Wednesday, August 12

ವಿದೇಶ

ಮುಡಾ ಹಗರಣ ಬಗ್ಗೆ ಸಿಬಿಐ ತನಿಖೆಗ ಹೈಕೋರ್ಟ್ ನಕಾರ; ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಮುಡಾ ಹಗರಣ ಬಗ್ಗೆ ಸಿಬಿಐ ತನಿಖೆಗ ಹೈಕೋರ್ಟ್ ನಕಾರ; ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ -ಮುಡಾ ಹಗರಣ ಕುರಿತಂತೆ ತನಿಖೆಯನ್ನು ಸಿಬಿಐಗೆ ನೀಡಲು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಹೈಕೋರ್ಟ್​ನ ಧಾರವಾಡ ಪೀಠ ಪ್ರಕಟಿಸಿರುವ ತೀರ್ಪು ಗಮನಸೆಳೆದಿದೆ.ಮುಡಾ ನಿವೇಶನ ಅಕ್ರಮ ಕುರಿತಂತೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ವಿಶ್ವಾಸ ಇಲ್ಲಾವಾಗಿದ್ದು, ಸಿಬಿಐ ತನಿಖೆಗೆ ಆದೇಶ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕುರಿತಂತೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ಇಂಗ್ಲಿಷ್ ಭಾಷೆಯಲ್ಲೂ "ಉದಯ ನ್ಯೂಸ್" ಲಭ್ಯ Karnataka HC quashes plea seeking CBI probe against CM Siddaramaiah in MUDA case 3 ಲಕ್ಷ 26 ಸಾವಿರ ಮೊತ್ತದ ಜಮೀನು ಸ್ವಾಧೀನಕ್ಕೆ ಬದಲಾಗಿ ದುಬಾರಿ ನಿವೇಶನ ಹಂಚಿಕೆ ಮಾಡಲಾಗಿದೆ. ಅಸ್ತಿತ್ವದಲ್ಲೇ ಇಲ್ಲದ ಜಮೀನು ಭೂಪರಿವರ್ತನೆ ಮಾಡಲಾಗಿದೆ ಎಂದು ಆರೋಪಿಸಿದ್ದ ಸ್ನೇಹಮಯಿ ಕೃಷ್ಣ ಅವರು, ಈ ಕುರಿತ ಕ್ಯಾಬಿನೆಟ್ ಟಿಪ್ಪಣಿ, ಮುಖ್ಯ ಕಾರ್ಯದರ್ಶಿ ಟಿಪ್ಪಣಿಯೂ ಸಿಎಂ ಪತ್ನಿಗೆ ಅನುಕೂಲವಾಗುವಂತೆ ಮಾಡಲಾಗಿದೆ ಎಂದು ಹೈಕೋರ್ಟ್ ಗಮನಸೆ...
ಪೋಕ್ಸೋ ಕೇಸ್; ಯಡಿಯೂರಪ್ಪಗೆ ತುಸು ರಿಲೀಫ್​, ಆದರೆ ಪ್ರಕರಣ ರದ್ದು ಇಲ್ಲ

ಪೋಕ್ಸೋ ಕೇಸ್; ಯಡಿಯೂರಪ್ಪಗೆ ತುಸು ರಿಲೀಫ್​, ಆದರೆ ಪ್ರಕರಣ ರದ್ದು ಇಲ್ಲ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಧಾರವಾಡ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪೋಕ್ಸೋ ಪ್ರಕರಣದಲ್ಲಿ ರಿಲೀಫ್​ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಧಾರವಾಡ ಹೈಕೋರ್ಟ್ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದರೆ, ಪ್ರಕರಣ ರದ್ದು ಮಾಡಲು ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ನಿರಾಕರಿಸಿದೆ.'ಉದಯ ನ್ಯೂಸ್' ಈಗ ಇಂಗ್ಲಿಷ್ ಆವೃತ್ತಿಯಲ್ಲೂ ಲಭ್ಯ.. K'taka HC refuses to entertain Yediyurappa's plea to quash POCSO case; gives temporary reliefಸದಾಶಿವನಗರ ಪೊಲೀಸ್ ಠಾಣೆಯಲ್ಲಿ 2024ರ ಮಾರ್ಚ್ 3ರಂದು ಬಿಎಸ್​ವೈ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಗ್ಗೆ ಪೋಕ್ಸೋ ಆರೋಪ ಬಾಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಗಂಭೀರತೆ ಅರಿತ ಸರ್ಕಾರ ಈ ತನಿಖೆಯನ್ನು ಸಿಐಡಿಗೆ ವರ್ಗಾಸಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರ ಹೇಳಿಕೆಗಳನ್ನು ದಾಖಲಿಸಿತ್ತು.ಈ ನಡುವೆ, ಪ್ರಕರಣ ರದ್ದು ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ತೀರ್...
ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..

