Sunday, August 9

ವಿದೇಶ

‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

‘ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’; SJCLಯಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಂತ ಜೋಸೆಫ್ ಕಾನೂನು ಕಾಲೇಜು (ಸಂತ ಜೋಸೆಫ್ ಕಾನೂನು ಕಾಲೇಜು (St. Joseph’s College of Law)), ಬೆಂಗಳೂರು, ಇದರ ನೇತೃತ್ವದಲ್ಲಿ “ಭಾಷಣ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ” ಕುರಿತು ನಡೆದ ಅಂತರರಾಷ್ಟ್ರೀಯ ಸಮ್ಮೇಳನ ಗಮನಸೆಳೆಯಿತು.ಈ ಸಮ್ಮೇಳನದಲ್ಲಿ ದೇಶದ 45ಕ್ಕೂ ಹೆಚ್ಚು ಶೈಕ್ಷಣಿಕ ಮತ್ತು ಸಂಶೋಧನಾ ಸಂಸ್ಥೆಗಳ 110ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. “ಆಧುನಿಕ ಭಾರತದಲ್ಲಿ ಸ್ವಾತಂತ್ರ್ಯ, ಭಿನ್ನಮತ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ನಡುವಿನ ಸಮತೋಲನ” ಕುರಿತು ಆಳವಾದ ಚರ್ಚೆ ನಡೆಯಿತು.ಮುಖ್ಯ ಭಾಷಣಕಾರರಾಗಿ ನಿಖಿಲ್ ದೇಯ್ (Nikhil Dey) ಭಾಗವಹಿಸಿ, ಮಾಹಿತಿ ಹಕ್ಕು ಮತ್ತು ಉದ್ಯೋಗ ಹಕ್ಕು ಚಳವಳಿಗಳ ಬೆಳವಣಿಗೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ತಳಮಟ್ಟದ ಪ್ರಜಾಪ್ರಭುತ್ವದ ಪಾತ್ರವನ್ನು ಒತ್ತಿಹೇಳಿದರು.ಸಮಾರೋಪ ಭಾಷಣ ಮಾಡಿದ ಭಾವನ ಮಹಾದೇವ್ (Bhavna Mahadeo), ಅಂತರರಾಷ್ಟ್ರೀಯ ಆರ್ಥಿಕ ಕಾನೂನು ಹಾಗೂ ಕಾನೂನು ಸಂಶೋಧನಾ ವಿಧಾನಗಳ ಕುರಿತು ಮಹತ್ವದ ಸಂಗತಿಗಳನ್ನು ವಿವರಿಸಿದರು.ದಿನಪೂರ್ತಿ ನಡೆದ ಈ ಸಮ್ಮೇಳನದಲ್ಲಿ ಏಳು ಸ...
