
ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು; ಗೃಹ ಇಲಾಖೆ ಸಂಪೂರ್ಣ ವಿಫಲ ಎಂದ ಪ್ರತಿಪಕ್ಷ
ಬೆಂಗಳೂರು: ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟವರು ಮಹಾತ್ಮ ಗಾಂಧಿ. ಅವರೇ ನಿಜವಾದ ಗಾಂಧಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ನಕಲಿ ಗಾಂಧಿಗಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಲೇವಡಿ ಮಾಡಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಮಾಸುವ ಮುನ್ನವೇ, ಹೊನ್ನಾವರದಲ್ಲಿ ಕೂಡ ಗರ್ಭಿಣಿ ಹಸುವನ್ನು ಭೀಕರವಾಗಿ ಕೊಲ್ಲಲಾಗಿದೆ. ಕರ್ನಾಟಕದಲ್ಲಿ ಗೋವುಗಳಿಗೆ ರಕ್ಷಣೆ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ. ಇದು ಕಿವುಡು ಸರ್ಕಾರ. ರಾಜ್ಯದ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದರೂ, ಸರ್ಕಾರ ಸಮಾವೇಶ ಮಾಡುತ್ತಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರಾ? ಇವರೆಲ್ಲಾ ಡೂಪ್ಲಿಕೇಟ್ ಗಾಂಧಿಗಳು ಎಂದರು.ರಾಜ್ಯದಲ್ಲಿ ಗೃಹ ಸಚಿವರು ಯಾರು ಎನ್ನುವುದೇ ಗೊತ್ತಾಗುತ್ತಿಲ್ಲ. ಎಲ್ಲ ಸಚಿವರು ಗೃಹ ಇಲಾಖೆಯಲ್ಲಿ ಕೈಯಾಡಿಸುತ್ತಿದ್ದಾರೆ. ಭ್ರಷ್ಟಾಚಾರ ಹಾಗೂ ಲಂಚಾವತಾರ ಮಿತಿ ಮೀರಿದೆ. ಶೇ.60 ರಷ್ಟು ಕಮಿಷನ್ ಕೊಟ್ಟರೆ ...