ಮತ್ತೆ ವಿವಾದದ ಸುಳಿಯಲ್ಲಿ RGUHS; ಸೆನೆಟ್ ಚುನಾವಣಾ ಅಕ್ರಮ ಬಗ್ಗೆ CBI ತನಿಖೆಗೆ CRF ಆಗ್ರಹ..

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಏನಿದು ಸಚಿವರೇ? ಸೆನೆಟ್ ಚುನಾವಣಾ ಅಕ್ರಮದ ಕೋಲಾಹಲ; ರಾಜ್ಯಪಾಲರು ಫಲಿತಾಂಶ ತಡೆಹಿಡಿದ ಬೆನ್ನಲ್ಲೇ ಸಿಬಿಐ ತನಿಖೆಗೆ ಕೋರಿ ದೂರು..ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (RGUHS) ಸೆನೆಟ್ ಚುನಾವಣೆ ಅಕ್ರಮ ಕುರಿತಂತೆ ಕೇಂದ್ರ ತನಿಖಾ ದಳ (CBI) ತನಿಖೆಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಆಗ್ರಹಿಸಿದೆ.ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಅಕ್ರಮಗಳ ಬೆನ್ನತ್ತಿರುವ ಸಿಟಿಜನ್ ಸಿಟಿಜನ್ ರೈಟ್ಸ್ ಫೌಂಡೇಷನ್, ಮೆಡಿಕಲ್ ಕಾಲೇಜುಗಳಲ್ಲಿನ ಅಕ್ರಮ ಪ್ರವೇಶ, ನರ್ಸಿಂಗ್ ಕಾಲೇಜುಗಳ ವಿಚಾರದಲ್ಲಿನ ಭ್ರಷ್ಟಾಚಾರಗಳ ವಿರುದ್ದ ಸರಣಿ ದಾವೆಗಳ ಮೂಲಕ ಕಾನೂನು ಸಮರವನ್ನು ಬಿರುಸುಗೊಳಿಸಿದೆ. ಇದೀಗ RGUHS ಸೆನೆಟ್ ಸದಸ್ಯರ ಚುನಾವಣೆ ಅಕ್ರಮ ವಿರುದ್ದ ಕಾನೂನು ಹೋರಾಟಕ್ಕಿಳಿದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಟಿಜನ್ ರೈಟ್ಸ್ ಫೌಂಡೇಷನ್ ಅಧ್ಯಕ್ಷ ಕೆ.ಎ.ಪಾಲ್ ಅವರು ಸಲ್ಲಿಸಿರುವ ದೂರು ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದೆ.ಸೆನೆಟ್ ಚುನಾವಣಾ ಅಕ್ರಮ ಆರೋಪವು ಕೋಲಾಹಲ ಸೃಷ್ಟಿಸಿದ್ದು, ರಾಜ್ಯಪಾಲರು ಫಲಿತಾಂಶವನ್ನು ತ...
ಹಂಪಿ ಕನ್ನಡ ವಿವಿ: ಭಾರತಿ ಟಿ. ಅವರಿಗೆ ಪಿಎಚ್.ಡಿ ಪ್ರಧಾನ

ಹಂಪಿ ಕನ್ನಡ ವಿವಿ: ಭಾರತಿ ಟಿ. ಅವರಿಗೆ ಪಿಎಚ್.ಡಿ ಪ್ರಧಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಹಂಪಿ: ಕನ್ನಡ ವಿಶ್ವವಿದ್ಯಾಲಯ ಹಂಪಿ, ಭಾಷಾ ನಿಕಾಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಭಾರತಿ ಟಿ. ಅವರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ.ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಆರ್. ವೆಂಕಟೇಶ ಇಂದ್ವಾಡಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ "ಆಧುನಿಕ ಕನ್ನಡ ನಾಟಕ ಸಾಹಿತ್ಯದ ಮೇಲೆ ಜನಪದ ಸಾಹಿತ್ಯದ ಪ್ರೇರಣೆ ಮತ್ತು ಪ್ರಭಾವ (1950ರ ನಂತರ ಆಯ್ದ ನಾಟಕಗಳನ್ನು ಅನುಲಕ್ಷಿಸಿ)" ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯ ಹಂಪಿ ಪ್ರಕಟಣೆಯಲ್ಲಿ ತಿಳಿಸಿದೆ....
ಮೈಕ್ರೋ ಫೈನಾನ್ಸ್‌ ಹಾವಳಿಗೆ ಮತ್ತಷ್ಟು ಬಲಿ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