‘ಕೆಡಿ: ದಿ ಡೆವಿಲ್’: ಟ್ರೇಲರ್‌ ಎಡವಟ್ಟು ಬಗ್ಗೆ ಚಿತ್ರತಂಡ ವಿಷಾದ

‘ಕೆಡಿ: ದಿ ಡೆವಿಲ್’: ಟ್ರೇಲರ್‌ ಎಡವಟ್ಟು ಬಗ್ಗೆ ಚಿತ್ರತಂಡ ವಿಷಾದ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ಸಿನಿಮಾ
ಚೆನ್ನೈ: ನಿರ್ದೇಶಕ ಪ್ರೇಮ್ ಅವರ ಬಹುನಿರೀಕ್ಷಿತ ಚಿತ್ರ ಕೆಡಿ: ದಿ ಡೆವಿಲ್ ಟ್ರೇಲರ್‌ಗೆ ಸಂಬಂಧಿಸಿದಂತೆ ನಿರ್ಮಾಪಕರು ವಿಷಾದ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್‌ನಲ್ಲಿ ಪ್ರಮಾಣೀಕರಿಸದ ಕೆಲವು ದೃಶ್ಯಗಳು ಆಕಸ್ಮಿಕವಾಗಿ ಸೇರಿರುವುದನ್ನು ಗಮನಿಸಿದ ಹಿನ್ನೆಲೆಯಲ್ಲಿ, ಟ್ರೇಲರ್ ಅನ್ನು ಯೂಟ್ಯೂಬ್‌ನಿಂದ ತೆಗೆದುಹಾಕಲಾಗಿದೆ.ಚಿತ್ರವನ್ನು ನಿರ್ಮಿಸಿರುವ KVN Productions ಸಂಸ್ಥೆ ಸಾಮಾಜಿಕ ಮಾಧ್ಯಮದ ಮೂಲಕ ಪ್ರಕಟಣೆ ನೀಡಿ, “ಪ್ರಮಾಣೀಕರಣ ಪ್ರಕ್ರಿಯೆಯಲ್ಲಿ ಕೆಲವು ದೃಶ್ಯಗಳು ಅಜಾಗರೂಕತೆಯಿಂದ ಒಳಗೊಂಡಿವೆ. ಈ ಕಾರಣದಿಂದ ಟ್ರೇಲರ್ ಅನ್ನು ತೆಗೆದುಹಾಕಲಾಗಿದೆ. ಶೀಘ್ರದಲ್ಲೇ ಮಾರ್ಗಸೂಚಿಗಳಿಗೆ ಅನುಗುಣವಾದ ಪರಿಷ್ಕೃತ ಆವೃತ್ತಿಯನ್ನು ಅಪ್‌ಲೋಡ್ ಮಾಡಲಾಗುತ್ತದೆ” ಎಂದು ತಿಳಿಸಿದೆ.ಈ ತಪ್ಪಿಗೆ ವಿಷಾದ ವ್ಯಕ್ತಪಡಿಸಿರುವ ನಿರ್ಮಾಪಕರು, ಎಲ್ಲಾ ಪ್ರಮಾಣೀಕರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.ಕೆಡಿ: ದಿ ಡೆವಿಲ್ ಚಿತ್ರವು ಈಗಾಗಲೇ ದೇಶಾದ್ಯಂತ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರದಲ್ಲಿ ಆಕ್ಷನ್ ಪ್ರಿನ್ಸ್ ಧ್ರುವ ಸ...
ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಒಳ ಮೀಸಲಾತಿ: ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ ಹಾಗೂ ಇತರೇ ಸಮುದಾಯಗಳಿಗೆ 5.25, 5.25 ಮತ್ತು 4.5 ಮೀಸಲಾತಿ ಕಲ್ಪಿಸಲು ಸರ್ವಾನುಮತದಿಂದ ಒಪ್ಪಿಗೆ ನೀಡಿದೆ.ಒಳಮೀಸಲಾತಿಗೆ ಸಂಬಂಧಿಸಿದಂತೆ ಇಂದು ನಡೆದ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಮೀಸಲಾತಿಯನ್ನು ಶೇ.50ಕ್ಕೆ ಮಿತಿಗೊಳಿಸುವ ಹೈಕೋರ್ಟ್ ತೀರ್ಪಿನ ಪ್ರಕಾರ ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿಯನ್ನು ಮರು ನಿಗದಿಪಡಿಸಿ ಪರಿಶಿಷ್ಟ ಜಾತಿಗೆ 15% ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ3 ರಷ್ಟು ಮೀಸಲಾತಿ ನೀಡಲಾಗಿದೆ. ಒಳಮೀಸಲಾತಿಗೆ ರಚಿಸಲಾಗಿದ್ದ ಕಾಯ್ದೆಗೆ ಅನುಗುಣವಾಗಿ 17% ಮೀಸಲಾತಿಗೆ 6%, 6% ಹಾಗೂ 5% ಇದ್ದರೆ, ಈಗಿನ 15% ಮೀಸಲಾತಿಗೆ 5.3%, 5.3% ಹಾಗೂ 4.4% ಮೀಸಲಾತಿಯನ್ನು ನಿಗದಿ ಮಾಡಿ ವರದಿ ನೀಡಲಾಗಿದ್ದು, ಅಂತಿಮವಾಗಿ ಸಚಿವ ಸಂಪುಟ ಸಭೆಯು ಎಡಗೈ ಸಂಬಂಧಿತ ಜಾತಿಗಳಿಗೆ 5.25%, ಬಲಗೈ ಜಾತಿಗಳಿಗೆ 5.25%, ಬೋವಿ, ಲಂಬಾಣಿ, ಕೊರಚ, ಕೊರಮ ಹಾಗೂ 59 ಅಲೆಮ...
ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಎಲ್ಲರಿಗೂ ಕೈಗೆಟಕುವ ದರದಲ್ಲಿ ಹೃದಯ ಆರೋಗ್ಯ ಸೇವೆಯನ್ನು ನೀಡಲು ಹಾಗೂ ಆಡಳಿತ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ.ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಎಸ್‌ಜೆಐಸಿಎಸ್ ಮತ್ತು ಆರ್) ಶುಕ್ರವಾರ ಪಶ್ಚಿಮ ಬೆಂಗಳೂರಿನ ಗೋವಿಂದರಾಜನಗರದಲ್ಲಿ 100 ಹಾಸಿಗೆಗಳ ಜಯದೇವ ಘಟಕವನ್ನು ಸ್ಥಾಪಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಮಾಡಿದ ಪ್ರಮುಖ ಭರವಸೆಯನ್ನು ಈಡೇರಿಸಿದಂತಾಗಿದೆ.ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಬಿ. ದಿನೇಶ್ ಮತ್ತು ಜಿಬಿಎ ಮುಖ್ಯ ಆಯುಕ್ತ ಎನ್. ಮಹೇಶ್ವರ ರಾವ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ, ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್, ಪಶ್ಚಿಮ ಮಹಾನಗರ ಪಾಲಿಕೆ ಆಯುಕ್ತ ಕೆ.ವಿ. ರಾಜೇಂದ್ರ ಸಮ್ಮುಖದಲ್ಲಿ ವಿಕಾಸ ಸೌಧದಲ್...
ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ

ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಗ್ರಿ-ಟೆಕ್ ಸಮಿಟ್-2026ರಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರವು ರಾಜ್ಯದ ಒಟ್ಟು ಆದಾಯದಲ್ಲಿ ಸುಮಾರು 17% ಕೊಡುಗೆ ನೀಡುವುದರ ಜೊತೆಗೆ, ಶೇಕಡಾ 58ರಷ್ಟು ಜನರಿಗೆ ಉದ್ಯೋಗವನ್ನು ಒದಗಿಸುತ್ತಿದೆ ಎಂದು ತಿಳಿಸಿದರು.2025-26ನೇ ಸಾಲಿನಲ್ಲಿ ದೇಶದ ಆಹಾರ ಉತ್ಪಾದನೆ 355 ದಶಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು, ಕರ್ನಾಟಕದಲ್ಲಿಯೂ 155-160 ದಶಲಕ್ಷ ಟನ್ ಮಟ್ಟದಲ್ಲಿ ಉತ್ಪಾದನೆ ಸಾಧನೆಯಾಗಿದೆ ಎಂದು ಅವರು ಹೇಳಿದರು.ಸರ್ಕಾರದ ಯೋಜನೆಗಳು, ಕೃಷಿ ವಿಜ್ಞಾನಿಗಳ ಸಂಶೋಧನೆ ಹಾಗೂ ರೈತರ ಪರಿಶ್ರಮದಿಂದ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿದೆ. ತೋಟಗಾರಿಕೆ ಉತ್ಪಾದನೆ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಒತ್ತು ನೀಡಲಾಗಿದ್ದು, ಸಂಸ್ಕರಣೆ, ಪ್ಯಾಕೇಜಿಂಗ್, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕವನ್ನು ಬಲಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.ಇನ್ನೂ 202...
ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ನಗರದ ಟೌನ್ ಹಾಲ್‌ನಲ್ಲಿ ಅಖಿಲ ಭಾರತ ವೀರಶೈವ–ಲಿಂಗಾಯಿತ ಮಹಾಸಭಾ (ರಿ) ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ ಭಾನುವಾರ ವೈಭವವಾಗಿ ನಡೆಯಿತು.ಪಟ್ಟದ ಶ್ರೀ ಡಾ. ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಡಾ. ಶ್ರೀ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳು, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಹಾಸಭಾ ಅಧ್ಯಕ್ಷರೂ ಆಗಿರುವ ಸಚಿವ ಈಶ್ವರ ಬಿ. ಖಂಡ್ರೆ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಹಲವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಹಾನಗಲ್ ಕುಮಾರಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪದಗ್ರಹಣಕ್ಕೆ ಚಾಲನೆ ನೀಡಲಾಯಿತು.ಸಭೆಯನ್ನುದ್ದೇಶಿಸಿ ಮಾತನಾಡಿದ ಮಲಯಶಾಂತಮುನಿ ದೇಶಿಕೇಂದ್ರ ಸ್ವಾಮೀಜಿ, ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಮತ್ತು ಯುವಕರ ಪಾತ್ರ ಮಹತ್ವದ್ದಾಗಿದೆ ಎಂದರು. ಪ್ರತೀ ಮನೆಯಲ್ಲಿ ಒಬ್ಬ ಸಮಾಜಸೇವಕ ಇದ್ದರೆ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ವೀರಶೈವ–ಲಿಂಗಾಯಿತ ಧರ್ಮವು ಕಾಯಕ ಮತ್ತು ದಾಸೋಹದ ...
ಹರಾಜು ಮಾರಾಟವಾಗಿದ್ದು 2.4 ಕೋಟಿಗೆ, ಆ ಅಸ್ತಿ32 ಕೋಟಿಗೆ ಅಡಮಾನ

ಹರಾಜು ಮಾರಾಟವಾಗಿದ್ದು 2.4 ಕೋಟಿಗೆ, ಆ ಅಸ್ತಿ32 ಕೋಟಿಗೆ ಅಡಮಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ವಯೋವೃದ್ಧನಿಗೆ ಸೇರಿದ್ದೆನ್ನಲಾದ ಆಸ್ತಿಯನ್ನು ಖಾಸಗಿ ಸಂಸ್ಥೆಗಳ ಗೂಂಡಾಗಳು ಅತಿಕ್ರಮಿಸಲು ಯತ್ನಿಸಿದ್ದು ಈ ಬಗ್ಗೆ ಪ್ರಕರಣ ದಾಖಲಿಸಲು ಯಲಹಂಕ ಠಾಣೆ ಪೊಲೀಸರು ನಿರಾಕರಿಸಿದ್ದಾರೆ ಎನ್ನಲಾಗಿದೆ. ಇದರಿಂದ ನೊಂದ ವೃದ್ಧ FIR ದಾಖಲಿಸಲು ನಿರ್ದೇಶನ ಕೋರಿ ಬೆಂಗಳೂರು ಪೊಲೀಸ್ ಕಮೀಷನರ್'ಗೆ ದೂರು ಸಲ್ಲಿಸಿದ್ದಾರೆ.