Wednesday, August 12

ವಿದೇಶ

ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆ : ಪಾರದರ್ಶಕವಾಗಿರಬೇಕು, ಅರ್ಹರಿಗೆ ಅವಕಾಶ ಸಿಗಬೇಕು.. 

ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆ : ಪಾರದರ್ಶಕವಾಗಿರಬೇಕು, ಅರ್ಹರಿಗೆ ಅವಕಾಶ ಸಿಗಬೇಕು.. 

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು:  ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ಮತ್ತೊಂದು ಬಾರಿ ಡಿಸೆಂಬರ್ 29 ರಂದು ನಡೆದಿದೆ. ಇದರಲ್ಲಿ ಮತ್ತೊಮ್ಮೆ ಲೋಪದೋಷಗಳು ಕಂಡು ಬಂದಿದ್ದರಿಂದ ವಿಚಲಿತರಾಗಿರುವ ಅಭ್ಯರ್ಥಿಗಳು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಮರುಪರೀಕ್ಷೆಯಲ್ಲಿ ಕಂಡು ಬಂದ ಲೋಪದೋಷಗಳ ಬಗ್ಗೆ ಅಭ್ಯರ್ಥಿಗಳು ಪದೇ ಪದೆ ಅಳಲು ತೋಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೂ ಸಹ ಈ ಕುರಿತು ವರದಿ ಮಾಡಿವೆ. ಆದರೆ ಮರುಪರೀಕ್ಷೆ ನಡೆದು ಹದಿನೈದು ದಿನ ಕಳೆದರೂ ಈವರೆಗೆ ಸರ್ಕಾರವಾಗಲೀ, ಆಯೋಗವಾಗಲೀ, ಅಭ್ಯರ್ಥಿಗಳ ಆಕ್ಷೇಪಣೆಗಳಿಗೆ ಉತ್ತರ ನೀಡಿಲ್ಲ. ಲ...
ಮಾಧ್ಯಮಗಳಿಗೆ ಹೇಳಿಕೆ ನೀಡಬಾರದೆಂಬ ಎಚ್ಚರಿಕೆ ಉಲ್ಲಂಘಿಸಿದ ಸಚಿವರ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್

ಮಾಧ್ಯಮಗಳಿಗೆ ಹೇಳಿಕೆ ನೀಡಬಾರದೆಂಬ ಎಚ್ಚರಿಕೆ ಉಲ್ಲಂಘಿಸಿದ ಸಚಿವರ ವರದಿ ಕೇಳಿದ ಕಾಂಗ್ರೆಸ್ ಹೈಕಮಾಂಡ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕುರ್ಚಿ ಗುದ್ದಾಟ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಡುವಿನ ವಾಕ್ಸಮರ ಪಕ್ಷದ ಹೈಕಮಾಂಡ್‌ಗೆ ಮುಜುಗರ ತಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬದಲಾವಣೆ ಕುರಿತುವಯಾವ ನಾಯಕರೂ ಮಾಧ್ಯಮಗಳಿಗೆ ಹೇಳಿಕೆ ನೀಡಬಾರದು ಎಂದು ವರಿಷ್ಠರು ತಾಕೀತು ಮಾಡಿದ್ದಾರೆ. ಆದರೂ ನಾಯಕರ ಹೇಳಿಕೆಗಳು ಮುಂದುವರಿದಿದೆ.ಈ ನಡುವೆ, ಪಕ್ಷದ ಶಿಸ್ತು ಉಲ್ಲಂಘಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವ ಸಚಿವರ ಬಗ್ಗೆ ಹೈಕಮಾಂಡ್ ವರದಿ ಕೇಳಿದೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಹೈಕಮಾಂಡ್ ಆದೇಶ ಉಲ್ಲಂಘಸುವವರು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿಗಳಲ್ಲ ವರಿಷ್ಠರ ಅಭಿಪ್ರಾಯ ಎಂದಿದ್ದಾರೆ.ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಾಯಕತ್ವವು ನಮ್ಮ ಪಕ್ಷದಲ್ಲಿ ಬಲಿಷ್ಠವಾಗಿದೆ. ಕೆಪಿಸಿಸಿ ಅಧ್ಯಕ್ಷರು,ಹಾಗೂ ಮುಖ್ಯಮಂತ್ರಿಗಳನ್ನು. ಸಚಿವರನ್ನು ಯಾವಾಗ ಬದಲಾವಣೆ ಮಾಡಬೇಕು? ಮುಂದುವರಿಸಬೇಕು ಎಂಬಿತ್ಯಾದಿ ವಿಷಯಗಳನ್ನು ಪಕ್ಷದ ಹೈಕಮಾಂಡ್ ನಾಯಕರು ನಿರ್ಧಾರ ಮಾಡಲಿದ್ದಾರೆ. ಆದರೆ, ಈ ಸಂಬಂಧ ಯಾವುದೇ ಸಚಿ...
ಜಾತಿ ಜನಗಣತಿ: ಸಿಎಂ ಆತ್ಮಸಾಕ್ಷಿಗೆ ಪ್ರತಿಪಕ್ಷದ ಪ್ರಶ್ನೆಗಳ ಸವಾಲು

