Sunday, August 9

ವಿದೇಶ

ಸಿಎಂ ಬದಲಾವಣೆ ಇಲ್ಲ: ಡಿಕೆಶಿ ಬೆಂಬಲಿಗರಿಗೆ ಹೈಕಮಾಂಡ್ ಸಂದೇಶ?

ಸಿಎಂ ಬದಲಾವಣೆ ಇಲ್ಲ: ಡಿಕೆಶಿ ಬೆಂಬಲಿಗರಿಗೆ ಹೈಕಮಾಂಡ್ ಸಂದೇಶ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ವದಂತಿಗಳಿಗೆ ಕೊನೆಗೂ ಹೈಕಮಾಂಡ್ ತೆರೆ ಎಳೆದಿದೆ. ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಗೊಂದಲಗಳಿರುವುದು ನಿಜ, ಆದರೆ ಅವು ಶೀಘ್ರದಲ್ಲೇ ಬಗೆಹರಿಯಲಿವೆ ಎಂದರು. “ನಾನು ಸಿಎಂ ಆಗಬೇಕು ಎಂದು ಕೆಲವರು ಹೇಳುತ್ತಾರೆ, ಮಾಧ್ಯಮವೂ ಈ ವಿಷಯವನ್ನು ಹೆಚ್ಚಾಗಿ ಚರ್ಚಿಸುತ್ತದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧಾಂತ ಮತ್ತು ದಶಕಗಳ ಸೇವೆ ಮುಖ್ಯ,” ಎಂದು ಹೇಳಿದರು.ಪ್ರಸ್ತುತ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಈಗ ಸಿಎಂ ಬದಲಾವಣೆ ಕುರಿತು ಯಾವುದೇ ಚರ್ಚೆ ಇಲ್ಲ ಎಂದು ಖರ್ಗೆ ತಿಳಿಸಿದರು.ಒಂದು ವೇಳೆ ಭವಿಷ್ಯದಲ್ಲಿ ಅಂತಹ ಪರಿಸ್ಥಿತಿ ಎದುರಾದರೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. “ಅದು ಸಮಯ ತೆಗೆದುಕೊಳ್ಳುವ ಪ್ರಕ್ರಿಯೆ...
ಬೆಂಗಳೂರಿನಲ್ಲಿ ಮಳೆ ತಂದ ಅವಾಂತರ; ಸರಣಿ ಅವಘಡಗಳಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ

ಬೆಂಗಳೂರಿನಲ್ಲಿ ಮಳೆ ತಂದ ಅವಾಂತರ; ಸರಣಿ ಅವಘಡಗಳಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬುಧವಾರ ಸುರಿದ ಭಾರೀ ಮಳೆಯ ಪರಿಣಾಮವಾಗಿ ನಗರದಲ್ಲಿ ಸಂಭವಿಸಿದ ಸರಣಿ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯ ಮೇಲ್ಚಾವಣಿ ಹಾಗೂ ಸಿಮೆಂಟ್ ಇಟ್ಟಿಗೆ ಬಿದ್ದ ಪರಿಣಾಮ ಮಂಜುನಾಥ್ ಮೃತಪಟ್ಟಿದ್ದಾರೆ. ಗಾಳಿ-ಮಳೆಯಿಂದ ಮನೆಯ ಶೀಟ್ ಕೆಳಗೆ ಬಿದ್ದಿದ್ದು, ಅದರ ಮೇಲಿಟ್ಟಿದ್ದ ಕಲ್ಲು ಮಲಗಿದ್ದ ಮಂಜುನಾಥ್ ಮೇಲೆ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಗೆ ಸ್ಥಳಾಂತರಿಸಲಾಗಿದೆ.ಇದರೊಂದಿಗೆ, ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ಪ್ರಕರಣದಲ್ಲಿ ಮಗು ಸೇರಿ 7 ಮಂದಿ ಮೃತಪಟ್ಟಿದ್ದರು. ಮೃತಪಟ್ಟವರನ್ನು ಮೊಹಮ್ಮದ್ ಅಬ್ದುಲ್ (52), ಫಯಾಜ್ ಅಹ್ಮದ್ (39), ಮುಸಾವಿರ್ ಬೇಗಂ (6), ಸ್ಮಿತಾ (47), ಲತಾ (57), ನಸೀಮುಲ್ಲಾ (19) ಹಾಗೂ ಸಲಾವುದ್ದೀನ್ ಅನ್ಸಾರಿ (36) ಎಂದು ಗುರುತಿಸಲಾಗಿದೆ.ಇನ್ನೊಂದೆಡೆ, ಯಾರಬ್ ನಗರದಲ್ಲಿ ಮಳೆಯ ವೇಳೆ ವಿದ್ಯುತ್ ಶಾಕ್ ತಗುಲಿ ವಿದ್ಯಾರ್ಥಿ ಸೈಯದ್ ಸೂಫಿಯಾನ್ ಮೃತಪಟ್ಟಿದ್ದಾರೆ. ಬೈಕ್ ಪಾರ್ಕ್ ಮಾಡುವ ವೇಳೆ ವಿದ್ಯುತ್ ಪ್ರವಹಿಸಿದ ಪರಿಣ...
ಬೌರಿಂಗ್ ಆಸ್ಪತ್ರೆ ಆವರಣ ಕುಸಿತ: ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು, ಅಧಿಕಾರಿಗಳಿಗೆ ಸಂಕಷ್ಟ

