Wednesday, August 12

ವಿದೇಶ

ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ ಎಂದ ಡಿಕೆಶಿ

ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ ಎಂದ ಡಿಕೆಶಿ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಿಚಾರವಾಗಿ ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕ್ರ.ಶಿವಕುಮಾರ್ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದರು. ಈ ವಿಚಾರವನ್ನು ನಾವು ಕೂಲಂಕುಶವಾಗಿ ಪರಿಶೀಲಿಸುತ್ತಿದ್ದು, ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಿಚಾರವಾಗಿ ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದರು ತಿಳಿಸಿದರು.ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಉಸ್ತುವಾರಿಗಳು ನೋಡಿಕೊಳ್ಳುತ್ತಾರೆ ಎಂದು ಡಿಕೆಶಿ ತಿಳಿಸಿದರು.ಸಚಿವರ ಕಾರ್ಯಗಳ ಬಗ್ಗೆ ವರದಿ ಸಲ್ಲಿಕೆ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, ಸಚಿವರ ಕಾರ್ಯಗಳ ವಿಚಾರವಾಗಿ ಮುಖ್ಯಮಂತ್ರಿಗಳು ಹೈಕಮಾಂಡ್ ಗೆ ವರದಿ ಸಲ್ಲಿಸಿದ್ದಾರೆ. ಈ ವರದಿಯನ್ನು ಎಐಸಿಸಿ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು....
ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಸಿದ್ಧತೆ ; ಪಕ್ಷ ಸಂಘಟನೆ ಬಗ್ಗೆ ಡಿಕೆಶಿ ಚರ್ಚೆ

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಸಿದ್ಧತೆ ; ಪಕ್ಷ ಸಂಘಟನೆ ಬಗ್ಗೆ ಡಿಕೆಶಿ ಚರ್ಚೆ

ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸಂಘಟನೆಗಾಗಿ ನಮ್ಮ ಪಕ್ಷ ಹಾಗೂ ಸರ್ಕಾರ ಇಡೀ ದಿನ ಮುಡಿಪಾಗಿಟ್ಟು ಸಭೆ ನಡೆಸಲಾಗಿದೆ. ಈ ವರ್ಷ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದು ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಸಿದ್ಧತೆ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಭಾರತ ಜೋಡೋ ಭವನದಲ್ಲಿ ಪಕ್ಷದ ಶಾಸಕರು, ಸಚಿವರು, ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳ ಸಭೆ ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಶಿವಕುಮಾರ್, “ಬೆಳಗ್ಗೆ 12 ಗಂಟೆಗೆ ಶಾಸಕರು, ಮಂತ್ರಿಗಳು, ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಪ್ರಮುಖ ಘಟಕಗಳ ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಭೆ ಮಾಡಿದ್ದೇವೆ. ಗಾಂಧಿ ಭಾರತದ ಕಾರ್ಯಕ್ರಮ ಅಂಗವಾಗಿ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯ ನಿರ್ಣಯಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ಮಾಡಲಾಗ...
‘ವಿಕಸಿತ ಭಾರತದಲ್ಲಿ ಮಹಿಳೆಯರ ಪಾತ್ರ’: ಚಿಂತನಶೀಲ ಯುವಜನರಲ್ಲಿ ಆಶಾವಾದ ಹೆಚ್ಚಿಸಿದ ವಿಚಾರ ಸಂಕಿರಣ