ಜಾತಿ ಜನಗಣತಿ: ಸಿಎಂ ಆತ್ಮಸಾಕ್ಷಿಗೆ ಪ್ರತಿಪಕ್ಷದ ಪ್ರಶ್ನೆಗಳ ಸವಾಲು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ನೆನಪಾಗುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.ಜಾತಿ ಜನಗಣತಿ ಬಗ್ಗೆ ಬಿಜೆಪಿ ಪಕ್ಷಕ್ಕಾಗಲಿ ಅಥವಾ ವೈಯಕ್ತಿಕವಾಗಿ ನನಗಾಗಲಿ ಯಾವ ತಕರಾರು ಇಲ್ಲ ಅಥವಾ ವಿರೋಧವೂ ಇಲ್ಲ. ಬಿಜೆಪಿಯ ಮೂಲಸಿದ್ಧಾಂತವಾದ 'ಅಂತ್ಯೋದಯ'ದ ಪರಿಕಾಲ್ಪನೆಯಲ್ಲೇ ತಳ ಸಮುದಾಯಗಳನ್ನ ರಾಜಕೀಯವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂಬ ಸಾಮಾಜಿಕ ನ್ಯಾಯದ ಬದ್ಧತೆ ಅಡಗಿದೆ. ಅದನ್ನ ಸಾಕಾರಗೊಳಿಸುವ ಯಾವ ಪ್ರಾಮಾಣಿಕ ಪ್ರಯತ್ನಕ್ಕಾದರೂ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದು ಆಶಾ ಟ್ವೀಟ್ ಮಾಡಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ ಆಟದಲ್ಲಿ ಕೆಳಗೆ ಬಿದ್ದಾಗ ಮೇಲೇಳಲು, ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿಯನ್ನ ಏಣಿಯಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ತಕರಾರಿದೆ ಎಂದಿರುವ ಅಶೋಕ್, ಮುಂಬರುವ ಸಚಿ...
ಜಾತಿ ಗಣತಿ ವರದಿ: ಗುರುವಾರದ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಸಾಧ್ಯತೆ