ಬೌರಿಂಗ್ ಆಸ್ಪತ್ರೆ ಆವರಣ ಕುಸಿತ: ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು, ಅಧಿಕಾರಿಗಳಿಗೆ ಸಂಕಷ್ಟ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಏಪ್ರಿಲ್ 29ರಂದು ಸುರಿದ ಭೀಕರ ಆಲಿಕಲ್ಲು ಮಳೆ ಹಾಗೂ ಗಾಳಿ-ಮಳೆಯಿಂದ ರಕ್ಷಣೆ ಪಡೆಯಲು ಬೌರಿಂಗ್ ಆಸ್ಪತ್ರೆ ಹಳೆಯ ಕಾಂಪೌಂಡ್ ಗೋಡೆಯ ಬಳಿ ನಿಂತಿದ್ದ ಪಾದಚಾರಿಗಳು ಮತ್ತು ವ್ಯಾಪಾರಿಗಳ ಮೇಲೆ ಗೋಡೆ ಏಕಾಏಕಿ ಕುಸಿದುಬಿದ್ದ ದುರಂತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಪುಟ್ಟ ಮಗು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದರು.ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ₹5 ಲಕ್ಷ ಹಾಗೂ ಪ್ರಧಾನ ಮಂತ್ರಿ ಕಾರ್ಯಾಲಯದಿಂದ ₹2 ಲಕ್ಷ ಪರಿಹಾರ ಘೋಷಿಸಲಾಗಿದೆ.ಈ ದುರಂತವನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಲೋಕಾಯುಕ್ತರು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಪ್ರಕರಣದಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ.ಸ್ಥಳ ಪರಿಶೀಲನೆಯ ಬಳಿಕ ಮಾತನಾಡಿದ ಅವರು, “ಕಾಂಪೌಂಡ್ ಗೋಡೆಯ ಅಡಿಪಾಯವೇ ದುರ್ಬಲವಾಗಿತ್ತು. ನಗರದಲ್ಲಿ ಮಳೆಯ ಸಾಧ್ಯತೆ ತಿಳಿದಿದ್ದರೂ ಇಂತಹ ಅಪಾಯಕರ ಸ್ಥಳಗಳಲ್ಲಿ ವ್ಯಾಪಾರಿಗಳಿ...
ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ನಿಷೇಧ: ಶಿಕ್ಷಣ ಇಲಾಖೆ ಸುತ್ತೋಲೆ