ಮೈಕ್ರೋ ಫೈನಾನ್ಸ್‌ ಹಾವಳಿಗೆ ಮತ್ತಷ್ಟು ಬಲಿ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮಂಡ್ಯ: ಮೈಕ್ರೋ ಫೈನಾನ್ಸ್‌ಗಳ ಕಿರುಕುಳದಿಂದಾಗಿ ಬಡಜನರು ಸಾಯುತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಣ್ಣು ತೆರೆದಿಲ್ಲ. ಮೈಕ್ರೋ ಫೈನಾನ್ಸ್‌ನಿಂದ ಸತ್ತವರಿಗೆ ನ್ಯಾಯ ನೀಡಲು ನ್ಯಾಯಾಂಗ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ಮಂಡ್ಯದ ಕೊನ್ನಾಪುರ ಗ್ರಾಮದಲ್ಲಿ, ಮೈಕ್ರೋ ಫೈನಾನ್ಸ್‌ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್‌.ಅಶೋಕ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸುಗ್ರೀವಾಜ್ಞೆ ತರುತ್ತೇವೆಂದು ಹೇಳಿ ಒಂದು ತಿಂಗಳು ಕಳೆದಿದೆ. ಮಂಡ್ಯ ಜಿಲ್ಲೆಯಲ್ಲಿ ದಲಿತರ ಪ್ರದೇಶದಲ್ಲಿ ಆರು ಮಂದಿ ಊರು ಬಿಟ್ಟು ಹೋಗಿದ್ದಾರೆ. ರಾಜ್ಯದಲ್ಲಿ ಲಕ್ಷಾಂತರ ಜನರು ಓಡಿಹೋಗಿರಬಹುದು. ಸರ್ಕಾರ ಸುಗ್ರೀವಾಜ್ಞೆ ತರಲಿಲ್ಲ, ಸಾವುಗಳು ನಿಲ್ಲಲಿಲ್ಲ ಎಂದು ದೂರಿದರು.ಕೊನ್ನಾಪುರದಲ್ಲಿ ತಾಯಿ ಪ್ರೇಮಾ ಮತ್ತು ಮಗ ರಂಜಿತ್‌ ಮೈಕ್ರೋ ಫೈನಾನ್ಸ್‌ನ ಸಾಲ ತೀರಿಸಲಾಗದೆ ಕೊನ್ನಾಪುರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಡವರ ಪರ ಎಂದು ಹೇಳುವ ಸಿ...
ಮೈಕ್ರೋ ಫೈನಾನ್ಸ್ ಕಿರುಕುಳ: ರೈತರ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದ ಅಶೋಕ್