ಜಾತಿ ಗಣತಿ ವರದಿ: ಗುರುವಾರದ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಸಾಧ್ಯತೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಬಹು ನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುತ್ತದೆ ಎಂದು ತಿಳಿಸಿರುವ ಎಂದು ಗೃಹ ಸಚಿವ ಪರಮೇಶ್ವರ್, ಅನಂತರ ವಿಷಯಗಳನ್ನು ಸಾರ್ವಜನಿಕಗೊಳಿಸುವ ಸಾಧ್ಯತೆಯಿದೆ ಹೇಳಿದ್ದಾರೆ.ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿರುವ ಪರಮೇಶ್ವರ್, ವರದಿಯನ್ನು ಆಧರಿಸಿದ ಯಾವುದೇ ನಿರ್ಧಾರವು ಸರ್ಕಾರದ ವಿಶೇಷಾಧಿಕಾರವಾಗಿದ್ದು, ಪರಾಮರ್ಶಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ ಜಯಪ್ರಕಾಶ್ ಹೆಗ್ಡೆ ಅವರ ನೇತೃತ್ವದಲ್ಲಿ ಕಳೆದ ವರ್ಷ ಫೆಬ್ರವರಿ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿಯನ್ನು ಸಲ್ಲಿಸಿತ್ತು. ಈ ವರ್ದಿ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿರುವಾಗಲೇ ಸಿದ್ದರಾಮಯ್ಯ ಸರ್ಕಾರ ತಮ್ಮದೇ ಆದ ಕ್ರಮಕ್ಕೆ ಮುಂದಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ....
ಹಸುವಿನ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಹಸುವಿನ ಕೆಚ್ಚಲು ಕೊಯ್ದ ಘಟನೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣದ ಸೂಕ್ತ ತನಿಖೆಗಾಗಿ ಆಗ್ರಹಿಸಿ ಬಿಜೆಪಿ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲಿದೆ. ಈ ಘಟನೆಯಿಂದ ಹಿಂದೂಗಳನ್ನು ಬೆದರಿಸಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದು, ರಕ್ತ ಸುರಿಯುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಆದರೆ ಇದು ಒಬ್ಬರೇ ಮಾಡಿದ ಕೃತ್ಯವಲ್ಲ. ಇದರಲ್ಲಿ ಹಲವರು ಭಾಗಿಯಾಗಿದ್ದಾರೆ. ಈ ಕುರಿತು ಪೊಲೀಸರು ಸರಿಯಾಗಿ ತನಿಖೆ ಮಾಡಬೇಕಿತ್ತು. ಈಗ ಸಂಕ್ರಾಂತಿ ಹಬ್ಬ ನಡೆಯುತ್ತಿದೆ. ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭಮೇಳ ನಡೆಯುತ್ತಿದೆ. ಇಂತಹ ಸಮಯದಲ್ಲೇ ಈ ಕೃತ್ಯ ಮಾಡುವುದರ ಜೊತೆಗೆ ಹಸು ಮಾಲೀಕ ಕರ್ಣ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಹಸುವನ್ನು ಪಡೆಯುವಂತೆ ಒತ್ತಡ ಹೇರಿದ್ದಾರೆ ಎಂದು ದೂರಿದರು.1 ಲಕ್ಷ ರೂ. ಪರಿಹಾರವನ್ನು ಹಸು ಮಾಲೀಕ ಕರ್ಣ ಅವರಿಗೆ ಬಿಜೆಪಿ ವತಿಯಿಂದ ನೀಡಲಾಗಿದೆ. ಹಿಂದೂಗಳು ಬೇಡುವ ಸ್ಥಿತಿಯಲ್ಲಿಲ್ಲ. ಕಾಂಗ್ರೆಸ್‌ನವರು ಒಂದು ಕೈಯಲ್ಲಿ ಹಸುವನ್ನು ನೀಡುತ್ತಾರೆ. ಮತ್ತೊಂ...
ಹಸುವಿನ ಕೆಚ್ಚಲು ಕೊಯ್ದ ಘಟನೆ; ಹಸು ಮಾಲೀಕರಿಗೆ ಬಿಜೆಪಿಯಿಂದ ಪರಿಹಾರ