ಶಾಲೆಗಳಲ್ಲಿ ಅಶ್ಲೀಲ ಹಾಡುಗಳಿಗೆ ನೃತ್ಯ ನಿಷೇಧ: ಶಿಕ್ಷಣ ಇಲಾಖೆ ಸುತ್ತೋಲೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು:ಶಾಲೆ ಗಳು ಮತ್ತು ಕಾಲೇಜುಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು, ವಾರ್ಷಿಕೋತ್ಸವಗಳಲ್ಲಿ ವಿದ್ಯಾರ್ಥಿಗಳು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (School Education and Literacy Department, Karnataka) ಮಹತ್ವದ ಸುತ್ತೋಲೆ ಹೊರಡಿಸಿದೆ.ಸುತ್ತೋಲೆಯಲ್ಲಿ, “ಅಶ್ಲೀಲ ಹಾಡುಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಜೊತೆಗೆ ಶಿಸ್ತಿನ ಅಭಾವ ಉಂಟಾಗುವ ಸಾಧ್ಯತೆ ಇದೆ ಹಾಗೂ ಶಿಕ್ಷಣ ಸಂಸ್ಥೆಗಳ ಗೌರವಕ್ಕೂ ಧಕ್ಕೆ ಉಂಟಾಗುತ್ತದೆ” ಎಂದು ಇಲಾಖೆ ಸ್ಪಷ್ಟಪಡಿಸಿದೆ.ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಇಂತಹ ಚಟುವಟಿಕೆಗಳನ್ನು ತಡೆಯಲು ಜಾಗೃತಿ ಮೂಡಿಸುವಂತೆ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.ಯಾವುದೇ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಅಶ್ಲೀಲ ಹಾಡುಗಳಿಗೆ ನೃತ್ಯ ಮಾಡಲು ಪ್ರೇರೇಪಿಸಿದರೆ, ಆ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಆಡಳಿತ ಮಂಡಳಿಯ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖೆ...
ಎಸ್‌ಸಿ ಒಳ ಮೀಸಲಾತಿ ಜಾರಿ ಬೆನ್ನಲ್ಲೇ 56,432 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಎಸ್‌ಸಿ ಒಳ ಮೀಸಲಾತಿ ಜಾರಿ ಬೆನ್ನಲ್ಲೇ 56,432 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ, 56,432 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಲು ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ (DPAR) ಆದೇಶ ಹೊರಡಿಸಿದೆ.ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ತೀರ್ಮಾನ ಕೈಗೊಳ್ಳಲಾಗಿತ್ತು. ಅದರಂತೆ ಎಸ್‌ಸಿ ಸಮುದಾಯಕ್ಕೆ ನಿಗದಿಪಡಿಸಿದ 15% ಮೀಸಲಾತಿಯನ್ನು ‘ಎ’, ‘ಬಿ’, ‘ಸಿ’ ವರ್ಗಗಳಾಗಿ ವಿಭಜಿಸಿ ಕ್ರಮವಾಗಿ 5.25%, 5.25% ಮತ್ತು 4.5% ಮೀಸಲಾತಿ ನೀಡಲಾಗಿದೆ.ಡಿಪಿಎಆರ್ ಅಧೀನ ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ, ಕರ್ನಾಟಕ ಹೈಕೋರ್ಟ್ (Karnataka High Court) ಮಧ್ಯಂತರ ಆದೇಶದ ಅನುಸಾರವಾಗಿ ನೇಮಕಾತಿ ಮತ್ತು ಪ್ರವೇಶ ಪ್ರಕ್ರಿಯೆಗಳನ್ನು ಮುಂದುವರಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ. ಅಂತಿಮ ತೀರ್ಪಿಗೆ ಒಳಪಟ್ಟಂತೆ ಈ ಕ್ರಮ ಜಾರಿಯಾಗಲಿದೆ.ವರ್ಗ ‘ಸಿ’ ಮೀಸಲಾತಿಯೊಳಗೆ, 20% ಹುದ್ದೆಗಳು ಎಸ್‌ಸಿ ಸಮುದಾಯದ 59 ಅತ್ಯಂತ ಹಿಂದುಳಿದ ಉಪಜಾತಿಗಳಿಗೆ ಮೀಸಲಿಡಲಾಗುತ್ತದೆ. ಅರ್ಹ ಅಭ್ಯರ್...
‘ವಿಳಂಬವೇ ಭ್ರಷ್ಟಾಚಾರದ ಮೂಲ’; ಕಡತಗಳ ತ್ವರಿತ ವಿಲೇವಾರಿಗೆ ಸೂಚನೆ

‘ವಿಳಂಬವೇ ಭ್ರಷ್ಟಾಚಾರದ ಮೂಲ’; ಕಡತಗಳ ತ್ವರಿತ ವಿಲೇವಾರಿಗೆ ಸೂಚನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ಆಡಳಿತ ಸೇವಾ (KAS) ಅಧಿಕಾರಿಗಳ ಬಡ್ತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ. ಬಡ್ತಿಗಳಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಕ್ರಿಯಾಶೀಲರಾಗಿದ್ದು, ಶೀಘ್ರದಲ್ಲೇ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು. ಜೊತೆಗೆ, 33% ಅಧಿಕಾರಿಗಳನ್ನು ಸಿಇಒಗಳಾಗಿ ನೇಮಿಸುವ ದಿಶೆಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.ಬೆಂಗಳೂರಿನಲ್ಲಿ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ ಸಂಘದ ನವೀಕೃತ ಕಟ್ಟಡ ಉದ್ಘಾಟಿಸಿದ ಅವರು, ಕಡತ ವಿಲೇವಾರಿ ವಿಷಯದಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. “ಯಾವುದೇ ಕಾರಣಕ್ಕೂ ಕಡತಗಳ ಪ್ರಕ್ರಿಯೆಯಲ್ಲಿ ವಿಳಂಬ ಮಾಡಬಾರದು. ವಿಳಂಬವೇ ಭ್ರಷ್ಟಾಚಾರದ ಮೂಲ” ಎಂದು ಎಚ್ಚರಿಸಿದರು.ಕೆಎಎಸ್ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆ ಮತ್ತು ಸಮಗ್ರತೆಯಿಂದ ನಿರ್ವಹಿಸಬೇಕು ಎಂದು ತಿಳಿಸಿದ ಸಿಎಂ, ಸಂಘದ ನೂರು ವರ್ಷಗಳ ಇತಿಹಾಸವನ್ನು ಉಲ್ಲೇಖಿಸಿ ನಾಲ್ವಡಿ ಕೃಷ್ಣರಾಜ ಒಡೆಯರ್ (Nalvadi Krishnaraja Wadiyar) ಅವರ ಆಡಳಿತ ಸಾಧನೆಗಳನ್ನು ಸ್ಮರಿಸ...
ಮತ್ತೆ ಸಿಎಂ ಕುರ್ಚಿ ಚರ್ಚೆ ಜೋರು; ಸಿದ್ದು ಬೆಂಬಲಿಗ ಶಾಸಕರ ದೆಹಲಿ ಯಾತ್ರೆ?