‘ವಿಕಸಿತ ಭಾರತದಲ್ಲಿ ಮಹಿಳೆಯರ ಪಾತ್ರ’: ಚಿಂತನಶೀಲ ಯುವಜನರಲ್ಲಿ ಆಶಾವಾದ ಹೆಚ್ಚಿಸಿದ ವಿಚಾರ ಸಂಕಿರಣ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಸದಾ ಒಂದಿಲ್ಲೊಂದು ಪ್ರಯೋಗಶೀಲ ಅಧ್ಯಯನದಿಂದ ಸುದ್ದಿಯ ಕೇಂದ್ರಬಿಂದುವಾಗುತ್ತಿರುವ ಬೆಂಗಳೂರಿನ 'ಅಲಯನ್ಸ್ ವಿಶ್ವವಿದ್ಯಾಲಯ'ದಲ್ಲಿ ನಡೆದ  'ವಿಕಸಿತ ಭಾರತದಲ್ಲಿ ಮಹಿಳೆಯರ ಪಾತ್ರ”ವಿಚಾರ ಸಂಕಿರಣ ಅರ್ಥಪೂರ್ಣ ಕಾರ್ಯಕ್ರಮವಾಗಿ ಗಮನಸೆಳೆಯಿತು.  ಅಲಯನ್ಸ್ ಮಹಿಳಾ ಸಬಲೀಕರಣ ಕೇಂದ್ರದ ವತಿಯಿಂದ  ಶನಿವಾರ ನಡೆದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಾಲತಿ ಕೃಷ್ಣಮೂರ್ತಿ ಹೊಳ್ಳ, ನಟಿ ಮೇಘನಾ ಗಾಂವ್ಕರ್  ಉದ್ಘಾಟಿಸಿದರು.ಚಿಂತನಶೀಲ ಯುವಜನ ಸಮೂಹವನ್ನುದ್ದೇಶಿಸಿ ಮಾತನಾಡಿದ ಮಾಲತಿ ಕೃಷ್ಣಮೂರ್ತಿ ಹೊಳ್ಳ, ಮುಂದಿನ ಗುರಿಯೊಂದಿಗೆ ಇಂದಿನ ಕನಸುಗಳನ್ನು ನನಸು ಮಾಡಬೇಕಾದ ಜವಬ್ದಾರಿ ಮಹಿಳೆಯರ ಮೇಲಿದೆ. ಈ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಮಹಿಳೆಯರು ಕೊಡುಗೆ ನೀಡಬೇಕು. ನೂನ್ಯತೆಗಳನ್ನು ಎದುರಿಸಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ. ತಮಗೆ ದೇಹದಲ್ಲಿ ವಿಕಲತೆಯಿರಬಹುದು ಆದರೆ ಆತ್ಮವಿಶ್ವಾಸ, ಗುರಿ ಸಾಧಿಸುವ ಛಲ, ಕನಸುಗಳಲ್ಲಿ ಯಾವುಏ ನ್ಯೂನತೆಯಿಲ್ಲ. ಇದರಿಂದಾಗಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು. ವಿಲೇಚೇರ್ ನನಗೆ ಸಿಂಹಾಸನದಂತಾಗಿದೆ...
ಈ ಬಾರಿ ಚುನಾವಣಾ ಮೂಲಕ ಜೆಡಿಎಸ್‌ ರಾಜ್ಯಾಧ್ಯಕ್ಷರ ಆಯ್ಕೆ: ಹೆಚ್ಡಿಕೆ

ಈ ಬಾರಿ ಚುನಾವಣಾ ಮೂಲಕ ಜೆಡಿಎಸ್‌ ರಾಜ್ಯಾಧ್ಯಕ್ಷರ ಆಯ್ಕೆ: ಹೆಚ್ಡಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಜಾತ್ಯತೀತ ಜನತಾ ದಳ (ಜೆಡಿಎಸ್‌) ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಎಪ್ರಿಲ್‌ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸಲಾಗುತ್ತದೆ ಎಂದು ಪಕ್ಷದ ರಾಜ್ಯಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ಕೇಂದ್ರ ಸಚಿವರೂ ಆದ ಕುಮಾರಸ್ವಾಮಿ, ಪಕ್ಷದ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ಚುನಾಯಿತ ಪ್ರತಿನಿಧಿಗಳು, ಮುಖಂಡರ ಸಭೆ ನಡೆಸಿದರು. ಈ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಎಪ್ರಿಲ್‌ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಕೈಗೊಳ್ಳಲಾಯಿತು. ಸಭೆಯ ನಂತರ ಈ ಕುರಿತಂತೆ ಎಚ್‌.ಡಿ. ಕುಮಾರಸ್ವಾಮಿ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮೂಲಕ ಆಯ್ಕೆ ಮಾಡುವ ತೀರ್ಮಾನ ಆಗಿದೆ. ಆದರೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಅವರು ತಿಳಿಸಿದರು.ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆದಿದೆ. ಆದರೆ ಕುಮಾರಸ್ವಾಮಿ ಪುತ್ರನನ್ನೇ ಯಾಕೆ ಉನ್ನತ ಹುದ್ದೆಗೆ ಆಯ್ಕೆ ಮಾಡಬೇ...
ಕುಂಬಳೆ: ಗಂಟಲಲ್ಲಿ ಪಿಸ್ತಾದ ಸಿಪ್ಪೆ ಸಿಲುಕಿ ಮಗು ಸಾವು