ಬೆಂಗಳೂರಿನ ಆಡುಗೋಡಿ ನಿವಾಸಿ 70 ವರ್ಷ ಪ್ರಾಯದ ಅಬ್ದುಲ್ ಸತ್ತಾರ್, ಎಂಬವರು ತಮಗೆ ಸೇರಿದ್ದೆನ್ನಲಾದ ಯಲಹಂಕದ ಸರ್ವೇ ನಂಬರ್ 29/3ರ 7 ಗುಂಟೆ ನಿವೇಶನವನ್ನು ಕೆಲವು ವ್ಯಕ್ತಿಗಳು ಅತಿಕ್ರಮಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಆದರೂ ಏಪ್ರಿಲ್ 8 ರಂದು ಮಧ್ಯಾಹ್ನ 25 ಕ್ಕೂ ಹೆಚ್ಚು ಮಂದಿ ಸದರಿ ಸ್ಥಳಕ್ಕೆ ಬಂದು 'ತಾವು Mac Charles Hob Projects Pvt Ltd ಮತ್ತು Embassy ಕಂಪನಿ ಕಡೆಯವರು ಈ ನಿವೇಶನಕ್ಕೆ ತೆರಳಿ ಈ ಸ್ವತ್ತನ್ನು ತಮಗೆ ಬಿಟ್ಟುಕೊಟ್ಟು ಸ್ಥಳದಿಂದ ತೆರಳಬೇಕು' ಎಂದು ಅಬ್ದುಲ್ ಸತ್ತಾರ್ ಆರೋಪಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಭೇಟಿ ನೀಡಿರುವ ಪೊಲೀ...
ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಹುಬ್ಬಳ್ಳಿ, ಏ.12: ಹೈದರಾಬಾದ್‌ನಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ Fly91 Airlines ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ನಿಯಂತ್ರಣ ಸಮಸ್ಯೆ ಎದುರಿಸಿ, ಸುಮಾರು ಮೂರು ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಾಡಿದ ಘಟನೆ ಭಾನುವಾರ ನಡೆದಿದೆ. ಕೊನೆಗೆ ವಿಮಾನವನ್ನು ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಸಲಾಗಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.ಮಧ್ಯಾಹ್ನ 3 ಗಂಟೆಗೆ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದ ವಿಮಾನ, ಸಂಜೆ 4.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ, ಲ್ಯಾಂಡಿಂಗ್‌ಗೆ ಹಲವಾರು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗದೆ, ವಿಮಾನವು ಮುಂಡಗೋಡ, ದಾವಣಗೆರೆ, ಶಿವಮೊಗ್ಗ ಪ್ರದೇಶಗಳಲ್ಲಿ ಸುತ್ತಾಡಿತು. ಸಂಜೆ 7.30ರ ಸುಮಾರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು.ವಿಮಾನ ಲ್ಯಾಂಡಿಂಗ್ ವೇಳೆ ಉಂಟಾದ ತಾಂತ್ರಿಕ ದೋಷವೋ ಅಥವಾ ಹವಾಮಾನ ವೈಪರಿತ್ಯವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ನಡುವೆ, ವಿಮಾನ ದೀರ್ಘ ಕಾಲ ಆಗಸದಲ್ಲೇ ಸುತ್ತಾಡಿದ ಕಾರಣ ಪ್ರಯ...