ಮೈಕ್ರೋ ಫೈನಾನ್ಸ್ ಕಿರುಕುಳ: ರೈತರ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದ ಅಶೋಕ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ 31.28 ಲಕ್ಷ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯತ್ವದಿಂದ ವಂಚಿತರಾಗಿದ್ದು, ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲದ ಸುಳಿಯಲ್ಲಿ ಸಿಲುಕಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತವೇ ಕಾರಣವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.ಸಿಎಂ ಸಿದ್ದರಾಮಯ್ಯ ಹಾಗೂ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು ಇಲಾಖೆಯ ಕೆಲಸ ಮಾಡುತ್ತಿದ್ದಾರೋ ಇಲ್ಲ ಬರೀ ಬಣ ರಾಜಕೀಯದಲ್ಲಿ ಕಾಲ ಕಳೆಯುತ್ತಿದ್ದಾರೋ ಎಂದು ಅಶೋಕ್ ಪ್ರಶ್ನಿಸಿದ್ದಾರೆ.ಆಯಾ ಸೊಸೈಟಿಗಳ ವ್ಯಾಪ್ತಿಗೆ ಒಳಪಡುವ ರೈತರಿಗೆ ಅರ್ಜಿ ಸಲ್ಲಿಸಿದ 30 ದಿನಗಳ ಒಳಗೆ ಕಡ್ಡಾಯವಾಗಿ ಸದಸ್ಯತ್ವ ನೀಡಬೇಕು ಎಂಬ ನಿಯಮವಿದ್ದರೂ ಅದು ಯಾಕೆ ಪಾಲನೆ ಆಗುತ್ತಿಲ್ಲ? ರಾಜ್ಯ 86.81 ಲಕ್ಷ ರೈತರ ಪೈಕಿ 31.28 ಲಕ್ಷ ರೈತರಿಗೆ ಸೊಸೈಟಿ ಸದಸ್ಯತ್ವ ಯಾಕೆ ಸಿಕ್ಕಿಲ್ಲ? 2024-25 ನೇ ಸಾಲಿನಲ್ಲಿ 27,000 ಕೋಟಿ ಸಾಲ ವಿತರಿಸುತ್ತೇವೆ ಎಂದು ಹೇಳಿ ಈಗ ಕೇವಲ 17,717 ಕೋಟಿ ಸಾಲ ವಿತರಣೆ ಆಗಿದೆಯಲ್ಲ, ರೈತರಿಗೆ ಸಾಲ ಕೊಡಲು ಸರ್ಕಾರದ ಬಳಿ ದುಡ್ಡಲ್ಲವೇ? ಎಂದು ಅ...
ಮತ್ತಷ್ಟು ಸಾಲದ ಅನಿವಾರ್ಯತೆ ಸೃಷ್ಟಿಯಾಗಿದ್ದೇ ಬಿಜೆಪಿಯಿಂದ; ಅಂಕಿ ಅಂಶಗಳೊಂದಿಗೆ ಚಾಟಿ ಬೀಸಿದ ರಾಮಲಿಂಗ ರೆಡ್ಡಿ

ಮತ್ತಷ್ಟು ಸಾಲದ ಅನಿವಾರ್ಯತೆ ಸೃಷ್ಟಿಯಾಗಿದ್ದೇ ಬಿಜೆಪಿಯಿಂದ; ಅಂಕಿ ಅಂಶಗಳೊಂದಿಗೆ ಚಾಟಿ ಬೀಸಿದ ರಾಮಲಿಂಗ ರೆಡ್ಡಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಾರಿಗೆ ಸಂಸ್ಥೆಗಳು ಲೋನ್ ತೆಗೆದುಕೊಳ್ಳಬೇಕು. ಯಾಕೆಂದರೆ, ತಮ್ಮ ಪಕ್ಷದ ದುರಾಡಳಿತದ ಅವಧಿಯಲ್ಲಿನ ರೂ.5900 ಕೋಟಿ ಸಾಲ‌ ತೀರಿಸಬೇಕಾದ ಅನಿವಾರ್ಯತೆ ಇದೆಯಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರತಿಪಕ್ಷ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಬಿ.ಜೆ.ಪಿ ಎಂದರೆ ಬುರುಡೆ‌ ಜನರ ಪಕ್ಷ, ಅವರಿಗೆ ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ. ಬುರುಡೆ ಜನರೆಲ್ಲ ಕೂಡಿಕೊಂಡು ಪುಖಾಂನುಪುಂಖವಾಗಿ ಸುಳ್ಳನ್ನೇ ಸತ್ಯವೆಂದು ಬುರುಡೆ‌ ಪಕ್ಷ ಬಿಂಬಿಸುತ್ತಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಆದಾಯ ವೃದ್ದಿಯಾಗಿದೆ ಎಂದೇ ನಾವು ಪದೇ ಪದೇ ಹೇಳುತ್ತಿರುವುದು. ಲಾಭ ಆಗಿದೆ ಎಂದು ನಾವು ಎಲ್ಲೂ ಹೇಳಿಲ್ಲ. ಆದಾಯ ಮತ್ತು ಲಾಭಕ್ಕೆ ವ್ಯತ್ಯಾಸ ತಿಳಿಯದ, ಸಾಮಾನ್ಯ ಗಣಿತವು ಬಾರದ ಅಜ್ಞಾನಿಗಳು ಬಿ.ಜೆ.ಪಿಯವರು ಎಂದು ತಿರುಗೇಟು ನೀಡಿದ್ದಾರೆ.ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರ ಆಡಳಿತದಲ್ಲಿ ರಾಜ್ಯ ಸರ್ಕಾರ ಹೊಸದಾಗಿ ಮಾಡಿದ ಸಾಲ ರೂ 2 ಲಕ್ಷ ಕೋಟಿ. ಅದರ ಬಗ್ಗೆ ಸ್ವಲ್ಪ ಗಮನಹರಿಸಿ ವಿಷಯ ಸಂಗ್ರಹಿಸಿ ಮಾತನಾಡಿ ...
ಬೆಂಗಳೂರಿನ ಬಾನಂಗಳದಲ್ಲಿ ಕಸರತ್ತಿಗಾಗಿ ಬರುತ್ತಿದೆ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