ಮತ್ತೆ ಸಿಎಂ ಕುರ್ಚಿ ಚರ್ಚೆ ಜೋರು; ಸಿದ್ದು ಬೆಂಬಲಿಗ ಶಾಸಕರ ದೆಹಲಿ ಯಾತ್ರೆ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕೋಲಾರ: ರಾಜ್ಯ ರಾಜಕೀಯದಲ್ಲಿ ಮತ್ತೆ ಸಿಎಂ ಕುರ್ಚಿ ಚರ್ಚೆ ಜೋರಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H. D. Kumaraswamy), ಮುಖ್ಯಮಂತ್ರಿ ಹುದ್ದೆಗಾಗಿ 40ರಿಂದ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ರಾಜ್ಯದಲ್ಲಿ ಕುಡಿಯುವ ನೀರು ಸಮಸ್ಯೆ, ತೀವ್ರ ಬಿಸಿಲು – ಜನ ಕಷ್ಟದಲ್ಲಿದ್ದಾರೆ. ಆದರೆ ಸರ್ಕಾರಕ್ಕೆ ಇದರ ಬಗ್ಗೆ ಯಾವುದೇ ಚಿಂತನೆ ಇಲ್ಲ” ಎಂದು ಟೀಕಿಸಿದರು.ಅಳಂದದ ಹಿರಿಯ ಶಾಸಕ ಬಿ.ಆರ್. ಪಾಟೀಲ್ (B. R. Patil) ಅವರ ಹೇಳಿಕೆಯನ್ನು ಉಲ್ಲೇಖಿಸಿದ ಕುಮಾರಸ್ವಾಮಿ, “ನೀರು ಸಮಸ್ಯೆ ಪರಿಹರಿಸಲು ಹಣವೇ ಇಲ್ಲ, ಪಿಡಿಓಗಳು ಲಭ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಇದೇ ಸರ್ಕಾರದ ಸ್ಥಿತಿ” ಎಂದು ಹೇಳಿದರು.ಜನಪ್ರತಿನಿಧಿಗಳು ಜನರ ಸಮಸ್ಯೆಗಳ ಕಡೆ ಗಮನ ಹರಿಸುವ ಬದಲು ಅಧಿಕಾರದ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರ...
‘ಮೆಟ್ರೋ ಚಿಕ್ಸ್’ ಪ್ರಕರಣ: ‘ಇದು ಗಂಭೀರ ಅಪರಾಧ’ ಎನ್ನುತ್ತಾ ಆರೋಪಿಯ ಅರ್ಜಿ ವಜಾ ಮಾಡಿದ ಹೈಕೋರ್ಟ್