ತೊಗರಿ ಖರೀದಿಗೆ ಒಂದು ತಿಂಗಳ ಅವಧಿ ವಿಸ್ತರಣೆ: ಚಲುವರಾಯಸ್ವಾಮಿ

ತೊಗರಿ ಖರೀದಿಗೆ ಒಂದು ತಿಂಗಳ ಅವಧಿ ವಿಸ್ತರಣೆ: ಚಲುವರಾಯಸ್ವಾಮಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ರೈತರಿಗೆ ಅನುಕೂಲವಾಗುವ ಮಹತ್ವದ ವಿಷಯವಾಗಿ, ಇಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ ನಡೆಸಿದರು.ಈ ವೇಳೆ 2025-26ನೇ ಸಾಲಿನ ಬೆಲೆ ಬೆಂಬಲ ಯೋಜನೆ (MSP) ಅಡಿಯಲ್ಲಿ ತೊಗರಿ (Tur/Arhar) ಖರೀದಿ ಅವಧಿಯನ್ನು ವಿಸ್ತರಿಸುವ ಕುರಿತು ರಾಜ್ಯ ಸರ್ಕಾರದಿಂದ ಸಲ್ಲಿಸಲಾದ ಪ್ರಸ್ತಾವನೆ ಬಗ್ಗೆ ವಿವರವಾದ ಚರ್ಚೆ ನಡೆಯಿತು.ರಾಜ್ಯದಲ್ಲಿ ತೊಗರಿ ಉತ್ಪಾದನೆ ಹೆಚ್ಚಿನ ಪ್ರಮಾಣದಲ್ಲಿರುವ ಹಿನ್ನೆಲೆಯಲ್ಲಿ, ಈಗಾಗಲೇ 98,610 ರೈತರು ನೋಂದಾಯಿಸಿಕೊಂಡಿದ್ದರೂ, ಅಂದಾಜು 12,834 ರೈತರು ಮಾತ್ರ ಯೋಜನೆಯ ಪ್ರಯೋಜನ ಪಡೆದಿದ್ದು, ಹೆಚ್ಚಿನ ರೈತರಿಗೆ ಅವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಸಚಿವರು ವಿವರಿಸಿದರು.ಮಾರುಕಟ್ಟೆಯಲ್ಲಿ ತೊಗರಿ ಬೆಲೆಗಳು ಕನಿಷ್ಠ ಬೆಂಬಲ ಬೆಲೆಯ ಸಮೀಪದಲ್ಲೇ ಇರುವುದರಿಂದ, ರೈತರ ಹಿತದೃಷ್ಟಿಯಿಂದ ಖರೀದಿ ಅವಧಿ ವಿಸ್ತರಣೆ ಅತ್ಯಾವಶ್ಯಕ ಎಂದು ಚಲುವರಾಯಸ್ವಾಮಿಯವರುತಿಳಿಸಿದರು..ಈ ಹಿನ್ನೆಲೆದಲ್ಲಿ, 31.03.2026 ರಂದು ಮು...
ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ‘ಋತುಸ್ರಾವ ರಜೆ’ ಕಡ್ಡಾಯವಾಗಿ ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.ಈ ಹಿಂದೆ ಸರ್ಕಾರ ಅನುಮೋದನೆ ನೀಡಿದ್ದರೂ, ಹಲವು ಕಂಪನಿಗಳು ಮತ್ತು ಸಂಸ್ಥೆಗಳು ಈ ಸೌಲಭ್ಯ ನೀಡಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ, ನೀತಿಯನ್ನು “ಕಟ್ಟುನಿಟ್ಟಾಗಿ ಮತ್ತು ನಂಬಿಕಸ್ತವಾಗಿ” ಜಾರಿಗೆ ತರಬೇಕು ಎಂದು ಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ.ಬೆಳಗಾವಿ ಜಿಲ್ಲೆಯ ಮೂಡಲಗಿಯ ಹೋಟೆಲ್ ನೌಕರರೊಬ್ಬರು ರಜೆ ನೀಡಲಾಗುತ್ತಿಲ್ಲ ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮಹಿಳೆಯರ ಜೈವಿಕ ಅಗತ್ಯತೆಗಳನ್ನು ಗೌರವಿಸುವುದು ಸಮಾನತೆಯ ಪ್ರಮುಖ ಅಂಶ ಎಂದು ಅಭಿಪ್ರಾಯಪಟ್ಟಿದೆ.ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, “ಋತುಸ್ರಾವ ಆರೋಗ್ಯವು ಸಂವಿಧಾನದ ವಿಧಿ 21ರಡಿ ಬರುವ ಬದುಕುವ ಹಕ್ಕಿನ ಅವಿಭಾಜ್ಯ ಅಂಗ. ಇದು ಕೇವಲ ರಜೆಯ ವಿಷಯವಲ್ಲ, ಮಹಿಳೆಯರ ಘನ...