ಕುಂಬಳೆ: ಗಂಟಲಲ್ಲಿ ಪಿಸ್ತಾದ ಸಿಪ್ಪೆ ಸಿಲುಕಿ ಮಗು ಸಾವು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕಾಸರಗೋಡು: ಮಗುವೊಂದು ತನ್ನ ಗಂಟಲಲ್ಲಿ ಪಿಸ್ತಾದ ಸಿಪ್ಪೆ ಸಿಲುಕಿದ್ದರಿಂದ ಸಾವನ್ನಪಿರುವ ಘಟನೆ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿ ನಡೆದಿದೆ.ಕುಂಬಳೆ ಭಾಸ್ಕರ ನಗರ ನಿವಾಸಿ ಅನ್ವರ್ ಎಂಬವರ ಪುತ್ರ ಅನಸ್ ಮೃತಪಟ್ಟ ಬಾಲಕ. ಈ ಎರಡು ವರ್ಷದ ಬಾಲಕ ಶನಿವಾರ ಪಿಸ್ತಾವನ್ನು ತಿನ್ನುತ್ತಿದ್ದಾಗ ಅದರ ಸಿಪ್ಪೆ ಗಂಟಲಲ್ಲಿ ಸಿಲುಕಿಡೇ ಎನ್ನಲಾಗಿದೆ. ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದು ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದರು. ವೈದ್ಯರ ತಪಾಸಣೆ ವೇಳೆ ಮಗುವಿನ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿರುವುದು ಕಂಡುಬರಲಿಲ್ಲ. ಹಾಗಾಗಿ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, ಭಾನುವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕೊಡಲಿಲ್ಲ.ಮಗುವಿನ ತಂದೆ ಅನ್ವರ್ ವಿದೇಶದಲ್ಲಿದ್ದು, ಇತ್ತೀಚೆಗಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದು, ರಜೆ ಮುಗಿಸಿ ಕೆಲ ದಿನಗಳ ಹಿಂದೆಷ್ಟೇ ವಿದೇಶಕ್ಕೆ ಮರಳಿದ್ದರು....
ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ದುರುಳರು; ಕಿಡಿಗೇಡಿಗಳ ಬಂಧನಕ್ಕೆ ಸಿಎಂ ಸೂಚನೆ

ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ದುರುಳರು; ಕಿಡಿಗೇಡಿಗಳ ಬಂಧನಕ್ಕೆ ಸಿಎಂ ಸೂಚನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಕಿಡುಗೇಡಿಗಳು ಮೂರು ಹಸುಗಳ ಕೆಚ್ಚಲು ಕತ್ತರಿಸಿರುವ ಕೃತ್ಯದಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಕೃತ್ಯವನ್ನು ಖಂಡಿಸಿರುವ ಪ್ರತಿಪಕ್ಷ ನಾಯಕರು ಹಾಗೂ ಹಿಂದೂ ಸಂಘಟನೆಗಳ ಮುಖಂಡರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದೇ ವೇಳೆ ಘಟನೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಜರುಗಿಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ಆದೇಶಿಸಿದ್ದಾರೆ.ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರಿಗೆ ಸೂಚಿಸಿದ್ದೇನೆ. ಯಾರೇ ಕೃತ್ಯ ಎಸಗಿದ್ದರು ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಹಿಂದೂ ಸಂಘಟನೆಗಳು ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು....
ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಕ್ರಮ ವಹಿಸದಿದ್ದರೆ ಕರಾಳ ಸಂಕ್ರಾಂತಿ ‌ಆಚರಣೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ

ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಕ್ರಮ ವಹಿಸದಿದ್ದರೆ ಕರಾಳ ಸಂಕ್ರಾಂತಿ ‌ಆಚರಣೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ವಹಿಸದಿದ್ದರೆ, ರಾಜ್ಯದಾದ್ಯಂತ ಕರಾಳ ಸಂಕ್ರಾಂತಿ ಆಚರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.ಚಾಮರಾಜಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ದೇಶ ಗೋವನ್ನು ಪವಿತ್ರ ಎಂದು ಪರಿಗಣಿಸಿದೆ. ಸಂಕ್ರಾಂತಿ ಹಬ್ಬದಲ್ಲೂ ಗೋವನ್ನು ಪೂಜಿಸಲಾಗುತ್ತದೆ. ಕಾಂಗ್ರೆಸ್ ಸರ್ಕಾರ ಹೊಸ ವರ್ಷಕ್ಕೆ ಬೆಲೆ ಏರಿಕೆಯ ಕೊಡುಗೆ ನೀಡಿದೆ.‌ ಅದೇ ರೀತಿ ಸಂಕ್ರಾಂತಿ ಹಬ್ಬದ ಸಮಯದಲ್ಲಿ ಹಸುವಿನ ಕೆಚ್ಚಲು ಕೊಯ್ದುಹಾಕುವ ಕೊಡುಗೆಯನ್ನು ನೀಡಿದೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಾನು ಈವರೆಗೆ ನೋಡಿಲ್ಲ ಎಂದರು.ನೂರಾರು ವರ್ಷಗಳಿಂದ ಚಾಮರಾಜಪೇಟೆಯಲ್ಲಿ ಪಶು ಆಸ್ಪತ್ರೆ ಇದೆ. ಈ ಭೂಮಿಯನ್ನು ವಕ್ಫ್ ಮಂಡಳಿಗೆ ಸೇರಿಸಲು ಪ್ರಯತ್ನ ನಡೆದಿತ್ತು. ಆಗ ಸರ್ಕಾರದ ವಿರುದ್ಧ ಪ್ರತಿಭಟಿಸುವುದರ ಜೊತೆಗೆ, ಕೋರ್ಟ್ ಮೊರೆ ಹೋಗಲಾಯಿತು. ಪ್ರತಿಭಟನೆಯ ಸಮಯದಲ್ಲಿ ಇವೇ ಹಸುಗಳನ್ನು ತೋರಿಸಲಾಗಿತ್ತು. ಅದಕ್ಕಾಗಿಯೇ ಮಚ್ಚು, ಡ್ರ್ಯಾಗರ್ ಬಳಸಿ ಹಸುಗಳ ಕೆಚ್ಚಲು ಕೊಯ್ದು, ಕಾಲು ಕತ್ತರಿಸಲಾಗಿದೆ ಎಂದು ಆಕ್ರೋಶ ವ...
ಡಿಕೆಶಿ ಅಂದರೆ ‘D (ಡ್ರಾಮ) K (ಕಿಂಗ್) ಶಿವಕುಮಾರ್..! ಶಾಸಕ ಸಿ.ಟಿ.ರವಿ ವ್ಯಂಗ್ಯ