ಬೆಂಗಳೂರಿನ ಬಾನಂಗಳದಲ್ಲಿ ಕಸರತ್ತಿಗಾಗಿ ಬರುತ್ತಿದೆ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬೆಂಗಳೂರಿನ ಭವ್ಯ ನಗರವು, ಬಾನಂಗಳದಲ್ಲಿ ವಿಸ್ಮಯಕಾರಿ, ಬೆರಗುಗೊಳಿಸುವ ದೃಶ್ಯವನ್ನು ವೀಕ್ಷಿಸಲು ಸಜ್ಜಾಗಿದೆ. ಫೆಬ್ರವರಿ 10-14 ರಿಂದ, ಪ್ರತಿಷ್ಠಿತ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡ (SKAT) ಅದ್ಭುತ ವಾಯು ಪ್ರದರ್ಶನವನ್ನು ಪ್ರದರ್ಶಿಸುವ ಮೂಲಕ ಬೆಂಗಳೂರಿನ ಬಾನಂಗಳವನ್ನು ಬೆಳಗಲಿದೆ. ಈ ಮೂಲಕ ಪ್ರೇಕ್ಷಕರನ್ನು ಮೂಕವಿಸ್ಮಿತರನ್ನಾಗಿಸಲಿದೆ."ಭಾರತೀಯ ವಾಯುಪಡೆಯ ರಾಯಭಾರಿಗಳು" ಎಂದು ಕರೆಯಲ್ಪಡುವ SKAT ತನ್ನ ಅದ್ಭುತ ಕೌಶಲಕ್ಕೆ ಹೆಸರಾಗಿದೆ.  ಕೆಂಪು ಮತ್ತು ಬಿಳಿ ಹಾಕ್ Mk-132 ಜೆಟ್‌ಗಳನ್ನು ಹಾರಿಸುವ ಈ ಗಣ್ಯ ತಂಡವು ಉಸಿರು ಬಿಗಿಹಿಡಿದಿಡುವಂಥ ಅದ್ಭುತ  ಕುಶಲತೆಯನ್ನು ಪ್ರದರ್ಶಿಸುವ ಮೂಲಕ ಜನರನ್ನು ಬೆರಗುಗೊಳಿಸಲಿದೆ. ಆಕರ್ಷಕವಾದ ಲೂಪ್ ಮತ್ತು ರೋಮಾಂಚಕ ಬ್ಯಾರೆಲ್ ರೋಲ್‌ಗಳಿಂದ ಹಿಡಿದು ಗುರುತ್ವಾಕರ್ಷಣೆಗೇ ಸವಾಲು ಎಸಗುವ ರೀತಿಯಲ್ಲಿ ತಲೆಕೆಳಗಾಗಿ ಹಾರಾಟ ನಡೆಸುವ ಮೂಲಕ, ಅಪ್ರತಿಮ ಪರಿಣತಿ ಹೊಂದಿರುವ  ಪೈಲಟ್‌ಗಳ ಕೈಚಳಕವನ್ನು ಅಂದು ವೀಕ್ಷಿಸಬಹುದಾಗಿದೆ. ಪ್ರತಿಯೊಂದು ಪ್ರದರ್ಶನಗಳೂ ಪೈಲಟ್‌ಗಳ ಅಪ್ರತಿಮ ಪರಿಣತಿ ಮತ್ತು ಸಮನ್ವಯಕ್ಕೆ ಸಾಕ್ಷಿಯಾಗಿ ನಿಲ್ಲುತ್ತಿವೆ....
ಕಮಲ ಪಾಳಯದಲ್ಲಿ ತಳಮಳ: ಹಲವು‌ ನಾಯಕರಲ್ಲಿ ಬೇಸರ

