Wednesday, August 12

ವಿದೇಶ

ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಮಾಡಬೇಡಿ, ದೂರು ನೀಡಿ: ಸಿಎಂ ಕರೆ

ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಮಾಡಬೇಡಿ, ದೂರು ನೀಡಿ: ಸಿಎಂ ಕರೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಮೈಸೂರು: ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು, ಬದಲಾಗಿ ದೂರು ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಬಿಐ ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ ಎಂದರು. ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ವಿನಂತಿಸುತ್ತೇನೆ ಎಂದರು.ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ ನಮ್ಮ ಗಮನದಲ್ಲಿದೆ. ಜನರು ಸಾಲ ಲಭ್ಯವಾಗುವ ಕಡೆ ಸಾಲ ಪಡೆಯುತ್ತಿದ್ದಾರೆ. ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿಗಾರರು ನೀಡುವ ಸಾಲದ ಮೇಲೆ ಹೆಚ್ಚಿನ ಬಡ್ಡಿ ದರವನ್ನು ಹಾಕುವುದಲ್ಲದೇ, ಗೂಂಡಾಗಳ ಮೂಲಕ ಜನರನ್ನು ಹೆದರಿಸಿ, ಅಮಾನವೀಯ ರೀತಿಯಲ್ಲಿ ಸಾಲ ವಸೂಲಾತಿಯಲ್ಲಿ ತೊಡಗಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಾ...
ಹಿಂದುತ್ವವನ್ನು ಉಳಿಸಲು ‘ಕ್ರಾಂತಿ ವೀರ ಬ್ರಿಗೇಡ್’; ಬಿಜೆಪಿಗೆ ಪರ್ಯವಾಗಿ ಸಂಘ ಕಟ್ಟಿದ ಈಶ್ವರಪ್ಪ

ಹಿಂದುತ್ವವನ್ನು ಉಳಿಸಲು ‘ಕ್ರಾಂತಿ ವೀರ ಬ್ರಿಗೇಡ್’; ಬಿಜೆಪಿಗೆ ಪರ್ಯವಾಗಿ ಸಂಘ ಕಟ್ಟಿದ ಈಶ್ವರಪ್ಪ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರು ‘ಕ್ರಾಂತಿ ವೀರ ಬ್ರಿಗೇಡ್’ ಸಂಘಟನೆ ಕಟ್ಟುವ ಘೋಷಣೆ ಮಾಡಿದ್ದಾರೆ.‘ಕ್ರಾಂತಿವೀರ ಬ್ರಿಗೇಡ್’ ಎಲ್ಲಾ ಜಾತಿಗಳ ಮಠಾಧೀಶರನ್ನು ಒಳಗೊಂಡಿದ್ದು, ಹಿಂದೂಗಳ ಏಕೀಕರಣಕ್ಕಾಗಿ ಕೆಲಸ ಮಾಡಲಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ. ಫೆಬ್ರವರಿ 4 ರಂದು ಬಸವನ ಬಾಗೇವಾಡಿಯಲ್ಲಿ ‘ಕ್ರಾಂತಿ ವೀರ ಬ್ರಿಗೇಡ್’ ಉದ್ಘಾಟನೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.ರಾಜ್ಯದಲ್ಲಿ ಹಿಂದುತ್ವವನ್ನು ಉಳಿಸಲು ಕೆಲಸ ಮಾಡುವ ಮಠಾಧೀಶರ ವೇದಿಕೆ ರಚನೆ ‘ಕ್ರಾಂತಿ ವೀರ ಬ್ರಿಗೇಡ್’ನ ಉದ್ದೇಶವಾಗಿದೆ ಎಂದಿರುವ ಈಶ್ವರಪ್ಪ, ಉತ್ತರ ಕರ್ನಾಟಕದ ಮಠಾಧೀಶರ ಸಲಹೆಯಂತೆ ಈ ಸಂಘಟನೆಯನ್ನು ಹುಟ್ಟುಹಾಕಲಾಗುತ್ತಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ....
ಭ್ರಷ್ಟರ ಬೆನ್ನಾತ್ತಿದ ಲೋಕಾಯುಕ್ತ; ರಾಜ್ಯದ ಹಲವೆಡೆ ದಾಳಿ