ಡಿಕೆಶಿ ಅಂದರೆ ‘D (ಡ್ರಾಮ) K (ಕಿಂಗ್) ಶಿವಕುಮಾರ್..! ಶಾಸಕ ಸಿ.ಟಿ.ರವಿ ವ್ಯಂಗ್ಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಉಪಮುಖ್ಯಮಂತ್ರಿಯಾಗಿ ಎಲ್ಲರ ಪರವಾಗಿ ನ್ಯಾಯಾಧೀಶರಾಗಿರಬೇಕಿರುವ ಡಿ.ಕೆ.ಶಿವಕುಮಾರ್ ಅವರು ದುರದೃಷ್ಟವಾಶಾತ್ ಯಾರದ್ದೋ ವಕೀಲರಾಗಿಬಿಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಬಣ್ಣಿಸಿದ್ದಾರೆ. ಡಿಕೆಶಿ ಅಂದರೆ 'ಡಿ (ಡ್ರಾಮ) ಕೆ (ಕಿಂಗ್) ಶಿವಕುಮಾರ್' ಎಂದು ಸಿ.ಟಿ.ರವಿ ಲೇವಡಿ ವ್ಯಂಗ್ಯವಾಡಿದ್ದಾರೆ.'ನೀವು ಉಪಮುಖ್ಯಮಂತ್ರಿಗಳು ಎನ್ನುವುದನ್ನು ಮರೆತು ಬಿಟ್ಟಿದ್ದೀರಿ. ನೀವು ನ್ಯಾಯಾಧೀಶರ ಸ್ಥಾನದಲ್ಲಿ ಇದ್ದು, ಸತ್ಯಾಸತ್ಯತೆಯನ್ನು ವಿಚಾರ ಮಾಡಬೇಕಾದವರು ದುರದೃಷ್ಟವಾಶಾತ್ ಯಾರದ್ದೋ ವಕೀಲರಾಗಿಬಿಟ್ಟಿದ್ದೀರಿ. ಯಾರು ಮೋಹ ಮದ ಮಾತ್ಸರ್ಯಗಳಿಂದ ಹೊರಗಿದ್ದು ನೋಡುತ್ತಾರೋ ಅವರಿಗೆ ಸತ್ಯಾಸತ್ಯಾತೆ ಗೊತ್ತಾಗುತ್ತದೆ. ಮೋಹಪರವಶರಾದವರಿಗೆ, ಅಧಿಕಾರದ ಮದದಿಂದ ಕೂಡಿದವರಿಗೆ, ಮಾತ್ಸರ್ಯದ ರಾಜಕಾರಣ ಮಾಡುವವರಿಗೆ ಸತ್ಯ ಅರ್ಥ ಆಗಲಿಕ್ಕೆ ಸಾಧ್ಯವಿಲ್ಲ' ಎಂದು ಸಿ.ಟಿ.ರವಿ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ.ಸಭಾಪತಿಗಳ ರೂಲಿಂಗ್ ನೀಡಿದ ನಂತರ ನೀವುಗಳು, ನಿಮ್ಮ ಪಕ್ಷದ ಶಾಸಕರು ನಡೆದುಕೊಂಡ ರೀತಿ ನಿಮಗುಚಿತವೇ? ಗೂoಡಾಗಳನ್ನೂ, ಜೊತೆಗಾರರನ್ನು ಎತ್ತ...
ಪ್ರಿಯಾಂಕ್ ಖರ್ಗೆ ಮಾತಿಗೆ ಬೆದರಿದರೆ ವಿಜಯೇಂದ್ರ? ಯತ್ನಾಳ್ ಹೇಳಿದ್ದೇನು?

ಪ್ರಿಯಾಂಕ್ ಖರ್ಗೆ ಮಾತಿಗೆ ಬೆದರಿದರೆ ವಿಜಯೇಂದ್ರ? ಯತ್ನಾಳ್ ಹೇಳಿದ್ದೇನು?