ಹಸುವಿನ ಕೆಚ್ಚಲು ಕೊಯ್ದ ಘಟನೆ; ಹಸು ಮಾಲೀಕರಿಗೆ ಬಿಜೆಪಿಯಿಂದ ಪರಿಹಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣ ಬಗ್ಗೆ ಬಿಜೆಪಿ ಆಕ್ರೋಶ ಹೊರಹಾಕಿದೆ. ಸಂತ್ರಸ್ತರ ಗೋಳನ್ನು ಸರ್ಕಾರ ಕೇಳಲಿಲ್ಲ ಎಂದು ಆರೋಪಿಸಿರುವ ಬಿಜೆಪಿ ನಾಯಕರು ತಾವೇ ಹಸುಮಾಲೀಕರಿಗೆ ಪರಿಹಾರ ನೀಡಿ ಮಾನವೀಯತೆ ಮೆರೆದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರನ್ನೊಳಗೊಂಡ ಬಿಜೆಪಿ ನಿಯೋಗ ಸಂತ್ರಸ್ತರನ್ನು ಭೇಟಿಮಾಡಿ 1 ಲಕ್ಷ ರೂ. ಪರಿಹಾರವನ್ನು ನೀಡಿದ್ದಾರೆ.ದನದ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಮತ್ತು ಪ್ರತಿಪಕ್ಷ ನಾಯಕರಾದ ಶ್ರೀ @RAshokaBJP ಅವರು ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿ, ಗೋ ಪೂಜೆ ನೆರವೇರಿಸಿ ಪಕ್ಷದ ವತಿಯಿಂದ ಗೋವನ್ನು ಸಂತ್ರಸ್ತರಿಗೆ ನೀಡಿದರು.ಈ… pic.twitter.com/1ibb9aSlrf — BJP Karnataka (@BJP4Karnataka) January 14, 2025...
ಡಾಲಿ ಧನಂಜಯ್, ನಾಗಭೂಷಣ್ ಕಾಂಬಿನೇಷನ್​ನ ‘ವಿದ್ಯಾಪತಿ’ ಬಿಡುಗಡೆಗೆ ಡೇಟ್ ಫಿಕ್ಸ್

ಡಾಲಿ ಧನಂಜಯ್, ನಾಗಭೂಷಣ್ ಕಾಂಬಿನೇಷನ್​ನ ‘ವಿದ್ಯಾಪತಿ’ ಬಿಡುಗಡೆಗೆ ಡೇಟ್ ಫಿಕ್ಸ್

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ, ಸಿನಿಮಾ
ಡಾಲಿ ಧನಂಜಯ್ ಮತ್ತು ನಾಗಭೂಷಣ್ ಕಾಂಬಿನೇಷನ್​ನ ಸಿನಿಮಾ ‘ವಿದ್ಯಾಪತಿ’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಡಾಲಿ ಧನಂಜಯ್ ನಿರ್ಮಾಣ ಮಾಡಿರುವ, ನಾಗಭೂಷಣ್ ನಟಿಸಿರುವ ‘ವಿದ್ಯಾಪತಿ’ ಮುಂಬರುವ ಏಪ್ರಿಲ್ ೧೦ರಂದು ಬಿಡುಗಡೆಯಾಗಲಿದೆ. ಈ ಕುರಿತಂತೆ ಡಾಲಿ ಪಿಕ್ಚರ್ಸ್ ತಂಡ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. View this post on Instagram  A post shared by Daali Pictures (@daalipictures)...
ನಾಡಿನಾದ್ಯಂತ ಮಕರ ಸಂಕ್ರಾಂತಿ ವೈಭವ; ದೇವಕಾಲಯಗಳಲ್ಲಿ ವಿಶೇಷ ಕೈಂಕರ್ಯ

ನಾಡಿನಾದ್ಯಂತ ಮಕರ ಸಂಕ್ರಾಂತಿ ವೈಭವ; ದೇವಕಾಲಯಗಳಲ್ಲಿ ವಿಶೇಷ ಕೈಂಕರ್ಯ

ಆಧ್ಯಾತ್ಮ, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವಿಶೇಷ
ಬೆಂಗಳೂರು: ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಉತ್ತರಾಯಣ ಪರ್ವಕಾಲವನ್ನು ಸ್ವಾಗತಿಸುವ ಕೈಂಕರ್ಯ ಎಲ್ಲೆಡೆ ಸಾಗಿದೆ. ಎಲ್ಲೆಲ್ಲೂ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಅದರಲ್ಲೂ ಅಯ್ಯಪ್ಪ ದೇಗುಲಗಳಲ್ಲಿ ಮಕರ ಸಂಕ್ರಾಂತಿಯನ್ನು ವಿಶೇಷ ವೈಭವ ರೀತಿಯಲ್ಲಿ ಅಕ್ಕಿಗರಿಸಲಾಗುತ್ತಿದೆ.ಬೆಂಗಳೂರಿನ ಗವಿಪುರದಲ್ಲಿರುವ ಗವಿಗಂಗಾಧರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿದ್ದು ಇಂದು ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ವಿಸ್ಮಯಕ್ಕೆ ಸಾಕ್ಷಿಯಾಗಲಿದೆ. ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಅಭೀಷೇಕ, ನೆರವೇರಿದ್ದು, ದೇಗುಲಗಳು ಭಕ್ತಸಮೂಹದಿಂದ ತುಂಬಿವೆ....
ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ಕಾಂಗ್ರೆಸ್ ತೀರ್ಮಾನ

ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ಕಾಂಗ್ರೆಸ್ ತೀರ್ಮಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ, ಈ ತಿಂಗಳ 21ರಂದು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ. ಇದರ ಜತೆಗೆ ಕೆಪಿಸಿಸಿ ಅಧ್ಯಕ್ಷರು, ಸಿಎಂ ಸೇರಿ ಚರ್ಚೆ ಮಾಡಿ ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ತೀರ್ಮಾನಿಸಿದ್ದಾರೆ. ಮುಂದಿನ ತಿಂಗಳು ಫೆಬ್ರವರಿ ತಿಂಗಳಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಲ್ಲಿ ಒಟ್ಟಿಗೆ ಈ ಎಲ್ಲಾ ಕಚೇರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದರು.ಈಗಾಗಲೇ 74 ಕಚೇರಿಗಳ ನಿರ್ಮಾಣದ ಜಾಗ ಗುರುತಿಸಲಾಗಿದ್ದು, ಉಳಿದ ಕಚೇರಿಗಳ ನಿರ್ಮಾಣದ ಬಗ್ಗೆ ಪಕ್ಷ ಶೀಘ್ರ ತೀರ್ಮಾನ ಮಾಡಲಿದೆ ಎಂದವರು ವಿವರಿಸಿದರು. ಇನ್ನು ಈ ವರ್ಷ ಪಕ್ಷದ ಸಂಘಟನೆಗೆ ಆದ್ಯತೆ ನೀಡಲಾಗಿದ್ದು, ಪಂಚಾಯ್ತಿ ಹಾಗೂ ವಾರ್ಡ್ ಮಟ್ಟದ ಸಮಿತಿಗಳನ್ನು ರಚಿಸಲು ಗಮನ ಹರಿಸಲಾಗುವುದ...
ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು ಹುಡುಕಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಿಂದೂಗಳಿಗೆ ಘಾಸಿಯಾಗುವ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುಗಳ ಕೆಚ್ಚಲು ಕೊಯ್ದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದೆ. ಈಗ ಕಾಟಾಚಾರಕ್ಕಾಗಿ ಒಬ್ಬನನ್ನು ಬಂಧಿಸಿದ್ದು, ಈತ ಬಿಹಾರದಿಂದ ಬಂದವನು ಎನ್ನಲಾಗಿದೆ. ಆದರೆ ಈತ ಇದೇ ಊರಿನಲ್ಲಿ ಹತ್ತು ವರ್ಷಗಳಿಂದ ನೆಲೆಸಿದ್ದು, ಆತನ ಅಣ್ಣನಿಗೆ ಫ್ಯಾಕ್ಟರಿ ಕೂಡ ಇದೆ. ಪೊಲೀಸರು ಈತನನ್ನು ವಿಚಾರಣೆ ಮಾಡಿ, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಮಾಡಬೇಕಿತ್ತು ಎಂದರು.ಈ ಘಟನೆಯಲ್ಲಿ ಯಾರ ಕೈವಾಡವಿದೆ ಎಂದು ತನಿಖೆ ಮಾಡಬೇಕಿತ್ತು. ಇಲ್ಲಿ ಪಶು ಆಸ್ಪತ್ರೆಯ ಜಾಗವಿದ್ದು, ಅದನ್ನು ವಕ್ಫ್‌ಗೆ ನೀಡಲು ಪ್ರಯತ್ನ ನಡೆ...