ಭ್ರಷ್ಟರ ಬೆನ್ನಾತ್ತಿದ ಲೋಕಾಯುಕ್ತ; ರಾಜ್ಯದ ಹಲವೆಡೆ ದಾಳಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ಭ್ರಷ್ಟರ ಬೆನ್ನಾತ್ತಿರುವ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ಬೆಂಗಳೂರು, ಬೆಳಗಾವಿ, ರಾಯಚೂರು, ಬಾಗಲಕೋಟೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ಕೈಗೊಂಡಿದ್ದಾರೆ.ರಾಯಚೂರಿನಲ್ಲಿ ಜವಾರ್ ಕಾಲೋನಿಯಲ್ಲಿರುವ ಜಿಲ್ಲಾ ಪಂಚಾಯತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗರಾವ್ ಅವರ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ಹೊಲಗೇರಿ ಗ್ರಾಮ ಪಂಚಾಯಿತಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.ಬೆಳಗಾವಿಯ ಪ್ರಭಾರಿ ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ್ ಅವರ ಬೆಳಗಾವಿ ನಗರದ ಆನಗೋಳದಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.ರಾಯಬಾಗ ತಾಲೂಕಿನ ಹಾರೂಗೇರಿ ವೆಟರ್ನರಿ ಇನ್ಸ್ ಪೆಕ್ಟರ್ ಸಂಜಯ್ ಮನೆ ಮೇಲೆ ಮೇಲೂ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ....
ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ತನ್ನ ಪಾತ್ರವಿಲ್ಲ; ವಿಜಯೇಂದ್ರ ಸ್ಪಷ್ಟನೆ

ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ತನ್ನ ಪಾತ್ರವಿಲ್ಲ; ವಿಜಯೇಂದ್ರ ಸ್ಪಷ್ಟನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಸಂಸದ ಡಾ.ಸುಧಾಕರ್ ಮಾಡಿರುವ ಆರೋಪಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಲ್ಲಗಳೆದಿದ್ದಾರೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆಯಲ್ಲಿ ತನ್ನ ಪಾತ್ರವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಸುಧಾಕರ್ ಆರೋಪ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, 23 ಜಿಲ್ಲೆಗಳ ಜಿಲ್ಲಾಧ್ಯಕ್ಷರ ಆಯ್ಕೆ ವಿರೋಧ ವಿಚಾರವಾಗಿ ಕೆಲವರ ಅಸಮಾಧಾನ ಬಗ್ಗೆ ಪ್ರತಿಕ್ರಿಯಿಸಲ್ಲ. ಆದರೆ ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ನನ್ನ ಯಾವುದೇ ಪಾತ್ರ ಇಲ್ಲ ಎಂದು ಸ್ಪಷ್ಟನೆ ನೀಡಿದರು.ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರಿಗೆ ಹೈಕಮಾಂಡ್ ಚುನಾವಣೆಯ ಜವಾಬ್ದಾರಿ ಕೊಟ್ಟಿದ್ದು, 13 ವೀಕ್ಷಕರ ಉಪಸ್ಥಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ. ರಾಜ್ಯದ ಅಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಚುನಾವಣೆ ಸಂಬಂಧ ಅಭಿಪ್ರಾಯ ಕೊಟ್ಟಿಲ್ಲ, ಕೊಡುವುದಕ್ಕೆ ಅವಕಾಶವೂ ಇಲ್ಲ ಎಂದು ವಿಜಯೇಂದ್ರ ವಿವರಿಸಿದರು....
ರಾಜಧಾನಿ ಇನ್ನಷ್ಟು ವಿಸ್ತಾರ; ಇದೀಗ ‘ಗ್ರೇಟರ್ ಬೆಂಗಳೂರು’ ಭಾಗ್ಯ

ರಾಜಧಾನಿ ಇನ್ನಷ್ಟು ವಿಸ್ತಾರ; ಇದೀಗ ‘ಗ್ರೇಟರ್ ಬೆಂಗಳೂರು’ ಭಾಗ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಜನದಟ್ಟಣೆಯನ್ನು ಕಡಿಮೆ ಮಾಡಲು ಗ್ರೇಟರ್ ಬೆಂಗಳೂರು ಸೂತ್ರಕ್ಕೆ ಸರ್ಕಾರ ಮನ್ನಣೆ ನೀಡಿದೆ. ಬೆಂಗಳೂರು ಸುತ್ತಮುತ್ತಲ ಮಾಗಡಿ, ಬಿಡದಿ, ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ ಪ್ರದೇಶಗಳನ್ನು ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಸ್ಯಾಟಲೈಟ್ ಟೌನ್‌ಶಿಪ್‌ಗಳನ್ನಾಗಿ ಅಭಿವೃದ್ಧಿಪಡಿಸುವ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಉಪನಗರ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.ಬೆಂಗಳೂರು ನಗರದ ಜನದಟ್ಟಣೆಯನ್ನು ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.ಬೈರಮಂಗಲ, ಬಿಡದಿ ಹೋಬಳಿಯ ಬನ್ನಿಗೆರೆ, ಹೊಸೂರು, ಕೆಜಿ ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಲುಸಂದ್ರ, ಕೆಂಪಯ್ಯನಪಾಳ್ಯ, ಕಂಚುಗಾರನಹಳ್ಳಿ ಕವಲು, ಮಂಡಲಹಳ್ಳಿ ಮತ್ತು ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಈ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಯೋಜನೆ ವ್...
“ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ – ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ”

“ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ – ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ”

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ಕನ್ನಡ ಶಾಲೆಗಳ ಅವ್ಯವಸ್ಥೆ ಹಾಗೂ ಸದ್ಯದ ಪರಿಸ್ಥಿತಿ ಬಗ್ಗೆ ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಕಾರ್ಯವೈಖಾರಿ ಬಗ್ಗೆ ಕಾಟು ಟೀಕೆ ಮಾಡಿದೆ.'ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ - ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ' ಎಂದು ಬಿಜೆಪಿ ಟೀಕಿಸಿದೆ. ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಾಲೆಗೆ ದಾಖಲಾಗುವ ಮಕ್ಕಳ ಪ್ರಮಾಣ ಗಣನೀಯ ಕುಸಿತದ ಹಾದಿಯಲ್ಲಿ ಸಾಗುತ್ತಿದೆ. ಆತಂಕ ಹೊರಹಾಕಿದೆ.ಶಾಲೆಗೆ ದಾಖಲಾಗುವ ಮಕ್ಕಳ ಪ್ರಮಾಣ ಈ ಸಾಲಿನಲ್ಲಿ ಶೇ.71ಕ್ಕೆ ಕುಸಿದಿದ್ದು, ಭವಿಷ್ಯದಲ್ಲಿ ಇನ್ನಷ್ಟು ಕುಸಿಯುವ ಆತಂಕ ಎದುರಾಗಿದೆ. ಸಿಎಂ ಸಿದ್ದರಾಮಯ್ಯ, ಕನ್ನಡ ಬಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕನ್ನಡ ಶಾಲೆಗಳ ಗುಣಮಟ್ಟವನ್ನು ಹಾಳು ಮಾಡಿ, ದಾಖಲಾತಿ ಪ್ರಮಾಣವನ್ನು ಕುಸಿಯುವ ಹಾಗೆ ಮಾಡಿಮಾಡಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.“ಶಿಕ್ಷಣ ಸಚಿವರಿಗೆ ಕನ್ನಡ ಬರುವುದಿಲ್ಲ - ಸರ್ಕಾರಿ ಶಾಲೆಗೆ ಮಕ್ಕಳು ದಾಖಲಾಗುತ್ತಿಲ್ಲ”ರಾಜ್ಯದ ಸರ...
ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿಕನ್ನಡ ಧ್ವಜಾರೋಹಣ ಕಡ್ಡಾಯ

ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿಕನ್ನಡ ಧ್ವಜಾರೋಹಣ ಕಡ್ಡಾಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಮುಂದಿನ ದಿನಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅಥವಾ ಪಾಲಿಕೆ ವತಿಯಿಂದ ಎಲ್ಲಾ ಸಂಸ್ಥೆಗಳಿಗೂ ಕನ್ನಡ ಬಾವುಟ ಪೂರೈಸುವ ಕೆಲಸ ಮಾಡುತ್ತೇವೆ ಎಂದವರು ಹೇಳಿದ್ದಾರೆ.ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡರಾಜ್ಯೋತ್ಸವದ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗುವುದು ಎಂದವರು ತಿಳಿಸಿದ್ದಾರೆ.ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಮುಂದಿನ ದಿನಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು.ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅಥವಾ ಪಾಲಿಕೆ ವತಿಯಿಂದ ಎಲ್ಲಾ ಸಂಸ್ಥೆಗಳಿಗೂ ಕನ್ನಡ ಬಾವುಟ ಪೂರೈಸುವ ಕೆಲಸ ಮಾಡುತ್ತೇವೆ.ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ… pic.twitter.com/ug7Vbaqbe5 — Karnataka Congress (@INCKarnataka) January...
ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ನೇಮಕ: ಹೊಸ ಸಾರಥಿಗಳ ಪಟ್ಟಿ ಇಲ್ಲಿದೆ

ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ನೇಮಕ: ಹೊಸ ಸಾರಥಿಗಳ ಪಟ್ಟಿ ಇಲ್ಲಿದೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಹೊಸ ಸಾರಥಿಗಳ ಪ್ರಕ್ರಿಯೆ ಬಿರುಸುಗೊಂಡಿದೆ. ವಿವಿಧ ಸಂಘಟನಾ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರ ನೇಮಕವಾಗಿದೆ. 23 ಜಿಲ್ಲೆಗಳಿಗೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ. ಕೆಲ ಜಿಲ್ಲೆಗಳಿಗೆ ಹಳೇಬರನ್ನೇ ಮುಂದುವರಿಸಲಾಗಿದೆ. ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಹುಬ್ಬಳ್ಳಿ- ಧಾರವಾಡ, ಧಾರವಾಡ ಗ್ರಾಮಾಂತರ, ಬೆಳಗಾವಿ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ಬೀದರ್, ಕಲಬುರಗಿ, ಬಳ್ಳಾರಿ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರನ್ನು ಮರು ನೇಮಕ ಮಾಡಲಾಗಿದೆ.ನೂತನ ಜಿಲ್ಲಾಧ್ಯಕ್ಷರ ಪಟ್ಟಿ: ಮೈಸೂರು ನಗರ: ಎಲ್.ನಾಗೇಂದ್ರ, ಚಾಮರಾಜನಗರ: ಸಿ.ಎಸ್.ನಿರಂಜನ್‌ಕುಮಾರ್, ದಕ್ಷಿಣ ಕನ್ನಡ: ಸತೀಶ್ ಕುಂಪಲಿ, ಚಿಕ್ಕಮಗಳೂರು: ದೇವರಾಜ ಶೆಟ್ಟಿ, ಶಿವಮೊಗ್ಗ: ಎನ್.ಕೆ.ಜಗದೀಶ್, ಉತ್ತರ ಕನ್ನಡ: ನಾರಾಯಣ ಶ್ರೀನಿವಾಸ ಹೆಗಡೆ, ಹುಬ್ಬಳ್ಳಿ-ಧಾರವಾಡ: ತಿಪ್ಪಣ್ಣ ಮಜ್ಜಗಿ, ಧಾರವಾಡ ಗ್ರಾಮಾಂತರ: ನಿಂಗಪ್ಪ ಡಿ...
ಉಚಿತ ಬಸ್‌ಪಾಸ್‌ ಸೌಲಭ್ಯ; ಗ್ರಾಮೀಣ ಪತ್ರಕರ್ತರಿಗೆ ಸಿಎಂ ಸಲಹೆ ಹೀಗಿದೆ..!

ಉಚಿತ ಬಸ್‌ಪಾಸ್‌ ಸೌಲಭ್ಯ; ಗ್ರಾಮೀಣ ಪತ್ರಕರ್ತರಿಗೆ ಸಿಎಂ ಸಲಹೆ ಹೀಗಿದೆ..!

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಾಧ್ಯಮ ಮಾನ್ಯತಾ ಪತ್ರ ಹೊಂದಿರದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಸೌಲಭ್ಯವನ್ನು ಕಲ್ಪಿಸಲಾಗಿದೆ. ಈ ಮೂಲಕ ಬಜೆಟ್‌ನಲ್ಲಿ ಘೋಷಣೆ ಮಾಡಿ ಅದನ್ನು ಯಥಾವತ್ತಾಗಿ ಜಾರಿಗೆ ಕೊಟ್ಟು ನಮ್ಮ ಸರ್ಕಾರವು ನುಡಿದಂತೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಸಾಮಾಜಿಕ ಜಾಲತಾಣ 'X'ನಲ್ಲಿ ಸಿಎಂ ಸಿದ್ದರಾಮಯ್ಯ ಹಂಚಿಕೊಂಡ ಮಾಹಿತಿ ಹೀಗಿದೆ: ಉಚಿತ ಬಸ್‌ಪಾಸ್‌ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ ವೇತನ ಪತ್ರ/ ಬ್ಯಾಂಕ್ ಸ್ಟೇಟ್‌ಮೆಂಟ್‌ ಇವುಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಸೇವಾನುಭವಕ್ಕಾಗಿ ಒದಗಿಸಬೇಕು ಎಂದವರು ಮಾಹಿತಿ ನೀಡಿದ್ದಾರೆ. ಅರ್ಹ ಪತ್ರಕರ್ತರು ಉಚಿತ ಬಸ್‌ಪಾಸ್‌ ಅಡಿ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಬಹುದು....
ಪ್ರಯಾಗರಾಜ್​ ಕಾಲ್ತುಳಿತ: ಮೃತರ ಕುಟುಂಬದವರಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ಪ್ರಯಾಗರಾಜ್​ ಕಾಲ್ತುಳಿತ: ಮೃತರ ಕುಟುಂಬದವರಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ಪ್ರಮುಖ ಸುದ್ದಿ, ವಿದೇಶ
ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್​ ಮಹಾಕುಂಭಮೇಳದಲ್ಲಿ ಸಂಭವಿಸಿರುವ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಉತ್ತರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.ಕಾಲ್ತುಳಿತಪ್ರಕರಣಕ್ಕೆ ಸಂಬಂಧಿಸಿದಂತೆ 30 ಭಕ್ತರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಹೇಳಿದೆ. ಈ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಈ ದುರಂತ ಬಗ್ಗೆ ತನಿಖೆಗಾಗಿ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಜನವರಿ 30ರಂದು ಮಹಾ ಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಿಎಂ ಆದಿತ್ಯನಾಥ್ ತಿಳಿಸಿದ್ದಾರೆ....