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ವಿಜಯಪುರ: ಮಾಜಿ ಸಿಎಂ ಯಡಿಯೂರಪ್ಪ ಅವರ ಬಂಡವಾಳ ಬಯಲು ಮಾಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆದರಿಕೆ ಕಾರಣದಿಂದಾಗಿ ಬಿಜೆಪಿ ವಿಜಯೇಂದ್ರ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲು ಹಿಂದೇಟು ಹಾಕಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಶನಿವಾರ ಹೊಸ ಬಾಂಬ್ ಸಿಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡುತ್ತಾ ವಿಜಯೇಂದ್ರ ವಿರುದ್ಧ ಶನಿವಾರ ಟೀಕಾಸ್ತ್ರ ಪ್ರಯೋಗಿಸಿದ ಯತ್ನಾಳ್, ಕಲಬುರಗಿಯಲ್ಲಿ ನನ್ನ‌ ವಿರುದ್ಧ ಪ್ರತಿಭಟನೆಗೆ ಬರಬೇಡಿ, ಬಂದರೆ ನಿಮ್ಮ ತಂದೆಯ ಬಂಡವಾಳ ಬಯಲು ಮಾಡುತ್ತೇನೆಂದು ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ್ದರು. ಇದೇ ಕಾರಣಕ್ಕಾಗಿ ವಿಜಯೇಂದ್ರ ಕಲಬುರಗಿಯಲ್ಲಿ ನಡೆದ ಪ್ರತಿಭಟನೆಗೆ ಹೋಗಿರಲಿಲ್ಲ ಎಂದರು.ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ಹಿತೈಷಿಗಳೇ ಕಲಬುರಗಿಯಲ್ಲಿ ದೊಡ್ಡ ಮಟ್ಟದ ಹೋರಾಟ ಆಯೋಜಿಸಿದ್ದರು. ಆದರೂ ತಾನು ಹೋರಾಟಕ್ಕೆ ಏಕೆ ಹೋಗಲಿಲ್ಲ ಎಂದು ವಿಜಯೇಂದ್ರನೇ ಉತ್ತರಿಸಬೇಕು ಎಂದವರು ಹೇಳಿದರು....
ಅಂದು ‘ಪೇ ಸಿಎಂ ಸೇ ಸಿಎಂ’, ಇದೀಗ ‘ಹೇ ಸಿಎಂ ಸೇ ಸಿಎಂ’; ಸಿದ್ದು ಸರ್ಕಾರಕ್ಕೆ ಮುಜುಗರ ತಂದ CRF ದೂರು

ಅಂದು ‘ಪೇ ಸಿಎಂ ಸೇ ಸಿಎಂ’, ಇದೀಗ ‘ಹೇ ಸಿಎಂ ಸೇ ಸಿಎಂ’; ಸಿದ್ದು ಸರ್ಕಾರಕ್ಕೆ ಮುಜುಗರ ತಂದ CRF ದೂರು

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಕೆಐಎಡಿಬಿ ಕರ್ಮಕಾಂಡ; ಬಾಳಪ್ಪ ಹಂದಿಗುಂದ ವಿರುದ್ಧ ತನಿಖೆಗೆ ನಿರ್ದೇಶನ ಕೋರಿ ರಾಜ್ಯಪಾಲರಿಗೆ ದೂರು..  ಸಿದ್ದು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಸಿಟಿಜನ್ ರೈಟ್ಸ್ ಫೌಂಡೇಶನ್ ದೂರು.. ಹಂದಿಗುಂದ ಎತ್ತಂಗಡಿಗೆ ಆಗ್ರಹ.. ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ 'ಪೇ ಸಿಎಂ ಸೇ ಸಿಎಂ' ಘೋಷಣೆ ಮೂಲಕ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಮೆಗಾ ಅಭಿಯಾನ ಕೈಗೊಂಡು ಆಡಳಿತಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ 'ಹಂದಿಗುಂದ ಪ್ರಕರಣ' ಸವಾಲಾಗಿ ಪರಿಣಮಿಸಿದೆ. ಭ್ರಷ್ಟಾಚಾರ ವಿರುದ್ಧ ದೇಶವ್ಯಾಪಿ ಕಾನೂನು ಹೋರಾಟ ನಡೆಸುತ್ತಿರುವ 'ಸಿಟಿಜನ್ ರೈಟ್ಸ್ ಫೌಂಡೇಶನ್' ಕೆಎಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ದದ ಭ್ರಷ್ಟಾಚಾರ ಆರೋಪದಲ್ಲಿ ಸಿದ್ದರಾಮಯ್ಯ ಸರ್ಕಾರದ ಲೋಪವನ್ನೇ ಎತ್ತಿ ಹಿಡಿದಿದೆ. ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿ KIADB ಕರ್ಮಕಾಂಡದ ತನಿಖೆಗೆ ರೋಚಕತೆ ತುಂಬಿದೆ.ಕೆಐಎಡಿಬಿಯಲ್ಲಿ ಪ್ರಸ್ತುತ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿರುವ KAS ಅಧಿಕಾರಿ ಬಾಲಪ್ಪ ಹಂದಿಗುಂದ ವಿರುದ್ಧ ಬೆಂಗಳೂರಿನ ದೇವನಹಳ್ಳಿ ಸುತ್ತಮುತ್ತ ಅಕ್ರಮವಾಗಿ ಭೂಸ್ವಾಧೀನ...