ಕಮಲ ಪಾಳಯದಲ್ಲಿ ತಳಮಳ: ಹಲವು‌ ನಾಯಕರಲ್ಲಿ ಬೇಸರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಹಿರಿಯರು ನೀಡಿದ ವಿರೋಧ ಪಕ್ಷದ ನಾಯಕತ್ವದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿದ್ದೇನೆ. ನಾನೇನೂ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಇದಕ್ಕಾಗಿ ನಾನಂತೂ ಅರ್ಜಿ ಹಾಕಿಲ್ಲ. ಆ ಬಗ್ಗೆ ಯೋಚಿಸಿಯೇ ಇಲ್ಲ. ಆದರೆ ಈ ರೀತಿ ಸಮಸ್ಯೆಯಾಗಿರುವುದು ನನಗೂ ನೋವು ತಂದಿದೆ. ಎಲ್ಲರೂ ಹೊಂದಾಣಿಕೆ ಮಾಡಿಕೊಂಡು ಮುಂದುವರಿಯಬೇಕಾಗಿತ್ತು ಎಂದರು.ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. ಕರ್ನಾಟಕದಲ್ಲಿ ಒಂದೇ ಕಡೆ ಬದಲಾವಣೆಯಾಗುತ್ತಿಲ್ಲ. ಇಡೀ ದೇಶದಲ್ಲಿ ಎಲ್ಲ ಕಡೆ ಪಕ್ಷದಲ್ಲಿ ಚುನಾವಣೆ ನಡೆಯುತ...
ಸಾಲದ ಶೂಲಕ್ಕೆ ಸರಣಿ ಬಲಿ; ಸೂತಕದ ಮನೆಯಾಯಿತೇ ಕರ್ನಾಟಕ?

ಸಾಲದ ಶೂಲಕ್ಕೆ ಸರಣಿ ಬಲಿ; ಸೂತಕದ ಮನೆಯಾಯಿತೇ ಕರ್ನಾಟಕ?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಹಾಸನ: ಕಾಂಗ್ರೆಸ್‌ ಸರ್ಕಾರದಿಂದಾಗಿ ಕರ್ನಾಟಕ ಸೂತಕದ ಮನೆಯಾಗಿದೆ. ಆರ್ಥಿಕ ವ್ಯವಸ್ಥೆ ಹದಗೆಟ್ಟಿರುವುದರಿಂದ ಜನರು ದಾರಿ ಕಾಣದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕ ಸೂತಕದ ಮನೆಯಾಗಿದೆ. ಮೈಕ್ರೋ ಫೈನಾನ್ಸ್‌ಗಳಿಂದ ಆತ್ಮಹತ್ಯೆ ನಡೆಯುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ. ಗುತ್ತಿಗೆದಾರರು ಹಣವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಶೇ.60 ರ ಕಮಿಷನ್ ದಂಧೆಯಿಂದಾಗಿ ಅಧಿಕಾರಿಗಳು ಸಾಯುತ್ತಿದ್ದಾರೆ. ಇದರ ಜೊತೆಗೆ ಬಾಲಕಿಯರ ಮೇಲೆ ಅತ್ಯಾಚಾರ, ಕೊಲೆ, ಬ್ಯಾಂಕ್‌ ದರೋಡೆ ನಡೆಯುತ್ತಿದೆ ಎಂದು ದೂರಿದರು.ರಾಜ್ಯದಲ್ಲಿ ಸುಮಾರು 24-25 ಜನರು ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೂ ಸರ್ಕಾರ ಸುಗ್ರೀವಾಜ್ಞೆ ಎನ್ನುತ್ತಿದೆಯೇ ಹೊರತು, ಒಂದೇ ಒಂದು ಮೈಕ್ರೋ ಫೈನಾನ್ಸ್‌ನ ವಿರುದ್ಧ ಕ್ರಮ ಕೈಗೊಂಡಿಲ್ಲ. ಸಿಎಂ ಸಿದ್ದರಾಮಯ್ಯ ಎಷ್ಟು ಗುಡುಗಿದರೂ ಮೈಕ್ರೋ ಫೈನ...