‘ಮೆಟ್ರೋ ಚಿಕ್ಸ್’ ಪ್ರಕರಣ: ‘ಇದು ಗಂಭೀರ ಅಪರಾಧ’ ಎನ್ನುತ್ತಾ ಆರೋಪಿಯ ಅರ್ಜಿ ವಜಾ ಮಾಡಿದ ಹೈಕೋರ್ಟ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ನಮ್ಮ ಮೆಟ್ರೋ' ರೈಲುಗಳಲ್ಲಿ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ತೀರ್ಪು ನೀಡಿದೆ. ಆರೋಪಿಯ ಅರ್ಜಿಯನ್ನು ತಳ್ಳಿಹಾಕಿದ ನ್ಯಾಯಾಲಯ, ಕೃತ್ಯದ ಗಂಭೀರತೆಯನ್ನು ತೀವ್ರವಾಗಿ ಖಂಡಿಸಿದೆ.ದಿಗಂತ್ ಬಿ.ಕೆ (Diganth B.K) ಎಂಬ ಆರೋಪಿಯು ತನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ. ಆದರೆ, ನ್ಯಾಯಮೂರ್ತಿ ಎಂ. ನಾಗಪ್ರಸನ್ನ (M. Nagaprasanna) ನೇತೃತ್ವದ ಪೀಠವು ಅರ್ಜಿಯನ್ನು ವಜಾಗೊಳಿಸಿ, ಆರೋಪಿಯ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.“ಮಹಿಳೆಯರನ್ನು ಒಪ್ಪಿಗೆಯಿಲ್ಲದೆ ಅಶ್ಲೀಲವಾಗಿ ಚಿತ್ರೀಕರಿಸಿ ಅಪ್‌ಲೋಡ್ ಮಾಡುವುದು ಹೇಗೆ ಸಮ್ಮತಾರ್ಹ?” ಎಂದು ಪ್ರಶ್ನಿಸಿದ ನ್ಯಾಯಾಲಯ, ಇಂತಹ ಕೃತ್ಯಗಳು ಮಹಿಳೆಯರ ಸುರಕ್ಷತೆಗೆ ದೊಡ್ಡ ಅಪಾಯ ಎಂದು ಹೇಳಿದೆ. “ನೀವು ಯಾವ ರೀತಿಯ ವ್ಯಕ್ತಿ?” ಎಂದು ಆರೋಪಿಯನ್ನು ತರಾಟೆಗೆ ತೆಗೆದುಕೊಂಡಿದೆ.ಪ್ರಕರಣದ ವಿವರ ಪ್ರಕಾರ, “...
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಆರೋಪಿಗೆ ಶಿಕ್ಷೆ; ಕಾಂಗ್ರೆಸ್ ನಾಯಕರ ಹಳೆಯ ಟೀಕೆಗೆ ಬಿಜೆಪಿ ತರಾಟೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಆರೋಪಿಗೆ ಶಿಕ್ಷೆ; ಕಾಂಗ್ರೆಸ್ ನಾಯಕರ ಹಳೆಯ ಟೀಕೆಗೆ ಬಿಜೆಪಿ ತರಾಟೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಕ್‌ ಗೆ ನ್ಯಾಯಾಲಯ ಕಠಿಣ ಶಿಕ್ಷೆಯ ತೀರ್ಪು ಪ್ರಕಟಿಸಿದೆ. NIA ನ್ಯಾಯಾಲಯ ಆತನಿಗೆ 10 ವರ್ಷಗಳ ಕಠಿಣ ಶಿಕ್ಷೆಯ ತೀರ್ಪನ್ನು ಸೋಮವಾರ ಪ್ರಕಟಿಸಿದೆ.ಈ ತೀರ್ಪನ್ನು ಸ್ವಾಗತಿಸಿರುವ ಕರ್ನಾಟಕ ಪ್ರದೇಶ ಬಿಜೆಪಿ, ಆಡಳಿತಾರೂಢ ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಳ ಬಗ್ಗೆ ವ್ಯಂಗ್ಯವಾಡಿದೆ. 'ಅಂದು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟವನ್ನು ಕೇವಲ 'ಡೈವರ್ಶನ್ ಪಾಲಿಟಿಕ್ಸ್' ಎಂದು ಲೇವಡಿ ಮಾಡಿ ಉಗ್ರರ ಪರ ನಿಂತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕರಿಗೆ ಈಗ ಸತ್ಯದ ದರ್ಶನವಾಗಿದೆ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.ಈ ಕುರಿತಂತೆ ಸಾಮಾಜಿಕ ಮಾಧ್ಯಮ 'X' ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, 'ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಉಗ್ರ ಶಾರೀಕ್‌ನ ಕೃತ್ಯ ಸಾಬೀತಾಗಿದ್ದು, NIA ನ್ಯಾಯಾಲಯ ಆತನಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ರಾಷ್ಟ್ರೀಯ ಭದ್ರತೆಯಂತಹ ಗಂಭೀರ ವಿಚಾರದಲ್ಲೂ ಕೇವಲ ತುಷ್ಟೀಕರಣ ಮತ್ತು ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ ಪಕ್ಷದ ನೈಜ ಮುಖವಾಡ ಕಳಚಿದೆ' ಎಂದು ಬರೆದುಕೊಂ...
ಕೆಎಎಸ್ ಅಧಿಕಾರಿಗಳ ಬಡ್ತಿ ಶೀಘ್ರ: ಸಿಎಂ ಸಿದ್ದರಾಮಯ್ಯ ಭರವಸೆ