸಿದ ನನ್ನ ಚಿತ್ರರಂಗದ ಗೆಳೆಯರು , ತಾರೆಯರು, ಕಾರ್ಮಿಕರು, ಹಾಗೂ ನ...
ಜೂನ್ ಅಥವಾ ಜುಲೈನಲ್ಲಿ ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಸಾಧ್ಯತೆ; ಹೈಕೋರ್ಟಿಗೆ ಸರ್ಕಾರದ ಮಾಹಿತಿ

ಜೂನ್ ಅಥವಾ ಜುಲೈನಲ್ಲಿ ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಸಾಧ್ಯತೆ; ಹೈಕೋರ್ಟಿಗೆ ಸರ್ಕಾರದ ಮಾಹಿತಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಮೇ ತಿಂಗಳ ಬಳಿಕ ನಡೆಯುವ ಸಾಧ್ಯತೆಗಳಿವೆ. ಈ ಸಂಬಂಧ ರಾಜ್ಯ ಸರ್ಕಾರ ಹೈಕೋರ್ಟಿಗೆ ಮಾಹಿತಿ ನೀಡಿದೆ.3 ವರ್ಷಗಳಾದರೂ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ‌ ಅರ್ಜಿ ಸೋಮವಾರ ಹೈಕೋರ್ಟಿನಲ್ಲಿ ವಿಚಾರಣೆಗೆ ಬಂದಿದೆ. ಮೂರು ವರ್ಷಗಳಾದರೂ ಸಹ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಅವರು ಹೈಕೋರ್ಟ್​ ಗಮನಸೆಳೆದರು. ಸರ್ಕಾರವು ಮೀಸಲಾತಿ ಪಟ್ಟಿ ನೀಡಿದರೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ನಿಲುವನ್ನು ತಿಳಿಸಿದರು.ಈ ವೇಳೆ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಮೇ ತಿಂಗಳ ಬಳಿಕ ಎಲೆಕ್ಷನ್ ನಡೆಸುವುದಾಗಿ ಮಾಹಿತಿ ನೀಡಿದರು. ಈ ಕುರಿತು ಹೇಳಿಕೆ ದಾಖಲಿಸಿಕೊಂಡ ಹೈಕೋರ್ಟ್ ಅರ್ಜಿಯನ್ನು ಇತ್ಯರ್ಥಪಡಿಸಿತು.ಈ ನಡುವೆ, ಮೇ ಅಂತ್ಯದೊಳಗೆ ಸರ್ಕಾರವು ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ನೀಡಿದರೆ, ಜೂನ್ ಅಥವಾ ಜುಲೈ ತಿಂಗಳಲ್...
ಮಾರ್ಚ್​ 7ರಂದು ಬಜೆಟ್ ಮಂಡನೆ: ಸಿಎಂ ಮಾಹಿತಿ

ಮಾರ್ಚ್​ 7ರಂದು ಬಜೆಟ್ ಮಂಡನೆ: ಸಿಎಂ ಮಾಹಿತಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಬಜೆಟ್ ಮುಂದಿನ ತಿಂಗಳ 7ರಂದು ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು ಅವರು ಸೋಮವಾರ ವಿಧಾನಸೌಧದಲ್ಲಿ ತಿಳಿಸಿದ್ದಾರೆ.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘದ ಮುಖಂಡರುಗಳೊಂದಿಗೆ ಆಯವ್ಯಯ ಸಂಬಂಧ ಪೂರ್ವಭಾವಿ ಸಭೆ ನಡೆಸಿದರು. ರೈತರ ಬೇಡಿಕೆಗಳನ್ನು ಆಲಿಸಿದ ಮುಖ್ಯಮಂತ್ರಿ ಅಗತ್ಯ ಮಾಹಿತಿ ಸಂಗ್ರಹಿಸಿದರು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮುಂಬರುವ ಬಜೆಟ್ ಮಂಡನೆ ಬಗ್ಗೆ ಮಾಹಿತಿ ನೀಡಿದರು. ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು, ಮಾರ್ಚ್​ 7ರಂದು ಬಜೆಟ್ ಮಂಡಿಸುವುದಾಗಿ ತಿಳಿಸಿದರು....
ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು

ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: ಕುಟುಂಬದ ನಾಲ್ವರು ಸಾವಿಗೆ ಶರಣಾಗಿರುವ ದಾರುಣ ಘಟನೆ ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್​​ನಲ್ಲಿ ನಡೆದಿದೆ.ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಹಾಗೂ ಕುಶಾಲ್ ​(15) ಮೃತ ದುರ್ದೈವಿಗಳು. ತನ್ನ ಕುಟುಂಬ ಸದಸ್ಯರಿಗೆ ವಿಷ ವುಣಿಸಿ ನಂತರ ಚೇತನ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ.ಚೇತನ್ ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಹಣಕಾಸಿನ ಸಮಸ್ಯೆ ಬಗ್ಗೆ ಅದರಲ್ಲಿ ಬರೆಯಲಾಗಿದೆ ಎನ್ನಲಾಗಿದೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಮೈಸೂರು ನಗರ ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್, ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್​ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಟೀಸರ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.‘ಕಾಟೇರ’ ಸಿನಿಮಾದ ಬಿಗ್ ಸಕ್ಸಸ್ ನಂತರ ದರ್ಶನ್ ಶುರು ಮಾಡಿದ ಸಿನಿಮಾ ‘ದಿ ಡೆವಿಲ್’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಆದರೆ, ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಆರೋಪಿ ಆಗಿ ಜೈಲು ಸೇರಿದ್ದರು. ಹಾಗಾಗಿ ಹಲವು ತಿಂಗಳ ಕಾಲ ‘ದಿ ಡೆವಿಲ್’ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.https://www.youtube.com/watch?v=7ru18HS_934&ab_channel=SaregamaKannada...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ

ಆಧ್ಯಾತ್ಮ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವಿಶೇಷ
ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮುಜರಾಯಿ ಸಚಿವರು ರಾಮಲಿಂಗಾ ರೆಡ್ಡಿ ಮಹತ್ವದ ಕ್ರಮಕ್ಕೆ ಮುನ್ನುಡಿ ಬರೆದಿದ್ದಾರೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಹಂತಹಂತವಾಗಿ ಅನುಷ್ಠಾನಗೊಳಿಸಿ, ಭಕ್ತಾಧಿಗಳಿಗೆ ಸಮಗ್ರ ಸೌಲಭ್ಯ ಒದಗಿಸುವ ಹಾಗೂ ಶ್ರೀ ಕ್ಷೇತ್ರವನ್ನು ಮತ್ತಷ್ಟು ಸಾರ್ವಜನಿಕ ಸ್ನೇಹಿ ಯಾಗಿಸಲು ಮಾಸ್ಟರ್ ಪ್ಲಾನ್ ರೂಪಿಸಲು ಸಭೆ ನಡೆಸಿದ ಸಚಿವರು, ಹೊಸದಾಗಿ ಸಮಿತಿ ರಚಿಸಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997 ಕಲಂ 77 ರನ್ವಯ 15 ಜನ ಅಧಿಕಾರಿ/ಅಧಿಕಾರೇತರ ಸದಸ್ಯರನ್ನು ಮತ್ತು ಹೆಚ್ಚುವರಿಯಾಗಿ 3  ಸದಸ್ಯರನ್ನು ಒಳಗೊಂಡಂತೆ ಮೇಲ್ವಿಚಾರಣಾ ಸಮಿತಿ ರಚಸಿ ಆದೇಶಿಸಲಾಗಿದೆ. 15.02.2025 ರಂದು ನಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮಾಸ್ಟರ್ ಪ್ಲಾನ್ ಯೋಜನೆಯ ಮೇಲ್ವಿಚಾರಣೆ ಸಮಿತಿ ಸಭೆಯಲ್ಲಿ ಈ‌ ಕೆಳಕಂಡ ತೀರ್ಮಾನಗಳನ್ನು‌ ತೆಗೆದುಕೊಳ್ಳಲಾಗಿದೆ. ಮುಜರಾಯಿ ಇಲಾಖೆ ಆಯುಕ್ತರು ಈ ಸಮಿತಿಗೆ...